ಕುಂದಾಪ್ರ ಡಾಟ್ ಕಾಂ ಸುದ್ದಿ. ಬೆಂಗಳೂರು, ಎ.26: ರಾಜ್ಯದಲ್ಲಿ ಕೊರೊನಾ ಸೊಂಕಿನ ಎರಡನೇ ಅಲೆ ವ್ಯಾಪಕವಾಗಿ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲೇಬೇಕಾದ ಅನಿವಾರ್ಯತೆಯಿದ್ದು ಮುಂದಿನ 14 ದಿನಗಳ ಕಾಲ ಕರ್ನಾಟಕವನ್ನು ಲಾಕ್ಡೌನ್ (ಕೋವಿಡ್ ಕರ್ಪ್ಯೂ) ಮಾಡಲು ನಿರ್ಧರಿಸಲಾಗಿದೆ. ನಾಳೆ ಸಂಜೆಯಿಂದ ಲಾಕ್ಡೌನ್ ಜಾರಿಯಾಗಲಿದ್ದು, 15 ದಿನಗಳ ಕಾಲ ಈ ಕಠಿಣ ನಿಯಮ ಮುಂದುವರೆಯಲಿದೆ ಎಂದು ಸರ್ಕಾರ ತಿಳಿಸಿದೆ. ಬೆಳಗ್ಗೆ 6 ರಿಂದ 10 ಗಂಟೆವರೆಗೆ ಅಗತ್ಯ ವಸ್ತು ಖರೀದಿಗೆ ಅವಕಾಶ ಕಲ್ಪಿಸಲಾಗಿದೆ. ಉತ್ಪಾದನಾ ವಲಯ ಎಂದಿನಂತೆ ಮುಂದುವರಿಯುತ್ತದೆ. ಕೃಷಿ ಚಟುವಟಿಕೆಗಳಿಗೂ ಯಾವುದೇ ತೊಂದರೆ ಇಲ್ಲ. ರಾಜ್ಯದಲ್ಲಿ ಎಂದಿನಂತೆ ಕರ್ಫ್ಯೂ ಮುಂದುವರಿಯುತ್ತದೆ. ರಾಜ್ಯದಲ್ಲಿ ಆಕ್ಸಿಜನ್ ಕೊರತೆಯಾಗದಂತೆ ಕ್ರಮ ಕೈಗೊಳ್ಳಲಾಗಿದೆ. ಇನ್ನುಮುಂದೆ ಆಕ್ಸಿಜನ್ ಕೊರತೆಯಾಗುವುದಿಲ್ಲ. ರಾಜ್ಯಕ್ಕೆ 800 ಮೆಟ್ರಿಕ್ ಟನ್ ಆಕ್ಸಿಜನ್ ಕೊಡಲು ಕೇಂದ್ರ ಸರ್ಕಾರ ಕೊಡಲು ಒಪ್ಪಿಕೊಂಡಿದೆ. ಎಂದು ತಿಳಿಸಿದ್ದಾರೆ. ಅಲ್ಲದೇ ರೆಮ್ಡೆಸಿವಿರ್ ಇಂಜೆಕ್ಷನ್ ಕೊರತೆಯೂ ಆಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಎರಡು ವಾರದಲ್ಲಿ ಕೊರೊನಾ ನಿಯಂತ್ರಣಕ್ಕೆ ಬಾರದಿದ್ದರೆ ಮತ್ತೆ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲ್ಲೂಕು ಆಸ್ಪತ್ರೆಯನ್ನು ಸಂಪೂರ್ಣವಾಗಿ ಕೋವಿಡ್ ರೋಗಿಗಳಿಗೆ ಮೀಸಲಿಟ್ಟದ್ದಿರಿಂದ ಇತರ ಕಾಯಿಲೆಗೆ ಚಿಕಿತ್ಸೆಗೆ ಬರುವ ರೋಗಿಗಳು ಸೂಕ್ತ ಚಿಕಿತ್ಸೆ ದೊರಕದೆ ಅತಂತ್ರರಾಗಿದ್ದರೆ. ಇನ್ನಾದರೂ ಸಂಬಂಧಿತರು ಕುಂದಾಪುರ ತಾಲ್ಲೂಕು ಆಸ್ಪತ್ರೆಯಲ್ಲಿ ಒಂದು ವಿಭಾಗವನ್ನು ಇತರೆ ಕಾಯಿಲೆಗೆ ಚಿಕಿತ್ಸೆಗೆ ಬರುವ ಒಳರೋಗಿಗಳಿಗೆ ಮೀಸಲಿಡಬೇಕು ಎಂದು ಬಸ್ರೂರು ಗ್ರಾಮ ಪಂಚಾಯತ್ನ ಮಾಜಿ ಅಧ್ಯಕ್ಷ ಕೆ. ವಿಕಾಸ್ ಹೆಗ್ಡೆ ಆಗ್ರಹಿಸಿದ್ದಾರೆ. ತಾಲ್ಲೂಕು ಆಸ್ಪತ್ರೆಗೆ ಚಿಕಿತ್ಸೆಗೆ ಬರುವ ಹೆಚ್ಚಿನವರು ಆರ್ಥಿಕವಾಗಿ ಹಿಂದುಳಿದವರು, ಇವರಿಗೆ ಖಾಸಗಿ ಆಸ್ಪತ್ರೆಗಳಿಗೆ ಹೋಗಿ ಚಿಕಿತ್ಸೆ ಪಡೆಯಲು ಇವರಲ್ಲಿ ಸಾಮರ್ಥ್ಯವಿರುವುದಿಲ್ಲಾ ಹಾಗೂ ಕುಂದಾಪುರದ ಸರ್ಕಾರಿ ಆಸ್ಪತ್ರೆಗೆ ಬರುವ ರೋಗಿಗಳಿಗೆ ಉಡುಪಿ ಜಿಲ್ಲಾಸ್ಪತ್ರೆಗೆ ಹೋಗುಲು ಹೇಳುತ್ತಿದ್ದು ಅಲ್ಲೂ ಹಾಸಿಗೆ ಇನ್ನಿತರ ಸಮಸ್ಯೆಗಳು ಇರುವ ಬಗ್ಗೆ ರೋಗಿಗಳು ಹಾಗೂ ಅವರ ಸಂಬಂಧಿಕರು ನೋವನ್ನು ತೋಡಿಕೊಳ್ಳುತ್ತಿದ್ದಾರೆ. ಆದ್ದರಿಂದ ಸಂಬಂಧಿತರು ಕೂಡಲೇ ಕುಂದಾಪುರದ ಸರ್ಕಾರಿ ಆಸ್ಪತ್ರೆಯಲ್ಲೇ ಇತರೆ ಕಾಯಿಲೆಗೆ ಚಿಕಿತ್ಸೆಗೆ ಬರುವವರಿಗೆ ಅವಕಾಶ ಮಾಡಿಕೊಡಿ ಎಂದು ವಿಕಾಸ್ ಹೆಗ್ಡೆ ಆಗ್ರಹಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ/ ಕಾರ್ಯಕಾರಿ ಮಂಡಳಿ ಚುನಾವಣೆಯು ದಿನಾಂಕ ಮೇ 9 ರಂದು ಉಡುಪಿ ಜಿಲ್ಲೆಯಲ್ಲಿ ಉಡುಪಿ ಜಿಲ್ಲಾ ಅಧ್ಯಕ್ಷರು ಹಾಗೂ ಕೇಂದ್ರ ಅಧ್ಯಕ್ಷರ ಚುನಾವಣೆಯನ್ನು ನಡೆಸಲಾಗುತ್ತದೆ, ಉಡುಪಿ ಜಿಲ್ಲೆಯಲ್ಲಿ ಜಿಲ್ಲಾ ಅಧ್ಯಕ್ಷರ ಚುನಾವಣೆಗೆ ಕೆ.ಎಸ್ ಸುಬ್ರಹ್ಮಣ್ಯ ಬಾಸ್ರಿ ಇಂದ್ರಾಳಿ ಉಡುಪಿ, ಸುಬ್ರಹ್ಮಣ್ಯ ಭಟ್ ಬೈಂದೂರು ತಾಲೂಕು, ನೀಲಾವರ ಸುರೇಂದ್ರ ಅಡಿಗ ಮಣೂರು ಗ್ರಾಮ ಉಡುಪಿ ಈ ಮೂರು ಅಭ್ಯರ್ಥಿಗಳು ನಾಮಪತ್ರಗಳನ್ನು ಸಲ್ಲಿಸಿರುತ್ತಾರೆ. ಜಿಲ್ಲೆಯಲ್ಲಿ ಒಟ್ಟು 8 ಮತಗಟ್ಟೆ ಕೇಂದ್ರಗಳಿದ್ದು 1987 ಮತದಾರರಿರುತ್ತಾರೆ. ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯರಾಗಿರುವವರು ಮತದಾರರಾಗಿದ್ದು, ಮತದಾರ ಪಟ್ಟಿಗಳನ್ನು ಮತಗಟ್ಟೆವಾರು ಈಗಾಗಲೇ ತಯಾರಿಸಲಾಗಿದೆ. ಮತದಾರರು ಕನ್ನಡ ಸಾಹಿತ್ಯ ಪರಿಷತ್ತಿನಿಂದ ಪಡೆದ ಅಭ್ಯರ್ಥಿಗಳ ಗುರುತು ಚೀಟಿ ಅಥವಾ ಭಾರತದ ಚುನಾವಣಾ ಆಯೋಗ ನಿಗದಿಪಡಿಸಿರುವ ದಾಖಲೆಗಳಲ್ಲಿ ಯಾವುದಾದರು ಒಂದನ್ನು ಹಾಜರು ಪಡಿಸಿ ಮತದಾನ ಮಾಡಲು ಅವಕಾಶವಿರುತ್ತದೆ. ಮತದಾನವು ದಿನಾಂಕ ಮೇ 9ರಂದು ಬೆಳಗ್ಗೆ 8ರಿಂದ ಪ್ರಾರಂಭವಾಗಿ ಮಧ್ಯಾಹ್ನ 4 ಗಂಟೆಯವರೆಗೆ ನಡೆಯಲಿದೆ.…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕರ್ನಾಟಕ ಸೆಕೆಂಡರಿ ಎಜುಕೇಷನ್ ಬೋರ್ಡ್ ನಡೆಸಿದ ಭರತನಾಟ್ಯ ವಿದ್ವತ್ ಪರೀಕ್ಷೆ ಯಲ್ಲಿ ರೋಶನ್ ಪೂಜಾರಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿ ‘ವಿದ್ವಾನ ಪದವಿ’ಯನ್ನು ಪಡೆದುಕೊಂಡಿದ್ದಾರೆ. ಇವರು ತಮ್ಮ 10ನೇ ವಯಸ್ಸಿನಿಂದ ಕುಂದಾಪುರ ನೃತ್ಯ ವಸಂತ ನಾಟ್ಯಾಲಯದ ನೃತ್ಯ ಗುರುಗಳಾದ ವಿದುಷಿ ಪ್ರವೀತಾ ಅಶೋಕ ಅವರಿಂದ ಭರತನಾಟ್ಯ ಕಲಿಯಲು ಪ್ರಾರಂಭಿಸಿ, ಜ್ಯೂನಿಯರ್, ಸಿನಿಯರ್, ವಿದ್ವತ್ ಪೂರ್ವ, ಹಾಗೂ ವಿದ್ವತ್ ಅಂತಿಮ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲೆ ತೇರ್ಗಡೆ ಹೊಂದಿರುತ್ತಾರೆ. ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಭರತನಾಟ್ಯ ಸ್ಪರ್ಧೆಯಲ್ಲಿ ಭಾಗವಹಿಸಿ ಹಾಲವಾರು ಪ್ರಥಮ ಬಹುಮಾನ ಪಡೆದ ಇವನು ‘ಶ್ರೀ ದುರ್ಗಾ ನಾಟ್ಯ ವಿಶಾರದ’ ಬಿರುದನ್ನು ಪಡೆದಿರುತ್ತಾನೆ. ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯವರ ಶಿಷ್ಯ ವೇತನಕ್ಕೆ ಆಯ್ಕೆಯಾಗಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಭಾರತೀಯ ಜನತಾ ಪಾರ್ಟಿಯ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡ ಬಿಜೆಪಿ ಮುಖಂಡ ಯಶಪಾಲ್ ಸುವರ್ಣ ಅವರನ್ನು ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘದ ಅಧ್ಯಕ್ಷ ಸದಾಶಿವ ಖಾರ್ವಿ ಮತ್ತು ಉಪಾಧ್ಯಕ್ಷ ಸೂರಜ್ ಖಾರ್ವಿ ಅವರು ಉಡುಪಿಯ ಮಹಾಲಕ್ಷ್ಮೀ ಕೋ-ಆಪರೇಟಿವ್ ಬ್ಯಾಂಕಿನ ಪ್ರಧಾನ ಕಛೇರಿಯಲ್ಲಿ ಅಭಿನಂದಿಸಿ ಗೌರವಿಸಿದರು. ಬಿಜೆಪಿ ಮುಖಂಡ ವೆಂಕಟೇಶ ನಾವುಂದ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಪದ್ಮಾಸನ ಭಂಗಿಯಲ್ಲಿ ಕಾಲಿಗೆ ಸರಪಳಿ ಬಿಗಿದು 1 ಕಿ.ಮೀ.ದೂರವನ್ನು 25 ನಿಮಿಷ 16 ಸೆಕೆಂಡುಗಳಲ್ಲಿ ಈಜಿ ಇಂಡಿಯಾ ಬುಕ್ ಆಫ್ ರೆಕಾರ್ಡ್ನಲ್ಲಿ ಹೆಸರು ದಾಖಲಿಸಿದ ಗುಜ್ಜಾಡಿ ಗ್ರಾಮದ ಕಂಚುಗೋಡಿನ ನಿವಾಸಿ, ಪದವೀಧರ ಶಿಕ್ಷಕ ನಾಗರಾಜ ಖಾರ್ವಿ ಅವರನ್ನು ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಪ್ರೇಮಾನಂದ ಶೆಟ್ಟಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಈಜು ತರಬೇತುದಾರರಾದ ಬಿ.ಕೆ.ನಾಯ್ಕ್, ಕಾರ್ಪೋರೇಟರ್ಗಳಾದ ಶೋಭ ರಾಜೇಶ್, ಜಯಲಕ್ಷ್ಮೀ ಶೆಟ್ಟಿ, ಶರತ್, ಮಾಜಿ ಕಾರ್ಪೋರೇಟರ್ ರಾಧಾಕೃಷ್ಣ, ಈಜುಕೊಳದ ವ್ಯವಸ್ಥಾಪಕರಾದ ರಮೇಶ್ ಬಿಜೈ, ನಿಜಗುಣ ದೊಡ್ಡಮನಿ, ನಾಗೇಂದ್ರನಾಥ್ ಉಪಸ್ಥಿತರಿದ್ದರು. ನಾಗರಾಜ ಖಾರ್ವಿ ಸ.ಹಿ.ಪ್ರಾ.ಶಾಲೆ ಕಂಚುಗೋಡು, ಸ.ಹಿ.ಪ್ರಾ.ಶಾಲೆ ಗುಜ್ಜಾಡಿ, ಸರಸ್ವತಿ ವಿದ್ಯಾಲಯ ಗಂಗೊಳ್ಳಿ, ಸರಕಾರಿ ಪ್ರಥಮ ದರ್ಜೆ ಕಾಲೇಜು ಬೈಂದೂರು, ಡಾ.ಟಿ.ಎಂ.ಎ.ಪೈ, ಶಿಕ್ಷಣ ಮಹಾವಿದ್ಯಾಲಯದ ಹಳೆ ವಿದ್ಯಾರ್ಥಿಯಾಗಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬೀದರ್ ದೇಶಪಾಂಡೆ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನ, ಹಾಗೂ ಬೆಂಗಳೂರಿನ ಕವಿ ಗೋಪಾಲಕೃಷ್ಣ ಅಡಿಗ ಶತಮಾನ ಪ್ರತಿಷ್ಠಾನ ಇವುಗಳ ಸಂಯುಕ್ತ ಆಶ್ರಯದಲ್ಲಿ ಉಪ್ಪುಂದ ರೈತಸಿರಿ ಸಭಾಭವನದಲ್ಲಿ ನಡೆದ ಕವಿ ಕೆ.ಪುಂಡಲೀಕ ನಾಯಕ ಅವರ ಕವನ ಸಂಕಲನಗಳ ಬಿಡುಗಡೆ ಕಾರ್ಯಕ್ರಮದಲ್ಲಿ ಪ್ರವೀಣ್ ಬಿ. ಶೆಟ್ಟಿ ಬೈಂದೂರು ಅವರಿಗೆ ದೇಶಪಾಂಡೆ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನ(ರಿ) ಬೀದರ್ ವತಿಯಿಂದ ರಾಜ್ಯ ಮಟ್ಟದ ‘ಸಂಗೀತ ಚೂಡಾಮಣಿ ರತ್ನ ರಾಜ್ಯ ಪ್ರಶಸ್ತಿ’ನೀಡಿ ಗೌರವಿಸಲಾಯಿತು. ಡಾ| ಎಂ.ಜಿ.ದೇಶಪಾಂಡೆಯವರು ಪ್ರಶಸ್ತಿ ಪ್ರದಾನ ಮಾಡಿದರು. ಈ ಸಂದರ್ಭದಲ್ಲಿ ಹಿರಿಯ ನ್ಯಾಯವಾದಿಗಳಾದ ಎ.ಎಸ್. ಎನ್ ಹೆಬ್ಬಾರ್,ಎಸ್ ಪ್ರಕಾಶ್ಚಂದ್ರ ಶೆಟ್ಟಿ, ಬೆಳಗೋಡು ರಮೇಶ್ ಭಟ್ಟ್, ಡಾ. ಪಾರ್ವತಿ ಜಿ.ಐತಾಳ್, ಪ್ರೋ. ಉಪೇಂದ್ರ ಸೋಮಯಾಜಿ, ಎಸ್.ಜನಾರ್ದನ ಮರವಂತೆ, ಓಂ ಗಣೇಶ್ ಉಪ್ಪುಂದ, ಯ.ಎಸ್ ಶೆಣೈ, ಕೆ.ಪುಂಡಲೀಕ ನಾಯಕ್ ಉಪಸ್ಥಿತಿತರಿದ್ದರು. ಅವರು ಪ್ರಸ್ತುತ ಪ್ರತಿಷ್ಟಿತ ಅಮೇರಿಕನ್ ಕಂಪೆನಿ ಒರಾಕಲ್ ಕಾರ್ಪೊರೇಶನ್ ನಲ್ಲಿ ಸೀನಿಯರ್ ಕ್ಲೌಡ್ ಆರ್ಕಿಟೆಕ್ಟ್ ಆಗಿದ್ದು ಸಾಹಿತ್ಯ ರಚನೆ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕಳೆದ ಹಲವು ವರ್ಷಗಳಿಂದ ಆಮೆನಡಿಗೆಯಂತೆ ಸಾಗಿದ್ದ ಕುಂದಾಪುರ ಪ್ಲೈಓವರ್ ಕಾಮಗಾರಿ ಅಂತ್ಯಗೊಂಡಿದ್ದು ಭಾನುವಾರ ಸಂಜೆಯಿಂದ ಸಂಚಾರಕ್ಕೆ ಮುಕ್ತವಾಗಿದೆ. ಕುಂದಾಪುರ ಪ್ಲೈಓವರ್ ಕಾಮಗಾರಿ ವಿಳಂಬವಾಗುತ್ತಿರುವುದನ್ನು ಖಂಡಿಸಿ ಕುಂದಾಪುರ ಹೆದ್ದಾರಿ ಹೋರಾಟ ಸಮಿತಿ ಸೇರಿದಂತೆ ವಿವಿಧ ಸಂಘಟನೆಗಳು ಹಲವು ಭಾರಿ ಪ್ರತಿಭಟನೆ ನಡೆಸಿ, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಗಮನ ಸೆಳೆದಿದ್ದರು. ಕುಂದಾಪುರ ಪುರಸಭೆಯ ಸಾಮಾನ್ಯ ಸಭೆ ಹಾಗೂ ವಿವಿಧೆಡೆ ಈ ಬಗ್ಗೆ ಸಾಕಷ್ಟು ಭಾರಿ ಚರ್ಚೆ ನಡೆದಿದ್ದವು. ಅಂತಿಮವಾಗಿ ಪ್ಲೈಓವರ್ ಸಂಚಾರಕ್ಕೆ ಮುಕ್ತಗೊಂಡಿರುವುದು ಕಳೆದೊಂದು ದಶಕದಿಂದ ಸಂಚಾರ ಅಡಚಣೆ ಎದುರಿಸುತ್ತಿದ್ದ ನಾಗರಿಕರು ಸದ್ಯ ನಿಟ್ಟುಸಿರು ಬಿಡುವಂತಾಗಿದೆ. ಈ ನಡುವೆ ಪ್ಲೈಓವರ್ ಕಾಮಗಾರಿಯನ್ನು ತರಾತುರಿಯಲ್ಲಿ ನಡೆಸಿರುವ ಗುತ್ತಿಗೆದಾರ ಸಂಸ್ಥೆಯ ನಡೆಯ ಬಗ್ಗೆ ಶಂಕೆ ವ್ಯಕ್ತಪಡಿಸಿರುವ ಕುಂದಾಪುರದ ನಾಗರಿಕರು ವಾರದ ಹಿಂದೆ ಹೆದ್ದಾರಿ ಹೋರಾಟ ಸಮಿತಿ ನೇತೃತ್ವದಲ್ಲಿ ಸಭೆ ಸೇರಿ ಪ್ಲೈಓವರ್ ಕಾಮಗಾರಿಯ ಲೋಪದೋಷ, ಅಸಮರ್ಕಪವಾಗಿರುವ ಸರ್ವಿಸ್ ರಸ್ತೆ, ಬಸ್ರೂರು ಅಂಡರ್ ಪಾಸ್, ಶಾಸ್ತ್ರಿ ವೃತ್ತದ ಬಳಿಯ ರಸ್ತೆ ದುರಸ್ತಿ ಮೊದಲಾದ ಅಂಶಗಳ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ನವದೆಹಲಿಯ ಜಿ-ಟೌನ್ ಸೊಸೈಟಿ ನಡೆಸಿದ 2020ರ ಭಾರತದ ಅಗ್ರ 50 ಪ್ರಭಾವಿ ವ್ಯಕ್ತಿಗಳ ಸಮೀಕ್ಷೆಯಲ್ಲಿ ಮಣಿಪಾಲ ಎಂಐಟಿ ಉಪನ್ಯಾಸಕ ಡಾ. ಬಾಲಕೃಷ್ಣ ಎಸ್. ಮದ್ದೋಡಿ ಅವರು ಆಯ್ಕೆಯಾಗಿದ್ದು, ಪರಿಸರ ಸಂರಕ್ಷಣೆ ವಿಭಾಗದಲ್ಲಿ ಡಾ. ಬಾಲಕೃಷ್ಣ ಎಸ್. ಮದ್ದೋಡಿ ಅವರನ್ನು ಆಯ್ಕೆ ಮಾಡಲಾಗಿದ್ದು, ಇತ್ತಿಚಿಗೆ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕಳೆದ ಕೆಲವು ವರ್ಷಗಳಲ್ಲಿ ಬಾಲಕೃಷ್ಣ ಮದ್ದೋಡಿ ಅವರು ಕೈಗೊಂಡ ಪರಿಸರ ಸಂರಕ್ಷಣೆ ಬಗೆಗಿನ ಕಾರ್ಯಗಳು, 100 ವರ್ಷಗಳಿಗಿಂತ ಹೆಚ್ಚು ಹಳೆಯದಾದ 5 ಮರಗಳನ್ನು ಮರು ನೆಡುವಿಕೆ, 2000ಕ್ಕಿಂತ ಹೆಚ್ಚಿನ ಸಸಿಗಳನ್ನು ನೆಡುವುದು, 60 ಮರಗಳನ್ನು ಕಡಿಯುವುದನ್ನು ತಡೆಗಟ್ಟುವಲ್ಲಿ ಅವರ ಕೊಡುಗೆಯನ್ನು ಸಮೀಕ್ಷೆ ತೀರ್ಪುಗಾರರು ಪರಿಗಣಿಸಿ ಆಯ್ಕೆಮಾಡಲಾಗಿದೆ. ಹಸಿರು ಅಭಿವೃದ್ಧಿ, ಗ್ರೀನಥಾನ್ ಕಾರ್ಯಕ್ರಮದ ಮೂಲಕ ಕರ್ನಾಟಕದ ಸುಮಾರು 20,000 ವಿದ್ಯಾರ್ಥಿಗಳಿಗೆ ಪರಿಸರ ಜಾಗೃತಿ ಕಾರ್ಯಕ್ರಮ ಅವರು ಸಂಘಟಿಸಿದ್ದಾರೆ. ವಿಶ್ವ ಜಲ ದಿನ, ವಿಶ್ವ ಪರಿಸರ ದಿನ, ವಿಶ್ವ ಭೂ ದಿನ, ವಿಶ್ವ ಓಝೋನ್ ದಿನವನ್ನು ಆಯೋಜಿಸಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಭಾನುವಾರ 319 ಕೋವಿಡ್ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಈ ಪೈಕಿ ಉಡುಪಿ, ಬ್ರಹ್ಮಾವರ, ಕಾಪು ತಾಲೂಕಿನ 156, ಕುಂದಾಪುರ, ಬೈಂದೂರು ತಾಲೂಕಿನ 103, ಕಾರ್ಕಳ, ಹೆಬ್ರಿ ತಾಲೂಕಿನ 59 ಮಂದಿಗೆ ಹಾಗೂ ಹೊರ ಜಿಲ್ಲೆಯಿಂದ ಬಂದ ಓರ್ವರಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ. ಒಟ್ಟು 319 ಪ್ರಕರಣಗಳಲ್ಲಿ 127 ಸಿಂಟಮಿಕ್ ಹಾಗೂ 192 ಅಸಿಂಟಮಿಕ್ ಪ್ರಕರಣಗಳಾಗಿವೆ. ಈ ಪೈಕಿ 35 ಮಂದಿ ಕೋವಿಡ್ ಕೇರ್ ಸೆಂಟರ್, ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್ ಹೆಲ್ತ್ ಆಸ್ಪತ್ರೆಗೆ ದಾಖಲಾಗಿದ್ದರೆ 284 ಮಂದಿ ಹೋಮ್ ಐಸೊಲೇಷನ್ ಆಗಿದ್ದಾರೆ. ಜಿಲ್ಲೆಯಲ್ಲಿ ಇಂದು ಒಟ್ಟು 3820 ಮಂದಿಯನ್ನು ಪರೀಕ್ಷಿಸಲಾಗಿದೆ. ಒಟ್ಟು 1565 ಸಕ್ರಿಯ ಪ್ರಕರಣಗಳಿದ್ದು, 245 ಮಂದಿಯನ್ನು ಡಿಸ್ಚಾರ್ಜ್ ಮಾಡಲಾಗಿದೆ.
