ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಪದವಿ ಪೂರ್ವಕಾಲೇಜಿನ ಜೀವಶಾಸ್ತ್ರ ವಿಬಾಗದ ಉಪನ್ಯಾಸಕಿಯಾಗಿ ಸೇವೆ ಸಲ್ಲಿಸುತ್ತಿರುವ ಡಾ. ಸರೋಜ ಎಂ ಅವರಿಗೆ ಮೈಸೂರು ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿ ಪಡೆದಿದ್ದಾರೆ. ಅವರು ಮೈಸೂರು ವಿಶ್ವವಿದ್ಯಾನಿಲಯದ ಡಾ.ಜಿ.ವಿ.ಗೋಪಾಲ್ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ ಪ್ಲೈಟೋಪ್ಲಾಂಕ್ಟೊನ್ ಸ್ಟಡೀಸ್‌ಆಫ್ ಸೆಲೆಕ್ಟೆಡ್ ಪ್ರೆಶ್ ವಾಟರ್ ಲೇಕ್ಸ್ ಆಫ್‌ಉಡುಪಿ ಡಿಸ್ಟ್ರಿಕ್ಟ್ (Phytoplankton Studies of Selected Fresh Water Lakes of Udupi District) ಎಂಬ ಮಹಾಪ್ರಬಂಧವನ್ನು ಸಸ್ಯಶಾಸ್ತ್ರ ವಿಷಯದಲ್ಲಿ ಪಿಹೆಚ್.ಡಿ ಪದವಿಗಾಗಿ ಮಂಡಿಸಿರುತ್ತಾರೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ: ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಸ್ನಾತಕೋತ್ತರ ಅನ್ವಯಿಕ ಪ್ರಾಣಿಶಾಸ್ತ್ರ ವಿಭಾಗದ ವತಿಯಿಂದ, ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶ (ಐಕ್ಯೂಎಸಿ) ಸಹಯೋಗದೊಂದಿಗೆ ‘ಲಿವಿಂಗ್ ವಿದ್ ಸ್ನೇಕ್ಸ್ – ಹಾವು ಕಡಿತ ತಗ್ಗಿಸುವ ಯೋಜನೆ’ ಕಾರ್ಯಾಗಾರ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ “ಹಾವು ಮತ್ತು ನಾವು” ಇದರ ಪ್ರಾಜೆಕ್ಟ್ ಮ್ಯಾನೇಜರ್ ಸ್ಪೂರ್ತಿ ಶೆಟ್ಟಿ ಹಾಗೂ ಹಾವು ಕಡಿತದ ಶಿಕ್ಷಣತಜ್ಞ ವಿಪಿನ್ ರಾಯ್, ಹಾವು ಕಡಿತದಿಂದ ಪಾರಾಗುವ ಮಾರ್ಗಗಳು, ಕಡಿತಕ್ಕೊಳಗಾದ ಸಂತ್ರಸ್ತರಿಗೆ ಚಿಕಿತ್ಸೆ ನೀಡುವ ವಿಧಾನಗಳ ಕುರಿತು ಪ್ರಾಯೋಗಿಕ ಮಾಹಿತಿ ನೀಡಿದರು. ಒಟ್ಟು ಎರಡು ಅವಧಿಗಳಲ್ಲಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು. ಮೊದಲ ಅವಧಿಯಲ್ಲಿ, ಮಾನವ ಹಾಗೂ ಹಾವಿನ ನಡುವಿನ ಸಂಘ ಮತ್ತು ಹಾವು ಕಡಿತದ ಸಂತ್ರಸ್ತರಿಗೆ ಚಿಕಿತ್ಸೆ ನೀಡುವ ಸರಿಯಾದ ವಿಧಾನಗಳನ್ನು ಸ್ಪೂರ್ತಿ ಶೆಟ್ಟಿ ಪ್ರಾಯೋಗಿಕವಾಗಿ ತಿಳಿಸಿದರು. ಅದಲ್ಲದೆ, ಭಾರತದಲ್ಲಿ ಕಂಡುಬರುವ ವಿಷಪೂರಿತ ಹಾವುಗಳ ಬಗ್ಗೆ ಕೆಲವು ಆಸಕ್ತಿದಾಯಕ ಸಂಗತಿಗಳನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡರು. ಎರಡನೇ ಅವಧಿಯನ್ನು ವಿಪಿನ್ ರಾಯ್…
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಸಹಕಾರಿ ಸಂಸ್ಥೆಗಳು ಬೆಳೆಯಬೇಕೆಂದರೆ ಅವು ಸದಸ್ಯರಿಗೆ, ಗ್ರಾಹಕರಿಗೆ ಅಗತ್ಯ ಸೇವೆಗಳನ್ನು ಸುಲಭದಲ್ಲಿ ಒದಗಿಸಬೇಕು. ಅದರ ವ್ಯವಹಾರಗಳು ಪ್ರಾಮಾಣಿಕ ಮತ್ತು ಪಾರದರ್ಶಕ ಆಗಿರಬೇಕು’ ಎಂದು ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಎಂ. ಎನ್.ರಾಜೇಂದ್ರಕುಮಾರ್ ಹೇಳಿದರು. ಅವರು ಗಂಗೊಳ್ಳಿ ಸೇವಾ ಸಹಕಾರಿ ಬ್ಯಾಂಕ್‌ನ ಅಮೃತ ಮಹೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಗಂಗೊಳ್ಳಿ ಪ್ರಧಾನ ಕಚೇರಿ ಮತ್ತು ಮೂರು ಶಾಖೆಗಳ ಮೂಲಕ ಕುಂದಾಪುರ ತಾಲ್ಲೂಕಿನ ಜನರಿಗೆ ಸೇವೆ ನೀಡುತ್ತಿರುವ ಬ್ಯಾಂಕ್, ಮುಂದಿನ 10 ವರ್ಷಗಳಲ್ಲಿ ಇನ್ನೂ 10 ಶಾಖೆಗಳನ್ನು ತೆರೆದು, ರೂ. 100 ಕೋಟಿ ಠೇವಣಿ ಸಂಗ್ರಹಿಸಬೇಕು ಎಂದು ಸಲಹೆ ನೀಡಿದರು. ಅಮೃತ ಮಹೋತ್ಸವ ಸ್ಮರಣ ಸಂಚಿಕೆ ಬಿಡುಗಡೆ ಮಾಡಿ ಮಾತನಾಡಿದ ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ, ಗಂಗೊಳ್ಳಿಯಲ್ಲಿ ವ್ಯವಹಾರ ನಡೆಸುವ ಎಲ್ಲ ಆರ್ಥಿಕ ಸಂಸ್ಥೆಗಳು ಉತ್ತುಂಗಕ್ಕೇರಿವೆ. ಸೇವಾ ಸಹಕಾರಿ ಬ್ಯಾಂಕ್ ಅದೇ ದಾರಿಯಲ್ಲಿದೆ ಎಂದರು. ಬ್ಯಾಂಕ್‌ನಅಧ್ಯಕ್ಷ ಆನಂದ ಬಿಲ್ಲವ ಅಧ್ಯಕ್ಷತೆ ವಹಿಸಿದ್ದರು. ಎಂ. ಎನ್.ರಾಜೇಂದ್ರ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ವಿಶ್ವಕರ್ಮ ಜನಾಂಗ ಪಂಚ ಕಸುಬುಗಳನ್ನು ಮಾಡುವ ಶ್ರೇಷ್ಠ ಜನಾಂಗ. ಬ್ರಾಹ್ಮಣ್ಯ ಮರೆತು, ವಿಶ್ವಕರ್ಮರು ಎಸ್‌ಟಿ ಮೀಸಲಾತಿಗೆ ಸೇರುವ ಬಗ್ಗೆ ಚಿಂತನೆ ಸಮಾಂಜಸವಲ್ಲ. ವಿಶ್ವಕರ್ಮ ಸಮಾಜ ಮುಂದೆಯೂ ಕೂಡ ವಿಶ್ವಕರ್ಮ ಸಮಾಜವಾಗಿ ಉಳಿಯಬೇಕು. ವಿಶ್ವಕರ್ಮರು ಹಿಂದಿನಿಂದಲೂ ತಮ್ಮ ಜನಾಂಗದ ಅಸ್ತಿತ್ವ ಉಳಿಸಿಕೊಳ್ಳುವಲ್ಲಿ ಹೋರಾಟ ಮಾಡುತ್ತ ಬಂದ ಸಮಾಜ ಎಂದು ಪರಮಪೂಜ್ಯ ಜಗದ್ಗುರು ಅನಂತಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮೀ ಹೇಳಿದರು. ಅವರು ಶ್ರೀ ಕ್ಷೇತ್ರ ಉಪ್ರಳ್ಳಿ ಶ್ರೀ ಕಾಳಿಕಾಂಬಾ ದೇವಸ್ಥಾನದಲ್ಲಿ ನಡೆದ ಪ್ರತಿಷ್ಠಾ ವರ್ಧಂತ್ಯುತ್ಸವ ಧಾರ್ಮಿಕ ಸಭೆ ಹಾಗೂ ಶ್ರೀ ಕಾಳಿಕಾಂಬಾ ಎಜ್ಯುಕೇಶನಲ್ ಟ್ರಸ್ಟ್ ವತಿಯಿಂದ ಕೊಡಮಾಡಿದ ವಿದ್ಯಾರ್ಥಿ ವೇತನ ಮತ್ತು ಸನ್ಮಾನ ಸಭೆಯಲ್ಲಿ ಮಾತನಾಡಿದರು. ವಿಶ್ವಕರ್ಮ ಸಮಾಜ ವಿದ್ಯಾರ್ಥಿಗಳಿವೆ ವಿದ್ಯಾರ್ಥಿ ವೇತನ ನೀಡುದರ ಜತೆಯಲ್ಲಿ ವಿದ್ಯಾರ್ಥಿಗಳಿಗಾಗಿ ಒಂದು ಸುಸಜ್ಜಿತವಾದ ವಿದ್ಯಾರ್ಥಿನಿಲಯ ಸ್ಥಾಪನೆ ಮಾಡಿ, ವಿದ್ಯಾರ್ಜನೆ ನೀಡುವ ಕೆಲಸವಾಗಬೇಕು. ಉಪ್ರಳ್ಳಿಯ ಶ್ರೀ ಕಾಳಿಕಾಂಬಾ ಎಜ್ಯುಕೇಶನಲ್ ಟ್ರಸ್ಟ್ ವಿದ್ಯಾರ್ಥಿ ವೇತನದ ಜತೆಯಲ್ಲಿ ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಅತ್ಯಂತ ಹಿಂದುಳಿದ ಗ್ರಾಮೀಣ ಭಾಗದಲ್ಲಿ ಕಲಾ ಸಂಘಟನೆ ಮಾಡಿ ಅದನ್ನು ಯಶಸ್ವಿಯಾಗಿ ಮುನ್ನೆಡೆಸುವುದು ಸುಲಭದ ಮಾತಲ್ಲ. ನಾಟಕ ಅಭಿರುಚಿಯ ಪ್ರೇಕ್ಷಕರ ಸೃಷ್ಠಿ ಮಾಡುವ ಜತೆಗೆ ನಾಟಕ ವಿಮರ್ಶೆ ಮಾಡುವ ಸೃಜನತ್ಮಕ ಪ್ರೇಕ್ಷಕರ ಹಿಂದೆ ಲಾವಣ್ಯದ ಕ್ರೀಯಾಶೀಲತೆಯಿದೆ ಎಂದು ಮಾಜಿ ಶಾಸಕ ಕೆ. ಲಕ್ಷ್ಮಿನಾರಾಯಣ ಹೇಳಿದರು. ಅವರು ಬೈಂದೂರು ಶಾರದಾ ವೇದಿಕೆಯಲ್ಲಿ ನಡೆದ ಲಾವಣ್ಯದ ೪೪ನೇ ವಾರ್ಷಿಕೋತ್ಸವ ಹಾಗೂ ರಂಗವೈವಿಧ್ಯ – 2021 ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ನಾಲ್ಕು ದಶಕಗಳ ಕಾಲ ಕಲಾ ಸೇವೆಯಲ್ಲಿ ತೊಡಗಿಸಿಕೊಂಡ ಲಾವಣ್ಯ ಮತ್ತೊಂದು ತಲೆಮಾರಿನ ಕಲಾವಿದರ ಹುಟ್ಟಿಗೂ ಕಾರಣವಾಗಿದ್ದು, ಕಲಾದೇವತೆಗೆ ಕೊಟ್ಟ ಕೊಡುಗೆಯಾಗಿದೆ. ಇಂದು ರಾಜ್ಯಾಂದತ ಬೈಂದೂರು ಹೆಸರು ಹೇಳಿದರೆ ಲಾವಣ್ಯದ ಮೂಲಕ ಗುರುತಿಸಿವಷ್ಟು ಸಂಸ್ಥೆ ಎತ್ತರಕ್ಕೆ ಬೆಳೆದಿದೆ ಎಂದರು. ಲಾವಣ್ಯದ ಅಧ್ಯಕ್ಷ ಹರೇಗೋಡು ಉದಯ್ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು. ಈ ಸಾಲಿನ ಕರ್ನಾಟಕ ನಾಟಕ ಅಕಾಡೆಮಿಯ ವಾರ್ಷಿಕ ರಂಗ ಪ್ರಶಸ್ತಿ ಪುರಸ್ಕೃತ ಉಪ್ಪುಂದ ಶ್ರೀನಿವಾಸ ಪ್ರಭು, ಜಿಲ್ಲಾ ರಾಜ್ಯೋತ್ಸವ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಚುನಾವಣೆಗೆ ಇನ್ನೂ ಕಾಲಾವಕಾಶ ಇರುವುದರಿಂದ ಇವತ್ತಿನಿಂದಲೇ ಕಾಂಗ್ರೆಸ್ ಪಕ್ಷದ ಎಲ್ಲಾ ಮುಖಂಡರು ಒಗ್ಗಟ್ಟಿನಿಂದ ಜತೆಗೂಡಿ ಯೋಚಿಸಿ ಜಿಲ್ಲೆಯ ಮತದಾರರ ಭಾವನೆ ಅರಿತು ಕೆಲಸ ಮಾಡಿದರೆ ಜಿಲ್ಲೆಯ ಆರು ಕ್ಷೇತ್ರಗಳಲ್ಲಿ ಐದರಲ್ಲಾದರೂ ಪಕ್ಷದ ಶಾಸಕರು ಆಯ್ಕೆಯಾಗುತ್ತಾರೆಂಬ ಆತ್ಮವಿಶ್ವಾಸ ನನಗಿದೆ ಎಂದು ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷ ಡಿ. ಕೆ. ಶಿವಕುಮಾರ್ ಹೇಳಿದರು. ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರಗಳ ಜನವಿರೋಧಿ ನೀತಿಯನ್ನು ವಿರೋಧಿಸಿ ಸೋಮವಾರ ಹೆಜಮಾಡಿಯಲ್ಲಿ ಆರಂಭವಾದ ಕಾಂಗ್ರೆಸ್ ಪಕ್ಷದ ಜನಧ್ವನಿ ಪಾದಯಾತ್ರೆ, ಬೈಂದೂರು ನೂತನ ಬಸ್‍ನಿಲ್ದಾಣದ ಬಳಿ ಶನಿವಾರ ನಡೆದ ಸಮಾರೋಪದಲ್ಲಿ ಅವರು ಮಾತನಾಡಿದರು. ಇಲ್ಲಿ ನಾನು ಭಾಷಣ ಮಾಡುವುದಕ್ಕಾಗಲಿ ಸನ್ಮಾನ ಮಾಡಿಸಿಕೊಳ್ಳಲಿಕ್ಕಾಗಲಿ ಬಂದಿಲ್ಲ. ಉಡುಪಿ ಜಿಲ್ಲೆಯ ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಶಾಸಕರು, ಸಚಿವರು ಇದ್ದಾರೆ. ಆದರೆ ಅವರ್ಯಾರೂ ಜನರ ಪರವಾದ ಧ್ವನಿಯಾಗಿಲ್ಲ. ಕಾಂಗ್ರೆಸ್ ಪಕ್ಷ ಕೇವಲ ಅಧಿಕಾರ ನಡೆಸುವ ಉದ್ದೇಶದಿಂದ ಹುಟ್ಟಿಕೊಂಡಿಲ್ಲ, ಜನರ ಬದುಕಿನಲ್ಲಿ ಅವರ ಕಷ್ಟಗಳಿಗೆ ಸ್ಪಂದಿಸಿ ಜನರ ಧ್ವನಿಯಾಗಲು ನಮ್ಮ ಪಕ್ಷ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಒಡಿಶಾದ ಭುವನೇಶ್ವರದಲ್ಲಿ ಮಾ.5ರಿಂದ 11ರ ವರೆಗೆ ನಡೆಯಲಿರುವ 679ನೇ ರಾಷ್ಟ್ರೀಯ ಸೀನಿಯರ್ ವಾಲಿಬಾಲ್ ಪಂದ್ಯಾವಳಿಯಲ್ಲಿ ಕರ್ನಾಟಕ ರಾಜ್ಯ ವಾಲಿಬಾಲ್ ತಂಡದ ಸಾರಥ್ಯವನ್ನು ಹೆಮ್ಮಾಡಿಯ ರೈಸನ್ ಬೆನೆಟ್ ರೆಬೆಲ್ಲೂ ವಹಿಸಲಿದ್ದಾರೆ. ಹೆಮ್ಮಾಡಿ ಗ್ರಾಮದ ಮೂವತ್ತೂಮಡಿಯ ಕೃಷಿಕ ದಂಪತಿ ಬೋನಿಫಾಸ್ – ಜೆಸಿಂತಾ ರೆಬೆಲ್ಲೂ ಅವರ ಪುತ್ರನಾದ ರೈಸನ್ ಅವರು ವಾಲಿಬಾಲ್ ಆಟಗಾರನಾಗಿ ರಾಷ್ಟ್ರಮಟ್ಟದಲ್ಲಿ ಮಿಂಚುತ್ತಿದ್ದಾರೆ. 2009ರಲ್ಲಿ ನಡೆದ 67ನೇ ರಾಷ್ಟ್ರೀಯ ಚಾಂಪಿಯನ್ ಶಿಪ್ನಲ್ಲಿ ರಾಜ್ಯ ತಂಡ ಗೆದ್ದು ಬರುವಲ್ಲಿ ರೈಸನ್ ಪಾತ್ರ ಪ್ರಮುಖವಾಗಿತ್ತು 2013ರಲ್ಲಿ ಪಶ್ಚಿಮ ಬಂಗಾಳದಲ್ಲಿ ನಡೆದ ರಾಷ್ಟ್ರ ಮಟ್ಟದ ಜೂನಿಯರ್ ಪಂದ್ಯಾವಳಿ, ಮಹಾರಾಷ್ಟ್ರದಲ್ಲಿ ಜರುಗಿದ ಯುವ ರಾಷ್ಟ್ರೀಯ ಪಂದ್ಯಾವಳಿ, 2014ರಲ್ಲಿ ರಾಜಸ್ಥಾನದಲ್ಲಿ ನಡೆದ ರಾಷ್ಟ್ರ ಮಟ್ಟದ ಜೂನಿಯ್ ಪಂದ್ಯಾವಳಿಗಳಲ್ಲಿ ಉತ್ತಮ ಪ್ರದರ್ಶನ ನಿಡಿದ್ದ ರೈಸನ್, ರಾಜನಸ್ಥಾನದಲ್ಲಿ ನಡೆದ ಯುವ ರಾಷ್ಟ್ರೀಯ ಪಂದ್ಯಾವಳಿಯಲ್ಲಿ ರಜತ ಪದಕ ಜಯಿಸಿದ್ದರು. 2015ರಲ್ಲಿ ತಮಿಳುನಾಡಿನಲ್ಲಿ ಜರುಗಿದ ಫೆಡರೇಶನ್ ಕಫ್ ಪಂದ್ಯಾವಳಿಯಲ್ಲಿ ಚಿನ್ನದ ಪದಕ, 2016ರ ಫೆಡರೇಶನ್ ಕಪ್ ಪಂದ್ಯಾವಳಿಯಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಕಳಪೆ ಕಾಮಗಾರಿಯಿಂದಾಗಿ ಶಿಥಿಲಾವಸ್ಥೆಗೆ ತಲುಪಿದ್ದ ಗಂಗೊಳ್ಳಿ ಬಂದರಿನ ಜೆಟ್ಟಿಯ ಪುನರ್ ನಿರ್ಮಾಣಕ್ಕೆ ರೂ.16 ಕೋಟಿ ಅನುದಾನ ದೊರೆತಿದೆ ಎಂದು ಬೈಂದೂರು ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ ತಿಳಿಸಿದರು ಅವರು ಇಲ್ಲಿನ ಸಮೀಪದ ಗಂಗೊಳ್ಳಿ ಬಂದರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ರೂ. 12 ಕೋಟಿ ವೆಚ್ಚದ ಜೆಟ್ಟಿ ಮರು ನಿರ್ಮಾಣದ ಕಾಮಗಾರಿ ಮತ್ತು ರೂ. 1 ಕೋಟಿ ವೆಚ್ಚದ ರಸ್ತೆ ಕಾಮಗಾರಿಯ ಭೂಮಿಪೂಜೆ ನೆರವೇರಿಸಿ ಮಾತನಾಡಿದರು. ಗಂಗೊಳ್ಳಿಯಿಂದ ಶಿರೂರು ವರೆಗಿನ ಮೀನುಗಾರಿಕಾ ರಸ್ತೆಗೆ ರೂ. 12 ಕೋಟಿ ಅನುದಾನ ಒದಗಿಸಲಾಗಿದೆ. ಕೋಡೇರಿ ಬಂದರಿಗೆ ರೂ 2.80 ಕೋಟಿ ಸೇರಿ ಒಟ್ಟು ರೂ 35 ಕೋಟಿ ಅನುದಾನ ನೀಡಲಾಗಿದೆ. ಬೈಂದೂರು ವಿಧಾನಸಭಾ ಕ್ಷೇತ್ರಕ್ಕೆ ಈಗಾಗಲೇ ರೂ. 1,600 ಕೋಟಿ ಅನುದಾನ ಬಂದಿದೆ. ರೂ 550 ಕೋಟಿ ವೆಚ್ಚದಲ್ಲಿ ಕ್ಷೇತ್ರದ ಪ್ರತಿ ಮನೆಗೂ ಕುಡಿಯುವ ನೀರು ಒದಗಿಸುವ ಕಾರ್ಯ ಯೋಜನೆ ರೂಪಿಸಲಾಗಿದೆ ಎಂದರು. ಜಿಲ್ಲಾ ಪಂಚಾಯಿತಿ ಸದಸ್ಯೆ ಶೋಭಾ ಪುತ್ರನ್, ತಾಲ್ಲೂಕು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕಾಮಿ೯ಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸಿಐಟಿಯು ರಾಜ್ಯ ಸಮಿತಿಯ ನೇತೃತ್ವದಲ್ಲಿ ಮಾರ್ಚ್ 4ರ ಬಜೆಟ್ ಪೂರ್ವ ನಡೆಯುವ ಕಾಮಿ೯ಕರ ವಿಧಾನ ಸೌಧ ಚಲೋ ಹೋರಾಟದ ಅಂಗವಾಗಿ ಬೈಂದೂರು ತಾಲ್ಲೂಕು ಸಿಐಟಿಯು ನೇತೃತ್ವದಲ್ಲಿ ಕಾಮಿ೯ಕರು ಮೆರವಣಿಗೆಯ ಮೂಲಕ ಬೈಂದೂರು ಶಾಸಕರ ಕಚೇರಿ ಚಲೋ ಹೋರಾಟ ನಡೆಸಿದರು. ಬೈಂದೂರು ಸಿಐಟಿಯು ಕಚೇರಿಯಿಂದ ಕಾಮಿ೯ಕರ ಪಾದಯಾತ್ರೆಯನ್ನು ಉದ್ಘಾಟಿಸಿದ ಸಿಐಟಿಯು ಉಡುಪಿ ಜಿಲ್ಲಾ ಕಾಯ೯ದಶಿ೯ ಸುರೇಶ್ ಕಲ್ಲಾಗರ್ ಮಾತನಾಡಿ,ಮಾಚ್೯4ರಂದು ಎಲ್ಲಾ ವಿಭಾಗದ ಕಾಮಿ೯ಕರು ‘ಬಜೆಟ್ ಅಧಿವೇಶನ ಚಲೋ’ ನಡೆಸಿ ರಾಜ್ಯದ ಮುಖ್ಯಮಂತ್ರಿಗಳಿಗೆ ಮನವಿ ಪತ್ರಸಲ್ಲಿಸಿ, ಈ ವಷ೯ದ ಬಜೆಟ್ ಅನುದಾನದ ಮೂಲಕ ಹಲವು ಬೇಡಿಕೆಗಳನ್ನು ಈಡೆರಿಸಲು ಒತ್ತಾಯಿಸಲಾಗುತ್ತದೆ ಎಂದು ಹೇಳಿದರು. ಬೈಂದೂರು ತಾಲೂಕು ಕೇಂದ್ರಕ್ಕೆ ಮಿನಿ ವಿಧಾನ ಸೌಧ, ಕಾಮಿ೯ಕ ನಿರೀಕ್ಷಕರ ಕಚೇರಿ, ಬೈಂದೂರು ತಾಲೂಕಿನಾದ್ಯಂತ ನದಿಗಳಲ್ಲಿ ಮರಳು ತೆಗೆಯಲು ಪರವಾನಿಗೆ ,ಸರಕಾರದ ಎಲ್ಲಾ 24 ಇಲಾಖೆಗಳನ್ನು ತೆರೆಯಬೇಕು, ಬೈಂದೂರು ಸಮುದಾಯ ಆರೋಗ್ಯ ಕೇಂದ್ರ ಮೇಲ್ದಜೆ೯ಗೆ ಏರಿಸುವುದು, ಸ್ಕೀಮ್…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಹಣೆಬರವನ್ನು ನಂಬಿ ಬದುಕಿದವರು ನಾವಲ್ಲ ಹಣೆಯ ಬೆವರನ್ನು ನಂಬಿ ಬದುಕುತ್ತಿರುವ ರೈತರು ನಾವು ಎಂದು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಕೃಷಿಕ ಭಾಸ್ಕರ್ ಶೆಟ್ಟಿ ಮಣೂರು ಹೇಳಿದರು. ಅವರು ಕೋಟದ ಪಂಚವರ್ಣ ಯುವಕ ಮಂಡಲ ಇವರ ನೇತ್ರತ್ವದಲ್ಲಿ ಗಿಳಿಯಾರು ಯುವಕ ಮಂಡಲ, ವಿಪ್ರ ಮಹಿಳಾ ಬಳಗ ಸಾಲಿಗ್ರಾಮ, ಗೀತಾನಂದ ಫೌಂಡೇಶನ್ ಮಣೂರು, ಮಣೂರು ಫ್ರೆಂಡ್ಸ್ ಮಣೂರು ಇವರ ಸಹಯೋಗದೊಂದಿಗೆ 6 ತಿಂಗಳ ಸರಣಿ ಕಾರ್ಯಕ್ರಮ ರೈತರೆಡೆಗೆ ನಮ್ಮ ನಡಿಗೆ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಅದೃಷ್ಟವನ್ನು ನಂಬಿ ಬದುಕಿದವರು ನಾವಲ್ಲ ದೂರದೃಷ್ಟಿಯನ್ನು ಇಟ್ಟುಕೊಂಡು ಕೃಷಿ ಕ್ಷೇತ್ರದಲ್ಲಿ ಒಂದೊಂದೆ ವಿಧಾನವನ್ನು ಕಂಡುಕೊಂಡು ಬದುಕುತ್ತಿರುವ ರೈತರು ಅಂತಹ ರೈತರನ್ನು ಗುರುತಿಸುವುದು ಪ್ರೋತ್ಸಾಹಿಸುವುದು ಅತ್ಯಗತ್ಯ ,ಇನ್ನು ಕೃಷಿಯಲ್ಲಿ ನಷ್ಟ ಅನ್ನೋದು ಸತ್ಯಕ್ಕೆ ದೂರವಾದ ವಿಚಾರ ,ಸಾಂಪ್ರಾದಾಯಕ ಕೃಷಿ ಪದ್ಧತಿಯಿಂದ ಹಿಂದಿನ ಹಿರಿಯರು ಯಶಸ್ಸು ಕಂಡಿದ್ದಾರೆ. ಆದರೆ ಇಂದಿನ ಆಧುನಿಕ ಕೃಷಿ ಪದ್ದತಿಯಲ್ಲಿ ಮತ್ತಷ್ಟು ಯಶಸ್ಸು ಕಾಣಲು ಸಾಧ್ಯ…
