ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮುಂಬರುವ ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಜಿಲ್ಲಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭ ರಾಜ್ಯ ಸರ್ಕಾರದ ಸಚಿವ ವಿ. ಸುನಿಲ್ ಕುಮಾರ್, ಎಸ್. ಅಂಗಾರ, ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷರಾದ ಸುದರ್ಶನ ಮೂಡುಬಿದಿರೆ ಹಾಗೂ ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ಉಪಸ್ಥಿತರಿದ್ದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಾವು ಯಾವ ಪಕ್ಷದಲ್ಲಿ ದುಡಿಯು ತ್ತಿದ್ದೆವೊ ಆ ಬಗ್ಗೆ ಹೆಮ್ಮೆ ಇರಬೇಕು. ಹೆಮ್ಮೆ ಇಲ್ಲದಿದ್ದಲ್ಲಿ ಅಲ್ಲಿ ಹೆಚ್ಚು ದಿನ ಇರಲಾಗದು. ಅದೇ ರೀತಿ ಪಕ್ಷದ ನಾಯಕತ್ವದ ಮೇಲೆ ನಂಬಿಕೆ, ಗೌರವ ಹೊಂದಿರಬೇಕು ಎಂದು ವಿಧಾನ ಪರಿಷತ್ ಮಾಜಿ ಸಭಾಪತಿ ಕೆ. ಪ್ರತಾಪ್ ಚಂದ್ರ ಶೆಟ್ಟಿ ಹೇಳಿದರು. ಇಲ್ಲಿನ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಹಮ್ಮಿಕೊಂಡ ಪಕ್ಷದ ಸದಸ್ಯತ್ವ ಅಭಿಯಾನಕ್ಕೆ ಶುಕ್ರವಾರ ಚಾಲನೆ ನೀಡಿ ಮಾತನಾಡಿದರು. ಬೈಂದೂರು ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಮಾತನಾಡಿದರು. ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ಮುಖಂಡರಾದ ಮಲ್ಯಾಡಿ ಶಿವರಾಮ ಶೆಟ್ಟಿ, ದೇವಾನಂದ ಶೆಟ್ಟಿ, ದೇವಕಿ ಸಣ್ಣಯ್ಯ, ಗಣೇಶ ಶೇರೆಗಾರ್, ಅಶ್ವತ್ ಕುಮಾರ್, ಯುವ ಮುಖಂಡ ರಾದ ವಿಕಾಸ್ ಹೆಗ್ಡೆ ರೋಶನ್ ಶೆಟ್ಟಿ ಉಪಸ್ಥಿತರಿದ್ದರು. ಕೊಣಿ ನಾರಾಯಣ ಆಚಾರ್ಯ ಸ್ವಾಗತಿಸಿದರು. ವಿನೋದ್ ಕ್ರಾಸ್ತಾ ನಿರೂಪಿಸಿ, ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಅಕಾಡೆಮಿ ಇನ್ ಪರ್ಸ್ಯೂಟ್ ಆಫ್ ಇಂಜಿನಿಯರಿಂಗ್ ಎಕ್ಸಲೆನ್ಸ್ (ಅಪೆಕ್ಸ್) ಮತ್ತು ಆಳ್ವಾಸ್ ತಾಂತ್ರಿಕ ಮಹಾವಿದ್ಯಾಲಯ, ಮೂಡುಬಿದಿರೆ ನಡುವೆ ತಾಂತ್ರಿಕ ಒಡಂಬಡಿಕೆಗೆ ಪರಸ್ಪರ ಸಹಿ ಹಾಕಲಾಯಿತು. ಉದಯೋನ್ಮುಖ ಇಂಜಿನಿಯರುಗಳಿಗೆ ಗೇಟ್ ಪರೀಕ್ಷೆಯ ಮಹತ್ವವನ್ನು ಗಮನದಲ್ಲಿರಿಸಿಕೊಂಡು ಆಳ್ವಾಸ್ ತಾಂತ್ರಿಕ ಮಹಾವಿದ್ಯಾಲಯವು IIT, IISc ಯಂತಹ ಪ್ರತಿಷ್ಠಿತ ಮಹಾವಿದ್ಯಾಲಯಗಳಿಂದ ಎಂ.ಟೆಕ್ ಹಾಗೂ ಪಿ.ಎಚ್.ಡಿ ಪದವಿ ಪಡೆದ ನುರಿತ ಪರಿಣಿತರನ್ನು ಒಳಗೊಂಡ ಅಪೆಕ್ಸ್ ಸಂಸ್ಥೆಯ ಮುಖೇನ ಗೇಟ್ ತರಬೇತಿಯನ್ನು ಆರಂಭಿಸಿದೆ. ಮೂಡುಬಿದಿರೆಯ ಆಳ್ವಾಸ್ ಸಂಸ್ಥೆಯ ಈ ಉತ್ತಮ ಗುಣಮಟ್ಟದ ತರಬೇತಿ ಕೇಂದ್ರವು ಇದೇ ನವಂಬರ್ 28ರಿಂದ ತರಗತಿಗಳನ್ನು ಆರಂಭಿಸುತ್ತಿದ್ದು ತರಬೇತಿಗಾಗಿ ದೂರದ ಹೈದರಾಬಾದ್ ಅಥವಾ ದೆಹಲಿಯವರೆಗೆ ತೆರಳುವ ಅನಿವಾರ್ಯತೆಯನ್ನು ನೀಗಿಸಲಿದೆ. ದೇಶದ ಯಾವುದೇ ಇಂಜಿನಿಯರಿಂಗ್ ಕಾಲೇಜಿನ ಮೆಕ್ಯಾನಿಕಲ್ ಹಾಗೂ ಸಿವಿಲ್ ವಿಭಾಗದ ವಿದ್ಯಾರ್ಥಿಗಳು ಮತ್ತು ಗೇಟ್ ಪರೀಕ್ಷಾಕಾಂಕ್ಷಿಗಳು ಈ ತರಬೇತಿಯ ಸೌಲಭ್ಯನ್ನು ಪಡೆದುಕೊಳ್ಳಬಹುದಾಗಿದೆ. ದೂರದ ಊರಿನ ವಿದ್ಯಾರ್ಥಿಗಳಿಗೆ ವಸತಿ ಸೌಲಭ್ಯವನ್ನು ಒದಗಿಸಲಾಗುವುದು. ಕಾಲೇಜಿನ ಆವರಣದಲ್ಲಿಯೇ ವಿ?ಯ ತಜ್ಞರುಗಳು ಹಾಗೂ ವಸತಿ ಸೌಕರ್ಯವು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇತಿಹಾಸ ಪ್ರಸಿದ್ಧ ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ದೇವಳದ ವಾರ್ಷಿಕ ಮನ್ಮಹಾ ರಥೋತ್ಸವ – ಉಪ್ಪುಂದದ ಕೊಡಿಹಬ್ಬ ಶನಿವಾರ ಸಂಭ್ರಮ, ಸಡಗರದಿಂದ ಜರುಗಿತು. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ದ್ವಿತೀಯ ಜಾತ್ರೆ ಉಪ್ಪುಂದ ಕೊಡಿಹಬ್ಬವಾಗಿದ್ದು, ಇಲ್ಲಿನ ಗ್ರಾಮದೇವತೆ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ವಾರ್ಷಿಕ ಜಾತ್ರಾ ಮಹೋತ್ಸವಕ್ಕೆ ಧ್ವಜಾರೋಹಣದೊಂದಿಗೆ ಚಾಲನೆ ನೀಡಲಾಗಿತ್ತು. ರಥೋತ್ಸವ ದಿನ ದೇವಳ ತಂತ್ರಿಗಳ ನೇತೃತ್ವದಲ್ಲಿ ದೇವಳದಲ್ಲಿ ಪಂಚಾಮೃತ ಅಭಿಷೇಕ, ವಿಶೇಷ ಭೂತ ಬಲಿ ಸೇರಿದಂತೆ ಹಲವು ಧಾರ್ಮಿಕ ವಿಧಿವಿಧಾನ ನಡೆಯಿತು. ಬಳಿಕ ದೇವಿಗೆ ಹರಕೆ ರೂಪದಲ್ಲಿ ಬಂದ ಸೀರೆಗಳನ್ನು ಬಹಿರಂಗ ಹರಾಜು ಮಾಡಲಾಯಿತು. ಸಂಜೆ ನಡೆದ ರಥೋತ್ಸವದಲ್ಲಿ ಸಹಸ್ರಾರು ಭಕ್ತರು ರಥ ಎಳೆದು ಸಂಭ್ರಮಿಸಲಿದ್ದಾರೆ. ರಾತ್ರಿ ದೇವರ ಅವಭ್ರತಸ್ನಾನ ನಡೆಯಲಿದೆ. ಅಕಾಲಿಕ ಮಳೆಯ ಹಿನ್ನೆಲೆಯಲ್ಲಿ ಎಂದಿನಂತೆ ಜನಸಂದಣಿ ಇರಲಿಲ್ಲ. ಮಳೆಯಿಂದಾಗಿ ಜಾತ್ರೆಯ ಅಂಗಡಿಗಳು ವ್ಯವಹಾರವಿಲ್ಲದೇ ಕುಳಿತಿರುವುದು ಸಾಮಾನ್ಯವಾಗಿತ್ತು. ಬೈಂದೂರು ಶಾಸಕರಾದ ಬಿ.ಎಂ. ಸುಕುಮಾರ ಶೆಟ್ಟಿ, ಮಾಜಿ ಶಾಸಕರಾದ ಕೆ. ಗೋಪಾಲ ಪೂಜಾರಿ ಸೇರಿದಂತೆ ಹಲವು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಿಕ್ಷ ಪ್ರಭ ಅಕಾಡೆಮಿ ಆಫ್ ಕಾಮರ್ಸ್ ಎಜುಕೇಶನ್ ಸಿಎ ಸಿಎಸ್ ಮತ್ತು ಬ್ಯಾಂಕಿಂಗ್ ತರಬೇತಿ ಸಂಸ್ಥೆಯ (ಸ್ಪೇಸ್) ವಿದ್ಯಾರ್ಥಿಗಳು ಇನ್ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟರಿ ಆಫ್ ಇಂಡಿಯಾ ನ. 2021ರಲ್ಲಿ ನಡೆಸಿದ ಸಿಎಸ್ ಫೌಂಡೇಶನ್ ಸಿಎಸ್ಇಇಟಿ ಪರೀಕ್ಷೆ ಬರೆದ 38 ವಿದ್ಯಾರ್ಥಿಗಳಲ್ಲಿ 34 ವಿದ್ಯಾರ್ಥಿಗಳು ತೇರ್ಗಡೆ ಹೊಂದುವುದರ ಮೂಲಕ ರಾಷ್ಟ್ರೀಯ ಮಟ್ಟದಲ್ಲಿ ಸಾಧನೆಗೈದಿದ್ದಾರೆ. ಸಂಸ್ಥೆಯ ವಿದ್ಯಾರ್ಥಿಗಳಾದ ಕಾರ್ತಿಕ್ ಕೆ 171, ತೇಜಸ್ 169, ಧ್ವನಿ ಶೆಟ್ಟಿ 169, ಅಂಬಿಕ 169, ರಾಮನಾಥ್ 163, ಶಮಿತ ಶೆಟ್ಟಿ 146, ನಿಶಾ 145, ನಿಖಿಲ್ 137, ನಿಶಾಂತ್ ಕೊಟಾರಿ 134, ಪುಷ್ಪ 133, ದೀಪ 133, ವಿಜೇತ ಹೆಗ್ಡೆ 132, ಸಿಂಚನ 131, ಯತೀಶ್ 130, ಕೀರ್ತನ 129, ವರ್ಷ 126, ಶೃತಿ 126, ಗೋಪಾಲಕೃಷ್ಣ ವರ್ಣ 126, ಸಾತ್ವಿಕ್ 125, ಕೆ ಅನುರಾಗ್ ಶೆಟ್ಟಿ 125, ಪ್ರತಿಕ್ಷ ಎನ್ 121, ಸುನೈನ 120, ವೈಷ್ಣವಿ ಶೆಟ್ಟಿ 119,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಅರ್ಬನ್ ಸೌಹಾರ್ದ ಕೊ- ಆಪರೇಟಿವ್ ಸೊಸೈಟಿಯ ಇ- ಸ್ಟಾಂಪ್ ಸೌಲಭ್ಯ ಉದ್ಘಾಟನೆ ಮುಖ್ಯ ಕಛೇರಿಯಲ್ಲಿ ನಡೆಯಿತು. ಹಟ್ಟಿಯಂಗಡಿ ಶ್ರೀ ಸಿದ್ದಿವಿನಾಯಕ ವಸತಿ ಶಾಲೆಯ ಉಪಪ್ರಾಂಶುಪಾಲರಾದ ರಾಮ ದೇವಾಡಿಗ ಉದ್ಘಾಟಿಸಿದರು, ಸೊಸೈಟಿ ಅಧ್ಯಕ್ಷರಾದ ಮಣಿಕಂಠ ಎಸ್ . ದೇವಾಡಿಗ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಬೈಂದೂರು ಭಾಗದ ವಕೀಲರಾದ ಮೋಬಿ ಪಿ.ಸಿ, ಮಂಗೇಶ್ ಶ್ಯಾನುಭಾಗ್, ಪ್ರಶಾಂತ ಪೂಜಾರಿ, ಲಿಂಗಪ್ಪ ಮೇಸ್ತ, ಚಂದ್ರಶೇಖರ್ ಪಿ. ಹಾಗೂ ಎಲ್ಲಾ ನಿರ್ದೇಶಕರು, ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು. ಸೌಮ್ಯ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕೋವಿಡ್-19 ಅವಧಿಯಲ್ಲಿ ಮಕ್ಕಳ ಮೇಲಾಗಿರುವ ವಿವಿಧ ದುಷ್ಪರಿಣಾಮಗಳ ಕುರಿತು, ಮಕ್ಕಳ ಮೂಲಕವೇ ತಿಳಿದು, ಅವುಗಳಿಗೆ ಸೂಕ್ತ ನೆರವು ಹಾಗೂ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್ ಹೇಳಿದರು. ಅವರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಬೆಂಗಳೂರು, ಯುನಿಸೆಫ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಕ್ಷಣ ಇಲಾಖೆ, ರಾಜ್ಯ ಸ್ವಯಂ ಸೇವಾ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ನಡೆದ, ಕೋವಿಡ್-19 ಅವಧಿಯಲ್ಲಿ ಮಕ್ಕಳ ಮೇಲಾಗಿರುವ ದುಷ್ಪರಿಣಾಮಗಳ ಕುರಿತ ಮಕ್ಕಳ ಸಾರ್ವಜನಿಕ ಅಹವಾಲು ವಿಚಾರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸುಮಾರು 1.5 ವರ್ಷಕ್ಕೂ ಅಧಿಕ ಅವಧಿಯ ಕೋವಿಡ್-19 ಪಿಡುಗು, ಮಕ್ಕಳ ಸ್ವಾತಂತ್ರ್ಯವನ್ನು ಕಿತ್ತುಕೊಂಡಿತ್ತು. ಈ ಅವಧಿಯಲ್ಲಿ ಮಕ್ಕಳು ಶಾಲೆಯ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಿಂದ ಹೊರಗುಳಿದಿದ್ದರು. ಮೊಬೈಲ್ ಮೂಲಕವೇ ಆನ್ಲೈನ್ ತರಗತಿಗಳಿಗೆ ಹಾಜರಾಗಿದ್ದರು. ಮಕ್ಕಳು ಹೆಚ್ಚು ಕಾಲ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಚುನಾವಣಾ ಆಯೋಗದವರು ಪದವಿಪೂರ್ವ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ನಡೆಸಿದ ‘ಇಂಗ್ಲಿಷ್ ಪ್ರಬಂಧ’ ಸ್ಪರ್ಧೆಯಲ್ಲಿ ಕುಂದಾಪುರದ ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿ.ಯು.ಸಿ.ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಶ್ರಾವ್ಯ ಜಿಲ್ಲಾಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾಳೆ. ವಿದ್ಯಾರ್ಥಿನಿಯ ಸಾಧನೆಯನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಮತ್ತು ಬೋಧಕ, ಬೋಧಕೇತರ ವ್ರಂದದವರು ಅಭಿನಂದಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಪಡುವರಿ ಶ್ರೀ ಸೋಮೇಶ್ವರ ದೇವಸ್ಥಾನದ ವಾರ್ಷಿಕ ಉತ್ಸವ ಶುಕ್ರವಾರದಂದು ವಿಜ್ರಂಭಣೆಯಿಂದ ನಡೆಯಿತು. ಶ್ರೀ ದೇವರ ನರಗ ಪುರಮೆರವಣಿಗೆಯಲ್ಲಿ ಭಜನಾ ತಂಡ ಹಾಗೂ ವಾದ್ಯ ತಂಡಗಳು ಭಾಗವಹಿಸಿದ್ದವು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಇಂದಿರಾಗಾಂಧಿ ಜನ್ಮದಿನಾಚರಣೆ, ಸದಸ್ಯತ್ವ ನೋಂದಾವಣೆ ಕಾರ್ಯಕ್ರಮ ನಡೆಯಿತು. ಇಂದಿರಾ ಗಾಂಧಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದ ವಿಧಾನಪರಿಷತ್ ಮಾಜಿ ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ ಅವರು ಮಾತನಾಡಿ ‘ದೇಶಕ್ಕೆ ಇಂದಿರಾಗಾಂಧಿ ಯವರ ಕೊಡುಗೆ ಅಪಾರವಾದುದು. ಪಕ್ಷದ ನಾಯಕರಿಗೆ ಹಾಗೂ ಕಾರ್ಯಕರ್ತರಿಗೆ ಪಕ್ಷದ ಮೇಲೆ ಹಾಗೂ ನಾಯಕತ್ವದ ಮೇಲೆ ಗೌರವ ಹೆಮ್ಮೆ ಇರಬೇಕು. ಭೂಮಸೂದೆ, ಬ್ಯಾಂಕ್ ರಾಷ್ಟ್ರೀಕರಣ, ಇಪ್ಪತ್ತು ಅಂಶಗಳ ಕಾರ್ಯಕ್ರಮ ಮುಂತಾದ ಜನಪರ ಕಾರ್ಯಕ್ರಮಗಳ ಮೂಲಕ ಈ ದೇಶದ ದೀನದಲಿತರ ಉದ್ಧಾರಕ್ಕಾಗಿ ಯೋಜನೆಗಳನ್ನು ನೀಡಿದವರು ಇಂದಿರಾಗಾಂಧಿ. ಇದೀಗ ನರೇಂದ್ರ ಮೋದಿ ಅವರ ಆಡಳಿತದಲ್ಲಿ ಸರಕಾರಿ ಆಸ್ತಿಗಳು ಖಾಸಗೀಕರಣ ಆಗುತ್ತಿರುವುದು ಖೇಧಕರವಾದುದು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಷ್ಟದಲ್ಲಿರುವ ಸಂಸ್ಥೆಗಳನ್ನು ಖಾಸಗೀಕರಣ ಮಾಡುವುದು ತಪ್ಪಾಗದು ಆದರೆ ಲಾಭದಲ್ಲಿರುವ ಸಂಸ್ಥೆಗಳನ್ನು ಖಾಸಗೀಕರಣ ಮಾಡುತ್ತಿರುವುದು ಸರಿಯಲ್ಲ ಎಂದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಾನ್ಮಕ್ಕಿ ಹರಿಪ್ರಸಾದ್ ಶೆಟ್ಟಿ, ಪ್ರಾಸ್ತಾವಿಕವಾಗಿ ಮಾತನಾಡಿ ಪ್ರತೀ ಬೂತ್ ನಲ್ಲಿ ಕನಿಷ್ಠ…
