Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ/ಬೈಂದೂರು: ಕರೋನಾ ವೈರಸ್ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕರೆ ನೀಡಿದ್ದ ಜನತಾ ಕರ್ಪ್ಯೂಗೆ ಕುಂದಾಪುರ ಹಾಗೂ ಬೈಂದೂರು ತಾಲೂಕಿನಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಉಭಯ ತಾಲೂಕುಗಳಲ್ಲಿ ಜನಜೀವನ ಸಂಪೂರ್ಣ ಸ್ಥಭ್ತವಾಗಿತ್ತು. ಜನರು ಮನೆಯಲ್ಲಿಯೇ ಉಳಿದು ಸ್ವಯಂಪ್ರೇರಣೆಯಿಂದ ತಮ್ಮ ಬೆಂಬಲ ಸೂಚಿಸಿದರು. ಬಿಕೋ ಎನ್ನುತ್ತಿದ್ದ ಅಂಗಡಿ ಮುಂಗಟ್ಟು, ಬಸ್ ನಿಲ್ದಾಣ: ಸದಾ ಜನರಿಂದ ಗಿಜುಗುಡುತ್ತಿದ್ದ ಕುಂದಾಪುರ ನಗರದ ಅಂಗಡಿ ಮುಂಗಟ್ಟುಗಳು, ಬಸ್ ನಿಲ್ದಾಣಗಳು ಜನರಿಲ್ಲದೇ ಬಿಕೋ ಎನ್ನುತ್ತಿದ್ದವು. ರಾಷ್ಟ್ರೀಯ ಹೆದ್ದಾರಿ- 66 ಸೇರಿದಂತೆ ಉಳಿದೆಲ್ಲಾ ರಸ್ತೆಗಳಲ್ಲಿಯೂ ವಾಹನ ಸಂಚಾರ ಅತಿ ವಿರಳವಾಗಿತ್ತು. ಸರಕಾರಿ ವಾಹನಗಳು, ಅಂಬುಲೆನ್ಸ್, ಅಲ್ಲೊಂದು ಇಲ್ಲೊಂದು ಎಂಬಂತೆ ಖಾಸಗಿ ವಾಹನಗಳು ಮಾತ್ರವೇ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವುದು ಕಂಡುಬಂತು. ಬೈಂದೂರು ಪಟ್ಟಣ ಹಾಗೂ ಗ್ರಾಮೀಣ ಭಾಗಗಳಲ್ಲಿಯೂ ಪರಿಸ್ಥಿತಿ ಭಿನ್ನವಾಗಿರಲಿಲ್ಲ. ಕುಂದಾಪ್ರ ಡಾಟ್ ಕಾಂ ವರದಿ. ಮುಚ್ಚಿದ ಚರ್ಚು, ದೇವಾಲಯ, ಮಸೀದಿ: ಕರೋನಾ ವೈರಸ್ ಹರಡುವುದನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಸರಕಾರದ ಆದೇಶವನ್ನು ಪಾಲಿಸುತ್ತಿರುವ ಶ್ರದ್ಧಾಕೇಂದ್ರಗಳು,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಪಾಲುದಾರಿಕೆಯಲ್ಲಿ ಮೀನು ಮಾರಾಟ ವ್ಯವಹಾರ ನಡೆಸುತ್ತಿದ್ದ ಉದ್ಯಮಿಯೋರ್ವರ ಕೊಲೆಗೆ ಯತ್ನಿಸಿದ ನಾಲ್ವರು ಆರೋಪಿಗಳನ್ನು ಕುಂದಾಪುರ ಪೊಲೀಸರ ತಂಡ ತ್ವರಿತ ಕಾರ್ಯಾಚರಣೆ ನಡೆಸಿ ಬಂಧಿಸಿದ್ದು, ಆರೋಪಿಗಳಿಂದ ಮಾರಕಾಯುಧ ಹಾಗೂ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತರನ್ನು ಮಹಾರಾಷ್ಟ್ರ ರತ್ನಗಿರಿ ಮೂಲದ ದಾನೀಶ್ ಪಾಟೀಲ್ (34) ಹಾಗೂ ಆತನ ಸಹಚರರಾದ ಆಸೀಮ್ ಖಾಜಿ (39, ಮುಕದ್ದರ್ ಜಮಾದರ್ (34), ಪ್ರಸಾದ್ (47) ಎಂದು ಗುರುತಿಸಲಾಗಿದೆ. ಘಟನೆಯ ವಿವರ: ಹಂಗಳೂರಿನ ಫ್ಲ್ಯಾಟ್ ಒಂದರಲ್ಲಿ ವಾಸವಿರುವ ಮರವಂತೆಯ ಮೊಹಮ್ಮದ್ ಶಾಕೀರ್ ಎಂಬುವವರು ಸುಮಾರು ಎರಡು ವರ್ಷಗಳಿಂದ ಮಹಾರಾಷ್ಟ್ರ ರತ್ನಗಿರಿಯ ದಾನೀಶ್ ಪಾಟೀಲ್ ಎಂಬುವವರೊಂದಿಗೆ ಮೀನು ಖರೀದಿ ವ್ಯವಹಾರ ನಡೆಸುತ್ತಿದ್ದರು. ಹಣದ ಲೆಕ್ಕಾಚಾರ ಸರಿಯಾಗಿದ್ದಾಗ್ಯೂ ದಾನೀಶ್ ಪಾಟೀಲ್ ಎಂಬಾತ, ಶಾಕೀರ್ ಹಾಗೂ ಅವರ ತಂದೆಗೆ ಆಗಾಗ್ಗೆ ಕರೆ ಮಾಡಿ ನೀವು 50ಲಕ್ಷ ರೂ. ಕೊಡುವುದು ಬಾಕಿ ಇದೆ. ಅದನ್ನು ಕೊಡುವಂತೆ ಬೆದರಿಕೆ ಹಾಕುತ್ತಿದ್ದರು. ಕುಂದಾಪ್ರ ಡಾಟ್ ಕಾಂ ಸುದ್ದಿ. ರತ್ನಗಿರಿಯಿಂದ ಕುಂದಾಪುರಕ್ಕೆ ಬಂದು ಲಾಡ್ಜ್ ಒಂದರಲ್ಲಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಗಂಗೊಳ್ಳಿ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಮತ್ತು ಗಂಗೊಳ್ಳಿ ಗ್ರಾಮ ಪಂಚಾಯತ್ ಆಶ್ರಯದಲ್ಲಿ ವಿಶೇಷ ಚೇತನರ ವಿಶೇಷ ಗ್ರಾಮಸಭೆ, ಯುಡಿಐಡಿ ಕಾರ್ಡ್ ವಿತರಣೆ ಹಾಗೂ 2016ರ ಕಾಯ್ದೆ ಕುರಿತ ಕಾರ್ಯಾಗಾರ ಗಂಗೊಳ್ಳಿಯ ಶ್ರೀ ವೀರೇಶ ಮಾಂಗಲ್ಯ ಮಂದಿರದಲ್ಲಿ ಮಂಗಳವಾರ ಜರಗಿತು. ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀನಿವಾಸ ಖಾರ್ವಿ ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿದ್ದ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಬೆಂಗಳೂರು ಡಿಎನ್‌ಎ ರೂಪಲಕ್ಷ್ಮೀ ಅವರು 2016ರ ಕಾಯ್ದೆ ಕುರಿತು ಹಾಗೂ ಸರಕಾರದಿಂದ ವಿಕಲಚೇತನರಿಗೆ ದೊರೆಯುವ ವಿವಿಧ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು. ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ತಾಲೂಕು ಸಂಯೋಜಕ ಮಂಜುನಾಥ ಹೆಬ್ಬಾರ್ ಮಾಹಿತಿ ನೀಡಿದರು. ಯುಡಿಐಡಿ ಕಾರ್ಡ್ ವಿತರಣೆ ಮಾಡಲಾಯಿತು. ಗ್ರಾಪಂ ಉಪಾಧ್ಯಕ್ಷೆ ಪ್ರೇಮಾ ಸಿ.ಪೂಜಾರಿ, ಗ್ರಾಪಂ ಸದಸ್ಯರಾದ ಬಿ.ಗಣೇಶ ಶೆಣೈ, ದೇವು ಸಿಪಾಯಿ, ಶಾಂತಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಗಂಗೊಳ್ಳಿ : ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ಅಧ್ಯಕ್ಷ ಯಶಪಾಲ್ ಸುವರ್ಣ ಅವರು ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘದ ಗಂಗೊಳ್ಳಿಯ ಪ್ರಧಾನ ಕಛೇರಿಗೆ ಮಂಗಳವಾರ ಭೇಟಿ ನೀಡಿದರು. ಸಂಘದ ಅಧ್ಯಕ್ಷ ಸದಾಶಿವ ಖಾರ್ವಿ ಅವರು ಯಶಪಾಲ ಸುವರ್ಣ ಅವರನ್ನು ಸ್ವಾಗತಿಸಿ ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘದ ಕಾರ್ಯಚಟುವಟಿಕೆ ಬಗ್ಗೆ ಮಾಹಿತಿ ನೀಡಿದರು. ಸಂಘದ ಆಡಳಿತ ಮಂಡಳಿಯ ನೂತನ ನಿರ್ದೇಶಕರೊಂದಿಗೆ ಸಂಸ್ಥೆಯ ಕಾರ್ಯಯೋಜನೆ ಬಗ್ಗೆ ಚರ್ಚೆ ನಡೆಸಿದ ಯಶಪಾಲ ಸುವರ್ಣ ಅವರು ಸಂಸ್ಥೆಯ ಅಭಿವೃದ್ಧಿಗೆ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿ, ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಸದಾಶಿವ ಖಾರ್ವಿ ಅವರನ್ನು ಸನ್ಮಾನಿಸಿ ಗೌರವಿಸಿದರು. ಸಂಘದ ನಿರ್ದೇಶಕರಾದ ಹರೀಶ ಖಾರ್ವಿ, ಚಂದ್ರ ಖಾರ್ವಿ, ಮೋಹನ ಖಾರ್ವಿ, ಗುರುರಾಜ್ ಖಾರ್ವಿ, ರಾಜೇಶ ಸಾರಂಗ್, ಜ್ಯೋತಿ ಆರ್. ಹಾಗೂ ಸಂಘದ ವ್ಯವಸ್ಥಾಪಕ ಮೋಹನ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಉಡುಪಿ: ಕೊರೊನಾ ವೈರಾಣು ವ್ಯಕ್ತಿಗೆ ಹರಡುವುದನ್ನು ತಡೆಗಟ್ಟುವ ಉದ್ದೇಶದಿಂದ, ಕರ್ನಾಟಕ ಸಾಂಕ್ರಾಮಿಕ ರೋಗಗಳು, ಕೋವಿಡ್-19 ರೆಗ್ಯೂಲೇಷನ್ಸ್-2020 ರ ನಿಯಮ 12 ರಲ್ಲಿ ಹಾಗೂ Disaster Management Act 2005 ಕಲಂ 24 (ಎ), (ಬಿ), 30 (2) ರಡಿಯಲ್ಲಿ ಪ್ರದತ್ತವಾದ ಅಧಿಕಾರ ಚಲಾಯಿಸಿ, ಈ ಕೆಳಕಂಡ ಸೇವೆಗಳನ್ನು ಮುಂದಿನ ಆದೇಶದವರೆಗೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ, ಜಿಲ್ಲಾಧಿಕಾರಿ ಜಿ.ಜಗದೀಶ್ ಆದೇಶ ಹೊರಡಿಸಿರುತ್ತಾರೆ. ಸ್ಥಗಿತಗೊಂಡ ಸೇವೆಗಳು: ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ ಕಂದಾಯ ಇಲಾಖೆಯ ಆಧಾರ್ ಕೇಂದ್ರಗಳಲ್ಲಿ ಸಾರ್ವಜನಿಕರಿಗೆ ನೀಡಲಾಗುತ್ತಿರುವ ಸೇವೆಗಳು, ಪ್ರಾದೇಶಿಕ ಸಾರಿಗೆ ಇಲಾಖೆಯಲ್ಲಿ ನೀಡಲಾಗುತ್ತಿರುವ ಹೊಸ ವಾಹನ ಚಾಲನಾ ರಹದಾರಿ, ಕಲಿಯುವವರ ಪರವಾನಿಗೆ ನೋಂದಣಿ (ಏಪ್ರಿಲ್ 15 ರ ವರೆಗೆ ಸಿಂಧುತ್ವ ಹೊಂದಿರುವ ಕಲಿಕಾ ಚಾಲನಾ ಅನುಜ್ಞಾ ಪತ್ರಗಳ ಅಭ್ಯರ್ಥಿಗಳಿಗೆ ಮಾತ್ರ ವಾಹನಾ ಚಾಲನಾ ಅನುಜ್ಞಾ ಪತ್ರಗಳಿಗೆ ಪರೀಕ್ಷೆಗೆ ಹಾಜರಾಗಲು ಈ ನಿರ್ಬಂಧ ಅನ್ವಯಿಸುವುದಿಲ್ಲ), ನಗರ ಸ್ಥಳೀಯ ಸಂಸ್ಥೆಗಳು ಮತ್ತು ಗ್ರಾಮ ಪಂಚಾಯತ್ ವ್ಯಾಪ್ತಿಗಳಲ್ಲಿ ಸಾರ್ವಜನಿಕರಿಗೆ ನೀಡಲಾಗುತ್ತಿರುವ ಸೇವೆಗಳು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಉಡುಪಿ: ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರು, ಬೆಂಗಳೂರು ಇವರ ಮಾರ್ಚ್ 19 ರ ಸುತ್ತೋಲೆಯಂತೆ, ಕೊರೊನಾ ವೈರಸ್ ಹರಡದಂತೆ ಮುಂಜಾಗೃತ ಕ್ರಮ ಜರುಗಿಸುವ ಸಂಬಂಧ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಹೆಚ್ಚಿನ ಜನದಟ್ಟಣೆಯನ್ನು ನಿರ್ಭಂಧಿಸಲು, ಉಡುಪಿ ಜಿಲ್ಲೆಯ ಸಾರಿಗೆ ಕಛೇರಿಯಲ್ಲಿ ಮಾರ್ಚ್ 20 ರಿಂದ ಮುಂದಿನ ಆದೇಶದವರೆಗೆ ಹೊಸದಾಗಿ ಕಲಿಕಾ ಲೈಸನ್ಸ್ ಮತ್ತು ಚಾಲನಾ ಲೈಸನ್ಸ್‌ಗಳಿಗಾಗಿ ಪರೀಕ್ಷೆಗೆ ಹಾಜರಾಗುವುದನ್ನು ಕಡ್ಡಾಯವಾಗಿ ನಿರ್ಭಂಧಿಸಲಾಗಿದೆ. ಏಪ್ರಿಲ್ 15 ರ ವರೆಗೆ ಸಿಂಧುತ್ವ ಹೊಂದಿರುವ ಕಲಿಕಾ ಲೈಸನ್ಸ್ ಹೊಂದಿರುವ ಅಭ್ಯರ್ಥಿಗಳಿಗೆ ಮಾತ್ರ ಹೊಸ ಚಾಲನಾ ಅನುಜ್ಞಾ ಪತ್ರ ಪರೀಕ್ಷೆಗೆ ಹಾಜರಾಗಲು ಅವಕಾಶವಿರುತ್ತದೆ ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ಕೆ.ಎ. ರಾಮಕೃಷ್ಣ ರೈ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಪತ್ರಿಕಾ ಜಾಹಿರಾತು ಸಂಸ್ಥೆ ಪ್ರಚಾರ ಪಬ್ಲಿಸಿಟಿ ಇದರ ಸ್ಥಳಾಂತರ ಕಛೇರಿಯನ್ನು ಕೊಲ್ಲಮ್ಮ ನಿಲಯ ಬಿಲ್ಡಿಂಗ್‌ನಲ್ಲಿ ಕುಂದಾಪುರ ತಶೀಲ್ದಾರ್ ತಿಪ್ಪೇೇಸ್ವಾಮಿ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಪ್ರಸನ್ನ ಆಂಜನೇಯ ದೇವಸ್ಥಾನದ ಸ್ಥಾಪಕರಾದ ಸುರೇಶ್ ಡಿ. ಪಡುಕೋಣೆ, ಪತ್ರಕರ್ತ ಸಂಘದ ಅಧ್ಯಕ್ಷರಾದ ಶಶಿಧರ ಹೆಮ್ಮಾಡಿ, ಸೌತ್ ಕೆನರ್ ಪೋಟೋಗ್ರಾಪರ್ಸ್ ಅಸೋಸಿಯೇಷನ್ ಕುಂದಾಪುರ ವಲಯ ಅಧ್ಯಕ್ಷರಾದ ರಾಜು ಮಠದಬೆಟ್ಟು, ಪುರಸಭೆಯ ಸದಸ್ಯ ಕೆ. ಜಿ. ನಿತ್ಯಾನಂದ, ಎಂ. ಜಿ. ದೇವಾಡಿಗ, ಸಂಸ್ಥೆಯ ಮಾಲೀಕರಾದ ನಾಗರಾಜ ರಾಯಪ್ಪನ ಮಠ ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಉಡುಪಿ: ತೋಟಗಾರಿಕೆ ಇಲಾಖೆ ವತಿಯಿಂದ ರೈತರ ಮಕ್ಕಳಿಗೆ 10 ತಿಂಗಳ ತರಬೇತಿ ಕಾರ್ಯಕ್ರಮವನ್ನು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ, ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ, ತರಬೇತಿ ಪಡೆಯಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಉಡುಪಿ ಜಿಲ್ಲೆಯಿಂದ ಸಾಮಾನ್ಯ ವರ್ಗದ 6 ಹಾಗೂ ಪರಿಶಿಷ್ಟ ಜಾತಿಯ 1 ಒಟ್ಟು 7 ಅಭ್ಯರ್ಥಿಗಳ ಗುರಿ ಇದ್ದು, ಸದರಿ ಗುಂಪಿನಲ್ಲಿ 5 ಪುರುಷರಿಗೆ ಹಾಗೂ 2 ಮಹಿಳೆಯರಿಗೆ ಮೀಸಲಿರುತ್ತದೆ. ಆಸಕ್ತರು ಏಪ್ರಿಲ್ 24 ರ ಒಳಗೆ ಉಡುಪಿ, ಕುಂದಾಪುರ ಹಾಗೂ ಕಾರ್ಕಳ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ. ಅರ್ಜಿ ಶುಲ್ಕವು ಸಾಮಾನ್ಯ ಅಭ್ಯರ್ಥಿಗಳಿಗೆ 30 ರೂ. ಹಾಗೂ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದವರಿಗೆ 15 ರೂ. ಇದ್ದು, ಸದರಿ ಮೊತ್ತವನ್ನು IPO/ ಡಿಡಿಯನ್ನು ತೋಟಗಾರಿಕೆ ಉಪನಿರ್ದೇಶಕರು (ಜಿಲ್ಲಾ ಪಂಚಾಯತ್), ಉಡುಪಿ ಇವರ ಹೆಸರಿನಲ್ಲಿ ಪಡೆಯುವಂತೆ ಇಲಾಖೆಯ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಉಡುಪಿ: ಉಡುಪಿ ಜಿಲ್ಲೆಯಲ್ಲಿ ಕರೋನಾ ವೈರಸ್ ಕುರಿತ ನಾಗರೀಕರಲ್ಲಿರುವ ಸಂದೇಹಗಳನ್ನು ಪರಿಹರಿಸಲು, ರೋಗದ ಬಗ್ಗೆ ಮಾಹಿತಿ ನೀಡಲು, ಸಂಶಯಾಸ್ಪದ ರೋಗಿಗಳ ಚಲನಗಳ ಮಾಹಿತಿ ಸಂಗ್ರಹಿಸಲು, ಐಸೋಲೇಟೆಡ್ ಬೆಡ್‌ಗಳ ನಿರ್ವಹಣೆ ಕುರಿತಂತೆ ಸಮಗ್ರ ಮಾಹಿತಿ ಸಂಗ್ರಹಿಸಲು ಸಹಾಯವಾಣಿ ತೆರೆಯಲಾಗಿದ್ದು, ಸಹಾಯವಾಣಿಯ ಸಂ. 9663957222 ಅಥವಾ 9663950222 ಆಗಿದ್ದು, ಒಂದೇ ದಿನದಲ್ಲಿ 20 ಕ್ಕೂ ಅಧಿಕ ಕರೆಗಳನ್ನು ಸ್ವೀಕರಿಸಿದ್ದು, ಜಿಲ್ಲೆ ಮಾತ್ರವಲ್ಲದೇ ಹೊರ ರಾಜ್ಯದ ಸಾರ್ವಜನಿಕರೂ ಸಹ ಮಾಹಿತಿ ಕೋರಿ ಸಹಾಯವಾಣಿ ಸಂಪರ್ಕಿಸಿದ್ದಾರೆ. ಗುರುವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿಯಲ್ಲಿ ಡಿಹೆಚ್ ಓ ಡಾ. ಸುಧೀರ್ ಚಂದ್ರ ಸೂಡಾ ಈ ಬಗ್ಗೆ ಮಾಹಿತಿ ನೀಡಿದರು. ಈ ಸಹಾಯವಾಣಿ 24X7 ಕಾರ್ಯನಿರ್ವಹಿಸುತ್ತಿದ್ದು, ಇದಕ್ಕಾಗಿ 3 ಪಾಳಿಯಲ್ಲಿ ಕಾರ್ಯನಿರ್ವಹಿಸಲು ಒಟ್ಟು 13 ಸಿಬ್ಬಂದಿ ನಿಯೋಜಿಸಲಾಗಿದ್ದು, ಕರೋನಾ ಕುರಿತು ಸಂದೇಹ ಬಗೆಹರಿಸಲು ಕೌನ್ಸಿಲರ್ ಸಹ ಇದ್ದು, ಮಾಹಿತಿ ಸಂಗ್ರಹಣೆ, ವಿದೇಶಗಳಿಂದ ಬಂದವರು ಅನುಸರಿಸಬೇಕಾದ ಕ್ರಮಗಳು, ಹೋಂ ಕ್ವಾರಂಟೈನ್ ಕುರಿತು ಮಾಹಿತಿ,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಚಂಡಮಾರುತ ಹಾಗೂ ಕೊರೊನಾ ಭೀತಿಯಿಂದ ಪ್ರವಾಸೋದ್ಯಮಕ್ಕೆ ಬಲವಾದ ಹೊಡೆತ ಬಿದ್ದಿದ್ದು, ಪ್ರವಾಸೋದ್ಯಮ ಕ್ಷೇತ್ರದಲ್ಲಿ ಬಂಡವಾಳ ಹೂಡಿದ್ದ ಹೂಡಿಕೆದಾರರು ಕಂಗಾಲಾಗಿದ್ದಾರೆ. ಈ ಸಾಲಿನಲ್ಲಿ ಸತತ ನಾಲ್ಕು ಚಂಡಮಾರುತಗಳು ಕರಾವಳಿ ತೀರ ಪ್ರದೇಶಕ್ಕೆ ಅಪ್ಪಳಿಸುವ ಭೀತಿ ಎದುರಾಗಿತ್ತು. ಚಂಡಮಾರುತದ ಭೀತಿ ದೂರವಾಗಿ ಪ್ರವಾಸೋದ್ಯಮ ಚೇತರಿಸಿಕೊಳ್ಳುವಷ್ಟರಲ್ಲಿ ಇದೀಗ ಕೊರೊನಾ ಭೀತಿ ಎದುರಿಸುವಂತಾಗಿದೆ. ಕಳೆದ ಸಾಲಿಗೆ ಹೋಲಿಸಿದರೆ ಈ ಸಾಲಿನಲ್ಲಿ ಪ್ರವಾಸೋದ್ಯಮ ಕ್ಷೇತ್ರ ಬಹಳಷ್ಟು ನಷ್ಟ ಅನುಭವಿಸಿದೆ. ಕರಾವಳಿ ತೀರ ಪ್ರದೇಶಗಳಿಗೆ ಆಗಮಿಸುವ ಪ್ರವಾಸಿಗರ ಸಂಖ್ಯೆ ಕೂಡ ಗಣನೀಯವಾಗಿ ಇಳಿಮುಖವಾಗಿದ್ದು, ಪ್ರವಾಸಿಗರನ್ನು ನಂಬಿಕೊಂಡು ಜೀವನ ಸಾಗಿಸುತ್ತಿರುವ ಅದೆಷ್ಟೋ ಉದ್ದಿಮೆ, ವ್ಯವಹಾರಗಳು ನಷ್ಟದಲ್ಲಿದೆ. ಸರಕಾರದ ಯಾವುದೇ ಸಹಾಯಧನ, ಸಬ್ಸಿಡಿ ಇಲ್ಲದೆ ಪ್ರವಾಸೋದ್ಯಮದ ವಿವಿಧ ಕ್ಷೇತ್ರಗಳಲ್ಲಿ ಬಂಡವಾಳ ಹೂಡಿದ್ದ ಹೂಡಿಕೆದಾರರು ದಿಕ್ಕು ತೋಚದಂತಾಗಿದ್ದಾರೆ. ಪಕ್ಕದ ಕೇರಳ ರಾಜ್ಯದಲ್ಲಿ ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶಗಳಿದ್ದು, ಸರಕಾರ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದೆ. ಸಾಂಪ್ರದಾಯಿಕ ದೋಣಿ ಮನೆ ನಡೆಸುವವರಿಗೆ ಉಚಿತ ವಿದ್ಯುತ್, ನೀರು ಹಾಗೂ ಸಬ್ಸಿಡಿ ದರದಲ್ಲಿ ಡೀಸೆಲ್…

Read More