ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬೈಂದೂರು, ಯಡ್ತರೆ ಮತ್ತು ಪಡುವರಿ ಗ್ರಾಮ ಪಂಚಾಯಿತಿಗಳನ್ನು ಒಗ್ಗೂಡಿಸಿ ಬೈಂದೂರು ಪಟ್ಟಣ ಪಂಚಾಯಿತಿ ಅಸ್ತಿತ್ವಕ್ಕೆ ತರುವ ಅಧಿಸೂಚನೆ ಬುಧವಾರದ ವಿಶೇಷ ರಾಜ್ಯಪತ್ರದಲ್ಲಿ ಪ್ರಕಟವಾಗಿದೆ. ಅದರೊಂದಿಗೆ ಬೈಂದೂರು ಪಟ್ಟಣ ಪಂಚಾಯಿತಿ ಅಸ್ತಿತ್ವಕ್ಕೆ ಬಂದಿದೆ. ಕಳೆದ ವರ್ಷ ಡಿ. 31ರಂದು ಸಚಿವಾಲಯವು ಪಟ್ಟಣ ಪಂಚಾಯಿತಿ ರಚನೆ ಪ್ರಸ್ತಾವನೆಯನ್ನು ಪ್ರಕಟಿಸಿ ಬಾಧಿತರಾಗುವವರಿಂದ ಆಕ್ಷೇಪಣೆಗಳನ್ನು ಆಹ್ವಾನಿಸಿತ್ತು. ಈಗ ಏಳು ತಿಂಗಳ ಬಳಿಕ ಅಂತಿಮ ಅಧಿಸೂಚನೆ ಹೊರಡಿಸಿದೆ. ಸರ್ಕಾರದ ಇಂದಿನ ನಡೆಯಿಂದ ತಾಲ್ಲೂಕು ಕೇಂದ್ರವಾಗಿರುವ ಬೈಂದೂರು ಪ್ರದೇಶದ ಅಭಿವೃದ್ಧಿಗೆ ವೇಗ ಸಿಗುತ್ತದೆ ಎಂದು ಕನಸು ಕಂಡವರಿಗೆ ಸಂತಸವಾಗಿದೆ. 1971ರಲ್ಲಿ ಬೈಂದೂರು, ಯಡ್ತರೆ ಗ್ರಾಮ ಪಂಚಾಯಿತಿಗಳು ಸೇರಿ ಪುರಸಭೆಯಾಯಿತು. ಅದರ ಮೂಲಕ ಸಾಕಷ್ಟು ಅಭಿವೃದ್ಧಿ ಕಾರ್ಯಗಳೂ ನಡೆದಿದ್ದುವು. ಆದರೆ ಗ್ರಾಮೀಣ ಪ್ರದೇಶಕ್ಕೆ ಸಿಗುವ ಹಲವು ಸೌಲಭ್ಯಗಳಿಂದ ವಂಚಿತರಾಗುತ್ತಿದ್ದೇವೆ ಎಂದು ಭಾವಿಸಿದ ಇಲ್ಲಿನ ಜನರ ಆಗ್ರಹಕ್ಕೆ ಮಣಿದ ಸರ್ಕಾರ ಅವುಗಳನ್ನು 1997ರಲ್ಲಿ ಪೂರ್ವ ಸ್ಥಿತಿಗೆ ಮರಳಿಸಿತು. ಈಚಿನ ದಿನಗಳಲ್ಲಿ ಪ್ರದೇಶದ ಅಭಿವೃದ್ಧಿಗೆ ಪಟ್ಟಣ ಪಂಚಾಯಿತಿ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ,ಅ.13: ಪ್ರಸ್ತುತ ಸಾಲಿನ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮದಿಂದ ಸ್ವಯಂ ಉದ್ಯೋಗ ನೇರಸಾಲ, ಉದ್ಯಮಶೀಲತಾ ಅಭಿವೃದ್ಧಿ(ಐ.ಎಸ್.ಬಿ.), ಭೂ ಒಡೆತನ, ಮೈಕ್ರೋ ಕ್ರೆಡಿಟ್ ಹಾಗೂ ಗಂಗಾ ಕಲ್ಯಾಣ ಯೋಜನೆ ಹಾಗೂ ಪರಿಶಿಷ್ಟ ಜಾತಿ ಅಲೆಮಾರಿ, ಅರೆ ಅಲೆಮಾರಿ, ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಸಮುದಾಯಗಳ ಅಭಿವೃದ್ಧಿ ಕೋಶದಿಂದ ಸ್ವಯಂ ಉದ್ಯೋಗ ನೇರಸಾಲ, ಉದ್ಯಮಶೀಲತಾ ಅಭಿವೃದ್ಧಿ(ಐ.ಎಸ್.ಬಿ.), ಮೈಕ್ರೋ ಕ್ರೆಡಿಟ್ ಸಾಲ ಸೌಲಭ್ಯಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಿದೆ. ಈಗಾಗಲೇ ನಿಗಮದಿಂದ ಯಾವುದೇ ಸೌಲಭ್ಯ ಪಡೆಯದವರು ಆಗಸ್ಟ್ 31 ರೊಳಗೆ ಅರ್ಜಿ ಸಲ್ಲಿಸಬಹುದು. ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ ಮತ್ತು ಪರಿಶಿಷ್ಟ ಜಾತಿ ಅಲೆಮಾರಿ, ಅರೆ ಅಲೆಮಾರಿ, ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಸಮುದಾಯಗಳ ಅಭಿವೃದ್ಧಿ ಕೋಶದಡಿ ಅರ್ಜಿ ನಮೂನೆಯನ್ನು ನಿಗಮದ http://adcl.karnataka.gov.in ನಲ್ಲಿ ಹಾಗೂ ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮದಡಿ http://adijambava.karnataka.gov.in ವೆಬ್‌ಸೈಟ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ,…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಮೈಸೂರಿನ ಜೆಎಸ್‌ಎಸ್ ವಿಶೇಷಚೇತನರ ಪಾಲಿಟೆಕ್ನಿಕ್ ಸಂಸ್ಥೆಯಿಂದ ಪ್ರಸ್ತುತ ಸಾಲಿನ ಡಿಪ್ಲೊಮ ಕೋರ್ಸುಗಳ ಪ್ರವೇಶಕ್ಕೆ ವಿಶೇಷಚೇತನ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 12 ಕೊನೆಯ ದಿನವಾಗಿದ್ದು ಹೆಚ್ಚಿನ ಮಾಹಿತಿಗಾಗಿ www.jsspda.org ವೆಬ್‌ಸೈಟ್‌ನ್ನು ವೀಕ್ಷಿಸಬಹುದಾಗಿದೆ. ಅಥವಾ ದೂರವಾಣಿ ಸಂಖ್ಯೆ: 0821-2548315ಗೆ ಸಂಪರ್ಕಿಸಬಹುದು. ಎಂದು ಜೆಎಸ್‌ಎಸ್ ವಿಶೇಷಚೇತನರ ಪಾಲಿಟೆಕ್ನಿಕ್‌ನ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ► ವಿಕಲಚೇತನರ ರಾಷ್ಟ್ರ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ – https://kundapraa.com/?p=40280 .
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಜಿಲ್ಲೆಯಲ್ಲಿ ಕೋವಿಡ್ ಪರೀಕ್ಷೆ ನಡೆಸಲು 6 ತಿಂಗಳ ಅವಧಿಗಾಗಿ ಪ್ರಯೋಗಶಾಲಾ ತಂತ್ರಜ್ಞರ (20 ಹುದ್ದೆ) ದತ್ತಾಂಶ ನಮೂದಕರ (20 ಹುದ್ದೆ) ಗಳಿಗೆ ಆಗಸ್ಟ್ 14 ರಿಂದ 17 ರ ವರೆಗೆ ನೇರ ಸಂದರ್ಶನ ನಡೆಯಲಿದೆ. ಆಸಕ್ತ ಅಭ್ಯರ್ಥಿಗಳು ವಿದ್ಯಾರ್ಹತೆಯ ಮೂಲ ಮತ್ತು ದೃಡೀಕೃತ ದಾಖಲಾತಿಗಳೊಂದಿಗೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ, ಅಜ್ಜರಕಾಡು ಇಲ್ಲಿ ಸಂದರ್ಶನಕ್ಕೆ ಹಾಜರಾಗಬಹುದು. ಪ್ರಯೋಗಶಾಲಾ ತಂತ್ರಜ್ಞ ಹುದ್ದೆಗೆ , ಡಿಎಂಎಲ್‌ಟಿ/ಬಿಎಂಎಲ್‌ಟಿ ಯವರಿಗೆ ಪ್ರಥಮ ಆದ್ಯತೆ ಅಥವಾ ಎಂ.ಎಸ್ಸಿ ನರ್ಸಿಂಗ್ /ಬಿ.ಎಸ್ಸಿ ನರ್ಸಿಂಗ್/ಜಿಎನ್‌ಎಂ:ಪ್ಯಾರಾ ಮೆಡಿಕಲ್ ಬೋರ್ಡ್ ನಲ್ಲಿ ನೊಂದಣಿ, ಅಥವಾ ನರ್ಸಿಂಗ್ ಕೌನ್ಸಿಲ್ ನಲ್ಲಿ ನೊಂದಣಿ ಮಾಡಿದವರು ಹಾಗೂ ದತ್ತಾಂಶ ನಮೂದಕರ ಹುದ್ದೆಗೆ ,ಯಾವುದೇ ಪದವಿ ಮತ್ತು ಡಿಸಿಎ ಡಿಪ್ಲೋಮಾ ಕಂಪ್ಯೂಟರ್ ಅಪ್ಲಿಕೇಷನ್ ಮತ್ತು 2 ವರ್ಷದ ಅನುಭವ ಹೊಂದಿದ ಬಗ್ಗೆ ಪ್ರಮಾಣ ಪತ್ರ ಹೊಂದಿದವರು ಸಂದರ್ಶನಕ್ಕೆ ಹಾಜರಾಗುವಂತೆ ಜಿಲ್ಲಾ ಆರೋಗ್ಯ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಆ.13ರ ಗುರುವಾರ 402 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಜಿಲ್ಲೆಯಲ್ಲಿ ಒಟ್ಟು 7174 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 4138 ಮಂದಿ ಬಿಡುಗಡೆಯಾಗಿದ್ದು, ಒಟ್ಟು 2966 ಸಕ್ರಿಯ ಪ್ರಕರಣಗಳಿಗೆ ಉಡುಪಿ, ಕುಂದಾಪುರ, ಕಾರ್ಕಳದ ಕೋವಿಡ್ ಆಸ್ಪತ್ರೆ, ಕೋವಿಡ್ ಕೇರ್ ಸೆಂಟರ್, ಕೋವಿಡ್ ಹೆಲ್ತ್ ಸೆಂಟರ್ ಹಾಗೂ 1290 ಮಂದಿ ಹೋಮ್ ಐಸೋಲೇಶನ್ ಮೂಲಕ ನಿಗಾ ಇರಿಸಲಾಗಿದೆ. ಈವರೆಗೆ ಕೊರೋನಾ ಪಾಸಿಟಿವ್ ಇದ್ದ 70 ಮಂದಿ ಮೃತಪಟ್ಟಿದ್ದಾರೆ. ಇಂದು ಒಟ್ಟು 290 ಮಂದಿ ಬಿಡುಗಡೆಗೊಂಡಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಪ್ರಸ್ತುತ ಸಾಲಿನ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡದ ಅಭಿವೃದ್ಧಿ ನಿಗಮದಿಂದ ಪರಿಶಿಷ್ಟ ಪಂಗಡದವರಿಗೆ ಹಾಗೂ ಅರಣ್ಯ ಆಧಾರಿತ ಆದಿವಾಸಿ, ಅಲೆಮಾರಿ, ಅರೆ ಅಲೆಮಾರಿ, ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಸಮುದಾಯದ ಜನಾಂಗಕ್ಕೆ ಸ್ವಯಂ ಉದ್ಯೋಗ, ನೇರಸಾಲ ಉದ್ಯಮಶೀಲತಾ, ಭೂ ಒಡೆತನ, ಮೈಕ್ರೋ ಕ್ರೆಡಿಟ್ ಹಾಗೂ ಗಂಗಾ ಕಲ್ಯಾಣ ಯೋಜನೆಗಳಡಿ ಸಾಲ ಸೌಲಭ್ಯಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ನಿಗಮದಿಂದ ಯಾವುದೇ ಸೌಲಭ್ಯ ಪಡೆಯದ ೧೮ರಿಂದ ೬೦ ವರ್ಷದ ಒಳಗಿನವರು. ಅರ್ಜಿ ಸಲ್ಲಿಸಲು ಆಗಸ್ಟ್ ೩೧ ಕೊನೆಯ ದಿನವಾಗಿದ್ದು, ಅರ್ಜಿ ನಮೂನೆಯನ್ನು ನಿಗಮದ ವೆಬ್‌ಸೈಟ್ https://kmvstdcl.karnataka.gov.in ನಲ್ಲಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಬಿ ಬ್ಲಾಕ್, ಕೊಠಡಿ ಸಂಖ್ಯೆ 302, ರಜತಾದ್ರಿ ಮಣಿಪಾಲ-576104, ದೂರವಾಣಿ ಸಂಖ್ಯೆ – 0820-2574884 ಗೆ ಸಂಪರ್ಕಿಸಬಹುದೆಂದು ಪ್ರಕಟಣೆಯ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ, ಆ.13: ಪ್ರಸ್ತುತ ಸಾಲಿನ ವಿಕಲಚೇತನಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ವಿಕಲಚೇತನ ವ್ಯಕ್ತಿ ಮತ್ತು ಸಂಸ್ಥೆಗಳಿಗೆ ಕೇಂದ್ರ ಸರ್ಕಾರದಿಂದ ನೀಡುವ ರಾಷ್ಟ್ರ ಪ್ರಶಸ್ತಿಗಾಗಿ ವಿವಿಧ ಕ್ಷೇತ್ರಗಳಲ್ಲಿ ಅರ್ಜಿ ಆಹ್ವಾನಿಸಲಾಗಿದ್ದು, ಸಾಧನೆಗಳ ಮತ್ತು ದಾಖಲೆಗಳ ಬಗ್ಗೆ ಸಂಕ್ಷೀಪ್ತ ಮಾಹಿತಿಯೊಂದಿಗೆ ಆಸಕ್ತರು ಆಗಸ್ಟ್ 18ರ ಒಳಗೆ ವಿಕಲಚೇತನರ ಸಬಲೀಕರಣ ಅಧಿಕಾರಿ ಕಛೇರಿ, ತಳ ಅಂತಸ್ತು, ಕೊಠಡಿ ಸಂಖ್ಯೆ 4, 5 ರಜತಾದ್ರಿ ಮಣಿಪಾಲ ಉಡುಪಿ ಕಛೇರಿಗೆ ಸಲ್ಲಿಸಬಹುದಾಗಿದೆ. ಅರ್ಜಿಯನ್ನು www.disabilityaffairs.gov.in ವೆಬ್‌ಸೈಟ್‌ನಲ್ಲಿ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಛೇರಿಯನ್ನು ಅಥವಾ ದೂರವಾಣಿ ಸಂಖ್ಯೆ 0820-2574810 ಗೆ ಸಂಪರ್ಕಿಸುವಂತೆ ಜಿಲ್ಲಾ ವಿಕಲಚೇತನರ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ► ವಿಶೇಷಚೇತನರಿಗೆ ಡಿಪ್ಲೊಮ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ – https://kundapraa.com/?p=40286 .
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಆ.12ರ ಬುಧವಾರ 263 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಈ ಪೈಕಿ ಕುಂದಾಪುರ ತಾಲೂಕಿನ 95, ಉಡುಪಿ ತಾಲೂಕಿನ 142 ಹಾಗೂ ಕಾರ್ಕಳ ತಾಲೂಕಿನ 23 ಮಂದಿಗೆ ಪಾಸಿಟಿವ್ ಬಂದಿದೆ. 3 ಮಂದಿ ಬೇರೆ ಜಿಲ್ಲೆಯವರಾಗಿದ್ದಾರೆ. ಒಟ್ಟು ಪ್ರಕರಣಗಳಲ್ಲಿ 51 ಸಿಂಥಮೇಟಿವ್ ಹಾಗೂ 212 ಅಸಿಂಥಮೆಟಿಕ್ ಪ್ರಕರಣಗಳಲ್ಲಿದ್ದು, 138 ಪುರುಷರು, 125 ಮಹಿಳೆಯರಿಗೆ ಕೋವಿಡ್ ಪಾಸಿಟಿವ್ ಬಂದಿದೆ. ಒಟ್ಟು ಪ್ರಕರಣಗಳಲ್ಲಿ ಪ್ರಾಥಮಿಕ ಸಂಪರ್ಕದಿಂದ 97, ILI 34 ಪ್ರಕರಣ, ಸಾರಿ 0 ಪ್ರಕರಣವಿದ್ದು, 128 ಪ್ರಕರಣದ ಮೂಲ ಪತ್ತೆಹಚ್ಚಲಾಗುತ್ತಿದೆ. ಒಂದು ಪ್ರಕರಣ ಬೇರೆ ರಾಜ್ಯ ಪ್ರಯಾಣದ ಹಿನ್ನೆಲೆ ಹೊಂದಿದ್ದಾರೆ. ಇಂದು 116 ಮಂದಿ ಆಸ್ಪತ್ರೆಯಿಂದ ಹಾಗೂ 82 ಮಂದಿ ಹೋಮ್ ಐಸೋಲೇಶನ್’ನಿಂದ ಬಿಡುಗಡೆಗೊಂಡಿದ್ದಾರೆ. 1,179 ನೆಗೆಟಿವ್: ಈ ತನಕ ಒಟ್ಟು 49096 ಮಾದರಿ ಸಂಗ್ರಹಿಸಿದ್ದು, ಅವುಗಳಲ್ಲಿ 40578 ನೆಗೆಟಿವ್, 6773 ಪಾಸಿಟಿವ್ ಬಂದಿದ್ದು, 1745 ಮಂದಿಯ ವರದಿ ಬರುವುದು ಬಾಕಿ ಇದೆ.…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸಂದೀಪನ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಸುರಭಿ ಶೆಟ್ಟಿ 625 ರಲ್ಲಿ 624 ಅಂಕ ಗಳಿಸಿ ರಾಜ್ಯಕ್ಕೆ ದ್ವಿತೀಯ ಸ್ಥಾನಿಯಾಗಿ ಬೈಂದೂರು ವಲಯ ಮತ್ತು ಉಡುಪಿ ಜಿಲ್ಲೆಯ ಕೀರ್ತಿಯನ್ನು ಹೆಚ್ಚಿಸಿದ್ದು, ಗ್ರಾಮೀಣ ಪ್ರದೇಶದ ವಿದ್ಯಾರ್ಥಿಯಾದ ಸುರಭಿಯ ಸಾಧನೆ ರಾಜ್ಯಕ್ಕೆ ಮಾದರಿ ಎಂದು ಬೈಂದೂರು ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಜ್ಯೋತಿ ಬಿ. ಹೇಳಿದರು. ಅವರು ಉಪ್ಪುಂದದ ಸುರೇಶ್ ಶೆಟ್ಟಿ ಮತ್ತು ಸೀಮಾ ಶೆಟ್ಟಿ ಅವರ ಪುತ್ರಿ ಸುರಭಿ ಶೆಟ್ಟಿ ಅವರ ಮನೆಗೆ ಭೇಟಿನೀಡಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯ ವತಿಯಿಂದ ಅಭಿನಂದಿಸಿ ಮಾತನಾಡಿದರು. ಸಂದೀಪನ್ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರಾದ ಬಿ.ವಿಶ್ವೇಶ್ವರ ಅಡಿಗರು ಮಾತನಾಡಿ ಶಾಲೆಯಲ್ಲಿ ಅತ್ಯಂತ ಜವಾಬ್ದಾರಿಯುತ ವಿದ್ಯಾರ್ಥಿಯಾದ ಸುರಭಿಯ ಸಾಧನೆ ಇತರರಿಗೆ ಪ್ರೇರಣೆಯಾಗಲಿ ಎಂದು ಶುಭಹಾರೈಸಿದರು. ಬಿ.ಆರ್.ಪಿ ರಾಮಕೃಷ್ಣ ದೇವಾಡಿಗ, ಮಂಜುನಾಥ ಶೇರುಗಾರ್, ಸುಧಾಕರ ದೇವಾಡಿಗ , ಗ್ರಾ.ಪಂ ಸದಸ್ಯರಾದ ಸತೀಶ ಶೆಟ್ಟಿ ಮತ್ತು ಕುಟುಂಬದ ಸದಸ್ಯರು ಉಪಸ್ಥಿತರಿದ್ದರು.. ಸಮನ್ವಯಾಧಿಕಾರಿ ಅಬ್ದುಲ್ ರವೂಫ್ ಸ್ವಾಗತಿಸಿ…
ಕುಂದಾಪ್ರ ಡಾಟ್ ಕಾಂ ಕುಂದಾಪುರ: ಕುಂದಾಪುರ ತಾಲೂಕು ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಬಿಜೆಪಿ ಪಕ್ಷದ ಎಚ್.ಇಂದಿರಾ ಶೆಟ್ಟಿಯವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 37 ಸದಸ್ಯ ಬಲವಿದ್ದ ಕುಂದಾಪುರ ತಾಲ್ಲೂಕು ಪಂಚಾಯಿತಿ, ನೂತನವಾಗಿ ಬೈಂದೂರು ತಾಲ್ಲೂಕು ರಚನೆಯಾದ ಬಳಿಕ ಬೈಂದೂರು ಹಾಗೂ ಕುಂದಾಪುರ ತಾಲ್ಲೂಕು ಪಂಚಾಯಿತಿಯಾಗಿ ಬೇರೆ ಬೇರೆಯಾಗಿತ್ತು. 14 ಸದಸ್ಯರು ಬೈಂದೂರು ತಾಲ್ಲೂಕು ಪಂಚಾಯಿತಿಯಲ್ಲಿ ಹಿಂದೆ ಅವಿಭಜಿತ ಕುಂದಾಪುರ ತಾಲ್ಲೂಕು ಪಂಚಾಯಿತಿ ಅಧ್ಯಕ್ಷರಾಗಿದ್ದ ಶ್ಯಾಮಲಾ ಕುಂದರ್ ಅವರು ಸೇರಿದ್ದರಿಂದಾಗಿ ಕುಂದಾಪುರ ತಾಲ್ಲೂಕು ಪಂಚಾಯಿತಿಗೆ ನೂತನ ಅಧ್ಯಕ್ಷರ ಆಯ್ಕೆ ನಡೆದಿತ್ತು. ಉಪಾಧ್ಯಕ್ಷರಾಗಿ ರಾಮ್‌ಕಿಶನ್ ಹೆಗ್ಡೆ ಮುಂದುವರೆದಿದ್ದಾರೆ. ಕುಂದಾಪುರದ ಕಂದಾಯ ಉಪವಿಭಾಗಾಧಿಕಾರಿ ಕೆ.ರಾಜು ಅಧ್ಯಕ್ಷರ ಆಯ್ಕೆಯ ಚುನಾವಣಾ ಪ್ರಕ್ರಿಯೆಯನ್ನು ಪೂರೈಸಿ, ನೂತನ ಅಧ್ಯಕ್ಷರಿಗೆ ಪುಷ್ಟ ಗುಚ್ಛವನ್ನು ನೀಡಿ ಅಭಿನಂದನೆ ಸಲ್ಲಿಸಿದರು. ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಕೇಶವ್ ಶೆಟ್ಟಿಗಾರ್ ಇದ್ದರು. ಅಂಗನವಾಡಿ ಶಿಕ್ಷಕಿಯಾಗಿದ್ದ ಇಂದಿರಾ ಶೆಟ್ಟಿ ಹರ್ಕೂರು ಹುದ್ದೆ ರಾಜಿನಾಮೆ ನೀಡಿ ರಾಜಕೀಯ ಕ್ಷೇತ್ರವನ್ನು ಪ್ರತಿನಿಧಿಸಿ ವಂಡ್ಸೆ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಸದಸ್ಯೆಯಾಗಿದ್ದರು. ವಂಡ್ಸೆ ಜಿಲ್ಲಾ ಪಂಚಾಯಿತಿ…
