Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಬಹುಮಹಡಿ ವಸತಿ ಸಮುಚ್ಚಾಲಯಗಳು ಕೊಳಚೆ ಹಾಗೂ ತ್ಯಾಜ್ಯದ ನೀರನ್ನು ಶುದ್ಧೀಕರಣದ ನಿರ್ವಹಣೆ ಮಾಡುವುದರೊಂದಿಗೆ ಮರು ಬಳಕೆ ಮಾಡಬೇಕು. ಒಂದೊಮ್ಮೆ ಕೊಳಚೆ ನೀರನ್ನು ಶುದ್ಧೀಕರಿಸದೆ ಎಲ್ಲಂದಲ್ಲಿ ನದಿ ತೋಡುಗಳಿಗೆ ಬಿಟ್ಟು ಜಲಮಾಲಿನ್ಯ ಉಂಟು ಮಾಡಿದರೆ ಅಂತವರ ಮೇಲೆ ಮುಂದಿನ ದಿನಗಳಲ್ಲಿನಿರ್ದಾಕ್ಷಣವಾಗಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಸೂಚನೆ ನೀಡಿದರು. ಅವರು ಗುರುವಾರ ನಗರದ ಮಣಿಪಾಲ ರಜತಾದ್ರಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಅಪಾರ್ಟ್ಮೆಂಟ್ ಓನರ್ಸ್ ಅಸೋಸಿಯೇಷನ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ಅಪಾರ್ಟ್ಮೆಂಟ್‌ಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಪ್ರಸ್ತುತ ನಗರಸಭೆ ವ್ಯಾಪ್ತಿಯಲ್ಲಿ 376 ಕ್ಕೂ ಹೆಚ್ಚು ಅಪಾರ್ಟ್ಮೆಂಟ್‌ಗಳು ತ್ಯಾಜ್ಯ ನೀರನ್ನು ಸರಿಯಾದ ರೀತಿಯಲ್ಲಿ ಸಂಸ್ಕರಣೆ ಮಾಡದೇ ಮಳೆ ನೀರು ಹರಿಯುವ ತೋಡುಗಳಿಗೆ ಬಿಡುತ್ತಿರುವ ಹಿನ್ನೆಲೆ, ನಗರ ಸಭೆ ವತಿಯಿಂದ ನೋಟೀಸ್ ನೀಡಲಾಗಿದೆ. ಇವುಗಳಲ್ಲಿ 200 ಮಣಿಪಾಲ್‌ನಲ್ಲಿ, 105 ಉಡುಪಿ ನಗರದಲ್ಲಿ, 70 ಮಲ್ಪೆ ವ್ಯಾಪ್ತಿಯಲ್ಲಿದ್ದು, ಸಮುಚ್ಚಯದ ಮಾಲೀಕರು ತ್ಯಾಜ್ಯದ ನಿರ್ವಹಣೆಯನ್ನು ವೈಜ್ಞಾನಿಕವಾಗಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಇದೇ ಬರುವ ಮಾಚ್೯ 1ರಂದು ಕೋಟ ಅಮೃತೇಶ್ವರೀ ದೇಗುಲದ ವತಿಯಿಂದ ನಡೆಯಲಿರುವ ಏಕ: ಪ್ರವಿತ್ರ ನಾಗಮಂಡಲೋತ್ಸವದ ಕಛೇರಿಯನ್ನು ದೇಗುಲದ ಸಭಾಂಗಣದಲ್ಲಿ ಮೂಡುಗಿಳಿಯಾರಿನ ಹೊನ್ನಾರಿ ಬೊಬ್ಬರ್ಯ ದೈವಸ್ಥಾನದ ಪ್ರಧಾನ ಅರ್ಚಕ ಮಹಾಬಲ ಹೇರ್ಳೆ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ದೇಗುಲದ ಅಧ್ಯಕ್ಷ ಆನಂದ್ ಸಿ. ಕುಂದರ್, ದೇಗುಲದ ಟ್ರಸ್ಟಿಗಳಾದ ರತನ್ ಐತಾಳ್, ಶಿವ ಪೂಜಾರಿ, ಸುಧಾ ಎ. ಪೂಜಾರಿ, ಗಣೇಶ್ ನೆಲ್ಲಿಬೆಟ್ಟು, ಸುಭಾಷ್ ಶೆಟ್ಟಿ ಗಿಳಿಯಾರು, ಜ್ಯೋತಿ ಡಿ. ಕಾಂಚನ್, ಸುಬ್ರಾಯ ಜೋಗಿ, ಚಂದ್ರ ಆಚಾರ್ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ. ಕುಂದಾಪುರ: ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸಾರ್ವಜನಿಕ ಸಹಭಾಗಿತ್ವದಲ್ಲಿ ಅನೇಕ ಯೋಜನೆಗಳನ್ನು ರೂಪಿಸಲಾಗಿದೆ. ದಾನಿಗಳು ಸರಕಾರಿ ಶಾಲೆಗಳನ್ನು ದತ್ತು ಸ್ವೀಕರಿಸಿ ಶಾಲೆಯ ಸರ್ವತೋಮುಖ ಅಭಿವೃದ್ಧಿ ಮಾಡುವ ಪ್ರಯತ್ನ ನಡೆಯುತ್ತಿದೆ. ಸರಕಾರದಿಂದ ಅನುದಾನ ಬಿಡುಗಡೆಯಾದ ಬಳಿಕ ರಸ್ತೆ ಅಭಿವೃದ್ಧಿ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಬೈಂದೂರು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಹೇಳಿದರು. ಅವರು ಗುರುವಾರ ಬೈಂದೂರು ವಿಧಾನಸಭಾ ಕ್ಷೇತ್ರದ ಗುಜ್ಜಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸುಮಾರು 2ಲಕ್ಷ ವೆಚ್ಚದಲ್ಲಿ ಕೊಡಂಚ ರಸ್ತೆ ಮತ್ತು ಸುಮಾರು 3ಲಕ್ಷ ರೂ. ವೆಚ್ಚದಲ್ಲಿ ಪರಮತೋಟ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು. ಪುರೋಹಿತರಾದ ಜಿ. ವಿಠಲದಾಸ ಭಟ್ ಗಂಗೊಳ್ಳಿ ಧಾರ್ಮಿಕ ವಿಧಿವಿಧಾನ ನೆರವೇರಿಸಿದರು. ಬಿಜೆಪಿ ಬೈಂದೂರು ಮಂಡಲ ಅಧ್ಯಕ್ಷೆ ಅನಿತಾ ಆರ್.ಕೆ., ಗುಜ್ಜಾಡಿಯ ಉದ್ಯಮಿ ಉಮೇಶ ಎಲ್. ಮೇಸ್ತ, ಗುಜ್ಜಾಡಿ ಗ್ರಾಪಂ. ಸದಸ್ಯರಾದ ಹರೀಶ ಮೇಸ್ತ, ತುಂಗಾ ಪೂಜಾ‍ರ್ತಿ, ಶ್ರೀಧರ, ಗುಜ್ಜಾಡಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಇಲ್ಲಿನ ಕೋಟ ಅಮೃತೇಶ್ವರೀ ಹಲವು ಮಕ್ಕಳ ತಾಯಿದೇಗುಲದ ವತಿಯಿಂದ ಇದೇ ಬರುವ ಮಾಚ್೯ 1ರಂದು ನಡೆಯಲಿರುವ ಏಕ: ಪವಿತ್ರ ನಾಗಮಂಡಲೋತ್ಸವ ಇದರ ಆಮಂತ್ರಣ ಪತ್ರಿಕೆಯನ್ನು ಬುಧವಾರ ದೇಗುಲದಲ್ಲಿ ಬಿಡುಗಡೆಗೊಳಿಸಲಾಯಿತು. ಬಿಡುಗಡೆ ಸಮಾರಂಭದಲ್ಲಿ ನಾಗದೇವರರಿಗೆ ವಿಶೇಷ ಪೂಜೆ ಸಲ್ಲಿಸಿ, ಶ್ರೀ ದೇವಿ ಅಮೃತೇಶ್ವರೀಗೆ ಪರಿವಾರ ದೇವರುಗಳಾದ ಮಾರಿಯಮ್ಮ, ರಕ್ತೇಶ್ವರಿ, ವೀರಭದ್ರ, ಬೊಬ್ಬರ್ಯ ಪರಿವಾರ ದೇವರುಗಳಿಗೆ ಪೂಜೆ ಸಲ್ಲಿಸಿ ಆಮಂತ್ರಣ ಪತ್ರಿಕೆಯನ್ನು ದೇಗುಲದ ಅಧ್ಯಕ್ಷ ಆನಂದ್ ಸಿ. ಕುಂದರ್ ಬಿಡುಗಡೆಗೊಳಿಸಿದರು. ದೇಗುಲದಲ್ಲಿ ಈ ಬಗ್ಗೆ ಪೂರ್ವಭಾವಿ ಸಭೆಯಲ್ಲಿ ತಯಾರಿ ಕುರಿತಂತೆ ಚರ್ಚಿಸಲಾಯಿತು. ಉಪಸ್ಥಿತರಿದ್ದ ಗ್ರಾಮಸ್ಥರಿಂದ ಸಲಹೆ ಸೂಚನೆಗಳನ್ನು ಪಡೆಯಲಾಯಿತು. ದೇಗುಲದ ಟ್ರಸ್ಟಿಗಳಾದ ರತನ್ ಐತಾಳ್, ಶಿವ ಪೂಜಾರಿ, ಸುಧಾ ಎ. ಪೂಜಾರಿ, ಗಣೇಶ್ ನೆಲ್ಲಿಬೆಟ್ಟು, ಸುಭಾಷ್ ಶೆಟ್ಟಿ ಗಿಳಿಯಾರು, ಜ್ಯೋತಿ ಡಿ. ಕಾಂಚನ್, ಸುಬ್ರಾಯ ಜೋಗಿ,ಹರ್ತಟ್ಟು ಶಿರಸಿ ದೇವಿ ದೇಗುಲದ ಮಂಜುನಾಥ್ ಪೂಜಾರಿ, ಕೋಟ ಮಹತೋಭಾರ ಶ್ರೀ ಹಿರೇಮಹಾಲಿಂಗೇಶ್ವರ ದೇಗುಲದ ಟ್ರಸ್ಟಿ ಭಾಸ್ಕರ ಶೆಟ್ಟಿ, ಹೊನ್ನಾರಿ ಬೊಬ್ಬರ್ಯ ದೈವಸ್ಥಾನದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಉಡುಪಿ ಜಿಲ್ಲೆಯ ಪ್ರತಿಷ್ಟಿತ, ರಾಜ್ಯ ಪ್ರಶಸ್ತಿ ವಿಜೇತ ಗಂಗೊಳ್ಳಿ ಟೌನ್ ಸೌಹಾರ್ದ ಕೋ- ಆಪರೇಟಿವ್ ಸೊಸೈಟಿ ಇದರ ಅಧ್ಯಕ್ಷರಾಗಿ ಜಿ. ವೆಂಕಟೇಶ್ ಭಾಸ್ಕರ್ ಶೆಣೈ ಮತ್ತು ಉಪಾಧ್ಯಕ್ಷರಾಗಿ ಜಿ. ವಿಶ್ವನಾಥ ಆಚಾರ್ಯ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಶ್ರೀ ಎಚ್. ಎಲ್. ಕಾಮತ್ ಆಡಳಿತ ಮಂಡಳಿ ಸಭಾಂಗಣದಲ್ಲಿ ಗುರುವಾರ ನಡೆದ ಸಭೆಯಲ್ಲಿ ಚುನಾವಣಾ ರಿಟನಿಂಗ್ ಅಧಿಕಾರಿ, ಸಹಕಾರ ಸಂಘಗಳ ಉಪನಿಬಂಧಕರ ಕಚೇರಿಯ ಹಿರಿಯ ಅಭಿವೃದ್ಧಿ ಅಧಿಕಾರಿ ಸುನಿಲ್ ಕುಮಾರ್ ಸಿ. ಎಂ. ಅವಿರೋಧ ಆಯ್ಕೆಯನ್ನು ಘೋಷಿಸಿದರು. ಜಿ. ವೆಂಕಟೇಶ ಶೆಣೈ ಅವರು ಕಳೆದ 10 ವರ್ಷಗಳಿಂದ ಸಹಕಾರಿಯ ನಿರ್ದೇಶಕರಾಗಿ, ಕಳೆದ 18 ತಿಂಗಳುಗಳಿಂದ ಅಧ್ಯಕ್ಷರಾಗಿ ಸಂಘದ ಅಭಿವೃದ್ಧಿಯಲ್ಲಿ ಮಹತ್ತರ ಪಾತ್ರ ವಹಿಸಿದ್ದಾರೆ. ಸಂಘದ ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವ ಜಿ. ವಿಶ್ವನಾಥ ಆಚಾರ್ಯ ಅವರು ಕಳೆದ 15 ವರ್ಷಗಳಿಂದ ಸಂಘದ ನಿರ್ದೇಶಕರಾಗಿ, 10 ವರ್ಷಗಳಿಂದ ಉಪಾಧ್ಯಕ್ಷರಾಗಿ ಯಶಸ್ವಿಯಾಗಿ ಕಾರ್ಯ ನಿರ್ವಹಿಸಿದ್ದಾರೆ. ನಿರ್ದೇಶಕರಾದ ಎನ್. ಮಾಧವ ಕಿಣಿ, ಕೆ. ಪರಮೇಶ್ವರ ನಾಯಕ್,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಇಲ್ಲಿನ ಬಾಳ್ಕುದ್ರು ಗ್ರಾಮದ ಹಂಗಾರಕಟ್ಟೆಯಲ್ಲಿ ಮೀನುಗಾರಿಕೆ ವೇಳೆ ಆಯತಪ್ಪಿ ನೀರಿಗೆ ಬಿದ್ದು ಮೀನುಗಾರ ಸಾವನ್ನಪ್ಪಿದ ಘಟನೆ ಮಂಗಳವಾರದಂದು ಸಂಭವಿಸಿದೆ. ಮಣೂರು ಗ್ರಾಮದ ನಿವಾಸಿ ನಟರಾಜ್ (36) ಮೃತ ಮೀನುಗಾರ. ನಟರಾಜ್ ಬೋಟಿನಲ್ಲಿ ಮೀನುಗಾರಿಕೆಗೆ ನಿರ್ವಹಿಸುತ್ತಿದ್ದ ಸಂದರ್ಭ ಊಟ ಮಾಡಿ ಕೈ ತೊಳೆಯುವ ವೇಳೆ ಆಯತಪ್ಪಿ ನೀರಿಗೆ ಬಿದ್ದಿದ್ದು ಸಹಕಾರ್ಮಿಕರು ಹುಡುಕಾಡಿದರೂ ಪತ್ತೆಯಾಗಿರಲಿಲ್ಲ. ಬಳಿಕ ಫೆ.4ರಂದು ಬೆಳಿಗ್ಗೆ ನೀರಿನಲ್ಲಿ ಮುಳುಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಬೈಂದೂರು ತಾಲೂಕು ರೈತ ಸಂಘದ ವತಿಯಿಂದ ಪಟ್ಟಣ ಪಂಚಾಯತ್ ವ್ಯಾಪ್ತಿಯಿಂದ ಗ್ರಾಮೀಣ ಭಾಗಗಳನ್ನು ಕೈಬಿಡಬೇಕೆಂದು ಆಗ್ರಹಿಸಿ ಬೈಂದೂರಿನಲ್ಲಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಧರಣಿ 135 ದಿನ ಪೂರೈಸಿದ್ದು ಬುಧವಾರ ರೈತರ ಧರಣಿ ನಡೆಯುತ್ತಿರುವ ಸ್ಥಳಕ್ಕೆ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಭೇಟಿ ನೀಡಿದರು. ರೈತ ಮುಖಂಡರೊಂದಿಗೆ ಮಾತನಾಡಿದ ಅವರು, ಈಗಾಗಲೇ ಜಿಲ್ಲಾಡಳಿತದಿಂದ ರೈತರ ಬೇಡಿಕೆಗೆ ಪೂರ್ಣ ಸಹಮತ ನೀಡಲಾಗಿದೆ ಮಾತ್ರವಲ್ಲದೆ ರಾಜ್ಯ ಸರಕಾರಕ್ಕೆ ಸಂಪೂರ್ಣ ವರದಿ ನೀಡಿದ್ದು ಸರಕಾರದ ಮಟ್ಟದಲ್ಲಿ ಅಂತಿಮಗೊಳಿಸುವುದು ಬಾಕಿ ಉಳಿದಿದೆ. ಕೆಲವು ತಾಂತ್ರಿಕ ಕಾರಣಗಳಿಂದ ವಿಳಂಬವಾಗಿದ್ದು ರೈತರ ಧರಣಿ ವರದಿ ಸರಕಾರದ ಗಮನದಲ್ಲಿದೆ ಎಂದರು. ಬೈಂದೂರು ರೈತ ಸಂಘದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಮಾತನಾಡಿ, ಕಳೆದ ನಾಲ್ಕು ತಿಂಗಳುಗಳಿಂದ ನೂರಾರು ರೈತರು ನ್ಯಾಯವನ್ನು ಆಗ್ರಹಿಸಿ ಬೀದಿಯಲ್ಲಿ ಕುಳಿತಿದ್ದಾರೆ. ಜಿಲ್ಲೆಯ ಪ್ರಮುಖರು ಪಕ್ಷಾತೀತವಾಗಿ ಸರಕಾರದ ಮಟ್ಟದಲ್ಲಿ ಗಮನ ಸೆಳೆಯಬೇಕು ಮಾತ್ರವಲ್ಲದೆ ಸರಕಾರ ಬಡ ರೈತರನ್ನು ಸತಾಯಿಸದೆ ಆದಷ್ಟು ಶೀಘ್ರ ನ್ಯಾಯ ನೀಡಬೇಕೆಂದು ಆಗ್ರಹಿಸಿದರು.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿಯ(ಎಐಸಿಟಿಇ) ಸಹಕಾರದಲ್ಲಿ ಸ್ಥಾಪಿಸಲಾದ ಐಡಿಯಾ ಲ್ಯಾಬ್‌ನ ಉದ್ಘಾಟನಾ ಸಮಾರಂಭ ಮಿಜಾರಿನ ಕಾಲೇಜಿನ ಕ್ಯಾಂಪಸನಲ್ಲಿ ನಡೆಯಿತು.   ಬಿಟಾ ಸಿಎಇ ಸಿಸ್ಟಮ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್‌ನ ಮಾರಾಟ ವಿಭಾಗದ ನಿರ್ದೇಶಕ ಸ್ಟಾವ್ರೋಸ್ ಕ್ಲೈಡಾರಿಯಾಸ್ ಲ್ಯಾಬ್‌ನ್ನು ಉದ್ಘಾಟಿಸಿ, ಐಡಿಯಾ ಲ್ಯಾಬ್ ಎಐಸಿಟಿಇಯ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ಇಂಜಿನಿಯರಿಂಗ್ ಶಿಕ್ಷಣವನ್ನು ಅನುಭವಾತ್ಮಕ ಶಿಕ್ಷಣ ಸಂಸ್ಕೃತಿಗೆ ಉತ್ತೇಜಿಸುವ ಕಾರ್ಯಕ್ರಮವಾಗಿದೆ. ಆಳ್ವಾಸ್‌ನಲ್ಲಿ ನಿರ್ಮಾಣಗೊಂಡಿರುವ ಲ್ಯಾಬ್ ಮೂಲಕ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು ವಾಸ್ತವ ಜಗತ್ತಿನ ಸಮಸ್ಯೆಗಳಿಗೆ ಪರಿಹಾರ ಕಂಡುಹಿಡಿಯಲು ಪ್ರಯೋಗ, ವಿನ್ಯಾಸ ಮತ್ತು ಮಾದರಿ ನಿರ್ಮಾಣದಲ್ಲಿ ತೊಡಗಿಸಿಕೊಳ್ಳಲು ಅಗತ್ಯವಾದ ಕೇಂದ್ರಿತ ಸೌಲಭ್ಯವನ್ನು ಇದು ಒದಗಿಸಲಿದೆ. ಈ ಲ್ಯಾಬ್‌ನ ಮೂಲಕ ವಿದ್ಯಾರ್ಥಿಗಳು ಪಠ್ಯಪುಸ್ತಕಗಳಾಚೆ, ಪ್ರೋಟೋಟೈಪ್ ನಿರ್ಮಾಣದ ಮೂಲಕ ನವೀನ ತಂತ್ರಜ್ಞಾನ ಅನುಭವ ಪಡೆಯಲು, ವಿಮರ್ಶಾತ್ಮಕ ಚಿಂತನೆ, ಸಹಕಾರ ಹಾಗೂ ಸಮಸ್ಯ ಪರಿಹಾರದ ಕೌಶಲ್ಯಗಳನ್ನು ಬೆಳೆಸುವುದು ಮತ್ತು ರಾಷ್ಟ್ರೀಯ ಶಿಕ್ಷಣ ನೀತಿ 2020ರ ಅನುಭವಾತ್ಮಕ ಹಾಗೂ ಬಹುವಿದ್ಯಾ ಕಲಿಕೆಗೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಕರ್ನಾಟಕ ಬಾಲವಿಕಾಸ ಅಕಾಡೆಮಿ, ಧಾರವಾಡ ಇವರ ವತಿಯಿಂದ 2024 (ಜನವರಿ 2024ರಿಂದ ಡಿಸೆಂಬರ್ 2024) ಹಾಗೂ 2025 (ಜನವರಿ-2025 ರಿಂದ ಡಿಸೆಂಬರ್-2025)ನೇ ಸಾಲಿನಲ್ಲಿ ಮಕ್ಕಳ ಕ್ಷೇತ್ರದಲ್ಲಿ ರಚಿಸಲ್ಪಟ್ಟ ಆಯ್ದ ಉತ್ತಮ ಪುಸ್ತಕಗಳಿಗೆ “ಮಕ್ಕಳ ಪುಸ್ತಕ ಚಂದಿರ ಪ್ರಶಸ್ತಿ”ಗಾಗಿ ಪುಸ್ತಕಗಳನ್ನು ಪ್ರದಾನ ಮಾಡಲು ಉದ್ದೇಶಿಸಲಾಗಿದ್ದು, 2024 ಹಾಗೂ 2025ನೇ ಸಾಲಿನ ಅವಧಿಯಲ್ಲಿ ಅಂದರೆ ಜನವರಿಯಿಂದ ಡಿಸೆಂಬರ್ ತಿಂಗಳ ಅಂತ್ಯದ ಅವಧಿಯಲ್ಲಿ ಪ್ರಕಟಗೊಂಡ ಸ್ವರಚಿತ ಕವನ ಸಂಕಲನ, ಕಥಾ ಸಂಕಲನ, ನಾಟಕ, (ಪಠ್ಯಾಧಾರಿತ ಬಿಟ್ಟು) ಮಕ್ಕಳ ಕಾದಂಬರಿ, ವೈಜ್ಞಾನಿಕ ಲೇಖನಗಳ ಸಂಕಲನ, ಅನುವಾದಿತ ಕೃತಿ (ಯಾವುದೇ ಪ್ರಕಾರದ ಮಕ್ಕಳ ಸಾಹಿತ್ಯ) ಮಕ್ಕಳ ಸಾಹಿತ್ಯ ವಿಮರ್ಶಾ ಕೃತಿ ಹೀಗೆ ಏಳು ಪ್ರಕಾರದ ಮಕ್ಕಳ ಸಾಹಿತ್ಯದ ಕೃತಿಗಳನ್ನು ಪ್ರಶಸ್ತಿಗಾಗಿ ಆಹ್ವಾನಿಸಲಾಗಿದೆ. ಪ್ರಶಸ್ತಿಗಾಗಿ ಪರಿಗಣಿಸಲು ಪ್ರತಿಯೊಂದು ಕೃತಿಯ 4 ಪ್ರತಿಗಳನ್ನು ಹಾಗೂ ಸ್ವವಿವರಗಳನ್ನೊಳಗೊಂಡ ಮನವಿಯೊಂದಿಗೆ ಫೆಬ್ರವರಿ 20 ರ ಒಳಗಾಗಿ ಯೋಜನಾಧಿಕಾರಿಗಳು, ಕರ್ನಾಟಕ ಬಾಲವಿಕಾಸ ಅಕಾಡೆಮಿ, ಚಂದ್ರಿಕಾ ಲೇ-ಔಟ್ ಹಿಂಭಾಗ, ಕೆ.ಹೆಚ್.ಬಿ ಕಾಲೋನಿ,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬ್ರಹ್ಮಾವರ: ಆದರ್ಶವನ್ನು ಬದುಕಲ್ಲಿ ಅಳವಡಿಸಿಕೊಂಡು ವಿದ್ಯಾರ್ಥಿಗಳಲ್ಲಿ ಮತ್ತು ಮಕ್ಕಳಲ್ಲಿ ಕೂಡಾ ಪಾಲನೆ ಮಾಡಿದವರಲ್ಲಿ ನಿವೃತ್ತ ಶಿಕ್ಷಕ ಮಟಪಾಡಿ ಶಿವರಾಮ ಶೆಟ್ಟಿ ಅವರು ಇಂದಿನ ಜನರಿಗೆ ಮಾದರಿಯಾಗಿದ್ದಾರೆ ಎಂದು ನಿವೃತ್ತ ಪ್ರಾಂಶುಪಾಲ ಗಣನಾಥ ಎಕ್ಕಾರು ಹೇಳಿದರು. ಅವರು ಮಂಗಳವಾರ ಬ್ರಹ್ಮಾವರ ಮಟಪಾಡಿಯ ನಿವೃತ್ತ ಶಿಕ್ಷಕ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯ ಸ್ಮರಣೆ ಕಾರ್ಯಕ್ರಮದ ಅಂಗವಾಗಿ ಕೊರಗ ಕಾಲೋನಿಯ ಜನರಿಗೆ ನೆರವು ನೀಡುವುದು, ಅಶಕ್ತರಿಗೆ ಆರ್ಥಿಕ ನೆರವು, ಪ್ರತಿಭಾವಂತ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಇಂದಿನ ಕಾಲ ಘಟ್ಟದಲ್ಲಿ ಇಂತಹ ಕಾರ್ಯಕ್ರಮಗಳಿಗೆ ವಿದ್ಯಾರ್ಥಿಗಳು ಭಾಗವಹಿಸಿದಲ್ಲಿ ಜೀವನ ಮೌಲ್ಯದ ಶಿಕ್ಷಣ ನೀಡಿದಂತಾಗುತ್ತದೆ ಎಂದರು. ಮಟಪಾಡಿಯಲ್ಲಿ ಶಿವರಾಮ ಶೆಟ್ಟಿ ಅವರ ಮತ್ತು ಕುಟುಂಬಿಕರ ಜಾಗದಲ್ಲಿ ಸಾರ್ವಜನಿಕವಾಗಿ ರಸ್ತೆಯನ್ನು ನಿರ್ಮಿಸಿದ್ದು ಅದನ್ನು ಹಂದಾಡಿ ಗ್ರಾಮಪಂಚಾಯತಿ ಅಧ್ಯಕ್ಷೆ ಶಾರದಾ ಪೂಜಾರಿ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಪರಿಸರದ 20 ಕುಟುಂಬಗಳಿಗೆ ನಾನಾ ವಸ್ತು ಮತ್ತು ಸಲಕರಣೆ ಆರ್ಥಿಕ ನೆರವು ವಿದ್ಯಾರ್ಥಿಗಳೀಗೆ  ಆರ್ಥಿಕ ಪ್ರೋತ್ಸಾಹ…

Read More