ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕೊಲ್ಲೂರಿನ ಸೌಪರ್ಣಿಕಾ ನದಿ ಹಾಗೂ ಅದಕ್ಕೆ ಸೇರುವ ಅಗ್ನಿತೀರ್ಥ ಸಂಪೂರ್ಣ ಮಲಿನಗೊಂಡಿದ್ದು ಜಲಚರಗಳು, ಕಾಡುಪ್ರಾಣಿಗಳು ಹಾಗೂ ಜನರ ಆಪತ್ತು ಎದುರಾಗಿದೆ. ಸಾಂಕ್ರಾಮಿಕ ರೋಗದ ಭೀತಿ ಹಾಗೂ ಧಾರ್ಮಿಕ ಪಾವಿತ್ರ್ಯತೆಗೆ ಧಕ್ಕೆಯುಂಟಾಗಿದೆ. ಈ ಬಗ್ಗೆ ಎಲ್ಲಾ ಹಂತದ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಗೂ ಹಲವು ಭಾರಿ ಮನವಿ ಮಾಡಿದ್ದರೂ ಯಾವುದೇ ಸ್ಪಂದನವಿಲ್ಲ. ಈ ಭಾರಿಯೂ ಮತ್ತೆ ಮನವಿ ಮಾಡಿದ್ದು ಒಂದು ವಾರದೊಳಕ್ಕೆ ಸಮಸ್ಯೆಗೆ ಪರಿಹಾರ ಕಂಡುಕೊಳ್ಳದಿದ್ದರೆ ಜಿಲ್ಲಾಡಳಿತದ ವಿರುದ್ಧ ಹಸಿರು ಪೀಠದಲ್ಲಿ ದಾವೆ ಹೂಡಲಾಗುವುದು ಎಂದು ಸಾಮಾಜಿಕ ಕಾರ್ಯಕರ್ತ ದಿನೇಶ್ ಗಾಣಿಗ ಕೋಟ ಹೇಳಿದ್ದಾರೆ. ಕುಂದಾಪುರದ ಪ್ರೆಸ್ ಕ್ಲಬ್ನಲ್ಲಿ ನಡೆದ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿ ಮೂಕಾಂಬಿಕೆಯ ಕ್ಷೇತ್ರಕ್ಕೆ ಬರುವ ಕೋಟ್ಯಾಂತರ ಭಕ್ತರು ಈ ಪುಣ್ಯತೀರ್ಥದಲ್ಲಿ ಪವಿತ್ರ ಸ್ನಾನವನ್ನು ಮಾಡುವ ಧಾರ್ಮಿಕ ಆಚರಣೆಗಳಿವೆ. ಪ್ರತಿ ವರ್ಷದ ಶ್ರೀ ಕ್ಷೇತ್ರದ ಜಾತ್ರಾ ಮಹೋತ್ಸವ ಆಚರಣೆಯ ವೇಳೆ ದೇವರಿಗೆ ಇದೆ ಪುಣ್ಯತಿರ್ಥದಲ್ಲಿ ತೆಪ್ಪೋತ್ಸವ ಮತ್ತು ಅವಭೃತ ಸ್ನಾನ ಮಾಡುವ ಆಚಣೆಯೂ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕ್ರೀಡಾಪಟುಗಳು ಕ್ರೀಡೆಯಲ್ಲಿ ಉನ್ನತ ಸಾಧನೆ ಮಾಡಲು, ಅವರಿಗೆ ಅಗತ್ಯವಿರುವ ಸೌಲಭ್ಯಗಳನ್ನು ಒದಗಿಸುವ ಮೂಲಕ ಅವರ ಸಾಧನೆಗೆ ಪ್ರೇರೆಪಣೆ ನೀಡಬೇಕು ಎಂದು ಕರಾವಳಿ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಹೇಳಿದರು. ಅವರು ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 22.316 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಛಾವಣಿ ನಿರ್ಮಾಣ ಕಾಮಗಾರಿಯ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದರು. ಕ್ರೀಡಾಂಗಣದಲ್ಲಿ ಕ್ರೀಡಾಪಟುಗಳಿಗೆ ಕ್ರೀಡಾ ಚಟುವಟಿಕೆಗಳನ್ನು ನಡೆಸಲು ಅಗತ್ಯ ಸೌಲಭ್ಯಗಳನ್ನು ಒದಗಿಸಿ, ಅವರನ್ನು ಉತ್ತಮ ಕ್ರೀಡಾಪಟುಗಳನ್ನಾಗಿ ರೂಪಿಸಬೇಕು ಎಂದು ಮಟ್ಟಾರು ರತ್ನಾಕರ ಹೆಗ್ಡೆ ಹೇಳಿದರು. ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು ಮಾತನಾಡಿ, ಈ ಕ್ರೀಡಾಂಗಣದಲ್ಲಿನ ಸೌಲಭ್ಯಗಳನ್ನು ಬಳಸಿಕೊಂಡು, ಜಿಲ್ಲೆಯಲ್ಲಿ ಇನ್ನಷ್ಟು ಮಂದಿ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳು ಮೂಡಿ ಬರಲಿ ಎಂದು ಹಾರೈಸಿದರು. ಉಡುಪಿ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಅರುಣ್ ಕುಮಾರ್ ಉಪಸ್ಥಿತರಿದ್ದರು ಯುವ ಸಬಲೀಕರಣ ಮತ್ತು ಕ್ರೀಡಾ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಶ್ರೀ ಬ್ರಹ್ಮ ಬೈದರ್ಕಳ ಗರಡಿ ಟ್ರಸ್ಟ್ ರಿ. ನಾವುಂದ ಇದರ ಆಡಳಿತ ಮೊಕ್ತೇಸರ ಹಾಗೂ ಕಾರ್ಯದರ್ಶಿ ಶೇಖರ ಎಮ್ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ಜರಗಿದ ಗರಡಿಯ ಆಡಳಿತ ಸಮಿತಿಯ ಸಭೆಯಲ್ಲಿ ಗರಡಿಯ ಟ್ರಸ್ಟಿಯಾದ ಮುತ್ತ ಬಿಲ್ಲವ ಅವರನ್ನು ನೂತನ ಅಧ್ಯಕ್ಷರಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ಗರಡಿ ಮನೆಯ ನಾಗೇಶ್ ಪಿ ಪೂಜಾರಿ ಅವರನ್ನು ಆಯ್ಕೆ ಮಾಡಲಾಯಿತು, ಈ ಸಂದರ್ಭದಲ್ಲಿ ಗರಡಿಯ ಬಲ್ಲಾಳರಾಗಿರುವ ಚಂದ್ರಶೇಖರ ಶೆಟ್ಟಿ, ಕೆಳಗಿನ ಮನೆ ನಿವೃತ್ತ ಶಿಕ್ಷಕ ಸೀತಾರಾಮ ಪೂಜಾರಿ, ಆರ್ ಕೆ ಬಿಲ್ಲವ, ರಘು ಪೂಜಾರಿ ಬಿಇಎಸ್ಟಿ ಮುಂಬೈ, ವಸಂತ ಪೂಜಾರಿ, ಸತೀಶ್ ಪೂಜಾರಿ, ಅಶೋಕ ಪೂಜಾರಿ, ಸಂತೋಷ ಪೂಜಾರಿ, ಸತ್ಯವತಿ ಬಿಲ್ಲವ, ಸುಧಾಕರ ಪೂಜಾರಿ ಮತ್ತಿತರು ಉಪಸ್ಥಿತರಿದ್ದರು. ಮಾಜಿ ಅಧ್ಯಕ್ಷ ಡಾ. ಎನ್ ಕೆ ಬಿಲ್ಲವ ಅವರನ್ನು ಗೌರವಿಸಲಾಯಿತು. ತಾಲೂಕು ಪಂಚಾಯತಿ ಸದಸ್ಯ ಹಕ್ಕಾಡಿ ಜಗದೀಶ ಪೂಜಾರಿ, ರಾಜೀವ ಶೆಟ್ಟಿ ನೂತನ ಅಧ್ಯಕ್ಷರಿಗೆ ಅಭಿನಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ: ವಿದ್ಯಾರ್ಥಿಗಳಿಗೆ ಸಾಧಿಸುವ ಛಲವಿರಬೇಕು. ಆ ಸಾಧನೆಗೆ ಯಾವುದೇ ವಿಷಯಗಳು ಅಡ್ಡಿಯಾಗಬಾರದು. ಎಂಥದ್ದೇ ಸಂದರ್ಭದಲ್ಲಿಯೂ ಅದನ್ನು ಎದುರಿಸುವ ಸಾಮರ್ಥ್ಯ ಇರಬೇಕು ಎಂದು ಆಳ್ವಾಸ್ ಶಿಕ್ಷಣ ಸಂಸ್ಥೆಯ ಮ್ಯಾನೇಜಿಂಗ್ ಟ್ರಸ್ಟಿ ವಿವೇಕ್ ಆಳ್ವ ಹೇಳಿದರು. ವಿದ್ಯಾಗಿರಿಯ ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ನಡೆದ ಆಳ್ವಾಸ್ ಪದವಿ ಪೂರ್ವ ವಿದ್ಯಾರ್ಥಿಗಳ ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಆಕಾಂಕ್ಷೆಗಳ ಜತೆಗೆ ಕಷ್ಟಗಳನ್ನು ಎದುರಿಸಲು ತಯಾರಿ ಇರಬೇಕು. ವಿದ್ಯಾರ್ಥಿಗಳು ಸೋಲಿಗೆ ನೀಡುವ ಕಾರಣಗಳು ಸಾಧನೆಗಳಿಗೆ ತಡೆಯಾಗಬಾರದು. ಎಲ್ಲ ಬಗೆಯ ಆಕರ್ಷಣೆಗಳು, ಬಂಧನಗಳಿಂದ ಹೊರಬಂದು ತಮ್ಮ ಗುರಿ, ಸಾಧನೆಯತ್ತ ಮನಸ್ಸನ್ನು ಕೇಂದ್ರೀಕರಿಸಬೇಕು ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ. ರಮೇಶ್ ಶೆಟ್ಟಿ ಮಾತನಾಡಿ, ಕೊರೊನ ಸೋಂಕಿನ ನಡುವೆ ಸವಾಲಿನ ರೀತಿಯಲ್ಲಿ ಶಿಕ್ಷಣ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿದೆ. ವಿದ್ಯಾರ್ಥಿಗಳು ಇದರ ಮಹತ್ವವನ್ನು ಅರಿತು ಯಾವುದೇ ಗೊಂದಲಕ್ಕೊಳಗಾಗದೆ ಶೈಕ್ಷಣಿಕ ಸಾಧನೆಯತ್ತ ಗಮನ ನೀಡಬೇಕೆಂದರು. ಪ್ರಸ್ತುತ ಎಲ್ಲ ಕಡೆಯೂ ಕೊರೊನಾತಂಕ ಇದ್ದು ಶಿಕ್ಷಣ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಪುಣ್ಯ ನದಿ ಸೌಪರ್ಣಿಕೆಯ ಒಡಲು ಬತ್ತುತ್ತಿದ್ದು, ಕಳೆದ 2-3 ದಿನಗಳಿಂದ ಸ್ನಾನಘಟ್ಟ ಭಾಗದಲ್ಲಿ ಮೀನು ಹಾಗೂ ಜಲಚರಗಳು ಹೆಚ್ಚಿನ ಸಂಖ್ಯೆಯಲ್ಲಿ ಸತ್ತು ಪರಿಸರದಲ್ಲಿ ವಾಸನೆ ಬೀರುತ್ತಿದೆ. ಪ್ರತಿ ವರ್ಷವೂ ಮಾರ್ಚ್-ಎಪ್ರಿಲ್ ತಿಂಗಳಿನಲ್ಲಿ ಸುಡುವ ಬಿಸಿಲ ಬೇಗೆಯಿಂದಾಗಿ ನದಿಯ ನೀರು ಖಾಲಿಯಾಗುವುದರಿಂದಾಗಿ ನೀರನ್ನೆ ನಂಬಿಕೊಂಡಿರುವ ಜಲಚರಗಳ ಜೀವಕ್ಕೆ ಕುತ್ತು ಬರುವುದು ಮಾಮೂಲಿಯಾಗಿದೆ. ಹೆಮ್ಮಾಲ, ಕರ್ಸೆ, ಕಲ್ಮೊಗ ಮುಂತಾದ ಜಾತಿಯ ರಾಶಿ ರಾಶಿ ಮೀನುಗಳು ಸಾವನ್ನಪ್ಪುತ್ತಿದ್ದು, ಸತ್ತು ಬೀಳುತ್ತಿರುವ ಮೀನಿನಿಂದಾಗಿ ಪರಿಸರದಲ್ಲಿ ಗಬ್ಬು ವಾಸನೆ ಹರಡುತ್ತಿದೆ. ಇದರಿಂದಾಗಿ ಸ್ಥಳೀಯರು ಸಾಂಕ್ರಾಮಿಕ ರೋಗ ಬರಬಹುದೆನ್ನುವ ಆತಂಕದಲ್ಲಿದ್ದಾರೆ. ಬಿಸಿಲಿನ ತಾಪದಿಂದಾಗಿ ನದಿಯ ನೀರುಗಳು ಖಾಲಿಯಾಗುತ್ತಿದ್ದು, ಸ್ನಾನ ಮಾಡಿದ ನೀರುಗಳು ಸುಗಮವಾಗಿ ಹರಿದು ಹೋಗದೆ ಗುಂಡಿಗಳಲ್ಲಿ ನಿಲ್ಲುತ್ತಿದೆ. ನದಿಯಲ್ಲಿ ನೀರಿನ ಹರಿವು ಕಡಿಮೆಯಾಗಿರುವುದರಿಂದ ಹಾಗೂ ಸೌಪರ್ಣಿಕೆಯ ಸ್ನಾನ ಘಟ್ಟದ ಬಳಿಯಲ್ಲಿ ನೀರಿನ ಸಂಗ್ರಹಕ್ಕಾಗಿ ಡ್ಯಾಂ ನಿರ್ಮಾಣ ಮಾಡಿರುವುದರಿಂದಾಗಿ ಗುಂಡಿಯಲ್ಲಿ ಸಂಗ್ರಹವಾಗುವ ನೀರುಗಳಲ್ಲಿ ಸೇರಿಕೊಳ್ಳುವ ಮೀನುಗಳು, ಬಿಸಲಿನ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಿಂದ ಎದುರಾಗಿರುವ ದುರವಸ್ಥೆ ಪರಿಹರಿಸುವಂತೆ ಆಗ್ರಹಿಸಿ ಸೋಮವಾರ ರಾಷ್ಟ್ರೀಯ ಹೆದ್ದಾರಿ ಹೋರಾಟ ಜಾಗೃತಿ ಸಮಿತಿಯು ಸಹಾಯಕ ಕಮಿಷನರ್ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿತು. ಮಳೆಗಾದಲ್ಲಿ ಸರ್ವಿಸ್ ರಸ್ತೆ ಮೇಲೆ ನೀರು ನಿಂತು ವಾಹನ ಸಂಚಾರಕ್ಕೆ ಅಡ್ಡಿಯಾಗುತ್ತದೆ. ಕುಂದಾಪುರದ ಹೆಬ್ಬಾಗಿಲು ಶಾಸ್ತ್ರೀ ಸರ್ಕಲ್ ಸುತ್ತ ಸರ್ವಿಸ್ ರಸ್ತೆ ದುಸ್ಥಿತಿಗೆ ತಲುಪಿದೆ. ಇಲ್ಲಿ ಸರ್ವಿಸ್ ರಸ್ತೆಯ ಮಿತಿ ಎಷ್ಟು ಎನ್ನುವುದು ಇನ್ನೂ ನಿಗದಿಯಾಗಿಲ್ಲ. ಶಾಸ್ತ್ರೀ ಸರ್ಕಲ್ ವಿರೂಪಗೊಂಡಿದೆ. ಪಾದಚಾರಿಗಳು ನಡೆದು ಹೋಗುವ ಪುಟ್ಪಾತ್’ಗಳು ಮರೆಯಾಗಿವೆ. ಸಂಗಮ್’ನಿಂದ ಕೋಟೇಶ್ವರದ ತನಕ ರೋಡ್ ಕ್ರಾಸಿಂಗ್ ಅಸಮರ್ಪಕವಾಗಿದೆ. ಎಲ್.ಐ.ಸಿ ರಸ್ತೆ ಸಮೀಪ 17 ಕಛೇರಿಗಳಿದ್ದರೂ ಇಲ್ಲ ಕ್ರಾಸಿಂಗ್ ನೀಡಿಲ್ಲ. ಜಿಲ್ಲಾಡಳಿತ ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆ ಬಗೆಹರಿಸಬೇಕು ಎಂದು ಸಮಿತಿಯ ಪ್ರಮುಖರು ಆಗ್ರಹಿಸಿದರು. ಸಮಿತಿಯ ಸಂಚಾಲಕ ಕೆಂಚನೂರು ಸೋಮಶೇಖರ ಶೆಟ್ಟಿ, ಪ್ರಮುಖರಾದ ಬಿ. ಕಿಶೋರ್ ಕುಮಾರ್ , ರಾಜೇಶ್ ಕಾವೇರಿ, ಶಿರಿಯಾರ ಗೋಪಾಲಕೃಷ್ಣ ಶೆಟ್ಟಿ, ಗಣೇಶ್ ಪುತ್ರನ್, ವಿವೇಕ್…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕಲೆ, ಸಂಸ್ಕೃತಿಯನ್ನು ಉಸಿರಾಗಿಸಿಕೊಂಡ ಸಂಸ್ಥೆಗಳು ಮುಂದಿನ ಪೀಳಿಗೆಗೆ ಅದರ ಸೊಗಡು ತಲುಪಿಸುವ ಕೆಲಸ ಮಾಡುತ್ತವೆ. ಅಂತಹ ಸಂಸ್ಥೆಯನ್ನು ಪ್ರೋತ್ಸಾಹಿಸುವುದು ಕೂಡ ನಾವು ಮಾಡಬಹುದಾದ ಬಹುದೊಡ್ಡ ಸೇವೆ ಎಂದು ಉಪ್ಪುಂದ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ನ ಮ್ಯಾನೆಜಿಂಗ್ ಟ್ರಸ್ಟೀ ಗೋವಿಂದ ಬಾಬು ಪೂಜಾರಿ ಹೇಳಿದರು.ಅವರು ಇಲ್ಲಿನ ಶಾರದ ವೇದಿಕೆಯಲ್ಲಿ ಸುರಭಿ ರಿ. ಬೈಂದೂರು ಆಶ್ರಯದಲ್ಲಿ ನಡೆದ 21ನೇ ವರ್ಷದ ಸಂಭ್ರಮ ಮೂರು ದಿನಗಳ ಸುರಭಿ ಜೈಸಿರಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಬೈಂದೂರು ತಾ.ಪಂ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷರಾದ ಪುಪ್ಪರಾಜ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು, ಕಾರ್ಯಕ್ರಮದಲ್ಲಿ ಕುಂದಾಪುರ ಕಲಾಕ್ಷೇತ್ರ ಅಧ್ಯಕ್ಷರಾದ ಬಿ. ಕಿಶೋರ್ ಕುಮಾರ್, ಜೀವ ವಿಮಾ ಅಭಿವೃದ್ಧಿ ಅಧಕಾರಿಗಳಾದ ರಾಮ ಮೋಗವೀರ ಗರ್ಜಿನಹಿತ್ಲು, ಸುರಭಿ ಕಾರ್ಯದರ್ಶಿ ಭಾಸ್ಕರ ಬಾಡ ಉಪಸ್ಥಿತರಿದ್ದರು. ಸುರಭಿ ಯಕ್ಷಗಾನ ಗುರುಗಳಾದ ಪ್ರಶಾಂತ ಮಯ್ಯ ದಾರಿಮಕ್ಕಿ ಅವರಿಗೆ ಗುರುವಂದನೆ ಸಲ್ಲಿಸಲಾಯಿತು. ಸುರಭಿ ಬೈಂದೂರು ಅಧ್ಯಕ್ಷ ನಾಗರಾಜ ಪಿ. ಯಡ್ತರೆ ಸ್ವಾಗತಿಸಿದರು,…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಶ್ರೀರಾಮ ವಿವಿಧೋದ್ದೇಶ ಟ್ರಸ್ಟ್ ಆಶ್ರಯದಲ್ಲಿ ಪುಸ್ತಕ ವಿತರಣೆ ಹಾಗೂ ಅಭಿನಂದನಾ ಸಮಾರಂಭ ಇಲ್ಲಿನ ಶ್ರೀ ಸೀತಾರಾಮಚಂದ್ರ ಕಲ್ಯಾಣ ಮಂಟಪದಲ್ಲಿ ಜರುಗಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ವಿಶ್ವ ರಾಮಕ್ಷತ್ರಿಯ ಮಹಾಸಂಘದ ಅಧ್ಯಕ್ಷ ಶಶಿಧರ್ ನಾಯ್ಕ್ ಮಾತನಾಡಿ ರಾಮಕ್ಷತ್ರಿಯ ಸಮಾಜ ಸಾಮಾಜಿಕವಾಗಿ ಹಾಗೂ ಆರ್ಥಿಕವಾಗಿ ಅಭಿವೃದ್ಧಿ ಸಾಧಿಸುವುದು ಬಹುಮುಖ್ಯವಾಗಿದ್ದು ಆ ನೆಲೆಯಲ್ಲಿ ಉಳ್ಳವರು ಇಲ್ಲದವರಿಗೆ ಒಂದಿಲ್ಲೊಂದು ರೂಪದಲ್ಲಿ ನೆರವಾಗಬೇಕಿದೆ. ವಿಶ್ವ ರಾಮಕ್ಷತ್ರಿಯ ಮಹಾಸಂಘದ ಮೂಲಕ ರಾಮಕ್ಷತ್ರಿಯರ ಒಟ್ಟು ಜನಸಂಖ್ಯೆಯ ಮಾಹಿತಿ ಕಲೆಹಾಕುವ ಕಾರ್ಯ ಆರಂಭಿಸಲಾಗಿದೆ. ಎಲ್ಲಾ ರಾಮಕ್ಷತ್ರಿಯ ಸಂಘಗಳನ್ನು ಒಂದುಗೂಡಿಸಿ ಸಮಾಜದ ಅಭ್ಯುದಯಕ್ಕಾಗಿ ಶ್ರಮಿಸಲಾಗುವುದು ಎಂದರು. ಅಧ್ಯಕ್ಷತೆ ವಹಿಸಿದ್ದ ಶ್ರೀ ರಾಮ ವಿವಿಧೋದ್ದೇಶ ಟ್ರಸ್ಟ್ ಅಧ್ಯಕ್ಷರಾದ ಬಿ. ರಾಮಕೃಷ್ಣ ಶೇರುಗಾರ್ ಮಾತನಾಡಿ, ರಾಮಕ್ಷತ್ರಿಯ ಸಮಾಜದವರಿಗಾಗಿ ವಿವಿಧ ಸಹಾಯ, ನೆರವು ನೀಡುವ ಉದ್ದೇಶದಿಂದ ಆರಂಭಿಸಲಾದ ಟ್ರಸ್ಟ್ ಮೂಲಕ ಹತ್ತಾರು ಸೇವಾ ಕಾರ್ಯಗಳನ್ನು ಮಾಡಲಾಗುತ್ತಿದೆ. ವಿದ್ಯಾರ್ಥಿ ದತ್ತು ಸ್ವೀಕಾರ, ವಿದ್ಯಾರ್ಥಿ ವೇತನ, ಪುಸ್ತಕ ವಿತರಣೆ, ಗೃಹ ನಿರ್ಮಾಣ, ವಿಧವಾ ವೇತನ ಮುಂತಾದ…
ಜಿಲ್ಲೆಯ ರೈತರು ಇನ್ನು ಮುಂದೆ ತಮ್ಮ ಕೃಷಿ ಭೂಮಿಯಲ್ಲಿನ ಸಮಸ್ಯೆಗಳ ಕುರಿತು ಅಧಿಕಾರಿಗಳ ಮೊಬೈಲ್ ಸಂಖ್ಯೆ ಹುಡುಕಿ ಕರೆ ಮಾಡುವುದು, ಅಧಿಕಾರಿಗಳನ್ನು ಹುಡುಕಿಕೊಂಡು ಕೃಷಿ ಇಲಾಖೆಯ ಕಚೇರಿಗೆ ತೆರಳಿ, ಅಧಿಕಾರಿಗಳನ್ನು ಕಾಯುವುದು, ಅವರು ವಿವಿಧ ಕೆಲಸದ ಒತ್ತಡದಲ್ಲಿ ತಕ್ಷಣ ನಿಮಗೆ ಸಿಗದೇ ಇರುವುದು ಈ ಎಲ್ಲಾ ಸಮಸ್ಯೆಗಳು ಇನ್ನಿಲ್ಲ.. ಏಕೆಂದರೆ ಕೃಷಿ ಸಂಜೀವಿನಿ ರೈತ ಸಹಾಯವಾಣಿ ಟೋಲ್ ಫ್ರೀ ಸಂಖ್ಯೆ 155513 ಗೆ ರೈತರು ಒಂದು ಫೋನ್ ಕರೆ ಮಾಡಿದ್ದಲ್ಲಿ ಅಧಿಕಾರಿಗಳು/ಸಿಬ್ಬಂದಿಗಳೇ ರೈತರ ಮನೆ ಬಾಗಿಲಿಗೆ, ಜಮೀನುಗಳಿಗೆ ಬಂದು, ಕೃಷಿ ಸಂಬಂಧಿತ ಅಗತ್ಯ ಸಲಹೆ, ಸೂಚನೆ, ಸಮಸ್ಯೆಗೆ ಪರಿಹಾರ ನೀಡಲಿದ್ದಾರೆ.ರೈತರ ಜಮೀನಿನಲ್ಲಿನ ಕೀಟ ನಿಯಂತ್ರಣ, ರೋಗ ಮತ್ತು ಕಳೆಗಳ ಬಾಧೆ ಹಾಗೂ ಮಣ್ಣಿನ ಪೋಷಕಾಂಶ ಕೊರತೆ, ಮಣ್ಣು ಪರೀಕ್ಷೆ ಹಾಗೂ ಸಮರ್ಪಕ ನಿರ್ವಹಣೆ ಕುರಿತಂತೆ ರೈತರ ಜಮೀನುಗಳಲ್ಲಿಯೇ ಹತೋಟಿ ಕ್ರಮಗಳ ಕುರಿತು ಮಾರ್ಗೊಪಾಯಗಳನ್ನು ಒದಗಿಸಲು ಸಂಚಾರಿ ಸಸ್ಯ ಆರೋಗ್ಯ ಚಿಕಿತ್ಸಾಲಯ ಕೃಷಿ ಸಂಜೀವಿನಿ ಯೋಜನೆಯನ್ನು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸರ್ಕಾರ ಅನುಷ್ಠಾನಗೊಳಿಸಲಾಗಿದೆ.…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಮನಸ್ಸಿನಲ್ಲಿ ಅನುಭವ ಮತ್ತು ಸಂವೇದನೆಗಳ ಒತ್ತಡ ಸೃಷ್ಟಿಯಾದಾಗ ಕವಿತೆ ಹುಟ್ಟುತ್ತದೆ. ಸಾಮಾನ್ಯವಾಗಿ ಒಬ್ಬನ ಆರಂಭದ ಕವಿತೆಗಳು ಶ್ರೇಷ್ಠವಾಗಿರುವುದಿಲ್ಲ. ಅನುಭವ ಮತ್ತು ಸಂವೇದನೆಗಳು ಮಾಗುತ್ತ ಹೋದಂತೆ ಹಾಗೂ ಅವುಗಳನ್ನು ವ್ಯಕ್ತ ಪಡಿಸಲು ಸೂಕ್ತವೆನಿಸುವ ಭಾಷೆ ಕರಗತವಾದಾಗ ಶ್ರೇಷ್ಠ ಕವಿತೆಗಳು ಹುಟ್ಟುತ್ತವೆ ಎಂದು ಸಾಹಿತಿ ಎ.ಎಸ್.ಎನ್. ಹೆಬ್ಬಾರ್ ಹೇಳಿದರು. ಅವರು ನಾಯ್ಕನಕಟ್ಟೆ ಶ್ರೀ ಲಕ್ಷ್ಮೀ ಶ್ರೀ ನಾಗಪ್ಪಯ್ಯ ನಾಯಕ್ ಸದ್ಭಾವನಾ ವೇದಿಕೆ, ಬೀದರ್ನ ದೇಶಪಾಂಡೆ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನ ಮತ್ತು ಬೆಂಗಳೂರಿನ ಗೋಪಾಲಕೃಷ್ಣ ಅಡಿಗ ಶತಮಾನ ಪ್ರತಿಷ್ಠಾನ ಸಂಯುಕ್ತ ಆಶ್ರಯದಲ್ಲಿ ಉಪ್ಪುಂದದ ರೈತಸಿರಿ ಸಭಾಭವನದಲ್ಲಿ ಭಾನುವಾರ ನಡೆದ ಕೆ. ಪುಂಡಲೀಕ ನಾಯಕ್ ಅವರ ‘ಬದುಕು ಬಣ್ಣದ ಬುಗುರಿ’ ಮತ್ತು ‘ಕಾವ್ಯ ಸಂಜೀವಿನಿ’ ಕವನ ಸಂಕಲನ ಬಿಡುಗಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು. ಹಿರಿಯ ಸಾಹಿತಿಗಳಾದ ಡಾ. ಎಂ. ಜಿ.…
