ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಹರ್ಷ ಜೆ. ಆಚಾರ್ಯ ವಾಣಿಜ್ಯ ವಿಭಾಗದಲ್ಲಿ 593 (98.33) ಅಂಕ ಪಡೆದು ಕಾಲೇಜಿಗೆ ಪ್ರಥಮ ಸ್ಥಾನಿಯಾಗಿದ್ದಾನೆ. ರಾಜ್ಯದಲ್ಲಿ ಟಾಪ್ ಟೆನ್ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾನೆ, ಈತ ಕಾಲ್ತೋಡು ಗ್ರಾಮದ ಅಲ್ಸಡಿ ಜಗದೀಶ್ ಆಚಾರ್ ಹಾಗೂ ಹೇಮಾ ದಂಪತಿಗಳ ಪುತ್ರ
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ವೆಂಕಟರಮಣ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಆದಿತ್ಯ ವಿ. ದೇವಾಡಿಗ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ 576 (96%) ಅಂಕ ಪಡೆದುಕೊಂಡಿದ್ದಾನೆ. ಈತ ಅನಿವಾಸಿ ಕನ್ನಡಿಗ ವಾಸು ದೇವಾಡಿಗ ಹಾಗೂ ಜಯಂತಿ ವಿ. ದೇವಾಡಿಗ ಅವರ ಪುತ್ರ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ತಾಲೂಕಿನ ಬೈಂದೂರು ಪೊಲೀಸ್ ಠಾಣೆಯ ಮೂವರು ಸಿಬ್ಬಂದಿಗೆ ಕೊರೋನಾ ಪಾಸಿಟಿವ್ ದೃಢವಾಗಿದೆ. ಮತ್ತೊಮ್ಮೆ ಠಾಣೆಯನ್ನು ಸೀಲ್’ಡೌನ್ ಮಾಡುವಂತಾಗಿದೆ. ಠಾಣೆಯ ಎ.ಎಸ್.ಐ, ಮಹಿಳಾ ಪೊಲೀಸ್ ಸಿಬ್ಬಂದಿ ಹಾಗೂ ಠಾಣೆಯಲ್ಲಿ ಕರ್ತವ್ಯದಲ್ಲಿದ್ದ ಹೋಂ ಗಾರ್ಡ್ ಓರ್ವರಿಗೆ ಪಾಸಿಟಿವ್ ಬಂದಿದ್ದು, ಅವರನ್ನು ಕುಂದಾಪುರದ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗುತ್ತದೆ. ಪಾಸಿಟಿವ್ ಬಂದಿರುವ ಸಿಬ್ಬಂದಿಯ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಕ್ಕೆ ಬಂದವರನ್ನು ಗುರುತಿಸಿ ಅವರನ್ನು ಹೋಂ ಕ್ವಾರಂಟೈನ್ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ಕುಂದಾಪ್ರ ಡಾಟ್ ಕಾಂ. ಜೂನ್ 21ರಂದು ಬೈಂದೂರು ಪೊಲೀಸ್ ಸಿಬ್ಬಂದಿ ಓರ್ವರಿಗೆ ಪಾಸಿಟಿವ್ ಬಂದಿತ್ತು. ಜೂನ್ 22ರಂದು ಅದೇ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹಿಳಾ ಪೊಲೀಸ್ ಸಿಬ್ಬಂದಿ ಹಾಗೂ ಅವರ ಕುಟುಂಬದ ಈರ್ವರಿಗೆ ಪಾಸಿಟಿವ್ ದೃಡವಾಗಿತ್ತು. ಸದ್ಯ ಅವರು ಗುಣಮುಖದಾಗಿದ್ದರು. ಕುಂದಾಪ್ರ ಡಾಟ್ ಕಾಂ. ಠಾಣೆ ಸೀಲ್ ಡೌನ್? ಪೊಲೀಸ್ ಸಿಬ್ಬಂದಿಗೆ ಪಾಸಿಟಿವ್ ಬಂದಿರುವುದು ದೃಢವಾದಲ್ಲಿ ಠಾಣೆಯನ್ನು ತಾತ್ಕಾಲಿಕವಾಗಿ ಮುಚ್ಚಿ ಸ್ಯಾನಿಟೈಜೇಷನ್ ಮಾಡಿದ ಬಳಿಕ ಒಂದೆರಡು ದಿನಗಳಲ್ಲಿ ಮತ್ತೆ ಪುನರಾರಂಭಿಸಲಾಗುತ್ತದೆ.…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಜು.15ರ ಬುಧವಾರ 53 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಈ ಪೈಕಿ ಕುಂದಾಪುರ ತಾಲೂಕಿನ 29, ಉಡುಪಿ ತಾಲೂಕಿನ 18 ಹಾಗೂ ಕಾರ್ಕಳ ತಾಲೂಕಿನ 6 ಮಂದಿಗೆ ಪಾಸಿಟಿವ್ ಬಂದಿದೆ. ಒಟ್ಟು ಪ್ರಕರಣಗಳಲ್ಲಿ 24 ಪುರುಷರು, 22 ಮಹಿಳೆಯರು, 7 ಮಕ್ಕಳು ಸೇರಿದ್ದಾರೆ. ಇವರಲ್ಲಿ 2 ಮಂದಿ ಮಂಬೈ ಪ್ರಯಾಣದ ಹಿನ್ನೆಲೆ, 2 ಮಂದಿ ಬೆಂಗಳೂರು ಪ್ರಯಾಣದ ಹಿನ್ನೆಲೆ ಹೊಂದಿದ್ದಾರೆ. ಪ್ರಾಥಮಿಕ ಸಂಪರ್ಕದಿಂದ 33 ಮಂದಿಗೆ ಹಾಗೂ ILI (influenza-like illness) ಇರುವ 16 ಮಂದಿಗೆ ಪಾಸಿಟಿವ್ ಬಂದಿದೆ. ಇಂದು 22 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. 832 ನೆಗೆಟಿವ್: ಈ ತನಕ ಒಟ್ಟು 23,108 ಮಾದರಿ ಸಂಗ್ರಹಿಸಿದ್ದು, ಅವುಗಳಲ್ಲಿ 20,667 ನೆಗೆಟಿವ್, 1,786 ಪಾಸಿಟಿವ್ ಬಂದಿದ್ದು, 655 ಮಂದಿಯ ವರದಿ ಬರುವುದು ಬಾಕಿ ಇದೆ. ಇಂದು ಬಂದಿರುವ ವರದಿಯಲ್ಲಿ 832 ನೆಗೆಟಿವ್, 53 ಪಾಸಿಟಿವ್ ಬಂದಿದೆ. ಒಟ್ಟು 1,766 ಮಂದಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಮಂಗಳೂರು ವಿಕಾಸ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಆಶ್ರಿತಾ ಮದ್ದೋಡಿ ವಿಜ್ಞಾನ ವಿಭಾಗದಲ್ಲಿ ಶೆ.97.8 (587) ಅಂಕ ಪಡೆದು ರಾಜ್ಯದಲ್ಲಿ 10ನೇ ಸ್ಥಾನ ಪಡೆದುಕೊಂಡಿದ್ದಾಳೆ. ವಿಜ್ಞಾನ ವಿಭಾಗದಲ್ಲಿ ದ.ಕ ಜಿಲ್ಲೆಗೆ 6ನೇ ಸ್ಥಾನ ಹಾಗೂ ಕಾಲೇಜಿಗೆ ಪ್ರಥಮ ಸ್ಥಾನಿಯಾಗಿದ್ದಾಳೆ. ಆಶ್ರಿತಾ ಪಿಜಿಕ್ಸ್ನಲ್ಲಿ – 99, ಕೆಮಿಸ್ಟ್ರೀ – 99, ಮ್ಯಾಥ್ಸ್-99, ಬಯಾಲಜಿ – 100, ಕನ್ನಡ-98, ಇಂಗ್ಲೀಷ್ನಲ್ಲಿ 92 ಅಂಕ ಪಡೆದಿದ್ದಾಳೆ. ಈಕೆ ಬೈಂದೂರು ರತ್ತೂಬಾಯಿ ಜನತಾ ಪ್ರೌಢಶಾಲೆಯ ಅಧ್ಯಾಪಕ ಆನಂದ ಮದ್ದೋಡಿ ಹಾಗೂ ಲತಾ ಆನಂದ ಅವರ ಪುತ್ರಿ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸರಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ರೋಹಿತ್ ದೇವಾಡಿಗ ದ್ವಿತೀಯ ಪಿಯುಸಿ ಪರೀಕ್ಷೆಯಲಿ ಶೇ.91 (546) ಅಂಕ ಪಡೆದು ಡಿಸ್ಟಿಂಕ್ಷನ್ನಲ್ಲಿ ತೇರ್ಗಡೆಯಾಗಿದ್ದಾನೆ. ಈತ ಉಪ್ಪುಂದ ಹೊಳೆಬಾಗಿಲು ಯೋಗೀಶ್ವರ ದೇವಾಡಿಗ ಮತ್ತು ರಾಜಶ್ರೀ ದೇವಾಡಿಗ ದಂಪತಿಯ ಪುತ್ರ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬೈಂದೂರು ಸರಕಾರಿ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಅನುಶ್ರೀ ವಾಣಿಜ್ಯ ವಿಭಾಗದಲ್ಲಿ ಶೇ.95.5 (573) ಅಂಕ ಪಡೆದಿದ್ದು ಕಾಲೇಜಿಗೆ ಪ್ರಥಮ ಸ್ಥಾನಿಯಾಗಿದ್ದಾಳೆ. ಈಕೆ ಯಡ್ತರೆ ಗ್ರಾಮದ ಸೈಬ್ರಹಿತ್ಲು ರಾಮ ಪೂಜಾರಿ ಹಾಗೂ ದೇವಕಿ ದಂಪತಿಗಳ ಪುತ್ರಿ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ಕೆರಾಡಿ ವರಸಿದ್ಧಿ ವಿನಾಯಕ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳು ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ದ್ವಿತೀಯ ಪಿಯುಸಿಯಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಅಕ್ಷತಾ 575 (95.83%), ಕಾಮರ್ಸ್ ವಿಭಾಗದಲ್ಲಿ ಕೀರ್ತನಾ 574 (95.67) ಹಾಗೂ ಕಲಾ ವಿಭಾಗದಲ್ಲಿ ಓಂಕಾರ್ 566 (94.33) ಅಂಕ ಪಡೆದು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜು ಶೇ.99.06 ಫಲಿತಾಂಶ ದಾಖಲಿಸಿದೆ. ರಾಜ್ಯದ ಟಾಪ್ 10 ಪಟ್ಟಿಯಲ್ಲಿ ಕಾಲೇಜಿನ 22 ವಿದ್ಯಾರ್ಥಿಗಳು ಸ್ಥಾನ ಪಡೆದಿದ್ದಾರೆ. ಕಾಲೇಜಿನಲ್ಲಿ ಪ್ರಸಕ್ತ ವರ್ಷ 2779 ಮಂದಿ ಪರೀಕ್ಷೆ ಬರೆದಿದ್ದು, 2753 ಮಂದಿ ಉತ್ತೀರ್ಣರಾಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ 2229 ವಿದ್ಯಾರ್ಥಿಗಳು ಹಾಜರಾಗಿ 2209 ಮಂದಿ ಉತ್ತೀರ್ಣರಾಗಿದ್ದು, ಶೇ.99.10 ಪಲಿತಾಂಶ ದಾಖಲಾಗಿದೆ. ವಾಣಿಜ್ಯ ವಿಭಾಗದಲ್ಲಿ 502 ವಿದ್ಯಾರ್ಥಿಗಳು ಪರೀಕ್ಷೆ ಬರೆದು, 496 ಮಂದಿ ಉತ್ತೀರ್ಣರಾಗಿ ಶೇ. 98.80 ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ ಪರೀಕ್ಷೆ ಬರೆದ ಎಲ್ಲ 48 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ.100 ಫಲಿತಾಂಶ ದಾಖಲಾಗಿದೆ. ಟಾಪ್ 10ನಲ್ಲಿ 22 ವಿದ್ಯಾರ್ಥಿಗಳು: ಪಿಯುಸಿಯ ಮೂರೂ ವಿಭಾಗಗಳಲ್ಲಿ ಒಟ್ಟು 22 ಮಂದಿ ವಿದ್ಯಾರ್ಥಿಗಳು ರಾಜ್ಯದ ಟಾಪ್ ಟೆನ್ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ವಿಜ್ಣಾನ ವಿಭಾಗದಲ್ಲಿ ಅನರ್ಘ್ಯ ಕೆ.(592), ರಘುವೀರ್ ಮಠದ(592) ಲಿಶನ್ ಎಎ(592), ಅನಿಲ್ ಬಣ್ಣಿ ಶೆಟ್ಟಿ (589) ಭಗೇಶ್ ಎನ್. ಕೊಡಗನೂರು, ವಿನಾಯಕ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: 2019–20ನೇ ಸಾಲಿನ ರಾಜ್ಯದ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕುಂದಾಪುರ ಹಾಗೂ ಬೈಂದೂರು ತಾಲೂಕಿನ ವಿವಿಧ ಕಾಲೇಜುಗಳು ವಿದ್ಯಾರ್ಥಿಗಳು ಉತ್ತಮ ಸಾಧನೆ ತೋರಿದ್ದಾರೆ. ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿಗೆ ಶೆ.100 ಫಲಿತಾಂಶ ಕುಂದಾಪುರದ ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜು ಶೇ 100 ರಷ್ಟು ಫಲಿತಾಂಶ ದಾಖಲಿಸಿದೆ. ವಾಣಿಜ್ಯ ವಿಭಾಗದಲ್ಲಿ ಸ್ವಾತಿ ಪೈ 594 ಅಂಕ ಗಳಿಸಿ ರಾಜ್ಯಕ್ಕೆ ನಾಲ್ಕನೇ ಸ್ಥಾನ ಗಳಿಸುವುದರೊಂದಿಗೆ ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ವಾಣಿಜ್ಯ ವಿಭಾಗದಲ್ಲಿ 84 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 45ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ನಲ್ಲಿ ಮತ್ತು 39 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ ರಾಜ್ಯಮಟ್ಟದಲ್ಲಿ ಸೋಹನ್ ಕುಮಾರ್ ಶೆಟ್ಟಿ 589 ಅಂಕಗಳಿಸಿ ರಾಜ್ಯಕ್ಕೆ ಏಳನೇ ಸ್ಥಾನ ಮತ್ತು ಭುವನ್ 588 ಅಂಕಗಳಿಸಿ ಎಂಟನೇ ಸ್ಥಾನ ಗಳಿಸಿದ್ದಾರೆ. ಈ ಬಾರಿಯ ವಿಜ್ಞಾನ ವಿಭಾಗದಲ್ಲಿ 118 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 63 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ನಲ್ಲಿ…
