Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಅನ್ಯರಿಗೆ ವಂಚಿಸಿ, ಗಳಿಸಿದ ಹಣದಿಂದ ಭಗವಂತನಿಗೆ ಕೋಟ್ಯಾಂತರ ರೂ. ವ್ಯಯಿಸಿದ್ದರು ಅದನ್ನು ಭಗವಂತನಿಗೆ ಸಲ್ಲುವುದಿಲ್ಲ. ಬದಲಾಗಿ ಜನರು ತಮ್ಮ ಪ್ರಾಮಾಣಿಕ ದುಡಿಮೆಯ ಒಂದು ಭಾಗವನ್ನು ದಾನ ಮಾಡಿದಾಗ ಮಾತ್ರ ಅದು ಭಗವಂತನಿಗೆ ಅರ್ಪಿತವಾಗುತ್ತದೆ ಎಂದು ಹಾವೇರಿ ನರಸೀಪುರ ಜಗದ್ಗುರು ಶ್ರೀ ಶಾಂತಭೀಷ್ಮ ಸ್ವಾಮೀಜಿ ಹೇಳಿದರು. ಅವರು ಉಪ್ಪುಂದ ಮಡಿಕಲ್ ಅರಮಕೋಡಿ ಶ್ರೀ ಈಶ್ವರ ದೇವಸ್ಥಾನದ ನೂತನ ಶಿಲಾದೇಗುಲ ಲೋಕಾರ್ಪಣೆ, ಪುನರ್ ಪ್ರತಿಷ್ಠೆ ಧಾರ್ಮಿಕ ಕಾರ್ಯಕ್ರಮದ ಸಭಾ ಕಾರ್ಯಕ್ರಮದಲ್ಲಿ ಅಶೀರ್ವಚನ ನೀಡಿ ಮಾತನಾಡಿದರು. ಹಿಂದಿನ ಕಾಲದಲ್ಲಿ ರಾಜಮಹಾರಾಜರು ಮಾತ್ರ ಇಂತಹ ದೇಗುಲಗಳನ್ನು ನಿರ್ಮಿಸಲು ಸಾಧ್ಯವಾಗಿತ್ತು, ಆದರೆ ಇಂದು ಕಡಲಿನಲ್ಲಿ ಕಠಿಣ ದುಡಿಮೆ ನಡೆಸುವ ಮೀನುಗಾರರ ಪರಿಶ್ರಮದಿಂದ ಹಾಗೂ ಇತರ ಭಕ್ತರು ಸೇರಿ ಭವ್ಯವಾದ ಶಿವಾ ದೇಗುಲ ನಿರ್ಮಾಣ ಮಾಡಿರುವುದು ಶ್ಲಾಘನೀಯ. ಮನುಷ್ಯ ಚಿಂತೆ ಮಾಡುವುದನ್ನು ಬಿಟ್ಟು ಚಿಂತನೆ ಮಾಡುವುದನ್ನು ರೂಢಿಸಿಕೊಂಡಾಗ ಜೀವನದ ನಿತ್ಯ ಯಾತ್ರೆಯಲ್ಲಿ ಉತ್ಸಾಹ, ಚೈನತ್ಯ ಮನಮಾಡುತ್ತದೆ, ಪರೋಪಕಾರ, ನಿಸ್ವಾರ್ಥ ಸೇವೆ ಮಾಡಿದಾಗ ಪರಮಾತ್ಮ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ: ಕೇಂದ್ರ ಮಾಹಿತಿ ಮತ್ತು ಪ್ರಸಾರ ಇಲಾಖೆಯ ಮಂಗಳೂರು ಫೀಲ್ಡ್ ಔಟ್‌ರೀಚ್ ಬ್ಯುರೋ ಹಾಗೂ ಆಳ್ವಾಸ್ ಕಾಲೇಜಿನ ಮಾನವಿಕ ವಿಭಾಗದ ಸಹಭಾಗಿತ್ವದಲ್ಲಿ ಪಂಡಿತ್ ಭೀಮ್‌ಸೇನ್ ಜೋಶಿ ಜನ್ಮ ವರ್ಷಾಚರಣೆಯ ಅಂಗವಾಗಿ ವೆಬಿನಾರ್‌ನ್ನು ಆಯೋಜಿಸಲಾಯಿತು. ಕಲಬುರಗಿಯ ಕೇಂದ್ರೀಯ ವಿವಿಯ ಸಂಗೀತ ಹಾಗೂ ಲಲಿತ ಕಲೆ ವಿಭಾಗದ ಸಹಾಯಕ ಪ್ರಾಧ್ಯಪಕರಾದ ಡಾ. ಜಯದೇವಿ ಜಂಗಮಶೆಟ್ಟಿ ಹಾಗೂ ಹಂಪಿಯ ಕನ್ನಡ ವಿವಿಯ ಸಂಶೋಧನಾ ವಿದ್ಯಾರ್ಥಿ ಜಯಮ್ಮ ದಾನಮ್ಮನ್ನವರ್ ಸಂಪನ್ಮೂಲ ವ್ಯಕ್ತಿಗಳಾಗಿ ಮಾತನಾಡಿದರು. ಆಳ್ವಾಸ್ ಕಾಲೇಜಿನ ಮಾನವಿಕ ವಿಭಾಗದ ಡೀನ್ ಸಂಧ್ಯಾ ಕೆ. ಎಸ್ ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ದೇಶದಾದ್ಯಂತ ಕೋವಿಡ್ ಸಂಕಷ್ಟದ ದಿನಗಳು ಇದ್ದಾಗಲೂ ನಾವು ಎಚ್ಚರಿಕೆಯಿಂದ ರಕ್ತದಾನ ಶಿಬಿರಗಳನ್ನು ಏರ್ಪಡಿಸಿ, ದಾನಿಗಳಿಂದ ರಕ್ತವನ್ನು ಸಂಗ್ರಹಿಸಿ ಅನೇಕ ಪ್ರಾಣಗಳನ್ನು ರಕ್ಷಿಸುವ ಕಾರ್ಯ ಮಾಡಿದ್ದೇವೆ ಎಂದು ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ಘಟಕದ ಸಭಾಪತಿ ಎಸ್.ಜಯಕರ ಶೆಟ್ಟಿ ಹೇಳಿದರು. ಕಥೊಲಿಕ್ ಸಭಾ ಕುಂದಾಪುರ ವಲಯ ಸಮಿತಿ, ರೋಟರಿ ಕ್ಲಬ್ ಕುಂದಾಪುರ ದಕ್ಷಿಣ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ಹಾಗೂ ಆಯುಷ್ ಧಾಮ ಆರ್ಥೊ ನ್ಯೂರೋ ಆಸ್ಪತ್ರೆಯ ಸಂಯುಕ್ತ ಆಶ್ರಯದಲ್ಲಿ ನಡೆದ ರಕ್ತದಾನ, ಉಚಿತ ಮೂಳೆ ಹಾಗೂ ನರರೋಗ ತಪಾಸಣೆ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಆಶೀರ್ವಚನ ನೀಡಿದ ವಲಯ ಧರ್ಮಗುರುಗಳಾದ ಸ್ಟ್ಯಾನಿ ತಾವ್ರೊ ಅವರು, ದಾನಗಳಲ್ಲಿಯೇ ಅತ್ಯಂತ ಶ್ರೇಷ್ಠ ದಾನವಾಗಿರುವ ರಕ್ತದಾನದಿಂದ ಅನೇಕ ಜೀವಗಳನ್ನು ಕಾಪಾಡಲು ಸಾಧ್ಯ ಎಂದರು. ಕಥೊಲಿಕ್ ಸಭಾ ಕುಂದಾಪುರ ವಲಯ ಸಮಿತಿಯ ಅಧ್ಯಕ್ಷೆ ಮೇಬಲ್ ಡಿಸೋಜಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ರೋಟರಿ ಕ್ಲಬ್ ದಕ್ಷಿಣ ಅಧ್ಯಕ್ಷ ಡಾ.ಉತ್ತಮ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕೇಂದ್ರ ಸರ್ಕಾರದ ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯವು ದೇಶದಾದ್ಯಂತ ರಾಷ್ಟ್ರೀಯ ಯುವ ಸ್ವಯಂ ಸೇವಕರು ಎಂಬ ಕಾರ್ಯಕ್ರಮವನ್ನು ನೆಹರು ಯುವ ಕೇಂದ್ರದ ಮೂಲಕ ಅನುಷ್ಠಾನಗೊಳಿಸುತ್ತಿದ್ದು, ಈ ಯೋಜನೆಯಡಿಯಲ್ಲಿ ಜಿಲ್ಲಾವಾರು ಯುವ ಜನರನ್ನು ನೇಮಕ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು 18ರಿಂದ 29 ವರ್ಷ ವಯೋಮಿತಿಯವರಾಗಿರಬೇಕು. ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರವಾಸ ಭತ್ಯೆ ಸೇರಿ ಗೌರವಧನವಾಗಿ ತಿಂಗಳಿಗೆ 5000 ರೂ. ನೀಡಲಾಗುವುದು. ಅರ್ಜಿ ಸಲ್ಲಿಸಲು ಫೆಬ್ರವರಿ 25 ಕೊನೆಯ ದಿನ, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ https://nyks.nic.in/nycapp/main.asp ಅಥವಾ ಜಿಲ್ಲಾ ಯುವ ಅಧಿಕಾರಿಗಳು, ನೆಹರು ಯುವ ಕೇಂದ್ರ, ರಜತಾದ್ರಿ, ಜಿಲ್ಲಾಧಿಕಾರಿ ಕಛೇರಿ ಆವರಣ, ಮಣಿಪಾಲ ದೂ. ಸಂಖ್ಯೆ 0820-2574992 ಅನ್ನು ಸಂಪರ್ಕಿಸುವಂತೆ ನೆಹರು ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿ ವಿಲ್ಲ್ಫಡ್ ಡಿಸೋಜ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಜೆಸಿಐ ವ್ಯಕ್ತಿತ್ವ ವಿಕಾಸಕ್ಕೆ ಇರುವ ಆಂದೋಲನ. ಇದರಲ್ಲಿ ಸಕ್ರಿಯವಾಗಿ ಭಾಗವಹಿಸಿದರೆ ಬದುಕಿನಲ್ಲಿ ಯಶಸ್ಸು ಸಾಧಿಸಲು ಸಾಧ್ಯವಿದೆ ಎಂದು ವಲಯಾಧ್ಯಕ್ಷೆ ಸೌಜನ್ಯ ಹೆಗಡೆ ಹೇಳಿದರು. ಅವರು ಗುರುವಾರ ಬೈಂದೂರು ಶ್ರೀ ಸೀತಾರಾಮಚಂದ್ರ ಕಲ್ಯಾಣ ಮಂಟಪದಲ್ಲಿ ಜರುಗಿದ ಜೆಸಿಐ ಬೈಂದೂರು ಸಿಟಿ ಇದರ 2021ನೇ ಸಾಲಿನ ಪದಗ್ರಹಣ ಸಮಾರಂಭದಲ್ಲಿ ಭಾಗವಹಿಸಿ ನೂತನ ಪದಾಧಿಕಾರಿಗಳಿಗೆ ಶುಭಹಾರೈಸಿದರು. ಜೆಸಿಐ ಬೈಂದೂರು ಸಿಟಿಯ ನಿರ್ಗಮಿತ ಅಧ್ಯಕ್ಷೆ ಪ್ರಿಯದರ್ಶಿನಿ ಕಮಲೇಶ್ ಅವರು ನೂತನ ಅಧ್ಯಕ್ಷ ಶ್ರೀಧರ ಆಚಾರ್ಯ ಅವರಿಗೆ ಜೆಸಿಐ ಪದಕ, ದಂಡವನ್ನು ಹಸ್ತಾಂತರಿಸಿದರು. ವಲಯ ಉಪಾಧ್ಯಕ್ಷ ನಾಗೇಶ್ ನಾವಡ, ವಲಯಾಧಿಕಾರಿ ಮಣಿಕಂಠ ಎಸ್. ಜೆಸಿಐ ಕಾರ್ಯದರ್ಶಿ ಸವಿತಾ ದಿನೇಶ್, ಜೆಸಿರೇಟ್ ಅಧ್ಯಕ್ಷೆ ಅನಿತಾ ಆರ್.ಕೆ., ಜೆಜೆಸಿ ಅಧ್ಯಕ್ಷೆ ನಿಖಿತಾ ಗಾಣಿಗ, ಜೆಸಿರೇಟ್ ಪೂರ್ವಾಧ್ಯಕ್ಷೆ ಭಾನುಮತಿ ಬಿ. ಕೆ., ಇದ್ದರು. ನಿಕಟಪೂರ್ವಾಧ್ಯಕ್ಷೆ ಪ್ರಿಯದರ್ಶಿನಿ ಬೆಸ್ಕೂರು ಸ್ವಾಗತಿಸಿದರು. ಗೀತಾ ಬೈಂದೂರು ಜೆಸಿವಾಣಿ ವಾಚಿಸಿದರು. ರಾಘವೇಂದ್ರ ಯಡ್ತರೆ ನೂತನ ಅಧ್ಯಕ್ಷರನ್ನು ಪರಿಚಯಿಸಿದರು. ಎಚ್. ಸುಶಾಂತ್ ಬೈಂದೂರು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕಾಳಾವಾರ ಗ್ರಾಮ ಪಂಚಾಯಿತಿಯ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ವಕ್ವಾಡಿ ಆಶಾಲತಾ ಶೆಟ್ಟಿ, ಉಪಾಧ್ಯಕ್ಷರಾಗಿ ಸಿಪಿಎಂ ಬೆಂಬಲಿತ ಅಭ್ಯರ್ಥಿ ರಾಮಚಂದ್ರ ನಾವಡ ಅವಿರೋಧವಾಗಿ ಆಯ್ಕೆಯಾದರು . ಒಟ್ಟು 17 ಸದಸ್ಯ ಬಲ ಹೊಂದಿರುವ ಕಾಳಾವರ ಗ್ರಾಮ ಪಂಚಾಯತಿಯಲ್ಲಿ 7 ಕಾಂಗ್ರೆಸ್ ಬೆಂಬಲಿತರು, 5 ಬಿಜೆಪಿ ಬೆಂಬಲಿತರು, 4 ಸಿಪಿಎಂ ಬೆಂಬಲಿತರು, 1 ಪಕ್ಷೇತರರು ಆಯ್ಕೆಯಾಗಿದ್ದರು. ಮೀಸಲಾತಿ ಪ್ರಕ್ರಿಯೆಯಲ್ಲಿ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ , ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಸ್ಥಾನಕ್ಕೆ ಮೀಸಲು ನಿಗದಿಯಾಗಿತ್ತು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಹಾರ್ದಳ್ಳಿ ಮಂಡಳ್ಳಿ ಗ್ರಾಮ ಪಂಚಾಯತಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಅಧ್ಯಕ್ಷರಾಗಿ ಜಗನ್ನಾಥ ಶೆಟ್ಟಿ, ಉಪಾಧ್ಯಕ್ಷರಾಗಿ ರೇಖಾ ಮೊಗವೀರ ಅವಿರೋಧವಾಗಿ ಆಯ್ಕೆಯಾದರು. ಒಟ್ಟು 13 ಸದಸ್ಯ ಬಲ ಹೊಂದಿರುವ ಹಾರ್ದಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಕಾಂಗ್ರೇಸ್8 , ಬಿಜೆಪಿ 5 ಬೆಂಬಲಿತ ಸದಸ್ಯರು ಆಯ್ಕೆಯಾಗಿದ್ದರು. ಮೀಸಲಾತಿ ಪ್ರಕಾರ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ, ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಮೀಸಲು ನಿಗದಿಯಾಗಿತ್ತು.

Read More

ಕುಂದಾಪ್ರ ಡಾಟ್ ಕಾಂ ವರದಿ. ಶತಮಾನಗಳ ಹಿಂದೆ ಮೋರ್ಚುಗೀಸರ ಪ್ರಾಬಲ್ಯ ಮುರಿದ ಮತ್ತು ಡಚ್ಚರನ್ನು ಹಿಮ್ಮೆಟ್ಟಿಸಿ ಬಸ್ರೂರು ಪಟ್ಟಣವನ್ನು ಬಂಧಮುಕ್ತಗೊಳಿಸಿದ ಕೀರ್ತಿಯು ಸ್ವಾಭಿಮಾನಿ ರಾಷ್ಟ್ರ ನಿರ್ಮಾಣಕ್ಕೆ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜನಿಗೆ ಸಲ್ಲುತ್ತದೆ. ತನ್ನ ಸಾಮ್ರಾಜ್ಯ ಸ್ಥಾಪನೆಗೂ ಮೊದಲೇ ಪರಕೀಯರ ವಿರುದ್ಧ ಸೆಣಸಾಡಿ ಅಸಮಾನ್ಯ ಸಾಧನೆಗೈದು ನೌಕಾಬಲದ ಶಕ್ತಿ ಪ್ರದರ್ಶಿಸಿದ ಹೆಗ್ಗಳಿಕೆಯೂ ಶಿವಾಜಿ ಮಹಾರಾಜನದ್ದಾಗಿದೆ. ಕುಂದಾಪುರ ತಾಲೂಕಿನ ಬಸ್ರೂರು ಒಂದು ಕಾಲದಲ್ಲಿ ಪ್ರಮುಖ ವ್ಯಾಪಾರ ಪಟ್ಟಣವಾಗಿದೆ. ಅಂದು ಬಸ್ರೂರು ಕೆಳದಿ ರಾಜರ ಅಧೀನದಲ್ಲಿತ್ತು. ಆಗ ಕೇರಳದಿಂದ ಮಹಾ ರಾಷ್ಟ್ರದವರೆಗಿನ ಕಡಲತೀರದಲ್ಲಿ ನಂಬರ್ 1 ವ್ಯಾಪಾರ ಕೇಂದ್ರವಾಗಿತ್ತು. ಇಲ್ಲಿ ವಿದೇಶೀಯರ ವ್ಯಾಪಾರವೂ ಭರದಿಂದ ಸಾಗುತ್ತಿತ್ತು. ಗೋವೆಯಲ್ಲಿ ನೆಲೆಸಿದ್ದ ಫೋರ್ಚುಗೀಸರು ಮತ್ತು ವೆನಗೊರಲಾದಲ್ಲಿ ನೆಲೆಸಿದ್ದ ಡಚ್ಚರು ವ್ಯಾಪಾರವನ್ನು ತಮ್ಮ ವಶಕ್ಕೆ ತೆಗೆದುಕೊಳ್ಳಲು ಪೈಪೋಟಿ ನಡೆಸಿದರು. ಇವರಿಬ್ಬರೂ ಭೂಪ್ರದೇಶಕ್ಕಿಂತ ಹೆಚ್ಚು ಸಮುದ್ರ ವ್ಯಾಪ್ತಿಯಲ್ಲಿ ಮೇಲ್ಗೆ  ಸಾಧಿಸಿದ್ದರು. ಕೆಳದಿ ಅರಸ ಸೋಮಶೇಖರನು ಫೋರ್ಚುಗೀಸರಿಗೆ ವ್ಯಾಪಾರ ಮಾಡಲು ಅವಕಾಶ ಕೊಟ್ಟಿದ್ದ. ಇದರಿಂದ ಕುಪಿತರಾದ ಡಚ್ಚರು ಕೆಳದಿ ಅರಸರಿಗೆ ಆಗಾಗ್ಗೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕನ್ನಡ ಮಾಧ್ಯಮ ಶಾಲೆಯನ್ನು ನಡೆಸುವುದು ಮತ್ತು ಸುವರ್ಣ ಸಂಭ್ರಮ ಆಚರಿಸಿ ಐವತ್ತು ವರ್ಷಗಳ ಇತಿಹಾಸದಲ್ಲಿ ದಾಖಲಿಸುವುದು ಸುಲಭದ ಮಾತಲ್ಲ. ಸ್ಮರಣ ಸಂಚಿಕೆ ಸದಾ ನೆನಪಿನಲ್ಲಿ ಉಳಿಯುವಂತೆ ಮಾಡಿದ ಶಿಕ್ಷಕರ ಕಾರ್ಯ ಶ್ಲಾಘನೀಯ ಎಂದು ಕಸಾಪ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಹೇಳಿದರು. ಅವರು ಗುರುವಾರ ಇಲ್ಲಿನ ರತ್ತೂಬಾಯಿ ಜನತಾ ಪ್ರೌಢಶಾಲೆಯ ಸುವರ್ಣ ಸೌರಭ ಸ್ಮರಣ ಸಂಚಿಕೆ ಬಿಡುಗಡೆಗೊಳಿಸಿ ಮಾತನಾಡಿ ಸ್ವಕಲಿಕೆ, ವೇಗದ ಕಲಿಕೆ, ಸಾಮರ್ಥ್ಯ ಆಧಾರದ ಕಲಿಕೆ ಮೂಲಕ ಪರಿಣಾಮಕಾರಿ ಶಿಕ್ಷಣ ಹಾಗೂ ಮಕ್ಕಳು ಸಂಪೂರ್ಣ ತೊಡಗಿಸಿಕೊಳ್ಳುವಿಕೆ ಸಾಧ್ಯವಿದೆ ಎಂದ ಅವರು ಕರಾವಳಿಯ ಜಿಲ್ಲೆಗಳ ಶಾಲೆಯ ಶಿಕ್ಷಕರ ಬದ್ಧತೆ ದೊಡ್ಡದಿರುವುದರಿಂದಲೇ ಜಿಲ್ಲೆ ಶಿಕ್ಷಣದಲ್ಲಿ ಮುಂಚೂಣಿಯಲ್ಲಿದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಅಧ್ಯಕ್ಷ , ಮಾಜಿ ಶಾಸಕರಾದ ಕೆ. ಗೋಪಾಲ ಪೂಜಾರಿ ಅವರು ಮಾತನಾಡಿ ಶಿಕ್ಷಣದ ಗುಣಮಟ್ಟದಲ್ಲಿ ಯಾವುದೇ ರಾಜಿಯಿಲ್ಲದೇ ಉತ್ತಮ ಫಲಿತಾಂಶ ನೀಡುವಲ್ಲಿ ರತ್ತೂಬಾಯಿ ಜನತಾ ಪ್ರೌಢಶಾಲೆ ಸಫಲವಾಗಿದೆ ಎಂದ ಅವರು ಸುವರ್ಣ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ನಾವುಂದ ಗ್ರಾಮ ಪಂಚಾಯತಿಯ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನದ ಆಯ್ಕೆ ಪ್ರಕ್ರಿಯೆ ಗುರುವಾರ ನಡೆಯಿತು. ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಜಾನಕಿ ಮೊಗವೀರ, ಉಪಾಧ್ಯಕ್ಷರಾಗಿ ನಿರ್ಮಲಾ ಶೆಟ್ಟಿ ಆಯ್ಕೆಯಾಗಿದ್ದಾರೆ. ಒಟ್ಟು 15 ಸ್ಥಾನಗಳ ಪೈಕಿ 12 ಕಾಂಗ್ರೆಸ್, 3 ಬಿಜೆಪಿ ಬೆಂಬಲಿತ ಸದಸ್ಯರು ಆಯ್ಕೆಯಾಗಿದ್ದರು. ಮೀಸಲಾತಿ ಪ್ರಕ್ರಿಯೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗ ಮಹಿಳೆಗೆ ಮೀಸಲು ನಿಗದಿಯಾಗಿತ್ತು.

Read More