Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ಕೋಡಿ ಭಾಗದ ಕಡಲ್ಕೋರೆತ ಪ್ರದೇಶಕ್ಕೆ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಅವರು ಭೇಟಿ ನೀಡಿ ಪರಿಶೀಲಿಸಿದರು. ಕಳೆದ ಕೆಲವು ದಿನಗಳಿಂದ ನಿರಂತರವಾಗಿದ ಗಾಳಿಮಳೆ ಇರುವ ಹಿನ್ನೆಲೆಯಲ್ಲಿ ಎಂ ಕೋಡಿಯಿಂದ ಹಾಯ್ಗುಳಿ ಬಸ್ ನಿಲ್ದಾಣದ ತನಕ ಕಡಲ್ಕೋರೆತ ಉಂಟಾಗಿದ್ದು, ಸಚಿವರು ಈ ಬಗ್ಗೆ ಮಾಹಿತಿ ಪಡೆದುಕೊಂಡ ಕಡಲ್ಕೊರೆತ ತಡೆಗೋಡೆ ವಿಸ್ತರಿಸುವ ಬಗ್ಗೆ ಭರವಸೆ ನೀಡಿದರು. ಈ ಸಂದರ್ಭ ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರೀತಿ ಗೆಹ್ಲೋಟ್, ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ ನಾಯಕ್ ಮೊದಲಾದವರು ಈ ಸಂದರ್ಭ ಇದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು, ಅ11: ನೂತನವಾಗಿ ರಚನೆಗೊಂಡ ಬೈಂದೂರು ತಾಲೂಕಿನಲ್ಲಿ ಎರಡೂವರೆ ವರ್ಷಗಳ ಬಳಿಕ ಸ್ವಂತ ತಾಲ್ಲೂಕು ಪಂಚಾಯಿತಿ ಅಸ್ವಿತ್ವಕ್ಕೆ ಬಂದಿದ್ದು, ಇಂದು ಮಧ್ಯಾಹ್ನ 3 ಗಂಟೆಗೆ ನಡೆಯಲಿರುವ ತಾಲೂಕು ಪಂಚಾಯತ್ ಸಭೆಯಲ್ಲಿ ನೂತನ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ನಡೆಯಲಿದೆ. ಒಂದು ವರ್ಷದ ಹಿಂದೆ ಸರ್ಕಾರ 14 ತಾಲೂಕು ಪಂಚಾಯತ್ ಕ್ಷೇತ್ರಗಳನ್ನು ಒಳಗೊಂಡ ಬೈಂದೂರು ತಾಲ್ಲೂಕು ಪಂಚಾಯಿತಿ ರಚನೆಯ ಆದೇಶ ಹೊರಡಿಸಿ, ಉಡುಪಿ ಜಿಲ್ಲಾ ಪಂಚಾಯಿತಿಯ ಯೋಜನಾ ವಿಭಾಗದ ಅಧಿಕಾರಿ ಭಾರತಿ ಅವರನ್ನು ಮೊದಲ ಕಾರ್ಯನಿರ್ವಾಹಕ ಅಧಿಕಾರಿಯಾಗಿ ನೇಮಕ ಮಾಡಿತ್ತು. ಪಂಚಾಯಿತ್ 14 ಕ್ಷೇತ್ರಗಳನ್ನು ಮೌಲಾನಾ ದಸ್ತಗೀರ್ (ಶಿರೂರು 1), ಪುಷ್ಪರಾಜ ಶೆಟ್ಟಿ (ಶಿರೂರು 2), ಗಿರಿಜಾ ಖಾರ್ವಿ (ಪಡುವರಿ), ಪ್ರಮೀಳಾ ದೇವಾಡಿಗ (ಉಪ್ಪುಂದ), ಜಗದೀಶ ದೇವಾಡಿಗ (ಕೆರ್ಗಾಲ್), ಗ್ರೀಷ್ಮಾ ಬಿಡೆ (ಕೊಲ್ಲೂರು), ವಿಜಯ ಶೆಟ್ಟಿ (ಕಾಲ್ತೋಡು), ಮಹೇಂದ್ರ ಪೂಜಾರಿ (ಖಂಬದ ಕೋಣೆ), ಶ್ಯಾಮಲಾ ಕುಂದರ್ (ನಾವುಂದ), ಜಗದೀಶ ಪೂಜಾರಿ (ಮರವಂತೆ), ಸುಜಾತಾ ದೇವಾಡಿಗ (ಯಡ್ತರೆ), ಮಾಲಿನಿ ಕೆ (ಬೈಂದೂರು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರ ನಗರ ಭಾಗದಲ್ಲಿ ಅವೈಜ್ಞಾನಿಕ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಿಂದಾಗಿ ಮಳೆಗಾಲದಲ್ಲಿ ರಸ್ತೆ ಹೊಳೆಯಾಗುತ್ತಿದ್ದು, ನೀರು ಸರಾಗವಾಗಿ ಹರಿದು ಹೋಗದೇ ವಾಹನ ಸಂಚರಿಸುವುದು ಕಷ್ಟ ಸಾಧ್ಯವಾಗುತ್ತಿದೆ. ಸೋಮವಾರ ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ಸಂಬಂಧಿತ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ಈ ಬಳಿಕ ಬಸ್ರೂರು ಮೂರುಕೈನಿಂದ ವಿನಾಯಕ ಟಾಕೀಸ್ ತನಕ ರಸ್ತೆಯಲ್ಲಿ ತಕ್ಷಣವೇ ತುರ್ತು ದುರಸ್ತಿ ಕಾರ್ಯ ಆರಂಭಿಸಲಾಯಿತು. ನೀರು ಹರಿದು ಹೋಗಲು ಚರಂಡಿಗಳಿಗೆ ಸಂಪರ್ಕ ಕಲ್ಪಿಸಲಾಯಿತು. ಶಾಸಕರು ಖುದ್ದು ನಿಂತು ಸಮಸ್ಯೆ ಸರಿಪಡಿಸಿಲು ಸೂಚಿಸಿದರು. ಶನಿವಾರ ರಾಷ್ಟ್ರೀಯ ಹೆದ್ದಾರಿ ಹೋರಾಟ ಸಮಿತಿಯವರು ಸಚಿವರ ಕಾರು ಅಡ್ಡಗಟ್ಟಿ ಆಕ್ರೋಶ ವ್ಯಕ್ತಪಡಿಸಿದ್ದರು. ತಕ್ಷಣ ಸ್ಪಂದಿಸಿದ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಸಮಸ್ಯೆಗೆ ತಾತ್ಕಾಲಿಕ ಮುಕ್ತಿ ದೊರೆಯುವಂತೆ ಮಾಡಿದ್ದರು. ಭಾನುವಾರ ಜಿಲ್ಲಾಧಿಕಾರಿಗಳು ಭೇಟಿ ನೀಡಿ ವಸ್ತುಸ್ಥಿತಿ ಪರಾಮರ್ಶಿಸಿದ್ದರು. ಇದನ್ನೂ ಓದಿ: ► ನೆರೆ ಪೀಡಿತ ಪ್ರದೇಶಗಳಿಗೆ ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಆ.10ರ ಸೋಮವಾರ 90 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಜಿಲ್ಲೆಯಲ್ಲಿ ಒಟ್ಟು 6290 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 3462 ಮಂದಿ ಬಿಡುಗಡೆಯಾಗಿದ್ದು, ಒಟ್ಟು 2762 ಸಕ್ರಿಯ ಪ್ರಕರಣಗಳು ಉಡುಪಿ, ಕುಂದಾಪುರ, ಕಾರ್ಕಳದ ಕೋವಿಡ್ ಆಸ್ಪತ್ರೆ, ಕೋವಿಡ್ ಕೇರ್ ಸೆಂಟರ್, ಕೋವಿಡ್ ಹೆಲ್ತ್ ಸೆಂಟರ್ ಮೂಲಕ ಹಾಗೂ ಹೋಮ್ ಐಸೋಲೇಶನಿನಲ್ಲಿದ್ದಾರೆ. ಈವರೆಗೆ ಕೊರೋನಾ ಪಾಸಿಟಿವ್ ಇದ್ದ 66 ಮಂದಿ ಮೃತಪಟ್ಟಿದ್ದಾರೆ. ಇಂದು ಒಟ್ಟು 117 ಬಿಡುಗಡೆಗೊಂಡಿದ್ದಾರೆ. ಇದನ್ನೂ ಓದಿ: ► ಉಪ್ಪುಂದದ ಸುರಭಿ ಎಸ್. ಶೆಟ್ಟಿ ರಾಜ್ಯಕ್ಕೆ ದ್ವಿತೀಯ. 625ರಲ್ಲಿ 624 ಅಂಕ – https://kundapraa.com/?p=40173 . ► ಎಸ್ಎಸ್ಎಲ್‌ಸಿ: ಶ್ರಾವ್ಯ ಎಸ್. ಮೊಗವೀರ ಜಿಲ್ಲೆಗೆ ದ್ವಿತೀಯ. 621 ಅಂಕ – https://kundapraa.com/?p=40194 . ► ಎಸ್.ಎಸ್.ಎಲ್‌ಸಿ ಪರೀಕ್ಷೆ ಫಲಿತಾಂಶ: ಉಡುಪಿ ಜಿಲ್ಲೆಗೆ ಎ ಗ್ರೇಡ್, 7ನೇ ಸ್ಥಾನ – https://kundapraa.com/?p=40160 .

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ತಾಲೂಕಿನ ಬಡಕೆರೆ, ಕೋಣ್ಕಿ, ಚಿಕ್ಕಳ್ಳಿ, ನಾವುಂದ ಭಾಗದ ನೆರೆ ಪೀಡಿತ ಪ್ರದೇಶಗಳಿಗೆ ಬೈಂದೂರು ಶಾಸಕರಾದ ಬಿ. ಎಮ್. ಸುಕುಮಾರ ಶೆಟ್ಟಿ ಅವರು ಸೋಮವಾರ ಭೇಟಿ ನೀಡಿದರು. ಈ ಸಂದರ್ಭ ಜನರ ಸಮಸ್ಯೆ ಆಲಿಸಿದ ಬಳಿಕ ಅವರು ಮಾತನಾಡಿ ಮುಂದಿನ ದಿನಗಳಲ್ಲಿ ನೆರೆ ಬಂದ ಸಂದರ್ಭದಲ್ಲಿ ನಾಡ, ನಾವುಂದ ಗ್ರಾಮಗಳಿಗೆ ನೆರವಾಗುವ ಸ್ಥಳದಲ್ಲಿ ಪುನರ್ವಸತಿ ಕೇಂದ್ರ ಮತ್ತು ಜಾನುವಾರು ಕೊಟ್ಟಿಗೆ ಮಾಡಿ ಅಲ್ಲಿಗೆ ಸ್ಥಳಾಂತರಗೊಳಿಸಿ ಅವರಿಗೆ ಸೂಕ್ತ ಸ್ಥಳಾವಕಾಶ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ನಾವುಂದ ಗ್ರಾಮದ ಸಾಲ್ಬುಡದಲ್ಲಿ ನೆರೆಯಿಂದ ಒಂದು ಪ್ರದೇಶದಿಂದ ಮತ್ತೊಂದು ಪ್ರದೇಶಕ್ಕೆ ತೆರಳಲು ದೋಣಿಯ ಅವಶ್ಯಕತೆಯಿದ್ದು ಅದನ್ನು ಕೂಡಲೇ ವ್ಯವಸ್ಥೆ ಮಾಡುವಂತೆ ಸ್ಥಳೀಯ ತಹಶೀಲ್ದಾರ್ ಅವರಿಗೆ ಸೂಚಿಸಿದರು. ಕಳೆದ ಬಾರಿ ದೋಣಿ ನಾವಿಕರಿಗೆ ಸಂಭಾವನೆ ನೀಡಿಲ್ಲ ಎನ್ನುವ ಸ್ಥಳೀಯರ ದೂರಿಗೆ ಈ ಬಾರಿ ಅದನ್ನು ಕೂಡಲೇ ವ್ಯವಸ್ಥೆ ಮಾಡಬೇಕು. ಅಲ್ಲದೇ ಸ್ಥಳೀಯರ ಸಮಸ್ಯೆಗಳನ್ನು ನಮ್ಮ ಗಮನಕ್ಕೆ, ಇಲ್ಲಿಯ ಪಂಚಾಯತ್ ಅಧಿಕಾರಿಗಳು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ಬಸ್ರೂರು ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಶ್ಯಾವ್ಯ ಎಸ್. ಮೊಗವೀರ ಎಸ್ಎಸ್ಎಲ್‌ಸಿ ಪರೀಕ್ಷೆಯಲ್ಲಿ 621 ಅಂಕ ಗಳಿಸಿ ಉಡುಪಿ ಜಿಲ್ಲೆಗೆ ದ್ವಿತೀಯ ಸ್ಥಾನಿಯಾಗಿದ್ದಾಳೆ. ಈಕೆ ಶೇಖರ ಮೊಗವೀರ ಹಾಗೂ ಗುಲಾಬಿ ದಂಪತಿಗಳ ಪುತ್ರಿ. ಶ್ರಾವ್ಯ ಕನ್ನಡದಲ್ಲಿ 125, ಇಂಗ್ಲೀಷ್ 100, ಹಿಂದಿ 100, ಗಣಿತ 98, ವಿಜ್ಞಾನ 98 ಹಾಗೂ ಸೋಶಿಯಲ್ ಸ್ಟಡೀಸ್ನಲ್ಲಿ 100 ಅಂಕ ಪಡೆದಿದ್ದಾಳೆ. ಪಿಯುಸಿಯಲ್ಲಿ ವಿಜ್ಞಾನ ವಿಷಯ ಆಯ್ದುಕೊಂಡು ಮುಂದೆ ವೈದ್ಯಳಾಗುವ ಕನಸು ಹೊತ್ತಿದ್ದಾಳೆ. ವಿದ್ಯಾರ್ಥಿನಿಯನ್ನು ಶಾಲೆಯ ಮುಖ್ಯೋಪಧ್ಯಾಯರು, ಶಿಕ್ಷಕರು ಅಭಿನಂದಿಸಿದ್ದಾರೆ. ಇದನ್ನೂ ಓದಿ: ► ಉಪ್ಪುಂದದ ಸುರಭಿ ಎಸ್. ಶೆಟ್ಟಿ ರಾಜ್ಯಕ್ಕೆ ದ್ವಿತೀಯ. 625ರಲ್ಲಿ 624 ಅಂಕ – https://kundapraa.com/?p=40173 . ► ಎಸ್.ಎಸ್.ಎಲ್‌ಸಿ ಪರೀಕ್ಷೆ ಫಲಿತಾಂಶ: ಉಡುಪಿ ಜಿಲ್ಲೆಗೆ ಎ ಗ್ರೇಡ್, 7ನೇ ಸ್ಥಾನ – https://kundapraa.com/?p=40160 .

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ತಾಲೂಕಿನ ಬಡಾಕೆರೆ ಹಾಗೂ ಸಾಲ್ಬುಡದ ನೆರೆ ಪೀಡಿತ ಪ್ರದೇಶಗಳಿಗೆ ಬೈಂದೂರಿನ ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಅವರು ಸೋಮವಾರ ಭೇಟಿ ನೀಡಿ ಜನರ ಸಮಸ್ಯೆ ಆಲಿಸಿದರು. ಉಡುಪಿ ಜಿಲ್ಲಾಧಿಕಾರಿಗಳನ್ನು ಪೋನ್ ಮೂಲಕ ಸಂಪರ್ಕಿಸಿ ಸಮಸ್ಯೆಗಳಿಗೆ ತಕ್ಷಣಕ್ಕೆ ಸ್ಪಂದಿಸುವಂತೆ ಒತ್ತಾಯಿಸಿದರಲ್ಲದೇ ತಮ್ಮಿಂದಾದ ಸಹಕಾರಗೈಯುವ ಭರವಸೆ ನೀಡಿದರು. ಈ ಸಂದರ್ಭ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಎಸ್. ರಾಜು ಪೂಜಾರಿ, ಗ್ರಾಮ ಪಂಚಾಯತ್ ಅಧ್ಯಕ್ಷ ನರಸಿಂಹ ದೇವಾಡಿಗ, ಸದಸ್ಯ ರಾಮ ಪೂಜಾರಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಸ್. ಮದನ್ ಕುಮಾರ್, ಯುವ ಕಾಂಗ್ರೆಸ್ ಅಧ್ಯಕ್ಷ ಶೇಖರ್ ಪೂಜಾರಿ ಉಪ್ಪುಂದ, ಕಾರ್ಯಾಧ್ಯಕ್ಷ ಪ್ರಶಾಂತ ಪೂಜಾರಿ, ಸ್ಥಳೀಯರಾದ ವೆಂಕಟರಮಣ ಗಾಣಿಗ, ರಾಜೇಶ್, ಸಂದೀಪ್ ಬಿಲ್ಲವ, ಜಯಪ್ರಕಾಶ್ ಬಡಾಕೆರೆ ಇತರರು ಹಾಜರಿದ್ದರು. ಇದನ್ನೂ ಓದಿ: ► ನೆರೆ ಪೀಡಿತ ಪ್ರದೇಶಗಳಿಗೆ ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಭೇಟಿ – https://kundapraa.com/?p=40201 . ► ಉಪ್ಪುಂದದ ಸುರಭಿ ಎಸ್. ಶೆಟ್ಟಿ ರಾಜ್ಯಕ್ಕೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ತಾಲೂಕಿನ ಸಂದೀಪನ್ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಸುರಭಿ ಎಸ್. ಶೆಟ್ಟಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 625ರಲ್ಲಿ 624 ಅಂಕ ಪಡೆದು ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿದ್ದಾಳೆ. ಎಲ್‌ಕೆಜಿಯಿಂದ ಅದೇ ಶಾಲೆಯಲ್ಲಿ ಅಧ್ಯಯನ ನಡೆಸಿರುವ ಸುರಭಿ ಖಂಬದಕೋಣೆ ಗ್ರಾಮದ ಹಳಗೇರಿ ಮೂಲದ ಎಚ್. ಸುರೇಶ ಶೆಟ್ಟಿ – ಸೀಮಾ ಎಸ್. ಶೆಟ್ಟಿ ಅವರ ಪ್ರಥಮ ಪುತ್ರಿ. ಸುರೇಶ ಶೆಟ್ಟಿ ಉಪ್ಪುಂದದಲ್ಲಿ ಪೀಠೋಪಕರಣ ಮಳಿಗೆ ನಡೆಸುತ್ತಿದ್ದಾರೆ. ಸುರಭಿ ಕನ್ನಡದಲ್ಲಿ 125, ಇಂಗ್ಲೀಷ್ 100, ಹಿಂದಿ – 100, ಗಣಿತ – 100, ವಿಜ್ಞಾನ – 100 ಹಾಗೂ ಸಮಾಜ ವಿಜ್ಞಾನದಲ್ಲಿ – 99 ಅಂಕ ಗಳಿಸಿದ್ದಾಳೆ. ಮುಂದೆ ವಿಜ್ಞಾನ ಓದಿ ವೈದ್ಯಳಾಗಬೇಕೆಂದಿದ್ದಾಳೆ. ಸುರಭಿಯ ಸಹೋದರಿ ಸುವಿಧಾ ಅದೇ ಶಾಲೆಯಲ್ಲಿ ಈ ವರ್ಷ ಎಸ್‌ಎಸ್‌ಎಲ್‌ಸಿ ಅಧ್ಯಯನ ನಿರತಳು. ’ಶಾಲೆಯಲ್ಲಿ ನಿಗದಿಗೊಳಿಸಿದ್ದ ಒಂದು ಗಂಟೆಯ ಓದಿನ ಅವಧಿಯ ಜತೆಗೆ ಮನೆಯಲ್ಲಿ ಪ್ರತಿದಿನ ಕನಿಷ್ಠ ನಾಲ್ಕು ಗಂಟೆ ಓದುತ್ತಿದ್ದೆ. ಆಯಾ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ರಾಜ್ಯ ಪ್ರೌಢ ಶಿಕ್ಷಣ ಮಂಡಳಿ ನಡೆಸಿದ ಪ್ರಸಕ್ತ ಸಾಲಿನ ಎಸೆಸೆಲ್ಸಿ ಫಲಿತಾಂಶ ಪ್ರಕಟಗೊಂಡಿದ್ದು,ಈ ಕುರಿತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸುದ್ದಿಗೋಷ್ಟಿಯಲ್ಲಿ ಫಲಿತಾಂಶದ ಮಾಹಿತಿ ನೀಡಿದ್ದಾರೆ. ಈ ಭಾರಿ ಗ್ರೇಡ್ ಪದ್ದತಿ ಇದ್ದು 10 ಜಿಲ್ಲೆಗಳು ಎ ಗ್ರೇಡ್, 20 ಜಿಲ್ಲೆಗಳು ಬಿ ಗ್ರೇಡ್ ಹಾಗೂ 4 ಜಿಲ್ಲೆಗಳು ಸಿ ಗ್ರೇಡ್ ಪಡೆದಿವೆ. (34 ಶೈಕ್ಷಣಿಕ ಜಿಲ್ಲೆಗಳು) ಒಟ್ಟಾರೆ ಶೇ. 71.81 ಫಲಿತಾಂಶ ಈ ಬಾರಿ ಬಂದಿದೆ. ಕಳೆದ ಬಾರಿ ಶೇ.73.70 ರಷ್ಟು ಫಲಿತಾಂಶ ಬಂದಿತ್ತು. ಉಡುಪಿ ಜಿಲ್ಲೆ ಎ ಗ್ರೇಡ್‌ನಲ್ಲಿದ್ದು 7ನೇ ಸ್ಥಾನದಲ್ಲಿದೆ, ಉತ್ತರ ಕನ್ನಡ ಜಿಲ್ಲೆ ಎ ಗ್ರೇಡ್‌ನಲ್ಲಿದ್ದು, 10ನೇ ಸ್ಥಾನದಲ್ಲಿದೆ, ದ.ಕ ಜಿಲ್ಲೆ ಬಿ. ಗ್ರೇಡ್‌ನಲ್ಲಿದ್ದು 12ನೇ ಸ್ಥಾನ ಪಡೆದುಕೊಂಡಿದೆ. ಎ ಗ್ರೇಡ್ ಜಿಲ್ಲೆಗಳು: ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಮಧುಗಿರಿ, ಮಂಡ್ಯ, ಚಿತ್ರದುರ್ಗ, ಕೋಲಾರ, ಉಡುಪಿ, ರಾಮನಗರ, ಹಾಸನ, ಉತ್ತರ ಕನ್ನಡ ಜಿಲ್ಲೆಗಳು, ಬಿ ಗ್ರೇಡ್ ಜಿಲ್ಲೆಗಳು:  ಚಾಮರಾಜನಗರ, ಮಂಗಳೂರು, ಬಳ್ಳಾರಿ, ತುಮಕೂರು,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಪರಂಪಾನುಗತವಾಗಿ ಜಾನಪದ ಸಂಗೀತ ಕಲಿತುಕೊಂಡು ಅದರಿಂದಲೇ ಬದುಕು ಕಟ್ಟಿಕೊಳ್ಳುವ ಕಲಾವಿದರು ವೃದ್ಧರಾದಾಗ ಅವರಿಗೆ ಸರ್ಕಾರ ಮಾಸಾಶನ ನೀಡಬೇಕು. ಅವರು ಹೊಂದಿರುವ ಕಲಾಸಂಪತ್ತನ್ನು ಮುಂದಿನ ಪೀಳಿಗೆಗೆ ವರ್ಗಾಯಿಸಲು ಅವಕಾಶ ಕಲ್ಪಿಸಿಕೊಡಬೇಕು ಎಂದು ಕನ್ನಡ ಜಾನಪದ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಗಣೇಶ ಗಂಗೊಳ್ಳಿ ಹೇಳಿದರು. ರಾಜ್ಯ ಮತ್ತು ಜಿಲ್ಲಾ ಕನ್ನಡ ಜಾನಪದ ಪರಿಷತ್ತು, ಯುವ ಬ್ರಿಗೇಡ್ ಮತ್ತು ರಾಷ್ಟ್ರೀಯ ಸೇವಾ ಯೋಜನಾ ಕೋಶದ ಆಶ್ರಯದಲ್ಲಿ ಭಾನುವಾರ ಆಚರಿಸಿದ ವಿಶ್ವ ಬುಡಕಟ್ಟು ದಿನಾಚರಣೆ ಅಂಗವಾಗಿ ಹೊಸಾಡು ಗ್ರಾಮದ ಮುಳ್ಳಿಕಟ್ಟೆಯಲ್ಲಿ ನೆಲೆಸಿರುವ ಹಿರಿಯ ಜಾನಪದ ಕಲಾವಿದ ಶಿವಲಿಂಗಪ್ಪ ಈಶ್ವರಪ್ಪ ವೇಶಗಾರ್-ಶಂಕರಮ್ಮ ದಂಪತಿಯನ್ನು ಅವರು ಸನ್ಮಾನಿಸಿ ಮಾತನಾಡಿದರು. ಕೋವಿಡ್-೧೯ರ ಕಾರಣದಿಂದ ಪರಿಷತ್ತಿಗೆ ಸಾರ್ವಜನಿಕ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿಲ್ಲ. ಪರಿಷತ್ತಿನ ರಾಜ್ಯಾಧ್ಯಕ್ಷ ಡಾ. ಬಾಲಾಜಿ ಅವರ ಮಾರ್ಗದರ್ಶನದಲ್ಲಿ ಅಂತರ್ಜಾಲ ಬಳಸಿಕೊಂಡು ಎಲ್ಲೆಡೆ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ. ಅವುಗಳಿಗೆ ಕಲಾವಿದರಿಂದ ಮತ್ತು ಕಲಾಸಕ್ತರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಉತ್ತರ ಕರ್ನಾಟಕದಿಂದ ಬಂದು ಮುಳ್ಳಿಕಟ್ಟೆಯಲ್ಲಿ ನೆಲೆಸಿರುವ ಕಲಾವಿದರು…

Read More