Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಸಮಾಜಮುಖಿ ಚಟುವಟಿಕೆಗಳನ್ನು ನಡೆಸುತ್ತಿರುವ ರೋಟರಿ ಸಂಸ್ಥೆ ಗ್ರಾಮೀಣ ಪ್ರದೇಶದ ಜನರಿಗಾಗಿ ಅನೇಕ ಕೊಡುಗೆಗಳನ್ನು ನೀಡಿದೆ. ಶಾಲೆಗಳಲ್ಲಿ ಮಕ್ಕಳ ಶಿಕ್ಷಣಕ್ಕೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಕಂಪ್ಯೂಟರ್‌ಗಳನ್ನು ಕೊಡುಗೆಯಾಗಿ ನೀಡಲಾಗುತ್ತಿದೆ. ಕಂಪ್ಯೂಟರ್‌ಗಳನ್ನು ಸರಿಯಾದ ರೀತಿಯಲ್ಲಿ ನಿರ್ವಹಣೆ ಮಾಡಿದ ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷ ರಾಜೇಶ ಎಂ.ಜಿ. ಹೇಳಿದರು. ಗಂಗೊಳ್ಳಿ ಖಾರ್ವಿಕೇರಿಯ ಕೊಂಚಾಡಿ ರಾಧಾ ಶೆಣೈ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಗಂಗೊಳ್ಳಿ ರೋಟರಿ ಕ್ಲಬ್ ವತಿಯಿಂದ ಕಂಪ್ಯೂಟರ್‌ನ್ನು ಬುಧವಾರ ಕೊಡುಗೆಯಾಗಿ ನೀಡಿ ಅವರು ಮಾತನಾಡಿದರು. ಶಾಲೆಯ ಮುಖ್ಯಶಿಕ್ಷಕಿ ಸುಮತಿ ಎಂ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಗಂಗೊಳ್ಳಿ ಗ್ರಾಪಂ ಸದಸ್ಯರಾದ ಬಿ.ಲಕ್ಷ್ಮೀಕಾಂತ ಮಡಿವಾಳ, ಬಿ.ರಾಘವೇಂದ್ರ ಪೈ, ಗಂಗೊಳ್ಳಿ ರೋಟರಿ ಮಾಜಿ ಅಧ್ಯಕ್ಷ ವಾಸುದೇಶ ಶೇರುಗಾರ್, ಎಸ್‌ಡಿಎಂಸಿ ಸದಸ್ಯ ಅಶೋಕ ಪೂಜಾರಿ, ಸಹಶಿಕ್ಷಕರು ಮೊದಲಾದವರು ಉಪಸ್ಥಿತರಿದ್ದರು. ಸಹಶಿಕ್ಷಕ ಶಶಿಶಂಕರ ಎಚ್.ಎಂ. ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು. ರೋಟರಿ ಝೋನಲ್ ಲೆಫ್ಟಿನೆಂಟ್ ಕೆ.ರಾಮನಾಥ ನಾಯಕ್ ಪ್ರಾಸ್ತಾವಿಕ ಮಾತುಗಳನ್ನಾಡಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಎ.ಎಸ್.ಗೋಜು ರಿಯು ಕರಾಟೆ ಅಸೋಸಿಯೇಶನ್ ಇಂಡಿಯಾ ವತಿಯಿಂದ ಫೆ.೨೦ರಂದು ಬೆಂಗಳೂರಿನಲ್ಲಿ ನಡೆದ ಮುಕ್ತ ರಾಷ್ಟ್ರಮಟ್ಟದ ಕರಾಟೆ ಚಾಂಪಿಯನ್‌ಶಿಪ್ ನಲ್ಲಿ ಗುಡ್ರಿ ಸಂತೋಷ ಮತ್ತು ಹೇಮಾವತಿ ದಂಪತಿಗಳ ಪುತ್ರ ಶ್ರೀಶ ಕಟಾ ವಿಭಾಗದಲ್ಲಿ ದ್ವಿತೀಯ ಸ್ಥಾನ ಗಳಿಸಿ ಬೆಳ್ಳಿಯ ಪದಕ ಪಡೆದಿದ್ದಾರೆ. ಇದೇ ವಿಭಾಗದಲ್ಲಿ ಕೆಂಚನೂರಿನ ಸಂತೋಷ ಮತ್ತು ಸುಜಾತ ದಂಪತಿಗಳ ಪುತ್ರ ಸೃಜನ್ ಎಸ್ ಕಂಚಿನ ಪದಕ ಪಡೆದಿದ್ದಾರೆ. ಇವರು ವಂಡ್ಸೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಾಗಿದ್ದು, ಕರಾಟೆ ಶಿಕ್ಷಕ ಅಕ್ಷಯ ಇವರಲ್ಲಿ ತರಬೇತಿ ಪಡೆಯುತ್ತಿದ್ದಾರೆ. ಶಾಲೆಯ ವತಿಯಿಂದ ವಿಜೇತರನ್ನು ಅಭಿನಂದಿಸಲಾಯಿತು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ದಕ್ಷಿಣ ಭಾರತದಲ್ಲಿ ಪ್ರಸಿದ್ದಿ ಪಡೆದಿರುವ ಕೊಲ್ಲೂರು ಶ್ರೀ ಮೂಕಾಂಬಿಕಾ ಅಮ್ಮನವರ ವಾರ್ಷಿಕ ಜಾತ್ರೆಯು ಮಾ.18ರಿಂದ 27ರ ವರೆಗೆ ನಡೆಯಲಿದ್ದು, ಮಂಗಳವಾರ ಜಗದಾಂಬಿಕಾ ಸಭಾಗೃಹದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆರಾಡಿ ಚಂದ್ರಶೇಖರ ಶೆಟ್ಟಿ ಅಧ್ಯಕ್ಷತೆಯಲ್ಲಿ ಉತ್ಸವದ ಪೂರ್ವಭಾವಿ ಸಭೆ ನಡೆಯಿತು. ಕೋವಿಡ್ ನಿಯಂತ್ರಣಕ್ಕಾಗಿ ಸರಕಾರ ಕೆಲವು ಮುಂಜಾಗೃತಾಕ್ರಮವನ್ನು ಅನುಸರಿಸುವಂತೆ ಮಾರ್ಗಸೂಚಿ ನೀಡಿದೆ. ಇದನ್ನು ಪಾಲಿಸಿಕೊಂಡು ಕೊಲ್ಲೂರು ಕ್ಷೇತ್ರದ ಜಾತ್ರಾ ಮಹೋತ್ಸವವು ಪರಂಪರಾಗತವಾಗಿ ನಡೆದುಕೊಂಡು ಬಂದಿರುವಂತೆ ಶಾಸ್ತ್ರ, ಸಂಪ್ರದಾಯ ಬದ್ಧವಾಗಿ ಸಕಲ ಪೂಜಾ ವಿಧಿವಿಧಾನಗಳ ಸುವ್ಯವಸ್ಥೆಗಳೊಂದಿಗೆ ಈ ಬಾರಿ ನಡೆಸಲು ತೀರ್ಮಾನಿಸಲಾಗಿದೆ. ವಿವಿಧ ಉತ್ಸವಾದಿಗಳು ನಡೆಯಲಿವೆ. ಹೊರಗಿನಿಂದ ಬರುವ ವ್ಯಾಪಾರಸ್ಥರಿಗೆ, ಅಂಗಡಿ ಮುಂಗಟ್ಟುಗಳಿಗೆ ಅವಕಾಶವಿದೆ. ಸೀಮಿತ ಪ್ರಮಾಣದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ ಎಂದರು. ಭಕ್ತಾದಿಗಳಿಗೆ ಯಾವುದೇ ಸಮಸ್ಯೆಯಾಗದಂತೆ ಎಲ್ಲ ರೀತಿಯ ವ್ಯವಸ್ಥೆಯನ್ನು ಮಾಡಿಕೊಳ್ಳಬೇಕು. ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯ, ಬಂದೋಬಸ್ತ್, ದೀಪಾಲಂಕಾರ, ಪಾರ್ಕಿಂಗ್, ಊಟದ ವ್ಯವಸ್ಥೆಗಳನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಸಭೆಯಲ್ಲಿದ್ದ ವಿವಿಧ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಸಾರ್ವಜನಿಕರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಫೆ.23: ರಾಜ್ಯ ಸರ್ಕಾರದ ಆದೇಶದಂತೆ ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆಯಲ್ಲಿ ಖಾಲಿ ಇರುವ 104 ಸಹಾಯಕ ಸರ್ಕಾರಿ ಅಭಿಯೋಜಕರು-ವ-ಸಹಾಯಕ ಸರ್ಕಾರಿ ವಕೀಲರುಗಳ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮಾರ್ಚ್ 7 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ನ್ಯಾಯಾಲಯದ ವಕೀಲರ ಸಂಘ, ಸ್ಥಳೀಯ ನ್ಯಾಯಾಲಯಗಳ ವಕೀಲರ ಸಂಘ ಹಾಗೂ ಸದಸ್ಯ ಕಾರ್ಯದರ್ಶಿ/ಸರ್ಕಾರಿ ಅಭಿಯೋಜಕರು, ಉಡುಪಿ ಇವರ ಕಛೇರಿಯನ್ನು ಸಂಪರ್ಕಿಸುವಂತೆ ಸಹಾಯಕ ಸರ್ಕಾರಿ ಅಭಿಯೋಜಕರ ನೇಮಕಾತಿ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಫೆ.22: ಪ್ರಸ್ತುತ ಜಿಲ್ಲೆಯಲ್ಲಿ ನಡೆಯುತ್ತಿರುವ ಹಿಜಾಬ್ – ಕೇಸರಿ ಶಾಲು ವಿವಾದದ ಹಿನ್ನೆಲೆ, ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕ ಹಿತವನ್ನು ಕಾಪಾಡುವ ದೃಷ್ಟಿಯಿಂದ ಫೆ. 24 ರ ಬೆಳಗ್ಗೆ 6 ಗಂಟೆಯಿಂದ ಮಾರ್ಚ್ 5 ರ ಸಂಜೆ 6 ಗಂಟೆಯವರೆಗೆ (ಫೆ. 27 ಭಾನುವಾರ ಹಾಗೂ ಮಾರ್ಚ್ 1 ರಂದು ಮಹಾಶಿವರಾತ್ರಿ ಪ್ರಯುಕ್ತ ರಜೆ ಇದ್ದು, ಈ ಎರಡು ದಿನಗಳನ್ನು ಹೊರತುಪಡಿಸಿ) ಜಿಲ್ಲೆಯ ಎಲ್ಲಾ ಪದವಿ ಪೂರ್ವ, ಪಾಲಿಟೆಕ್ನಿಕ್ ಮತ್ತು ಪದವಿ ಕಾಲೇಜುಗಳ ಸುತ್ತಮುತ್ತಲು 200 ಮೀ. ಪ್ರದೇಶವನ್ನು ದಂಡ ಪ್ರಕ್ರಿಯೆ ಸಂಹಿತೆ ಕಲಂ 144 ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಆದೇಶಿಸಿರುತ್ತಾರೆ. ಈ ಅವಧಿಯಲ್ಲಿ ಕಾನೂನು ಭಂಗ ಉಂಟು ಮಾಡುವ ಉದ್ದೇಶದಿಂದ ಐದು ಮತ್ತು ಐದಕ್ಕಿಂತ ಹೆಚ್ಚು ಜನರು ಗುಂಪಾಗಿ ಸೇರುವುದು, ಯಾವುದೇ ವ್ಯಕ್ತಿಯ ಜಾತಿ, ಧರ್ಮ, ಕೋಮು, ಪಂಥಗಳಿಗೆ ಅಥವಾ ಸಾರ್ವಜನಿಕ ನೈಜಿಕತೆಗೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಫೆ.23: ಫೆಬ್ರವರಿ 27 ರಂದು ನಡೆಯುವ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ ಜಿಲ್ಲೆಯ 0-5 ವರ್ಷದೊಳಗಿನ 73995 ಮಕ್ಕಳಿಗೆ ಪೋಲಿಯೋ ಲಸಿಕೆ ನೀಡಲು ಎಲ್ಲಾ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿಯ ಕೋರ್ಟ್ಹಾಲ್ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಜಿಲ್ಲೆಯಲ್ಲಿ 0-5 ವರ್ಷದೊಳಗೆ ಗ್ರಾಮೀಣ ಪ್ರದೇಶದ 61105 ಮತ್ತು ನಗರ ಪ್ರದೇಶದ 12890 ಸೇರಿದಂತೆ ಒಟ್ಟು 73995 ಮಕ್ಕಳಿಗೆ ಫೆಬ್ರವರಿ 27 ರಂದು ಪಲ್ಸ್ ಪೋಲಿಯೋ ಲಸಿಕೆ ನೀಡಲು, ಗ್ರಾಮೀಣ ಪ್ರದೇಶದಲ್ಲಿ 571 ಹಾಗೂ ನಗರ ಪ್ರದೇಶದಲ್ಲಿ 91 ಸೇರಿದಂತೆ ಒಟ್ಟು 662 ಲಸಿಕಾ ಕೇಂದ್ರಗಳನ್ನು ತೆರೆಯಲಾಗುವುದು. ಇದಲ್ಲದೆ 6 ಮೊಬೈಲ್ ಟೀಮ್ ಮತ್ತು 36 ಟ್ರಾನ್ಸಿಟ್ ಬೂತ್ಗಳನ್ನು ಹಾಗೂ ಎಲ್ಲಾ ಟೋಲ್ಗೇಟ್ಗಳಲ್ಲಿಯೂ ಲಸಿಕಾ ಕೇಂದ್ರಗಳನ್ನು ತೆರೆದು ಲಸಿಕೆ ನೀಡಲಾಗುವುದು ಎಂದರು. ಲಸಿಕಾ ಕಾರ್ಯಕ್ರಮದಲ್ಲಿ 2794 ಲಸಿಕಾ ಸ್ವಯಂಸೇವಕರು ಮತ್ತು 125 ಮೇಲ್ವಿಚಾರಕರು ಹಾಗೂ ಆರೋಗ್ಯ ಇಲಾಖೆಯ ಎಲ್ಲಾ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಚೆನ್ನೈನ ಎಸ್.ಆರ್.ಎಂ. ವಿಶ್ವವಿದ್ಯಾನಿಲಯದ ಆಶ್ರಯದಲ್ಲಿ ಮುಕ್ತಾಯಗೊಂಡ ಅಖಿಲ ಭಾರತ ಅಂತರ್ ವಿವಿ ಮಹಿಳಾ ಬಾಲ್ ಬ್ಯಾಡ್ಮಿಂಟನ್ ಪ್ರಶಸ್ತಿಯನ್ನು ಮಂಗಳೂರು ವಿವಿ ೧೧ನೇ ಬಾರಿ ತನ್ನ ಮುಡಿಗೇರಿಸಿಕೊಂಡಿತು. ಮಂಗಳೂರು ವಿವಿಯನ್ನು ಪ್ರತಿನಿಧಿಸಿದ ಎಲ್ಲಾ ೧೦ ಮಂದಿ ಆಟಗಾರರು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಲ್ಲಿ ಉಚಿತ ಶಿಕ್ಷಣ ಯೋಜನೆಯಡಿ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಾಗಿದ್ದಾರೆ. ಈ ಚಾಂಪಿಯನ್‌ಶಿಪ್‌ನ್ನು ಮಂಗಳೂರು ವಿವಿಯು ಸತತ ೭ನೇ ಬಾರಿ ಜಯಿಸಿದ್ದಲ್ಲದೆ, ೧೭ ಬಾರಿ ಲೀಗ್ ಹಂತಕ್ಕೆ ತಲುಪಿತ್ತು. ಈ ಕ್ರೀಡಾಪಟುಗಳು ಮುಂದಿನ ವಾರ ಮೂಡಬಿದ್ರೆಯಲ್ಲಿ ನಡೆಯಲಿರುವ ೬೭ನೇ ರಾಷ್ಟ್ರೀಯ ಸೀನಿಯರ್ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಲಿದ್ದಾರೆ. ವಿದ್ಯಾರ್ಥಿಗಳ ಸಾಧನೆಯನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ.ಎಂ.ಮೋಹನ್ ಆಳ್ವ ಶ್ಲಾಘಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಡಾ|| ಶಿವರಾಮ ಕಾರಂತ ಪ್ರತಿಷ್ಠಾನ (ರಿ) ಕೋಟ , ಕೋಟತಟ್ಟು ಗ್ರಾಮ ಪಂಚಾಯತ್, ಡಾ|| ಶಿವರಾಮ ಕಾರಂತ ಟ್ರಸ್ಟ್ (ರಿ) ಉಡುಪಿ ಇವರ ವತಿಯಿಂದ ಕೊಡಮಾಡುವ ಖ್ಯಾತ ಯಕ್ಷಗಾನ ಸ್ತ್ರೀ ವೇಷಧಾರಿ ದಿ.ಕೋಟ ವೈಕುಂಠ ದತ್ತಿ ಪುರಸ್ಕಾರಕ್ಕೆ ಬಡಗುತಿಟ್ಟಿನ ಉದಯೋನ್ಮುಖ ಭಾಗವತ ಶ್ರೀ ಉದಯ ಕುಮಾರ್ ಹೊಸಾಳ ಅವರು ಆಯ್ಕೆಯಾಗಿದ್ದಾರೆ. ಬಡಗುತಿಟ್ಟು ಯಕ್ಷಗಾನ ರಂಗಭೂಮಿಯಲ್ಲಿ ಸಾಂಪ್ರದಾಯಿಕ ರಂಗ ಸಂವಿಧಾನಕ್ಕೆ ಸುಸ್ವರ ಶ್ರೀಮಂತಿಕೆಯ ರಾಗ ಮಾಧುರ‍್ಯದ ಬೆಸುಗೆಯಾದ ಗಾನ ವಿಧಾನವನ್ನು ಸಂಯುಕ್ತಗೊಳಿಸಿ ಪ್ರಬುದ್ಧ ಭಾಗವತರಾಗಿ ರೂಪುಗೊಂಡವರು ಶ್ರೀ ಉದಯ ಕುಮಾರ್ ಹೊಸಾಳ ಅವರು. ಖಚಿತ ಲಯಗಾರಿಕೆ, ತಾಳದ ಗಟ್ಟಿತನ, ಉತ್ತಮ ಪೌರಣಿಕ ಜ್ಞಾನ, ಫ್ರೌಡ ರಂಗ ತಂತ್ರಗಳನ್ನು ತನ್ನ ಭಾಗವತಿಕೆಯಲ್ಲಿ ನಿಚ್ಚಳವಾಗಿ ಕಾಣಿಸುವ ಇವರು ಬಡಗುತಿಟ್ಟಿನ ಪ್ರಸಿದ್ಧ ಭಾಗವತರಲ್ಲಿ ಒಬ್ಬರು. ಕೋಟದ ಡಾ|| ಶಿವರಾಮ ಕಾರಂತ ಥೀಮ್ ಪಾರ್ಕ್‌ನಲ್ಲಿ ಫೆಬ್ರವರಿ ೨೭ರಂದು ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದೆಂದು ಕಾರಂತ ಪ್ರತಿಷ್ಠಾನದ ಕಾರ್ಯಾಧ್ಯಕ್ಷ ಆನಂದ್ ಸಿ ಕುಂದರ್,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು,ಫೆ.21: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ಸಾಹಿತ್ಯ ವೇದಿಕೆ ಉದ್ಘಾಟನೆ ಮತ್ತು ವಿಶ್ವ ಮಾತೃಭಾಷಾ ದಿನಾಚರಣೆಯನ್ನು ಆಚರಿಸಲಾಯಿತು. ಕೆರಾಡಿ ವರಸಿದ್ದಿ ವಿನಾಯಕ ಕಾಲೇಜಿನ ಪ್ರಾಂಶುಪಾಲರಾದ ಪ್ರಸಾದ್ ಕುಮಾರ್ ಆರ್ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ವಿಶ್ವ ಮಾತೃಭಾಷಾ ದಿನಸದ ಹಿನ್ನೆಲೆ ಮತ್ತು ಅಗತ್ಯತೆಯನ್ನು ವಿವರಿದರು. ಅಧ್ಯಕ್ಷತೆ ವಹಿಸಿದ್ದ ಡಾ. ರಘು ನಾಯ್ಕ ಅವರು ಕಾಲೇಜುಗಳು ಸಾಹಿತ್ಯ ಚಟುವಟಿಕೆಯ ಕೇಂದ್ರವಾಗಬೇಕು ಎಂಬುದನ್ನು ತಿಳಿಸಿದರು. ಸಹಾಯಕ ಪ್ರಾಧ್ಯಾಪಕ ನವೀನ್ ಹೆಚ್ ಜೆ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಮೀನಾಕ್ಷಿಯವರು ವಿದ್ಯಾರ್ಥಿಗಳು ಉತ್ಸಾಹದಿಂದ ಸಾಹಿತ್ಯ ಚಟುವಟಿಕೆಯಲ್ಲಿ ಭಾಗವಹಿಸಬೇಕೆಂದು ಕರೆ ನೀಡಿದರು. ವಿದ್ಯಾರ್ಥಿ ಯುತಿಕಾ ಸ್ವಾಗತಿಸಿದರು ಹಾಗೂ ವಿನಾಯಕ ವಂದಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬ್ಯಾರೀಸ್ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾನ್ಸರ್ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಶ್ರೀಮತಿ ಭಾಗ್ಯಲಕ್ಷ್ಮಿ ಇವರು ರೋಗ ಬಂದ ಮೇಲೆ ಚಿಕಿತ್ಸೆಗೆ ಒಳಗಾಗುವ ಬದಲು ರೋಗ ಬಾರದೆ ಇರುವ ಹಾಗೆ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳು ಹಾಗೂ ಕ್ಯಾನ್ಸರ್ ರೋಗದ ಮುನ್ಸೂಚನೆ ಮತ್ತು ಅದರ ಜಾಗೃತಿ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಕೋಡಿ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಾದ ಡಾ. ಉಮೇಶ್ ನಾಯಕ್ ಇವರು ಉಪಸ್ಥಿತರಿದ್ದು ಉತ್ತಮ ಆರೋಗ್ಯಕ್ಕಾಗಿ ನಾವು ದೈಹಿಕ ಧೃಢತೆಯೊಂದಿಗೆ ಮಾನಸಿಕವಾಗಿ ಹಾಗೂ ಸಾಮಾಜಿಕವಾಗಿಯೂ ಪ್ರಬಲರಾಗಬೇಕು ಎಂದು ಮಾತನಾಡಿದರು. ಕೋಡಿ ಆರೋಗ್ಯ ಕೇಂದ್ರದ ಜ್ಯೂನಿಯರ್ ಹೆಲ್ತ್ ಅಸಿಸ್ಟೆಂಟ್ ವಿದ್ಯಾಲಕ್ಷ್ಮಿ ಕುಷ್ಠ ರೋಗದ ಜಾಗೃತಿ ಕ್ರಮಗಳನ್ನು ತಿಳಿಸಿದರು. ವಾಣಿಜ್ಯ ವಿಭಾಗದ ಮುಖ್ಯಸ್ಥೆ ಮಾಲತಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಗಣಕ ವಿಭಾಗದ ಉಪನ್ಯಾಸಕಿ ಹರ್ಷಿತ ಕಾರ್ಯಕ್ರಮ ನಿರೂಪಿಸಿ ಅತಿಥಿ ಗಣ್ಯರನ್ನು ವಂದಿಸಿದರು.

Read More