Author: ನ್ಯೂಸ್ ಬ್ಯೂರೋ

ಕುದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಾಗುತ್ತಿರುವುದರಿಂದ ಶಿಕ್ಷಣದಲ್ಲಿ ಅಮೂಲಾಗ್ರ ಬದಲಾವಣೆಯಾಗಲಿದೆ. ಶಿಕ್ಷಣ ಇಂದಿನ ವ್ಯವಸ್ಥೆಗೆ ಪ್ರಸ್ತುತವಾಗಬೇಕು ಮತ್ತು ವ್ಯವಸ್ಥೆಗೆ ಹೊಂದಾಣಿಕೆಯಾಗಬೇಕೆಂಬ ದೃಷ್ಟಿಯಿಂದ ಶಿಕ್ಷಣ ಇಲಾಖೆ ಅನೇಕ ಹೊಸ ವಿಧಾನಗಳ ಮತ್ತು ತಂತ್ರಜ್ಞಾನಗಳ ಮೂಲಕ ಮುನ್ನಡೆಯುತ್ತಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಕುಂದಾಪುರ ವಲಯ ಕ್ಷೇತ್ರ ಸಮನ್ವಯಾಧಿಕಾರಿ ಸದಾನಂದ ಬೈಂದೂರು ಹೇಳಿದರು. ಗಂಗೊಳ್ಳಿಯ ಜಿಎಸ್‌ವಿಎಸ್ ಅಸೋಸಿಯೇಶನ್ ಪ್ರಾಯೋಜಿತ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆಯ ವಠಾರದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಅಟಲ್ ಟಿಂಕರಿಂಗ್ ಲ್ಯಾಬ್‌ನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳಲ್ಲಿರುವ ಕೌಶಲ್ಯ ಅಭಿವೃದ್ಧಿಗೆ, ಹೊಸ ಆವಿಷ್ಕಾರ ಮತ್ತು ಪ್ರಯೋಗಗಳನ್ನು ಸ್ವಕಲಿಕೆ ಮೂಲಕ ತಿಳಿದುಕೊಳ್ಳಲು ಅಟಲ್ ಟಿಂಕರಿಂಗ್ ಲ್ಯಾಬ್ ಸಹಕರಿಯಾಗಲಿದ್ದು, ಶಿಕ್ಷಕರು ಇದರ ಪ್ರಯೋಜನವನ್ನು ವಿದ್ಯಾರ್ಥಿಗಳಿಗೆ ದೊರೆಯುವಂತೆ ಮಾಡಬೇಕಿದೆ. ಸರಕಾರದ ಈ ಯೋಜನೆಯ ಸದುಪಯೋಗವನ್ನು ವಿದ್ಯಾರ್ಥಿಗಳು ಪಡೆದುಕೊಂಡು ಹೊಸ ಕ್ರಾಂತಿಗೆ ಮುನ್ನುಡಿ ಬರೆಯಬೇಕು ಎಂದು ಅವರು ಹೇಳಿದರು. ಗಂಗೊಳ್ಳಿಯ ಜಿಎಸ್‌ವಿಎಸ್ ಅಸೋಸಿಯೇಶನ್ ಅಧ್ಯಕ್ಷ ಡಾ.ಕಾಶೀನಾಥ ಪೈ ಅಧ್ಯಕ್ಷತೆ ವಹಿಸಿದ್ದರು.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಮಲೆನಾಡು ಪ್ರಾಂತ್ಯದಲ್ಲಿ ಬುಧವಾರ ಅಪರಾಹ್ನದ ಬಳಿಕ ಭಾರಿ ಗಾಳಿ ಮಳೆ ಉಂಟಾಗಿದ್ದು, ಗಾಳಿ ಮಳೆಯ ಅಬ್ಬರಕ್ಕೆ ಹಾರ್ದಳ್ಳಿ ಮಂಡಳ್ಳಿ ಗ್ರಾಮದ ಸೌಡ ಪರ್ವತಬೆಟ್ಟು ನಿವಾಸಿ ಬೇಬಿ ಶೆಟ್ತಿ ಅವರ ಮನೆ ಮೇಲೆ ಮರ ಬಿದ್ದು ಮನೆ ಹಾನಿಗೊಂಡಿದೆ. ರೂ.1ಲಕ್ಷ ನಷ್ಟ ಎಂದು ಅಂದಾಜಿಸಲಾಗಿದೆ. ಹಲವೆಡೆ ಗ್ರಾಮ ಪಂಚಾಯಿತಿ ಸದಸ್ಯರಾದ ಜಗನ್ನಾಥ ಶೆಟ್ಟಿ ಲವಕರ ಶೆಟ್ಡಿ ಹಾನಿಗೊಳಗಾದ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಬ್ರಹ್ಮಾವರ ತಾಲೂಕು ಪತ್ರಕರ್ತರ ಸಂಘದ ಆಶ್ರಯದಲ್ಲಿ ಬ್ರಹ್ಮಾವರ ತಾಲೂಕು ವ್ಯಾಪ್ತಿಯಲ್ಲಿ ಕಂದಾಯ ಇಲಾಖೆಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಅಧಿಕಾರಿಗಳೊಂದಿಗೆ ಸಂವಾದ ಕಾರ್ಯಕ್ರಮ ಬ್ರಹ್ಮಾವರ ಮದರ್ ಪ್ಯಾಲೇಸ್ ಮಿನಿಸಭಾಂಗಣದಲ್ಲಿ ಜರಗಿತು. ಬ್ರಹ್ಮಾವರ ತಹಶೀಲ್ದಾರ್ ರಾಜಶೇಖರ್ಮೂರ್ತಿ ಹಾಗೂ ಅಧಿಕಾರಿಗಳು ಸಂವಾದದಲ್ಲಿ ಭಾಗವಹಿಸಿದರು. ಇಲಾಖೆಗೆ ಸಂಬಂಧಿಸಿ ಸಾರ್ವಜನಿಕರಿಂದ ಸ್ವೀಕರಿಸಲಾದ ದೂರುಗಳನ್ನು ಸಂವಾದದಲ್ಲಿ ಪ್ರಸ್ತಾವಿಸಿ ಪ್ರತಿಕ್ರೀಯೆ ಪಡೆಯಲಾಯಿತು. ದಾಖಲೆ ತಿದ್ದುಪಡಿ ಹಕ್ಕು ತಹಶೀಲ್ದಾರರಿಗೆ ನೀಡಿ:ಕಂದಾಯ ಪಹಣಿ ಮುಂತಾದ ಪ್ರಮುಖ ದಾಖಲೆಯ ದೋಷಗಳನ್ನು ಸರಿಪಡಿಸುವ ಅಧಿಕಾರ ಈ ಹಿಂದೆ ತಹಶೀಲ್ದಾರರಿಗೆ ನೀಡಲಾಗಿತ್ತು. ಆದರೆ ಪ್ರಸ್ತುತ ಇದನ್ನು ಎ.ಸಿ.ಯವರಿಗೆ ನೀಡಲಾಗಿದೆ. ಎ.ಸಿ. ಕಾರ್ಯದೊತ್ತಡದಿಂದ ದಾಖಲೆ ಸರಿಪಡಿಸಲು ಹಲವು ವರ್ಷಗಳೇ ಬೇಕಾಗುತ್ತದೆ. ಆದ್ದರಿಂದ ಈ ಅಧಿಕಾರವನ್ನು ಮರಳಿ ತಹಶೀಲ್ದಾರಿಗೆ ನೀಡಬೇಕು. ಈ ಬಗ್ಗೆ ಸರಕಾರಕ್ಕೆ ಮನವಿ ಸಲ್ಲಿಸಬೇಕು ಎಂದು ಜಿ.ಪಂ. ಮಾಜಿ ಅಧ್ಯಕ್ಷ ಭುಜಂಗ ಶೆಟ್ಟಿಯವರು ಸಲಹೆ ನೀಡಿದರು ಹಾಗೂ ಸರ್ವೆ ಇಲಾಖೆ ಮೇಲೆ ಈ ಹಿಂದೆ ತಹಶೀಲ್ದಾರರಿಗೆ ಅಧಿಕಾರವಿತ್ತು. ಆದರೆ ಪ್ರಸ್ತುತ ಇದನ್ನು ಪ್ರತ್ಯೇಕಗೊಳಿಸಿದ್ದರಿಂದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೆಂಗಳೂರು: ಕೇಂದ್ರ ಸರ್ಕಾರ ಬೆಲೆ ಏರಿಕೆ ಬಿಸಿಯಲ್ಲಿದ್ದ ಜನರಿಗೆ ದೀಪಾವಳಿಯ ಗಿಫ್ಟ್ ನೀಡಿದ್ದು ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯನ್ನು ಕಡಿತಗೊಳಿಸಿದೆ. ಪೆಟ್ರೋಲ್ ಮೇಲೆ 5, ಡೀಸೆಲ್ ಮೇಲೆ 10 ರೂಪಾಯಿ ಅಬಕಾರಿ ಸುಂಕವನ್ನು ಕಡಿತಗೊಳಿಸಲಾಗಿದ್ದು ಇಂದು ಮಧ್ಯರಾತ್ರಿಯಿಂದಲೇ ಪರಿಷ್ಕೃತ ದರ ಜಾರಿಗೆ ಬರಲಿದೆ. ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ನಿರಂತರವಾಗಿತ್ತು. ಅಕ್ಟೋಬರ್ ಒಂದೇ ತಿಂಗಳಲ್ಲಿ ಸುಮಾರು 30ಕ್ಕೂ ಅಧಿಕ ಬಾರಿ ಪೈಸೆಗಳ ಲೆಕ್ಕದಲ್ಲಿ ಬೆಲೆ ಏರಿಕೆಯಾಗಿತ್ತು. ಇದರಿಂದ ಜನ ಸಾಮಾನ್ಯರಿಗೆ ನೇರವಾಗಿ ಪರಿಣಾಮ ಬೀರುವುದಲ್ಲದೇ ಪೆಟ್ರೋಲ್, ಡೀಸೆಲ್ ಅವಲಂಬಿತ ಎಲ್ಲ ವಸ್ತುಗಳ ಬೆಲೆಯೂ ಅಧಿಕವಾಗಿತ್ತು. ಪೆಟ್ರೋಲ್, ಡೀಸೆಲ್ ಬೆಲೆ ನಿರಂತರ ಏರಿಕೆ ಸಾರ್ವಜನಿಕ ವಲಯದಲ್ಲಿ ಭಾರೀ ಟೀಕೆಗೆ ಕಾರಣವಾಗಿತ್ತು. ಜನ ಸಾಮಾನ್ಯರ ಆಕ್ರೋಶ ಎದುರಿಸಲಾಗದ ಹಲವು ರಾಜ್ಯ ಸರ್ಕಾರಗಳು ಕೇಂದ್ರ ಸರ್ಕಾರಕ್ಕೆ ಬೆಲೆ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲು ಮನವಿ ಮಾಡಿದ್ದವು. ಈ ವಿಚಾರವನ್ನು ಗಣನೆಗೆ ತೆಗೆದುಕೊಂಡ ಕೇಂದ್ರ ಸರಕಾರ ಪೆಟ್ರೋಲ್, ಡೀಸೆಲ್ ಮೇಲಿನ ಸುಂಕ ಇಳಿಕೆ ಮಾಡಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ನ.02: ಜಿಲ್ಲೆಯ ಯುವಕರ ಪ್ರತಿಭೆಯನ್ನು ತೊರ್ಪಡಿಸಲು, ದೇಶಭಕ್ತಿ ಮತ್ತು ರಾಷ್ಟ್ರ ನಿರ್ಮಾಣದಲ್ಲಿ ಯುವಜನರು ಕುರಿತ ಭಾಷಣ ಸ್ಪರ್ಧೆಯನ್ನು ತಾಲೂಕು, ಜಿಲ್ಲೆ, ರಾಜ್ಯ ಮತ್ತು ರಾಷ್ಟçಮಟ್ಟದಲ್ಲಿ ಆಯೋಜಿಸಲು ಕೇಂದ್ರ ಸರ್ಕಾರವು ನಿರ್ಧರಿಸಿದ್ದು, ಈ ಸ್ಪರ್ಧೆಗಳನ್ನು ಸಂಘಟಿಸುವ ಜವಾಬ್ದಾರಿಯನ್ನು ಜಿಲ್ಲಾ ಮಟ್ಟದ ನೆಹರು ಯುವ ಕೇಂದ್ರಗಳಿಗೆ ವಹಿಸಲಾಗಿರುತ್ತದೆ. ಬಹುಮಾನಗಳ ವಿವರ:ತಾಲೂಕು ಮಟ್ಟದಲ್ಲಿ ಆಯ್ಕೆಯಾದ ವಿಜೇತರಿಗೆ ಪ್ರಥಮ, ದ್ವಿತೀಯ ಮತ್ತು ತೃತೀಯ ಬಹುಮಾನವಾಗಿ ಪ್ರಶಸ್ತಿ ಪತ್ರ ನೀಡಲಾಗುವುದು. ಜಿಲ್ಲಾ ಮಟ್ಟದಲ್ಲಿ ಆಯ್ಕೆಯಾದ ವಿಜೇತರಿಗೆ ಪ್ರಥಮ ಬಹುಮಾನವಾಗಿ 5000 ರೂ., ದ್ವಿತೀಯ ಬಹುಮಾನವಾಗಿ 2,000 ರೂ., ಹಾಗೂ ತೃತೀಯ ಬಹುಮಾನವಾಗಿ 1,000 ರೂ. ನೀಡಲಾಗುವುದು. ರಾಜ್ಯ ಮಟ್ಟದಲ್ಲಿ ಆಯ್ಕೆಯಾದ ವಿಜೇತರಿಗೆ ಪ್ರಥಮ ಬಹುಮಾನವಾಗಿ 25,000 ರೂ., ದ್ವಿತೀಯ ಬಹುಮಾನವಾಗಿ 10,000 ರೂ. ಹಾಗೂ ತೃತೀಯ ಬಹುಮಾನವಾಗಿ 5,000 ರೂ. ಮತ್ತು ರಾಷ್ಟ್ರ ಮಟ್ಟದ ವಿಜೇತರುಗಳಿಗೆ ಪ್ರಥಮ ಬಹುಮಾನವಾಗಿ 2 ಲಕ್ಷ ರೂ., ದ್ವಿತೀಯ ಬಹುಮಾನವಾಗಿ 1 ಲಕ್ಷ ರೂ. ಹಾಗೂ ತೃತೀಯ ಬಹುಮಾನವಾಗಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಪೊಲೀಸ್ ಇಲಾಖೆ, ಜಿಲ್ಲಾ ವಕೀಲರ ಸಂಘ (ರಿ) ಉಡುಪಿ ವತಿಯಿಂದ ಇಂದು ಮಲ್ಪೆಯ ಪ್ರವಾಸಿ ಜೆಟ್ಟಿಯಿಂದ ಸೈಂಟ್ ಮೇರಿಸ್ ಐಲ್ಯಾಂಡ್ಗೆ ತೆರಳುವ ದೋಣಿಯಲ್ಲಿ, ಸಮುದ್ರ ಮಧ್ಯದಲ್ಲಿ, ದೋಣಿಯಲ್ಲಿದ್ದ ಪ್ರಯಾಣಿಕರಿಗೆ ಕಾನೂನು ಅರಿವು ಕಾರ್ಯಕ್ರಮವನ್ನು ನಡೆಸಲಾಯಿತು. ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಮಾತನಾಡಿ,ಪ್ರತಿಯೊಬ್ಬ ಸಾರ್ವಜನಿಕರೂ ಕಾನೂನಿನ ಕುರಿತು ಸಾಮಾನ್ಯ ಜ್ಞಾನವನ್ನಾದರೂ ಹೊಂದುವುದು ಅತ್ಯಂತ ಅಗತ್ಯ, ಈ ನಿಟ್ಟಿನಲ್ಲಿ ಕಾನೂನು ಸೇವಾ ಪ್ರಾಧಿಕಾರದಿಂದ ಎಲ್ಲೆಡೆ ಅರಿವು ಕಾರ್ಯಕ್ರಮಗಳನ್ನು ಅಯೋಜಿಸುತ್ತಿದ್ದು, ಇದೇ ಮೊದಲ ಬಾರಿಗೆ ಸಮುದ್ರದ ಮಧ್ಯದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದರು. ಸಾರ್ವಜನಿಕರು ತಮ್ಮ ಕಾನೂನು ಸಮಸ್ಯೆಗಳನ್ನು ಲೋಕ ಅದಾಲತ್ ಮೂಲಕ ಅತ್ಯಂತ ಸುಲಭವಾಗಿ ಬಗೆಹರಿಸಿಕೊಳ್ಳಬಹುದಾಗಿದ್ದು, ಪ್ರಕರಣಗಳಲ್ಲಿ ರಾಜೀಯಾಗಲು ಸಹ ಇದರಲ್ಲಿ ಅವಕಾಶವಿದೆ ಅಲ್ಲದೇ ಆರ್ಥಿಕ ದುರ್ಬಲರು, ಮಹಿಳೆಯರು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಮೂಲಕ ಉಚಿತ ನೆರವು ಪಡೆಯಬಹುದಾಗಿದ್ದು, ಇದರ ಪ್ರಯೋಜನ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದರೆ: ಕರ್ನಾಟಕ ರಾಜ್ಯ ವೇಟ್‌ಲಿಫ್ಟಿಂಗ್ ಅಸೋಸಿಯೇ?ನ್ ಮತ್ತು ದಾವಣಗೆರೆ ಜಿಲ್ಲಾ ವೇಟ್ ಲಿಫ್ಟಿಂಗ್ ಅಸೋಸಿಯೇ?ನ್ ಆಶ್ರಯದಲ್ಲಿ ದಾವಣಗೆರೆಯಲ್ಲಿ ನಡೆದ ರಾಜ್ಯಮಟ್ಟದ ಭಾರ ಎತ್ತುವ ಸ್ಪರ್ಧೆಯಲ್ಲಿ ಆಳ್ವಾಸ್ ಕಾಲೇಜು ಮೂಡುಬಿದ್ರೆ ಸಮಗ್ರ ತಂಡ ಪ್ರಶಸ್ತಿ ತನ್ನದಾಗಿಸಿಕೊಂಡಿದೆ. ಬಾಲಕ ಮತ್ತು ಬಾಲಕಿಯರ ತಂಡ ಪ್ರಶಸ್ತಿಯಲ್ಲಿ ಪ್ರಥಮ, ಜೂನಿಯರ್ ಬಾಲಕರ ವಿಭಾಗದಲ್ಲಿ ಪ್ರಥಮ, ಬಾಲಕಿಯರ ವಿಭಾಗದಲ್ಲಿ ದ್ವಿತೀಯ, ಮಹಿಳಾ ವಿಭಾಗದಲ್ಲಿ ಪ್ರಥಮ ಹಾಗೂ ಪುರು?ರ ವಿಭಾಗದಲ್ಲಿ ದ್ವಿತೀಯ ತಂಡ ಪ್ರಶಸ್ತಿ ಪಡೆಯುವ ಮೂಲಕ ಸಮಗ್ರ ತಂಡ ಪ್ರಶಸ್ತಿ ಪಡೆದಿಕೊಂಡಿದೆ. ವಿದ್ಯಾರ್ಥಿಗಳ ಸಾಧನೆಯನ್ನು ಆಳ್ವಾಸ್ ಪ್ರತಿಷ್ಠಾನದ ಅಧ್ಯಕ್ಷ ಡಾ ಎಂ ಮೋಹನ್ ಆಳ್ವ, ಟ್ರಸ್ಟಿ ವಿವೇಕ್ ಆಳ್ವ ಶ್ಲಾಘಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ದೀಪಾವಳಿಗೆ ಕುಂದಾಪುರದ ಪ್ರತಿಷ್ಠಿತ ಮೊಬೈಲ್ ಮಾರಾಟ ಸಂಸ್ಥೆ ಮೊಬೈಲ್ ಎಕ್ಸ್ ತನ್ನ ಗ್ರಾಹಕರಿಗೆ ಮೊಬೈಲ್ ಎಕ್ಸ್ ಉತ್ಸವದ ಮೂಲಕ ವಿಶೇಷ ಕೊಡುಗೆ ನೀಡುತ್ತಿದ್ದು, ಎಲ್ಲಾ ಮೊಬೈಲ್ಗಳು ಹಾಗೂ ಮೊಬೈಲ್ ಎಕ್ಸಸರೀಸ್ ಮೇಲೆ ಹೆಚ್ಚಿನ ರಿಯಾಯಿತಿ, ಕೊಡುಗೆಗಳನ್ನು ಪ್ರಕಟಿಸಿದೆ. ಅ.31ರಿಂದ ಆರಂಭಗೊಂಡು ನ.15ರ ತನಕ ಈ ಆಫರ್ ಲಭ್ಯವಿರಲಿದೆ. ಎಲ್ಲಾ ಮೊಬೈಲ್ ಖರೀದಿಯ ಮೇಲೆ ಡಿಸ್ಕೌಂಟ್ಪ್ರತಿ ಸ್ಮಾರ್ಟ್ ಪೋನ್ ಖರೀದಿ ಮೇಲೆಯೂ ರೂ.1000ಕ್ಕೂ ಹೆಚ್ಚಿನ ಉಚಿತ ಉಡುಗೊರೆ0% ಸುಲಭ ಇಎಂಐ ಸೌಲಭ್ಯಲೈಫ್ ಟೈಮ್ ಸಾಫ್ಟ್ವೇರ್ ಅಪ್ಡೇಟ್ ಉಚಿತ1 ವರ್ಷದ ತನಕ ಸ್ಕೀನ್ ಪ್ರೊಟೆಕ್ಟರ್ ಉಚಿತ ಕುಂದಾಪುರದ ಹಳೆ ಬಸ್ ನಿಲ್ದಾಣದ ಸಮೀಪದ ಪನ್ನೀರ್ ಜ್ಯುವೆಲ್ಲರ್ಸ್ ಕಾಂಪೆಕ್ಸ್ನಲ್ಲಿರುವ ಮೊಬೈಲ್ ಎಕ್ಸ್ ಶೋರೂಮ್ನಲ್ಲಿ ಈ ಎಲ್ಲಾ ಆಫರ್ಗಳು ಲಭ್ಯವಿರಲಿದ್ದು, ದೀಪಾವಳಿಗೆ ಮೊಬೈಲ್ ಕೊಂಡುಕೊಳ್ಳಬೇಕೆನ್ನುವವರು ಆಫರ್ನ್ನು ಸದಪಯೋಗಪಡಿಸಿಕೊಳ್ಳಬಹುದಾಗಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: 2020-21ನೇ ಸಾಲಿನ‌ಲ್ಲಿ ನಡೆದ ವೈದ್ಯಕೀಯ ವಿಭಾಗದ ರಾಷ್ಟ್ರೀಯ ಪ್ರವೇಶ ಪರೀಕ್ಷೆಯಲ್ಲಿ(ನೀಟ್) ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಫಲಿತಾಂಶ ಪಡೆದುಕೊಂಡಿದ್ದಾರೆ. ವಿದ್ಯಾರ್ಥಿಗಳಾದ ಗೌರವ್ 604 (98.9 ಪರ್ಸಂಟೈಲ್) ಪಡೆಯುದರ ಮೂಲಕ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾನೆ. ಉಳಿದಂತೆ ಸಿಂಚನಾ ಎಸ್. 497(94.32 ಪರ್ಸಂಟೈಲ್), ಅವನಿ ಆಚಾರ್ಯ 469 (92.6 ಪರ್ಸಂಟೈಲ್ ), ಅಫ್ರಿಧಿ ಎಸ್.440 (90.6 ಪರ್ಸಂಟೈಲ್), ಸಾತ್ವಿಕ್ ಶೆಟ್ಟಿ 417 (88.88 ಪರ್ಸಂಟೈಲ್) ಫಲಿತಾಂಶವನ್ನು ಪಡೆದಿರುತ್ತಾರೆ. ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವ್ರಂದದವರು ಅಭಿನಂದನೆ ಸಲ್ಲಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪೌರ ಕಾರ್ಮಿಕರ ಅಂಬೇಡ್ಕರ್ ಕಾಲನಿಯಲ್ಲಿನ ಅಪೂರ್ಣ ಮನೆ ಸಂಪೂರ್ಣವಾಗಿ ನಿರ್ಮಿಸಲು ಮಾಡಲು ಎಲ್ಲಾ ರೀತಿಯ ಸಹಕಾರ ನೀಡುವುದಲ್ಲದೆ 6 ತಿಂಗಳಲ್ಲಿ ಮನೆಗಳ ಬಾಕಿ ಅನುದಾನ ಖಾತೆಗೆ ಜಮಾ ಮಾಡಲು ಕ್ರಮ ವಹಿಸಲಾಗುವುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಕುಂದಾಪುರ ಅಂಬೇಡ್ಕರ್ ಕಾಲನಿಯಲ್ಲಿರುವ ಪೌರ ಕಾರ್ಮಿಕರ ಮನೆಗಳು ಅರ್ಧಂಬರ್ಧ ಆಗಿದೆ ಎನ್ನುವ ದೂರಿನ ಹಿನ್ನೆಲೆಯಲ್ಲಿ ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿ, 13 ಮನೆಗಳು ಅಪೂರ್ಣವಾಗಿದೆ. ಮೂರು ಮನೆ ಪೂರ್ಣಗೊಂಡಿದ್ದು, ಕೊನೆಯ ಕಂತು ಬಾಕಿ ಇದೆ. ಈ ಬಗ್ಗೆ ಪುರಸಭೆ ಮುಖ್ಯಾಧಿಕಾರಿ ಜೊತೆ ಮಾತನಾಡಿದ್ದು, ಇನ್ನು 15 ದಿನದಲ್ಲಿ ಪೂರ್ಣಮನೆ ಕೊನೆಯ ಕಂತು ಖಾತೆಗೆ ಹಾಕಲಾಗುತ್ತದೆ ಎಂದು ತಿಳಿಸಿದರು. ಕಾಲನಿಯ ಮೂರು ಮನೆ ಮುಗಿದ್ದರೂ ಹತ್ತು ಮನೆ ಅರ್ಧಂಬರ್ಧ ಆಗಿದೆ. ಯಾವುದಾದರೂ ಮೂಲದಿಂದ ಪ್ರಥಮ ಹಂತದಲ್ಲಿ ೩ ಮನೆ ತೆಗೆದುಕೊಂಡು ಸಂಪೂರ್ಣ ಮಾಡುವಂತೆ ಪುರಸಭೆ ಮುಖ್ಯಾಧಿಕಾರಿಗೆ ಸೂಚಿಸಿದ್ದು,…

Read More