ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಗ್ರಾಮ ಸ್ವರಾಜ್ಯ ಕೇಂದ್ರದ ಲೋಗೋವನ್ನು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಅವರು ಇತ್ತೀಚಿಗೆ ಅನಾವರಣಗೊಳಿಸಿದರು. ಈ ಸಂದರ್ಭದಲ್ಲಿ ಕುಂದಾಪುರ ಉಪವಿಭಾಗಾಧಿಕಾರಿ ರಾಜು ಕೆ., ತಹಶಿಲ್ದಾರ್ ಆನಂದಪ್ಪ, ಗ್ರಾಮ ಸ್ವರಾಜ್ಯ ಕೇಂದ್ರದ ಸಂಸ್ಥಾಪಕರಾದ ವೀರೇಂದ್ರ ಎಸ್ ಪೂಜಾರಿ, ರೂಪೇಶ್ ಬೈಂದೂರು, ಅಭಿಷೇಕ್, ನಾಗೇಶ್ ಪೂಜಾರಿ ಇತರರು ಇದ್ದರು. ಗ್ರಾಮ ಸ್ವರಾಜ್ಯ ಕೇಂದ್ರ: ಈ ಗ್ರಾಮ ಸ್ವರಾಜ್ಯ ಕೇಂದ್ರವು ಗ್ರಾಮೀಣ ಭಾಗದಲ್ಲಿ ಉದ್ಯೋಗ ಸೃಷ್ಟಿಯ ಮೂಲಕ ಸದೃಢ ಭಾರತವನ್ನು ಕಟ್ಟುವ ಉದ್ದೇಶ ಹೊಂದಿದೆ. ಗ್ರಾಮೀಣಾಭಿವೃದ್ಧಿ, ಕೃಷಿ ಬಲವರ್ಧನೆ,ಉದ್ಯೋಗ ಸೃಷ್ಟಿ, ಬಡತನ ನಿರ್ಮೂಲನೆಯ ಉದ್ದೇಶದಿಂದ ಉಡುಪಿ ಜಿಲ್ಲೆಯ ಪ್ರತಿ ಗ್ರಾಮಪಂಚಾಯತ್ ಗಳಲ್ಲಿ ಗ್ರಾಮ ಸ್ವರಾಜ್ ಕೇಂದ್ರ ಸ್ಥಾಪನೆಯಾಗುತ್ತಿದೆ.ಮಹಾತ್ಮ ಗಾಂಧಿ ಹಾಗೂ ಎಪಿಜೆ ಕಲಾಂ ಕಂಡ ಕನಸ್ಸನ್ನ ನನಸು ಮಾಡಲು ಯುವಕರ ತಂಡ ಹೊರಟಿದೆ. ಜನರಿಗೆ ಸ್ವಗ್ರಾಮದಲ್ಲೇ ಉದ್ಯೋಗ ನೀಡುವ ಮೂಲಕ ಸದೃಡ ಗ್ರಾಮವನ್ನು ನಿರ್ಮಿಸಬಹುದು. ಕೃಷಿಯಲ್ಲಿ ಕುಂದುಕೊರತೆಗಳನ್ನು ನಿವಾರಿಸಿ, ಬೆಳೆ ವಿವರ, ಹವಾಮಾನ ವರದಿ, ಸರ್ಕಾರಿ ಯೋಜನೆಗಳ ಕುರಿತ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ಉಳ್ಳೂರು ಕಟ್ಟಿನಬೈಲಿನ ಅಭಿಷೇಕ್ ಶೆಟ್ಟಿ 2021ರ ಗೇಟ್ (ಗ್ರ್ಯಾಜುವೇಟ್ ಅಪ್ಟಿಟ್ಯೂಡ್ ಟೆಸ್ಟ್ ಇನ್ ಎಂಜಿನಿಯರಿಂಗ್) ಪರೀಕ್ಷೆಯಲ್ಲಿ ರಾಷ್ಟ್ರಮಟ್ಟದಲ್ಲಿ 5ನೆ ರ್ಯಾಂಕ್ ಗಳಿಸಿ ವಿಕ್ರಮ ಮೆರೆದಿದ್ದಾರೆ. ತೀರ ಗ್ರಾಮೀಣ ಪ್ರದೇಶದ ಬಡ ಕುಟುಂಬಕ್ಕೆ ಸೇರಿರುವ ಅಭಿಷೇಕ್, ಪಿಯುಸಿ ವರೆಗಿನ ಶಿಕ್ಷಣವನ್ನು ಉಳ್ಳೂರು ಮತ್ತು ಶಂಕರನಾರಾಯಣದಲ್ಲಿ ಪಡೆದರು. ಆ ಬಳಿಕ ಮೈಸೂರಿನ ಎನ್ಐಇಯಿಂದ ಮೆಕ್ಯಾನಿಕಲ್ ಎಂಜಿನಿಯರಿಂಗ್ ಪದವಿಯನ್ನು ಎರಡು ಚಿನ್ನದ ಪದಕಗಳೊಂದಿಗೆ ಗಳಿಸಿದರು. 2020ರ ಗೇಟ್ ಪರೀಕ್ಷೆಯಲ್ಲಿ ಅವರಿಗೆ ರಾಷ್ಟ್ರಮಟ್ಟದಲ್ಲಿ 789ನೆ ರ್ಯಾಂಕ್ ಬಂತು. ಇದರಿಂದ ತೃಪ್ತರಾಗದ ಅವರು ಛಲದೊಂದಿಗೆ ಸತತ ಅಧ್ಯಯನ ನಡೆಸಿ 2021ರಲ್ಲಿ ಎರಡನೆ ಬಾರಿ ಪರೀಕ್ಷೆ ಎದುರಿಸಿದರು. ಅದರಲ್ಲಿ ಗಳಿಸಿದ 5ನೆ ರ್ಯಾಂಕ್ ಇದೀಗ ಅವಕಾಶದ ಬಾಗಿಲುಗಳನ್ನು ತೆರೆದಿದೆ. ಅವರು ದೇಶದ ಪ್ರತಿಷ್ಠಿತ ಐಐಎಸ್ಸಿ, ಐಐಟಿ, ಎನ್ಐಟಿಗಳಲ್ಲಿ ತಮ್ಮ ಶಿಕ್ಷಣ ಮುಂದುವರಿಸಬಹುದು ಅಥವಾ ಸಾರ್ವಜನಿಕ ವಲಯದ ಸಂಸ್ಥೆಗಳಲ್ಲಿ, ಕೇಂದ್ರ ಸರ್ಕಾರದಲ್ಲಿ ಉದ್ಯೋಗ ಪಡೆಯಬಹುದು. ಅವರ ತಂದೆ ಬೈಂದೂರು ತಾಲ್ಲೂಕಿನ ಹೇರೂರು ಗ್ರಾಮದ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ರಂಗಭೂಮಿ ಬದುಕಿನ ನೋವು-ನಲಿವನ್ನು ವಾಸ್ತವದ ನೆಲೆಯಲ್ಲಿ ಧ್ವನಿಸುವ ಪ್ರಕ್ರಿಯೆ ಆಗಿರುವುದರಿಂದ ಅದು ಪರಿಣಾಮಕಾರಿಯಾಗಿ ಪ್ರೇಕ್ಷಕರನ್ನು ತಲುಪುತ್ತದೆ ಎಂದು ಬೈಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ರಘು ನಾಯ್ಕ್ ಹೇಳಿದರು. ಕರ್ನಾಟಕ ನಾಟಕ ಅಕಾಡೆಮಿ ಬೆಂಗಳೂರು ಹಾಗೂ ಲಾವಣ್ಯ ರಿ. ಬೈಂದೂರು ಸಹಯೋಗದೊಂದಿಗೆ ಮಯ್ಯಾಡಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾದ ವಿಶ್ವ ರಂಗಭೂಮಿ ದಿನಾಚರಣೆ 2021ರ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿ ರಂಗಭೂಮಿ ಕಟ್ಟುವ ಪ್ರಕ್ರಿಯೆಯಲ್ಲಿ ಸಂಘಟನೆ, ನಾಟಕದ ಎಲ್ಲಾ ವಿಭಾಗ, ನಟರು ಹಾಗೂ ಪ್ರೇಕ್ಷಕರು ಪ್ರಮುಖರಾಗುತ್ತಾರೆ. ಹಾಗಾಗಿಯೇ ರಂಗಭೂಮಿ ಇಂದಿಗೂ ಮಹತ್ವ ಪಡೆದುಕೊಂಡಿದೆ ಎಂದರು. ಜಿಲ್ಲಾ ಪಂಚಾಯತ್ ಸದಸ್ಯ ಶಂಕರ ಪೂಜಾರಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಲಾವಣ್ಯ ಅಧ್ಯಕ್ಷ ಎಚ್. ಉದಯ ಆಚಾರ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಪಂಚಾಯತ್ ಉಪಾಧ್ಯಕ್ಷೆ ಮಾಲಿನಿ ಕೆ, ಮಯ್ಯಾಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಹಿರಿಯ ಪ್ರಾಥಮಕ ಶಾಲೆಯ ಮುಖ್ಯೋಪಾಧ್ಯಾಯ ರಾಜು ಎಸ್. ಕಾರ್ಯಕ್ರಮದಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಕಲಿಯುಗದಲ್ಲಿ ಬಡತನ, ಸಾಮಾಜಿಕ ಅಸಮಾನತೆಗಳು ಕಡಿಮೆಯಾಗಿದೆ, ತಂತ್ರಜ್ಞಾನಗಳು ಬೆಳವಣಿಗೆಯಾಗಿದೆ. ಹಾಗಾಗಿ ಕಲಿಯುಗ ಕೆಟ್ಟದಲ್ಲ, ಆದರೆ ಕೆಟ್ಟದನ್ನೇ ಸ್ವೀಕರಿಸುವ ಮನಃಸ್ಥಿತಿ ಸರಿಯಲ್ಲ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ತಿಳಿಸಿದರು. ಅವರು ಮೂಡುಗಿಳಿಯಾರು ಅಲ್ಸಕೆರೆ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜನಸೇವಾ ಟಸ್ಟ್ ಆಶ್ರಯದಲ್ಲಿ ಶನಿವಾರ ಜರುಗಿದ ಅಭಿಮತ ಸಂಭ್ರಮ ಹಾಗೂ ಮಹಾಮೃತ್ಯಂಜಯ ಯಾಗ ಕಾರ್ಯಕ್ರಮದಲ್ಲಿ ಬಸ್ರೂರು ಮಹಾಲಿಂಗೇಶ್ವರ ದೇವಸ್ಥಾನದ ಮುಕ್ತೇಸರ ಅಪ್ಪಣ್ಣ ಹೆಗ್ಡೆಯವರಿಗೆ ಕೀರ್ತಿ ಕಲಶ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು. ಸಂಘ-ಸಂಸ್ಥೆಗಳು ಬದುಕಲ್ಲಿ ಭರವಸೆ ಕಳೆದುಕೊಂಡವರ ಬಾಳಲ್ಲಿ ಭರವಸೆ ಮೂಡಿಸುವ ಕಾರ್ಯಗಳನ್ನು ಮಾಡಬೇಕಿದೆ. ಕೇವಲ ಮನೋರಂಜನೆಗಾಗಿ ಕಾರ್ಯಕ್ರಮಗಳು ಆಯೋಜನೆಗೊಳ್ಳುವ ಇಂದಿನ ಕಾಲಘಟ್ಟದಲ್ಲಿ ಮೂಡುಗಿಳಿಯಾರು ಸುತ್ತ-ಮುತ್ತಲಿನ ಒಂದಷ್ಟು ಯುವಕರು ವಸಂತ್ ಗಿಳಿಯಾರ್ ಅವರ ನೇತೃತ್ವದಲ್ಲಿ ಧಾರ್ಮಿಕ ಚಿಂತನೆಯೊಂದಿಗೆ ಕೈಗೊಂಡ ಈ ಕಾರ್ಯಕ್ರಮ ಅತ್ಯಂತ ಶ್ರೇಷ್ಠವಾದದ್ದು ಎಂದು ಹೆಗಡೆಯವರು ತಿಳಿಸಿದರು. ಕೀರ್ತಿ ಕಲಶ ಪ್ರಶಸ್ತಿಗೆ ಭಾಜನರಾದ ಬಸ್ರೂರು ಮಹಾಲಿಂಗೇಶ್ವರ ದೇವಸ್ಥಾನದ ಮೊಕ್ತೇಸರ ಅಪ್ಪಣ್ಣ ಹೆಗ್ಡೆ ಮಾತನಾಡಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ: ಆಳ್ವಾಸ್ ಕಾಲೇಜಿನ ರಂಗ ಅಧ್ಯಯನ ಕೇಂದ್ರದ ವತಿಯಿಂದ ವಿಶ್ವ ರಂಗಭೂಮಿ ದಿನದ ಅಂಗವಾಗಿ “ಉಪನ್ಯಾಸ – ರಂಗ ಗೀತೆ ಗಾಯನ” ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಹಿರಿಯ ಪತ್ರಕರ್ತರು ಹಾಗೂ ಆಳ್ವಾಸ್ ನ್ಯೂಸಿಯಂನ ಸಂಯೋಜಕರಾದ ಶ್ರೀಕರ ಎಲ್ ಭಂಡಾರ್ಕರ್ ಮಾತನಾಡಿ, ಪ್ರತಿಯೊಬ್ಬರೂ ನಾಟಕದಲ್ಲಿ ಆಸಕ್ತಿಯನ್ನು ಬೆಳೆಸಿಕೊಳ್ಳಬೇಕು. ನಾಟಕದ ಮಹಿಮೆಯನ್ನು ಅರಿತು ಅದನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು. ಈ ಸಂದರ್ಭದಲ್ಲಿ ಮಾತನಾಡಿದ ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ಸಂಯೋಜಕರು ಜೀವನ್ ರಾಮ್ ಸುಳ್ಯ, ಆಧುನಿಕ ಪ್ರಪಂಚದಲ್ಲಿ ನಾಟಕ ಎನ್ನುವುದು ಭರಾಟೆಯಾಗಿಬಿಟ್ಟಿದೆ. ಆದರೆ, ರಂಗಭೂಮಿಯಿಲ್ಲದೆ ಯಾರೂ ಬದುಕಲು ಸಾದ್ಯವಿಲ್ಲ. ಸಣ್ಣ ಮಗುವಿನಿಂದ ಹಿಡಿದು, ಪ್ರತಿಯೊಬ್ಬರೂ ಪ್ರತೀ ಸಂದರ್ಭದಲ್ಲೂ ನಟನೆ ಮಾಡುತ್ತಾರೆ. ಅದರಲ್ಲಿ ಕೆಲವರು ರಂಗಕ್ಷೇತ್ರದಲ್ಲಿ ಜೀವನವನ್ನು ಕಂಡುಕೊಳ್ಳುತ್ತಾರೆ. ಆದರೆ, ಯಾರೂ ಕೂಡ ತಾವು ನಡೆದುಕೊಂಡು ಬಂದ ದಾರಿಯನ್ನು ಮರೆಯಬಾರದು” ಎಂದರು. ರಂಗಭೂಮಿಯ ಮೇಲೆ ಸಾಮಾಜಿಕ ಜಾಲತಾಣದ ಪ್ರಭಾವ ಬಗ್ಗೆ ಮಾತನಾಡುತ್ತಾ, ಡಿಜಿಟಲ್ ಯುಗದಲ್ಲಿ ಯಾರು, ಯಾವಾಗ ಬೇಕಾದರೂ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ಗುಜ್ಜಾಡಿ ಬೆನ್ಗೆರೆ ಶ್ರೀ ಜೆಟ್ಟಿಗೇಶ್ವರ ಮತ್ತು ಭದ್ರ ಮಹಾಂಕಾಳಿ ಸಹಪರಿವಾರ ಗರಡಿಯ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ನೂತನ ಸಮಿತಿಯ ಅಧ್ಯಕ್ಷರಾಗಿ ಬಾಬು ಜೆ. ಪೂಜಾರಿ ಉಪ್ಪುಂದ ಅವರು ಪುನರಾಯ್ಕೆಯಾಗಿದ್ದಾರೆ. ಪ್ರಧಾನ ಕಾರ್ಯದರ್ಶಿಯಾಗಿ ಪುಟ್ಟಯ್ಯ ಪೂಜಾರಿ ಹೊರ್ಕೊಡು ಮನೆ, ಕಾರ್ಯದರ್ಶಿಯಾಗಿ ನರಸಿಂಹ ಪೂಜಾರಿ ಅರೆಶಿರೂರು, ರಾಮ ಪೂಜಾರಿ ಯಡ್ತರೆ, ಸುಧಾಕರ್ ಪೂಜಾರಿ ಹೊರ್ಕೊಡು, ಸತೀಶ್ ಪೂಜಾರಿ ವಕ್ವಾಡಿ, ಜೋಗಿ ಪೂಜಾರಿ ತಾರಾಪತಿ, ರಾಮ ಪೂಜಾರಿ ಬೆಟ್ಯಾನಿ, ಗೌರವ ಅಧ್ಯಕ್ಷರಾಗಿ ಸುರೇಶ್ ಪೂಜಾರಿ ಚಿತ್ತೂರು, ಉಪಾಧ್ಯಕ್ಷರಾಗಿ ಮಹಾಬಲ ದೇವಾಡಿಗ ಬೆನ್ಗೆರೆ, ಮಾಧವ ಪೂಜಾರಿ ಮಲಗದ್ದೆ ಮನೆ ಬಡಾಕೆರೆ, ಅಚ್ಚುತ ನಾಯಕವಾಡಿ, ಅನಂತ ಕಾರ್ವಿ ಮಡಿ, ಗಣಪತಿ ಪಟೇಲ್, ಗಣಪತಿ ಪೂಜಾರಿ ಉಪ್ಪುಂದ, ಗೌರವ ಸಲಹೆಗಾರಾಗಿ ರಾಮಚಂದ್ರ ಮಯ್ಯ, ಮಹೇಶ್ ಮಯ್ಯ, ಕೃಷ್ಣ ಪೂಜಾರಿ ಹುಬ್ಬಳ್ಳಿ, ಎಸ್. ಕೆ. ಪೂಜಾರಿ ಗೋವಾ, ರಾಮ ಪೂಜಾರಿ ಬೆಂಗಳೂರು, ದುಗ್ಗಪ್ಪ ಪೂಜಾರಿ ಮುಂಬೈ, ಬಾಬೇಂದ್ರ ಪೂಜಾರಿ ಮುಂಬೈ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸೆಲ್ಕೋ ಎನರ್ಜಿ, ಕೆನರಾ ಬ್ಯಾಂಕ್ ಗ್ರಾಮೀಣ ಸ್ವಉದ್ಯೋಗ ತರಬೇತಿ ಸಂಸ್ಥೆ ಮಣಿಪಾಲ, ತೋಟಗಾರಿಕೆ ಇಲಾಖೆ ಕುಂದಾಪುರ, ಪಶು ವೈದ್ಯಾಧಿಕಾರಿಗಳು ಕುಂದಾಪುರ ಮತ್ತು ವರ್ಕಿಂಗ್ ಚಿಲ್ಡ್ರನ್(ಸಿಡಬ್ಲ್ಯೂಸಿ) ಸಂಸ್ಥೆಯ ಜಂಟಿ ಸಹಭಾಗಿತ್ವದಲ್ಲಿ ಸ್ಥಳೀಯ ಸಮುದಾಯಕ್ಕೆ ಸ್ವ ಉದ್ಯೋಗದ ಮಾಹಿತಿ ಕಾರ್ಯಾಗಾರ ನಮ್ಮಭೂಮಿಯಲ್ಲಿ ನಡೆಯಿತು. ಸೆಲ್ಕೋ ಎನರ್ಜಿ ಸಂಸ್ಥೆಯ ಗುರುಪ್ರಕಾಶ ಶೆಟಿ, ಕೆನರಾ ಬ್ಯಾಂಕ್ ಗ್ರಾಮೀಣ ಸ್ವಉದ್ಯೋಗ ತರಬೇತಿ ಸಂಸ್ಥೆಯ ಉಪನ್ಯಾಸಕಿ ನವ್ಯ, ಸಿಡಬ್ಲ್ಯೂಸಿ ಸಂಸ್ಥೆಯ ನಿರ್ದೇಶಕರಾದ ಶಿವಮೂರ್ತಿ ಭಂಡಾರ್ಕರ್ ಮತ್ತು ನಮ್ಮ ಭೂಮಿಯ ಮಕ್ಕಳ ಪಂಚಾಯತ್ನ ಅಧ್ಯಕ್ಷರಾದ ಪ್ರೀತಮ್ ಸೇರಿ ಗಿಡಕ್ಕೆ ಗೊಬ್ಬರ ಮತ್ತು ನೀರು ಹಾಕುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸೇಲ್ಕೋ ಎನರ್ಜಿಯ ಗುರುಪ್ರಕಾಶ ಶೆಟ್ಟಿ ಮಾತನಾಡಿ, ಹಳ್ಳಿಯಲ್ಲಿ ದಿನನಿತ್ಯದ ಬಳಕೆಯ ವಸ್ತುಗಳನ್ನು ಪಟ್ಟಿ ಮಾಡಿ ಅದರಲ್ಲಿ ಹೆಚ್ಚು ಹೆಚ್ಚು ವಸ್ತುಗಳು ಹಳ್ಳಿಯಲ್ಲಿಯೇ ಉತ್ಪಾದಿಸುವಂತಾದರೆ ಹಳ್ಳಿಯ ಜನ ವಲಸೆ ಹೊಗುವುದನ್ನು ತಪ್ಪಿಸಬಹುದು ಮತ್ತು ಹಳ್ಳಿಯಲ್ಲಿಯೇ ಸ್ವಾವಲಂಬಿ ಜೀವನ ನಡೆಸಬಹುದು ಎಂದರು. ಮಣಿಪಾಲ ಮಣಿಪಾಲ ಕೆನರಾ ಬ್ಯಾಂಕ್…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಅನ್ನಭಾಗ್ಯ ಯೋಜನೆಯಡಿ ದುರ್ಬಲ ಕುಟುಂಬಗಳಿಗೆ ನೀಡುವ ಅಂತ್ಯೋದಯ ಮತ್ತು ಆದ್ಯತಾ (ಬಿಪಿಎಲ್) ಕಾರ್ಡನ್ನು ಆರ್ಥಿಕವಾಗಿ ಸಧೃಡವಾದ ಕೆಲವು ಕುಟುಂಬಗಳು ಆದ್ಯತಾ (ಬಿಪಿಎಲ್) ಕಾರ್ಡ್ ಪಡೆಯುವ ಬಗ್ಗೆ ಮಾನದಂಡವನ್ನು ಉಲ್ಲಂಘಿಸಿ, ಸುಳ್ಳು ಮಾಹಿತಿ ನೀಡಿ, ಅಂತ್ಯೋದಯ ಮತ್ತು ಆದ್ಯತಾ (ಬಿಪಿಎಲ್) ಕಾರ್ಡ್ ಪಡೆದುಕೊಂಡಿರುವುದು ಕಂಡುಬಂದಿದ್ದು, ಅಂತಹ ಅನರ್ಹರು ಪಡೆದಿರುವ ಕಾರ್ಡನ್ನು ಪತ್ತೆಹಚ್ಚಿ ಆದ್ಯತೇತರ ಪಡಿತರ ಚೀಟಿಯನ್ನಾಗಿ ಪರಿವರ್ತಿಸುವ ಬಗ್ಗೆ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಆರ್ಥಿಕವಾಗಿ ಸಧೃಢವಾಗಿರುವ ಕುಟುಂಬಗಳು ಹೊಂದಿರುವ ಕಾರ್ಡನ್ನು ಸ್ವಯಂ ಪ್ರೇರಿತವಾಗಿ ಹಿಂದಿರುಗಿಸಲು ಏಪ್ರಿಲ್ 15 ಕೊನೆಯ ದಿನವಾಗಿದೆ. ತಪ್ಪಿದಲ್ಲಿ ಸರ್ಕಾರ ನಿಗಧಿಪಡಿಸಿರುವ ಮಾನದಂಡ ವಿರುದ್ಧವಾಗಿ ಪಡೆದಿರುವ ಅಂತ್ಯೋದಯ ಮತ್ತು ಆದ್ಯತಾ ಪಡಿತರ ಚೀಟಿ ಹೊಂದಿರುವುದು ಕಾನೂನು ಬಾಹಿರವಾಗಿದ್ದು, ಅಂತವರ ವಿರುದ್ಧ ಕ್ರಮ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಜೆಸಿಐ ಬೈಂದೂರು ಸಿಟಿ ವತಿಯಿಂದ ಸೆಲ್ಯೂಟು ಸೈಲೆಂಟ್ ವರ್ಕರ್ ಕಾರ್ಯಕ್ರಮದಡಿ ಯೋಧ ಮೋಹನ ದೇವಾಡಿಗ ಅವರ ಧರ್ಮಪತ್ನಿ ಯಶೋಧ ಅವರನ್ನು ಸನ್ಮಾನಿಸಲಾಯಿತು. ಜೆಸಿಐ ಪೂರ್ವ ಅಧ್ಯಕ್ಷರಾದ ಪ್ರಿಯದರ್ಶಿನಿ ಬೆಸ್ಕೂರ್ ಅವರ ಮನೆಯ ಸಭಾಂಗಣದಲ್ಲಿ ಗುರುತಿಸಿ ಗೌರವಿಸಲಾಯಿತು, ಜೆಸಿಐ ಬೈಂದೂರು ಸಿಟಿ ಅಧ್ಯಕ್ಷರಾದ ಶ್ರೀಧರ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು, ಈ ಸಂದರ್ಭದಲ್ಲಿ ಜೆಸಿ ವಲಯ ಉಪಾಧ್ಯಕ್ಷರಾದ ನಾಗೇಶ್ ನಾವಡ, ಜೆಸಿ ಬೈಂದೂರು ಸಿಟಿ ವಲಯಾಧಿಕಾರಿ ಮಣಿಕಂಠ ಎಸ್ ದೇವಾಡಿಗ, ಉಪಾಧ್ಯಕ್ಷೆ ಸೌಮ್ಯ, ಘಟಕದ ಕಾರ್ಯದರ್ಶಿ ಸವಿತಾ ದಿನೇಶ್ ಗಾಣಿಗ, ಜೊತೆ ಕಾರ್ಯದರ್ಶಿ ಗೀತಾ ಬೈಂದೂರ್, ಜೇಸಿರೇಟ್ ಕಾರ್ಯದರ್ಶ ಗುಲಾಬಿ ಮರವಂತೆ, ಸದಸ್ಯರಾದ ಸಕ್ಕುಕಲ್ಮಕ್ಕಿ, ರಾಘವೇಂದ್ರ ಹೊಳ್ಳ, ರಾಘವೇಂದ್ರ ಶೇಟ್, ಸತೀಶ್ ದೇವಾಡಿಗ, ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಗಳು, ಖಾಸಗಿ ಸಂಸ್ಥೆಗಳು, ಉದ್ದಿಮೆಗಳು, ಕಾರ್ಖಾನೆಗಳಲ್ಲಿ ಕನ್ನಡವನ್ನು ಕಡ್ಡಾಯವಾಗಿ ಬಳಸಬೇಕು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ. ಅವರು ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ , ಜಿಲ್ಲಾ ಮಟ್ಟದ ಕನ್ನಡ ಜಾಗೃತಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರಸ್ತುತ ಕನ್ನಡ ಕಾಯಕ ವರ್ಷವನ್ನು ಆಚರಿಸಲಾಗುತ್ತಿದ್ದು, ಈ ಕುರಿತು ಸರ್ಕಾರದಿಂದ ನೀಡಿರುವ ಅಧಿಕೃತ ಚಿಹ್ನೆಯನ್ನು ಎಲ್ಲಾ ಸರ್ಕಾರಿ ಇಲಾಖೆಗಳು ತಮ್ಮ ದೈನಂದಿನ ಪತ್ರ ವ್ಯವಹಾರಗಳಲ್ಲಿ ಕಡ್ಡಾಯವಾಗಿ ಬಳಸುವಂತೆ ಸೂಚನೆ ನೀಡಿದ ಜಿಲ್ಲಾಧಿಕಾರಿ ಜಿ.ಜಗದೀಶ್, ಇಲಾಖೆಗಳು ತಮ್ಮ ಸಾಮಾಜಿಕ ಜಾಲತಾಣಗಳಾದ ಫೇಸ್ಬುಕ್, ಟ್ವಿಟರ್, ನಲ್ಲಿ ಕನ್ನಡವನ್ನು ಪ್ರಧಾನವಾಗಿ ಬಳಸಬೇಕು, ಗಣಕಯಂತ್ರದಲ್ಲಿ ಸಂಪೂರ್ಣವಾಗಿ ಕನ್ನಡ ತಂತ್ರಾಶವನ್ನು ಅಳವಡಿಸಬೇಕು, ವಾಹನಗಳಲ್ಲಿ ಸಂಖ್ಯಾಫಲಕ, ಸರ್ಕಾರಿ ವಾಹನಗಳ ನಾಮಫಲಕಗಳಲ್ಲಿ , ಮೈಲುಗಳಲ್ಲಿ, ಹೆದ್ದಾರಿ ಫಲಕಗಳಲ್ಲಿ ಕನ್ನಡವನ್ನು ಪ್ರಧಾನವಾಗಿ ಬಳಸಬೇಕು , ಜಿಲ್ಲಾ ಪಂಚಾಯತ್ ನ ಕೆ.ಡಿ.ಪಿ ಸಭೆಗಳಲ್ಲಿ ಕನ್ನಡವನ್ನು ಒಂದು ಅಂಶವಾಗಿ ಚರ್ಚೆ ಮಾಡಬೇಕು ಎಂದರು. ಜಿಲ್ಲೆಯ ಎಲ್ಲಾ…
