Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ. ಕೋಟ: ಕೋಟತಟ್ಟು ಗ್ರಾಮ ಪಂಚಾಯತ್ ವತಿಯಿಂದ ದಾನಿಗಳ ಸಹಕಾರದೊಂದಿಗೆ ರೂಪಾಯಿ 90ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಕೊರಗ ಕಾಲೋನಿಯ ಎಂಟು ಹೊಸ ಮನೆ ನಿರ್ಮಾಣಕ್ಕೆ ಮುಂಬೈನ ಓಎನ್‌ಜಿಸಿ ನಿವೃತ್ತ ಚೀಪ್ ಜನರಲ್ ಮ್ಯಾನೇಜರ್ ಬನ್ನಾಡಿ ನಾರಾಯಣ ಆಚಾರ್ ಅವರು ಒಂದು ಲಕ್ಷ ರೂ ಸಹಾಯ ಧನ ಚೆಕ್ ವಿತರಣೆ ಕಾರ್ಯಕ್ರಮ ಕೊರಗರ ಕಾಲೋನಿಯಲ್ಲಿ ನಡೆಯಿತು. ಚೆಕ್ ವಿತರಿಸಿ ಅವರು ಮಾತನಾಡಿ, ಕೋಟತಟ್ಟು ಗ್ರಾಮ ಪಂಚಾಯತ್ ನೇತೃತ್ವದಲ್ಲಿ ಕೊರಗರ ಎಂಟು ಹೊಸ ಮನೆ ನಿರ್ಮಾಣ ಕಾರ್ಯ ಶ್ಲಾಘನೀಯ. ಇಂದು ಸಹಾಯ ಧನ ಚೆಕ್ ವಿತರಿಸುತ್ತಿರುವ ಬಗ್ಗೆ ಖುಷಿ ಇದೆ. ಇಲ್ಲಿಯ ಮೂಲ ನಿವಾಸಿಗಳಿಗೆ ಹೊಸ ಎಂಟು ಮನೆ ನಿರ್ಮಿಸಿ ಕೊಡುವ ಮೂಲಕ ಕೋಟತಟ್ಟು ಗ್ರಾಮ ಪಂಚಾಯತ್  ಇತರ ಗ್ರಾಮ ಪಂಚಾಯತ್ ಗಳಿಗೆ ಮಾದರಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಬಗ್ಗೆ ಸಂತೋಷ ವ್ಯಕ್ತಪಡಿಸಿದರು. ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕೆ. ಸತೀಶ್ ಕುಂದರ್ ಬಾರಿಕೆರೆ ಅವರು ಮಾತನಾಡಿ, ತಳಮಟ್ಟದ ಸಮುದಾಯವನ್ನು ಮೇಲಕ್ಕೆತ್ತುವ ಕಲ್ಯಾಣ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ  ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸುದೀರ್ಘ 19 ವರ್ಷಗಳ ಕಾಲ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿತ್ತಿದ್ದ ಪ್ರೊ. ಅಂಬಲಪಾಡಿ ನಾರಾಯಣಾಚಾರ್ಯ (88ವರ್ಷ) ಅವರಿಗೆ ಶನಿವಾರದಂದು ಕಾಲೇಜಿನ ಆಡಳಿತ ಮಂಡಳಿ ಮತ್ತು ವಿಶ್ವಸ್ಥ ಮಂಡಳಿಯವರು ಮತ್ತು ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿ ಶ್ರದ್ಧಾಂಜಲಿ ಸಭೆ ನಡೆಸಿ ಪುಷ್ಪ ನಮನ ಸಲ್ಲಿಸಿ ಅವರ ಆತ್ಮಕ್ಕೆ ಶ್ರದ್ಧಾಂಜಲಿ ಕೋರಿದರು. ನುಡಿನಮನ ಸಲ್ಲಿಸಿದ ಕಾಲೇಜಿನ ಆಡಳಿತ ಮಂಡಳಿಯ ಕಾರ್ಯದರ್ಶಿಗಳಾದ ಯು.ಎಸ್. ಶೆಣೈ ಅವರು ಮಾತನಾಡಿ, ಅಂಬಲಪಾಡಿ ನಾರಾಯಣಾಚಾರ್ಯ ಸಹೃದಯಿ, ಪ್ರಾಮಾಣಿಕ, ಆದರ್ಶ ಮತ್ತು ಅನುಕರಣೀಯ ಪ್ರಾಂಶುಪಾಲರಾಗಿದ್ದರು. ಅವರು ಅವಧಿಯಲ್ಲಿ ಕಾಲೇಜು ತುಂಬಾ ಅಭಿವೃದ್ಧಿಯನ್ನು ಹೊಂದಿತ್ತು. ಅಲ್ಲದೇ ವಿದ್ಯಾರ್ಥಿಗಳ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಮನೋಭಾವ ಮತ್ತು ಶಿಸ್ತಿನಿಂದ ವಿದ್ಯಾರ್ಥಿಗಳು ಪ್ರೀತಿಗೆ ಪಾತ್ರರಾಗಿದ್ದರು ಎಂದು ಹೇಳಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರಾಚಾರಿ ಮಾತನಾಡಿ, ಕಾಲೇಜಿನ ಏಳಿಗೆಗ ಮತ್ತು ಶೈಕ್ಷಣಿಕ ವಾತಾವರಣ ನಿರ್ಮಾಸುವಲ್ಲಿ ಅವರು ಪಾತ್ರ ಹಿರಿಯದು ಎಂದು ಹೇಳಿದರು. ಹಿರಿಯ ಲೇಖಕಿ ನಿವೃತ್ತ ಪ್ರಾಧ್ಯಾಪಕಿ ಡಾಪಾರ್ವತಿ ಜಿ. ಐತಾಳ್ ಮಾತನಾಡಿ,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಬಾಯಿ ತೆರೆದರೆ ಧರ್ಮ, ದೇಶ, ಹಿಂದುತ್ವದ ಬಗ್ಗೆ ಭಾಷಣ ಮಾಡುವ ಹೇಳಿಕೆಗಳನ್ನು ನೀಡುವ ಬಿಜೆಪಿ ನಾಯಕರುಗಳು ಅವರ ಪಕ್ಷದ ಉಡುಪಿ ಜಿಲ್ಲಾ ಯುವ ಮೋರ್ಚಾದ ಅಧ್ಯಕ್ಷರ ಮಾಲಕತ್ವದ ರೆಸಾರ್ಟ್ ಒಂದರಲ್ಲಿ ಅಕ್ರಮ ವಿದೇಶಿಗರು ನೆಲೆಸಿರುವ ಬಗ್ಗೆ ಏನು ಉತ್ತರ ನೀಡುತ್ತಾರೆ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್‌ ಹೆಗ್ಡೆ ಪತ್ರಿಕಾ ಹೇಳಿಕೆ ಮೂಲಕ ಪ್ರಶ್ನೆ ಮಾಡಿದ್ದಾರೆ. ವಿದೇಶಿಯರನ್ನು ಉದ್ಯೋಗ, ವಸತಿ ನೀಡುವಾಗ ಸಂಬಂಧ ಪಟ್ಟ ಇಲಾಖೆಗಳಿಗೆ ಸೂಕ್ತ ದಾಖಲೆಗಳನ್ನು ನೀಡದೆ ಅವರಿಗೆ ಉದ್ಯೋಗ ನೀಡುವುದು, ವಾಸ್ತವ್ಯ ನೀಡುವುದು ಕಾನೂನು ಬಾಹಿರ ಕ್ರಮ ಹಾಗೂ ಸಂವಿಧಾನ ವಿರೋಧಿ ಕ್ರಮಕೂಡ ಹೌದು. ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರು ಗೋ ರಕ್ಷಣೆ, ಧರ್ಮ ರಕ್ಷಣೆ, ರಾಷ್ಟ್ರ ರಕ್ಷಣೆ ಬಗ್ಗೆ ಹೇಳಿಕೆ, ಭಾಷಣ, ಧರಣಿಗಳನ್ನು ಮಾಡುವವರು ಇವತ್ತು ತಮ್ಮ ರೆಸಾರ್ಟ್ ನಲ್ಲಿ ಅಕ್ರಮ ವಿದೇಶಿಯರನ್ನು ಇಟ್ಟುಕೊಂಡ ಬಗ್ಗೆ ಏನು ಉತ್ತರ ನೀಡುತ್ತಾರೆ. ಇದೊಂದು ರಾಷ್ಟ್ರ ವಿರೋಧಿ ಗಂಭೀರ ಪ್ರಕರಣವಾಗಿದ್ದು ಪೊಲೀಸ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ವಿದ್ಯಾರ್ಥಿಗಳಿಗೆ ಉಂಟಾಗಬಹುದಾದ ಸಮಸ್ಯೆಗಳ ಬಗ್ಗೆ ಅರಿವನ್ನು ಮೂಡಿಸುತ್ತಾ ವಿದ್ಯಾರ್ಥಿಗಳು ತಿಳಿದೋ ತಿಳಿಯದೆಯೋ ಅಸುರಕ್ಷತೆಯನ್ನು ಉಂಟುಮಾಡುವ ಯಾವುದೇ ರೀತಿಯ ದೈಹಿಕ ಸ್ಪರ್ಶಗಳನ್ನು ಮಾಡಬಾರದು. ಅಂತಹ ಸ್ಪರ್ಶಗಳು ಉಂಟಾದ ಸಮಯದಲ್ಲಿ ಗಟ್ಟಿಯಾದ ಸ್ವರದಲ್ಲಿ ನೇರದೃಷ್ಟಿಯ ಮೂಲಕ ವಿರೋಧ ವ್ಯಕ್ತಪಡಿಸುವುದು ಪ್ರಥಮ ಕಾರ್ಯವಾಗಿರುತ್ತದೆ. ನಂತರ ಸಹಪಾಠಿಗಳಲ್ಲಿ, ತಂದೆ ತಾಯಿಯರಲ್ಲಿ, ಅಧ್ಯಾಪಕರಲ್ಲಿ, ಪ್ರಾಂಶುಪಾಲರಲ್ಲಿ, ಪೋಷಕರಲ್ಲಿ, ಅಥವಾ ಮಕ್ಕಳ ಸಹಾಯವಾಣಿಯಲ್ಲಿ ತಮ್ಮ ತೊಂದರೆಗಳನ್ನು ಹೇಳಿಕೊಂಡು ರಕ್ಷಣೆ ಪಡೆಯುವುದು ಮಕ್ಕಳ ಹಕ್ಕಾಗಿರುತ್ತದೆ ಎಂದು ಗ್ರಾಮಾಂತರ ಪೋಲೀಸ್ ಠಾಣೆ ಕಂಡ್ಲೂರಿನ ಎಎಸ್ಐ ಆದ ಶಂಕರ್‌ ಹೇಳಿದರು. ಅವರು ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪೋಕ್ಸೋ ಕಾಯ್ದೆಯ ಕಾನೂನು ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಕಾನೂನುಗಳ ಬಗ್ಗೆ ಸರಿಯಾದ ಮಾಹಿತಿಯನ್ನು ನೀಡುವ ಸಲುವಾಗಿ ಆಗಮಿಸಿ, ವಿದ್ಯಾರ್ಥಿಗಳೊಂದಿಗೆ ಚರ್ಚಿಸಿ ಮಾತನಾಡಿದರು. ಇದಕ್ಕೆ 1098 ಅಥವಾ 112 ಸಂಖ್ಯೆಗೆ ಮಕ್ಕಳು ಕರೆ ಮಾಡಿ ದೂರು ನೀಡಿದಲ್ಲಿ 20 ನಿಮಿಷಗಳಲ್ಲಿ ಪೋಲೀಸ್ ಇಲಾಖೆ ಆ ಮಕ್ಕಳ ನೆರವಿಗೆ ಧಾವಿಸಿ ಬರುತ್ತದೆ. ಶಾಲೆಯಲ್ಲಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಯಾವುದೇ ರೀತಿಯ ಒತ್ತಡ ವಿದ್ಯಾರ್ಥಿಗಳ ಮೇಲೆ ತರದೇ ಅವರು ಸ್ವಯಂಸ್ಪೂರ್ತಿಯಿಂದ ಕಲಿಯುವಂಥ ವಾತಾವರಣ ಆರ್.ಎನ್. ಎಸ್. ಕಾಲೇಜಿನಲ್ಲಿದ್ದಿದ್ದರಿಂದ ನನ್ನಂಥ ಹಲವು ವಿದ್ಯಾರ್ಥಿಗಳಿಗೆ ವೈದ್ಯಕೀಯ ಕ್ಷೇತ್ರದಲ್ಲಿ ಪ್ರವೇಶಿಸಿ ಯಶಸ್ಸು ಪಡೆಯಲು ಸಾಧ್ಯವಾಯಿತು ಎಂದು ಕಾಲೇಜಿನ ಹಳೆ ವಿದ್ಯಾರ್ಥಿ, ಉಡುಪಿಯ ಟಿ.ಎಮ್.ಎ. ಪೈ ಆಸ್ಪತ್ರೆಯ ವೈದ್ಯೆ ಡಾ. ಶ್ರೀಪ್ರದಾ ಹೆಗ್ಡೆ ತಿಳಿಸಿದರು. ಅವರು ಕುಂದಾಪುರ ಎಜುಕೇಶನ್ ಸೊಸೈಟಿಯ ಸುವರ್ಣ ಮಹೋತ್ಸವದ ವೇದಿಕೆಯಲ್ಲಿ ನಡೆದ ಕುಂದಾಪುರದ ಆರ್. ಎನ್ .ಶೆಟ್ಟಿ ಪದವಿ ಪೂರ್ವ ಕಾಲೇಜಿನ ಬಹುಮಾನ ವಿತರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದರು. ಮುಖ್ಯ ಅತಿಥಿಯಾಗಿಆಗಮಿಸಿದ ಇನ್ನೋರ್ವ ಹಳೆ ವಿದ್ಯಾರ್ಥಿ CA ಸಂಕೇತ್ ಹೆಗ್ಡೆ ಕಾಲೇಜಿನಲ್ಲಿ ಕಲಿಯುವಾಗ ಉಪನ್ಯಾಸಕರ ಸ್ಪೂರ್ತಿದಾಯಕ ನುಡಿಗಳು ತನ್ನಲ್ಲಿ ಸಿ.ಎಯಂಥ ಕಠಿಣ ವ್ಯಾಸಂಗ ಮಾಡಲು ಸಹಕಾರಿಯಾಯಿತು ಎಂದು ತಿಳಿಸಿದರು. ಸಮಾರಂಭದ ಅಧ್ಯಕ್ಷತೆ ವಹಿಸಿದ ಸಿ.ಇ.ಎಸ್ ನ ಅಧ್ಯಕ್ಷರೂ, ಬೈಂದೂರು ವಿಧಾನಸಭಾ ಕ್ಷೇತ್ರದ ಮಾಜಿಶಾಸಕ ಬಿ.ಎಮ್. ಸುಕುಮಾರ್ ಶೆಟ್ಟಿ ಅವರು ಸಂಸ್ಥೆಯನ್ನು ಊರ್ಜಿತಗೊಳಿಸುವಲ್ಲಿ ಎದುರಾದ ಭಾವುಕಕ್ಷಣಗಳನ್ನು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗ ಆಕಸ್ಮಿಕವಾಗಿ ನೀರಿಗೆ ಬಿದ್ದು ಮೀನುಗಾರ ಮೃತಪಟ್ಟ ಘಟನೆ ಉಪ್ಪುಂದ ಗ್ರಾಮದಲ್ಲಿ ಸಂಭವಿಸಿದೆ. ಉಪ್ಪುಂದ ಜನತಾ ಕಾಲನಿ ಹರಿಶ್ಚಂದ್ರ ಖಾರ್ವಿ(48) ಮೃತಪಟ್ಟ ವ್ಯಕ್ತಿ. ಉಪ್ಪುಂದ ಗ್ರಾಮದ ಮಡಿಕಲ್ ಬಳಿ ಅರಬಿ ಸಮುದ್ರದಲ್ಲಿ ಮೀನುಗಾರಿಕೆಯಲ್ಲಿ ನಿರತರಾಗಿದ್ದಾಗ ಹರಿಶ್ಚಂದ್ರ ಖಾರ್ವಿ ದೋಣಿಯಿಂದ ಆಯತಪ್ಪಿ ಸಮುದ್ರಕ್ಕೆ ನೀರಿಗೆ ಬಿದ್ದಿದ್ದು ಕೂಡಲೇ ಅವರನ್ನು ನೀರಿನಿಂದ ಮೇಲೆ ಎತ್ತಿ ಉಪಚರಿಸಲಾಗಿದೆ. ಪ್ರಜ್ಞಾಹೀನ ಸ್ಥಿತಿಯಲ್ಲಿದ್ದವರನ್ನುಮಣಿಪಾಲ ಕೆಎಂಸಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ವಂಡ್ಸೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವದ ಅಂಗವಾಗಿ ವಿದ್ಯಾರ್ಥಿ ಪೋಷಕರ ಕ್ರೀಡಾಕೂಟ ಶಾಲಾ ಮೈದಾನದಲ್ಲಿ ನಡೆಯಿತು. ವಿದ್ಯಾರ್ಥಿಗಳು, ಹಳೆ ವಿದ್ಯಾರ್ಥಿಗಳ ಕ್ರೀಡಾಕೂಟದ ಜೊತೆಯಲ್ಲಿ 2023ರಲ್ಲಿ ಶಾಲೆಯ ವಿದ್ಯಾರ್ಥಿ ಪೋಷಕರಿಗೂ ಕ್ರೀಡಾಕೂಟವನ್ನು ಆಯೋಜಿಸಲಾಗಿತ್ತು. ಇದಕ್ಕೆ ಉತ್ತಮ ಪ್ರತಿಕ್ರಿಯೆ ಕಂಡು ಬಂತು. ಹೊಸ ಬದಲಾವಣೆಗೂ ಕಾರಣವಾಯಿತು. ತಮ್ಮ ಮಕ್ಕಳ ಎದುರು ಪೋಷಕರು ವಿವಿಧ ಕ್ರೀಡೆಗಳಲ್ಲಿ ಭಾಗವಹಿಸಿ ಮಕ್ಕಳಿಗೆ ಖುಷಿ ಪಡಿಸುವ ಅಪರೂಪದ ಸನ್ನಿವೇಶ ಸೃಷ್ಟಿಯಾಯಿತು. ಸೋಮವಾರ ನಡೆದ ಪೋಷಕರ ಕ್ರೀಡಾಕೂಟಕ್ಕೆ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಡಾ. ಪೂರ್ಣಿಮಾ ಅವರು ಚಾಲನೆ ನೀಡಿದರು. ಶಾಲಾ ಹಿರಿಯ ಮುಖ್ಯೋಪಾಧ್ಯಾಯರಾದ ಶಂಕರ ಅವರು ಶುಭ ಹಾರೈಸಿದರು. ಎಸ್.ಡಿ.ಎಂ.ಸಿ ಉಪಾಧ್ಯಕ್ಷರಾದ ನಾಗೇಂದ್ರ ಉಡುಪ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಸಂಜೀವ ಪೂಜಾರಿ, ಎಸ್.ಡಿ.ಎಂ.ಸಿ ಸದಸ್ಯರು, ಶಿಕ್ಷಕ ವೃಂದದವರು ಉಪಸ್ಥಿತರಿದ್ದರು. ದೈಹಿಕ ಶಿಕ್ಷಣ ಶಿಕ್ಷಕ ರಾಜು ಎನ್. ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ನೋವಿಗೆ ಸ್ಪಂದಿಸುವುದೇ ನಿಜವಾದ ಧರ್ಮ. ಅಂಧಕಾರ, ಅಸ್ಪೃಶ್ಯತೆ, ಮಾನವ ಬಲಿ, ವರದಕ್ಷಿಣೆ ಮೊದಲಾದ ಅಮಾನವೀಯ ಆಚರಣೆಗಳಿಂದ ಜನರನ್ನು ರಕ್ಷಿಸಿದ ಯೇಸು ನಡೆದ ದಾರಿಯೇ ಮಾನವ ಧರ್ಮ ಎಂದು ಮಂಗಳೂರು ಧರ್ಮಪ್ರಾಂತ್ಯದ ನಿವೃತ್ತ ಬಿಷಪ್ ವಂದನೀಯ ಡಾ. ಪೀಟರ್ ಪಾವ್ಲ್ ಸಲ್ಡಾನಾ ನುಡಿದರು. ಅವರು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಕೃಷಿಸಿರಿಯ ಮುಂಡ್ರೆದೆಗುತ್ತು ಕೆ. ಅಮರನಾಥ್ ಶೆಟ್ಟಿ ಸಭಾಂಗಣದಲ್ಲಿ ನಡೆದ ಆಳ್ವಾಸ್ ಕ್ರಿಸ್ಮಸ್-2025 ಸಂಭ್ರಮಾಚರಣೆಯಲ್ಲಿ ಮಾತನಾಡಿದರು. ಹಸಿದವರಿಗೆ ಆಹಾರ, ದಣಿದವರಿಗೆ ನೀರು, ತೊಡಲು ವಸ್ತ್ರ ಒದಗಿಸುವುದೇ ಮಾನವ ಧರ್ಮ. ಪ್ರೀತಿ, ಸೇವೆ ಮತ್ತು ಕರುಣೆಯಿಂದ ಜಗತ್ತಿಗೆ ಬೆಳಕು ತೋರಿದವರು ಯೇಸು. ಎಲ್ಲಾ ಧರ್ಮಗಳಲ್ಲೂ ಪ್ರೀತಿ ಮತ್ತು ನೀತಿ ಅಡಗಿದ್ದು, ಯಾವ ಧರ್ಮವೂ ಇದಕ್ಕೆ ಹೊರತಲ್ಲ ಎಂಬ ಸತ್ಯವ ಜಗತ್ತಿಗೆ ಸಾರಿದವರು, ಅಹಂಕಾರ ಮತ್ತು ದ್ವೇಷವನ್ನು ತೊರೆದು ಒಳ್ಳೆಯದನ್ನೇ ಬಯಸುವ ಬದುಕು ಮಾನವೀಯತೆಗೆ ದಾರಿ ಎಂದು ತಿಳಿಸಿದ ದೇವಮಾನವರವರು ಎಂದರು. ಅಟಲ್ ಬಿಹಾರಿ ವಾಜಪೇಯಿ ಅವರು ಕ್ರೈಸ್ತ ಧರ್ಮದ ಸೇವೆ, ತ್ಯಾಗ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ನಾಡ-ನುಡಿಯಾದ ಕನ್ನಡ ಭಾಷೆಯನ್ನು ಸರಕಾರಿ ಕಚೇರಿಗಳು ಸೇರಿದಂತೆ ಎಲ್ಲಾ ಖಾಸಗಿ, ವಾಣಿಜ್ಯ ಹಾಗೂ ಇತರೆ ಸಂಸ್ಥೆಗಳು ದೈನಂದಿನ ಕಾರ್ಯಚಟುವಟಿಕೆಗಳಲ್ಲಿ ಕಡ್ಡಾಯವಾಗಿ ಬಳಸಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಕರೆ ನೀಡಿದರು. ಅವರು ಶುಕ್ರವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಪ್ರತಿಯೊಬ್ಬರೂ ಮಾತೃಭಾಷೆಯಾದ ಕನ್ನಡದ ಬಗ್ಗೆ ಅಭಿಮಾನ ಹೊಂದಿ, ದೈನಂದಿನ ಕಾರ್ಯಗಳಲ್ಲಿ ಹೆಚ್ಚಾಗಿ ಬಳಸಬೇಕು. ಜಿಲ್ಲೆಯಲ್ಲಿ ಉದ್ಯೋಗ ಅರಸಿ ಬಂದಿರುವ ಹೊರ ರಾಜ್ಯದ ಅನ್ಯ ಭಾಷಿಕರಿಗೂ ಸಹ ನಮ್ಮ ಭಾಷೆಯನ್ನು ಕಲಿಯಲು ಉತ್ತೇಜಿಸಬೇಕು ಎಂದ ಅವರು, ಎಲ್ಲಾ ಸರ್ಕಾರಿ ಕಚೇರಿಯ ಆಡಳಿತದಲ್ಲಿ ಕನ್ನಡ ಬಳಸಬೇಕು. ಆಡಳಿತದಲ್ಲಿ ಕನ್ನಡ ತಂತ್ರಾಶದ ಬಳಕೆಯನ್ನು ಅಳವಡಿಸಿಕೊಳ್ಳಬೇಕು ಎಂದರು. ರಾಜ್ಯದ ಸರ್ಕಾರಿ ಕಚೇರಿಗಳು, ವಾಣಿಜ್ಯ ಸಂಸ್ಥೆಗಳು, ಕೈಗಾರಿಕೆಗಳು, ಅಂಗಡಿ, ಹೋಟೆಲ್, ಶಾಲಾ-ಕಾಲೇಜು, ಪ್ರವಾಸೋದ್ಯಮ ಸೇರಿದಂತೆ ಮತ್ತಿತರ ಕಡೆಗಳಲ್ಲಿ ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಭಾಷೆಯನ್ನು ಕಡ್ಡಾಯವಾಗಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಇಲ್ಲಿನ ಕೋಡಿ ಕನ್ಯಾಣ ಶನೀಶ್ವರ ದೇಗುಲದ ಸನಿಹದಲ್ಲಿ ಇದೇ ಡಿ.21ರ ಭಾನುವಾರ ತಿರುಪತಿಯ ಶ್ರೀ ದೇವಿ ಭೂದೇವಿ ಸಹಿತ ಶ್ರೀನಿವಾಸ ದೇವರಿಗೆ ಉಂಜಾಲೋತ್ಸವ ಸಹಿತ ಪುಷ್ಪಯಾಗ ಮಹೋತ್ಸವದ ಅಂಗವಾಗಿ ಸ್ಥಳೀಯ ಗ್ರಾಮಸ್ಥರ ಹೊರೆಕಾಣಿಕೆ ಸಮರ್ಪಣೆ ಗುರುವಾರ ನಡೆಯಿತು. ಕೋಡಿ ಶ್ರೀ ರಾಮದೇಗುಲದಲ್ಲಿ ಚಾಲನೆಗೊಂಡ ಹೊರೆಕಾಣಿಕೆಗೆ ಉದ್ಯಮಿ ಧನಂಜಯ ಅಮೀನ್ ಪೇತ್ರಿ ಅವರು ಚಾಲನೆ ನೀಡಿದರು. ಅಲ್ಲದೆ ಕೋಡಿ ಮಹಾಸತೀಶ್ವರಿ ದೇಗುಲದಿಂದ ಸುತ್ತಮುತ್ತಲಿನ ಪರಿಸರದ ಭಕ್ತಾಧಿಗಳು ಹೊರೆಕಾಣಿಕೆಯನ್ನು ಸಮರ್ಪಸಿದರು. ಈ ಸಂದರ್ಭದಲ್ಲಿ ಉಂಜಲೋತ್ಸವ ಸಮಿತಿಯ ಪದಾಧಿಕಾರಿಗಳು ಗ್ರಾಮಸ್ಥರು ಮತ್ತಿತರರು ಉಪಸ್ಥಿತರಿದ್ದರು.

Read More