ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದರೆ: ಆಳ್ವಾಸ್ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಜಿಯ ಎಂಬಿಎ ವಿಭಾಗದ ವತಿಯಿಂದ ಕೇಂದ್ರ ಬಜೆಟ್- 2021ರ ಕುರಿತು ಪ್ಯಾನೆಲ್ ಡಿಸ್ಕಶನ್ ನಡೆಯಿತು. ಕಂದಾಯ, ಉದ್ಯಮ, ಕೃಷಿ, ಇನ್ಫ್ರಾಸ್ಟ್ರಕ್ಚರ್, ಬ್ಯಾಂಕಿಂಗ್, ಟೂರಿಸಮ್, ರಕ್ಷಣಾ ಕ್ಷೇತ್ರಗಳನ್ನು ಪ್ರತಿನಿಧಿಸಿ ವಿವಿಧ ಕ್ಷೇತ್ರತಜ್ಞರು ತಮ್ಮ ವಾದಗಳನ್ನು ಮಂಡಿಸಿದರು. ಆರ್ಥಿಕ ಅಭಿವೃದ್ಧಿಯ ಬಗ್ಗೆ ಮಾತನಾಡಿದ ಭಾರತೀಯ ಕಂದಾಯ ಇಲಾಖೆಯ ಮಾಜಿ ಅಧಿಕಾರಿ ಜಯಪ್ರಕಾಶ್ ರಾವ್, ಯಾವುದೇ ಬಜೆಟ್ ಆಗಲಿ, ಸರಕಾರವಾಗಲಿ ಆರ್ಥಿಕತೆಯ ಮೇಲೆ ಜನಸಂಖ್ಯಾ ಸ್ಫೋಟದ ಪರಿಣಾಮದ ಕುರಿತು ವಿಶ್ಲೇಷಿಸಿಲ್ಲ. ಇಲ್ಲಿಯವರೆಗೂ ಬಂದ ಯಾವುದೇ ಬಜೆಟ್ನಲ್ಲಿ ದೇಶದ ಪ್ರಜೆಯ ಆತ್ಮಾಭಿಮಾನದ ಕುರಿತು ಪ್ರಸ್ತಾಪವಿಲ್ಲ. ನಾವು ಜಿಡಿಪಿ, ತಲಾ ಆದಾಯದ ಹೆಚ್ಚಳದ ಕುರಿತು ಮಾತಾಡುತ್ತೇವೆಯೇ ಹೊರತು, ಪ್ರತಿಯೊಬ್ಬ ವ್ಯಕ್ತಿಗೆ ದೊರಕಬಹುದಾದ ಸಂಪನ್ಮೂಲಗಳ ಬಗ್ಗೆ ಯೋಚಿಸುವುದಿಲ್ಲ. ನಮ್ಮಲ್ಲಿ ಎಷ್ಟೋ ಹುಡುಗಿಯರು 14 ವರ್ಷದ ಬಳಿಕ ಶಾಲೆಗೆ ಹೋಗುವುದನ್ನು ಇಂದಿಗೂ ನಿಲ್ಲಿಸುತ್ತಾರೆ. ಇದಕ್ಕೆ ಮುಖ್ಯ ಕಾರಣ ಅಲ್ಲಿರುವ ಮೂಲ ಸೌಕರ್ಯಗಳು, ಸಂಪನ್ಮೂಲಗಳ ಕೊರತೆ. ಬುಲೆಟ್ ಟ್ರೇನ್ಗಳ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ‘ಲಯನ್ಸ್ ಕ್ಲಬ್ ಕುಂದಾಪುರ ಇಂಜಿನಿಯರ್ಸ್’ ಇದರ ಸನ್ನದು ಪ್ರಧಾನ ಹಾಗೂ ಜಿಲ್ಲಾ ಗವರ್ನರ್ ಅಧಿಕೃತ ಭೇಟಿಯು ಕುಂದಾಪುರದ ಕೋಯಾಕುಟ್ಟಿ ಸಭಾಂಗಣದಲ್ಲಿ ಜರುಗಿತು. ಈ ಸಂದರ್ಭದಲ್ಲಿ ಜಿಲ್ಲಾ ಗವರ್ನರ್ ಆದ ಲಯನ್ ಎನ್. ಎಂ. ಹೆಗಡೆ ‘ಲಯನ್ಸ್ ಕ್ಲಬ್ ಕುಂದಾಪುರ ಇಂಜಿನಿಯರ್ಸ್’ ಇದರ ಅಧ್ಯಕ್ಷರಾದ ಲಯನ್ ಇಂಜಿನಿಯರ್ ಚೇತನ್ ಹೆಗಡೆ, ಕಾರ್ಯದರ್ಶಿ ಲಯನ್ ಇಂಜಿನಿಯರ್ ರಶ್ವಿನ್ ಕೆ.ಎಚ್. ಹಾಗೂ ಕೋಶಾಧಿಕಾರಿ ಲಯನ್ ಇಂಜಿನಿಯರ್ ರಮೇಶ್ ಆಚಾರ್ ಹಾಗೂ ಸದಸ್ಯರಿಗೆ ಸನ್ನದು ಪ್ರಧಾನ ಮಾಡಿದರು ಹಾಗೆಯೇ ಎಲ್ಲಾ ಸದಸ್ಯರಿಗೆ ಸದಸ್ಯತ್ವ ನೀಡಲಾಯಿತು. ಈ ಕ್ಲಬ್ಬಿನ ಮೊದಲ ಕಾರ್ಯಕ್ರಮದ ಅಂಗವಾಗಿ ‘ಬಿ. ಆರ್. ರಾಯರ ಹಿಂದೂ ಹಿರಿಯ ಪ್ರಾಥಮಿಕ ಶಾಲೆ’ಕುಂದಾಪುರ ಇವರಿಗೆ ಒಂದು ಹೊಸ ಸೋಕ್ ಪಿಟ್ ನಿರ್ಮಿಸಿ ಲಯನ್ಸ್ ಜಿಲ್ಲಾ ಗವರ್ನರ್ ಸಮ್ಮುಖದಲ್ಲಿ ಹಸ್ತಾಂತರಿಸಲಾಯಿತು. ಲಯನ್ಸ್ ಜಿಲ್ಲೆ 317ಸಿ ಇದರ ಗವರ್ನರ್ ಆದ ಲಯನ್ ಎನ್.ಎಂ. ಹೆಗಡೆ ಹಾಗೂ ಕ್ಯಾಬಿನೆಟ್ ಸೆಕ್ರೆಟರಿ ಲಯನ್ ಟಿ.ಜಿ. ಆಚಾರ್ಯ, ಝೋನ್…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಆಶ್ರಯದಲ್ಲಿ ಮಂಗಳೂರು ವಿ. ವಿ. ಕುಂದಾಪುರ ವಲಯ ಅಂತರ್ಕಾಲೇಜು ಮಹಿಳಾ ತ್ರೋಬಾಲ್ ಪಂದ್ಯಕೂಟದ ಸಮಾರೋಪ ಸಮಾರಂಭ ಕಾಲೇಜಿನ ಬಿ.ಎಂ.ಎಸ್. ಕ್ರೀಡಾಂಗಣದಲ್ಲಿ ನಡೆಯಿತು. ಈ ತ್ರೋಬಾಲ್ ಪಂದ್ಯಕೂಟದ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಕುಂದಾಪುರ ಎಜ್ಯುಕೇಶನ್ ಸೊಸೈಟಿ ರಿ. ಇದರ ಕಾರ್ಯದರ್ಶಿಗಳಾದ ಸೀತಾರಾಮ ನಕ್ಕತ್ತಾಯ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರಾದ ಡಾ| ಅತುಲ್ ಕುಮಾರ್ ಶೆಟ್ಟಿ, ಜ್ಯೋತಿ ಜ್ಯುವೆಲ್ಲರ್ಸ್ನ ಮಾಲಕರಾದ ಎನ್. ಕೃಷ್ಣಮೂರ್ತಿ ಶೇಟ್, ಡಿಜಿಟೆಕ್ ಸೊಲ್ಯೂಷನ್ಸ್ ಕುಂದಾಪುರದ ಮಾಲಕ, ಕಾಲೇಜಿನ ಪೂರ್ವ ವಿದ್ಯಾರ್ಥಿ ದಿಗಂತ್ ಶೆಟ್ಟಿ ಉಪಸ್ಥಿತರಿದ್ದರು. ಈ ಪಂದ್ಯಕೂಟದಲ್ಲಿ ಕುಂದಾಪುರ ವಲಯದ ಒಟ್ಟು 9 ತಂಡಗಳು ಭಾಗವಹಿಸಿದ್ದವು. ಸರ್ಕಾರಿ ಪ್ರ.ದ. ಕಾಲೇಜು ಶಂಕರನಾರಾಯಣ ಪ್ರಥಮ ಸ್ಥಾನ, ಡಾ| ಬಿ. ಬಿ. ಹೆಗ್ಡೆ ಕಾಲೇಜು ದ್ವಿತೀಯ, ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರ.ದ. ಕಾಲೇಜು ತೃತೀಯ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಅಶ್ವತ್ಥ ವೃಕ್ಷಕ್ಕೆ ಭಾರತೀಯ ಧಾರ್ಮಿಕ ಮತ್ತು ಸಾಂಸ್ಕೃತಿಕ ಪರಂಪರೆಯಲ್ಲಿ ವಿಶೇಷ ಸ್ಥಾನವಿದೆ. ಅದರ ಮೂಲದಲ್ಲಿ ಬ್ರಹ್ಮ, ನಡುವೆ ವಿಷ್ಣು ಮತ್ತು ಮೇಲ್ಭಾಗದಲ್ಲಿ ಶಿವ ವಾಸಿಸುತ್ತಾರೆ ಎಂಬ ನಂಬಿಕೆ ಇರುವುದರಿಂದ ಅದರ ಬಗ್ಗೆ ಪೂಜ್ಯ ಭಾವನೆ ಹೊಂದಿ ಆರಾಧಿಸಲಾಗುತ್ತದೆ ಎಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಪ್ರಧಾನ ಅರ್ಚಕ ಹಾಗೂ ತಂತ್ರಿ ಡಾ. ಕೆ. ರಾಮಚಂದ್ರ ಅಡಿಗ ಹೇಳಿದರು. ಅವರು ಖಂಬದಕೋಣೆ ಹಳಗೇರಿಯ ಕೋಟಿ ವೀರಾಂಜನೇಯ ದೇವಸ್ಥಾನದ ಮುಂದಿನ ಅಶ್ವತ್ಥ ವೃಕ್ಷದ ಪ್ರತಿಷ್ಠೋಪನಯನ ವಿವಾಹ ಮಹೋತ್ಸದ ನಿಮಿತ್ತ ನಡೆದ ಧಾರ್ಮಿಕಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ವಿವಿಧ ಪುರಾಣಗಳಲ್ಲಿ ಅಶ್ವತ್ಥ ವೃಕ್ಷದ ಹಿನ್ನೆಲೆ, ಮಹಿಮೆಯ ಉಲ್ಲೇಖ ಇದೆ. ಅದು ಪರಿಸರವನ್ನು ಪೋಷಿಸುವುದರ ಜತೆಗೆ ಜನರ ಆರೋಗ್ಯ ವೃದ್ಧಿಸುತ್ತದೆ ಎಂದು ಈಗ ವೈಜ್ಞಾನಿಕವಾಗಿ ಸಿದ್ಧವಾಗಿದೆ ಎಂದು ಹೇಳಿದರು. ಕೋವಿಡ್ ವಾರಿಯರ್ ಆಗಿ ಕೆಲಸಮಾಡಿದ ಬೈಂದೂರು ಎಸ್ಐ ಸಂಗೀತಾ, ಹಳಗೇರಿ ಕೊಕ್ಕೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ವಾಸುದೇವ ಕಾರಂತ, ಮೇಕೋಡು ಶ್ರೀ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಶಾಲಾ ಮಕ್ಕಳ ಸುರಕ್ಷತೆಯ ದೃಷ್ಠಿಯಿಂದ, ಜಿಲ್ಲೆಯ ಎಲ್ಲಾ ಖಾಸಗಿ ಶಾಲಾ ಬಸ್ಗಳಲ್ಲಿ, ಮಕ್ಕಳಿಗೆ ಸ್ಪಷ್ಟವಾಗಿ ಕಾಣುವಂತೆ ಚೈಡ್ಲೈನ್ ಸಂಖ್ಯೆ 1098 ಸಂಖ್ಯೆಯ ಮಾಹಿತಿಯನ್ನು ಕಡ್ಡಾಯವಾಗಿ ಅಳವಡಿಸಬೇಕು. ಈ ಕುರಿತಂತೆ ಎಲ್ಲಾ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಸೂಚನೆ ನೀಡುವಂತೆ ಜಿಲ್ಲಾಧಿಕಾರಿ ಜಿ. ಜಗದೀಶ್ ಸೂಚಿಸಿದರು. ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಮಗ್ರ ಮಕ್ಕಳ ರಕ್ಷಣಾ ಯೋಜನೆಗೆ ಸಂಬಂಧಿಸಿದಂತೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಶಾಲಾ ಬಸ್ಗಳಲ್ಲಿ ಚೈಡ್ಲೈನ್ ಸಂಖ್ಯೆ 1098 ಅಳವಡಿಸುವುದರ ಜೊತೆಗೆ ಮಕ್ಕಳಿಗೆ ಆ ಸಂಖ್ಯೆಯ ಪ್ರಯೋಜನ ಕುರಿತು ಮಾಹಿತಿ ನೀಡಬೇಕು ಹಾಗೂ ಶಾಲಾ ವಾಹನಗಳಲ್ಲಿ ಮಕ್ಕಳು ದೂರು ನೀಡಲು ದೂರು ಪೆಟ್ಟಿಗೆ ಅಳವಡಿಸಬೇಕು. ಮಕ್ಕಳ ಸಂರಕ್ಷಣೆಗೆ ಸಂಬಂಧಪಟ್ಟಂತೆ ಗ್ರಾಮ ಪಂಚಾಯತ್ ಮಟ್ಟದಲ್ಲಿ ರಚಿಸಲಾಗಿರುವ ಮಹಿಳೆಯರ ಮತ್ತು ಮಕ್ಕಳ ರಕ್ಷಣಾ ಸಮಿತಿಯ ಸಭೆಗಳನ್ನು ತ್ರೈಮಾಸಿಕವಾಗಿ ನಡೆಸಿ, ಸಭೆಯಲ್ಲಿ ಸಲ್ಲಿಕೆಯಾಗುವ ದೂರುಗಳನ್ನು ತೆಗೆದುಕೊಂಡು ವರದಿ ನೀಡುವಂತೆ ಜಿಲ್ಲಾಧಿಕಾರಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಡಾ. ಶಿವರಾಮ ಕಾರಂತ ಥೀಮ್ ಪಾರ್ಕ್ಗೆ ಸಹಾಯಕ ಕಮೀಷನರ್ ರಾಜು ಕೆ. ಅವರು ಭೇಟಿ ನೀಡಿದರು. ಥೀಮ್ ಪಾರ್ಕ್ಗೆ ಆಗಮಿಸುವ ರಸ್ತೆಯ ಸಮಸ್ಯೆಯ ಬಗ್ಗೆ ವೀಕ್ಷಿಸಿದರು. ನಂತರ ಕಾರಂತ ಥೀಮ್ ಪಾರ್ಕ್ನಲ್ಲಿ ಕಾರಂತರ ಪುತ್ಥಳಿ, ನೂತನವಾಗಿ ನಿರ್ಮಾಣವಾಗುತ್ತಿರುವ ಸಂಗೀತ ಕಾರಂಜಿ ಬಗ್ಗೆ ಮಾಹಿತಿ ಪಡೆದುಕೊಂಡರು. ಅಂಗನವಾಡಿ, ಗ್ರಂಥಾಲಯ, ರಂಗಮಂದಿರ, ಆರ್ಟ್ಗ್ಯಾಲರಿ, ವೀಕ್ಷಿಸಿದರು. ಕಾರಂತರ ಕಾದಂಬರಿಗಳ ಪಾತ್ರಗಳು ನಮ್ಮೊಳಗಿನ ವ್ಯಕ್ತಿಯ ಚಿತ್ರಣಗಳು ಅನಾವರಣಗೊಳ್ಳುವಂತೆ ಭಾಸವಾಗುವುದಲ್ಲದೇ, ಸಮಾಜದಲ್ಲಿನ ಸಮಸ್ಯೆಗಳನ್ನು ಕಾದಂಬರಿ ಮೂಲಕ ಓದುಗರಿಗೆ ಅರ್ಥ ಮಾಡಿಸಲು ಪ್ರಯತ್ನಿಸಿದ್ದಾರೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಕಾರಂತ ಥೀಮ್ ಪಾರ್ಕ್ ವಿಶೇಷ ಕರ್ತವ್ಯಾಧಿಕಾರಿ ಪೂರ್ಣಿಮಾ, ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಅಶ್ವಿನಿ, ಉಪಾಧ್ಯಕ್ಷ ವಾಸು ಪೂಜಾರಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶೈಲಾ ಎಸ್ ಪೂಜಾರಿ, ಕೋಟ ಕಂದಾಯ ನಿರೀಕ್ಷಕರಾದ ರಾಜು, ಗ್ರಾಮ ಲೆಕ್ಕಾಧಿಕಾರಿ ಚೆಲುವರಾಜ್, ಕೋಟ ಹೋಬಳಿಯ ಕೃಷಿ ಅಧಿಕಾರಿ ಸುಪ್ರಭಾ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕ್ರೀಡೆಯಿಂದ ಅದೆಷ್ಟೋ ಯುವಜನತೆ ಭವಿಷ್ಯವನ್ನು ರೂಪಿಸಿಕೊಂಡಿದ್ದಾರೆ. ವಿದ್ಯಾರ್ಥಿಗಳು ಕ್ರೀಡಾಸ್ಫೂರ್ತಿಯನ್ನು ಮೆರೆಯುವುದರ ಜೊತೆಗೆ ತಮ್ಮ ವ್ಯಕ್ತಿತ್ವ ಮತ್ತು ಬದುಕನ್ನು ಕಟ್ಟಿಕೊಳ್ಳಬೇಕು ಎಂದು ಲೆಕ್ಕಪರಿಶೋಧಕರು ಹಾಗೂ ತೆರಿಗೆ ಸಲಹೆಗಾರರಾದ ಗಣೇಶ್ ಶೆಟ್ಟಿ ಮೊಳಹಳ್ಳಿ ಹೇಳಿದರು. ಅವರು ಮಂಗಳೂರು ವಿ.ವಿ.ಯ ದೈಹಿಕ ಶಿಕ್ಷಣ ವಿಭಾಗ ಹಾಗೂ ಡಾ. ಬಿ. ಬಿ. ಹೆಗ್ಡೆ ಕಾಲೇಜಿನ ಆಶ್ರಯದಲ್ಲಿ ನಡೆದ ವಿಶ್ವವಿದ್ಯಾನಿಲಯ ವ್ಯಾಪ್ತಿಯ ಕುಂದಾಪುರ ವಲಯ ಅಂತರ್ಕಾಲೇಜು ಮಹಿಳೆಯರ ತ್ರೋಬಾಲ್ ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡಿದರು. ಕುಂದಾಪುರ ಎಜ್ಯುಕೇಶನ್ ಸೊಸೈಟಿ ರಿ. ಇದರ ಕಾರ್ಯದರ್ಶಿಗಳಾದ ಸೀತಾರಾಮ ನಕ್ಕತ್ತಾಯ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಸ.ಪ್ರ.ದ. ಕಾಲೇಜು ಹೆಬ್ರಿಯ ದೈಹಿಕ ಶಿಕ್ಷಣ ನಿರ್ದೇಶಕ ಅರುಣ್ ಕುಮಾರ್ ಶೆಟ್ಟಿ, ಸ.ಪ್ರ.ದ. ಕಾಲೇಜು ಕೋಟೇಶ್ವರ ಇಲ್ಲಿನ ದೈಹಿಕ ಶಿಕ್ಷಣ ನಿರ್ದೇಶಕ ರಮೇಶ್, ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ರಂಜಿತ್ ಟಿ. ಎನ್., ಕ್ರೀಡಾ ಸಂಘದ ಕಾರ್ಯದರ್ಶಿ ವಿದ್ಯಾರ್ಥಿ ಲಕ್ಷ್ಮೀಶ್ ಮಂಜ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಪ್ರಾಕ್ತನ ವಿದ್ಯಾರ್ಥಿ ವೀರಯೋಧ ಪ್ರಶಾಂತ್…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ನಾಲ್ಕು ದಶಕ ಗಳಿಂದ ರಂಗಭೂಮಿಯಲ್ಲಿ ಕ್ರಿಯಾಶೀಲ ವಾಗಿರುವ ಲಾವಣ್ಯದ 44ನೇ ವಾರ್ಷಿಕೋತ್ಸವ ಮತ್ತು ರಂಗ ವೈವಿಧ್ಯ-2021 ಇದೇ 27ರಿಂದ ಮಾರ್ಚ್ 3ರ ವರೆಗೆ ಇಲ್ಲಿನ ಶಾರದಾ ವೇದಿಕೆಯಲ್ಲಿ ನಡೆಯಲಿದೆಎಂದು ಸಂಸ್ಥೆಯ ಅಧ್ಯಕ್ಷ ಎಚ್. ಉದಯ ಆಚಾರ್ ತಿಳಿಸಿದರು. ಬೈಂದೂರು ಪ್ರೆಸ್ ಕ್ಲಬ್ನಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ವಿವರ ನೀಡಿದರು. 27ರ ಸಂಜೆ 7.30ಕ್ಕೆ ಮಾಜಿ ಶಾಸಕ ಕೆ. ಲಕ್ಷ್ಮೀನಾರಾಯಣ ಸಮಾರಂಭ ಉದ್ಘಾಟಿಸುವರು. ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ಅತಿಥಿಗಳಾಗಿರುವರು. ಸಿ. ಎನ್. ಅಶ್ವಥ್ ಅವರ ‘ಕೃಷ್ಣ ಸಂಧಾನ’ ನಾಟಕವನ್ನು ಲಾವಣ್ಯ ಕಲಾವಿದರು ಪ್ರಸ್ತುತಪಡಿಸುವರು. ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಯು. ಶ್ರೀನಿವಾಸ ಪ್ರಭು, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಡೆದ ಶ್ರೀಪತಿ ಹೆಗಡೆ ಹಕ್ಲಾಡಿ ಮತ್ತು ಉದಯ ಪಡಿಯಾರ್ ಅವರನ್ನು ಸನ್ಮಾನಿಸಲಾಗುವುದು ಎಂದರು. 28ರಂದು ‘ನೃತ್ಯ ನಿಕೇತನ ಕೊಡವೂರು‘ ತಂಡದಿಂದ ಸುಧಾ ಆಡುಕಳ ಅವರ ‘ನಾರಸಿಂಹ’ನೃತ್ಯ ನಾಟಕ, ಮಾರ್ಚ್ 1ರಂದು ಶಿವಮೊಗ್ಗದ ‘ರಂಗಾಯಣ‘ ತಂಡದಿಂದ ಎಸ್.…
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಸದಸ್ಯರಿಗೆ ಒಂದು ದಿನದ ತರಬೇತಿ ಕಾರ್ಯಕ್ರಮ ಗಂಗೊಳ್ಳಿ ರಥಬೀದಿಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಜರಗಿತು. ಕುಂದಾಪುರ ಸೌಹಾರ್ದ ಸಹಕಾರಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿವಾನಂದ ಪೂಜಾರಿ ಕಾರ್ಯಕ್ರಮ ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಯಾಗಿದ್ದ ಉಮೇಶ್ ತರಬೇತಿ ಕಾರ್ಯಕ್ರಮ ನಡೆಸಿಕೊಟ್ಟರು. ಶಾಲೆಯ ಎಸ್ಡಿಎಂಸಿ ಅಧ್ಯಕ್ಷೆ ವನಜಾ, ಗಂಗೊಳ್ಳಿ ಸಿಆರ್ಪಿ ಸೌಪರ್ಣಿಕಾ, ಮುಖ್ಯ ಶಿಕ್ಷಕಿ ಚಂದ್ರಕಲಾ, ಸಹಶಿಕ್ಷಕಿ ಪ್ರೇಮಲತಾ, ಅಂಗನವಾಡಿ ಕಾರ್ಯಕರ್ತೆ ಫಿಲೋಮಿನಾ ಫೆರ್ನಾಂಡಿಸ್, ಎಸ್ಡಿಎಂಸಿ ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ನವದೆಹಲಿ ರಾಷ್ಟ್ರೀಯ ಮೀನುಗಾರರ ಸಂಘದ ರಾಜ್ಯ ಉಪಾಧ್ಯಕ್ಷರಾಗಿ ಯೋಗಿಶ್ ಶಿರೂರು ಆಯ್ಕೆಯಾಗಿದ್ದಾರೆ. ಅವರನ್ನು ರಾಷ್ಟ್ರೀಯ ಅಧ್ಯಕ್ಷ ಯು. ಆರ್ ಸಭಾಪತಿ ಮತ್ತು ರಾಜ್ಯಾಧ್ಯಕ್ಷ ರಾಮು ಮೊಗೇರ ನೇಮಕ ಮಾಡಿದ್ದಾರೆ.
