ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿನ ಕೃಷಿ ಇಲಾಖೆ ವತಿಯಿಂದ ಕೃಷಿ ಪ್ರಶಸ್ತಿ ಹಾಗೂ ರೈತರಿಗೆ ಉತ್ಪಾದನಾ ಬಹುಮಾನ ಕಾರ್ಯಕ್ರಮದಡಿ ಮುಂಗಾರು ಭತ್ತದ ಬೆಳೆ ಸ್ಪರ್ಧೆಗೆ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಸ್ಪರ್ಧಾ ವಿಜೇತರಿಗೆ,ತಾಲೂಕುಮಟ್ಟದಲ್ಲಿ ಪ್ರಥಮ ರೂ.15000,ದ್ವಿತೀಯ 10000 ತೃತೀಯ 5000 ,ಜಿಲ್ಲಾ ಮಟ್ಟದಲ್ಲಿ ಪ್ರಥಮ ರೂ.30000,ದ್ವಿತೀಯ 25000 ತೃತೀಯ 20000 , ರಾಜ್ಯಮಟ್ಟದಲ್ಲಿ ಪ್ರಥಮ ರೂ.50000,ದ್ವಿತೀಯ 40000 ತೃತೀಯ 35000 ರೂ ಬಹುಮಾನವನ್ನು ರೈತರಿಗೆ ವಿತರಿಸಲಾಗುತ್ತದೆ. ಆಸಕ್ತ ರೈತರು ಅರ್ಜಿ ನಮೂನೆಯನ್ನು ಆಗಸ್ಟ್ 31 ರೊಳಗೆ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಅಥವಾ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರನ್ನು ಸಂಪರ್ಕಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕರ ಪ್ರಕಟಣೆ ತಿಳಿಸಿದೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಹಾಗೂ ರಾಜ್ಯಸಭಾ ಸದಸ್ಯರಾದ ಆಸ್ಕರ್ ಫೆರ್ನಾಂಡಿಸ್ ಅವರು ಅನಾರೋಗ್ಯದಿಂದ ಬಳಲುತಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರು ಶೀಘ್ರ ಗುಣಮುಖರಾಗುವಂತೆ ಕಾಂಗ್ರೆಸ್ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರಿಂದ ಕ್ಷೇತ್ರ ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ಸನ್ನಿಧಿಯಲ್ಲಿ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾಜಿ ವಿಧಾನ ಪರಿಷತ್ ಸಭಾಪತಿಗಳಾದ ಪ್ರತಾಪಚಂದ್ರ ಶೆಟ್ಟಿ, ಮಾಜಿ ಶಾಸಕರಾದ ಗೋಪಾಲ ಪೂಜಾರಿ, ಮಲ್ಯಾಡಿ ಶಿವರಾಮ ಶೆಟ್ಟಿ, ಬೆಳ್ವೆ ಸತೀಶ್ ಕಿಣಿ, ಪ್ರದೀಪ್ ಕುಮಾರ್ ಶೆಟ್ಟಿ ಗುಡಿಬೆಟ್ಟು, ವಂಡಬಳ್ಳಿ ಜಯರಾಮ ಶೆಟ್ಟಿ, ಉದಯ ಕುಮಾರ್ ಶೆಟ್ಟಿ ಅಡಿಕೆಕೊಡ್ಲು, ಶರತ್ ಕುಮಾರ್ ಶೆಟ್ಟಿ ಬಾಳಿಕೆರೆ, ಉದಯ ಜಿ. ಪೂಜಾರಿ ಚಿತ್ತೂರು, ವಿಕಾಸ್ ಹೆಗ್ಡೆ ಬಸ್ರೂರು, ಸಂತೋಷ್ ಶೆಟ್ಟಿ ಬಲಾಡಿ, ಪ್ರಸನ್ನ ಕುಮಾರ ಶೆಟ್ಟಿ ಕೆರಾಡಿ, ಸದಾಶಿವ ಶೆಟ್ಟಿ ಶಂಕರ ನಾರಾಯಣ, ರಮೇಶ್ ಶೆಟ್ಟಿ ವಕ್ವಾಡಿ, ಶ್ರೀನಿವಾಸ ಪೂಜಾರಿ ಕಲ್ಮಾಡಿ, ಹರ್ಜಿ ಕರುಣಾಕರ ಶೆಟ್ಟಿ, ಸುರೇಂದ್ರ ಶೆಟ್ಟಿ ಚಿತ್ತೂರು, ಸರ್ವೋತ್ತಮ ಶೆಟ್ಟಿ ಇಡೂರು, ಅರುಣ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಗಂಗೊಳ್ಳಿಯ ವಿವಿಧೆಡೆ ಶ್ರೀ ವರಮಹಾಲಕ್ಷ್ಮೀ ವೃತಾಚರಣೆಯನ್ನು ಭಕ್ತಿ ಶ್ರದ್ಧಾಪೂರ್ವಕ ಸರಳವಾಗಿ ವಿಜೃಂಭಣೆಯಿಂದ ಶುಕ್ರವಾರ ಆಚರಿಸಲಾಯಿತು. ಗಂಗೊಳ್ಳಿಯ ಸೇವಾ ಸಂಘ ಸಾರ್ವಜನಿಕ ಶ್ರೀ ಶಾರದೋತ್ಸವ ಮಹಿಳಾ ಸಂಘದ ವತಿಯಿಂದ ಗಂಗೊಳ್ಳಿಯ ಶ್ರೀ ಶಾರದಾ ಮಂಟಪದಲ್ಲಿ ಶ್ರೀ ವರಮಹಾಲಕ್ಷ್ಮೀ ವೃತವನ್ನು ಆಚರಿಸಲಾಯಿತು. ಪುರೋಹಿತರಾದ ಜಿ.ರಾಘವೇಂದ್ರ ಆಚಾರ್ಯ ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನಗಳು ನಡೆಯಿತು. ಮಹಿಳಾ ಸಂಘದ ಅಧ್ಯಕ್ಷೆ ಅನಿತಾ ಎನ್.ಶೇಟ್ ಹಾಗೂ ಕಾರ್ಯದರ್ಶಿ ಸ್ವಾತಿ ಮಡಿವಾಳ ಪೂಜೆಯಲ್ಲಿ ಪಾಲ್ಗೊಂಡಿದ್ದರು. ಕೋವಿಡ್ ನಿಯಮಾನುಸಾರ ನಡೆದ ಕಾರ್ಯಕ್ರಮದಲ್ಲಿ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಗಂಗೊಳ್ಳಿಯ ಕಲೈಕಾರ ಮಠ ಶ್ರೀ ನಗರ ಮಹಾಕಾಳಿ ಮತ್ತು ಕಲ್ಲುಕುಟ್ಟಿಗ ದೇವಸ್ಥಾನ, ಮ್ಯಾಂಗನೀಸ್ ರಸ್ತೆಯ ಶ್ರೀ ಚಕ್ರೇಶ್ವರಿ ದೇವಸ್ಥಾನ, ಖಾರ್ವಿಕೇರಿ ಶ್ರೀ ಮಹಾಂಕಾಳಿ ದೇವಸ್ಥಾನ ಹಾಗೂ ಮಲ್ಯರಬೆಟ್ಟು ಶ್ರೀ ಜಟ್ಟಿಗೇಶ್ವರ ದೇವಸ್ಥಾನದಲ್ಲಿ ನಡೆದ ಶ್ರೀ ವರಮಹಾಲಕ್ಷ್ಮೀ ವೃತಾಚರಣೆಯಲ್ಲಿ ಮುತ್ತೈದೆಯರು, ಸುಮಂಗಲಿಯರು ಪಾಲ್ಗೊಂಡು ಶ್ರೀದೇವರ ಪ್ರಸಾದ ಸ್ವೀಕರಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮೋದಿ ಸರಕಾರ ಉತ್ತಮ ಕಾರ್ಯ ಮಾಡುತ್ತಿದ್ದು, ವಿರೋಧ ಪಕ್ಷಗಳು ಅವರ ಹೆಸರನ್ನು ಕೆಡಿಸುವ ಕಾರ್ಯದಲ್ಲಿ ತೊಡಗಿವೆ. ಹಾಗಾಗಿಯೇ ಸರಕಾರದ ಯೋಜನೆ ಹಾಗೂ ಉತ್ತಮ ಕಾರ್ಯಗಳನ್ನು ಜನರಿಗೆ ತಿಳಿಸುವ ಉದ್ದೇಶದಿಂದ ಜನಾಶೀರ್ವಾದ ಯಾತ್ರೆ ಕೈಗೊಳ್ಳಲಾಗಿದೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ಹೇಳಿದರು. ಬಿಜೆಪಿ ಕಛೇರಿಗೆ ಗುರುವಾರ ಭೇಟಿ ನೀಡಿದ ಸಂದರ್ಭ ಭಾರತ ಮಾತೆಯ ಪೋಟೋಗೆ ಪುಷ್ಪಾರ್ಚನೆ ಮಾಡಿದ ಬಳಿಕ ಅವರು ಮಾತನಾಡಿ ಕೃಷಿ ಸಚಿವಾಲಯದಲ್ಲಿ ತುಂಬಾ ಕಠಿಣವಾದ ಜವಾಬ್ದಾರಿ ಇದೆ. ಕೃಷಿಕರ ಅಭ್ಯುದಯ, ಕೃಷಿ ಕ್ಷೇತ್ರದ ಬೆಳವಣಿಗೆಯ ಬಗ್ಗೆ ಕಳೆದ 60 ವರ್ಷಗಳಿಂದ ನೀಡಲಾದ ವರದಿಯ ಆಧಾರದಲ್ಲಿ ಕೃಷಿ ಮಸೂದೆಯನ್ನು ಮಂಡಿಸಲಾಗಿದೆ. ನಮ್ಮ ಸರಕಾರ ಹೊಸದಾಗಿ ಈ ಮಸೂದೆಯನ್ನು ಜಾರಿಗೆ ತಂದಿಲ್ಲ. ಆದರೆ ಅನಗತ್ಯವಾಗಿ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಬೇರೆ ಬೇರೆ ಬೆಳೆಗಳಿಗೆ ಇರುವ ಬೆಂಬಲ ಬೆಲೆ ಮೊದಲಾದ ತೊಡಕುಗಳನ್ನು ಶೀಘ್ರ ಬಗೆಹರಿಸುವುದಾಗಿ ಅವರು ತಿಳಿಸಿದರು. ಲೋಕಸಭಾ ಕ್ಷೇತ್ರದಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಆಗಸ್ಟ್ 28 ಮತ್ತು 29 ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಸಿಇಟಿ ಪರೀಕ್ಷೆಗಳು ಉಡುಪಿ 5, ಕುಂದಾಪುರದ 3 ಮತ್ತು ಕಾರ್ಕಳ 2 ಸೇರಿದಂತೆ ಜಿಲ್ಲೆಯ ಒಟ್ಟು 10 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, 3,624 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದು, ಪರೀಕ್ಷೆಯು ಅತ್ಯಂತ ಸುವ್ಯವಸ್ಥಿತವಾಗಿ ನಡೆಯಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಜಿ. ಜಗದೀಶ್ ಸೂಚಿಸಿದರು. ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ, ಸಿಇಟಿ ಪರೀಕ್ಷೆಯ ಪೂರ್ವ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೋವಿಡ್19 ಸನ್ನಿವೇಶದಲ್ಲಿ ಸಿಇಟಿ ಪರೀಕ್ಷೆ ನಡೆಯುತ್ತಿದ್ದು ,ಆರೋಗ್ಯ ಇಲಾಖೆ ಸೂಚಿಸಿರುವ ಎಲ್ಲಾ ಎಸ್.ಓ.ಪಿ ಅಂಶಗಳನ್ನು ಪಾಲಿಸಿ ಪರೀಕ್ಷೆಯನ್ನು ಆಯೋಜಿಸಬೇಕು , ಕೆಮ್ಮು ಶೀತ,ಜ್ವರ ಲಕ್ಷಣಗಳನ್ನು ಹೊಂದಿರುವ ವಿದ್ಯಾರ್ಥಿಗಳಿಗೆ ಮತ್ತು ಕಂಟೈನ್ ಮೆಂಟ್ ಝೋನ್ ಗಳಿಂದ ಬರುವ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿಗಳನ್ನು ಮೀಸಲಿಡುವಂತೆ ತಿಳಿಸಿದ ಜಿಲ್ಲಾಧಿಕಾರಿ ಜಿ.ಜಗದೀಶ್, ಆರೋಗ್ಯ ಇಲಾಖೆ ವತಿಯಿಂದ ಪರೀಕ್ಷಾ ದ್ವಾರದಲ್ಲೇ ವಿದ್ಯಾರ್ಥಿಗಳು ಥರ್ಮಲ್ ಸ್ಕಾ ಮೂಲಕ ಪರಿಶೀಲಿಸಲು ಅಗತ್ಯ ಸಿಬ್ಬಂದಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರೋಟರಿ ಕ್ಲಬ್ ಗಂಗೊಳ್ಳಿ ಮತ್ತು ಹರೆಗೋಡು ಮಹಾವಿಷ್ಣು ಯುವಕ ಮಂಡಲ, ಮಾನಸ ಯುವತಿ ಮಂಡಲ ಇವರ ಜಂಟಿ ಆಶ್ರಯದಲ್ಲಿ ಹೆಮ್ಮಾಡಿಯ ನಾಟಿ ವೈದ್ಯ ಗೋಪಾಲ ಗಾಣಿಗ ದಂಪತಿಯನ್ನು ಸನ್ಮಾನಿಸಿ ಗೌರವಿಸಲಾಯಿತು. ಗಂಗೊಳ್ಳಿ ಗಂಗೊಳ್ಳಿ ರೋಟರಿ ಅಧ್ಯಕ್ಷ ರಾಜೇಶ್ ಎಂ.ಜಿ. ಅಧ್ಯಕ್ಷತೆ ವಹಿಸಿದ್ದರು. ಗಂಗೊಳ್ಳಿ ರೋಟರಿ ಸದಸ್ಯ ಪ್ರದೀಪ ಡಿ.ಕೆ., ಚಂದ್ರ ನಾಯ್ಕ್, ನರಸಿಂಹ ಗಾಣಿಗ, ಯುವಕ ಮಂಡಲದ ಅಧ್ಯಕ್ಷ ಶ್ರೀಕಾಂತ ಆಚಾರ್ಯ, ಗಂಗಮ್ಮ, ನಾಗರಾಜ ಗಾಣಿಗ, ರಾಜು ಗಾಣಿಗ, ಪ್ರದೀಪ ದೇವಾಡಿಗ, ರವಿ ಉಪ್ಪುಂದ, ರಾಮಚಂದ್ರ ಕುಲಾಲ್ ಮತ್ತು ದೀಪಕ ಕುಮಾರ್ ಉಪಸ್ಥಿತರಿದ್ದರು. ಪ್ರಸಾದ ಆಚಾರ್ಯ ಸ್ವಾಗತಿಸಿದರು. ರವೀಶ ಡಿ.ಎಚ್. ಕಾರ್ಯಕ್ರಮ ನಿರ್ವಹಿಸಿದರು. ಕಾರ್ಯದರ್ಶಿ ಗುರುರಾಜ ಗಾಣಿಗ ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕೃಷಿ ಇಲಾಖೆಯ ಆತ್ಮ ಯೋಜನೆಯಡಿ ಇತರೆ ಯೋಜನೆಗಳಾದ ಕೃಷಿ ಪ್ರಶಸ್ತಿ, ಕೃಷಿ ಪಂಡಿತ ಪ್ರಶಸ್ತಿಗೆ ಸಮಾನಾಂತರವಾಗಿ ಜಿಲ್ಲಾ ಹಾಗೂ ತಾಲ್ಲೂಕು ವಲಯದಲ್ಲಿ ರೈತರ ಸಾಧನೆಯನ್ನು ಗುರುತಿಸಿ ಶ್ರೇಷ್ಠ ಕೃಷಿಕ ಪ್ರಶಸ್ತಿ ನೀಡುವುದಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲಾ ಮಟ್ಟದಲ್ಲಿ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಕೃಷಿ ಚಟುವಟಿಕೆಗಳಡಿ ಆಯ್ಕೆಯಾದ 10 ಮಂದಿ ರೈತರಿಗೆ ತಲಾ ರೂ.25000 ಹಾಗೂ ತಾಲ್ಲೂಕು ಮಟ್ಟದ ಪ್ರಶಸ್ತಿಗೆ 5 ಮಂದಿ ರೈತರಿಗೆ ತಲಾ ರೂ.10000 ವನ್ನು ವಿತರಿಸಲಾಗುವುದು. ಕೃಷಿಯಲ್ಲಿ ಸಮಗ್ರ ಬೆಳೆ ಪದ್ಧತಿ, ಸಮಗ್ರ ನೀರು ನಿರ್ವಹಣೆ, ಸಾವಯವ ಕೃಷಿ ಅಭಿವೃದ್ಧಿ, ವೈಜ್ಞಾನಿಕ ಯಂತ್ರೋಪಕರಣಗಳ ಬಳಕೆ, ತೋಟಗಾರಿಕೆ, ಹೈನುಗಾರಿಕೆ, ಕೋಳಿ ಸಾಕಾಣಿಕೆ, ಮೀನುಗಾರಿಕೆ, ರೇಷ್ಮೆ ಬೇಸಾಯ, ಹೈಟೆಕ್ತಂತ್ರಜ್ಞಾನ ಅಳವಡಿಕೆ (ಹಸಿರು ಮನೆ, ಕಸಿ ಅಭಿವೃದ್ಧಿ, ಸಸ್ಯಕಾಶಿ ಇತ್ಯಾದಿ ಹಾಗೂ ಕೃಷಿ ಸಂಸ್ಕರಣೆ, ಅರಣ್ಯ ಕೃಷಿ, ಆಡು, ಕುರಿ, ಮೊಲ ಇತ್ಯಾದಿ ಸಾಕಾಣಿಕೆ ಕೃಷಿ ಚಟುವಟಿಕೆಗಳಲ್ಲಿ ತೊಡಗಿಕೊಂಡ ರೈತರು ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಹರಾಗಿರುತ್ತಾರೆ. ಅರ್ಜಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕೋವಿಡ್19 ಹರಡುವಿಕೆಯನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು, ಸಾರ್ವಜನಿಕ ಸ್ಥಳಗಳಲ್ಲಿ ಪಾಲಿಸಬೇಕಾದ ಶಿಷ್ಟಾಚಾರಗಳ ಬಗ್ಗೆ ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತ ಸಾರ್ವಜನಿಕರ ಹಿತದೃಷ್ಟಿಯಿಂದ ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದು, ಕರೋನಾ ಸಂಬಂಧಿತ ಸರ್ಕಾರದ ಇತರ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಆದೇಶಿಸಲಾಗಿರುತ್ತದೆ. ಅದಾಗ್ಯೂ ಜಿಲ್ಲೆಯಲ್ಲಿ ಜನರು ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದೇ, ಸಾಮಾಜಿಕ ಅಂತರದ ನಿಯಮಗಳನ್ನು ಗಾಳಿಗೆ ತೂರಿ, ತೀರ ನಿರಾಸದಾಯಕ ವರ್ತನೆಯನ್ನು ತೋರುತ್ತಿರುವುದರಿಂದ, ಕರೋನಾ ಸಾಂಕ್ರಮಿಕವು ಜಿಲ್ಲೆಯಲ್ಲಿ ಮತ್ತಷ್ಟು ಹೆಚ್ಚಳವಾಗುತ್ತಿದೆ. ಈ ಮಧ್ಯೆ ಕೋವಿಡ್-19 ರೋಗದ 3 ನೇ ಅಲೆಯು ತಲೆದೋರುತ್ತಿರುವುದನ್ನು ಆರೋಗ್ಯ ಇಲಾಖೆಯು ಎಚ್ಚರಿಸಿರುವುದು ಆತಂಕಕಾರಿ ಸಂಗತಿಯಾಗಿದೆ. ಇಂತಹ ಸನ್ನಿವೇಶದಲ್ಲಿ ಸಾರ್ವಜನಿಕರು, ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದು, ಹಾಗೂ ಇನ್ನಿತರ ಕೋವಿಡ್-19ರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಅತೀ ಅನಿವಾರ್ಯವಾಗಿದ್ದು, ಜಿಲ್ಲೆಯ ಜನರ ಆರೋಗ್ಯ ಹಿತದೃಷ್ಟಿಯಿಂದ ಸಾರ್ವಜನಿಕರು, ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸುವುವಂತೆ ಮಾಡಲು, ಇನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪ್ಲೈಓವರ್ ಮೂಲಕ ನಗರಕ್ಕೆ ಸಂಪರ್ಕಿಸಲು ಪ್ರವೇಶ ಮಾಡಿಕೊಡುವ ಬಗ್ಗೆ ಶಾಸಕರು ಗಮನಕ್ಕೆ ತಂದಿದ್ದು ಅವರ ಮನವಿಯನ್ನು ಹೆದ್ದಾರಿ ಇಲಾಖೆಯ ಅಧಿಕಾರಿಗಳಿಗೆ ತಿಳಿಸುವುದಾಗಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು. ಕೇಂದ್ರ ಸಚಿವೆಯಾದ ಬಳಿಕ ಗುರುವಾರ ಕುಂದಾಪುರಕ್ಕೆ ಮೊದಲ ಬಾರಿಗೆ ಆಗಮಿಸಿದ ಅವರು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ನೂತನಾಗಿ ನಿರ್ಮಾಣಗೊಂಡ ಆಕ್ಸಿಜನ್ ಉತ್ಪಾದನಾ ಘಟಕವನ್ನು ವೀಕ್ಷಿಸಿ ಬಳಿಕ ಮಾತನಾಡಿ ಕುಂದಾಪುರದ ಫ್ಲೈಓವರ್ ಜನರೇ ಉದ್ಘಾಟಿಸಿದ್ದಾರೆ. ಸ್ಥಳೀಯ ಶಾಸಕರು ಉದ್ಘಾಟನಾ ಕಾರ್ಯಕ್ರಮಗಳಿಗೆಲ್ಲ ಬರುವವರಲ್ಲ. ಹಾಗಾಗಿ ನಾವು ಉದ್ಘಾಟಿಸುವುದೇನಿಲ್ಲ ಎಂದು ಹಾಸ್ಯಚಟಾಕಿ ಹಾರಿಸಿದರು. ಕುಂದಾಪುರ ಸಾರ್ವಜನಿಕ ಆಸ್ಪತ್ರೆಯಲ್ಲಿ ನಿಮಿಷಕ್ಕೆ 500 ಲೀ ಆಕ್ಸಿಜನ್ ಉತ್ಪಾದಿಸುವ ಘಟಕ ಉದ್ಘಾಟನೆಗೆ ಸಿದ್ಧವಾಗಿದೆ. ಅದು ತಕ್ಷಣವೇ ಕಾರ್ಯಾಚರಿಸಲಿದ್ದು, ಉದ್ಘಾಟನೆಗೆ ಪೆಟ್ರೋಲಿಯಂ ಸಚಿವರು ಬರುವ ಮಾಹಿತಿಯಿದ್ದು ಹಾಗಾಗಿ ಸ್ವಲ್ಪ ದಿನ ಮುಂದೂಡಲಾಗಿದೆ ಎಂದರು. ಸೌದಿ ರಾಜನ ಕುರಿತು ಅವಹೇಳನಕಾರಿ ಪೋಸ್ಟ್ ಹಾಕಿದ್ದಾರೆಂಬ ಆರೋಪದಡಿಯಲ್ಲಿ ಅವರನ್ನು ಬಂಧಿಸಲಾಗಿದ್ದ ಹರೀಶ್ ಬಂಗೇರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಮ್ಮ ಯುವ ಪೀಳಿಗೆಗೆ ಕೃಷಿ ಹಾಗೂ ನಮ್ಮ ಸಂಸ್ಕೃತಿಯ ಬಗ್ಗೆ ಅರಿವು ಮೂಡಿಸುವ ಕರ್ತವ್ಯ ಎಲ್ಲರ ಮೇಲಿದೆ. ಈ ಬಗ್ಗೆ ಹಿರಿಯರ ಮೇಲೆ ಹೆಚ್ಚಿನ ಹೊಣೆಗಾರಿಕೆ ಇದೆ ಎಂದು ಕುಂದಾಪುರ ಲಯನ್ಸ್ ಕ್ಲಬ್ ಅಧ್ಯಕ್ಷ ರಾಧಾಕೃಷ್ಣ ರೂಪಂ ಹೇಳಿದರು. ಲಯನ್ಸ್ ಕ್ಲಬ್ ಕುಂದಾಪುರ ಹಾಗೂ ಮಹಾವಿಷ್ಣು ಯುವಕ ಮಂಡಲ ಇವರ ಜಂಟಿ ಆಶ್ರಯದಲ್ಲಿ ಕಟ್ಬೆಲ್ತೂರು ಹರೆಗೋಡು ಸಂಘದ ವಠಾರದಲ್ಲಿ ನಡೆದ ರೈತರಿಗೆ ಕೃಷಿ ಪರಿಕರ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕುಂದಾಪುರ ಲಯನ್ಸ್ ಕ್ಲಬ್ನ ನಿಕಟಪೂರ್ವ ಅಧ್ಯಕ್ಷ ಚಂದ್ರಶೇಖರ್ ಕಲ್ಪತರು ಅಧ್ಯಕ್ಷತೆ ವಹಿಸಿದ್ದರು. ಹಿರಿಯ ಕೃಷಿಕ ಸೂರ ದೇವಾಡಿಗ, ವಿಶ್ವನಾಥ ಗಾಣಿಗ, ಮರಿಯ ಪೂಜಾರಿ, ಕೃಷ್ಣ ಗಾಣಿಗ, ಸುಬ್ಬ ದೇವಾಡಿಗ, ಸಂಜು ದೇವಾಡಿಗ, ಕೊಗ್ಗ ಗಾಣಿಗ, ಕೃಷ್ಣ ದೇವಾಡಿಗ ಮೊದಲಾದವರು ಉಪಸ್ಥಿತರಿದ್ದರು.
