ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಿಕ್ಷಣ ಸಂಸ್ಥೆಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಶಿಕ್ಷಕರ ಪಾತ್ರ ಬಹುದೊಡ್ಡದು ಎಂದು ಮಣಿಪಾಲದ ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಇದರ ಕಾರ್ಯದರ್ಶಿಗಳಾದ ಡಾ. ನಾರಾಯಣ ಸಭಾಹಿತ್ ಹೇಳಿದರು. ಅವರು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಮಣಿಪಾಲದ ಮಣಿಪಾಲ ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಅವರು ಆಯೋಜಿಸಿದ ‘ಶಿಕ್ಷಣ ಸುಧಾರಣೆ’ ವಿಚಾರ ವಿನಿಮಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಶಿಕ್ಷಕರು ಶಿಕ್ಷಣ ಸಂಸ್ಥೆಯಲ್ಲಿರುವ ಉತ್ತಮ ಸೌಲಭ್ಯಗಳನ್ನು ಉಪಯೋಗಿಸಿಕೊಂಡು ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪ್ರೋತ್ಸಾಹ ನೀಡಬೇಕು ಎಂದರು. ಶಿಕ್ಷಕರು ಆಧುನಿಕ ಶಿಕ್ಷಣ ವ್ಯವಸ್ಥೆಯನ್ನು ಅರಿತು ಅದಕ್ಕೆ ಪೂರಕವಾಗಿ ತಮ್ಮ ಶೈಕ್ಷಣಿಕ ಜ್ಞಾನವನ್ನು ಹೆಚ್ಚಿಸಿಕೊಳ್ಳಬೇಕು. ಸಂಶೋಧನಾ ಪ್ರವೃತ್ತಿಯ ಜೊತೆಗೆ, ವಿಮರ್ಶಾತ್ಮಕತೆಯ ಬರಹಗಳನ್ನು ಉತ್ತಮ ಗುಣಮಟ್ಟದ ಜರ್ನಲ್ ಗಳಲ್ಲಿ ಪ್ರಕಟಿಸಬೇಕು. ಅಲ್ಲದೇ ಸಂಸ್ಥೆಗೆ ವಿದ್ಯಾರ್ಥಿಗಳ ದಾಖಲಾತಿಯಾಗುವಲ್ಲಿ ಶಿಕ್ಷಕರ ಪಾತ್ರವಿದೆ. ಉತ್ತಮ ಶೈಕ್ಷಣಿಕ ಮತ್ತು ಜ್ಞಾನ ಪಡೆಯುವ ವಾತಾವರಣವನ್ನು ಶಿಕ್ಷಕರು ಸೃಷ್ಟಿಸಬೇಕು. ಹಾಗಿದ್ದಾಗ ವಿದ್ಯಾರ್ಥಿಗಳ ದಾಖಲಾತಿಯು ಸಹ ಹೆಚ್ಚುತ್ತದೆ ಎಂದು ಅಭಿಪ್ರಾಯಪಟ್ಟರು. ಇನ್ನೋರ್ವ ಅತಿಥಿ ಮಣಿಪಾಲದ ಮಣಿಪಾಲ ಅಕಾಡೆಮಿ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕರಾವಳಿ- ಮಲೆನಾಡು ಸೇರಿದಂತೆ, ಕರ್ನಾಟಕ ರಾಜ್ಯದ ಅಡಿಕೆ ಬೆಳೆಗಾರರು ವಿದೇಶಿ ಅಡಿಕೆ ಆಮದಿನ ಸಮಸ್ಯೆಯಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು ಅಡಿಕೆ ಬೆಳೆಗಾರರ ನೆರಗೆ ಬರಬೇಕೆಂದು ಉಡುಪಿ- ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ನಿಯಮ 377ರಡಿ ಸಂಸತ್ ಅಧಿವೇಶನದಲ್ಲಿ ಪ್ರಸ್ತಾಪನೆ ಸಲ್ಲಿಸುವ ಮೂಲಕ ಕೇಂದ್ರ ಸರಕಾರವನ್ನು ಒತ್ತಾಯಿಸಿದ್ದಾರೆ. ಇಂಡೋನೇಷಿಯಾ, ಮಯಾನ್ಮಾರ್, ಶ್ರೀಲಂಕಾ ಮತ್ತು ಬಾಂಗ್ಲಾದೇಶ ಗಳಿಂದ ಹೆಚ್ಚಿನ ಪ್ರಮಾಣದಲ್ಲಿ ಕಳಪೆ ಗುಣಮಟ್ಟದ ಅಡಿಕೆಗಳು ಆಮದಾಗಿ ಭಾರತಕ್ಕೆ ಬರುತ್ತಿದ್ದು, ಅವುಗಳನ್ನು ನಿಯಂತ್ರಿಸದಿದ್ದರೆ ನಮ್ಮ ಅಡಿಕೆ ಬೆಳೆ ಗಾರ ರಿಗೆ ಸಂಕಷ್ಟ ಎದುರಾಗಲಿದೆ. ವಿದೇಶದಿಂದ ಬರುವ ಅಡಿಕೆಗೆ ಕಸ್ಟಮ್ಸ್ ಸುಂಕ ತಪ್ಪಿಸಲು ಹುರಿದ ಅಡಿಕೆ ಎಂದು ನಮೂದಿಸಿ ಭಾರತಕ್ಕೆ ತರಲಾಗುತ್ತಿದೆ ಎಂದು ದೇಶೀಯ ಅಡಿಕೆ ಬೆಳೆಗಾರರು ದೂರಿದ್ದಾರೆ. ವಿದೇಶಿ ಅಡಿಕೆಗಳು ಸುಂಕ ತಪ್ಪಿಸಿ ಅಮದು ಮಾಡುವುದನ್ನು ನಿಲ್ಲಿಸದಿದ್ದರೆ ಕರ್ನಾಟಕವ ಸೇರಿದಂತೆ ದೇಶದ ಅಡಿಕೆ ಬೆಳೆಗಾರರ ಬೆಲೆ ಕುಸಿದು ಅಡಿಕೆ ಬೆಳೆಗಾರರಿಗೆ ಬಾರಿ ಆರ್ಥಿಕ ನಷ್ಟ ಆಗಲಿದೆ ಎಂದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಡುಪಿ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕುಂದಾಪುರ ಹಾಗೂ ಜ್ಞಾನ ಸರಸ್ವತಿ ವಿದ್ಯಾಲಯ ಸಿದ್ಧಾಪುರ ಇವರ ಸಂಯುಕ್ತಾಶ್ರಯದಲ್ಲಿ ನಡೆದ ಕುಂದಾಪುರ ವಲಯ ಮಟ್ಟದ ಚೆಸ್ ಪಂದ್ಯಾವಳಿಯಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳಾದ ಆರ್ಯನ್ ಸೂರ್ಯ 6D, ಸಾಗರಿ ಆರ್ ಪೂಜಾರಿ 6D, ಚಿನ್ಮಯ ಮೊಗವೀರ 7C, ಸಾಮ್ರಾಟ್ ಕೆ 7E, 10A, ದೇವಿಕಾ ಶೆಣೈ 10E ಹಾಗೂ ನಿಶ್ಚಿತ್ ಎನ್. ನಾಯ್ಕ್ 8D ವಿಜೇತರಾಗಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಅವರಿಗೆ, ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: “ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇರುವುದರಿಂದ ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರಿರುವ ಕ್ಷೇತ್ರಗಳಿಗೆ ಯಾವುದೇ ಅನುದಾನ ಬರುತ್ತಿಲ್ಲ. ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಇರುವುದರಿಂದ ಬಿಜೆಪಿ ಸಂಸದರ ಮೂಲಕ ಅನುದಾನ ತಂದು ಅಭಿವೃದ್ಧಿ ಕಾಮಗಾರಿಗಳನ್ನು ಮಾಡುತ್ತಿದ್ದೇವೆ” ಎಂದು ಯೂಟ್ಯೂಬ್ ವಾಹಿನಿಯೊಂದಕ್ಕೆ ನೀಡಿರುವ ಕೆಲ ಬಿಜೆಪಿ ಪರ ನಾಯಕರ ಹೇಳಿಕೆ ಸಂಪೂರ್ಣ ದಿಕ್ಕು ತಪ್ಪಿಸುವಂತಿದ್ದು, ಇದು ಅವರ ಅಜ್ಞಾನವೋ ಅಥವಾ ಜನರನ್ನು ಉದ್ದೇಶಪೂರ್ವಕವಾಗಿ ದಾರಿ ತಪ್ಪಿಸುವ ಪ್ರಯತ್ನವೋ ಎಂಬ ಅನುಮಾನ ಮೂಡಿಸುತ್ತದೆ ಎಂದು ಕಾಂಗ್ರೆಸ್ ಯುವ ನಾಯಕ ಹಾಗೂ ಪುರಸಭೆಯ ಮಾಜಿ ಸದಸ್ಯ ಕೇಶವ ಭಟ್ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು, ವಿಶೇಷವಾಗಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ಜನರಿಗೆ ತಪ್ಪು ಮಾಹಿತಿ ನೀಡುವುದನ್ನು ತಕ್ಷಣ ನಿಲ್ಲಿಸಬೇಕು ಎಂದು ಆಗ್ರಹಿಸಿದರು. ಒಂದು ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗೆ ಅನುದಾನ ಬಿಡುಗಡೆಯಾಗುವ ಪ್ರಕ್ರಿಯೆಯ ಬಗ್ಗೆ ಕನಿಷ್ಠ ಆಡಳಿತಾತ್ಮಕ ಅರಿವು ಇದ್ದವರು ಇಂತಹ ಹೇಳಿಕೆಗಳನ್ನು ನೀಡುವುದಿಲ್ಲ.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಹೊಸಂಗಡಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿವಿಧ ವಿದ್ಯಾರ್ಥಿ ಕ್ಲಬ್ಗಳ ಉದ್ಘಾಟನೆ ಹಾಗೂ ವಿದ್ಯಾರ್ಥಿನಿಯರಿಗಾಗಿ ನಿರ್ಮಿಸಲಾದ ಸುಸಜ್ಜಿತ ಶೌಚಾಲಯದ ಕೀಲಿಕೈ ಹಸ್ತಾಂತರ ಕಾರ್ಯಕ್ರಮವು ವಿಜೃಂಭಣೆಯಿಂದ ನಡೆಯಿತು. ಸಭಾ ಕಾರ್ಯಕ್ರಮವನ್ನು ಶ್ರೀ ಶನೈಶ್ವರ ದೇವಳದ ಆಡಳಿತ ಮೊಕ್ತೇಸರರಾದ ಅಶೋಕ್ ಶೆಟ್ಟಿ ಚೋನ್ಮನೆ ಅವರು ದೀಪ ಬೆಳಗಿಸಿ ಉದ್ಘಾಟಿಸಿ, ಮಾತನಾಡಿ, ಗುರುವಿನ ಮಹತ್ವ ಹಾಗೂ ವಿದ್ಯಾರ್ಥಿಗಳ ಉದ್ದೇಶ ಹಾಗೂ ಜವಬ್ದಾರಿಯ ಬಗ್ಗೆ ತಿಳಿಸಿದರು. ವಿವಿಧ ವಿದ್ಯಾರ್ಥಿ ಸಂಘ ಹಾಗೂ ಕ್ಲಬ್ಗಳ ಉದ್ಘಾಟನೆ 1. ಸಾಂಸ್ಕೃತಿಕ ಸಂಘ:ಸಾಂಸ್ಕ್ರತಿಕ ಸಂಘವನ್ನು ಸಂಸ್ಕೃತಿಯ ಅಭಿವ್ಯಕ್ತಿಯಾಗಿ ಯಕ್ಷಗಾನ ಹಾಗೂ ಭರತನಾಟ್ಯದ ಝಲಕ್ ಪ್ರಸ್ತುತ ಪಡಿಸಲಾಯಿತು. ನಂತರ ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರುಗಳಾದ ಕೋಟ ವಿಶ್ವನಾಥ್ ತುಂಬಿಕಲ್ಲಾಯ ಸಂಸ್ಕೃತಿಯ ಪ್ರತೀಕ ಎಂಬಂತೆ ಜೋಡು ದೀಪ ಬೆಳಗಿಸಿದರು. ಮಾಲತಿ ಸಂತೋಷ್ ನಾಯ್ಕ ಅವರು ಸಾಂಸ್ಕೃತಿಕ ಸಂಘದ ಬಿತ್ತಿಯನ್ನು ವಿನೂತನವಾಗಿ ಅನಾವರಣಗೊಳಿಸಿದರು ಹಾಗೂ ಎಲ್ಲರೂ ಸಾಂಸ್ಕೃತಿಕ ಕಾರ್ಯಕ್ರಮಗಳ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ತಿಳಿಸಿದರು. ಕನ್ನಡ ಉಪನ್ಯಾಸಕಿಯಾದ ವಿಲಾಸಿನಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಮಹಿಳೆಯರ ಸುರಕ್ಷತೆ, ಆರ್ಥಿಕ ಸಬಲೀಕರಣಕ್ಕೆ ಅನುಕೂಲ ವಾತಾವರಣ ಸೃಷ್ಠಿಸಿ ಅವರುಗಳ ಸರ್ವಾಂಗೀಣ ಅಭಿವೃದ್ಧಿಗೆ ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಮಂಗಳವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಭಾರತ್ ಜೋಡೋ ಯುವ ಸಂಘಗಳನ್ನು ಸ್ಥಾಪಿಸುವ ಕುರಿತು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಮಾಜದ ದುರ್ಬಲ, ಶೋಷಿತ ಹಾಗೂ ಅಸಹಾಯಕ ಮಹಿಳೆಯರನ್ನು ಆರ್ಥಿಕವಾಗಿ, ಸಾಮಾಜಿಕವಾಗಿ ಸದೃಢಗೊಳಿಸುವ ಉದ್ದೇಶದಿಂದ ಸರಕಾರ ಜಾರಿಗೆ ತಂದಿರುವ ಯೋಜನೆಗಳ ಬಗ್ಗೆ ಅವರುಗಳಿಗೆ ಅರಿವು ಮೂಡಿಸಿ, ಮಹಿಳೆಯರು ಸ್ವಂತ ಉದ್ಯೋಗ ಕೈಗೊಂಡು ಸ್ವಾವಲಂಭಿಗಳನ್ನಾಗಿಸಿ, ಇವರ ಮಾದರಿಯನ್ನು ಇತರ ಮಹಿಳೆಯರರು ಅನುಸರಿಸುವಂತಾಗಬೇಕು ಎಂದರು. ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಯೋಜನೆಗಳಾದ ಚೇತನಾ, ಧನಶ್ರೀ, ಉದ್ಯೋಗಿನಿ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆಗಳ ಬಗ್ಗೆ ಅರ್ಹ ಮಹಿಳೆಯರಿಗೆ ಅರಿವು ಮೂಡಿಸಿ, ಹೆಚ್ಚು ಫಲಾನುಭವಿಗಳನ್ನಾಗಿಸಿ, ಈ ಯೋಜನೆಗಳ ಲಾಭ ಪಡೆದು, ಸ್ವಾವಲಂಭಿ ಜೀವನ ನಡೆಸಲು ಅವಕಾಶ ಮಾಡಿಕೊಡಬೇಕು ಎಂದರು. ಮಹಿಳೆಯರಿಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಾರ್ಕಳದ ಜೋಡು ರಸ್ತೆಯಲ್ಲಿರುವ ಕ್ರಿಯೇಟಿವ್ ಪುಸ್ತಕ ಮನೆಯ ವತಿಯಿಂದ ಮಾನ್ಸೂನ್ ಪ್ರಯುಕ್ತವಾಗಿ ಪುಸ್ತಕಗಳ ವಿಶೇಷ ರಿಯಾಯಿತಿಯೊಂದಿಗೆ ಭರ್ಜರಿ ಮಾರಾಟ ನಡೆಯುತ್ತಿದೆ. ಯಾವುದೇ ಪ್ರಕಾಶನದ 2 ಪುಸ್ತಕಗಳಿಗೆ 20% ರಿಯಾಯಿತಿ, 3 ಪುಸ್ತಕಗಳಿಗೆ 30% ರಿಯಾಯಿತಿ ಹಾಗೂ ಪುಸ್ತಕ ಮನೆ ಪ್ರಕಾಶನದ 5 ಅಥವಾ ಅದಕ್ಕಿಂತ ಹೆಚ್ಚಿನ ಪುಸ್ತಕಗಳಿಗೆ 50% ರಿಯಾಯಿತಿ! ಈ ವಿಶೇಷ ಕೊಡುಗೆ 15 ಆಗಸ್ಟ್ 2026ರವರೆಗೆ ಮಾತ್ರ. ಹೆಚ್ಚಿನ ಮಾಹಿತಿಗಾಗಿ: 9606474296.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕೋಟದ ಮಿತ್ರ ಮಂಡಳಿಯ ಆಶ್ರಯದಲ್ಲಿ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಸಂಘಟಿಸಿದ ಚಿತ್ರಪಾಡಿ ಉಪೇಂದ್ರ ಸೋಮಯಾಜಿ ಅವರ 69ನೇಯ ಕೃತಿ, ’ಪಂಚರೂಪಕಗಳು’ ಇದರ ಬಿಡುಗಡೆ ಕಾರ್ಯಕ್ರಮ ಇತ್ತೀಚಿಗೆ ಕೋಟದಲ್ಲಿ ಜರಗಿತು. ಕೃತಿಯನ್ನು ರಂಗಕರ್ಮಿ ಪ್ರಭಾಕರ ತುಮುರಿ ಅವರು ಬಿಡುಗಡೆ ಮಾಡಿ ನಾಟಕಗಳು ನಡೆದು ಬಂದ ಹಾದಿಯನ್ನು ಸಮೀಕ್ಷಿಸುತ್ತ ಅದು ಹಿಡಿದ ಅಪಸವ್ಯಕ್ಕೆ ಉತ್ತರವಾಗಿ ಈ ಕೃತಿ ಮೂಡಿಬಂದಿದೆ ಎಂದರು. ನಾಟಕದ ರಂಗ ಪ್ರಯೋಗ ಸಾಧ್ಯತೆಯ ಕುರಿತು ಕಸಾಪ ತಾಲೂಕು ಅಧ್ಯಕ್ಷ ಜಿ. ರಾಮಚಂದ್ರ ಐತಾಳ ಮೌಲ್ಯಗಳ ಕುರಿತು ಗಣೇಶ ಮೂರ್ತಿ ಹೆಬ್ಬಾರ, ವಸ್ತು ವಿಶೇಷದ ಬಗೆಗೆ ಸುಬ್ರಹ್ಮಣ್ಯ ಶೆಟ್ಟಿ ವಿವೇಚಿಸಿದರು. ಕಸಾಪ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಅಧ್ಯಕ್ಷತೆ ವಹಿಸಿದ್ದರು. ಮಹಾಲಕ್ಷ್ಮಿಎಂ. ಪಿ. ನಿರೂಪಣೆ, ಶ್ರೀ ದೇವಿಯಿಂದ ಪ್ರಾರ್ಥಿಸಿ, ಉಪೇಂದ್ರ ಸೋಮಯಾಜಿ ವಂದನಾರ್ಪಣೆ ಸಲ್ಲಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಅತಿವೇಗ ಹಾಗೂ ಅಜಾಗರೂಕತೆಯಿಂದ ಬಂದ ಕಾರೊಂದು ಸ್ಕೂಟರ್ಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ, ಗಂಭೀರವಾಗಿ ಗಾಯಗೊಂಡಿದ್ದ ಸ್ಕೂಟರ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕುಂಭಾಶಿ ಆನೆಗುಡ್ಡೆ ಸ್ವಾಗತ ಗೋಪುರದ ಬಳಿ ನಡೆದಿದೆ. ಮೃತಪಟ್ಟ ವ್ಯಕ್ತಿ ಬ್ರಹ್ಮಾವರ ತಾಲೂಕಿನ ವಡ್ಡರ್ಸೆ ಗ್ರಾಮದ ನಿವಾಸಿ ಗಣೇಶ್ ಎಂದು ಗುರುತಿಸಲಾಗಿದೆ. ಆಗಸ್ಟ್ 3ರಂದು ರಾತ್ರಿ ಸುಮಾರು 10:15 ಗಂಟೆಯ ವೇಳೆಗೆ ಗಣೇಶ್ ಅವರು ತಮ್ಮ ಸ್ಕೂಟರ್ ನಲ್ಲಿ ಕುಂದಾಪುರ ಕಡೆಯಿಂದ ಉಡುಪಿ ಕಡೆಗೆ ಚಲಿಸುತ್ತಿದ್ದರು. ಈ ವೇಳೆ ಅದೇ ದಾರಿಯಲ್ಲಿ ಬಂದ ಅರವಿಂದ್ ಎಂಬಾತ ಚಾಲನೆ ಮಾಡುತ್ತಿದ್ದ ಕಾರು ಅತಿವೇಗ ಹಾಗೂ ಜಾಗರೂಕತೆ ಇಲ್ಲದೆ ಬಂದು ಗಣೇಶ್ ಅವರ ಸ್ಕೂಟರ್ಗೆ ಹಿಂಬದಿಯಿಂದ ಬಲವಾಗಿ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಗಣೇಶ್ ಅವರು ಸ್ಕೂಟರ್ ಸಮೇತ ರಸ್ತೆಗೆ ಬಿದ್ದು, ತಲೆ, ಮುಖ, ಹೊಟ್ಟೆ ಸೇರಿದಂತೆ ದೇಹದ ವಿವಿಧ ಭಾಗಗಳಿಗೆ ತೀವ್ರ ಸ್ವರೂಪದ ರಕ್ತಗಾಯ ಹಾಗೂ ಒಳಪೆಟ್ಟುಗಳಾಗಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಾರದಾ ಅಂಗ್ಲ ಮಾಧ್ಯಮ ಶಾಲೆ ಬಸ್ರೂರು ಇವರ ಜಂಟಿ ಆಶ್ರಯದಲ್ಲಿ ನಡೆದಂತಹ ತಾಲ್ಲೂಕು ಮಟ್ಟದ 14 ಮತ್ತು 17 ರ ವಯೋಮಿತಿಯೊಳಗಿನ ಕರಾಟೆ ಸ್ಪರ್ಧೆಯಲ್ಲಿ ಗಂಗೊಳ್ಳಿಯ ಸ್ಟೆಲ್ಲಾ ಮಾರಿಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಗೈದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ . 8ನೇ ತರಗತಿಯ ವಿದ್ಯಾರ್ಥಿ ಮಹಮ್ಮದ್ ಮಾಝ್ ಸ್ಪರ್ಧಿಸಿ ಪ್ರಥಮ ಸ್ಥಾನ ಪಡೆದು ಸ್ವರ್ಣ ಪದಕವನ್ನು ಹಾಗೂ 10ನೇ ತರಗತಿಯ ವಿದ್ಯಾರ್ಥಿ ಮಹಮದ್ ಅಫ್ಸಾನ್ ದ್ವಿತೀಯ ಸ್ಥಾನ ಪಡೆದು ಬೆಳ್ಳಿಯ ಪದಕವನ್ನು ಪಡೆಯುವುದರ ಮಾಡಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ . ವಿಜೇತ ವಿದ್ಯಾರ್ಥಿಗಳಿಗೆ ಶಾಲೆಯ ಆಡಳಿತ ಮಂಡಳಿ, ಮುಖ್ಯ ಶಿಕ್ಷಕಿ ಧರ್ಮಭಗಿನಿ ವಿಜಯ ಕ್ರಾಸ್ತಾ , ಶಿಕ್ಷಕ -ಶಿಕ್ಷಕೇತರ ವೃಂದದವರು, ಪೋಷಕರು ಹಾಗೂ ವಿದ್ಯಾರ್ಥಿ ಗಳು ಅಭಿನಂದನೆಯನ್ನು ಸಲ್ಲಿಸಿರುತ್ತಾರೆ.
