Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಭೂಮಿ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಲಿ. ಸೊಸೈಟಿಯನ್ನು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕರಾದ ಎಸ್. ರಾಜು ಪೂಜಾರಿ ಉದ್ಘಾಟಿಸಿದರು. ಭದ್ರತಾ ಕೋಶವನ್ನು ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತದ ನಿರ್ದೇಶಕರಾದ ಮಂಜುನಾಥ್ ಎಸ್ ಕೆ. ಉದ್ಘಾಟಿಸಿ, ಉಡುಪಿ ಜಿಲ್ಲಾ ಸೌಹಾರ್ದ ಸಂಯೋಜಕರಾದ ವಿಜಯ್ ಬಿ.ಎಸ್ ಇ ಬ್ಯಾಂಕಿಂಗ್ ಸೌಲಭ್ಯಕ್ಕೆ ಚಾಲನೆ ನೀಡಿದರು. ಸಭಾ ಕಾರ್ಯದಲ್ಲಿ ಮಾತನಾಡಿದ ಎಸ್. ರಾಜು ಪೂಜಾರಿ, ಭೂಮಿ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಸುಸಜ್ಜಿತವಾಗಿ ರೂಪುಗೊಂಡಿದ್ದು, ಬಡವರಿಗೆ ಉತ್ತಮ ರೀತಿಯಲ್ಲಿ ನೆರವಾಗಲಿದೆ ಎಂದರು. ಸೊಸೈಟಿಯ ಅಧ್ಯಕ್ಷರಾದ ವೀರೇಂದ್ರ ಎಸ್. ಪೂಜಾರಿ ಮಾತನಾಡಿ, ಉತ್ತಮ ಕೆಲಸಕ್ಕೆ ಕೈ ಹಾಕಿದ್ದು,ಅವರಿಗೆ ಯಶಸ್ಸು ಸಿಗಲಿ ಎಂದು ಹಾರೈಸಿದರು. ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿರ್ದೇಶಕರಾದ ಮಂಜುನಾಥ್ ಎಸ್ ಕೆ ಮಾತನಾಡಿ, ಗ್ರಾಮೀಣ ಭಾಗದಲ್ಲಿ ವಿಭಿನ್ನ ಆಲೋಚನೆ ಮೂಲಕ ಸಹಕಾರಿ ಕ್ರಾಂತಿ ಮಾಡುವ ಕೆಲಸ ಪ್ರಶಂಸನಾರ್ಹ. ಉತ್ತಮ ಸೇವೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ವಿಶ್ವಸಾಗರ ಕ್ರಿಕೆಟರ್ಸ್ಸ್ ಗಂಗೊಳ್ಳಿ ಇವರ ಆಶ್ರಯದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ಅಯೋಧ್ಯೆ ಶ್ರೀ ರಾಮ ಮಂದಿರ ಕಟ್ಟಡ ನಿರ್ಮಾಣ ಸಹಾಯಾರ್ಥ ಜರಗಿದ ವಲಯ ಮಟ್ಟದ ಟೆನಿಸ್ ಬಾಲ್ ಕ್ರಿಕೆಟ್ ಪಂದ್ಯಾಟದಲ್ಲಿ ಗಂಗೊಳ್ಳಿಯ ವಿಶ್ವಸಾಗರ ಮ್ಯಾಂಗನೀಸ್ ರೋಡ್ ತಂಡ ಪ್ರಥಮ ಸ್ಥಾನಿಯಾಗಿ ‘ಅಯೋಧ್ಯೆ ಟ್ರೋಫಿ’ಯನ್ನು ತನ್ನದಾಗಿಸಿಕೊಂಡಿದೆ. ಗಂಗೊಳ್ಳಿಯ ವಿಶ್ವಸಾಗರ ಮ್ಯಾಂಗನೀಸ್ ರೋಡ್ ತಂಡವು ಫ್ರೆಂಡ್ಸ್ ಬೆಣ್ಗೆರೆ ತಂಡವನ್ನು ಸೋಲಿಸಿ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತು. ಫ್ರೆಂಡ್ಸ್ ಬೆಣ್ಗೆರೆ ತಂಡದ ಪ್ರಜ್ವಲ್ ಮೇಸ್ತ ಬೆಸ್ಟ್ ಆಲ್‌ರೌಂಡರ್ ಮತ್ತು ಪಾಂಡುರಂಗ ಉತ್ತಮ ಗೂಟರಕ್ಷಕ ಪ್ರಶಸ್ತಿಯನ್ನು ಪಡೆದುಕೊಂಡರೆ, ವಿಶ್ವಸಾಗರ ಮ್ಯಾಂಗನೀಸ್ ರೋಡ್ ತಂಡದ ಗುರು ಉತ್ತಮ ದಾಂಡಿಗ ಹಾಗೂ ವಿವೇಕ ಕಲೈಕಾರ್ ಉತ್ತಮ ಎಸೆತಗಾರ ಪ್ರಶಸ್ತಿಯನ್ನು ಪಡೆದುಕೊಂಡರು. ಸಮಾರೋಪ ಸಮಾರಂಭದಲ್ಲಿ ದುಬೈ ಕದಂ ಗೌರವಾಧ್ಯಕ್ಷ ಶೀನ ದೇವಾಡಿಗ ಮತ್ತು ತಲ್ಲೂರು ಸಪ್ತಸ್ವರ ವಿವಿಧೋದ್ದೇಶ ಸಹಕಾರಿ ಸಂಘದ ಪ್ರಧಾನ ಕಾರ್ಯದರ್ಶಿ ರವಿ ದೇವಾಡಿಗ ವಿಜೇತ ತಂಡಗಳಿಗೆ ಬಹುಮಾನ ವಿತರಿಸಿದರು. ಗಂಗೊಳ್ಳಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ನಿಮಾನ್ಸ್ ಬೆಂಗಳೂರು ಸಹಯೋಗದೊಂದಿಗೆ ಅನುಷ್ಠಾನಗೊಂಡಿರುವ ಯುವಸ್ಪಂದನ ಕಾರ್ಯಕ್ರಮದಡಿಯಲ್ಲಿ ನಡೆದ ವೈಯಕ್ತಿಕ ಹಾಗೂ ಗುಂಪು ಸ್ಪರ್ಧೆಗಳಲ್ಲಿ ಉಡುಪಿ ಜಿಲ್ಲಾ ತಂಡ ವಿವಿಧ ಪ್ರಶಸ್ತಿಗಳನ್ನು ಪಡೆದುಕೊಂಡಿದೆ. ವೈಯಕ್ತಿಕ ವಿಭಾಗದಲ್ಲಿ ಅತ್ಯುತ್ತಮ ಲೇಖನ – ಯುವ ಸ್ಪಂದನ ಶ್ಯಾಮಲಾ ಕಿರಣ್ ಪ್ರಥಮ, ಅತ್ಯುತ್ತಮ ಲೇಖನ ಚಟುವಟಿಕೆ ಜ್ಯೋತಿ ಪ್ರಶಾಂತ್ ಪ್ರಥಮ ಹಾಗೂ ಗುಂಪು ಚಟುವಟಿಕೆಯಲ್ಲಿ ಯುವಸ್ಪಂದನ ವಿಡಿಯೋ ಪ್ರಥಮ, ಭಿತ್ತಿಪತ್ರ ರಚನೆಯಲ್ಲಿ ದ್ವಿತೀಯ ಸ್ಥಾನವನ್ನು ಗಳಿಸಿರುತ್ತದೆ. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಬೆಂಗಳೂರು ಇಲ್ಲಿ ನಡೆದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಕೆ. ಸಿ ನಾರಾಯಣ ಗೌಡ ಪ್ರಶಸ್ತಿ ಪ್ರಧಾನ ನೆರವೇರಿಸಿದರು. ಈ ಸಂದರ್ಭದಲ್ಲಿ ಅಪರ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯುಕ್ತ ಕೆ ಶ್ರೀನಿವಾಸ್, ಬೆಂಗಳೂರು ನಿಮಾನ್ಸ್ ನಿರ್ದೇಶಕ ಡಾ. ಗುರುರಾಜ್,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಕಾರ್ಯಕ್ರಮದ ಉದ್ಘಾಟನೆ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲ ಡಾ. ಎನ್. ಪಿ.ನಾರಾಯಣ ಶೆಟ್ಟಿ, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ತರಬೇತಿಯೊಂದಿಗೆ ಸಾಕಷ್ಟು ಪ್ರಯತ್ನ ಮತ್ತು ತಯಾರಿ ಬೇಕಾಗುತ್ತದೆ. ಅದಕ್ಕೆ ಪೂರಕವಾಗಿ ನಿಮ್ಮ ಪರಿಶ್ರಮ ಇರಲಿ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ. ಜಿ. ಎಂ. ಗೊಂಡ ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ: ಆಳ್ವಾಸ್ ಎಂಬಿಎ ವಿಭಾಗದ ವತಿಯಿಂದ ಅತಿಥಿ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ನಿವೃತ್ತ ಐಆರ್‌ಎಸ್ ಅಧಿಕಾರಿ ಜಯಪ್ರಕಾಶ್ ರಾವ್ ಮಾತನಾಡಿ, ಯೋಚಿತ ಯೋಜನೆಗಳನ್ನು ಕಾರ‍್ಯರೂಪಕ್ಕೆ ತರುವ ಹಠ ನಮ್ಮಲ್ಲಿ ಬೆಳೆಸಿಕೊಳ್ಳಬೇಕು. ನಮ್ಮ ಜನನಾಯಕರನ್ನು ಆಯ್ಕೆ ಮಾಡುವಾಗ ಅವರು ತಮ್ಮ ಕ್ಷೇತ್ರದಲ್ಲಿ ಯಾವ ಪ್ರಮಾಣದ ಅಭಿವೃದ್ಧಿ ಮಾಡುತ್ತಾರೆ ಎನ್ನುವ ಆಧಾರದ ಮೇಲೆ ಆಯ್ಕೆ ಮಾಡಬೇಕೆ ಹೊರತು ಜಾತಿ, ಧರ್ಮ ನೋಡಿ ಆಯ್ಕೆ ಮಾಡಬಾರದು. ನಮ್ಮ ಭವಿಷ್ಯ ನಮ್ಮ ಕೈಯಲ್ಲಿದೆ ಅದನ್ನು ನಾವೇ ರೂಪಿಸಬೇಕು ಎಂದರು. ಔಪಚಾರಿಕ ಶಿಕ್ಷಣದಲ್ಲಿ ಕಲಿತ ವಿದ್ಯೆಯನ್ನು ನಾವು ಜೀವನದಲ್ಲಿ ಎಷ್ಟು ಅಳವಡಿಸಿಕೊಳ್ಳುತ್ತವೆಯೋ ಅಷ್ಟು ಉನ್ನತಿಯನ್ನು ಹೊಂದಲು ಸಾಧ್ಯ. ನಮಗೆ ಶಿಕ್ಷಣ ನೀಡಿದ ಶಿಕ್ಷಕರಿಗೆ, ಆಹಾರ ಪದಾರ್ಥಗಳನ್ನು ನೀಡುವ ರೈತರಿಗೆ ಮತ್ತು ದೇಶ ಕಾಯುವ ಯೋಧರಿಗೆ ನಾವು ಸದಾ ಕೃತಜ್ಞರಾಗಿರಬೇಕು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಮ್ಯಾನೇಜ್ಮೆಂಟ್ ಟ್ರಸ್ಟ್ ವಿವೇಕ್ ಆಳ್ವ ಅಧ್ಯಕ್ಷತೆ ವಹಿಸಿದರು. ಕಾರ್ಯಕ್ರಮದಲ್ಲಿ ಎಂಬಿಏ ವಿಭಾಗದ ಸಂಯೋಜಕಿ ಡಾ. ಕ್ಲಾರೆಟ್ ಮೆಂಡೊನ್ಸಾ,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಕಶ್ವಿ ಚೆಸ್ ಸ್ಕೂಲ್‌ನಲ್ಲಿ ಸಾಧಕರಿಗೆ ಶನಿವಾರ ಉತ್ತಮ ಸಾಧಕ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕಶ್ವಿ ಚೆಸ್ ಸ್ಕೂಲ್‌ನ ವಿದ್ಯಾರ್ಥಿಗಳಾದ ಬ್ರಹ್ಮಾವರ ಲಿಟಲ್ ರಾಕ್ ಇಂಡಿಯನ್ ಆಂಗ್ಲ ಮಾಧ್ಯಮ ಶಾಲೆಯ ಸನಾ ಶೆಟ್ಟಿ (ಡೈಮಂಡ್ ಗ್ರೂಪ್), ಯುರೋ ಆಂಗ್ಲ ಮಾಧ್ಯಮ ಶಾಲೆ ದಾವಣಗೆರೆ ಯ ನಿಶ್ಚಲ್ ಜಿ. ಎಸ್. (ಗೋಲ್ಡನ್ ಗ್ರೂಪ್) ಬ್ರಹ್ಮಾವರ ಲಿಟಲ್ ರಾಕ್ ಇಂಡಿಯನ್ ಆಂಗ್ಲ ಮಾಧ್ಯಮ ಶಾಲೆಯ ಮನನ್ ಶೆಟ್ಟಿ (ಸಿಲ್ವರ್ ಗ್ರೂಪ್) ಅವರುಗಳ ಸತತ ಪರಿಶ್ರಮ ಮತ್ತು ಚೆಸ್ ಆಟದಲ್ಲಿನ ತಲ್ಲೀನತೆಯನ್ನು ಉತ್ತೇಜಿಸುವ ಸಲುವಾಗಿ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಬಿಪಿಎಲ್ ಕಾರ್ಡಿಗೆ ಅರ್ಜಿ ಸಲ್ಲಿಸುವ ಕಾರ್ಯ ಪುನರ್ ಪ್ರಾರಂಭಿಸಲಾಗಿದ್ದು, ಸಾರ್ವಜನಿಕರಿಗೆ ಹೊಸದಾಗಿ ಆದ್ಯತಾ ಪಡಿತರ ಚೀಟಿ ಹೊಂದಲು ಅವಕಾಶ ಕಲ್ಪಿಸಲಾಗಿದೆ. ಈ ಕೆಳಕಂಡ ಮಾನದಂಡಗಳನ್ನು ಹೊಂದಿರುವವರು ಆದ್ಯತಾ ಪಡಿತರ ಚೀಟಿ ಹೊಂದಲು ಅರ್ಹರಾಗಿರುವುದಿಲ್ಲ ವೇತನವನ್ನು ಗಣನೆಗೆ ತೆಗೆದುಕೊಳ್ಳದೆ ಎಲ್ಲಾ ಖಾಯಂ ನೌಕರರು ಅಂದರೆ ಸರ್ಕಾರದ ಅಥವಾ ಸರ್ಕಾರದಿಂದ ಅನುದಾನ ಪಡೆಯುತ್ತಿರುವ ಸಂಸ್ಥೆಗಳು ಅಥವಾ ಸರ್ಕಾರಿ ಪ್ರಾಯೋಜಿತ, ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು/ ಮಂಡಳಿಗಳು/ ನಿಗಮಗಳು/ ಸ್ವಾಯತ ಸಂಸ್ಥೆಗಳು ಇತ್ಯಾದಿ ಒಳಗೊಂಡಂತೆ ಆದಾಯ ತೆರಿಗೆ / ಸೇವಾ ತೆರಿಗೆ / ವ್ಯಾಟ್/ ವೃತ್ತಿ ತೆರಿಗೆ ಪಾವತಿಸುವ ಎಲ್ಲಾ ಕುಟುಂಬಗಳು, ಗ್ರಾಮೀಣ ಭಾಗದಲ್ಲಿ ಮೂರು ಹೆಕ್ಟೇರ್ ಒಣಭೂಮಿ ಅಥವಾ ತತ್ಸಮಾನ ನೀರಾವರಿ ಭೂಮಿ ಹೊಂದಿರುವ ಕುಟುಂಬಗಳು ಅಥವಾ ಗ್ರಾಮೀಣ ಪ್ರದೇಶವನ್ನು ಹೊರತುಪಡಿಸಿ ನಗರ ಪ್ರದೇಶದಲ್ಲಿ ಒಂದು ಸಾವಿರ ಚದರ ಅಡಿಗಿಂತಲೂ ಹೆಚ್ಚಿನ ವಿಸ್ತೀರ್ಣದ ಪಕ್ಕಾ ಮನೆಯನ್ನು ಸ್ವಂತವಾಗಿ ಹೊಂದಿರುವ ಕುಟುಂಬಗಳು , ಜೀವನೋಪಾಯಕ್ಕಾಗಿ ಸ್ವಂತ ಓಡಿಸುವ ಒಂದು ವಾಣಿಜ್ಯ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಆರ್ಥಿಕವಾಗಿ ಸಂಸ್ಥೆಯನ್ನು ಕಟ್ಟಿ ಸದೃಢವಾಗಿ ಬೆಳೆಸಿದ ಸಂಸ್ಥೆಯ ಸ್ಥಾಪಕರು ಹಾಗೂ ಸಂಸ್ಥೆಯಲ್ಲಿ ಸೇವೆ ಸಲ್ಲಿಸಿದವರನ್ನು ಸ್ಮರಿಸಿಕೊಳ್ಳಬೇಕು. ಸಂಸ್ಥಾಪಕರ ಧ್ಯೇಯೋದ್ದೇಶಗಳನ್ನು ಈಡೇರಿಸುವಲ್ಲಿ ಆಡಳಿತ ವರ್ಗ ಶ್ರಮಿಸಬೇಕು. ಅನೇಕ ಕುಟುಂಬಗಳಿಗೆ ಬೆಳಕಾಗಿ, ಜನರ ಆಶೋತ್ತರಗಳಿಗೆ ಸ್ಪಂದಿಸುತ್ತಾ ಸಹಕಾರಿ ರಂಗದಲ್ಲಿ ವಿಶಿಷ್ಟ ಸೇವೆ ಸಲ್ಲಿಸುತ್ತಿರುವ ಗಂಗೊಳ್ಳಿ ಸೇವಾ ಸಹಕಾರಿ ಬ್ಯಾಂಕ್ ಅಮೃತ ಮಹೋತ್ಸವ ವರ್ಷ ಆಚರಿಸುತ್ತಿರುವುದು ಗ್ರಾಹಕರು ಈ ಸಂಸ್ಥೆಯ ಮೇಲೆ ಇಟ್ಟಿರುವ ಪ್ರೀತಿ, ವಿಶ್ವಾಸಕ್ಕೆ ಸಾಕ್ಷಿಯಾಗಿದೆ ಎಂದು ಸ್ಟೇಟ್ ಬ್ಯಾಂಕಿನ ನಿವೃತ್ತ ಅಧಿಕಾರಿ ಗಣಪತಿ ಶೇರುಗಾರ್ ಗಂಗೊಳ್ಳಿ ಹೇಳಿದರು. ಅವರು ಗಂಗೊಳ್ಳಿಯ ಶ್ರೀ ಶಾರದಾ ಮಂಟಪದಲ್ಲಿ ಗಂಗೊಳ್ಳಿ ಸೇವಾ ಸಹಕಾರಿ ಬ್ಯಾಂಕಿನ ಅಮೃತ ಮಹೋತ್ಸವ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿದರು. ಬ್ಯಾಂಕಿನ ಅಧ್ಯಕ್ಷ ಆನಂದ ಬಿಲ್ಲವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ವಾಸುದೇವ ಶೇರುಗಾರ್, ನಿರ್ದೇಶಕರಾದ ಹರೀಶ ಮೇಸ್ತ, ಮಾಧವ ಖಾರ್ವಿ, ಶ್ರೀನಿವಾಸ ಜತ್ತನ್, ಚಂದ್ರಶೇಖರ ಪೂಜಾರಿ, ನಾಗರಾಜ ಪೂಜಾರಿ, ಗೋಪಾಲ ನಾಯ್ಕ್, ಆಶಾಲತಾ, ಯಮುನಾ,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ವಿದ್ಯಾರ್ಥಿ ಜೀವನವು ಸೇವಾಭಾವ ಮತ್ತು ಪರಿಸರ ಕಾಳಜಿ ರೂಢಿಸಿಕೊಳ್ಳಲು ಸೂಕ್ತ ಘಟ್ಟ ಎಂದು ಕುಂದಾಪುರ ವಲಯ ಅರಣ್ಯಾಧಿಕಾರಿ ಪ್ರಭಾಕರ ಕುಲಾಲ್ ಹೇಳಿದರು. ಅವರು ಬೈಂದೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕವನ್ನು ಈಚೆಗೆ ಉದ್ಘಾಟಿಸಿ ಮಾತನಾಡಿದರು. ಅರಣ್ಯ ಇಲಾಖೆಯಲ್ಲಿ ಇರುವ ಹುದ್ದೆಗಳ ವಿವರ ಮತ್ತು ಉದ್ಯೋಗ ಮಾಹಿತಿ ನೀಡಿದರು.ಪ್ರಾಂಶುಪಾಲ ಡಾ. ರಘು ನಾಯ್ಕ ಅಧ್ಯಕ್ಷತೆ ವಹಿಸಿದ್ದರು. ಯೋಜನೆ ಘಟಕ–2ರ ಯೋಜನಾಧಿಕಾರಿ ಲತಾ ಪೂಜಾರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿದ್ಯಾರ್ಥಿನಿ ಸುಶ್ಮಿತಾ ಸ್ವಾಗತಿಸಿದರು. ರಮ್ಯಾ ನಾಯಕ್ ವಂದಿಸಿದರು. ಸೌಮ್ಯಾ ನಿರೂಪಿಸಿದರು. ಘಟಕ–1ರ ಯೋಜನಾಧಿಕಾರಿ ನಾಗರಾಜ ಶೆಟ್ಟಿ, ಉಪನ್ಯಾಸಕರು, ಘಟಕಗಳ ವಿದ್ಯಾರ್ಥಿ ಸದಸ್ಯರು ಇದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ರಸ್ತೆ ಅಪಘಾತದಲ್ಲಿ ಯುವಜನತೆಯೇ ಹೆಚ್ಚು ಸಾವಿಗೀಡಾಗುತ್ತಿರುವುದು ವಿಷಾದನೀಯ, ರಸ್ತೆಯ ಸಾಮಾನ್ಯ ನಿಯಮಗಳಾದ ಹೆಲ್ಮೆಟ್, ಸೀಟ್‌ಬೆಲ್ಟ್ ಧರಿಸುವುದು, ವೇಗದ ಮಿತಿ ಕಡಿಮೆಗೊಳಿಸುವುದು ಇಂತಹ ಸರಳ ನಿಯಮಗಳ ಮೂಲಕ ಅಮೂಲ್ಯವಾದ ಜೀವನ ರಕ್ಷಣೆಯಾಗಬೇಕು ಎಂದು ಕುಂದಾಪುರ ಸಂಚಾರಿ ಪೊಲೀಸ್ ಅಧಿಕಾರಿಯಾದ ಸುದರ್ಶನ್ ಡಿ. ಎನ್. ಹೇಳಿದರು. ಅವರು ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಯೋಜನಾ ಘಟಕ ಆಯೋಜಿಸಿದ ರಸ್ತೆ ಸುರಕ್ಷತಾ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಪೊಲೀಸ್ ಉಪನಿರೀಕ್ಷಕ, ಸದಾಶಿವ ಗವರೋಜಿ, ಪೊಲೀಸ್ ಸಿಬ್ಬಂದಿ ನವೀನ್ ಕೊಡ ಸಂಚಾರಿ ನಿಯಮಗಳ ಪಾಲನೆಯ ಅಗತ್ಯತೆಯ ಕುರಿತು ಮಾಹಿತಿ ನೀಡಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಪ ಪ್ರಾಂಶುಪಾಲರಾದ ಚೇತನ್ ಶೆಟ್ಟಿ ಕೋವಾಡಿ ಪ್ರಾಸ್ತಾವಿಸಿದರು. ಎನ್.ಎಸ್.ಎಸ್. ಯೋಜನಾಧಿಕಾರಿಯಾದ ಪ್ರವೀಣ್ ಮೊಗವೀರ ಗಂಗೊಳ್ಳಿ ಸ್ವಾಗತಿಸಿ, ಕನ್ನಡ ಉಪನ್ಯಾಸಕ ಸುಕುಮಾರ ಶೆಟ್ಟಿ ವಂದಿಸಿದರು. ಎನ್.ಎಸ್.ಎಸ್. ಸಹ ಯೋಜನಾಧಿಕಾರಿಯಾದ ರೇಷ್ಮಾ ಶೆಟ್ಟಿ ನಿರೂಪಿಸಿದರು.

Read More