Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಜಿಲ್ಲಾ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ ಮುದೂರಿನ ಪಿ. ಎಲ್ ಜೋಶ್ ಅವರು ಅಲ್ಪಕಾಲದ ಅನಾರೋಗ್ಯ ಕಾರಣದಿಂದ ನಿಧನರಾದರು. ಅವರು ಮುದೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಮಾಜಿ ಅಧ್ಯಕ್ಷ , ಜಡ್ಕಲ್ ಗ್ರಾಹಕರ ಸೊಸೈಟಿಯ ಅಧ್ಯಕ್ಷರಾಗಿ ಹಾಗೂ ಎರಡು ಬಾರಿ ಜಡ್ಕಲ್ ಗ್ರಾಮ ಪಂಚಾಯತ್ನ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. ಮೃತರು, ಪತ್ನಿ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಮೃತರಿಗೆ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಎಸ್. ರಾಜು ಪೂಜಾರಿ, ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಸಂತಾಪ ಸೂಚಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ರಾಷ್ಟ್ರೀಯ ಪೌಷ್ಟಿಕಾಂಶ ಸಪ್ತಾಹದ ಅಂಗವಾಗಿ ಆಳ್ವಾಸ್ ಸ್ನಾತಕೋತ್ತರ ಫುಡ್ ಸಯನ್ಸ್ ವಿಭಾಗದ ವತಿಯಿಂದ ಎರಡು ದಿನದ ವೆಬಿನಾರ್ ಅಯೋಜಿಸಲಾಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಬಾಗಲಕೋಟೆಯ ಯುನಿವರ್ಸಿಟಿ ಆಫ್ ಹಾರ್ಟಿಕಲ್ಚರಲ್ ಸಯನ್ಸ್ ಪೋಸ್ಟ್ ಹಾರ್ವೆಸ್ಟ್ ಟೆಕ್ನಾಲಜಿಯ ಮುಖ್ಯಸ್ಥೆ ಡಾ. ಭುವನೇಶ್ವರಿ ಜಿ ಹಾಗೂ ಕೊಯಂಬುತ್ತೂರ್‌ನ ಅರ್‌ವಿಎಸ್ ಕಾಲೇಜಿನ ರಿಸರ್ಚ್ ಹೆಡ್ ಆಗಿರುವ ಡಾ. ಮೀರಾ ರಮಣ್ ಭಾಗವಹಿಸಿದ್ದರು. ವೆಬಿನಾರ್‌ನಲ್ಲಿ ಪೌಷ್ಟಿಕ ಆಹಾರದ ಮಹತ್ವ, ಶಿಶು ಮತ್ತು ಮಕ್ಕಳ ಆರೈಕೆಯಲ್ಲಿ ಪೌಷ್ಟಿಕಾಂಶಗಳ ಅಗತ್ಯತೆ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲಾಯಿತು. ಪ್ರಾಂಶುಪಾಲ ಡಾ. ಕುರಿಯನ್, ವಿಭಾಗ ಮುಖ್ಯಸ್ಥೆ ಡಾ. ಅರ್ಚನಾ ಪ್ರಭಾತ್ ಹಾಗೂ ಇತರ ಉಪನ್ಯಾಸಕರು ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರಾದ ಸ್ವಾತಿ ಹಾಗೂ ದಿವ್ಯ ವಂದಿಸಿದರು, ಶಿವಾನಿ ಶೆಟ್ಟಿ ಹಾಗೂ ನವ್ಯ ಕಾರ್ಯಕ್ರಮ ನಿರೂಪಿಸಿದರು. ಫುಡ್ ಸಯನ್ಸ್ ವಿಭಾಗದ ವಿದ್ಯಾರ್ಥಿಗಳು ವೆಬಿನಾರ್‌ನ ಪ್ರಯೋಜನ ಪಡೆದುಕೊಂಡರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ವಂಡ್ಸೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಡಾ. ಸರ್ವೆಪಳ್ಳಿ ರಾಧಾಕೃಷ್ಣನ್ ಅವರ ಜನ್ಮದಿನ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು. ಶ್ರೀ ಮೂಕಾಂಬಿಕಾ ಚಾರಿಟೆಬಲ್ ಟ್ರಸ್ಟ್‌ನ ಖಜಾಂಚಿ ಜಿ. ಶ್ರೀಧರ್ ಶೆಟ್ಟಿ ಶಾಲೆಯ ಎಲ್ಲಾ ಶಿಕ್ಷಕರನ್ನು ಗೌರವಿಸಿ, ಉತ್ತಮ ವೃತ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವುದರಿಂದ ಅಭಿವೃದ್ದಿ ಶಾಖೆ ಆರಂಭವಾಗಿದೆ. ಟ್ರಸ್ಟ್ ವತಿಯಿಂದ ಸಾಧ್ಯವಾದಷ್ಟು ಸೌಲಭ್ಯ ನೀಡುವಲ್ಲಿ ಪ್ರಯತ್ನಿಸಲಾಗುವುದು ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಡಿ.ಎಂ.ಸಿ ಅಧ್ಯಕ್ಷ ಮಂಜುನಾಥ ಎ.ಜಿ ವಹಿಸಿದ್ದರು. ಶ್ರೀ ಮೂಕಾಂಬಿಕಾ ಚಾರಿಟೆಬಲ್ ಟ್ರಸ್ಟ್‌ನ ಟ್ರಸ್ಟಿ ಶ್ರೀನಿವಾಸ ಪೂಜಾರಿ ಕಲ್ಮಡಿ, ಗ್ರಾಮ ಪಂಚಾಯಿತಿ ಸದಸ್ಯರಾದ ಪ್ರಶಾಂತ್ ಪೂಜಾರಿ, ಶಶಿಕಲಾ, ಗೋವರ್ಧನ್ ಜೋಗಿ, ಸುಬ್ಬು, ಎಸ್.ಡಿ.ಎಂ.ಸಿ ಸದಸ್ಯರು, ಶಿಕ್ಷಕವೃಂದದವರು ಉಪಸ್ಥಿತರಿದ್ದರು. ಶಿಕ್ಷಕಿ ನಾಗವೇಣಿ ಸ್ವಾಗತಿಸಿ, ಮುಖ್ಯಶಿಕ್ಷಕ ಚಂದ್ರ ನಾಯ್ಕ್ ಎಸ್., ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶಿಕ್ಷಕ ರವಿಚಂದ್ರ ವಂದಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ರಾಜ್ಯದ ಕೃಷಿ ಪತ್ತಿನ ಸಹಕಾರಿ ಸಂಘಗಳಲ್ಲಿಯೇ ಮೊದಲ ಭಾರಿಗೆ ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘವು ಒಂದು ವಿಶಿಷ್ಟ ಪ್ರಯತ್ನಕ್ಕೆ ಮುನ್ನುಡಿ ಬರೆದಿದ್ದು, ಸಂಘದ ಮಾಲಿಕತ್ವದಲ್ಲಿ ವಿಶಿಷ್ಟ ವಿನ್ಯಾಸದ ರೈತಸಿರಿ ಅಗ್ರಿ ಮಾಲ್ ಎಂ.ಎಸ್.ಸಿ ಯೋಜನೆಯು ಕೇಂದ್ರ ಸರಕಾರದ ಆತ್ಮನಿರ್ಭರ ಭಾರತ್ ಯೋಜನೆಯಲ್ಲಿ ಕಾರ್ಯರೂಪಕ್ಕೆ ಬರಲಿದೆ ಎಂದು ಸಂಘದ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಹೇಳಿದರು. ಅವರು ಸಂಘದ ಪ್ರಧಾನ ಕಛೇರಿಯಲ್ಲಿ ನಡೆದ ಮಾಧ್ಯಮಗೋಷ್ಠಿಯನ್ನುದ್ದೇಶಿಸಿ ಮಾತನಾಡಿ ಒಟ್ಟು ರೂ. 15 ಕೋಟಿ ವಿನಿಯೋಗದ ರೈತಸಿರಿ ಎಗ್ರಿ ಮಾಲ್ ಬೃಹತ್ ಪ್ರಮಾಣದ ಯೋಜನೆಯಾಗಿದ್ದು, ಬಹುಮಹಡಿ ಕಟ್ಟಡದಲ್ಲಿ ರೈತರಿಗಾಗಿ ಒಂದೇ ಸೂರಿನಡಿ ಹಲವು ಸೌಲಭ್ಯಗಳು ದೊರೆಯಲಿದೆ ಎಂದರು. ರೈತಸಿರಿ ಅಗ್ರಿ ಮಾಲ್ ಕೃಷಿ ಸರ್ವಿಸ್ ಸೆಂಟರ್ಗಳು, ಸೂಪರ್ ಮಾರ್ಕೆಟ್‌ಗಳು, ಬಡಗಿ, ಕಮ್ಮಾರಿಕೆ, ಗ್ಯಾರೇಜ್, ವೆಲ್ಡಿಂಗ್ ಶಾಪ್, ಇಲೇಕ್ಟ್ರೀಕಲ್ ಸರ್ವಿಸ್, ಫಾರ್ಮರ್ ಕ್ಲಬ್, ಕೃಷಿಕ ತರಬೇತಿ ಕೇಂದ್ರ, ಕೃಷಿ ಯಂತ್ರೋಪಕರಣಗಳ ಮಳಿಗೆ, ಉಪಹಾರ ಕೇಂದ್ರ ಅಲ್ಲದೇ ಸಭಾಂಗಣ ಎಸ್ಕ್ಯುಲೇಟರ್, ಲಿಫ್ಟ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ನಡೆದ ರಾಜ್ಯ ಮಟ್ಟದ ಟ್ರೈಲ್ಸ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ತಾಲೂಕಿನ ತ್ರಾಸಿ ಅಂಚೆ ಕಛೇರಿಯ ಎಂ. ಗುರುದೀಪಕ ಕಾಮತ್ ರಾಷ್ಟ್ರ ಮಟ್ಟದ ಸ್ವರ್ಧೆಗೆ ಆಯ್ಕೆಯಾಗಿದ್ದಾರೆ. ಗುರುದೀಪಕ ಕಾಮತ್ ಅವರೊಂದಿಗೆ ಬಿ.ಜಿ.ಜಿಗಣಿ ಪೋಸ್ಟ್ ಆಫೀಸಿನ ಶಿವಕುಮಾರ್, ಚಿಕ್ಕಮಗಳೂರಿನ ಜಯಂತ ನಟರಾಜ್, ಬೆಂಗಳೂರಿನ ಭರತ್ ಕೆ.ಎಸ್. ಮತ್ತು ಕೆ.ಗಣೇಶ ಕಿಣಿ ಹಾಗೂ ಶಿವಮೊಗ್ಗದ ಎಂ.ನಾಗರಾಜ್ ಮತ್ತು ಸಂದೀಪ ಮಲ್ಲಿಕ್ ಅವರು ರಾಜಸ್ತಾನದ ಜೈಪುರದಲ್ಲಿ ನಡೆಯಲಿರುವ 36ನೇ ಅಂಚೆ ಇಲಾಖೆಯ ರಾಷ್ಟ್ರೀಯ ಮಟ್ಟದ ವೈಟ್ ಲಿಫ್ಟಿಂಗ್, ಪವರ್ ಲಿಫ್ಟಿಂಗ್ ಮತ್ತು ಬೆಸ್ಟ್ ಫಿಸಿಕ್ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಅಜೆಕಾರು: ಅಖಿಲ ಕರ್ನಾಟಕ ಬೆಳದಿಂಗಳ ಸಾಹಿತ್ಯ ಸಮ್ಮೇಳನ ಸಮಿತಿ ಮತ್ತು ಬ್ರದರ‍್ಸ್ ಸ್ಪೋರ್ಟ್ಸ್ ಆಂಡ್ ಯೂತ್ ಕ್ಲಬ್ ಸಂಯುಕ್ತ ಆಶ್ರಯದಲ್ಲಿ ಶಿಕ್ಷಕರ ಮತ್ತು ಅಡುಗೆಯವರ ಹೆಸರಲ್ಲಿ ನೆರಳು ನೀಡುವ, ಫಲ ನೀಡುವ ಗಿಡಗಳನ್ನು ನೆಡುವ ವಿನೂತನ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಗುರುವೃಂದ ವೃಕ್ಷ ಗೌರವ ಅಜೆಕಾರು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ವಿಶ್ರಾಂತ ವಿದ್ಯಾಂಗ ಪರಿವೀಕ್ಷಕ ಅಡಂದಾಲು ಕರುಣಾಕರ ಹೆಗ್ಡೆ ಅವರು ಗಿಡಗಳನ್ನು ಶಿಕ್ಷಕರಿಗೆ ಹಸ್ತಾಂತರಿಸುವ ಮೂಲಕ ಉದ್ಘಾಟಿಸಿ ಮಾತನಾಡಿ, ಶಿಕ್ಷಕರನ್ನು ವಿದ್ಯಾರ್ಥಿಗಳು ಅನುಕರಣೆ ಮಾಡುತ್ತಾರೆ. ಹಾಗಾಗಿ ಅವರ ಜವಾಬ್ದಾರಿ ಹೆಚ್ಚು ಇದೆ. ಅವರಲ್ಲಿ ಸಮಾಜದ ಬಗ್ಗೆ ಉತ್ತಮ ಕಲ್ಪನೆಗಳನ್ನು ಬಿತ್ತ ಬೇಕು ಎಂದು ಹೇಳಿದರು. ಅಧ್ಯಕ್ಷತೆ ವಹಿಸಿದ್ದ ಸಮಿತಿಯ ರಾಜ್ಯಾಧ್ಯಕ್ಷ ಡಾ.ಶೇಖರ ಅಜೆಕಾರು ಮಾತನಾಡಿ, ಕನ್ನಡ ನಾಡು- ನುಡಿಯ ಸೇವೆ, ಸರಕಾರಿ ಶಾಲೆಗಳ ಅಭಿವೃದ್ಧಿಗೆ ಯಾರೇ ಕೆಲಸ ಮಾಡಿದರೂ ಅದಕ್ಕೆ ಪ್ರತಿಯೊಬ್ಬರು ಪ್ರೋತ್ಸಾಹ ನೀಡಬೇಕು, ಅನಾವಶ್ಯಕ ಟೀಕೆಗೆ ಸಮಯ ವ್ಯರ್ಥ ಮಾಡಬಾರದು ಎಂದು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಹೊಸಾಡು ಗ್ರಾಮದ ಕಂಚಗೋಡು ಸಮೀಪ ಭಾನುವಾರ ಎರಡು ಮೀನುಗಾರಿಕಾ ದೋಣಿಗಳು ಮಗುಚಿದ ಪರಿಣಾಮ ಹಾನಿ ಉಂಟಾಗಿದ್ದು ಮೀನುಗಾರರು ಪಾರಾಗಿದ್ದಾರೆ. ‘ಓಂಕಾರ್ ಪ್ರಸನ್ನ’ ಎಂಬ ಹೆಸರಿನ ದೋಣಿಯಲ್ಲಿ ಹೊಸಾಡು ಗ್ರಾಮದ ಕಂಚಗೋಡು ನಿವಾಸಿಗಳಾದ ರಾಮ ಖಾರ್ವಿ, ವಿನಯ ಖಾರ್ವಿ ನಾಗರಾಜ ಖಾರ್ವಿ ಮಿನುಗಾರಿಕೆಗೆ ತೆರಳಿದ್ದರು. ಮೀನುಗಾರಿಕೆ ನಡೆಸುತ್ತಿದ್ದ ವೇಳೆ ಬಂದ ಭಾರಿ ಗಾಳಿ ಮಳೆ ಮತ್ತು ಅಲೆಗಳ ಹೊಡೆತಕ್ಕೆ ದೋಣಿ ಮಗುಚಿದೆ. ಸಮೀಪದಲ್ಲಿ ಮಹಾಲಕ್ಷ್ಮೀ ಎಂಬ ಹೆಸರಿನ ದೋಣಿಯಲ್ಲಿ ಮೀನುಗಾರಿಕೆ ನಿರತರಾಗದ್ದ ವಿಘ್ನೇಶ್ ಖಾರ್ವಿ, ಪ್ರಮೋದ್ ಖಾರ್ವಿ, ದೇವದಾಸ್ ಖಾರ್ವಿ, ಶಿವರಾಜ್ ಖಾರ್ವಿ, ಅಂಬರೀಶ್ ಖಾರ್ವಿ ಮುಳುಗುತ್ತಿದ್ದ ದೋಣಿಯತ್ತ ಧಾವಿಸಿ ಬಂದು ಮೀನುಗಾರರನ್ನು ರಕ್ಷಣೆ ಮಾಡಿದ್ದಾರೆ. ದೋಣಿ, ಬಲೆ, ಎಂಜಿನ್, ಇತರ ಸಲಕರಣೆಗಳು ಮುಳುಗಿದ್ದು, ರೂ.4.5 ಲಕ್ಷ ನಷ್ಟ ಸಂಭವಿಸಿದೆ. ತ್ರಾಸಿ ಹೊಸಪೇಟೆಯಿಂದ ಮೀನುಗಾರಿಕೆಗೆ ತೆರಳಿದ್ದ ಯಕ್ಷೇಶ್ವರಿ ಅನುಗ್ರಹ ದೊಣಿಯಿಂದ ಸಮುದ್ರಕ್ಕೆ ಬಿದ್ದ ನಾಗ ಖಾರ್ವಿ, ನಿತ್ಯಾನಂದ, ರೋಷನ್ ಖಾರ್ವಿ, ಈಜಿ ದಡ ಸೇರಿದ್ದಾರೆ. ದೋಣಿಯಲ್ಲಿದ್ದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಭರತ ಭೂಮಿಯಲ್ಲಿ ಗುರುವಿಗೆ ವಿಷೇಶವಾದ ಮಾನ್ಯತೆಯಿದೆ. ಭವಿಷ್ಯವನ್ನು ರೂಪಿಸುವ ಸಾಮರ್ಥ್ಯ ಹಾಗೂ ಕಲ್ಲನ್ನು ಕೂಡ ತಿದ್ದಬಹುದಾದ ಯೋಗ್ಯತೆ ಗುರುಗಳದ್ದಾಗಿದೆ. ಗುರುಕುಲ ಪದ್ದತಿ ಮೂಲಕ ಗುರು ಪರಪಂರೆ ಬೆಳೆದು ಬಂಧ ಸಂಸ್ಕಾರ ಈ ನೆಲದಲ್ಲಿದೆ. ಹೀಗಾಗಿ ಗುರು ಭಕ್ತಿ ಮೂಲಕ ಬದುಕು ಪಾವನಗೊಳ್ಳಬೇಕಾದ ಪದ್ದತಿ ನಮ್ಮದು ಎಂದು ಯು. ಬಿ. ಶೆಟ್ಟಿ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಯು. ಬಿ. ಶೆಟ್ಟಿ ಹೇಳಿದರು. ಅವರು ಸೋಮವಾರ ಯು. ಬಿ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಪ್ರವರ್ತಿತ ಯು. ಬಿ ಶೆಟ್ಟಿ ಸಮೂಹ ಶಿಕ್ಷಣ ಸಂಸ್ಥೆ ಬೈಂದೂರು ಹಾಗೂ ಉಪ್ಪುಂದ ಇದರ ವತಿಯಿಂದ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸಂಸ್ಥೆಯ ಕಾರ್ಯದರ್ಶಿ ಯಶಶ್ರೀ ಶೆಟ್ಟಿ ಮಾತನಾಡಿ ರಾಧಾಕೃಷ್ಣನ್ರವರ ಆದರ್ಶ ಜಗತ್ತಿಗೆ ಶ್ರೇಯಸ್ಸು ನೀಡಿದೆ. ಸಂಸ್ಕಾರಯುತ ಜೀವನ ರೂಪಿಸಬೇಕಾದರೆ ಒಬ್ಬ ಯೋಗ್ಯ ಹಾಗೂ ಯಶಸ್ವಿ ಗುರು ಮುಖ್ಯ. ಸುಸಂಸ್ಕೃತ ಸಮಾಜದ ನಿರ್ಮಾಣದಲ್ಲಿ ಗುರುಗಳ ಪಾತ್ರ ಬಹುಮುಖ್ಯವಾಗಿದೆ. ಎಂದರು. ಈ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಶಿಕ್ಷಕರು ವಿದ್ಯಾರ್ಥಿಗಳಿಂದ ಯಾವುದೇ ಫಲಾಪೇಕ್ಷೆ ಇಲ್ಲದೆ ಸೇವೆ ಸಲ್ಲಿಸುತ್ತಾರೆ. ಮಕ್ಕಳ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಿರುವ ಶಿಕ್ಷಕರನ್ನು ಗೌರವಿಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ ಎಂದು ಗಂಗೊಳ್ಳಿಯ ಶ್ರೀ ಇಂದುಧರ ದೇವಸ್ಥಾನದ ಅಧ್ಯಕ್ಷ ಅರುಣ್ ಕುಮಾರ್ ಹೇಳಿದರು. ಶ್ರೀ ಇಂದುಧರ ದೇವಸ್ಥಾನ ಗಂಗೊಳ್ಳಿ, ಶ್ರೀ ಗಣೇಶೋತ್ಸವ ಸಮಿತಿ, ಇಂದುಧರ ಯುವಕ ಮಂಡಲ ಗಂಗೊಳ್ಳಿ ಇವರ ಜಂಟಿ ಆಶ್ರಯದಲ್ಲಿ ಗಂಗೊಳ್ಳಿಯ ಸ.ವಿ. ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರಗಿದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸ.ವಿ. ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ನಾರಾಯಣ ಶೆಟ್ಟಿ ಮತ್ತು ನಾಗರಾಜ ಆಚಾರ್ಯ ಶುಭಾಶಂಸನೆಗೈದರು. ಗಂಗೊಳ್ಳಿಯ ಸ.ವಿ. ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರನ್ನು ಸನ್ಮಾನಿಸಿ ಗೌರವಿಸಲಾಯಿತು. ಶಾಲೆಯ ಸಹಶಿಕ್ಷಕರಾದ ದೇವು, ಲಕ್ಷ್ಮೀ ಖಾರ್ವಿ, ಮಾಲಾಶ್ರೀ ಖಾರ್ವಿ, ರೇಖಾ ಖಾರ್ವಿ, ಭೂದೇವಿ, ರೇಣುಕಾ ನಾಯಕ್, ಗಣೇಶೋತ್ಸವ ಸಮಿತಿ ಅಧ್ಯಕ್ಷ ಸಂದೇಶ ಜಿ.ಟಿ., ಶಿವ ಜಿ.ಟಿ., ಮಹೇಶ ಜಿ.ಟಿ., ನಾಗಿಣಿ, ಸುಶೀಲಾ, ಸುಮಿತ್ರಾ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ನೆಹರು ಯುವ ಕೇಂದ್ರ ಉಡುಪಿ ಹಾಗೂ ನವಶಕ್ತಿ ಮಹಿಳಾ ವೇದಿಕೆ ರಿ. ಕೊಲ್ಲೂರು ವತಿಯಿಂದ ಶಿಕ್ಷಕರ ದಿನಾಚರಣೆ ಅಂಗವಾಗಿ ಶಿಕ್ಷಕರ ಸನ್ಮಾನ ಕಾರ್ಯಕ್ರಮವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸಲಗೇರಿ ಶಾಲೆಯ ಸಭಾಂಗಣದಲ್ಲಿ ನಡೆಯಿತು. ಸಲಗೇರಿ ಶಾಲೆಯ ಮುಖ್ಯ ಶಿಕ್ಷಕಿ ಸುಮಿತ್ರಾ ಶೆಟ್ಟಿ ಮತ್ತು ಸಹ ಶಿಕ್ಷಕಿ ರಂಜಿತ ಅವರನ್ನು ಸನ್ಮಾನಿಸಿ ಮಾತನಾಡಿದ ಮಾಜಿ ತಾಲೂಕು ಪಂಚಾಯತ್ ಸದಸ್ಯೆ ಹಾಗೂ ನವಶಕ್ತಿ ಮಹಿಳಾ ವೇದಿಕೆ ಅಧ್ಯಕ್ಷೆ ಗ್ರೀಷ್ಮಾ ಗಿರಿಧರ ಭಿಡೆ ಮುಗ್ದ ಮನದಲ್ಲಿ ಅಕ್ಷರವ ಬಿತ್ತಿ,ಮಕ್ಕಳ ಭವಿಷ್ಯಕ್ಕೆ ಬೆಳಕನ್ನು ಚೆಲ್ಲಿ, ಸುಂದರ ನಾಡ ಕಟ್ಟುವ ಶಿಲ್ಪಿಗಳು ಶಿಕ್ಷಕರು,ಮಕ್ಕಳ ಲಾಲನೆ ಪಾಲನೆಯಲ್ಲಿ ತಾಯಿಯ ಪಾತ್ರ ಎಷ್ಟು ಮುಖ್ಯವೋ ಮಕ್ಕಳ ಬೌದ್ಧಿಕ ಜ್ಞಾನವನ್ನು ವೃದ್ಧಿಸುವಲ್ಲಿ ಶಿಕ್ಷಕನ ಪಾತ್ರವೂ ಅಷ್ಟೇ ಮುಖ್ಯ ಎಂದರು. ಸನ್ಮಾನ ಸ್ವೀಕರಿಸಿದ ಬಳಿಕ ಮಾತನಾಡಿದ ಮುಖ್ಯ ಶಿಕ್ಷಕಿ ಸುಮಿತ್ರಾ ಶೆಟ್ಟಿ ನವಶಕ್ತಿ ಮಹಿಳಾ ವೇದಿಕೆ ಯವರು ನಮ್ಮನ್ನು ಗುರುತಿಸಿ ಸನ್ಮಾನಿಸಿದ್ದು ನಮಗೆ ತುಂಬಾ ಸಂತೋಷವಾಗಿದೆ, ನವಶಕ್ತಿ…

Read More