Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ದಮನಿತ ಮಹಿಳೆಯರಿಗೆ ಜಿಲ್ಲೆಯ ಬ್ಯಾಂಕ್ ಪ್ರಾಯೋಜಿತ ಸಂಸ್ಥೆಗಳ ಮೂಲಕ ಕ್ಯಾಂಡಲ್ ಮೇಕಿಂಗ್, ಕ್ಯಾರಿ ಬ್ಯಾಗ್, ಹರ್ಬಲ್ ಸೋಪ್ , ಡಿಟರ್ಜೆಂಟ್, ಫಿನಾಯಿಲ್, ಕೃತಕ ಆಭರಣ, ಹೋಂ ನರ್ಸಿಂಗ್, ಅಣಬೆ ಕೃಷಿ, ಅಲಂಕಾರಿಕ ವಸ್ತುಗಳ ತಯಾರಿಕೆ ಇನ್ನಿತರ ಕೌಶಲ್ಯ ಚಟುವಟಿಕೆಗಳಲ್ಲಿ ಉಚಿತ ತರಬೇತಿ ನೀಡಲಾಗುವುದು. ಆಸಕ್ತ ದಮನಿತ ಮಹಿಳೆಯರು ಇಲಾಖೆಯಿಂದ ಅರ್ಜಿ ನಮೂನೆಯನ್ನು ಪಡೆದುಕೊಳ್ಳಬಹುದಾಗಿದೆ. ಹಾಗೂ ತರಬೇತಿಯನ್ನು ನೀಡಲು ಆಸಕ್ತಿಯುಳ್ಳ ರುಡ್‌ಸೆಟ್ / ಬ್ಯಾಂಕ್ ನಿರ್ಮಿತ ತರಬೇತಿ ಸಂಸ್ಥೆಗಳು/ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಜೀವನೋಪಾಯ ಇಲಾಖೆಗಳಲ್ಲಿ ಮಾನ್ಯತೆ ಪಡೆದ ಸಂಸ್ಥೆಗಳಿಂದ ಪ್ರಸ್ತಾವನೆ ಕೂಡಾ ಆಹ್ವಾನಿಸಿದ್ದು ಜುಲೈ 31 ರೊಳಗೆ ಉಪನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ , ರಜತಾದ್ರಿ ಮಣಿಪಾಲ ಇವರಿಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0820-2574978 ನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಇಲ್ಲಿನ ಮೇಲ್‌ಗಂಗೊಳ್ಳಿ ರಾಮ ಪೈ ಮಠದ ಬಳಿಯ ನಿವಾಸಿ ಮುಕುಂದ ನಾಯಕ್ ಎಂಬುವರ ವಾಸ್ತವ್ಯದ ಮನೆ ಭಾರೀ ಮಳೆಗೆ ಗುರುವಾರ ರಾತ್ರಿ ಸಂಪೂರ್ಣವಾಗಿ ಧರೆಶಾಯಿಯಾಗಿದೆ. ಮನೆಯಲ್ಲಿದ್ದ ಬೆಲೆ ಬಾಳುವ ವಸ್ತುಗಳು, ಪೀಠೋಪಕರಣ ಸಹಿತ ಇನ್ನಿತರ ವಸ್ತುಗಳು ಮನೆಯ ಅವಶೇಷಗಳ ಅಡಿ ಸಿಲುಕಿ ಹಾನಿಗೊಳಗಾಗಿದೆ. ರಾತ್ರಿ ಸುಮಾರು 9 ಗಂಟೆ ಸುಮಾರಿಗೆ ಮನೆಯ ಮೇಲ್ಛಾವಣಿ ಮುರಿದು ಬೀಳುತ್ತಿರುವ ಸದ್ದು ಕೇಳುತ್ತಿದ್ದಂತೆಯೇ ಮನೆಯಲ್ಲಿದ್ದ ಮುಕುಂದ ನಾಯಕ್, ಅವರ ತಾಯಿ, ತಂಗಿ ಮತ್ತು ತಮ್ಮ ಮನೆಯಿಂದ ಹೊರಕ್ಕೆ ಓಡಿ ಬಂದಿದ್ದರಿಂದ ಮನೆಯಲ್ಲಿದ್ದ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮನೆಯ ಗೋಡೆಗಳು ಹಾಗೂ ಮೇಲ್ಛಾವಣಿ ಸಂಪೂರ್ಣವಾಗಿ ಕುಸಿದು ಬಿದ್ದಿದೆ. ಘಟನಾ ಸ್ಥಳಕ್ಕೆ ಗಂಗೊಳ್ಳಿ ಗ್ರಾಮಕರಣಿಕ ರಾಘವೇಂದ್ರ ದೇವಾಡಿಗ, ಗಂಗೊಳ್ಳಿ ಗ್ರಾಪಂ ಸದಸ್ಯರಾದ ಬಿ.ಲಕ್ಷ್ಮೀಕಾಂತ ಮಡಿವಾಳ, ಬಿ.ರಾಘವೇಂದ್ರ ಪೈ ಹಾಗೂ ಬಿ.ಗಣೇಶ ಶೆಣೈ ಮತ್ತಿತರರು ಭೇಟಿ ನೀಡಿ ಹಾನಿಯನ್ನು ಪರಿಶೀಲಿಸಿದ್ದಾರೆ. ಬೈಂದೂರು ಶಾಸಕ ಬಿ.ಎಂ.ಸುಕುಮಾರ್ ಶೆಟ್ಟಿ ಅವರು ಕುಂದಾಪುರ ತಹಶೀಲ್ದಾರ್ ಅವರಿಗೆ ಕರೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಐಸಿಎಸ್‌ಇ ಪರೀಕ್ಷೆಯಲ್ಲಿ ಬೆಂಗಳೂರು ಲಿಟಲ್ ಪ್ಲವರ್ ಪಬ್ಲಿಕ್ ಸ್ಕೂಲ್‌ನ 10ನೇ ತರಗತಿ ವಿದ್ಯಾರ್ಥಿ ಪ್ರಥಮ ಕುಮಾರ ಶೇಟ್ ಶೇ. 98.16 ಅಂಕ ಪಡೆದು ವಿಶೇಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾನೆ. ಈತ ನ್ಯಾಯವಾದಿ, ಬೈಂದೂರು ತಾಲೂಕು ಬಂಕೇಶ್ವರದ ನಾಗೇಂದ್ರ ಕುಮಾರ ಶೇಟ್ ಹಾಗೂ ಗಾಯತ್ರಿ ದಂಪತಿಗಳ ಪುತ್ರ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಶಿರೂರಿನ ದಿ. ಸುಬ್ರಾಯ ಮಾಸ್ತರ್ ಅವರ ಪುತ್ರ ನರೇಂದ್ರ ಶಿರೂರು(೬೧) ಕೆಲಕಾಲದ ಅಸ್ವಾಸ್ಥ್ಯದ ಕಾರಣ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ನಿಧನರಾದರು. ಉಡುಪಿಯ ಐರೋಡಿ ಸಮೂಹ ಸಂಸ್ಥೆಗಳ ಲೆಕ್ಕವಿಭಾಗದ ಉದ್ಯೋಗಿಯಾಗಿದ್ದ ಅವರು ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುವೈಟ್ ದೇಶದಲ್ಲಿ ನೆಲೆಸಿರುವ ಉದ್ಯಮಿ, ಕುಂದಾಪುರ ಖಾರ್ವಿಕೇರಿಯ ಮೊಹಮದ್ ಸಯ್ಯದ್ (54) ಅವರು ಕುವೈಟ್ನಲ್ಲಿ ಕೋವಿಡ್ ಸೋಂಕಿನಿಂದ ಮೃತಪಟ್ಟಿರುವ ಬಗ್ಗೆ ತಿಳಿದುಬಂದಿದೆ. ಭಂಡಾರ್ಕಾಸ್ ಕಾಲೇಜಿನ ಮಾಜಿ ಅಥ್ಲೆಟಿಕ್ ಛಾಂಪಿಯನ್ ಆಗಿ ಗುರುತಿಸಿಕೊಂಡಿದ್ದ ಅವರು ಉತ್ತಮ ವಾಲಿಬಾಲ್, ಕಬಡ್ಡಿ ಪಟುವಾಗಿದ್ದರು. ಕುಂದಾಪುರದ ಹಳೆ ಬಸ್ ನಿಲ್ದಾಣ ಬಳಿ ಇವರ ಕುಟುಂಬದವರು ‘ಶೂ ಲ್ಯಾಂಡ್ ಪಾದರಕ್ಷೆ ಮಳಿಗೆ ಹೊಂದಿದ್ದರು. ಕುವೈತಿನಲ್ಲಿದ್ದ ಅವರು ಮೂರು ವಾರಗಳಿಂದ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತರಾಗಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳ ಸ್ವತಂತ್ರ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ ವಾಣಿಜ್ಯ ಮತ್ತು ಕಲಾ ವಿಭಾಗದಲ್ಲಿ ಉತ್ತಮ ಸಾಧನೆ ತೋರಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ವೈಷ್ಣವಿ ಶೆಟ್ಟಿ 579 ಅಂಕ, ಅಮೃತಾ ಕೆ. 579 ಅಂಕ, ಕಲಾ ವಿಭಾಗದಲ್ಲಿ ಪೂರ್ಣಿಮಾ ಎಂ. 549 ಅಂಕ ಪಡೆದು ಕಾಲೇಜಿಗೆ ಟಾಪರ್ ಆಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ವನಿತಾ 575 ಅಂಕ ಪಡೆದು ಕಾಲೇಜಿಗೆ ದ್ವಿತೀಯ ಸ್ಥಾನಿಯಾಗಿದ್ದಾಳೆ. ಕಾಲೇಜಿನಲ್ಲಿ 23 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 72 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, ತೇರ್ಗಡೆಯಾಗಿದ್ದು, ಕಲಾ ವಿಭಾಗದಲ್ಲಿ 74%, ವಾಣಿಜ್ಯ ವಿಭಾಗದಲ್ಲಿ 100% ಫಲಿತಾಂಶ ಬಂದಿದ್ದು, ಕಾಲೇಜಿಗೆ ಒಟ್ಟು 90.28% ಫಲಿತಾಂಶ ಬಂದಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಐ.ಸಿ.ಎಸ್.ಸಿ.ಇ. ಕೇಂದ್ರೀಯ ಪಠ್ಯಕ್ರಮದ 10ನೇ ತರಗತಿಯ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯು ಸತತ 17ನೇ ಬಾರಿಗೆ ದಾಖಲೆಯ 100% ಫಲಿತಾಂಶವನ್ನು ಸಾಧಿಸಿದೆ. ಪರೀಕ್ಷೆಗೆ ಕುಳಿತ 130 ವಿದ್ಯಾರ್ಥಿಗಳು ಅಮೋಘ ಸಾಧನೆಯೊಂದಿಗೆ ಶಾಲೆಗೆ ಕೀರ್ತಿ ತಂದಿದ್ದಾರೆ. ಪ್ರತಿಶತ 97.4 ಅಂಕಗಳೊಂದಿಗೆ ಕನ್ನಿಕಾ ಜಿ. ಭಟ್ ಮತ್ತು ಆರ್ಯ ಯಡಿಯಾಳ ಪ್ರಥಮ ಸ್ಥಾನವನ್ನು, ಯುವನ್ ಮತ್ತು ಸುಜನ್ ವಿ.ಎಸ್. ಪ್ರತಿಶತ 96.0 ಅಂಕದೊಂದಿಗೆ ದ್ವಿತೀಯ ಸ್ಥಾನವನ್ನು ವಸುಂಧರಾ ಮತ್ತು ಪವನ್ ಎಸ್. ಶೆಟ್ಟಿ ಪ್ರತಿಶತ 95.4 ಅಂಕದೊಂದಿಗೆ ತೃತೀಯ ಸ್ಥಾನವನ್ನು ಪಡೆದರು. ಪರೀಕ್ಷೆಗೆ ಕುಳಿತ 130 ವಿದ್ಯಾರ್ಥಿಗಳಲ್ಲಿ 86 ವಿದ್ಯಾರ್ಥಿಗಳು ಡಿಸ್ಟಿಂಗ್‌ಕ್ಷನ್ ಪಡೆಯುವುದರ ಮೂಲಕ ಸಂಸ್ಥೆಗೆ ಕೀರ್ತಿಯನ್ನು ತಂದಿರುತ್ತಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷರಾದ ಎಲ್. ಟಿ. ತಿಮ್ಮಪ್ಪ ಹೆಗಡೆ, ಉಪಾಧ್ಯಕ್ಷರಾದ ಡಾ. ಹೆಚ್. ಶಾಂತಾರಾಮ್, ಕಾರ್ಯದರ್ಶಿಗಳಾದ ವೇ. ಹೆಚ್. ಬಾಲಚಂದ್ರ ಭಟ್ ಪ್ರಾಂಶುಪಾಲ ಶರಣ ಕುಮಾರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಈ ಬಾರಿ ಶೇ. 94.37 ಫಲಿತಾಂಶ ಪಡೆದುಕೊಂಡಿದ್ದಾರೆ. 24 ವಿದ್ಯಾರ್ಥಿಗಳು ವಿಶಿಷ್ಠ ಶ್ರೇಣಿಯಲ್ಲಿ ಹಾಗೂ 82 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶ್ರೇಯಾ ಭಟ್ 588 ಅಂಕ ಪಡೆದು ರಾಜ್ಯಕ್ಕೆ ಹತ್ತನೇ ರ್ಯಾಂಕ್, ಜಿಲ್ಲೆಗೆ 5ನೇ ರ್ಯಾಂಕ್ ಪಡೆದಿದ್ದು, ಕಾಲೇಜಿಗೆ ಪ್ರಥಮ ಸ್ಥಾನಿಯಾಗಿದ್ದಾರೆ. ಕೆ.ಕಿರಣ್ ಕಾಮತ್ (572) ದ್ವಿತೀಯ, ಪಲ್ಲವಿ (544) ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಕೀರ್ತಿ ಕೆ 574 ಪ್ರಥಮ, ಕೇಶವ ಪೂಜಾರಿ (568) ದ್ವಿತೀಯ, ಸಾಗರಿಕಾ ಎನ್ (559) ಹಾಗೂ ಸೃಜನ್ ಆರ್. ಕುಲಾಲ್ (559) ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ. ಕಲಾ ವಿಭಾಗದಲ್ಲಿ ಭ್ರಮರ ಕೆ (552) ಪ್ರಥಮ , ಸುನಿಲ್ ನಾಯಕ್ (503) ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ ಎಂದು ಕಾಲೇಜಿನ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ತಾಲೂಕಿನ ಉಪ್ಪುಂದ ಸರಕಾರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಪ್ರಸ್ತುತ ಶೈಕ್ಷಣಿಕ ಸಾಲಿನಲ್ಲಿ 88.65% ಫಲಿತಾಂಶ ದಾಖಲಿಸುವ ಮೂಲಕ ಉತ್ತಮ ಸಾಧನೆ ಮಾಡಿದ್ದಾರೆ. ಕಾಲೇಜು ವಿಜ್ಞಾನ ವಿಭಾಗದಲ್ಲಿ ಶೇ.100 ಫಲಿತಾಂಶ, ವಾಣಿಜ್ಯ ವಿಭಾಗದಲ್ಲಿ ಶೇ.96 ಫಲಿತಾಂಶ ದಾಖಲಿಸಿದೆ. 19 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಶ್ವೇತಾ (512), ವಾಣಿಜ್ಯ ವಿಭಾಗದಲ್ಲಿ (567), ಕಲಾ ವಿಭಾಗದಲ್ಲಿ ಸುಶ್ಮಿತಾ ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಜು.16ರ ಗುರುವಾರ 109 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಈ ಪೈಕಿ ಕುಂದಾಪುರ ತಾಲೂಕಿನ 62, ಉಡುಪಿ ತಾಲೂಕಿನ 36 ಹಾಗೂ ಕಾರ್ಕಳ ತಾಲೂಕಿನ 11 ಮಂದಿಗೆ ಪಾಸಿಟಿವ್ ಬಂದಿದೆ. ಒಟ್ಟು ಪ್ರಕರಣಗಳಲ್ಲಿ 61 ಪುರುಷರು, 40 ಮಹಿಳೆಯರು, 8 ಮಕ್ಕಳು ಸೇರಿದ್ದಾರೆ. ಇಂದು 80 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಮರವಂತೆಯ 54 ವರ್ಷದ ವ್ಯಕ್ತಿ ಇಂದು ಮೃತಪಟ್ಟಿದ್ದು ಅವರಿಗೆ ಕೊರೋನಾ‌ ಪಾಸಿಟಿವ್ ಇರುವುದು ದೃಢವಾಗಿದೆ. ಮೃತ ವ್ಯಕ್ತಿ ಅಸ್ತಮಾದಿಂದ ಬಳಲುತ್ತಿದ್ದು ಬುಧವಾರ ಸಂಜೆ ಅವರನ್ನು ಕುಂದಾಪುರ ಖಾಸಗಿ ಆಸ್ಪತ್ರೆಗೆ ಕರೆತರಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸಗೆ ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾರ್ಗ ಮದ್ಯೆ ಅವರು ಮೃತಪಟ್ಟಿದ್ದರು. ಮೃತದೇಹವನ್ನು ಕುಂದಾಪುರಕ್ಕೆ ತಂದು ಸರಕಾರಿ ಆಸ್ಪತ್ರೆಯಲ್ಲಿ ಗಂಟಲು ದ್ರವ ಪರೀಕ್ಷೆ ನಡೆಸಲಾಗಿತ್ತು. ಕೊರೋನಾ ರ‍್ಯಾಪಿಡ್ ಟೆಸ್ಟ್ ವರದಿಯಲ್ಲಿ ಕೊರೋನಾ ಪಾಸಿಟಿವ್ ಇರುವುದು ತಿಳಿದುಬಂದಿದೆ. ಅಜ್ಜರಕಾಡಿನಲ್ಲಿರುವ ಜಿಲ್ಲಾಸ್ಪತ್ರೆ ಇಬ್ಬರು ವೈದ್ಯರು, ಓರ್ವ ನರ್ಸ್ ಹಾಗೂ…

Read More