Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: 60 ವರ್ಷ ಮೇಲ್ಪಟ್ಟವರಿಗೆ ಹಾಗೂ ಇತರೆ ಕಾಯಿಲೆಗಳಿಂದ ಬಳಲುತ್ತಿರುವ 45 ರಿಂದ 59 ವರ್ಷದೊಳಗಿನವರಿಗೆ ಜಿಲ್ಲೆಯ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಕೋವಿಡ್ ಲಸಿಕೆ ಹಾಕಲಾಗುವುದು. ನೋಂದಾಯಿತ 14 ಖಾಸಗಿ ಆಸ್ಪತ್ರೆಗಳಲ್ಲಿ ನಿಗದಿತ ದರ ಪಾವತಿಸಿ ಲಸಿಕೆ ಪಡೆಯಬಹುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದರು. ಕಚೇರಿ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸರ್ಕಾರಿ ಆಸ್ಪತ್ರೆಗಳಲ್ಲಿ ಕೋವಿಡ್ ಲಸಿಕೆ ಸಂಪೂರ್ಣ ಉಚಿತವಾಗಿದೆ. ಆದರೆ, ಖಾಸಗಿ ಆಸ್ಪತ್ರೆಗಳಲ್ಲಿ ಡೋಸ್ಗೆ ₹250 ನೀಡಬೇಕು. ಫಲಾನುಭವಿಗಳು ಲಸಿಕೆ ಪಡೆಯಲು ಆನ್‌ಲೈನ್ ಮೂಲಕ ದಿನಾಂಕ ಆಯ್ಕೆಮಾಡಿಕೊಳ್ಳಬಹುದು. ಲಸಿಕೆ ಪಡೆಯಲು ವಬ್‌ಸೈಟ್: https://selfregistration.cowin.gov.in ನಲ್ಲಿ ನೋಂದಾಯಿಸಿಕೊಳ್ಳಬಹುದು ಎಂದರು. ನೆಟ್ವರ್ಕ್ ಸಮಸ್ಯೆ ಇರುವ ಗ್ರಾಮೀಣ ಭಾಗಗಳಲ್ಲಿ ಭಾವಚಿತ್ರವಿರುವ ಗುರುತಿನ ಚೀಟಿ ತೋರಿಸಿ ಲಸಿಕಾ ಕೆಂದ್ರಕ್ಕೆ ಬಂದು ನೋಂದಣಿ ಮಾಡಿಸಿಕೊಂಡು ಅದೇ ದಿನ ಲಸಿಕೆ ಪಡೆಯಬಹುದು. ಜಿಲ್ಲೆಯಲ್ಲಿ 60 ವರ್ಷ ಮೇಲ್ಪಟ್ಟ ಹಾಗೂ 45 ರಿಂದ 59 ವಯಸ್ಸಿನ 1,51,557 ಮಂದಿಗೆ ಲಸಿಕೆ ಹಾಕುವ ಗುರಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ವಿಧಾನ ಸಭೆಯಲ್ಲಿ ಮಂಡಿಸಿರುವ 2021-22ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಪ್ರವಾಸೋದ್ಯಮ ಅಭಿವೃದ್ಧಿಗೆ ಆದ್ಯತೆ ನೀಡಿ ಅನುದಾನ ಮೀಸಲಿರಿಸಲಾಗಿದೆ. ತ್ರಾಸಿ ಮರವಂತೆ ಒತ್ತಿನಣೆ ಹಾಗೂ ಇತರ ಕಡಲತೀರಗಳನ್ನು ಅಂತಾರಾಷ್ಟ್ರೀಯ ದರ್ಜೆಗೆರಿಸಲು ಸಮಗ್ರ ಅಭಿವೃದ್ಧಿಗಾಗಿ 10 ಕೋಟಿ ರೂ ಹಾಗೂ ಸೋಮೇಶ್ವರ ಕಡಲತೀರದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ 10 ಕೋಟಿ ರೂ ಅನುದಾನ ಅನುದಾನವನ್ನು ಪ್ರತ್ಯೇಕವಾಗಿ ಮೀಸಲಿಸಲಾಗಿದೆ. ಇದನ್ನೂ ಓದಿ ► ರಾಜ್ಯ ಬಜೆಟ್‌ನಲ್ಲಿ ಉಡುಪಿ ಜಿಲ್ಲೆಗೆ ದೊರಕಿದ್ದೇನು? ಇಲ್ಲಿದೆ ವಿವರ – https://kundapraa.com/?p=45818 .

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಮಹಿಳಾ ಕಾಂಗ್ರೆಸ್ ಪಕ್ಷದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ ಇಲ್ಲಿನ ರೋಟರಿ ಭವನದಲ್ಲಿ ನಡೆಯಿತು. ತಾಲೂಕು ಪಂಚಾಯತ್ ಸದಸ್ಯೆ ಪ್ರಮಿಳಾ ದೇವಾಡಿಗ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ವೈದ್ಯರು ಹಾಗೂ ಪ್ರೇರಣಾ ಶಿಕ್ಷಣ ಸಂಸ್ಥೆಯ ಸಂಸ್ಥಾಪಕರಾದ ಸುಬ್ರಹ್ಮಣ್ಯ ಭಟ್ ಮಾತನಾಡಿ, ಮಹಿಳೆಯರ ಆರೋಗ್ಯ, ಪ್ರಸ್ತುತ ಸಮಾಜದಲ್ಲಿ ಮಹಿಳೆಯರ ಬದುಕು, ದೇಶಕ್ಕೆ ಮಹಿಳೆಯರ ಕೊಡುಗೆ ಮತ್ತು ಮಹಿಳೆಯರ ಕರ್ತವ್ಯ ಸ್ಥಾನಮಾನದ ಕುರಿತು ಹೇಳಿದರು. ಕಾರ್ಯಕ್ರಮದಲ್ಲಿ ಹಿರಿಯ ಮಹಿಳೆ ಗೀತಾ ಇವರ ಪಾದಪೂಜೆ ನಡೆಯಿತು. ಸ್ಯಾಕ್ಸೋಫೋನ್ ವಾದನದಲ್ಲಿ ವಿಶೇಷ ಸಾಧನೆಯನ್ನು ಮಾಡಿದ ವೀಣಾ ದೇವಾಡಿಗ ಉಪ್ಪುಂದ ಇವರನ್ನು ಸನ್ಮಾನಿಸಲಾಯಿತು. ಇತ್ತೀಚೆಗೆ ನಡೆದ ಗ್ರಾಮ್ ಪಂಚಾಯತ್ ಚುನಾವಣೆ ಯಲ್ಲಿ ಗೆಲುವು ಸಾಧಿಸಿದ ಕಾಂಗ್ರೆಸ್ ಪಕ್ಷದ ಮಹಿಳೆಯರನ್ನು ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಗೌರಿ ದೇವಾಡಿಗ, ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸೂರ್ಯಕಾಂತಿ ಪಡುವರಿ, ಕಾರ್ಯದರ್ಶಿ ಶಾಂತಿ, ಹಾಗೂ ಅನೇಕ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ವಿಧಾನ ಸಭೆಯಲ್ಲಿ ಮಂಡಿಸಿರುವ 2021-22ನೇ ಸಾಲಿನ ಕರ್ನಾಟಕ ಬಜೆಟ್ನ ಒಟ್ಟು ಗಾತ್ರ 2.43 ಕೋಟಿ ರೂ.ಗಳಾಗಿದೆ. ಕಳೆದ ವರ್ಷ 2,33,137 ಕೋಟಿ ರೂ. ಗಾತ್ರದ ಬಜೆಟ್ನ್ನು ಮಂಡಿಸಿದ್ದರು. ಈ ಬಾರಿ ಅದಕ್ಕೆ 10,600 ಕೋಟಿ ರೂ.ಗಳಷ್ಟು ಹೆಚ್ಚುವರಿ ಸೇರ್ಪಡೆಯಾಗಿದೆ. ಇದರಲ್ಲಿ ಕರಾವಳಿ ಹಾಗೂ ಉಡುಪಿ ಜಿಲ್ಲೆಗೆ ಯಾವೆಲ್ಲಾ ಯೋಜನೆಗಳನ್ನು ಘೋಷಿಸಲಾಗಿದೆ ಎನ್ನುವ ಸಂಕ್ಷಿಪ್ತ ಅಂಶಗಳು ಇಲ್ಲಿವೆ. ಅಡಿಕೆ ಬೆಳೆಗಾರರನ್ನು ಬಾಧಿಸುತ್ತಿರುವ ಹಳದಿ ಎಲೆ ರೋಗದ ಕುರಿತ ಸಂಶೋಧನೆ ಹಾಗೂ ಪರ್ಯಾಯ ಬೆಳೆಯನ್ನು ಪ್ರೋತ್ಸಾಹಿಸಲು 25 ಕೋಟಿ ರೂಪಾಯಿ ಮೀಸಲಿರಿಸಲಾಗಿದೆ. ಉಡುಪಿ ಜಿಲ್ಲೆಯ ತ್ರಾಸಿ ಮರವಂತೆ ಒತ್ತಿನಣೆ ಹಾಗೂ ಇತರ ಕಡಲತೀರಗಳನ್ನು ಅಂತಾರಾಷ್ಟ್ರೀಯ ದರ್ಜೆಗೆ ರಿಸಲು 10 ಕೋಟಿ ರೂ ವೆಚ್ಚದಲ್ಲಿ ಸಮಗ್ರ ಅಭಿವೃದ್ಧಿ. ಉಡುಪಿ ಜಿಲ್ಲೆಯ ಬೈಂದೂರು ತಾಲೂಕು ಸೋಮೇಶ್ವರ ಕಡಲತೀರದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ 10 ಕೋಟಿ ರೂ ಅನುದಾನ. ಕರಾವಳಿ ಅಭಿವೃದ್ಧಿ ಪ್ರಾಧಿಕಾರವನ್ನು ಕರಾವಳಿ ಅಭಿವೃದ್ಧಿ ಮಂಡಳಿಯಾಗಿ ಪುನರ್ರಚನೆಗೆ ವಿಧೇಯಕ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಇಂದೂಧರ ದೇವಸ್ಥಾನ 75 ವರ್ಷಗಳಿಂದ ಗಂಗೊಳ್ಳಿ ಪರಿಸರದಲ್ಲಿ ಧರ್ಮ ಜಾಗೃತಿ ಮೂಡಿಸುತ್ತಾ ಬಂದಿದೆ. ಈಗ ಸರ್ಕಾರದ ಅನುದಾನ ಮತ್ತು ದಾನಿಗಳ ನೆರವು ಕ್ರೋಢೀಕರಿಸಿಕೊಂಡು ಸುಂದರವಾದ ಸಭಾಭವನ ನಿರ್ಮಿಸಿದೆ. ಇದಕ್ಕೆ ನಿವೇಶನ ದಾನ ಮಾಡಿರುವ ಉದ್ಯಮಿ ಎಚ್. ಗಣೇಶ ಕಾಮತ್ ಅಭಿನಂದನಾರ್ಹರು ಎಂದು ಶಾಸಕ ಬಿ.ಎಂ.ಸುಕುಮಾರ್ ಶೆಟ್ಟಿ ಹೇಳಿದರು. ಅವರು ಗಂಗೊಳ್ಳಿಯಲ್ಲಿ ನಡೆದ ಇಂದೂಧರ ದೇವಸ್ಥಾನದ ಅಮೃತ ಮಹೋತ್ಸವ ವರ್ಷದ ಸಮಾರೋಪ ಸಮಾರಂಭ ಮತ್ತು ನೂತನ ಸಭಾಭವನದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಎಚ್.ಗಣೇಶ ಕಾಮತ್ ನೂತನ ಸಭಾಭವನ ಉದ್ಘಾಟಿಸಿದರು. ಗ್ರಾಮ ಪಂಚಾಯಿತಿ ಉಪಾದ್ಯಕ್ಷೆ ಪ್ರೇಮಾ ಸಿ. ಪೂಜಾರಿ, ಮತ್ಸ್ಯೋದ್ಯಮಿ ಮಂಜುನಾಥ ಜಿ.ಟಿ, ನಿವೃತ್ತ ಮುಖ್ಯ ಶಿಕ್ಷಕ ಮುಡೂರ, ಗ್ರಾಮ ಪಂಚಾಯಿತಿ ಸದಸ್ಯ ಬಿ. ಗಣೇಶ ಶೆಣೈ, ಬಿ. ರಾಘವೇಂದ್ರ ಪೈ, ದೇವು ಶಿಪಾ, ಬಿ. ಲಕ್ಷ್ಮೀಕಾಂತ ಮಡಿವಾಳ, ಭಜನಾ ತರಬೇತಿದಾರ ಜಗದೀಶ ನಾಯಕವಾಡಿ, ಇಂದೂಧರ ಯುವಕ ಮಂಡಲದ ಗೌರವ ಅಧ್ಯಕ್ಷ ಗುರುರಾಜ್ ಬಿ,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕಶ್ವಿ ಚೆಸ್ ಸ್ಕೂಲ್‌ನಲ್ಲಿ ರ‍್ಯಾಪಿಡ್ ಚೆಸ್ ಪಂದ್ಯಾವಳಿ ನಡೆಯಿತು. ಮುಕ್ತ ವಿಭಾಗದ ಚೆಸ್ ಪಂದ್ಯಾಟದಲ್ಲಿ ಕೋಟ ವಿವೇಕ ಆಂಗ್ಲ ಮಾಧ್ಯಮ ಶಾಲೆಯ ಕಾರ್ತಿಕ್ ಪ್ರಥಮ, ಸೇಂಟ್ ಪಿಯುಸ್ ಆಂಗ್ಲ ಮಾಧ್ಯಮ ಶಾಲೆಯ ನಿಶಾಂತ್ ಡಿಸೋಜ್ ದ್ವಿತೀಯ ಸ್ಥಾನ, ದಾವಣಗೆರೆಯ ಯುರೋ ಆಂಗ್ಲ ಮಾಧ್ಯಮ ಶಾಲೆಯ ನಿಶ್ಚಲ್.ಜಿ.ಎಸ್ ತ್ರತೀಯ ಸ್ಥಾನಗಳಿಸಿದರು. ಗೋಲ್ಡನ್ ಮತ್ತು ಸಿಲ್ವರ್ ಗ್ರೂಪ್‌ನ ಮುಕ್ತ ವಿಭಾಗದಲ್ಲಿ ತೀರ್ಥಹಳ್ಳಿ ಸೇವಾ ಭಾರತಿ ಹಿರಿಯ ಪ್ರಾಥಮಿಕ ಶಾಲೆಯ ಪಾವನಿ.ಆರ್ ಪ್ರಥಮ ಸ್ಥಾನ, ಬೆಂಗಳೂರಿನ ದಿ ರಿಜೇನ್ಸಿ ಆಂಗ್ಲ ಮಾಧ್ಯಮ ಶಾಲೆಯ ಭುವನ್.ಜಿ.ಎಸ್ ದ್ವಿತೀಯ ಸ್ಥಾನ, ತೀರ್ಥಹಳ್ಳಿ ಸೇವಾ ಭಾರತಿ ಹಿರಿಯ ಪ್ರಾಥಮಿಕ ಶಾಲೆಯ ಗಾನವಿ. ಆರ್ ತೃತೀಯ ಸ್ಥಾನಗಳಿಸಿದರು. ಹಾಗೂ ಸ್ಟಾರ್ ಗ್ರೂಪ್‌ನ ಮುಕ್ತ ವಿಭಾಗದಲ್ಲಿ ದಾವಣಗೆರೆಯ ಆರೆಂಜ್ ಟೋಟ್ಸ್ ಇಂಟರನ್ಯಾಷನಲ್ ಪ್ರೀ ಸ್ಕೂಲ್‌ನ ಆಕಾಶ್.ಜಿ.ಎಸ್ ಪ್ರಥಮ ಸ್ಥಾನ, ಮಹಾರಾಷ್ಟ್ರದ ಪವರ್ ಪಬ್ಲಿಕ್ ಸ್ಕೂಲ್‌ನ ಸ್ವಸ್ತಿಕ್ ಶೇರೆಗಾರ್ ದ್ವಿತೀಯ ಸ್ಥಾನ, ಬ್ರಹ್ಮಾವರ ಲಿಟಲ್ ರಾಕ್ ಇಂಡಿಯನ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘ ರಿ. ಇದರ ನೂತನ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಬೀಜಾಡಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕುಂದಾಪುರ ನಗರದಲ್ಲಿರುವ ಶ್ರೀ ನಾರಾಯಣಗುರು ಸಭಾಭವನದಲ್ಲಿ ಜರುಗಿದ ವಾರ್ಷಿಕ ಮಹಾಸಭೆಯಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆಯಿತು. ನೂತನ ಪ್ರಧಾನ ಕಾರ್ಯದರ್ಶಿಯಾಗಿ ಗಣೇಶ್ ಪೂಜಾರಿ ವಿಠಲವಾಡಿ, ಕೋಶಾಧಿಕಾರಿ ಶಿವಾನಂದ ಪೂಜಾರಿ ಗಂಗೊಳ್ಳಿ ಆಯ್ಕೆಯಾಗಿದ್ದಾರೆ. ವಾರ್ಷಿಕ ಮಹಾಸಭೆ ಅಧ್ಯಕ್ಷತೆಯನ್ನು ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ನಿಕಟಪೂರ್ವ ಅಧ್ಯಕ್ಷ ನಾರಾಯಣ ಬಿಲ್ಲವ ವಹಿಸಿದ್ದು, ನಿಕಟಪೂರ್ವ ಪ್ರಧಾನ ಕಾರ್ಯದರ್ಶಿ ಮಂಜು ಬಿಲ್ಲವ ಸ್ವಾಗತಿಸಿ, ನಿಕಟಪೂರ್ವ ಕೋಶಾಧಿಕಾರಿ ಟಿ.ಕೆ. ಕೋಟ್ಯಾನ್ ವಂದಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ: ದೇಶದಲ್ಲಿ ಶಾಂತಿಯ ವಾತಾವರಣ ಸ್ಥಾಪಿತವಾದರೆ ಉನ್ನತಿ ಸಾಧ್ಯ ಎಂದು ಗುಜರಾತ್‌ನ ರಾಕಥಾ ಶಿಬಿರದ ಮುಖ್ಯ ಅಯೋಜಕ ಸ್ವಾಮಿ ಧರ್ಮ ಬಂಧುಜಿ ಹೇಳಿದರು. ಅವರು ಆಳ್ವಾಸ್ ಕಾಲೇಜಿನ ಶಿವರಾಮ ಕಾರಂತ ಸಭಾಂಗಣದಲ್ಲಿ ನಡೆದ ಕಾಮರ್ಸ್ ಪ್ರೊಫೆ?ನಲ್ ವಿಭಾಗದ ಸಾಹಿತ್ಯ ಮತ್ತು ಸಾಂಸ್ಕೃತಿಕ ಸ್ಪರ್ಧೆ ಚಾಣಕ್ಯ-2021ರ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅಥಿತಿಯಾಗಿ ಮಾತನಾಡಿದರು. ಭಾರತದಲ್ಲಿ ಬೌತಿಕ ಸುರಕ್ಷತೆ ಹಾಗೂ ಆರ್ಥಿಕ ಸುರಕ್ಷತೆಯಿಂದ ಶಾಂತಿ ಸ್ಥಾಪಿಸಲು ಸಾಧ್ಯ. ಆರ್ಥಿಕವಾಗಿ ಭಾರತದಲ್ಲಿ ಯಾವುದೇ ಆಪತ್ತು ಬಂದೊದಗಿದರೆ ಆರ್ಥಿಕ ಕ್ಷೇತ್ರಕ್ಕೆ ಹೆಚ್ಚಿನ ನವುಂಟಾಗುತ್ತದೆ. ದೇಶದ ಉನ್ನತಿಯಗಬೇಕಾದರೆ ಸುರಕ್ಷತೆ ಮತ್ತು ಆರ್ಥಿಕ ಭದ್ರತೆಗೆ ಪ್ರಾಧಾನ್ಯತೆ ನೀಡಬೇಕು. ಪ್ರಸ್ತುತ ಜಾಗತಿಕವಾಗಿ ನಸಿಂಗ್, ಪ್ಲಂಬಿಂಗ್ ಹಾಗೂ ಕಾಪೆಂಟರ್ ವೃತ್ತಿಗಳಿಗೆ ದೇಶದಲ್ಲಿ ಹೆಚ್ಚಿನ ಬೇಡಿಕೆ ಇದೆ. ಸ್ಟೀಲ್, ಟೆಕ್ಸ್ ಟೈಲ್ಸ್, ರಿಯಲ್ ಎಸ್ಟೇಟ್ ಮತ್ತು ವಜ್ರದ ವ್ಯಾಪರಗಳು ಅತ್ಯಂತ ಶೋಚನೀಯ ಪರಿಸ್ಥಿತಿಯಲ್ಲಿದೆ. ಜಾಗತೀಕರಣ ಖಾಸಗೀಕರಣ, ನಗರೀಕರಣ ಹಾಗೂ ಉದಾರೀಕರಣದೊಂದಿಗೆ ಭವಿ?ದಲ್ಲಿ ಒದಗಿ ಬರಬಹುದಾದ ಸೈಬರ್ ದಾಳಿ, ಜೈವಿಕ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ದೇವಳದ ಆವರಣದಲ್ಲಿಯೇ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುಂದಾಪುರ ತಾಲೂಕಿನ ತೆಕ್ಕಟ್ಟೆಯಲ್ಲಿ ನಡೆದಿದೆ. ತೆಕ್ಕಟ್ಟೆಬಾರಾಳಿಬೆಟ್ಟು ನಿವಾಸಿ ಚಂದ್ರ ಪೂಜಾರಿ (35) ಎಂಬ ಯುವಕ ತೆಕ್ಕಟ್ಟೆಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿಯೇ ಆತ್ಮಹತ್ಯೆಗೆ ಶರಣಾಗಿದ್ದಾನೆ. ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದ ಚಂದ್ರ ಪೂಜಾರಿ ನಿತ್ಯವೂ ದೇವಸ್ಥಾನಕ್ಕೆ ಬಂದು ಹೋಗುತ್ತಿದ್ದ ಎನ್ನಲಾಗುತ್ತಿದೆ. ದೇವಸ್ಥಾನದ ಧಾರ್ಮಿಕ ಕಾರ್ಯಗಳಲ್ಲಿಯೂ ಭಾಗಿಯಾಗುತ್ತಿದ್ದ ಎನ್ನಲಾಗಿದೆ. ಎರಡು ವರ್ಷಗಳ ಹಿಂದೆಯಷ್ಟೇ ಮದುವೆಯಾಗಿದ್ದು ಚಂದ್ರ ಪೂಜಾರಿ ಕಳೆದ ಕೆಲ ಸಮಯದಿಂದಲೂ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಎನ್ನಲಾಗಿದೆ. ದೇವಸ್ಥಾನದಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಬಾವಿಯ ಹಗ್ಗವನ್ನು ಬಳಸಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಭಾನುವಾರ ಘಟನೆ ಬೆಳಕಿಗೆ ಬಂದಿದೆ. ಕೋಟ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಕಶ್ವಿ ಚೆಸ್ ಸ್ಕೂಲ್‌ನಲ್ಲಿ ಶನಿವಾರ ಸಾಧಕರಿಗೆ ಉತ್ತಮ ಸಾಧಕ ಪ್ರಶಸ್ತಿ ನೀಡಲಾಯಿತು. ಬ್ರಹ್ಮಾವರ ಲಿಟಲ್ ರಾಕ್ ಇಂಡಿಯನ್ ಆಂಗ್ಲ ಮಾಧ್ಯಮ ಶಾಲೆಯ ಮನನ್ ಶೆಟ್ಟಿ (ಗೋಲ್ಡನ್ ಗ್ರೂಪ್), ಬ್ರಹ್ಮಾವರ ಲಿಟಲ್ ರಾಕ್ ಇಂಡಿಯನ್ ಆಂಗ್ಲ ಮಾಧ್ಯಮ ಶಾಲೆಯ ಸನಾ ಶೆಟ್ಟಿ (ಡೈಮಂಡ್ ಗ್ರೂಪ್), ಅವರುಗಳ ಪರಿಶ್ರಮವನ್ನು ಮತ್ತು ಚೆಸ್ ಆಟವನ್ನು ಪ್ರೋತ್ಸಾಹಿಸುವ ಸಲುವಾಗಿ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

Read More