Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಮ್ಮ ಕುಂದಾಪ್ರ ಕನ್ನಡ ಬಳಗದ ವತಿಯಿಂದ ಕಾಲಿನ ಕ್ಯಾನ್ಸರ್ ನಿಂದ ಬಳಲುತಿದ್ದ ಪ್ರತಿಭಾವಂತ ವಿದ್ಯಾರ್ಥಿ ಸುಮಿತ್ ವೆಂಕಟರಮಣ ಮೊಗೇರ ತೆಂಗಿನಗುಂಡಿ ಅವರಿಗೆ 60 ಸಾವಿರ ರುಪಾಯಿ ಚೆಕ್ ಹಸ್ತಾಂತರಿಸಲಾಯಿತು. ಈ ಸಂಧರ್ಭದಲ್ಲಿ ನಮ್ಮ ಕುಂದಾಪ್ರ ಕನ್ನಡ ಬಳಗದ ಅಧ್ಯಕ್ಷ ಸಾದನ್ ದಾಸ್, ಸದಸ್ಯರಾದ ವಾಸುದೇವ ದೇವಾಡಿಗ, ರತನ್ ನಾವುಂದ, ಅರುಣ್ ಕುಮಾರ್ ಶಿರೂರು ಹಾಗೂ ವಿದ್ಯಾರ್ಥಿಯ ಪೋಷಕರು ಹಾಜರಿದ್ದರು

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಜೆಸಿಐ ಉಪ್ಪುಂದದ 19 ನೇ ವರ್ಷದ ಪದಗ್ರಹಣ ಸಮಾರಂಭ ಉಪ್ಪುಂದ ಮಾತೃಶ್ರೀ ಸಭಾಭವನದಲ್ಲಿ ನಡೆಯಿತು. ನೂತನ ಅಧ್ಯಕ್ಷರಾಗಿ ಪ್ರದೀಪ್ ಶೆಟ್ಟಿ ಕಾರಿಕಟ್ಟೆ, ಕಾರ್ಯದರ್ಶಿಯಾಗಿ ಪುರಂದರ್ ಉಪ್ಪುಂದ, ಲೇಡಿ ಅಧ್ಯಕ್ಷರಾಗಿ ರೇಖಾ, ಜ್ಯೂನಿಯರ್ ಜೇಸಿ ಅಧ್ಯಕ್ಷರಾಗಿ ನಿಷಾ ಶೆಟ್ಟಿ ಮತ್ತು ಅವರ ತಂಡಗಳು ಪದಗ್ರಹಣ ಸ್ವೀಕರಿಸಿದರು. ಮುಖ್ಯ ಅತಿಥಿಗಳಾಗಿ ಜೆಸಿಐ ಭಾರತದ ಪೂರ್ವ ರಾಷ್ಟ್ರೀಯ ಕಾನೂನು ಸಲಹೆಗಾರರಾದ ಶ್ರೀಧರ್ ಪಿ ಎಸ್., ಜನ ಸೇವಾ ಟ್ರಸ್ಟ್ ಪ್ರವರ್ತಕರಾದ ವಸಂತ ಗಿಳಿಯಾರ್, ರೆಡ್ ಕ್ರಾಸ್ ಸೊಸೈಟಿಯ ಅಧ್ಯಕ್ಷರಾದ ಜಯಕರ ಶೆಟ್ಟಿ ಉಪಸ್ಥಿತರಿದ್ದರು. ಈ ವೇಳೆ ಇಬ್ಬರು ಫಲಾನುಭವಿಗಳಿಗೆ ಶ್ರವಣ ಸಾಧನ ಹಾಗೂ ವ್ಹೀಲ್ ಚೇರ್ ಹಸ್ತಾಂತರಿಸಲಾಯಿತು. ಸಭೆಯ ಪೂರ್ವಾರ್ಧದ ಅಧ್ಯಕ್ಷತೆ ವಹಿಸಿದ್ದ ನಾಗರಾಜ್ ಪೂಜಾರಿ ವರದಿ ವಾಚಿಸಿ, ದಿನದರ್ಶಿಕೆ ಬಿಡುಗಡೆಗೊಳಿಸಿ ಎಲ್ಲಾ ಸದಸ್ಯರಿಗೆ ನೆನಪಿನ ಕಾಣಿಕೆ ನೀಡಿದರು. ನೂತನ ಅಧ್ಯಕ್ಷರು ರೆಡ್ ಕ್ರಾಸ್ ಸೊಸೈಟಿಯ ಸಹಯೋಗದೊಂದಿಗೆ ಅತ್ಯಾಧುನಿಕ ಶ್ರವಣ ಸಾಧನ ಮತ್ತು ವೀಲ್ ಚೇರನ್ನು ವಿಶೇಷ ಚೇತನರಿಗೆ ವಿತರಿಸಿದರು.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಕನ್ನಡ ಭಾಷೆಯ ಬಗ್ಗೆ ಹೊರಗಿನವರಿಗೆ ಕುತೂಹಲ ಇತ್ತು. ಆದರೆ ಮಹತ್ವ ನೀಡುತ್ತಿರಲಿಲ್ಲ. ಅರ್ಥ ಮಾಡಿಕೊಳ್ಳುವ ಪ್ರಯತ್ನವೂ ಮಾಡಿಕೊಳ್ಳುತ್ತಿರಲಿಲ್ಲ. ಆದರೆ ರವಿ ಬಸ್ರೂರು ಎಂಬ ಯುವಕ ತನ್ನ ಕುಂದಾಪ್ರ ಕನ್ನಡಕ್ಕೆ ಮಹತ್ವ ಕೊಟ್ಟು ಹಾಡು, ಚಲನಚಿತ್ರ ನಿರ್ಮಾಣ ಮಾಡುವುದರೊಂದಿಗೆ ಕುಂದಾಪ್ರ ಕನ್ನಡ ಭಾಷೆಗೆ ಈ ಮಣ್ಣಿನ ಸಂಸ್ಕೃತಿಗೆ ಶೋಭೆ ತಂದುಕೊಟ್ಟಿರುವುದು ಖುಷಿಯ ಸಂಗತಿ ಎಂದು ಕರ್ನಾಟಕ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಇಲಾಖೆಯ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಕುಂದಾಪುರ ಭಂಡಾರ್‌ಕಾರ‍್ಸ್ ಕಾಲೇಜಿನ ಆರ್.ಎನ್. ಶೆಟ್ಟಿ ಸಭಾಂಗಣದಲ್ಲಿ ಕುಂದಪ್ರಭ ಸಂಸ್ಥೆ ವತಿಯಿಂದ ನಡೆದ ಕೋ.ಮ. ಕಾರಂತ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿ, ಕೋ.ಮ.ಕಾರಂತ ಪ್ರಶಸ್ತಿ ಸ್ವೀಕರಿಸಿದ ಅತಿ ಕಿರಿಯವರಾದ ರವಿ ಬಸ್ರೂರು ತಮ್ಮ ಜೀವನದಲ್ಲಿ ಇನ್ನಷ್ಟು ಸಾಧನೆಗಳ ಮೆಟ್ಟಲು ಏರುವಲ್ಲಿ ಈ ಪ್ರಶಸ್ತಿ ಪ್ರೇರಣೆ ನೀಡಲಿ. ಕೋ.ಮ. ಕಾರಂತರೆಂಬ ಶ್ರೇಷ್ಠ ಮಹನೀಯರ ಸ್ಮರಣೆ ಈ ಮೂಲಕ ಮಾಡಲು ಸಾಧ್ಯವಾಗಿರುವುದು ಸಂತೋಷದ ವಿಚಾರ…

Read More

ಸಂದರ್ಶನಕ್ಕೆ ಹೋಗೋದು ಅಂದರೆ ಸುಲಭವಲ್ಲ. ಅದಕ್ಕೆ ಪೂರ್ಣ ಪ್ರಮಾಣದ ತಯಾರಿ ನಡೆದಿರಬೇಕು. ಆದರೆ ಆ ಬಗ್ಗೆ ಅತಿಯಾದ ಆತ್ಮವಿಶ್ವಾಸ ಇದ್ದರೆ ಮಾತ್ರ ಒಳ್ಳೇದಲ್ಲ. ನನಗೆಲ್ಲಾ ಗೊತ್ತಿದೆ, ಏನೇ ಪ್ರಶ್ನೆಗೆ ಉತ್ತರ ನೀಡಬಹುದು ಎಂದು ವಿಶ್ವಾಸ ಇದ್ದರೆ ನೀವು ಎಡವಬಹುದು. ಇದರಿಂದ ಉದ್ಯೋಗ ಕಳೆದುಕೊಳ್ಳುವ ಸಾಧ್ಯತೆ ಇದೆ. ಸಂದರ್ಶನಕ್ಕೆ ಹೊರಡುವ ಸಮಯದಲ್ಲಿ ಹೇಗೆ ಸಂದರ್ಶನ ಎದುರಿಸುವುದು, ಹೇಗೆ ಪ್ರಶ್ನೆಗಳನ್ನು ಅರ್ಥ ಮಾಡಿಕೊಂಡು ಅದಕ್ಕೆ ಸರಿಯಾಗಿ ಉತ್ತರ ನೀಡುವುದು ಹೀಗೆ ಹಲವು ವಿಷಯಗಳನ್ನು ನೆನಪಿನಲ್ಲಿಟ್ಟುಕೊಳ್ಳಬೇಕು. ಇಷ್ಟು ಮಾತ್ರವಲ್ಲ ಅದಕ್ಕೂ ಮಿಗಿಲಾಗಿ ಇನ್ನಷ್ಟು ವಿಷಯಗಳನ್ನು ನೆನಪಿನಲ್ಲಿಟ್ಟುಕೊಳ್ಳಬೇಕು. ಸಂದರ್ಶನಕ್ಕೆ ತಡವಾಗಿ ಹೊರಡೋದು:ಸಂದರ್ಶನಕ್ಕೆ ಯಾವತ್ತೂ ತಡವಾಗಿ ಹೋಗಲೇಬೇಡಿ. ಅರ್ಧ ಗಂಟೆ ಮೊದಲೇ ಅಲ್ಲಿ ಇದ್ದರೆ ಉತ್ತಮ. ಸಮಯದ ಮಹತ್ವ ಕೂಡ ಇಂಟರ್ವ್ಯೂ ಸಮಯದಲ್ಲಿ ಮುಖ್ಯ ನಡವಳಿಕೆ:ಹೌದು ನೀವು ಮಾತನಾಡಲು ಬಳಕೆ ಮಾಡುವ ಪದಗಳು ಗೌರವಯುತವಾಗಿರಲಿ. ಕಠೋರವಾಗಿ ಅಥವಾ ಅತ್ಯಂತ ಸಲುಗೆಯಿಂದ ಮಾತನಾಡಬೇಡಿ. ಮೊಬೈಲ್ ಬಳಸಬೇಡಿ:ಇಂಟರ್ವ್ಯೂ ಭವಿಷ್ಯವನ್ನು ರೂಪಿಸುತ್ತದೆ. ಆದುದರಿಂದ ಇಂಟರ್ವ್ಯೂಗೆ ಹೋಗುವ ಮುನ್ನ ಮೊಬೈಲ್ ಸ್ವಿಚ್ಆಫ್ ಅಥವಾ ಸೈಲೆಂಟ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬೈಂದೂರು ತಾಲೂಕಿನಲ್ಲಿ ಖಾಯಂ ಆಗಿ ಆರಂಭಗೊಂಡ ಸಿವಿಲ್ ಜಡ್ಜ್ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯದ ಉದ್ಘಾಟನಾ ಸಮಾರಂಭವು ಉಡುಪಿ ಜಿಲ್ಲಾ ನ್ಯಾಯಾಂಗ, ಲೋಕೋಪಯೋಗಿ ಇಲಾಖೆ ಮತ್ತು ಬೈಂದೂರು ವಕೀಲ ಸಂಘದ ಸಂಯುಕ್ತ ಆಶ್ರಯದಲ್ಲಿ ಉಡುಪಿ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಜರುಗಿತು. ಬೈಂದೂರು ನೂತನ ನ್ಯಾಯಾಲಯವನ್ನು ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಎಸ್. ಅಬ್ದುಲ್ ನಜೀರ್ ಅವರು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಎಸ್. ಅಬ್ದುಲ್ ನಜೀರ್, ಪ್ರಸನ್ನ ಬಿ. ವರಾಲೆ ಅವರನ್ನು ಸನ್ಮಾನಿಸಲಾಯಿತು. ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಗೌರವಾನ್ವಿತ ನ್ಯಾಯಮೂರ್ತಿ ಎಸ್. ಜ. ಪಂಡಿತ್, ಕರ್ನಾಟಕ ಉಚ್ಚ ನ್ಯಾಯಾಲಯ ಹಾಗೂ ಉಡುಪಿ ಜಿಲ್ಲಾ ಆಡಳಿತಾತ್ಮಕ ನ್ಯಾಯಮೂರ್ತಿಗಳಾದ ಪ್ರದೀಪ್ ಸಿಂಗ್ ಯೆರೂರ್, ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಾದ ವಿಶ್ವಜಿತ್ ಶೆಟ್ಟಿ, ನ್ಯಾಯಮೂರ್ತಿ ಸಿ.ಎಂ. ಜೋಶಿ, ಹಾಗೂ ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ವಿಲೇಖನಾಧಿಕಾರಿ ಮುರಳಿಧರ್ ಪೈ.ಬಿ. ಲೋಕೋಪಯೋಗಿ ಇಲಾಖೆ ಕೇಂದ್ರ ವಲಯ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಾಥ ಪಂಥದ ಸಂಪ್ರದಾಯದಂತೆ ಹಳಗೇರಿಯ ಜೋಗಿ ಸಮುದಾಯದಿಂದ ಪೂಜಿಸಲ್ಪಡುತ್ತಿರುವ ಅಪರೂಪದ ದೇಗುಲಗಳಲ್ಲಿ ತೆಂಕಬೆಟ್ಟು ಶ್ರೀ ಕಾಲಭೈರವ ದೇವಸ್ಥಾನವೂ ಒಂದಾಗಿದೆ. ದೇವಸ್ಥಾನ ನವೀಕರಣಗೊಳ್ಳುವುದರೊಂದಿಗೆ ದೈನಂದಿನ ಧಾರ್ಮಿಕ ವಿಧಿ ವಿಧಾನಗಳನ್ನು ಅಚ್ಚುಕಟ್ಟಾಗಿ ನಡೆಯುವಂತೆ ನೋಡಿಕೊಳ್ಳುವುದು ಭಕ್ತವರ್ಗದ ಕರ್ತವ್ಯವಾಗಿದೆ ಎಂದು ಯಡಮೊಗೆಯ ಶ್ರೀ ಕ್ಷೇತ್ರ ಸಿದ್ಧಪೀಠ ಕೊಡಚಾದ್ರಿ ಹಲವರಿ ಮಠದ ಪೀಠಾಧ್ಯಕ್ಷರಾದ ಶ್ರೀ ಫೀರ್ ಯೋಗಿ ಜಗದೀಶನಾಥ್ಜೀ ಹೇಳಿದರು. ಯಡಮೋಗೆಯ ಶ್ರೀ ಕ್ಷೇತ್ರ ಸಿದ್ಧಪೀಠ ಕೊಡಚಾದ್ರಿ ಹಲವರಿ ಮಠದ ಆವರಣದಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ತೆಂಕಬೆಟ್ಟುವಿನ ಶ್ರೀ ಕಾಲಭೈರವ ದೇವಸ್ಥಾನದಲ್ಲಿ ಜನವರಿ 26ರಿಂದ 30ರ ತನಕ ಜರುಗಲಿರುವ ‘ನವೀಕೃತ ಶಿಲಾದೇಗುಲ ಲೋಕಾರ್ಪಣೆ – ಪುನರ್ಪ್ರತಿಷ್ಠೆ, ಅಷ್ಟಬಂಧ ಬ್ರಹ್ಮಕಲಶೋತ್ಸವ’ ಮೊದಲಾದ ಧಾರ್ಮಿಕ – ಸಾಂಸ್ಕೃತಿಕ ಕಾರ್ಯಕ್ರಮಗಳ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಆಶೀರ್ವದಿಸಿದ ಸ್ವಾಮೀಜಿಯವರು, ಬಳಿಕ ಮಾತನಾಡಿ, ತೆಂಕಬೆಟ್ಟುವಿನ ದೇವಾಲಯ ನಿರ್ಮಾಣಕ್ಕೆ ಸಾಕಷ್ಟು ಶ್ರಮವಹಿಸಿರುವ ಬಗ್ಗೆ ತಿಳಿದಿದ್ದು, ದೇವಸ್ಥಾನ ಉತ್ತಮವಾಗಿ ನಿರ್ಮಾಣಗೊಂಡಿದೆ. ಶ್ರೀ ಕಾಲಭೈರವ ದೇವರ ಹಾಗೂ ಗುರೂಜಿಯ ಆಶೀರ್ವಾದ…

Read More

ಕುಂದಾಪುರ ತಾಲೂಕು ಕೃಷಿ ಉತ್ಪನ್ನ ಸಹಕಾರ ಮಾರಾಟ ಸಂಘ ಮಿತ ಕುಂದಾಪುರ – ವಜ್ರಮಹೋತ್ಸವ ಮತ್ತು ಸಂಘದ ಸ್ಥಾಪಕರಾದ ಯಡ್ತರೆ ಮಂಜಯ್ಯ ಶೆಟ್ಟಿ ವಿಚಾರಗೋಷ್ಠಿ

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಡಿ.28: ಮೀನುಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮೀನುಗಾರರ ಮಕ್ಕಳ ಹೆಚ್ಚಿನ ಹಾಗೂ ಉನ್ನತ ಶಿಕ್ಷಣ ಪ್ರೋತ್ಸಾಹಿಸಲು ಹೊಸ ಶಿಷ್ಯ ವೇತನ ಯೋಜನೆಯನ್ನು ಮಾನ್ಯ ಮುಖ್ಯ ಮಂತ್ರಿಗಳು ಘೋಷಿಸಿದ್ದು, ಈ ಯೋಜನೆಯ ಸೌಲಭ್ಯ ಪಡೆಯಲು ಮೀನುಗಾರರ ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದೆ. 8, 9, 10, ಪಿ.ಯು.ಸಿ., ಸ್ನಾತಕ ಹಾಗೂ ಸ್ನಾತಕೋತ್ತರ ಪದವಿಯಲ್ಲಿ ವ್ಯಾಸಾಂಗ ಮಾಡುತ್ತಿರುವ ಜಿಲ್ಲೆಯ ಮೀನುಗಾರರ ಸಹಕಾರಿ ಸಂಘದ ಸದಸ್ಯರು ಹಾಗೂ ಮೀನು ಕೃಷಿಕರ ಮಕ್ಕಳು ತಾಲೂಕು ಮೀನುಗಾರಿಕೆ ಸಹಾಯಕ ನಿರ್ದೇಶಕರು ಅಥವಾ ಸಂಬಂಧಪಟ್ಟ ಮೀನುಗಾರರ ಸಹಕಾರಿ ಸಂಘಗಳಿಂದ ಮಾಹಿತಿ ಪಡೆದು, ಶೀಘ್ರವಾಗಿ ಪ್ರೂಟ್ಸ್ ಐಡಿಯನ್ನು ಸೃಜನೆ ಮಾಡಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ತಾಲೂಕು ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಡಿ.28: ಜಿಲ್ಲೆಯ ಸಾರ್ವಜನಿಕರು ಕೋವಿಡ್ ನಿಯಂತ್ರಣಕ್ಕೆ ಅಗತ್ಯವಿರುವ ಮುಂಜಾಗ್ರತಾ ಕ್ರಮಗಳನ್ನು ಪಾಲಿಸುವುದರ ಜೊತೆಗೆ ಕೋವಿಡ್ ಲಸಿಕೆ ಬೂಸ್ಟರ್ ಡೋಸ್ ತಪ್ಪದೇ ಪಡೆಯಬೇಕೆಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಸಲಹೆ ನೀಡಿದರು. ಅವರು ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಜಿಲ್ಲಾ ಕೋವಿಡ್ ಮುನ್ನೆಚ್ಚರಿಕೆ ಮತ್ತು ತಾಂತ್ರಿಕ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜನಸಾಮಾನ್ಯರು ಕೋವಿಡ್ ಸಾಂಕ್ರಾಮಿಕ ರೋಗದ ಬಗ್ಗೆ ಆತಂಕ ಪಡದೇ ಸರಳ ಮುನ್ನೆಚ್ಚರಿಕಾ ಕ್ರಮಗಳಾದ ಸಾಮಾಜಿಕ ಅಂತರ ಕಾಪಾಡುವುದು, ಸ್ವಚ್ಛತೆಗೆ ಆದ್ಯತೆ ನೀಡುವುದು, ಮಾಸ್ಕ್ಗಳನ್ನು ಧರಿಸುವುದು ಸೇರಿದಂತೆ ಮತ್ತಿತರ ಕ್ರಮಗಳನ್ನು ತಪ್ಪದೇ ಪಾಲಿಸಬೇಕು ಈಗಾಗಲೇ 2 ಡೋಸ್ ಕೋವಿಡ್ ಲಸಿಕೆ ಪಡೆದಿರುವವರು ಬೂಸ್ಟರ್ ಡೋಸ್ ಅನ್ನು ಪಡೆಯಬೇಕು ಎಂದರು. ನಮ್ಮ ನೆರೆಯ ದೇಶಗಳಲ್ಲಿ ಕೋವಿಡ್ ಪ್ರಕರಣಗಳು ಮಿತಿಮೀರಿದ್ದು, ನಮ್ಮ ದೇಶದಲ್ಲಿಯೂ ಹರಡುವ ಸಾಧ್ಯತೆ ಇರುವ ಹಿನ್ನಲೆ, ಅಗತ್ಯ ಕೋವಿಡ್ ನಿಯಂತ್ರಣ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವುದು ಅತ್ಯಗತ್ಯವಾಗಿದ್ದು, ಸರ್ಕಾರ ಮಾರ್ಗಸೂಚಿಗಳನ್ನು ಸಹ ಹೊರಡಿಸಿದ್ದು, ಅವುಗಳನ್ನು ಎಲ್ಲರೂ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನಲ್ಲಿ ಪ್ರಸ್ತುತ ವಾರದ ಎರಡು ದಿನಗಳ ಸಂಚಾರಿ ನ್ಯಾಯಾಲಯದ ಬದಲಿಗೆ ಖಾಯಂ ಆಗಿ ಸಿವಿಲ್ ನ್ಯಾಯಾಧೀಶರು & ಜೆ.ಎಂ.ಎಫ್.ಸಿ ನ್ಯಾಯಾಲಯ ಕಾರ್ಯಾಚರಿಸಲಿದೆ. ರಾಜ್ಯ ಉಚ್ಛ ನ್ಯಾಯಾಲಯದ ರಿಜಿಸ್ಟಾರ್ ಜನರಲ್ ಪ್ರಸ್ತಾವನೆಗೆ ಡಿ.28ರಂದು ಸರಕಾರದ ಮಂಜೂರಾತಿ ದೊರೆತಿದೆ. ಕಾರ್ಕಳದ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು & ಜೆ.ಎಂ.ಎಫ್‌ಸಿ ನ್ಯಾಯಾಲಯವನ್ನು ಹಾಲಿ ಇರುವ ಹುದ್ದೆಗಳೊಂದಿಗೆ ಬೈಂದೂರಿಗೆ ಸ್ಥಳಾಂತರಿಸಿ, ಸಿವಿಲ್ ನ್ಯಾಯಾಧೀಶರು & ಜೆ.ಎಂ.ಎಫ್.ಸಿ ನ್ಯಾಯಾಲಯ ಬೈಂದೂರು, ಉಡುಪಿ ಎಂದು ಮರುಪದನಾಮೀಕರಣಗೊಳಿಸಲು ಸೂಚಿಸಲಾಗಿದೆ. ಜನವರಿ ಮೊದಲ ವಾರದಿಂದಲೇ ಖಾಯಂ ನ್ಯಾಯಾಲಯ ಆರಂಭಗೊಳ್ಳುವ ಸಾಧ್ಯತೆ ಇದೆ. ಇದನ್ನೂ ಓದಿ: ► ಬೈಂದೂರು ಸಂಚಾರಿ ಸಿವಿಲ್ ಜಡ್ಜ್ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯ ಉದ್ಘಾಟನೆ – https://kundapraa.com/?p=57565 . ಬೈಂದೂರು ತಾಲೂಕಿಗೆ ಆರಂಭದಲ್ಲಿ ಸಂಚಾರಿ ನ್ಯಾಯಾಲಯ ಹಾಗೂ ಇದೀಗ ಖಾಯಂ ನ್ಯಾಯಾಲಯವನ್ನು ತರವಲ್ಲಿ ವಿಶೇಷ ಮುತುವರ್ಜಿ ವಹಿಸಿದ್ದ ಸಂಸದ ಬಿ. ವೈ. ರಾಘವೇಂದ್ರ ಹಾಗೂ ಸಹಕರಿಸಿದ ಸಿಎಂ ಕಛೇರಿ, ಉಡುಪಿ ನ್ಯಾಯಾಂಗ ಇಲಾಖೆ, ರಾಜ್ಯ ಕಾನೂನು…

Read More