ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: 2025-26ನೇ ಸಾಲಿನ ಕರ್ನಾಟಕ ಶಾಲಾ ಶಿಕ್ಷಣ ಇಲಾಖೆ ನಡೆದಿದ ದ್ವಿತೀಯ ಪಿಯುಸಿ ಪರೀಕ್ಷೆ -2ರ ಫಲಿತಾಂಶ ಪ್ರಕಟಗೊಂಡಿದ್ದು ಹೆಮ್ಮಾಡಿಯ ಜನತಾ ಪಿಯು ಕಾಲೇಜಿನ ವಿದ್ಯಾರ್ಥಿಗಳು ಸಾಧನೆ ಮೆರೆದಿದ್ದಾರೆ. ವಿದ್ಯಾರ್ಥಿಗಳಾದ ಅಕ್ಷತಾ ವೀರಣ್ಣ 597ಅಂಕ ಗಳಿಸಿ 3ನೇ ರ್ಯಾಂಕ್, ದೀಕ್ಷಾ 596 ಅಂಕದೊಂದಿಗೆ 4ನೇ ರ್ಯಾಂಕ್, ತನ್ವಿತಾ 595 5ನೇ ರ್ಯಾಂಕ್, ಗಗನ್ ಜಿ.594 6ನೇ ರ್ಯಾಂಕ್, ಸ್ಮೃತಿಕಾ 593ಅಂಕದೊಂದಿಗೆ 7ನೇ ರ್ಯಾಂಕ್, ಶ್ರೇಯಸ್ ಪಿ. ಗಾಣಿಗ 591 9ನೇ ರ್ಯಾಂಕ್, ಸಾಕ್ಷಿ ಎಸ್. ಪೂಜಾರಿ 591ಅಂಕದೊಂದಿಗೆ 9ನೇ ರ್ಯಾಂಕ್, ಸನ್ಮಿತಾ 590 ಅಂಕ ಗಳಿಸಿ 10ನೇ ರ್ಯಾಂಕ್, ಶ್ರದ್ಧಾ ಎಸ್.ಎಮ್. 590ಅಂಕ ಗಳಿಸಿ 10ನೇ ರ್ಯಾಂಕ್, ಸ್ಪಂದನಾ ಪಿ.ಎಸ್. 590 ಅಂಕದೊಂದಿಗೆ 10ನೇ ರ್ಯಾಂಕ್, ಅನುಷಾ ಪೂಜಾರಿ 590 ಅಂಕಗಳೊಂದಿಗೆ 10ನೇ ರ್ಯಾಂಕ್ ಪಡೆದಿರುತ್ತಾರೆ . ವಿದ್ಯಾರ್ಥಿಗಳ ಸಾಧನೆಗೆ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ, ಬೋಧಕೇತರ ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿದ್ದಾರೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಸರ್ಕಾರಿ, ಖಾಸಗಿ ಸೇರಿದಂತೆ ಇತರೆ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ ಮಹಿಳೆಯರಿಗೆ ಕೆಲಸದ ಸ್ಥಳಗಳಲ್ಲಿ ಸುರಕ್ಷಿತ ವಾತಾವರಣ ಕಲ್ಪಿಸುವುದರೊಂದಿಗೆ, ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳ ಸಂಖ್ಯೆ ಶೂನ್ಯವಾಗಬೇಕು ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ. ನಾಗಲಕ್ಷ್ಮೀ ಚೌಧರಿ ಹೇಳಿದರು. ಅವರು ನಗರದ ಮಣಿಪಾಲ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ, ಕರ್ನಾಟಕ ರಾಜ್ಯ ಮಹಿಳಾ ಆಯೋಗ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರಕ್ಷಕ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಸ್ಥಳೀಯ ಹಾಗೂ ಆಂತರಿಕ ದೂರು ನಿವಾರಣಾ ಸಮಿತಿ ಸದಸ್ಯರಿಗೆ ನಡೆದ ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ – 2013 (POSH ACT) ರ ಕುರಿತ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಗೌರವಯುತ ವಾತಾವರಣ ನಿರ್ಮಾಣವಾಗಬೇಕು. ಮಹಿಳೆಯರು ದೈಹಿಕವಾಗಿ ಹಾಗೂ ಮಾನಸಿಕವಾಗಿ ಭಯಮುಕ್ತ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಇತ್ತೀಚಿಗೆ ದಳಿ ಎಂಬಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟ ಮಹಿಳೆಯೋರ್ವರ ಮೇಲಿನ ಚಿನ್ನಾಭರಣ ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಹೇಮಂತ್ ಎಂಬಾತನನ್ನು ಕೊಲ್ಲೂರು ಪೊಲೀಸರು ಬಂಧಿಸಿದ್ದಾರೆ. ಮೇ.17ರಂದು ನಡೆದ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ಮಹಿಳಾ ಯಾತ್ರಾರ್ಥಿಯವರು ಮೃತಪಟ್ಟಿದ್ದರು. ಘಟನಾ ಸ್ಥಳದಲ್ಲಿ ಮೃತಪಟ್ಟ ಮಹಿಳೆಯೋರ್ವರ ಮೈಮೇಲಿನ ಚಿನ್ನಾಭರಣಗಳನ್ನು ಯಾರೋ ಕಳ್ಳರು ಕಳ್ಳತನ ಮಾಡಿದ ಬಗ್ಗೆ ಕೆಲ ದಿನಗಳ ಬಳಿಕ ಶ್ರೀಕುಮಾರ ಎಂಬುವವರು ದೂರು ನೀಡಿದ್ದರು. ಅದರಂತೆ ಕಾರ್ಯಪ್ರವೃತ್ತರಾದ ಕೊಲ್ಲೂರು ಪೊಲೀಸ್ ಠಾಣಾ ಉಪನಿರೀಕ್ಷಕರಾದ ವಿನಯ ಎಂ. ಕೊರ್ಲಹಳ್ಳಿ, ನಾಗೇಂದ್ರ ಹೆಚ್ಸಿ, ಲಕ್ಷ್ಮಣ ಗಾಣಿಗ ಹೆಚ್ಸಿ, ರಾಘವೇಂದ್ರ ಹೆಚ್ಸಿ, ನಾಗರಾಜ ಪಿ.ಸಿ ರವರುಗಳು ಸಿಸಿಟಿವಿ, ಘಟನಾ ಸ್ಥಳದಲ್ಲಿ ಸಾರ್ವಜನಿಕರು ತೆಗೆದ ವಿವಿಧ ಫೊಟೋಗಳು ಮತ್ತು ತಾಂತ್ರಿಕ ಸಹಾಯದಿಂದ ಆರೋಪಿ ಕೊಲ್ಲೂರು ಕಲ್ಯಾಣಿಗುಡ್ಡೆಯ ಹೇಮಂತ s/o ನಾರಾಯಣ ಶೆಟ್ಟಿ ಎಂಬಾತನನ್ನು ಪ್ರಕರಣ ದಾಖಲಾದ 24 ಗಂಟೆ ಒಳಗಡೆ ಪತ್ತೆಹಚ್ಚಿ ಬಂಧಿಸಿದ್ದಾರೆ. ಆರೋಪಿಯು ಕಳವು ಮಾಡಿದ್ಸ 1) 3.910 ಗ್ರಾಂ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕೃಷಿ ಭೂಮಿ ಬಂಜೆಯಲ್ಲ ಅದನ್ನು ಹಡಿಲು ಬೀಳಲು ಬಿಡಬೇಡಿ ಎಂದು ಕೋಟ ರೈತಧ್ವನಿ ಸಂಘಟನೆಯ ಅಧ್ಯಕ್ಷ ಎಂ. ಜಯರಾಮ ಶೆಟ್ಟಿ ರೈತ ಸಮುದಾಯಕ್ಕೆ ಕರೆ ನೀಡಿದರು. ಅವರು ಶನಿವಾರ ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ಗೆಳೆಯರ ಬಳಗ ಕಾರ್ಕಡ, ರೈತಧ್ವನಿ ಸಂಘ ಕೋಟ, ರೋಟರಿ ಕ್ಲಬ್ ಕೋಟ ಸಾಲಿಗ್ರಾಮ, ಸ್ನೇಹಕೂಟ ಮಣೂರು ಇವರುಗಳ ಸಂಯುಕ್ತಗಳು ಸಹಯೋಗದೊಂದಿಗೆ 54ನೇ ರೈತರೆಡೆಗೆ ನಮ್ಮ ನಡಿಗೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಪ್ರಸ್ತುತ ಕೃಷಿಯಿಂದ ಹೆಚ್ಚಿನವರು ವಿಮುಖರಾಗುತ್ತಿರುವ ಮಾಹಿತಿಗಳು ಕೇಳಿ ಬರುತ್ತಿವೆ ಇದು ಸಲ್ಲ ಬದಲಾಗಿ ಇನ್ನು ಮುಂದಿನ ದಿನಗಳಲ್ಲಿ ಕೃಷಿ ಇದ್ದವರಲ್ಲಿ ಶ್ರೀಮಂತಿಕೆ ಉಳಿಯಲಿದೆ.ಪ್ರತಿಯೊಬ್ಬರು ಕೃಷಿ ಭೂಮಿ ಹಡಿಲು ಬೀಳಿಸಿದರೆ ಮುಂದೆ ಬಾರಿ ಸಂಕಷ್ಟವನ್ನು ಎದುರಿಸಬೇಕಾದಿತು. ಕೃಷಿ ಭೂಮಿ ಯಾವತ್ತು ಬಂಜೆಯಾಗಲು ಸಾಧ್ಯವಿಲ. ಕೃಷಿಯಲ್ಲಿ ಸಮಗ್ರ ಕೃಷಿ ನೀತಿ ಅನುಸರಿಸಿ ಯಶಸ್ಸು ಖಂಡಿತಾ ದೊರಕಲಿದೆ, ಪಂಚವರ್ಣ ರೈತರೆಡೆಗೆ ರೈತಸಮುದಾಯಕ್ಕೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಆಂಪಾರು ಗ್ರಾಮದ ಸಂಜಯ ಗಾಂಧಿ ಚಾರಿಟೇಬಲ್ ಟ್ರಸ್ಟ್ ರಿ. ಅಂಪಾರು ಹಾಗೂ ರೋಟರಿ ಕ್ಲಬ್ ಕುಂದಾಪುರ ಇವರ ಸಹಯೋಗದಲ್ಲಿ ಚಿಗುರು ಮಿಡ್ ಬ್ರೈನ್ ಆಕ್ಟಿವೇಶನ್ ಅಕಾಡೆಮಿ ವತಿಯಿಂದ ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಯೋಜಿಸಲಾದ ಗಾಂಧಾರಿ ವಿದ್ಯೆ ತರಬೇತಿ ಶಿಬಿರದ ಸಮಾರೋಪ ಸಮಾರಂಭವು ಶನಿವಾರದಂದು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಜಯ ಗಾಂಧಿ ಚಾರಿಟೇಬಲ್ ಟ್ರಸ್ಟ್ನ ನಿರ್ದೇಶಕರಾದ ಕೋಟೆಬೆಟ್ಟು ಸುರೇಂದ್ರ ಶೆಟ್ಟಿ ವಹಿಸಿದ್ದರು. ವೇದಿಕೆಯಲ್ಲಿ ಟ್ರಸ್ಟ್ನ ಖಜಾಂಚಿ ಹಾಗೂ ಶಾಲಾ ಶೈಕ್ಷಣಿಕ ಸಂಚಾಲಕರು, ರೋಟರಿ ಕ್ಲಬ್ ಕುಂದಾಪುರದ ಮಾಜಿ ಅಧ್ಯಕ್ಷರಾದ ಸುಭಾಶ್ಚಂದ್ರ ಶೆಟ್ಟಿ ಕೊಡ್ಲಾಡಿ, ಶಾಲಾ ಆಡಳಿತಾಧಿಕಾರಿ ಚೈತ್ರ ಯಡಿಯಾಳ ಹಾಗೂ ಚಿಗುರು ಮಿಡ್ ಬ್ರೈನ್ ಆಕ್ಟಿವೇಶನ್ ಅಕಾಡೆಮಿಯ ಸಂಸ್ಥಾಪಕರಾದ ಮಹೇಶ್ ಮತ್ತು ದಿವ್ಯಶ್ರೀ ಮಹೇಶ್ ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರಾದ ಧನ್ವಿ ಹಾಗೂ ಪ್ರಣಮ್ಯ ಪ್ರಾರ್ಥನೆಗೈದು ಕಾರ್ಯಕ್ರಮಕ್ಕೆ ಶುಭಾರಂಭ ಮಾಡಿದರು. ಶಾಲಾ ಆಡಳಿತಾಧಿಕಾರಿ ಚೈತ್ರ ಯಡಿಯಾಳ ಸಭಿಕರನ್ನು ಸ್ವಾಗತಿಸಿ, ಗ್ರಾಮೀಣ ಭಾಗದ ಮಕ್ಕಳಿಗಾಗಿ ಇಂತಹ ಅಪೂರ್ವ ಅವಕಾಶವನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಸಂಘ-ಸಂಸ್ಥೆಗಳು ಶೈಕ್ಷಣಿಕ ಕಾರ್ಯಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿರುವುದು ಅತ್ಯಂತ ಪ್ರಶಂಸನೀಯ ಕಾರ್ಯ ಎಂದು ಉದ್ಯಮಿ ಸಂಪತ್ ಕುಮಾರ್ ಶೆಟ್ಟಿ ಹೇಳಿದರು. ಅವರು ಶುಕ್ರವಾರ ಮೂಡುಗಿಳಿಯಾರಿನಲ್ಲಿ ಗಿಳಿಯಾರು ಯುವಕ ಮಂಡಲ ಇದರ ದಶಮಾನೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು. ಗಿಳಿಯಾರು ಯುವಕ ಮಂಡಲ ತನ್ನೂರಿನ ಸರಕಾರಿ ಶಾಲೆಗಳ ಉಳಿವಿನ ಬಗ್ಗೆ ಶ್ರಮಿಸುತ್ತಿವುದು ಇತರ ಸಂಘಟನೆಗಳಿಗೆ ಮಾದರಿಯಾಗಿದೆ. ವಾರ್ಷಿಕೋತ್ಸವ ಅಥವಾ ದಶಮಾನೋತ್ಸವ ಕಾರ್ಯಕ್ರಮಗಳು ಸರಳ ರೀತಿಯಲ್ಲಿ ಆಚರಿಸುವುದರ ಮೂಲಕ ಮನೆಮಾತಾಗಿ ಬೆಳೆದು ನಿಂತಿದೆ ಎಂದು ಅಭಿಪ್ರಾಯಪಟ್ಟರು. ಈ ಸಂದರ್ಭದಲ್ಲಿ ಸತತ ಹತ್ತು ವರ್ಷ ಸೇವೆ ಸಲ್ಲಿಸಿದ ಏಳು ಸೇವಾಧ್ಯಕ್ಷರಿಗೆ ಪುಷ್ಭ ನೀಡಿ ಗೌರವಿಸಲಾಯಿತು. ಗಿಳಿಯಾರು ಯುವಕ ಮಂಡಲದ ದಶಮ ಸಂಭ್ರಮದ ಪುರಸ್ಕಾರವನ್ನು ಸಮಾಜಸೇವಕ ರವಿ ಕಟಪಾಡಿ ಇವರಿಗೆ ನೀಡಲಾಯಿತು . ಸಭಾಧ್ಯಕ್ಷತೆಯನ್ನು ಗಿಳಿಯಾರು ಯುವಕ ಮಂಡಲದ ಅಧ್ಯಕ್ಷ ಸುಭಾಷ್ ಪೂಜಾರಿ ವಹಿಸಿದ್ದರು. ಮುಖ್ಯ ಅಭ್ಯಾಗತರಾಗಿ ನ್ಯೂ ಕರ್ನಾಟಕ ಬಿಲ್ಡಸ್೯ ಮಾಲಿಕ ಚೇತನ್ ಕುಮಾರ್ ಶೆಟ್ಟಿ, ಹೊನ್ನಾರಿ ಬೊಬ್ಬರ್ಯ ದೈವಸ್ಥಾನದ ಮುಕ್ತೇಸರ ಮಹಾಬಲ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ಬ್ರಹ್ಮಾವರದ ಎಸ್ಎಂಎಸ್ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ನಡೆದ ಮಂಗಳೂರು ವಿವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್ ಪಂದ್ಯಾವಳಿಯಲ್ಲಿ ಆಳ್ವಾಸ್ ಕಾಲೇಜಿನ ತಂಡವು ಫೈನಲ್ನಲ್ಲಿ ಬ್ರಹ್ಮಾವರದ ಎಸ್ಎಂಎಸ್ ಕಾಲೇಜಿನ ತಂಡವನ್ನು ಪರಾಭವಗೊಳಿಸುವ ಮೂಲಕ ಚಾಂಪಿಯನ್ ಪಟ್ಟವನ್ನು ಅಲಂಕರಿಸಿತು. ವಿಜೇತ ತಂಡದ ಪಲ್ಲವಿ ಉತ್ತಮ ಬ್ಯಾಟರ್, ನಳಿನಾಕ್ಷಿ ಉತ್ತಮ ವಿಕೆಟ್ ಕೀಪರ್ ಮತ್ತು ಕೃಪಾ ಉತ್ತಮ ಸವ್ಯಸಾಚಿ ಪ್ರಶಸ್ತಿಯನ್ನು ಪಡೆದುಕೊಂಡರು. ವಿಜೇತ ತಂಡವನ್ನು ಸಂಸ್ಥೆಯ ಅಧ್ಯಕ್ಷರಾದ ಡಾ. ಎಂ. ಮೋಹನ ಆಳ್ವ ಅವರು ಅಭಿನಂದಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯದ ವತಿಯಿಂದ ಸಾಲಿಗ್ರಾಮ ಶ್ರೀ ಗುರು ನರಸಿಂಹ ದೇವರ ಸನ್ನಿಧಿಯಲ್ಲಿ ಅಧಿಕ ಜ್ಯೇಷ್ಠ ಮಾಸದ ಪ್ರಯುಕ್ತ ವಿಶೇಷವಾಗಿ ಹಮ್ಮಿಕೊಂಡಿದ್ದ ಸಹಸ್ರ ಪ್ರದಕ್ಷಿಣ ನಮಸ್ಕಾರ ಕಾರ್ಯಕ್ರಮಕ್ಕೆ ಶ್ರೀ ಗುರು ನರಸಿಂಹ ದೇವಸ್ಥಾನದ ಆಡಳಿತ ಮಂಡಳಿಯ ಉಪಾಧ್ಯಕ್ಷ ಸಿ. ಚಂದ್ರಶೇಖರ ಉಪಾಧ್ಯ ಚಾಲನೆ ನೀಡಿದರು. ಶ್ರೀ ಗುರು ನರಸಿಂಹ ದೇವಸ್ಥಾನದ ಆಡಳಿತ ಮಂಡಳಿಯ ಸಹಕಾರದೊಂದಿಗೆ ನಡೆಯುತ್ತಿರುವ ಈ ಸಹಸ್ರ ಪ್ರದಕ್ಷಿಣ ನಮಸ್ಕಾರ ದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯ ಕೆ. ತಾರಾನಾಥ ಹೊಳ್ಳ, ಪ್ರಧಾನ ಅರ್ಚಕ ಪಿ. ಜನಾರ್ದನ ಅಡಿಗ, ಬ್ರಾಹ್ಮಣ ಮಹಾಸಭಾದ ಗೌರವಾಧ್ಯಕ್ಷ ಯಂ.ಶಿವರಾಮ ಉಡುಪ, ಅಧ್ಯಕ್ಷ ಪಟ್ಟಾಭಿರಾಮ ಸೋಮಯಾಜಿ, ಉಪಾಧ್ಯಕ್ಷ ಸಿ ಸುಬ್ರಾಯ ಉರಾಳ, ಕೋಶಾಧಿಕಾರಿ ನಾಗರಾಜ ಉಪಾಧ್ಯ,ಶ್ರೀ ದೇವಳದ ಸಿಬ್ಬಂದಿಗಳು, ವಲಯದ ಹೆಚ್ಚಿನ ಮಹಿಳಾ ಸದಸ್ಯರು , ಗ್ರಾಮ ಪ್ರತಿನಿಧಿಗಳು ಉಪಸ್ಥಿತರಿದ್ದರು. ಸಭಾದ ಕಾರ್ಯದರ್ಶಿ ಕೆ. ರಾಜಾರಾಮ ಐತಾಳ ಕಾರ್ಯಕ್ರಮದ ಔಚಿತ್ಯದ ಕುರಿತು ಮಾಹಿತಿ ನೀಡಿ, ಅಧಿಕ ಜ್ಯೇಷ್ಠ ಮಾಸದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಆಶ್ರಯದಲ್ಲಿ 2026–27ನೇ ಶೈಕ್ಷಣಿಕ ವರ್ಷಕ್ಕೆ ನೂತನವಾಗಿ ಸೇರ್ಪಡೆಗೊಂಡ ಪ್ರಥಮ ಬಿ.ಕಾಂ. ಜೊತೆ ಸಿಎ, ಸಿಎಸ್, ಸಿಎಂಎ ಅಧ್ಯಯನ ನಡೆಸಲಿರುವ ವಿದ್ಯಾರ್ಥಿಗಳಿಗಾಗಿ ಓರಿಯೆಂಟೇಶನ್ ಕಾರ್ಯಕ್ರಮ ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ನಡೆಯಿತು. ಮುಖ್ಯ ಅತಿಥಿ ಉಡುಪಿಯ ವಿ-ರೀಚ್ ಅಕಾಡೆಮಿಯ ಸಂಸ್ಥಾಪಕರಾದ ಸಿಎಸ್ ಸಂತೋಷ್ ಪ್ರಭು ಮಾತನಾಡಿ, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ತಮ್ಮ ಗುರಿಯನ್ನು ಸ್ಪಷ್ಟವಾಗಿ ನಿಗಧಿಪಡಿಸಿ, ದೃಢಸಂಕಲ್ಪ ಮತ್ತು ಶ್ರಮದ ಮೂಲಕ ಸಾಧನೆಯತ್ತ ಮುನ್ನಡೆಯಬೇಕು. ಪರಿಶ್ರಮ, ಸಮಯ ನಿರ್ವಹಣೆ, ದೃಢ ಸಂಕಲ್ಪ ಯಶಸ್ಸಿನ ಮೂಲ ಮಂತ್ರ ಎಂದರು. ಇದೇ ಸಂದರ್ಭ ಅವರು ಭವಿಷ್ಯದ ದಿನಗಳಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಸಹ ಸಿಎ, ಸಿಎಸ್, ಸಿಎಂಎ ಮುಂತಾದ ವೃತ್ತಿಪರ ಕೋರ್ಸ್ಗಳಲ್ಲಿ ಅಧ್ಯಯನ ಮಾಡಿದವರಿಗೆ ಉದ್ಯೋಗಾವಕಾಶಗಳು ಲಭಿಸಲಿದ್ದು, ವಿದ್ಯಾರ್ಥಿಗಳು ಈ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಿ ಎಂದರು. ಅಧ್ಯಕ್ಷತೆ ವಹಿಸಿದ ಕಾಲೇಜಿನ ಉಪ-ಪ್ರಾಂಶುಪಾಲರ ಡಾ. ಚೇತನ್ ಶೆಟ್ಟಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಸಿದ್ದಾಪುರ ಗ್ರಾಮದ ದೊಟ್ಟಿನಬೇರು ಮೀಸಲು ಅರಣ್ಯ ಪ್ರದೇಶದಲ್ಲಿ ಹಾದು ಹೋಗುವ ಸಿದ್ದಾಪುರ – ಶಿವಮೊಗ್ಗ ಜಿಲ್ಲಾ ರಸ್ತೆ ಪಕ್ಕದಲ್ಲಿ ಚಿರತೆಯೊಂದನ್ನು ಕೊಂದು ಬಿಸಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಫೆ.04ರ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಯಡಮೊಗೆಯ ಮಂಜುನಾಥ ಶೆಟ್ಟಿ ಎಂಬುವವರನ್ನು ಮಾ.21ರಂದು ದಸ್ತಗಿರಿ ಮಾಡಿ, ಪ್ರಕರಣದ ಬಗ್ಗೆಬಅವರ ಹೇಳಿಕೆಯಂತೆ ಎ1 ಆರೋಪಿ ಕಂಡ್ಲೂರಿನ ಮಹಮ್ಮದ್ ನದೀಮ್ ಕರಾಣಿ, ಎ5 ಆರೋಪಿ ಹನೆಬಚ್ಚಲು ನಾಗರಾಜ ಭೋವಿ, ಎ6 ಆರೋಪಿ ಹನೆಬಚ್ಚಲು ವೆಂಕಟರಮಣ ಭೋವಿ ಎಂಬುವವರನ್ನು ದಸ್ತಗಿರಿ ಮಾಡಲಾಗಿದೆ. ಪ್ರಕರಣದಲ್ಲಿ ಬಾಗಿಯಾಗಿರುವ ಇನ್ನೂ ಇಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಪ್ರಕರಣದಲ್ಲಿ ಬಾಗಿಯಾದ ಆರೋಪಿತರಿಂದ ಚಿರತೆಯ ಕಳವಾದ 4 ಕಾಲಿನ ಉಗುರು ಹಾಗು ಮೂಳೆಯ ಬಿಡಿ ಭಾಗಗಳು, ಬಂದೂಕು-01, ಜೀವಂತ ಗುಂಡುಗಳು-05, 02 ಮೋಟಾರ್ ಬೈಕುಗಳು ಹಾಗೂ ಇತರ ಸೊತ್ತುಗಳನ್ನು ಸರಕಾರದ ಪರ ಅಮಾನತು ಪಡಿಸಿಕೊಳ್ಳಲಾಗಿದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಸದ್ರಿ ಪ್ರಕರಣದಲ್ಲಿ ತಲೆಮರೆಸಿಕೊಂಡ ಆರೋಪಿಗಳ ಪತ್ತೆ…
