Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿಬೈಂದೂರು: ಮಧ್ವರಾಜ್ ಪ್ರಾಣಿ ಆರೈಕೆ ಟ್ರಸ್ಟ್ ಮಲ್ಪೆ, ವಲ್ಡ್ ವೈಡ್ ವೆಟರ್ನರಿ ಸರ್ವಿಸ್ ಇಂಡಿಯಾ, ಪ್ರೊಡೊ ಫೌಂಡೇಷನ್, ರೋಟರಿ ಕ್ಲಬ್ ಹಾಗೂ ಇನ್ನರ್‌ವೀಲ್ ಕ್ಲಬ್ ಆಶ್ರಯದಲ್ಲಿ ಇಲ್ಲಿನ ರೋಟರಿ ಸಮುದಾಯ ಭವನದಲ್ಲಿ ಸೆ.10ರಿಂದ 14ರ ತನಕ ದಿನಗಳ ಕಾಲ ನಡೆಯುವ ದೇಶಿ ತಳಿಯ ಸಾಕು ನಾಯಿಗಳ ಸಂತಾನಶಕ್ತಿ ಹರಣ ಚಿಕಿತ್ಸಾ ಉಚಿತ ಶಿಬಿರಕ್ಕೆ ಬುಧವಾರ ಚಾಲನೆ ನೀಡಲಾಯಿತು. ಶಿಬಿರಕ್ಕೆ ಚಾಲನೆ ನೀಡಿದ ನಿವೃತ್ತ ಪಶು ವೈದ್ಯಾಧಿಕಾರಿ ಡಾ.ಶಂಕರ ಶೆಟ್ಟಿ, ದೇಶಿ ತಳಿಯ ಸಾಕು ನಾಯಿಗಳು ಆರೋಗ್ಯ ಕಳೆದುಕೊಳ್ಳುತ್ತಿರುವ ಈ ದಿನಗಳಲ್ಲಿ ಇಂತಹ ಶಿಬಿರ ಆಯೋಜಿಸುತ್ತಿರುವುದು ಮಾದರಿಯಾಗಿದೆ’ ಎಂದರು. ರೋಟರಿ ಕ್ಲಬ್‌ ಅಧ್ಯಕ್ಷ ಸುಬ್ರಹ್ಮಣ್ಯ ಜಿ. ಉಪ್ಪುಂದ ಅಧ್ಯಕ್ಷತೆ ವಹಿಸಿದ್ದರು. ಸಹಾಯಕ ಗವರ್ನರ್ ಐ. ನಾರಾಯಣ್, ಇನ್ನರ್‌ವೀಲ್‌ ಕ್ಲಬ್‌ ಅಧ್ಯಕ್ಷೆ ಶಾರದಾ ಕೆ, ಚೈತ್ರಾ ಯಡ್ತರೆ, ಪಟ್ಟಣ ಪಂಚಾಯಿತಿಯ ಸಂತೋಷ್, ರವಿರಾಜ್, ವಲ್ಡ್ ವೈಡ್ ವೆಟರ್ನರಿ ಸರ್ವಿಸ್ ಇಂಡಿಯಾದ ಡಾ.ಚೇತನ್‌, ಡಾ.ಪ್ರದೀಪ್, ಪ್ರೋಡೊ ಫೌಂಡೇಷನ್‌ನ ಶ್ವೇತಾ ಆರ್, ತೇಜಸ್ವಿನಿ,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಕರ್ನಾಟಕದಲ್ಲಿ ಸ್ವಚ್ಛಂದವಾಗಿ ನಡೆಯುತ್ತಿರುವ ದೇಶ ವಿರೋಧಿ ಚಟುವಟಿಕೆಗಳು ಅತ್ಯಂತ ಆತಂಕಕಾರಿಯಾಗಿದೆ. ಭದ್ರಾವತಿಯಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಕಿಡಿಗೇಡಿಗಳು, ಪಾಕಿಸ್ತಾನ – ಪರ ಘೋಷಣೆ ಕೂಗಿರುವುದನ್ನು ನಾನು ಅತ್ಯಂತ ಕಟು ಶಬ್ದಗಳಲ್ಲಿ ಖಂಡಿಸುತ್ತೇನೆ ಮತ್ತು ಕಿಡಿಗೇಡಿಗಳ ವಿರುದ್ಧ ಕೂಡಲೇ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ರಾಜ್ಯ ಸರ್ಕಾರವನ್ನು ಒತ್ತಾಯಿಸುತ್ತೇನೆ. ಈ ಬೆಳವಣಿಗೆ ಕಾಂಗ್ರೆಸ್ ಸರ್ಕಾರದ ತುಷ್ಟಿಕರಣ ರಾಜಕೀಯಕ್ಕೆ ಮತ್ತೊಂದು ಕನ್ನಡಿ ಹಿಡಿದಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಅವರು ಆಗೃಹಿಸಿದ್ದಾರೆ. ಇದಕ್ಕೆ ಕುಮ್ಮಕ್ಕು ನೀಡುವಂತೆ, ಭದ್ರಾವತಿ ಕಾಂಗ್ರೆಸ್ ಶಾಸಕ ಸಂಗಮೇಶ್ವರ ಅವರು ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ ಹುಟ್ಟುವ ಆಸೆ ಇದೆ” ಎಂದು ಹೇಳಿಕೆ ನೀಡಿರುವುದು, ಈ ಕಾಂಗ್ರೆಸ್ ಸರ್ಕಾರದ ಅತಿಯಾದ ಓಲೈಕೆಯ ಅಸಲಿ ಮುಖವನ್ನು ಬಯಲು ಮಾಡಿದೆ. ಒಂದು ಕಡೆ, ನಮ್ಮ ಸೈನಿಕರು “ಆಪರೇಷನ್ ಸಿಂಧೂರ್” ಕಾರ್ಯಾಚರಣೆ ಮೂಲಕ ಶತ್ರು ರಾಷ್ಟ್ರದ ವಿರುದ್ಧ ಸಮರ ನಡೆಸುತ್ತಿದ್ದರೆ, ಮತ್ತೊಂದು ಕಡೆ, ನಮ್ಮ…

Read More

ಕೆ.ಎಸ್.‌ಆರ್.ಟಿ.ಸಿಯದ್ದು ಬಗೆಹರಿಯದ ಸಮಸ್ಯೆಯಾದಂತಿದೆ. ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರ ಆಕ್ರೋಶ ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ತಾಲೂಕು ವ್ಯಾಪ್ತಿಯ ಗ್ರಾಮೀಣ ಭಾಗಗಳಿಗೆ ಪರ್ಮಿಟ್‌ ಹೊಂದಿದ್ದರೂ ಕೆಎಸ್‌ಆರ್‌ಟಿಸಿ ಬಸ್‌ ಸೇವೆಯನ್ನು ಸ್ಥಗೀತಗೊಳಿಸಿ ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಿದೆ. ಕೋರ್ಟ್ ತಡೆ ಇರುವ ಮಾರ್ಗದ ನಿಲ್ದಾಣವನ್ನು ಹೊರತುಪಡಿಸಿ ಬಾಕಿ ಮಾರ್ಗಗಳಿಗೆ ಬಸ್‌ ಓಡಿಸುವ ವ್ಯವಸ್ಥೆ ಮಾಡಿ. ತಡೆ ನೆಪವೊಡ್ಡಿ ಸಾರ್ವಜನಿಕ ಸೇವೆ ವಿಳಂಬ ಮಾಡುತ್ತಿರುವುದು ಸರಿಯಲ್ಲ ಎಂದು ಬೈಂದೂರು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಮೋಹನ್ ಪೂಜಾರಿ ಹೇಳಿದರು. ಅವರು ಇಲ್ಲಿನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ನಡೆದ ಗ್ಯಾರಂಟಿ ಅನುಷ್ಠಾನ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರತಿ ಸಭೆಯಲ್ಲಿಯೂ ಕೆ.ಎಸ್‌.ಆರ್‌.ಟಿ.ಸಿ ಸಮಸ್ಯೆ ಬಗ್ಗೆ ಚರ್ಚಿಸಲಾಗುತ್ತಿದ್ದು, ಕಾರಣಗಳನ್ನಷ್ಟೇ ನೀಡುತ್ತಾ ಬರಲಾಗುತ್ತಿದೆ. ಆದರೆ ಯಾವೊಂದು ಕೆಲಸವೂ ಕಾರ್ಯರೂಪಕ್ಕೆ ಬಂದಿಲ್ಲ. ಇದರಿಂದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಿದೆ. ಈ ವಿಳಂಬ ಧೋರಣೆ ಕೈಬಿಟ್ಟು ಬಸ್‌ ಸಂಚರಿಸಲು ಸೂಕ್ತ ವ್ಯವಸ್ಥೆ ಮಾಡಿ ಎಂದವರು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ಸಾಲಿಗ್ರಾಮದ ಚಿತ್ರಪಾಡಿ ಬೆಲ್ಲದ ಗಣಪತಿ ದೇವಸ್ಥಾನದ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡಿದ್ದ ನಿವೃತ್ತ ಬ್ಯಾಂಕ್ ಅಧಿಕಾರಿ ಚಿತ್ರಪಾಡಿಯ ಕೆ.ರಮೇಶ ರಾವ್ (73) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೇ 13ರಂದು ರಸ್ತೆ ಬದಿಯಲ್ಲಿ ನಿಂತಿದ್ದ ಇವರಿಗೆ ಅಂಬ್ಯುಲೆನ್ಸ್ ವಾಹನವೊಂದು ಡಿಕ್ಕಿ ಹೊಡೆದಿತ್ತು. ಇದರಿಂದ ಗಂಭೀರವಾಗಿ ಗಾಯಗೊಂಡು ಕೋಮಾಸ್ಥಿತಿಯಲ್ಲಿದ್ದ ಇವರು, ಸೆ.08ರ ಸಂಜೆ ವೇಳೆ ಮನೆಯಲ್ಲಿ ಮೃತಪಟ್ಟರೆಂದು ತಿಳಿದುಬಂದಿದೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಿಂಡಿಕೇಟ್ ಬ್ಯಾಂಕಿನಲ್ಲಿ ಅಧಿಕಾರಿಯಾಗಿ ನಿವೃತ್ತರಾಗಿದ್ದ ಇವರು ಪತ್ನಿ, ಮೂವರು ಪುತ್ರರನ್ನು ಅಗಲಿದ್ದಾರೆ. ಉಡುಪಿಯ ರಥಬೀದಿ ಗೆಳೆಯರು ಸಂಘಟನೆಯಲ್ಲಿ ಸ್ಥಾಪಕ ಕೋಶಾಧಿಕಾರಿಯಾಗಿ ಸೇವೆಸಲ್ಲಿಸಿದ್ದ ಇವರು, ಯಕ್ಷಗಾನ ಕಲಾರಂಗದ ಆಜೀವ ಸದಸ್ಯರಾಗಿದ್ದರು. ಇವರು ಸಂಸ್ಥೆಯ ಕಾರ್ಯಕಾರಿ ಸಮಿತಿಯ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದರು. ಇವರ ಸೇವೆಯನ್ನು ಗೌರವಿಸಿ ಯಕ್ಷಗಾನ ಕಲಾರಂಗ ಅವರಿಗೆ 2019ರಲ್ಲಿ ಯಕ್ಷಚೇತನ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಇವರ ನಿಧನಕ್ಕೆ ಅಧ್ಯಕ್ಷ ಎಂ. ಗಂಗಾಧರ ರಾವ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ನಾರಾಯಣ ಗುರುಗಳ ಆದರ್ಶಗಳನ್ನು ಮತ್ತು ಉನ್ನತ ಮೌಲ್ಯಗಳನ್ನು ಅರಿತುಕೊಂಡು ಅದನ್ನು ನಮ್ಮ ಜೀವನದಲ್ಲಿ ಪರಿಪಾಲನೆ ಮಾಡಿದಾಗಲೇ ಜನ್ಮದಿನಾಚರಣೆ  ನಿಜವಾದ ಸಾರ್ಥಕತೆಯನ್ನು ಪಡೆದುಕೊಳ್ಳುತ್ತದೆ ಎಂದು ಉಪನ್ಯಾಸಕ ಮತ್ತು ಲೇಖಕ ನರೇಂದ್ರ ಎಸ್. ಗಂಗೊಳ್ಳಿ ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿಯ ಬಿಲ್ಲವರ ಹಿತರಕ್ಷಣಾ ವೇದಿಕೆಯ ವತಿಯಿಂದ ನಡೆದ ಬ್ರಹ್ಮಶ್ರೀ ನಾರಾಯಣ ಗುರುಗಳ 171ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ನಾರಾಯಣ ಗುರುಗಳ ವಿಶ್ವಮಾನವ ತತ್ವವನ್ನು ಈ ಜಗತ್ತಿನ ಪ್ರತಿಯೊಬ್ಬರು ಮನಗಾಣಬೇಕು. ಆ ಮೂಲಕ ಸೌಹಾರ್ದಯುತವಾದ ಸಾಮರಸ್ಯದ ಬದುಕು ಸಾಧ್ಯವಾಗುತ್ತದೆ ಎಂದು ಅವರು ಹೇಳಿದರು. ಬಿಲ್ಲವರ ಹಿತ ರಕ್ಷಣಾ ವೇದಿಕೆಯ ಅಧ್ಯಕ್ಷ ಜಿ. ಗೋಪಾಲ ಪೂಜಾರಿ ಸ್ವಾಗತಿಸಿದರು ಈ ಸಂದರ್ಭದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ಪೂಜೆಯನ್ನು ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಸದಸ್ಯರಾದ ಶಂಕರ ಪೂಜಾರಿ, ಗೋಪಾಲ ಚಂದನ್, ರಾಮಚಂದ್ರ ಪೂಜಾರಿ, ಚಂದ್ರಕಾಂತ ಪೂಜಾರಿ ಹಾಗೂ ವಸಂತ ಸುವರ್ಣ ಉಪಸ್ಥಿತರಿದ್ದರು. ಕಾರ್ಯದರ್ಶಿ ಜಿ. ಎ ಆರ್. ಲಕ್ಷ್ಮಣ ವಂದಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಹೊಟೇಲ್‌ಗೆ ರೇಟಿಂಗ್ ಕೊಟ್ಟು ಹಣ ಗಳಿಸಿ ಎಂಬ ಸಂದೇಶವನ್ನು ನಂಬಿ ಲಿಂಕ್ ತೆರೆದ ವ್ಯಕ್ತಿಯೊಬ್ಬರು 6.16 ಲಕ್ಷ ರೂ. ಕಳೆದುಕೊಂಡ ಘಟನೆ ನಡೆದಿದೆ. ಬೈಂದೂರು ತಾಲೂಕಿನ ಬಿಜೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಅರ್ಚಕ ಗುರುಮೂರ್ತಿ ಜಿ. ಹೆಗಡೆ ಅವರು ಆನ್‌ಲೈನ್ ವಂಚನೆಗೆ ಒಳಗಾದವರು. ಗುರುಮೂರ್ತಿ ಅವರ ಮೊಬೈಲ್‌ಗೆ ನ್ಯಾಶನಲ್ ಸ್ಟಾಕ್ ಎಕ್ಸ್‌ಚೇಂಜ್ ಎಂಬ ಲಿಂಕ್ ಬಂದಿದ್ದು ಅದನ್ನು ತೆರೆದಾಗ ಅದರಲ್ಲಿ ಹೊಟೇಲ್‌ಗೆ ರೇಟಿಂಗ್ ಕೊಟ್ಟು ಹಣ ಗಳಿಸಬಹುದು ಎಂದು ತಿಳಿಸಿದರು. ಅದರಂತೆ ಅರ್ಚಕರು ಪತ್ನಿಯ ಬ್ಯಾಂಕ್ ಖಾತೆಯಿಂದ 1,44,000 ರೂ.ಗಳನ್ನು ಕಳಿಸಿದ್ದರು. ಟಾಸ್ಕ್ ಪಾಯಿಂಟ್ ಶೇ.90ರಷ್ಟು ಆಗಿದ್ದು ಶೇ.100ರಷ್ಟು ಪಾಯಿಂಟ್ ಮಾಡಿದರೆ ಮಾತ್ರ ಹಾಕಿದ ಹಣ ಮರುಪಾವತಿ ಆಗುತ್ತದೆ ಎಂದು ವಂಚಕರು ತಿಳಿಸಿದರು. ಅದರಂತೆ ಅರ್ಚಕರು ರಮೇಶ ಎಂಬವರ ಖಾತೆಯಿಂದ ಸೆ. 2ರಂದು 2,72,700 ರೂ. ಕಳುಹಿಸಿದರು. ಅನಂತರ ನಿಮ್ಮ ಅಕೌಂಟ್ ಫ್ರೀಜ್ ಆಗಿದ್ದು ಇನ್ನಷ್ಟು ಹಣ ಹಾಕಿದರೆ ಮಾತ್ರ ಅನ್‌ಫ್ರೀಜ್‌ ಆಗುತ್ತದೆ ಎಂದು ಹೆದರಿಸಿದರು.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗ ಆಯೋಜಿಸಿದ ಬೆಳದಿಂಗಳ ಚಿಂತನ ಉಪನ್ಯಾಸ ಮಾಲಿಕೆಯಲ್ಲಿ “ಯಶಸ್ವಿ ಶಿಕ್ಷಕ” ಎಂಬ ವಿಷಯದ ಕುರಿತು ಬ್ರಹ್ಮಾವರ ಎಸ್.ಎಮ್.ಎಸ್. ಪದವಿ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಸುಶೀಲಾ ರೈ ಉಪನ್ಯಾಸ ನೀಡಿದರು. ಶಿಕ್ಷಕ ನಿರಂತರ ಓದುವ ಪ್ರಕ್ರಿಯೆಯಲ್ಲಿ ತೊಡಗಿಕೊಳ್ಳಬೇಕು. ತಾವು ಕಲಿಸುವ ವಿಷಯದ ಬಗ್ಗೆ ಆಳವಾದ ಜ್ಞಾನ ಹೊಂದಿರಬೇಕು. ಉತ್ತಮ ಸಂವಹನ ಕೌಶಲ್ಯ ಹಾಗೂ ವಿದ್ಯಾರ್ಥಿಗಳ ಜೊತೆ ಉತ್ತಮ ಬಾಂಧವ್ಯದ ಮೂಲಕ ಯಶಸ್ವಿ ಶಿಕ್ಷಕರಾಗಲು ಸಾಧ್ಯ. ಯಶಸ್ವಿ ಶಿಕ್ಷಕ ಉತ್ತಮ ಸಮಾಜದ ನಿರ್ಮಾತೃ ಎಂದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಪರಮ ಶ್ರೇಷ್ಠ ವೃತ್ತಿಯನ್ನು ನಿರ್ವಹಿಸುವನು ಶಿಕ್ಷಕ. ತನ್ನ ವೃತ್ತಿಯನ್ನು ಅತ್ಯಂತ ಪ್ರಾಮಾಣಿಕವಾಗಿ ನಿರ್ವಹಿಸಿದರೆ ಸಮಾಜದಲ್ಲಿ ಗೌರವ ಮನ್ನಣೆಗಳು ದೊರಕುತ್ತದೆ ಎಂದರು. ಕಾರ್ಯಕ್ರಮ ಸಂಯೋಜಕ, ಉಪ-ಪ್ರಾಂಶುಪಾಲ ಡಾ. ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿ, ಪ್ರಸ್ತಾಪಿಸಿದರು. ಕನ್ನಡ ಸಹಾಯಕ ಪ್ರಾಧ್ಯಾಪಕಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಗೀತಾನಂದ ಫೌಂಡೇಶನ್ ಮಣೂರು ಪಡುಕರೆ ನೇತೃತ್ವದಲ್ಲಿ ಕೋಟ ಸಮುದಾಯ ಆರೋಗ್ಯ ಕೇಂದ್ರ ಸಹಕಾರದಲ್ಲಿ ಲಕ್ಷ್ಮಿ ಸೋಮ ಬಂಗೇರ ಸರಕಾರಿ ಪ್ರಥಮ ದರ್ಜೆ ಕಾಲೇಜು ಮಣೂರು ಪಡುಕರೆಯಲ್ಲಿ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಮಣೂರು ಸಮುಚ್ಚಯ ಶಿಕ್ಷಣ ಸಂಸ್ಥೆಗಳ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳಿಗೆ ಆರೋಗ್ಯ ತಪಾಸಣೆ ಶಿಬಿರವನ್ನು ಆಯೋಜಿಸಲಾಯಿತು. ಗೀತಾನಂದ ಫೌಂಡೇಶನ್ ಪ್ರವರ್ತಕರಾದ ಆನಂದ ಸಿ. ಕುಂದರ್ ಅವರು ಶಿಬಿರವನ್ನು ಉದ್ಘಾಟಿಸಿ, ಶಿಕ್ಷಕರು ಸಮಾಜದ ಸ್ವಾಸ್ಥ್ಯವನ್ನು ಕಾಪಾಡುವವರು ಅವರ ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ ಎಂದು ಹೇಳಿದರು. ಶಿಕ್ಷಕರು ಹಾಗೂ ಶಿಕ್ಷಕೇತರರು ಭಾಗವಹಿಸಿ ಶಿಬಿರದ ಸದುಪಯೋಗ ಪಡೆದುಕೊಂಡರು. ಭಾಗವಹಿಸಿದ ಎಲ್ಲಾ ಶಿಬರಾರ್ಥಿಗಳಿಗೆ ಅಮೂಲ್ಯವಾದ ರಕ್ತಚಂದನ ಗಿಡ ಮತ್ತು ಬಟ್ಟೆ ಚೀಲಗಳನ್ನು ನೀಡಲಾಯಿತು. ಶಿಬಿರದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ರಾಜೇಂದ್ರ ಎಸ್. ನಾಯಕ್, ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರಾದ ಡೆನ್ನಿಸ್ ಬಾಂಜಿ, ಪ್ರೌಢ ಶಾಲಾ ಹಿರಿಯ ಶಿಕ್ಷಕರಾದ ರಾಮದಾಸ್ ನಾಯಕ್, ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರಾದ ಮಂಜುನಾಥ್ ಹೊಳ್ಳ,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಡಿ ಜಿಲ್ಲೆಯ ಕುಂದಾಪುರ ಕಂದಾಯ ಉಪವಿಭಾಗಕ್ಕೆ ಒಂದರಂತೆ ವೃದ್ಧಾಶ್ರಮವನ್ನು ಪ್ರಾರಂಭಿಸಲು, ಕನಿಷ್ಠ ಎರಡು ವರ್ಷಗಳಿಂದ ಅಸ್ಥಿತ್ವದಲ್ಲಿರುವ ಹಾಗೂ ಮೂಲಭೂತ ಸೌಕರ್ಯ ಹೊಂದಿರುವ ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಅಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟಂಬರ್ 30 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖಾ ಕಚೇರಿ, ಸಿ ಬ್ಲಾಕ್, ತಳಮಹಡಿ, ಕೆನರಾ ಬ್ಯಾಂಕ್ ಹತ್ತಿರ, ಜಿಲ್ಲಾ ಪಂಚಾಯತ್ ವಿಭಾಗ, ರಜತಾದ್ರಿ, ಮಣಿಪಾಲ ದೂ.ಸಂಖ್ಯೆ: 0820-2574810, 2574811 ಅಥವಾ ಇಲಾಖಾ ವೆಬ್‌ಸೈಟ್ https://dwdsc.karnataka.gov.in ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ಸರ್ಕಾರ ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ , ಕುಂದಾಪುರ ಹಾಗೂ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ ಯಡಾಡಿ-ಮತ್ಯಾಡಿ ಕುಂದಾಪುರ ಇವರ ಆಶ್ರಯದಲ್ಲಿ ಕುಂದಾಪುರ ವಲಯ ಮಟ್ಟದ 17ರ ವಯೋಮಾನದ ಬಾಲಕ-ಬಾಲಕಿಯರ ಥ್ರೋಬಾಲ್ ಪಂದ್ಯಾಟವು ಕರ್ನಾಟಕ ಪಬ್ಲಿಕ್ ಸ್ಕೂಲ್ ಬಿದ್ಕಲ್ ಕಟ್ಟೆಯ ಕ್ರೀಡಾಂಗಣದಲ್ಲಿ ಸೋಮವಾರ ಯಶಸ್ವಿಯಾಗಿ ನೆರವೇರಿತು. ನಿವೃತ್ತ ದೈಹಿಕ ಶಿಕ್ಷಣಾಧಿಕಾರಿ, ಸೌಖ್ಯ ಯೋಗ ಟ್ರಸ್ಟ್ ಹೆಬ್ರಿಯ ಅಧ್ಯಕ್ಷರಾಗಿರುವ ಸೀತಾನದಿ ವಿಠಲ ಶೆಟ್ಟಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಕ್ರೀಡೆಯು ದೈಹಿಕ ಕ್ಷಮತೆ ಕಾಪಾಡಿಕೊಳ್ಳುವುದಕ್ಕೆ ಸಹಾಯ ಮಾಡುತ್ತದೆ. ಇದು ಜೀವನದಲ್ಲಿ ಶಿಸ್ತು ತರುತ್ತದೆ. ಕ್ರೀಡೆಯಲ್ಲಿ ಭಾಗವಹಿಸುವಿಕೆಯೇ ಎಲ್ಲಕ್ಕಿಂತ ಮುಖ್ಯವಾದದ್ದು ಎಂದರು. ಥ್ರೋಬಾಲ್ ಪಂದ್ಯಾಟದ ಅಧ್ಯಕ್ಷತೆ ವಹಿಸಿದ್ದ ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ ಮಾತನಾಡಿ, “ಪ್ರತಿಯೊಬ್ಬರು ಕ್ರೀಡಾ ಮನೋಭಾವ ಬೆಳೆಸಿಕೊಳ್ಳಬೇಕು.ಕ್ರೀಡೆಯಲ್ಲಿನ ಸೋಲು-ಗೆಲುವನ್ನು ವೈಯಕ್ತಿಕವಾಗಿ ತೆಗೆದುಕೊಳ್ಳಬಾರದು. ಕ್ರೀಡೆಯಲ್ಲಿ ಭಾಗವಹಿಸುವುದೇ ಯಶಸ್ಸಿನ ಮೆಟ್ಟಿಲು ಹತ್ತಲು ದಾರಿ ಮಾಡಿಕೊಡುತ್ತದೆ”ಎಂದು ಮಕ್ಕಳಿಗೆ ಕಿವಿಮಾತು ನುಡಿದರು. ವೇದಿಕೆಯಲ್ಲಿ…

Read More