Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ: ಆಳ್ವಾಸ್ ಕಾಲೇಜಿನ ಸಮೂಹ ಸಂವಹನ ಹಾಗೂ ಪತ್ರಿಕೋದ್ಯಮ ಸ್ನಾತಕೋತ್ತರ ವಿಭಾಗವು ‘ಮೀಡಿಯಾ ಮಂಥನ್’ ವಿಶೇಷ ಸಂವಾದ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ವಿದ್ಯಾರ್ಥಿಗಳೊಂದಿಗೆ ನಡೆದ ಈ ಸಂವಾದ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಹಿರಿಯ ಪತ್ರಕರ್ತರಾದ ಮೆಲ್ವಿನ್ ಮೆಂಡೋನ್ಸಾ, ಅಲ್ವಿನ್ ಮೆಂಡೋನ್ಸಾ ಹಾಗೂ ಟೈಮ್ಸ್ ಆಫ್ ಇಂಡಿಯಾದ ಹಿರಿಯ ಕರೆಸ್ಪಾಂಡೆಂಟ್ ಆಗಿರುವ ಕೆವಿನ್ ಮೆಂಡೋನ್ಸಾ ಭಾಗವಹಿಸಿದ್ದರು. ಪತ್ರಿಕೋದ್ಯಮದ ವಿವಿಧ ಆಯಾಮಗಳ ಬಗ್ಗೆ ಚರ್ಚೆ ನಡೆಸಲಾಯಿತು. ಪತ್ರಿಕೋದ್ಯಮದ ವಿಸ್ತೃತ ಕಾರ‍್ಯವ್ಯಾಪ್ತಿಯ ಬಗ್ಗೆ ಮಾತನಾಡಿದ ಮೆಲ್ವಿನ್ ಮೆಂಡೋನ್ಸಾ, ‘ಪತ್ರಿಕೋದ್ಯಮವೆಂದರೆ ಕೇವಲ ಬರವಣಿಗೆ, ವರದಿಗಾರಿಕೆಯಲ್ಲ. ಇದನ್ನು ಹೊರತುಪಡಿಸಿದ ವಿಪುಲ ಅವಕಾಶಗಳು ಈ ಕ್ಷೇತ್ರದಲ್ಲಿವೆ. ಡಿಜಿಟಲ್ ಮಾಧ್ಯಮಗಳು, ಸಾರ್ವಜನಿಕ ಸಂಪರ್ಕ, ಈವೆಂಟ್ ಮ್ಯಾನೇಜ್‌ಮೆಂಟ್, ಮೀಡಿಯಾ ಮ್ಯಾನೇಜ್‌ಮೆಂಟ್ ಒಳಗೊಂಡ ವಿಶಿಷ್ಟ ಕಾರ‍್ಯಗಳನ್ನು ಒಬ್ಬ ಪತ್ರಕರ್ತ ಮಾಡಬಹುದು. ವಿದ್ಯಾರ್ಥಿಗಳು ಇಂತಹ ಕ್ಷೇತ್ರಗಳ ಬಗ್ಗೆ ತಿಳಿದುಕೊಳ್ಳುವ ಅವಶ್ಯಕತೆ ಇದೆ’ ಎಂದರು. ಒಬ್ಬ ಪತ್ರಕರ್ತನಿಗಿರಬೇಕಾದ ಕಾನೂನಿನ ಜ್ಞಾನದ ಬಗ್ಗೆ ತಿಳಿಸಿದ ಅಲ್ವಿನ್ ಮೆಂಡೋನ್ಸಾ, ‘ಪತ್ರಿಕೋದ್ಯಮದಲ್ಲಿರುವವರಿಗೆ ಕೆಲವು ಅಗತ್ಯ ಕಾನೂನುಗಳ ಅರಿವಿರಬೇಕು.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ತಾಲೂಕಿನ ಶಿರೂರಿನ ದ್ವಿಬಾಷಾ ಕವಿಯತ್ರಿ ಹಾಗೂ ಲೇಖಕಿ ಪುಷ್ಪಾ ರಘುರಾಮ್ ಮೇಸ್ತ ಅವರ ‘ಅಂತರಂಗದ ಅಲೆ’ ಕವನ ಸಂಕಲನವು ಚಿತ್ರದುರ್ಗದ ತ. ರಾ .ಸು ರಂಗಮಂದಿರದಲ್ಲಿ ಬಿಡುಗಡೆಗೊಂಡಿತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ವಿಶ್ರಾಂತ ಹೆಚ್ಚುವರಿ ಮಹಾ ನಿರ್ದೇಶಕರಾದ ಡಾ . ಮಹೇಶ್ ಜೋಶಿ, ಹೊನ್ನುಡಿಗಳ ಗಾರುಡಿಗ ಹಾಗೂ ಸಾಹಿತಿಗಳಾದ ಮಹೇಂದ್ರ ಕುರ್ಡಿ, ರಾಜು ಸೂಲೇನ ಹಳ್ಳಿ, ಪದ್ಮಶ್ರೀ ಪುರಸ್ಕೃತರಾದ ಜೋಗತಿ ಮಂಜಮ್ಮ, ಚಲನಚಿತ್ರ ನಿರ್ದೇಶಕರಾದ ಮುರಳಿ ಹಬಿ, ಬಿಂದಾಸ್ ಚಲನಚಿತ್ರ ನಟರಾದ ಗುರು ಹಾಗೂ ಅನೇಕರು ಉಪಸ್ಥಿತರಿದ್ದರು. ಪುಷ್ಪಾ ರಘುರಾಮ್ ಅವರು ಈಗಾಗಲೇ ಕೊಂಕಣಿಯಲ್ಲಿ ಒಟ್ಟು ಐದು ಕೃತಿಗಳನ್ನು ಹೊರತಂದಿದ್ದು, ರಾಷ್ಟ ಪ್ರಶಸ್ತಿ ಹಾಗು ಅನೇಕ ರಾಜ್ಯ ಹಾಗೂ ಜಿಲ್ಲಾ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಜಡ್ಕಲ್ ಗ್ರಾಮ ಪಂಚಾಯಿತಿಯ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಅಧ್ಯಕ್ಷರಾಗಿ ವನಜಾಕ್ಷಿ ಶೆಟ್ಟಿ, ಉಪಾಧ್ಯಕ್ಷರಾಗಿ ಲಕ್ಷ್ಮಣ್ ಶೆಟ್ಟಿ ಆಯ್ಕೆಗೊಂಡಿದ್ದಾರೆ. ಒಟ್ಟು 18 ಸದಸ್ಯಬಲ ಹೊಂದಿರುವ ಜಡ್ಕಲ್ ಗ್ರಾಮ ಪಂಚಾಯಿತಿಯಲ್ಲಿ 10 ಬಿಜೆಪಿ ಬೆಂಬಲಿತರು, 8 ಕಾಂಗ್ರೆಸ್ ಬೆಂಬಲಿತರು ಆಯ್ಕೆಯಾಗಿದ್ದರು. ಮೀಸಲಾತಿ ಆಯ್ಕೆ ಪ್ರಕ್ರಿಯೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗ ಬಿ ಮಹಿಳೆ, ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮೀಸಲಾತಿ ನಿಗದಿಯಾಗಿತ್ತು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಜಡ್ಕಲ್ ಗ್ರಾಮ ಪಂಚಾಯತಿ ವ್ಯಾಪ್ತಿಯ ಮೆಕ್ಕೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಎಸ್‌ಡಿಎಂಸಿ ಸದಸ್ಯರ ತರಬೇತಿ ಕಾರ್ಯಗಾರ ನಡೆಯಿತು. ಎಸ್‌ಡಿಎಂಸಿ ಅಧ್ಯಕ್ಷೆ ರಾಧಾ ಅಧ್ಯಕ್ಷತೆ ವಹಿಸಿದ್ದರು. ಸ್ಥಾಪಕ ಎಸ್‌ಡಿಎಂಸಿ ಅಧ್ಯಕ್ಷರಾದ ಎಂ. ಜೆ. ಬೇಬಿ ಕಾರ್ಯಕ್ರಮ ಉದ್ಘಾಟಿಸಿದರು. ಸ. ಹಿ. ಪ್ರಾ. ಶಾಲೆ ಸಳ್ಕೊಡು ಇಲ್ಲಿನ ಎಸ್.ಡಿ.ಎಂ.ಸಿ ನಿಕಟಪೂರ್ವ ಅಧ್ಯಕ್ಷರಾದ ಮಾಲತಿ ಚಂದ್ರ ಶೆಟ್ಟಿ, ಹಳೆ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಜಗದೀಶ್, ಶಾಲಾ ಮುಖ್ಯೋಪಾಧ್ಯಾಯರಾದ ದೇವಕಿ ಟೀಚರ್ ಉಪಸ್ಥಿತರಿದ್ದರು. ಸ ಹಿ ಪ್ರಾ ಶಾಲೆ ಸಳ್ಕೊಡು ಇಲ್ಲಿನ ಮುಖ್ಯೋಪಾಧ್ಯಾಯರಾದ ಭಾಸ್ಕರ್ ನಾಯ್ಕ್ ತರಬೇತಿ ನೀಡಿದರು. ರಾಮ ಶೆಟ್ಟಿ ಅತ್ತಿಕಾರ್ ಕಾರ್ಯಕ್ರಮ ನಿರ್ವಹಿಸಿದರು. ಶಿಕ್ಷಕಿ ದೇವಕಿ ಸ್ವಾಗತಿಸಿ ವಂದಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕತಾರ್: ಭಾರತದ ರಾಯಭಾರಿ, ಘನತೆವೆತ್ತ ಡಾ. ದೀಪಕ್ ಮಿತ್ತಲ್ ಮತ್ತು ಭಾರತೀಯ ರಾಯಭಾರ ಕಚೇರಿಯ ಸಂಯೋಜಕ ಅಧಿಕಾರಿ ಎಸ್. ಝ್ಹೇವಿಯರ್ ಧನರಾಜ್ ಅವರ ನೇತ್ರತ್ವದಲ್ಲಿ ಭಾರತೀಯ ಸಾಂಸ್ಕ್ರತಿಕ ಕೇಂದ್ರ ( ಐಸಿಸಿ) ಕತಾರ್ನ ನೂತನ ನಿರ್ವಹಣಾ ಸಮಿತಿಯ ಮೊದಲ ಪರಿಚಯಾತ್ಮಕ ಸಭೆ ನಡೆಯಿತು. ಎಲ್ಲಾ ನಿರ್ವಹಣಾ ಸಮಿತಿಯ ಸದಸ್ಯರನ್ನು ಐಸಿಸಿ ಅಧ್ಯಕ್ಷ ಪಿ.ಎನ್. ಬಾಬು ರಾಜನ್ ಪರಿಚಯಿಸಿದರು. ಪ್ರತಿಯೊಬ್ಬ ಸದಸ್ಯರ, ತಮ್ಮ ಹಿನ್ನೆಲೆ, ಪಾತ್ರ ಮತ್ತು ಪ್ರಸ್ತುತ ಐಸಿಸಿ 2021-22ರ ಅವಧಿಯಲ್ಲಿ ನಿಗದಿಪಡಿಸಿದ ಹೊಣೆಗಾರಿಕೆಯನ್ನು ಸಂಕ್ಷಿಪ್ತವಾಗಿ ಪ್ರಸ್ತುತಪಡಿಸಿದರು. ಡಾ.ದೀಪಕ್ ಮಿತ್ತಲ್ ಪರಿಚಯಾತ್ಮಕ ಭಾಷಣ ಮಾಡಿದರು, ಸಮಿತಿಗೆ ಸ್ಪಷ್ಟ ನಿರ್ದೇಶನವನ್ನು ನೀಡಿದರು. ಈ ಸಂದರ್ಭದಲ್ಲಿ 15 ಆಗಸ್ಟ್ 2022ರಂದು 75 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುವತ್ತ ಭಾರತವನ್ನು ಪ್ರತಿನಿಧಿಸಲು ತಂಡವು ಸಂಪೂರ್ಣ ಉತ್ಸುಕವಾಗಿದೆ, ಮುಂದಿನ 75 ವಾರಗಳವರೆಗೆ ವಾರಕ್ಕೊಮ್ಮೆ ವಿವಿಧ ರೀತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಸಮಿತಿಯಿಂದ ನಿರ್ಧರಿಸಲಾಯಿತು . ಐಸಿಸಿ ಉಪಾಧ್ಯಕ್ಷ, ಸುಬ್ರಹ್ಮಣ್ಯ ಹೆಬ್ಬಾಗಿಲು ಅವರು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ತೋಟಗಾರಿಕೆ ಇಲಾಖೆಯ ಅಧೀನದಲ್ಲಿರುವ ರೈತ ಸೇವಾ ಕೇಂದ್ರದ ಆವರಣದಲ್ಲಿ ಪ್ರತಿ ಗುರುವಾರ ರೈತ ಸಂತೆಯನ್ನು ನಡೆಸಿ, ರೈತರಿಗೆ ನೇರ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಿ, ಮಧ್ಯವರ್ತಿಗಳ ಹಾವಳಿ ತಪ್ಪಿಸುವಂತೆ ಹಾಗೂ ಗ್ರಾಹಕರಿಗೆ ತಾಜಾ ತರಕಾರಿ ಮತ್ತು ಇತರೇ ಪದಾರ್ಥಗಳನ್ನು ರೈತ ಸಂತೆಯ ಮೂಲಕ ಪೂರೈಸುವಂತೆ ಜಿಲ್ಲಾಧಿಕಾರಿ ಜಿ. ಜಗದೀಶ್ ಸೂಚನೆ ನೀಡಿದರು. ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರೈತ ಸೇವಾ ಕೇಂದ್ರದ ಜಿಲ್ಲಾ ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರೈತ ಸಂತೆಯಲ್ಲಿ ಭಾಗವಹಿಸುವ ರೈತರಿಗೆ ಇಲಾಖೆ ವತಿಯಿಂದ ಗುರುತಿನ ಚೀಟಿಗಳನ್ನು ನೀಡುವಂತೆ ಸೂಚಿಸಿದ ಅವರು, ಆಸಕ್ತಿಯುಳ್ಳ ರೈತರು ರೈತ ಸಂತೆಯಲ್ಲಿ ಭಾಗವಹಿಸಲು ಸಲ್ಲಿಸಿರುವ ಅರ್ಜಿಗಳನ್ನು ಸ್ವೀಕರಿಸುವಂತೆ ತೋಟಗಾರಿಕಾ ಉಪನಿರ್ದೇಶಕರಿಗೆ ಸೂಚಿಸಿದರು. ಸಭೆಯಲ್ಲಿ ರೈತ ಸೇವಾ ಕೇಂದ್ರದ ಜಿಲ್ಲಾ ಉಸ್ತುವಾರಿ ಸಮಿತಿಯ ಸದಸ್ಯರು, ಮಳಿಗೆದಾರರು, ಬೆನಗಲ್ ತರಕಾರಿ ಬೆಳೆಗಾರರ ಸೌಹಾರ್ದ ಸೊಸೈಟಿಯ ಕಾರ್ಯದರ್ಶಿ, ಮತ್ತಿತರರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸುರಭಿ ಬೈಂದೂರು ಕಲಾಸಂಸ್ಥೆಯ ನಿರ್ದೇಶಕ, ಶಿಕ್ಷಕ ಸುಧಾಕರ ಪಿ. ಬೈಂದೂರು ಅವರಿಗೆ ಬೈಂದೂರು ಜೆಸಿಐ ಸಿಟಿಯ ಜೆಸಿ ಸಂಭ್ರಮ-2020ರ ಸಂದರ್ಭ ಸಾಧನಾಶ್ರೀ ಪ್ರಶಸ್ತಿ ಪ್ರದಾನ ಮಾಡಲಾಯಿತು. ಇಲ್ಲಿನ ಸೀತಾರಾಮಚಂದ್ರ ಕಲ್ಯಾಣ ಮಂಟಪದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಸಮಾರಂಭದಲ್ಲಿ ವಲಯಾಧ್ಯಕ್ಷ ಮಣಿಕಂಠ ಎಸ್, ಬೈಂದೂರು ಜೆಸಿಐ ನಿಕಟಪೂರ್ವಾಧ್ಯಕ್ಷೆ ಪ್ರಿಯದರ್ಶಿನಿ ಬೆಸ್ಕೂರು, ಜೆಸಿಐ ಅಧ್ಯಕ್ಷ ಶ್ರೀಧರ ಆಚಾರ್ಯ, ನಿಕಟಪೂರ್ವ ಜೆಜೆಸಿ ಅಧ್ಯಕ್ಷೆ ಭಾನುಮತಿ ಬಿ. ಕೆ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬಂದೂರು: ಶಿರೂರು ಗ್ರಾಮ ಪಂಚಾಯಿತಿಯ ಅಧ್ಯಕ್ಷ ಉಪಾಧ್ಯಕ್ಷ ಆಯ್ಕೆ ಪ್ರಕ್ರಿಯೆ ಇಂದು ಶುಕ್ರವಾರ ನಡೆಯಿತು. ಅಧ್ಯಕ್ಷರಾಗಿ ಜಿ. ಯು. ದಿಲ್‌ಶಾದ್ ಬೇಗಂ ಹಾಗೂ ಉಪಾಧ್ಯಕ್ಷರಾಗಿ ರವೀಂದ್ರ ಶೆಟ್ಟಿ ಪಟೇಲರಮನೆ ಆಯ್ಕೆಯಾಗಿದ್ದಾರೆ. ಒಟ್ಟು 44 ಸದಸ್ಯ ಬಲ ಹೊಂದಿರುವ ಶಿರೂರು ಗ್ರಾಮ ಪಂಚಾಯಿತಿಯಲ್ಲಿ 13 ಬಿಜೆಪಿ ಬೆಂಬಲಿತ, 24 ಕಾಂಗ್ರೆಸ್ ಬೆಂಬಲಿತ, ಹಾಗೂ 4 ಎಸ್‌ಡಿಪಿಐ ಸದಸ್ಯರು ಆಯ್ಕೆಯಾಗಿದ್ದರು. ಮೀಸಲಾತಿ ಆಯ್ಕೆ ಪ್ರಕ್ರಿಯೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗ ಎ ಮಹಿಳೆ, ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮೀಸಲಾತಿ ನಿಗದಿಯಾಗಿತ್ತು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಮರವಂತೆ ಕಡಲತೀರದಲ್ಲಿ ಸಮುದ್ರ ಅಲೆಗಳ ಶಕ್ತಿ ಬಳಸಿ ವಿದ್ಯುತ್ ಉತ್ಪಾದಿಸುವ ಘಟಕ ಸ್ಥಾಪಿಸಲು ಶುಕ್ರವಾರ ಭೂಮಿಪೂಜೆ ನೆರವೇರಿತು. ಶಿವಳ್ಳಿಯ ಸುಸಿ ಗ್ಲೋಬಲ್ ರಿಸರ್ಚ್ ಸೆಂಟರ್‌ನ ವಿಜಯಕುಮಾರ ಹೆಗ್ಡೆ ಮಾತನಾಡಿ, ಹಿಂದೆ ಮಲ್ಪೆ ಮತ್ತು ಕೆಮ್ಮಣ್ಣಿನ ಕಡಲತೀರಗಳಲ್ಲಿ ಸಮುದ್ರ ಅಲೆಗಳ ಶಕ್ತಿ ಬಳಸಿ ವಿದ್ಯುತ್ ಉತ್ಪಾದಿಸಲು ಪ್ರಾಯೋಗಿಕ ನೆಲೆಯಲ್ಲಿ ಸ್ಥಾಪಿಸಿದ ಘಟಕಗಳು ಯಶಸ್ವಿಯಾಗಿವೆ. ಮರವಂತೆ ತೀರ ಈ ಉದ್ದೇಶಕ್ಕೆ ಹೆಚ್ಚು ಪ್ರಶಸ್ತ ಎಂದು ಅಧ್ಯಯನದಿಂದ ದೃಢಪಟ್ಟಿರುವುದರಿಂದ ಇಲ್ಲಿ ದೊಡ್ಡಮಟ್ಟದ ಘಟಕ ಸ್ಥಾಪಿಸಲು ನಿರ್ಧರಿಸಲಾಗಿದೆ. ಜಾಗತಿಕ ತಾಪಮಾನ ಕುರಿತು ದೀರ್ಘಕಾಲದಿಂದ ಇದ್ದ ಆಸಕ್ತಿ ನನ್ನನ್ನು ಈ ಕ್ಷೇತ್ರದಲ್ಲಿ ಸಂಶೋಧನೆಗೆ ಪ್ರೇರೇಪಿಸಿತು. ನರೇಂದ್ರ ಮೋದಿ ಗುಜರಾತಿನ ಮುಖ್ಯ ಮಂತ್ರಿಯಾಗಿದ್ದಾಗ ಈ ಉದ್ದೇಶಕ್ಕೆ ನನ್ನನ್ನು ಆಹ್ವಾನಿಸಲಾಗಿತ್ತು. ಆದರೆ ಅಲ್ಲಿನ ತೀರ ಅಷ್ಟು ಅನುಕೂಲಕರ ಅಲ್ಲದ್ದರಿಂದ ಅದು ಸಾಧ್ಯವಾಗಲಿಲ್ಲ. ಮರವಂತೆಯಲ್ಲಿ ಸಧ್ಯ 10 ಕಿಲೊವಾಟ್ ಉತ್ಪಾದಿಸುವ ಘಟಕ ಸ್ಥಾಪಿಸಿ, ಅರ್ಹತಾ ದೃಢೀಕರಣ ಪಡೆದ ಬಳಿಕ ಅದನ್ನು ಮೇಲ್ದರ್ಜೆಗೇರಿಸಲಾಗುವುದು. ಪ್ರಧಾನಿ ಈಗಲೂ ಈ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ನಾಡಾ ಗ್ರಾಮ ಪಂಚಾಯಿತಿಯ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಅಧ್ಯಕ್ಷರಾಗಿ ದಿನೇಶ ಶೆಟ್ಟಿ, ಉಪಾಧ್ಯಕ್ಷರಾಗಿ ಪದ್ದು ಪೂಜಾರ್ತಿ ಆಯ್ಕೆಗೊಂಡಿದ್ದಾರೆ. ಒಟ್ಟು 19 ಸದಸ್ಯ ಬಲ ಹೊಂದಿರುವ ನಾಡ ಗ್ರಾಮ ಪಂಚಾಯಿತಿಯಲ್ಲಿ 14 ಬಿಜೆಪಿ ಬೆಂಬಲಿತ 3 ಕಾಂಗ್ರೇಸ್ ಬೆಂಬಲಿತ ಹಾಗೂ 2 ಸಿಪಿಎಂ ಬೆಂಬಲಿತರು ಆಯ್ಕೆಯಾಗಿದ್ದರು. ಮೀಸಲಾತಿ ಪ್ರಕ್ರಿಯೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ, ಉಪಾಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗ ಎ ಮಹಿಳೆ ಮೀಸಲಾತಿ ನಿಗದಿಯಾಗಿತ್ತು.

Read More