Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಗ್ರಾಮ ಪಂಚಾಯಿತಿಯು ಅಕ್ರಮ ಕಟ್ಟಡದ ವಿರುದ್ಧ ಕ್ರಮಕೈಗೊಳ್ಳದೆ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ. ಆ ಕಟ್ಟಡವನ್ನು ತೆರವುಗೊಳಿಸುವವರೆಗೆ ನಿರಂತರ ಪ್ರತಿಭಟನೆ ನಡೆಸಲಾಗು ವುದು ಎಂದು ಹಿಂದೂ ಜಾಗರಣ ವೇದಿಕೆಯ ಮಂಗಳೂರು ವಿಭಾಗ ಮಾತೃ ಸುರಕ್ಷಾ ಪ್ರಮುಖ್ ಗಣರಾಜ ಭಟ್ ಕೆದಿಲ ಹೇಳಿದರು. ಗಂಗೊಳ್ಳಿಯಲ್ಲಿ ನಿರ್ಮಾಣವಾಗಿರುವ ಅಕ್ರಮ ಕಟ್ಟಡ ತೆರವಿಗೆ ಒತ್ತಾಯಿಸಿ ಗಂಗೊಳ್ಳಿ ಹಿಂದು ಜಾಗರಣ ವೇದಿಕೆ ಆಶ್ರಯದಲ್ಲಿ ಗ್ರಾಮ ಪಂಚಾಯಿತಿ ಕಚೇರಿ ಎದುರು ನಡೆದ ಪ್ರತಿಭಟನೆಯಲ್ಲಿ ಮಾತನಾಡಿದರು. ಕುಂದಾಪುರ ತಹಶೀಲ್ದಾರ್ ಆನಂದಪ್ಪ ನಾಯ್ಕ್, ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಕೇಶವ ಶೆಟ್ಟಿಗಾರ್, ಕುಂದಾಪುರ ಡಿವೈಎಸ್ಪಿ ಶ್ರೀಕಾಂತ, ಬೈಂದೂರು ಸರ್ಕಲ್ ಇನ್ಸ್ಪೆಕ್ಟರ್ ಸಂತೋಷ್ ಕಾಯ್ಕಿಣಿ ಭೇಟಿ ನೀಡಿ ಪ್ರತಿಭಟನೆ ನಿರತರ ಜೊತೆ ಮಾತುಕತೆ ನಡೆಸಿ ಸಮಸ್ಯೆಯನ್ನು ಸೌಹಾರ್ದಯುತವಾಗಿ ಬಗೆಹರಿಸುವ ಪ್ರಯತ್ನ ನಡೆಸಿದರು. ಕಾನೂನು ಪ್ರಕಾರ ಅಕ್ರಮ ಕಟ್ಟಡ ತೆರವಿಗೆ ಕ್ರಮಕೈಗೊಳ್ಳಲಾಗುವುದು. ಕಟ್ಟಡ ನಿರ್ಮಿಸುವವರ ಮೇಲೆ ಎಫ್ಐಆರ್ ದಾಖಲಿಸಲಾಗುವುದು. ಆದಷ್ಟು ಶೀಘ್ರ ಕಟ್ಟಡದ ತೆರವು ಪ್ರಕ್ರಿಯೆ ಪೂರ್ಣವಾಗಲಿದೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬರಹಗಾರ ತನ್ನ ಅನುಭವ ಮತ್ತು ತನ್ನದೇ ವಿಶಿಷ್ಟ ನೋಟದಿಂದ ಪರಿಗ್ರಹಿಸುವ ವಸ್ತುವಿನ ಕುರಿತು ತಾನು ರೂಢಿಸಿಕೊಂಡ ವಿಶಿಷ್ಟ ಭಾಷಾ ಶೈಲಿಯನ್ನು ಬಳಸಿ ರಚಿಸುವ ಕೃತಿ ಸೃಜನಶೀಲ ಸಾಹಿತ್ಯ ಎನಿಸುತ್ತದೆ. ಅದು ಅನುಕರಣೆ ಆಗಿರದೆ ಹೊಸ ಸೃಷ್ಟಿಯಾಗಿರುತ್ತದೆ ಎಂದು ಉಡುಪಿ ಜಿ. ಶಂಕರ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಸಹ ಪ್ರಾಧ್ಯಾಪಕ ಡಾ. ರವಿರಾಜ ಶೆಟ್ಟಿ ಹೇಳಿದರು. ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಸಾಹಿತ್ಯ ವೇದಿಕೆಯ ಪ್ರಸಕ್ತ ಸಾಲಿನ ಚಟುವಟಿಕೆಗಳನ್ನು ಉದ್ಘಾಟಿಸಿ ಮಾತನಾಡಿದರು. ಒಂದು ಕೃತಿಯ ಆಧಾರ ಮತ್ತು ಅನುಕರಣೆಯಿಂದ ರಚಿಸುವ ಕೃತಿಗಳು ಸೃಜನೇತರ ಸಾಹಿತ್ಯ ವಿಭಾಗಕ್ಕೆ ಸೇರುತ್ತವೆ. ಎರಡೂ ಪ್ರಕಾರಗಳಿಗೆ ಅದರದೇ ಆದ ಮಹತ್ವ ಇದೆ ಎಂದ ಅವರು ಕನ್ನಡದ ವಿವಿಧ ಕೃತಿಗಳನ್ನು ಉದಾಹರಿಸಿ, ಸೃಜನಶೀಲ ಸಾಹಿತ್ಯದ ಸ್ವರೂಪ ಮತ್ತು ವೈಶಿಷ್ಟ್ಯವನ್ನು ತಿಳಿಸಿದರು. ಕಾಲೇಜಿನ ಪ್ರಾಂಶುಪಾಲ ಡಾ. ರಘು ನಾಯ್ಕ್ ಅಧ್ಯಕ್ಷತೆ ವಹಿಸಿದ್ದರು. ಸಾಹಿತ್ಯ ವೇದಿಕೆಯ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಕೋವಿಡ್ ರೂಪಾಂತರ ವೈರಸ್ ಹರಡದಂತೆ ಮುನ್ನೆಚ್ಚರಿಕೆಯಾಗಿ , ಜಿಲ್ಲೆಗೆ ಕೇರಳ ಮತ್ತು ಮುಂಬೈಯಿಂದ ಬರುವವರ ಆರ್.ಟಿ.ಪಿ.ಸಿ.ಆರ್ ಪರೀಕ್ಷೆ ವರದಿಯನ್ನು ಕಡ್ಡಾಯವಾಗಿ ಪರಿಶೀಲನೆ ನಡೆಸುವಂತೆ ಸಂಸದೆ ಶೋಭಾ ಕರಂದ್ಲಾಜೆ ಸೂಚಿಸಿದರು. ಅವರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ದಿಶಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರೂಪಾಂತರಿ ಕೋವಿಡ್ ವೈರಸ್ ಹರಡುವುದನ್ನು ತಡೆಯಲು ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಿ, ಈ ಹಿಂದೆ ಕೋವಿಡ್ ಚಕಿತ್ಸೆಗೆ ಗುರುತಿಸಿದ್ದ ಆಸ್ಪತ್ರೆಗಳಲ್ಲಿ , ಚಿಕಿತ್ಸೆ ನೀಡಲು ಬೇಕಾದ ಎಲ್ಲಾ ಅಗತ್ಯ ಸಿದ್ದತೆಗಳನ್ನು ಹಾಗೂ ಉಪಕರಣಗಳನ್ನು ಸಿದ್ದ ಮಾಡಿಟ್ಟುಕೊಳ್ಳಿ, ಸಾರ್ವಜನಿಕರು ಸಾಮಾಜಿಕ ಅಂತರ ಮತ್ತು ಮಾಸ್ಕ್ ಧರಿಸುವುದರ ಕುರಿತಂತೆ ಹೆಚ್ಚು ಜಾಗೃತಿ ಮೂಡಿಸಿ, ಬಾಂಬೆ ಮತ್ತು ಕೇರಳದಿಂದ ಬರುವವರು 72 ಗಂಟೆಗಳ ಮೊದಲು ಆರ್.ಟಿ.ಪಿ.ಸಿ.ಆರ್ ಪರೀಕ್ಷಾ ವರದಿ ಪಡೆದಿರುವ ಕುರಿತು ಪರಿಶೀಲನೆ ನಡೆಸಿ ಎಂದರು. ಜಿಲ್ಲೆಯಲ್ಲಿ ಇದುವರೆಗೆ 359039 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಿದ್ದು, 335501 ನೆಗೆಟಿವ್ ವರದಿ ಬಂದಿದೆ, 23538…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನ ಇಲೆಕ್ಟ್ರಾನಿಕ್ಸ್ ಆಂಡ್ ಕಮ್ಯುನಿಕೇಷನ್ ಇಂಜಿನಿಯರಿಂಗ್ ವಿಭಾಗದ ವತಿಯಿಂದ  ‘ಡೆವಲಪ್ಮೆಂಟ್ ಆಫ್ ಸಿಗ್ನಲ್ಸ್ ಆಂಡ್ ಸಿಸ್ಟಮ್ಸ್ ಯುಸಿಂಗ್ ಮ್ಯಾಟ್ ಲ್ಯಾಬ್’ ಎಂಬ ವಿಷಯದ ಕುರಿತು ಒಂದು ದಿನದ ಕಾರ್ಯಾಗಾರ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ನಿಟ್ಟೆ ವಿಶ್ವವಿದ್ಯಾಲಯದ ಇಲೆಕ್ಟ್ರಾನಿಕ್ಸ್ ಆಂಡ್ ಕಮ್ಯುನಿಕೇಷನ್ ಇಂಜಿನಿಯರಿಂಗ್ ವಿಭಾಗದ ಪ್ರಾಧ್ಯಾಪಕಿ ಡಾ. ಉಷಾ ದೆಸಾಯಿ ಭೇಟಿ ನೀಡಿ, ಕಾರ್ಯಾಗಾರವನ್ನು ಉದ್ಘಾಟಿಸಿ ನಮ್ಮ ದಿನ ನಿತ್ಯದ ಜೀವನದಲ್ಲಿ ಸಿಗ್ನಲ್ಸ್ ಹೇಗೆ ಅವಿಭಾಜ್ಯ ಅಂಗವಾಗಿದೆ ಎಂದು ವಿವರಿಸಿದರು. ಕಾಲೇಜಿನ ಪ್ರಾಂಶುಪಾಲ ಡಾ. ಚಂದ್ರರಾವ್ ಮದಾನೆ ಮಾತನಾಡಿ, ಪಠ್ಯದ ಜೊತೆಗೆ ಅದಕ್ಕೆ ಪೂರಕವಾದ ಇಂತಹ ಕಾರ್ಯಾಗಾರಗಳು ವಿದ್ಯಾರ್ಥಿಗಳ ಕೌಶಲ್ಯವನ್ನು ಹೆಚ್ಚಿಸಲು ಸಹಕಾರಿಯಾಗುತ್ತದೆ ಎಂದು, ಹಾಗೂ ಕಾರ್ಯಾಗಾರ ಸಂಯೋಜಕರನ್ನು ಅಭಿನಂದಿಸಿದರು. ಕಾಲೇಜಿನ ಉಪ ಪ್ರಾಂಶುಪಾಲ ಪ್ರೊ. ಮೆಲ್ವಿನ್ ಡಿ ಸೋಜಾ ಮಾತನಾಡಿ, ಕಾರ್ಯಾಗಾರವನ್ನು ಉತ್ತಮ ರೀತಿಯಲ್ಲಿ ಸದುಪಯೋಗ ಪಡಿಸಿಕೊಳ್ಳಲು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಕಾಲೇಜಿನ ಡೀನ್, ವಿಭಾಗದ ಮುಖ್ಯಸ್ಥರು, ಸಿಬ್ಬಂದಿ ವರ್ಗ ಹಾಗು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಅಧ್ಯಾಪಕರ ಸಂಘದ ವತಿಯಿಂದ ಸರಕಾರಿ ಸೇವೆಯಿಂದ ನಿವೃತ್ತರಾದ ಕಾಲೇಜಿನ ಕನ್ನಡ ಪ್ರಾಧ್ಯಾಪಕರರಾದ ಪ್ರೊ. ಗಣಪತಿ ಭಟ್, ಮತ್ತು ಕಚೇರಿಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ದಿನಕರ ಶೆಟ್ಟಿಗಾರ್ ಅವರನ್ನು ಗೌರವಿಸಲಾಯಿತು. ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದ ಕನ್ನಡ ಪ್ರಾಧ್ಯಾಪಕರರಾದ ಪ್ರೊ. ಗಣಪತಿ ಭಟ್ ಮಾತನಾಡಿ, ಸೇವೆಯಿಂದ ನಿವೃತ್ತನಾದ ನನಗೆ ನನ್ನ ಕೃಷಿ ವೃತ್ತಿ ಮುಂದುವರೆಸಿಕೊಂಡು ಹೋಗುವಂತೆ ಮಾಡಿದೆ. ಹಾಗೆಯೇ ವಿದ್ಯಾಥಿಗಳೊಂದಿಗೆ ಮತ್ತು ಉಪನ್ಯಾಸಕರೊಂದಿಗಿನ ಭಾಂದವ್ಯವನ್ನು ನೆನಪಿಸಿಕೊಂಡರು. ಪ್ರೊ. ಗಣಪತಿ ಭಟ್ ಅವರ ಕುರಿತು ಕನ್ನಡ ವಿಭಾಗ ಮುಖ್ಯಸ್ಥೆ ಡಾ. ರೇಖಾ ಬನ್ನಾಡಿ ಮಾತನಾಡಿದರು. ದಿನಕರ ಶೆಟ್ಟಿಗಾರ್ ಕುರಿತು ಗೀತಾ ಪ್ರಭು ಮಾತನಾಡಿದರು. ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಎನ್. ಪಿ.ನಾರಾಯಣ ಶೆಟ್ಟಿ, ಪದವಿ ಪೂರ್ವಕಾಲೇಜಿನ ಪ್ರಾಂಶುಪಾಲರಾದ ಡಾ. ಜಿ. ಎಂ. ಗೊಂಡ, ಅಧ್ಯಾಪಕರ ಸಂಘದ ಅಧ್ಯಕ್ಷರಾದ ಶಂಕರನಾರಾಯಣ ಕೆ. ಉಪಸ್ಥಿತರಿದ್ದರು. ಅಧ್ಯಾಪಕರ ಸಂಘದ ಖಜಾಂಚಿ ಮಂಜುನಾಥ ಸ್ವಾಗತಿಸಿದರು. ಕಾರ್ಯದರ್ಶಿ ಗುರುದಾಸ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಇಲ್ಲಿನ ಸೇವಾ ಸಂಕಲ್ಪ ತಂಡ ದಾನಿಗಳ ಸಹಕಾರದೊಂದಿಗೆ ಗಂಗೊಳ್ಳಿ ಗ್ರಾಮದ ಬೇಲಿಕೇರಿ ಸಮೀಪದ ವಸತಿರಹಿತ ಕೃಷ್ಣ ಖಾರ್ವಿ ಕುಟುಂಬಕ್ಕೆ ನಿರ್ಮಿಸಿದ ‘ಸೇವಾ ಸಂಕಲ್ಪ’ಮನೆ ಹಸ್ತಾಂತರ ಮತ್ತು ಅದರ ಪ್ರವೇಶ ಸಮಾರಂಭ ನಡೆಯಿತು. ಗಂಗೊಳ್ಳಿ ಮಂಡಲ ಪಂಚಾಯಿತಿ ಮಾಜಿ ಪ್ರಧಾನ ಬಿ. ಸದಾನಂದ ಶೆಣೈ ಮನೆಯ ನಾಮಫಲಕ ಅನಾವರಣಗೊಳಿಸಿ ಮನೆಯನ್ನು ಕೃಷ್ಣ ಖಾರ್ವಿ ಕುಟುಂಬಕ್ಕೆ ಹಸ್ತಾಂತರಿಸಿದರು. ಬೈಂದೂರು ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ, ವಾಗ್ಮಿ ಚಕ್ರವರ್ತಿ ಸೂಲಿಬೆಲೆ, ತಾಲ್ಲೂಕು ಪಂಚಾಯಿತಿ ಸದಸ್ಯ ಸುರೇಂದ್ರ ಖಾರ್ವಿ, ಗಂಗೊಳ್ಳಿ ಗ್ರಾಮಲೆಕ್ಕಿಗ ರಾಘವೇಂದ್ರ ದೇವಾಡಿಗ, ಗಂಗೊಳ್ಳಿ ಎಸ್ಐ ಭೀಮಾಶಂಕರ ಎಸ್, ಹಿಂದು ಜಾಗರಣ ವೇದಿಕೆಯ ಕರ್ನಾಟಕ ಪ್ರಾಂತ ಪ್ರಚಾರಕ್ ಪ್ರಮುಖ್ ಅರವಿಂದ ಕೋಟೇಶ್ವರ, ಅರ್ಜುನ್ ಭಂಡಾರ್ಕಾರ್ ಮಂಗಳೂರು, ಪುರೋಹಿತ ಜಿ. ವೀರೇಶ ಭಟ್ , ಸೇವಾ ಸಂಕಲ್ಪ ತಂಡದ ಸದಸ್ಯರು, ಗಂಗೊಳ್ಳಿ ಗ್ರಾಮ ಪಂಚಾಯಿತಿ ಸದಸ್ಯರು, ದಾನಿಗಳು ಇದ್ದರು. ಜೋಪಡಿಯಿಂದ ಸುಸಜ್ಜಿತ ನಿವಾಸ: ಸ್ವಂತ ನಿವೇಶನ, ಮನೆ ಇಲ್ಲದೆ,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ: ಕರ್ನಾಟಕ ಸ್ಟೇಟ್ ವೇಟ್‌ಲಿಫ್ಟರ‍್ಸ್ ಅಸೋಸಿಯೇಶನ್‌ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಜಂಟಿ ಆಶ್ರಯದಲ್ಲಿ ನಡೆಯುತ್ತಿರುವ ರಾಜ್ಯಮಟ್ಟದ ವೇಟ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಯೂಥ್, ಜೂನಿಯರ್ ವಿಭಾಗಗಳಲ್ಲಿ ಆಳ್ವಾಸ್ ಕಾಲೇಜು ತಂಡ ಸಮಗ್ರ ಪ್ರಶಸ್ತಿಗೆ ಭಾಜನವಾಗಿದೆ. ಆಳ್ವಾಸ್ ಏಕಲವ್ಯ ಸ್ಪೋರ್ಟ್ಸ್ ಕ್ಲಬ್ ರನ್ನರ್ ಅಪ್ ಪ್ರಶಸ್ತಿ ಪಡೆದಿದೆ. ಮೊದಲನೇ ಯೂಥ್, 47ನೇ ಪುರುಷ ಹಾಗೂ 31ನೇ ಮಹಿಳಾ ರಾಜ್ಯಮಟ್ಟದ ವೇಟ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್ ಇದಾಗಿದ್ದು, ಯೂಥ್, ಜೂನಿಯರ್, ಸೀನಿಯರ್ ಮಟ್ಟದ ನಾನಾ ಕೆಟಗರಿಗಳಲ್ಲಿ ಈ ಸ್ಪರ್ಧೆ ನಡೆಯಿತು. ಇದರಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿದ ಲಿಫ್ಟರ್‌ಗಳು ನಾಗರಕೊಯಿಲ್‌ನಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಚಾಂಪಿಯನ್‌ಷಿಪ್ನಲ್ಲಿ ಭಾಗವಹಿಸುವ ಅರ್ಹತೆ ಪಡೆಯಲಿದ್ದಾರೆ. ಯೂಥ್ ಸೆಕ್ಷನ್ ಪುರುಷರ ವಿಭಾಗದಲ್ಲಿ ಆಳ್ವಾಸ್ ಕಾಲೇಜು ತಂಡ 268 ಅಂಕಗಳೊಂದಿಗೆ ಪ್ರಥಮ ಸ್ಥಾನ ಹಾಗೂ 131 ಅಂಕಗಳೊಂದಿಗೆ ಆಳ್ವಾಸ್ ಏಕಲವ್ಯ ಸ್ಪೋರ್ಟ್ಸ್ ಕ್ಲಬ್ ದ್ವಿತೀಯ ಸ್ಥಾನವನ್ನು ಪಡೆದಿವೆ. ಮಹಿಳಾ ವಿಭಾಗದಲ್ಲಿ ಆಳ್ವಾಸ್ ಕಾಲೇಜು ತಂಡ 205 ಅಂಕಗಳೊಂದಿಗೆ ಪ್ರಥಮ ಸ್ಥಾನ ಹಾಗೂ ಆಳ್ವಾಸ್ ಏಕಲವ್ಯ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಮೀನುಗಾರಿಕಾ ಬಂದರು ಪ್ರದೇಶವಾಗಿರುವ ಗಂಗೊಳ್ಳಿಯನ್ನು ಅಭಿವೃದ್ಧಿಪಡಿಸಲು ಚಿಂತನೆ ನಡೆಸಿದ್ದು, ಈಗಾಗಲೇ ಮುಖ್ಯ ರಸ್ತೆ ಸೇರಿದಂತೆ ಅನೇಕ ರಸ್ತೆಗಳನ್ನು ಕಾಂಕ್ರೀಟಿಕರಣ ಮಾಡಲಾಗಿದೆ. ಇನ್ನು ಕೆಲವು ರಸ್ತೆಗಳನ್ನು ಅಭಿವೃದ್ಧಿಪಡಿಸಲು ಪ್ರಸ್ತಾವನೆ ಸಲ್ಲಿಸಲಾಗಿದೆ. ಹಲವಾರು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಗಂಗೊಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಲ್ಯರಬೆಟ್ಟು ಶ್ರೀ ಗ್ರಾಮ ಜಟ್ಟಿಗೇಶ್ವರ ದೇವಸ್ಥಾನದ ರಸ್ತೆಯನ್ನು ಸುಮಾರು 14 ಲಕ್ಷ ರೂ. ವೆಚ್ಚದಲ್ಲಿ ಕಾಂಕ್ರೀಟಿಕರಣ ಮಾಡಲಾಗುತ್ತಿದೆ ಎಂದು ಬೈಂದೂರು ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ ಹೇಳಿದರು. ಅವರು ಮಲೆನಾಡು ಪ್ರದೇಶಾಭಿವೃದ್ಧಿ ಯೋಜನೆಯಡಿ ಸುಮಾರು 14 ಲಕ್ಷ ರೂ. ವೆಚ್ಚದ ಮಲ್ಯರಬೆಟ್ಟು ಶ್ರೀ ಗ್ರಾಮ ಜಟ್ಟಿಗೇಶ್ವರ ದೇವಸ್ಥಾನದ ರಸ್ತೆ ಕಾಮಗಾರಿಗೆ ಮಲ್ಯರಬೆಟ್ಟು ಶ್ರೀ ಗ್ರಾಮ ಜಟ್ಟಿಗೇಶ್ವರ ದೇವಸ್ಥಾನದ ಸಮೀಪ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು. ಗಂಗೊಳ್ಳಿ ಗ್ರಾಪಂ ಅಧ್ಯಕ್ಷ ಶ್ರೀನಿವಾಸ ಖಾರ್ವಿ, ಉಪಾಧ್ಯಕ್ಷೆ ಪ್ರೇಮಾ ಸಿ.ಪೂಜಾರಿ, ಸದಸ್ಯರಾದ ಶ್ರೀನಿವಾಸ ಖಾರ್ವಿ, ಲಲಿತಾ ಖಾರ್ವಿ, ಪ್ರಶಾಂತ ಖಾರ್ವಿ, ಶಾಂತಿ ಖಾರ್ವಿ, ಜಯಂತಿ ಖಾರ್ವಿ, ಶ್ರೀ ಗ್ರಾಮ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಕಶ್ವಿ ಚೆಸ್ ಸ್ಕೂಲ್‌ನಲ್ಲಿ ಭಾನುವಾರ ಉತ್ತಮ ಸಾಧಕ ಪ್ರಶಸ್ತಿ ಪ್ರದಾನ ಸಮಾರಂಭ ಜರುಗಿತು. ಕುಂದಾಪುರದ ಓಕ್‌ವುಡ್ ಇಂಡಿಯನ್ ಆಂಗ್ಲ ಮಾಧ್ಯಮ ಶಾಲೆಯ ಸಾಥ್ವಿಕ್ ಶೇರೆಗಾರ್ (ಗೋಲ್ಡನ್ ಗ್ರೂಪ್) ಇವರ ಸತತ ಪರಿಶ್ರಮ ಮತ್ತು ಚೆಸ್ ಆಟದಲ್ಲಿನ ತಮ್ಮ ಪ್ರಯತ್ನವನ್ನು ಉತ್ತೇಜಿಸುವ ಸಲುವಾಗಿ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ: ಆಳ್ವಾಸ್ ಕಾಲೇಜಿನ ಸಮೂಹ ಸಂವಹನ ಹಾಗೂ ಪತ್ರಿಕೋದ್ಯಮ ಸ್ನಾತಕೋತ್ತರ ವಿಭಾಗವು ‘ಮೀಡಿಯಾ ಮಂಥನ್’ ವಿಶೇಷ ಸಂವಾದ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ವಿದ್ಯಾರ್ಥಿಗಳೊಂದಿಗೆ ನಡೆದ ಈ ಸಂವಾದ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಹಿರಿಯ ಪತ್ರಕರ್ತರಾದ ಮೆಲ್ವಿನ್ ಮೆಂಡೋನ್ಸಾ, ಅಲ್ವಿನ್ ಮೆಂಡೋನ್ಸಾ ಹಾಗೂ ಟೈಮ್ಸ್ ಆಫ್ ಇಂಡಿಯಾದ ಹಿರಿಯ ಕರೆಸ್ಪಾಂಡೆಂಟ್ ಆಗಿರುವ ಕೆವಿನ್ ಮೆಂಡೋನ್ಸಾ ಭಾಗವಹಿಸಿದ್ದರು. ಪತ್ರಿಕೋದ್ಯಮದ ವಿವಿಧ ಆಯಾಮಗಳ ಬಗ್ಗೆ ಚರ್ಚೆ ನಡೆಸಲಾಯಿತು. ಪತ್ರಿಕೋದ್ಯಮದ ವಿಸ್ತೃತ ಕಾರ‍್ಯವ್ಯಾಪ್ತಿಯ ಬಗ್ಗೆ ಮಾತನಾಡಿದ ಮೆಲ್ವಿನ್ ಮೆಂಡೋನ್ಸಾ, ‘ಪತ್ರಿಕೋದ್ಯಮವೆಂದರೆ ಕೇವಲ ಬರವಣಿಗೆ, ವರದಿಗಾರಿಕೆಯಲ್ಲ. ಇದನ್ನು ಹೊರತುಪಡಿಸಿದ ವಿಪುಲ ಅವಕಾಶಗಳು ಈ ಕ್ಷೇತ್ರದಲ್ಲಿವೆ. ಡಿಜಿಟಲ್ ಮಾಧ್ಯಮಗಳು, ಸಾರ್ವಜನಿಕ ಸಂಪರ್ಕ, ಈವೆಂಟ್ ಮ್ಯಾನೇಜ್‌ಮೆಂಟ್, ಮೀಡಿಯಾ ಮ್ಯಾನೇಜ್‌ಮೆಂಟ್ ಒಳಗೊಂಡ ವಿಶಿಷ್ಟ ಕಾರ‍್ಯಗಳನ್ನು ಒಬ್ಬ ಪತ್ರಕರ್ತ ಮಾಡಬಹುದು. ವಿದ್ಯಾರ್ಥಿಗಳು ಇಂತಹ ಕ್ಷೇತ್ರಗಳ ಬಗ್ಗೆ ತಿಳಿದುಕೊಳ್ಳುವ ಅವಶ್ಯಕತೆ ಇದೆ’ ಎಂದರು. ಒಬ್ಬ ಪತ್ರಕರ್ತನಿಗಿರಬೇಕಾದ ಕಾನೂನಿನ ಜ್ಞಾನದ ಬಗ್ಗೆ ತಿಳಿಸಿದ ಅಲ್ವಿನ್ ಮೆಂಡೋನ್ಸಾ, ‘ಪತ್ರಿಕೋದ್ಯಮದಲ್ಲಿರುವವರಿಗೆ ಕೆಲವು ಅಗತ್ಯ ಕಾನೂನುಗಳ ಅರಿವಿರಬೇಕು.…

Read More