ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಉಪ ವಿಭಾಗಾಧಿಕಾರಿಗಳ ಕಚೇರಿಯಲ್ಲಿ ಶುಕ್ರವಾರ ಬೆಂಗಳೂರು ನಾರಾಯಣ ಹೃದಯಾಲಯದ ವೈದ್ಯ ಡಾ.ಇಸ್ತಿಯಾಕ್ ಅಹಮ್ಮದ್, ಮುಂಬೈ ಉದ್ಯಮಿ ಗಣೇಶ್, ಬೆಂಗಳೂರಿನ ಸೃಜನ್ ಅವರ ನೆರವಿನಿಂದ ಯುಎಸ್ಐ ಯುಎಸ್ಐ ಡೆಂಪೆಸ್ಸಿ ವೆಂಚರ್ಸ್ ಕಂಪೆನಿಯ ಸಿಇಓ ಡಾನ್ ಬೊವೆನ್ ಅವರು ಕೊಡ ಮಾಡಿದ ಆಧುನಿಕ ತಂತ್ರಜ್ಞಾನದ ಅನಿಲ ಸಾಂದ್ರಕ, ಡೈನಮಿಕ್ ಇನ್ಫೋಟೆಕ್ ಸಂಸ್ಥೆ ಹಾಗೂ ಕೀಳೇಶ್ವರಿ ಯೂತ್ ಕ್ಲಬ್ ವತಿಯಿಂದ ನೀಡಲಾದ 250 ಕೊರೊನಾ ವೈರಸ್ ಚಿಕಿತ್ಸೆಯ ಔಷಧಿಗಳ ಕಿಟ್ಗಳ ಉಪ ವಿಭಾಗಾಧಿಕಾರಿ ಕೆ.ರಾಜು ಅವರಿಗೆ ಹಸ್ತಾಂತರಿಸಲಾಯಿತು. ಕೊಡುಗೆಗಳನ್ನು ಸ್ವೀಕರಿಸಿ ಅವರು ಮಾತನಾಡಿ ಕೋವಿಡ್ ಸಂಕಷ್ಟದ ಸಮಯದಲ್ಲಿ ಸರ್ಕಾರಿ ವ್ಯವಸ್ಥೆಯೊಂದಿಗೆ ಈ ಭಾಗದ ಸಾರ್ವಜನಿಕರು ಹಾಗೂ ಸಂಘ ಸಂಸ್ಥೆಗಳು ನೀಡಿರುವ ಸಹಕಾರವನ್ನು ಎಂದೂ ಮರೆಯಲು ಸಾಧ್ಯವಿಲ್ಲ. ಕುಂದಾಪುರದಂತಹ ಉಪ ವಿಭಾಗದಲ್ಲಿ, ಕೋವಿಡ್ ವಿರುದ್ಧದ ಹೋರಾಟದಲ್ಲಿ ದುಡಿಯಲು ಅವಕಾಶ ದೊರಕಿರುವುದು ನನ್ನ ಸರ್ಕಾರಿ ಸೇವೆಯ ಸುವರ್ಣ ದಿನಗಳು ಎಂದು ನಾನು ಭಾವಿಸುವುದಾಗಿ ಹೇಳಿದರು. ಕುಂದಾಪುರದ ಕೋವಿಡ್ ನಿರ್ವಹಣೆಗಾಗಿ ಈ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಶುಕ್ರವಾರ 561 ಕೋವಿಡ್ ಪಾಸಿಟಿವ್ ಪ್ರಕರಣ ವರದಿಯಾಗಿದ್ದು 3 ಮಂದಿ ಮೃತಪಟ್ಟಿದ್ದಾರೆ. ಪಾಸಿಟಿವ್ ಪ್ರಕರಣಗಳಲ್ಲಿ ಉಡುಪಿ, ಬ್ರಹ್ಮಾವರ, ಕಾಪು ತಾಲೂಕಿನ 324, ಕುಂದಾಪುರ, ಬೈಂದೂರು ತಾಲೂಕಿನ 227, ಕಾರ್ಕಳ, ಹೆಬ್ರಿ ತಾಲೂಕಿನ 106 ಮಂದಿಗೆ ಹಾಗೂ ಹೊರ ಜಿಲ್ಲೆಯ 2 ಮಂದಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ. ಒಟ್ಟು 561 ಪ್ರಕರಣಗಳಲ್ಲಿ 9 ಮಂದಿ ಕೋವಿಡ್ ಕೇರ್ ಸೆಂಟರ್, ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್ ಹೆಲ್ತ್ ಆಸ್ಪತ್ರೆಗೆ ದಾಖಲಾಗಿದ್ದರೆ, 552 ಮಂದಿಯನ್ನು ಹೋಮ್ ಐಸೊಲೇಷನ್ ಮಾಡಲಾಗಿದೆ. ಇಂದು ಕಾರ್ಕಳ ತಾಲೂಕಿನ 85 ವರ್ಷದ ಮಹಿಳೆ, 89 ವರ್ಷದ ಪುರುಷ, ಉಡುಪಿ ತಾಲೂಕಿನ 66 ವರ್ಷದ ಪುರುಷ ಕೋವಿಡ್ನಿಂದ ಮೃತಪಟ್ಟಿದ್ದಾರೆ. ಇಂದು 585 ಮಂದಿಯನ್ನು ಡಿಸ್ಚಾರ್ಜ್ ಮಾಡಲಾಗಿದ್ದು, 4506 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಇಂದು ಒಟ್ಟು 3326 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಜಿಲ್ಲೆಯಲ್ಲಿ ಇಂದು 5494 ಮಂದಿಗೆ ಮೊದಲನೇ ಡೋಸ್, 1311 ಮಂದಿಗೆ ಎರಡನೇ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೆಂಗಳೂರು: ರಾಜ್ಯದಲ್ಲಿ 2021ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ರದ್ದು ಮಾಡಲಾಗಿದೆ. ಆದರೆ ಎಸ್ ಎಸ್ ಎಲ್ ಸಿ ಪರೀಕ್ಷೆ ಭಿನ್ನ ಮಾದರಿಯಲ್ಲಿ ನಡೆಯಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ. ಇಂದು ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿ ಈ ವರ್ಷ ಪರಿಸ್ಥಿತಿ ತುಂಬಾ ವಿಭಿನ್ನವಾಗಿದೆ. ಮಕ್ಕಳ ಯೋಗಕ್ಷೇಮ ಮತ್ತು ಶೈಕ್ಷಣಿಕ ಭವಿಷ್ಯ ಇದನ್ನು ಗಮನದಲ್ಲಿಟ್ಟುಕೊಂಡು ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಈಗ ನಡೆಸುವುದಿಲ್ಲ. ಬದಲಾಗಿ ಪರೀಕ್ಷೆ ಇಲ್ಲದೆ ಪ್ರಥಮ ಪಿಯುಸಿ ಪರೀಕ್ಷೆ ಫಲಿತಾಂಶದ ಆಧಾರದ ಮೇಲೆ ಗ್ರೇಡಿಂಗ್ ನೀಡಲು ನಿರ್ಧರಿಸಲಾಗಿದೆ. ಹೀಗಾಗಿ 2021ರ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ರದ್ದು ಮಾಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ ಭಿನ್ನ ಮಾದರಿಯಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ: ರಾಜ್ಯದಲ್ಲಿ ಪ್ರಸಕ್ತ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆ ಭಿನ್ನ ಮಾದರಿಯಲ್ಲಿ ನಡೆಯಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ. ಪ್ರಶ್ನೆಗಳು ಸರಳವಾಗಿ ನೇರವಾಗಿ ಇರುತ್ತದೆ. ಪರೀಕ್ಷೆ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ, ಜೂ.೦3: ಜಿಲ್ಲೆಯಲ್ಲಿ ೫೦ಕ್ಕಿಂತ ಅಧಿಕ ಕೊರೋನಾ ಪಾಸಿಟಿವ್ ಪ್ರಕರಣ ದಾಖಲಾದ ಗ್ರಾಮ ಪಂಚಾಯತಿಗಳನ್ನು ಲಾಕ್ಡೌನ್ ಮಾಡಲು ಜಿಲ್ಲಾಧಿಕಾರಿಗಳು ಈಗಾಗಲೇ ಆದೇಶಿಸಿದ್ದು ಬುಧವಾರದಿಂದ 33 ಗ್ರಾಮಗಳನ್ನು ಲಾಕ್ ಮಾಡಲಾಗಿದೆ. ಮುಂದುವರಿದ ಜಿಲ್ಲೆಯ ಏಳು ಗ್ರಾಮಪಂಚಾಯತಿ ಲಾಕ್ಡೌನ್ ಮಾಡಲು ಜಿಪಂ ಸಿಇಓ ಆದೇಶಿಸಿದ್ದಾರೆ. ಜೂನ್ 5 ರಿಂದ ಕುಂದಾಪುರ ತಾಲೂಕಿನ ತಲ್ಲೂರು, ಕರ್ಕುಂಜೆ, ಯಡಮೊಗೆ, ಬ್ರಹ್ಮಾವರ ತಾಲೂಕಿನ ಕೊಕ್ಕರ್ಣೆ, ಆವರ್ಸೆ, ಹನೆಹಳ್ಳಿ ಹಾಗೂ ಕಾರ್ಕಳದ ಕಲ್ಯ ಗ್ರಾ.ಪಂ ಲಾಕ್ಡೌನ್ ಮಾಡಲಾಗುತ್ತಿದೆ. ಈ ಗ್ರಾಮಗಳಲ್ಲಿ ಅಗತ್ಯ ವಸ್ತುಗಳ ಖರೀದಿಗೆ ನಾಳೆ ಅವಕಾಶ ನೀಡಲಾಗಿದೆ. ಜೂನ್ 5 ಬೆಳಗ್ಗೆ 6 ರಿಂದ ಜೂನ್ 7 ಬೆಳಗ್ಗೆ 6ರ ವರೆಗೆ ಲಾಕ್ ಡೌನ್ ಇರಲಿದೆ. ► ಜೂನ್.2ರಿಂದ ಕುಂದಾಪುರ & ಬೈಂದೂರು ತಾಲೂಕಿನ 11 ಗ್ರಾಮಗಳು ಸಂಪೂರ್ಣ ಲಾಕ್ – https://kundapraa.com/?p=48826 .
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಗುರುವಾರ 580 ಕೋವಿಡ್ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಪಾಸಿಟಿವ್ ಪ್ರಕರಣಗಳಲ್ಲಿ ಉಡುಪಿ, ಬ್ರಹ್ಮಾವರ, ಕಾಪು ತಾಲೂಕಿನ 324, ಕುಂದಾಪುರ, ಬೈಂದೂರು ತಾಲೂಕಿನ 129, ಕಾರ್ಕಳ, ಹೆಬ್ರಿ ತಾಲೂಕಿನ 129 ಮಂದಿಗೆ ಹಾಗೂ ಹೊರ ಜಿಲ್ಲೆಯ 4 ಮಂದಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ. ಒಟ್ಟು 580 ಪ್ರಕರಣಗಳಲ್ಲಿ 14 ಮಂದಿ ಕೋವಿಡ್ ಕೇರ್ ಸೆಂಟರ್, ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್ ಹೆಲ್ತ್ ಆಸ್ಪತ್ರೆಗೆ ದಾಖಲಾಗಿದ್ದರೆ, 566 ಮಂದಿಯನ್ನು ಹೋಮ್ ಐಸೊಲೇಷನ್ ಮಾಡಲಾಗಿದೆ. ಜಿಲ್ಲೆಯಲ್ಲಿ ಇಂದು 923 ಮಂದಿಯನ್ನು ಡಿಸ್ಚಾರ್ಜ್ ಮಾಡಲಾಗಿದ್ದು, 4533 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಇಂದು ಒಟ್ಟು 3161 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಜಿಲ್ಲೆಯಲ್ಲಿ ಇಂದು 6919 ಮಂದಿಗೆ ಮೊದಲನೇ ಡೋಸ್, 3302 ಮಂದಿಗೆ ಎರಡನೇ ಡೋಸ್ ವಾಕ್ಸಿನೇಷನ್ ಮಾಡಲಾಗಿದೆ. ಇಲ್ಲಿಯ ತನಕ ಒಟ್ಟು 2,58,351 ಮಂದಿಗೆ ಮೊದಲ ಡೋಸ್ ಹಾಗೂ 84,485 ಮಂದಿಗೆ ಎರಡನೇ ಡೋಸ್ ವಾಕ್ಸಿನ್ ನೀಡಲಾಗಿದೆ. ಸೂಚನೆ:…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೆಂಗಳೂರು: ರಾಜ್ಯದಲ್ಲಿ ಮತ್ತೆ ಒಂದು ವಾರ ಲಾಕ್ ಡೌನ್ ವಿಸ್ತರಣೆ ಮಾಡಲು ಸರ್ಕಾರ ನಿರ್ಧಾರ ಮಾಡಿರುವುದಾಗಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತಿಳಿಸಿದ್ದು, ಜೂನ್ 14ರ ತನಕ ಲಾಕ್’ಡೌನ್ ಮುಂದುವರಿಯಲಿದೆ. ವಿಧಾನಸೌಧದಲ್ಲಿ ಇಂದು ಸಂಜೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸೋಂಕು ನಿವಾರಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತದೆ. ಹೀಗಾಗಿ ತಜ್ಞರ ಸಲಹೆ ಮೇರೆಗೆ ಲಾಕ್ ಡೌನ್ ವಿಸ್ತರಣೆ ಮಾಡಲಾಗುತ್ತದೆ. ಒಂದು ವಾರ ಲಾಕ್ ಡೌನ್ ವಿಸ್ತರಣೆ ಮಾಡಲಾಗುವುದು. ಈಗಿರುವ ನಿಯಮಗಳೇ ಮುಂದೆಯೂ ಚಾಲ್ತಿಯಲ್ಲಿರಲಿದೆ ಎಂದು ತಿಳಿಸಿದರು. ಸೋಂಕು ಶೇ.5 ಕ್ಕಿಂತ ಕಮ್ಮಿಯಾದ್ರೆ ವಾರದ ಬಳಿಕ ವಿನಾಯ್ತಿ ಕೊಡಲು ಸಿದ್ಧವಾಗಿದ್ದು, ಇದಕ್ಕೆ ಜನ ಸಹಕಾರ ಕೊಡಬೇಕು. ಪ್ರತಿ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಪ್ರಧಾನಿಯವರೇ ಸಂಪೂರ್ಣ ಅಧಿಕಾರ ಕೊಟ್ಟಿದ್ದಾರೆ. ಡಿಸಿಗಳು ಅವರ ಚೌಕಟ್ಟಿನಲ್ಲೇ ನಿರ್ಧಾರ ತಗೋತಾರೆ ಎಂದರು. ಎರಡನೇ ಹಂತದ ಪ್ಯಾಕೇಜ್ ಘೋಷಣೆ: ಇದೇ ವೇಳೆ ಸಿಎಂ, ಎರಡನೇ ಹಂತದ ಪ್ಯಾಕೇಜ್ ಘೋಷಣೆ ಮಾಡಿದರು. ಒಟ್ಟು 500 ಕೋಟಿ ಪ್ಯಾಕೇಜ್ ಘೋಷಣೆ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಬುಧವಾರ 636 ಕೋವಿಡ್ ಪಾಸಿಟಿವ್ ಪ್ರಕರಣ ವರದಿಯಾಗಿದ್ದು, 2 ಮಂದಿ ಕೋವಿಡ್ ಸೊಂಕಿನಿಂದ ಮೃತಪಟ್ಟಿದ್ದಾರೆ. ಪಾಸಿಟಿವ್ ಪ್ರಕರಣಗಳಲ್ಲಿ ಉಡುಪಿ, ಬ್ರಹ್ಮಾವರ, ಕಾಪು ತಾಲೂಕಿನ 239, ಕುಂದಾಪುರ, ಬೈಂದೂರು ತಾಲೂಕಿನ 192, ಕಾರ್ಕಳ, ಹೆಬ್ರಿ ತಾಲೂಕಿನ 203 ಮಂದಿಗೆ ಹಾಗೂ ಹೊರ ಜಿಲ್ಲೆಯ 2 ಮಂದಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ. ಒಟ್ಟು 636 ಪ್ರಕರಣಗಳಲ್ಲಿ 15 ಮಂದಿ ಕೋವಿಡ್ ಕೇರ್ ಸೆಂಟರ್, ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್ ಹೆಲ್ತ್ ಆಸ್ಪತ್ರೆಗೆ ದಾಖಲಾಗಿದ್ದರೆ, 621 ಮಂದಿಯನ್ನು ಹೋಮ್ ಐಸೊಲೇಷನ್ ಮಾಡಲಾಗಿದೆ. ಇಂದು ಉಡುಪಿಯ 84 ವರ್ಷದ ವೃದ್ಧೆ, ಕಾರ್ಕಳದ 62 ವರ್ಷದ ವೃದ್ಧೆ ಕೋವಿಡ್ನಿಂದ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಇಂದು 963 ಮಂದಿಯನ್ನು ಡಿಸ್ಚಾರ್ಜ್ ಮಾಡಲಾಗಿದ್ದು, 4876 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಇಂದು ಒಟ್ಟು 3008 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಜಿಲ್ಲೆಯಲ್ಲಿ ಇಂದು 4133 ಮಂದಿಗೆ ಮೊದಲನೇ ಡೋಸ್, 1521 ಮಂದಿಗೆ ಎರಡನೇ ಡೋಸ್ ವಾಕ್ಸಿನೇಷನ್…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕರೋನಾ ಹೆಚ್ಚುತ್ತಿರುವ ಗ್ರಾಮಗಳು ಲಾಕ್ಡೌನ್ ಮಾಡಿಕೊಳ್ಳುತ್ತಿದ್ದು, ಹೊಸ ಪ್ರಕರಣ ಹಾಗೂ ಸೋಂಕು ಹೆಚ್ಚದಂತೆ ವೈದ್ಯರ ನಡಿಗೆ ಹಳ್ಳಿಯ ಕಡೆ ಮೂಲಕ ಹಳ್ಳಿಯಲ್ಲಿರುವ ಎಲ್ಲರ ಕರೋನಾ ಟೆಸ್ಟ್ ಮಾಡಬೇಕು ಎಂದು ತಿಳಿಸಲಾಗಿದೆ. ಇದರಿಂದ ಹಳ್ಳಿಗಳನ್ನು ಕರೋನಾ ಮುಷ್ಟಿಯಿಂದ ಬಿಡಿಸುವ ಪ್ರಯತ್ನ ನಡೆಯುತ್ತದೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಹೇಳಿದರು. ಕುಂದಾಪುರ ತಾಲೂಕು ಆಸ್ಪತ್ರೆ ಕೋವಿಡ್ ಸೆಂಟರ್ ಹಾಗೂ ಸ್ವಯಂಪ್ರೇರಿತ ಲಾಕ್ಡೌನ್ ಮಾಡಿಕೊಂಡ ಮಾಡಿಕೊಂಡು ಜಡ್ಕಲ್ ಗ್ರಾಮ ಪಂಚಾಯಿತಿಗೆ ಬುಧವಾರ ಭೇಟಿ ನೀಡಿ ಮಾತನಾಡಿ, ಕರೋನಾ ವಿಸ್ತರಣೆ ಚೈನ್ ತುಂಡರಿಸುವ ನಿಟ್ಟಿನಲ್ಲಿ ಲಾಕ್ಡೌನ್ ಮಾಡಲಾಗಿದ್ದು, ಜೂ.7ರ ಒಳಗೆ ಪಾಸಿಟಿವ್ ಪ್ರಮಾಣ 10ಕ್ಕಿಂತ ಕಡಿಮೆ ಬಾರದಿದ್ದರೆ ಲಾಕ್ಡೌನ್ ವಿಸ್ತರಣೆ ಅನಿವಾರ್ಯ. ಸಾರ್ವಜನಿಕರು ನಿಯಮ ಕಡ್ಡಾಯವಾಗಿ ಪಾಲಿಸುವ ಮೂಲಕ ಪಾಸಿಟಿವ್ ಪ್ರಮಾಣ ಇಳಿಸುವ ಜೊತೆ ಲಾಕ್ಡೌನ್ ಮುಕ್ತಿಗೆ ಸಹಕಾರ ನೀಡಬೇಕು ಎಂದರು. ಉಡುಪಿ ಜಿಲ್ಲೆಯಲ್ಲಿ ಕರೋನಾ ಪಾಸಿಟಿವಿಟಿ ರೇಟ್ ಶೇ.16ಕ್ಕೆ ಇಳಿದರೂ ಇದು ಸಾಕಾಗೋದಿಲ್ಲ. ಪಾಸಿಟಿವ್ ದರ 10ಕ್ಕಿಂತ ಕಡಿಮೆಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಬೈಂದೂರು ರಾಣೆಬೆನ್ನೂರು ರಾಷ್ಟ್ರೀಯ ಹೆದ್ದಾರಿ 766 (ಅ)ಯನ್ನು ಬೈಂದೂರಿನಿಂದ ನಿಟ್ಟೂರಿನ ತನಕ ಅಭಿವೃದ್ಧಿಪಡಿಸಲು ಯೋಜನಾ ವರದಿ ತಯರಿಗೆ ಅನುದಾನ ನೀಡಿ ಅನುಮೋದನೆ ಮಾಡಲಾಗಿದೆ ಎಂದು ಶಿವಮೊಗ್ಗ ಸಂಸದ ಬಿ. ವೈ. ರಾಘವೇಂದ್ರ ತಿಳಿಸಿದ್ದಾರೆ. ಬೈಂದೂರಿನಿಂತ ನಿಟ್ಟೂರು ತನಕ ಒಟ್ಟು 38.70 ಕಿ.ಮೀ ವರೆಗೆ ರಸ್ತೆ ಅಗಲೀಕರಣ, ಕೊಲ್ಲೂರು ಪಟ್ಟಣಕ್ಕೆ ಪಾಸ್ ರಸ್ತೆ ನಿರ್ಮಾಣ ಮತ್ತು ಕೊಲ್ಲೂರು ಘಾಟಿ ರಸ್ತೆಯ ಅಗಲೀಕರಣ ಒಳಗೊಂಡಂತೆ ದ್ವಿಪಥಕ್ಕಾಗಿ 10 ಮೀಟರ್ ಅಗಲದ ರಸ್ತೆ ನಿರ್ಮಾಣದ ಯೋಜನಾ ವರದಿ ತಯಾ ರೂ. 1.35 ಕೋಟಿ ಅನುದಾನ ಬಿಡುಗಡೆಗೊಳಿಸಲಾಗಿದೆ ಎಂದು ಸಂಸದರು ತಿಳಿಸಿದ್ದಾರೆ. ಪ್ರಗತಿಯಲ್ಲಿರುವ/ ಟೆಂಡರ್ ಅಂತಿಮ ಹಂತದಲ್ಲಿರುವ ಬೈಂದೂರು ರಾಣೆಬೆನ್ನೂರು ಹೆದ್ದಾರಿ ಕಾಮಗಾರಿ: ಬೈಂದೂರು ರಾಣೆಬೆನ್ನೂರು ರಾಷ್ಟ್ರೀಯ ಹೆದ್ದಾರಿಯ ನಾಗೋಡಿ ಬಳಿ ನದಿ ಪಕ್ಕದ ರಸ್ತೆ ಹಾಗೂ ಗುಡ್ಡ ಕುಸಿತ ಪರಿಣಾಮದಿಂದಾಗಿ ಹಾಳಾಗಿರುವ ರಸ್ತೆಯ ಭಾಗದಲ್ಲಿ ತಾಂತ್ರಿಕವಾಗಿ ನೂತನ ಗೇಬಿಯನ್ ತಡೆಗೋಡೆ ನಿರ್ಮಿಸಿ ಒಡೆದ ಕಾಂಕ್ರಿಟ್ ರಸ್ತೆಯ ಪುನರ್ ನಿರ್ಮಾಣ ಕೆಲಸದ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕೇರಳದ ಬಿಜೆಪಿ -ಅರ್ಎಸ್ಎಸ್ ರಾಜ್ಯ ನಾಯಕರು 3.5 ಕೋಟಿ ಹವಾಲಾದಲ್ಲಿ ಭಾಗಿಯಾಗಿದ್ದು, ಕೇರಳ ವಿಧಾನಸಭಾ ಚುನಾವಣೆಯಲ್ಲಿ ಕೋಮು ಹಿಂಸಾಚಾರವನ್ನು ಪ್ರಚೋದಿಸಲು ಮತ್ತು ವಿಧ್ವಂಸಕ ಕೃತ್ಯ ನಡೆಸಲು ಬಳಸಲಾಗಿತ್ತು. ಇದರ ಬಗ್ಗೆ ಈಡಿಯು ತನಿಖೆ ನಡೆಸಬೇಕು, ಈಡಿ ಆಯ್ದ ಕೆಲವೊಂದು ಕೇಂದ್ರ ಸರ್ಕಾರದ ವಿರುದ್ಧ ಧ್ವನಿಯೆತ್ತುವವರನ್ನು ಮಾತ್ರ ಭೇಟೆಯಾಡುತ್ತಿದೆ. ಇಂತಹ ಗಂಭೀರ ಪ್ರಕರಕರಣಗಳನ್ನು ಈಡಿಯು ಮರೆಮಾಚುತ್ತಿದೆ, ಈ ವಿಚಾರವಾಗಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕುಂದಾಪುರ ಜಿಲ್ಲಾ ಸಮಿತಿ ವತಿಯಿಂದ ಬಿಜೆಪಿ ಹವಾಲಾ ಕಾಣಿಸಿಕೊಂಡಾಗ ಇಡಿ ಕಣ್ಮರೆಯಾಯಿತು ಎಂಬ ಸಾಮೂಹಿಕ ಮೇಲಿಂಗ್ ಅಭಿಯಾನ ನಡೆಸಿತು ಸಂಬಂಧಪಟ್ಟ ಇಲಾಖೆಗಳಿಗೆ, ಅಧಿಕಾರಿಗಳಿಗೆ ಇದರ ಬಗ್ಗೆ ಸೂಕ್ತ ತನಿಖೆ ನಡೆಸಲು ಈ ಮೇಲ್ ಮುಖಾಂತರ ಒತ್ತಾಯಿಸಲಾಯಿತು. ಜಿಲ್ಲೆಯಿಂದ ಸುಮಾರು ನೂರಕ್ಕೂ ಅಧಿಕ ಇಮೇಲ್ ಗಳನ್ನು ವಿದ್ಯಾರ್ಥಿಗಳು, ನಾಗರಿಕರು ಕಳುಹಿಸಿದರು. ಕ್ಯಾಂಪಸ್ ಫ್ರಂಟ್ ಕುಂದಾಪುರ ಜಿಲ್ಲಾ ಸಮಿತಿ ಸದಸ್ಯರಾದ ಸಹದ್ ಬಸ್ರೂರ್ ,ಮುಜಾಹಿದ್ ,ಸಿಂಹಾನ ,ಶಾಹಿಘ್ ಹಾಗೂ ವಿಧ್ಯಾರ್ಥಿಗಳು ಭಾಗವಹಿಸಿದ್ದರು.
