Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಅಂಪಾರು ಗ್ರಾಮದ ಗುಡಿಬೆಟ್ಟು ಎಂಬಲ್ಲಿ ಸಾರ್ವಜನಿಕ ಸ್ಥಳದಲ್ಲಿ ಕೋಳಿ ಅಂಕ ಜುಗಾರಿ ನಡೆಯುತ್ತಿದ್ದಲ್ಲಿಗೆ ಕುಂದಾಪುರ ಗ್ರಾಮಾಂತರ ಪೊಲೀಸ್‌ ಠಾಣೆಯ ಸಹಾಯಕ ಪೊಲೀಸ್‌ ಉಪ ನಿರೀಕ್ಷಕರಾದ ಉಮೇಶ್ ನಾಯ್ಕ ಅವರು ದಾಳಿ ನಡೆಸಿ ಮೂವರನ್ನು ಬಂಧಿಸಿದ್ದಾರೆ. ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣಾ ಸಹಾಯಕ ಪೊಲೀಸ್ ಉಪನಿರೀಕ್ಷಕರಾದ ಉಮೇಶ್ ನಾಯ್ಕ ಅವರು ಠಾಣೆಯಲ್ಲಿರುವಾಗ ಅಂಪಾರು ಗ್ರಾಮದ ಗುಡಿಬೆಟ್ಟು ಎಂಬಲ್ಲಿರುವ ಸಾರ್ವಜನಿಕ ಸ್ಥಳದಲ್ಲಿ ಕೆಲವು ವ್ಯಕ್ತಿಗಳು ಸೇರಿ ಕೋಳಿ ಅಂಕ ಜುಗಾರಿ ಆಟ ಆಡುತ್ತಿರುವುದಾಗಿ ದಾಳಿ ನಡೆಸುವಂತೆ ಮೇಲಾಧಿಕಾರಿಗಳು ತಿಳಿಸಿದ ಮೇರೆಗೆ ಕೂಡಲೇ ಹಾಡಿಯ ಬಳಿ ತಲುಪಿ ನೋಡಿದಾಗ ಕೆಲವು ವ್ಯಕ್ತಿಗಳು, ಹಾಡಿ ಜಾಗದಲ್ಲಿ ಸೇರಿದ್ದು ಅದರಲ್ಲಿ ಇಬ್ಬರು ವ್ಯಕ್ತಿಗಳು 2 ಕೋಳಿ ಹುಂಜಗಳ ಕಾಲಿಗೆ ಬಾಳನ್ನು ಕಟ್ಟಿ ಜೂಜಾಟಕ್ಕೆ ಬಿಟ್ಟಿದ್ದು ಉಳಿದವರು ಸುತ್ತುವರೆದು ತಮ್ಮ ತಮ್ಮ ಕೋಳಿಗಳನ್ನು ಕೈ ನಲ್ಲಿ ಹಿಡಿದುಕೊಂಡು ಕಾದಾಟಕ್ಕೆ ಬಿಟ್ಟಿದ್ದ ಕೋಳಿಗಳ ಮೇಲೆ ಹಣವನ್ನು ಪಣವಾಗಿ ಕಟ್ಟಿ ಕೋಳಿ ಅಂಕ ಜುಗಾರಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ರಸ್ತೆಯಲ್ಲಿ ನಡೆದುಕೊಂಡು ಹೋಗುತಿದ್ದ ಮಹಿಳೆಯೊಬ್ಬರಿಗೆ ಓಮ್ನಿ ಕಾರು ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಸಾವನ್ನಪ್ಪಿದ ಘಟನೆ ಗುರುವಾರ ಬೆಳಗ್ಗೆ ತಾಲೂಕಿನ ಬೀಜಾಡಿ ಗ್ರಾಮದ ಅರಸರಬೆಟ್ಟು ಕ್ರಾಸ್ ಬಳಿ ನಡೆದಿದೆ. ಮೃತರನ್ನು ಗೋಪಾಡಿ ಗ್ರಾಮದ ಚಂದ್ರಮತಿ (78) ಎಂದು ಗುರುತಿಸಲಾಗಿದೆ. ಅವರು ಬೀಜಾಡಿ ಕಡೆಯಿಂದ ಕೊಟೇಶ್ವರ ರಥಬೀದಿ ಕಡೆಗೆ ನಡೆದುಕೊಂಡು ಹೋಗುತಿದ್ದಾಗ ಅದೇ ದಾರಿಯಲ್ಲಿ ಅತಿ ವೇಗವಾಗಿ ಅಜಾಗರೂಕತೆಯಿಂದ ರಾಘವೇಂದ್ರ ಅವರು ಚಲಾಯಿಸುತ್ತಿದ್ದ ಓಮ್ನಿ ಕಾರು ಹಿಂದಿನಿಂದ ಡಿಕ್ಕಿ ಹೊಡೆದ  ಪರಿಣಾಮ, ರಸ್ತೆಗೆ ಬಿದ್ದು ತಲೆಗೆ ಗಂಭೀರ ಗಾಯಗೊಂಡು ಪ್ರಜ್ಞೆ ಕಳೆದುಕೊಂಡ ಚಂದ್ರಮತಿ ಅವರನ್ನು ಕೂಡಲೇ ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಪರಿಕ್ಷೀಸಿದ ವೈದ್ಯರು ಅದಾಗಲೇ ಸಾವನ್ನಪ್ಪಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಕುಂದಾಪುರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಸಕಾಲಿಕ  ಮಳೆ ಮತ್ತು ಸಮೃದ್ಧ ಬೆಳೆಗಾಗಿ ಜಗದೊಡೆಯ ಶ್ರೀ ಮದ್ಯೋಗಾನಂದ ಗುರು ನರಸಿಂಹ ಮತ್ತು ಪರಿವಾರ ದೇವತೆಗಳಿಗೆ ವಿವಿಧ  ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಸೀಯಾಳ ಅಭಿಷೇಕವನ್ನು ಅನೂಚಾನವಾಗಿ ಸೋಮವಾರದಂದು ನಡೆಯಿತು. ಈ ಕಾರ್ಯಕ್ರಮದಲ್ಲಿ ಭಕ್ತಾಧಿಗಳು ಭಾಗವಹಿಸಿ ಶ್ರೀ ದೇವರಿಗೆ ಪ್ರಾರ್ಥನೆಯನ್ನು ಸಲ್ಲಿಸಿದರು. ಆಡಳಿತ ಮಂಡಳಿಯ ಅಧ್ಯಕ್ಷ ಪ್ರಕಾಶ ಕಾರಂತರು, ಉಪಾಧ್ಯಕ್ಷ ಸಿ. ಚಂದ್ರ ಶೇಖರ ಉಪಾಧ್ಯ, ಕಾರ್ಯದರ್ಶಿ ಪರಶುರಾಮ ಭಟ್ಟರು ಹಾಗೂ ಆಡಳಿತ ಮಂಡಳಿಯ ಸದಸ್ಯರಾದ ಕೆ. ತಾರಾನಾಥ ಹೊಳ್ಳ, ಪ್ರಸನ್ನ ತುಂಗ ಮತ್ತು ಕೃಷ್ಣ ಮೂರ್ತಿ ಉಪಸ್ಥಿತರಿದ್ದರು. ಸಾಲಿಗ್ರಾಮ ದೇವಸ್ಥಾನಕ್ಕೆ ಡಿಸಿ ಭೇಟಿ:ಸಾಲಿಗ್ರಾಮ ಶ್ರೀ ಗುರುನರಸಿಂಹ ದೇಗುಲಕ್ಕೆ ಉಡುಪಿ ಜಿಲ್ಲಾಧಿಕಾರಿ ಸ್ವರೂ ಟಿ.ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ದೇಗುಲದ ವತಿಯಿಂದ ಜಿಲ್ಲಾಧಿಕಾರಿಯವರಿಗೆ ಪ್ರಸಾದ ವಿತರಿಸಿ ಗೌರವಿಸಲಾಯಿತು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಕುಂದಾಪುರ ತಾಲೂಕು ಹವ್ಯಕ ಸಭಾ ರಿ. ಇದರ ವತಿಯಿಂದ ಇತ್ತೀಚಿಗೆ ನಿಧನರಾದ ನಿವೃತ್ತ ಉಪನ್ಯಾಸಕ, ಪತ್ರಕರ್ತರಾದ ಎಸ್. ಜನಾರ್ಧನ್ ಮರವಂತೆ ಅವರ ಶೃದ್ಧಾಂಜಲಿ ಸಭೆಯು ಉಪ್ಪುಂದದಲ್ಲಿ ನಡೆಯಿತು. ನಿವೃತ್ತ ಉಪನ್ಯಾಸಕರಾದ ಎಮ್.ವಿ. ನಾರಾಯಣ ಸ್ವಾಮೀ ಮೃತರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿ, ಎಸ್. ಜನಾರ್ಧನ್ ಅವರು ಮೃದು ಸ್ವಭಾವದವರು, ಸರಳ ಜೀವನ ಶೈಲಿ ಹೊಂದಿದ್ದರು ಹಾಗೂ ಶಿಕ್ಷಣ, ಸಾಮಾಜಿಕ ಸೇವೆ, ಪಂಚಾಯತ್‌ ರಾಜ್, ಪತ್ರಕರ್ತರಾಗಿ ಕಾರ್ಯನಿರ್ವಹಿಸಿ ಈ ಎಲ್ಲಾ ಕ್ಷೇತ್ರದ ಘನತೆಯನ್ನು ಹೆಚ್ಚಿಸಿ ರಾಜ್ಯ ಮಟ್ಟದ ಸಂಪನ್ಮೂಲ ವ್ಯಕ್ತಿಯಾಗಿರುವುದು ನಮಗೆ ಹಾಗೂ ಜಿಲ್ಲೆಗೆ ಹೆಮ್ಮೆಯಾಗಿರುತ್ತದೆ ಎಂದು ಹೇಳಿದರು. ಹವ್ಯಕ ಸಭಾ ರಿ. ಸಂಘದ ಅಧ್ಯಕ್ಷರಾದ ಎಮ್. ನಾಗರಾಜ್ ಭಟ್ ಮಕ್ಕಿದೇವಸ್ಥಾನ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ಗುರಿಕಾರರಾದ ಗಣೇಶ್ ಪುರಾಣಿಕ್, ಶ್ರೀಧರ ಜೋಶಿ, ಉಮೇಶ್‌ಚಂದ್ರ ಭಟ್, ಕೋಶಾಧಿಕಾರಿ ಬೇಳೂರು ಗಣೇಶ್ ರಾವ್, ಕೃಷ್ಣಮೂರ್ತಿ ಕರ್ಣಿಕ್, ವರದಾಂಭಿಕಾ ಭಟ್ ಉಪಸ್ಥಿತರಿದ್ದರು. ಮೃತರಿಗೆ ಒಂದು ನಿಮಿಷ ಮೌನ ಪ್ರಾರ್ಥನೆ ಸಲ್ಲಿಸಿ,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಜೂನ್ 21 ರಂದು ನಡೆಯಲಿರುವ ನೀಟ್ (ಯುಜಿ) ಮರು ಪರೀಕ್ಷೆಯಲ್ಲಿ ಯಾವುದೇ ಲೋಪದೋಷ ಉಂಟಾಗದಂತೆ ಪಾರದರ್ಶಕವಾಗಿ ಪರೀಕ್ಷೆ ನಡೆಸಲು ಅಗತ್ಯವಿರುವ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಗುರುವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ನೀಟ್ ಮರು ಪರೀಕ್ಷೆಯನ್ನು ಸುವ್ಯವಸ್ಥಿತವಾಗಿ ನಡೆಸುವ ಸಂಬಂಧ ಆಯೋಜಿಸಲಾದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ವತಿಯಿಂದ ನೀಟ್ ಮರು ಪರೀಕ್ಷೆಯು ಜೂನ್ 21 ರಂದು ಜಿಲ್ಲೆಯ ಒಟ್ಟು 6 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಜಿಲ್ಲೆಯಲ್ಲಿ 938 ಬಾಲಕರು, 2032 ಬಾಲಕಿಯರು, 7 ಪಿಡಬ್ಲ್ಯೂ ಬಿ.ಡಿ ಅಭ್ಯರ್ಥಿಗಳು ಹಾಗೂ 1 ಸ್ಕ್ರೆಬ್ ಸೌಲಭ್ಯ ಪಡೆದಿರುವ ಅಭ್ಯರ್ಥಿಗಳು ಸೇರಿದಂತೆ ಒಟ್ಟು 2970 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದು, ವಿದ್ಯಾರ್ಥಿಗಳಿಗೆ ಗೊಂದಲ ಉಂಟಾಗದಂತೆ ಪರೀಕ್ಷಾ ಕಾರ್ಯವನ್ನು ನಡೆಸಬೇಕು. ವಿದ್ಯಾರ್ಥಿಗಳು ಯಾವುದೇ ರೀತಿಯ ಗೊಂದಲವಾಗದಂತೆ ನಿರಾಳವಾಗಿ ಪರೀಕ್ಷೆ ಬರೆಯಲು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕೇಂದ್ರ ಸರ್ಕಾರವು ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಮೀಣ ಹಾಗೂ ನಗರ ಪ್ರದೇಶಗಳ ಸಂಪರ್ಕ ರಸ್ತೆಗಳ ಸುಧಾರಣೆಗೆ ಆಡಳಿತಾತ್ಮಕ ಅನುಮೋದನೆ ನೀಡಿದ್ದು, ಕೇಂದ್ರ ರಸ್ತೆ ಮತ್ತು ಮೂಲ ಸೌಕರ್ಯ ನಿಧಿ ಅಡಿಯಲ್ಲಿ (CRIF) ಒಟ್ಟು 68 ಕೋಟಿ ರೂ ವೆಚ್ಚದ ರಸ್ತೆ ಅಭಿವೃದ್ಧಿ ಯೋಜನೆಗೆ ಮಂಜೂರಾತಿ ನೀಡಲಾಗಿದೆ ಎಂದು ಸಂಸದ ಬಿ.ವ್ಯ ರಾಘವೇಂದ್ರ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಯೋಜನೆಯಡಿ ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಒಟ್ಟು 13 ಪ್ರಮುಖ ಕಾಮಗಾರಿ ಮೂಲಕ ವಿವಿಧೆಡೆ ಒಟ್ಟು 84.78ಕಿ.ಮೀ ಉದ್ದದ ರಸ್ತೆ ಅಭಿವೃದ್ಧಿ ಪಡಿಸಲಾಗುವುದು. ಜಿಲ್ಲೆಯ ಪ್ರಮುಖ ರಾಜ್ಯ ಹೆದ್ದಾರಿ ಮತ್ತು ಜಿಲ್ಲಾ ರಸ್ತೆಯನ್ನು ಈ ಅನುದಾನದ ಮೂಲಕ ಮೇಲ್ದರ್ಜೆಗೇರಿಸಲಾಗುವುದು. ಶಿವಮೊಗ್ಗ ನಗರ ಮತ್ತು ಗ್ರಾಮಾಂತರ, ಭದ್ರಾವತಿ, ಶಿಕಾರಿಪುರ, ಸೊರಬ, ಸಾಗರ, ತೀರ್ಥಹಳ್ಳಿ ಮತ್ತು ಬೈಂದೂರು ತಾಲ್ಲೂಕುಗಳಲ್ಲಿಯೂ ನಿಗದಿತ ರಸ್ತೆಗಳನ್ನು ಅಭಿವೃದ್ಧಿಪಡಿಸುವುದು ಮತ್ತು ಮರು ಡಾಂಬರೀಕರಣ ಮಾಡಲಾಗುವುದೆಂದು ಸಂಸದರು ಮಾಹಿತಿ ನೀಡಿದ್ದಾರೆ. ಈ ಪೈಕಿ ಬೈಂದೂರು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಗ್ರಾಮ ಪಂಚಾಯತ್ ಗಂಗೊಳ್ಳಿ ಇದರ 2026-27ನೇ ಸಾಲಿನ ಮಹಿಳಾ ಗ್ರಾಮಸಭೆ ಗಂಗೊಳ್ಳಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಬುಧವಾರ ನಡೆಯಿತು. ಗ್ರಾಮ ಪಂಚಾಯತ್ ಅಧ್ಯಕ್ಷೆ ಜಯಂತಿ ಖಾರ್ವಿ ಅಧ್ಯಕ್ಷತೆ ವಹಿಸಿದ್ದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ರೇಖಾ ಅವರು ಗೃಹಲಕ್ಷ್ಮೀ ಯೋಜನೆ, ಉದ್ಯೋಗಿನಿ ಯೋಜನೆ, ಮಾತೃವಂದನಾ ಯೋಜನೆ, ಗರ್ಭಿಣಿ ಮಹಿಳೆಯರಿಗೆ ಪೌಷ್ಠಿಕಾಂಶ ಆಹಾರ ಹಾಗೂ ಮಹಿಳೆ ಮತ್ತು ಮಕ್ಕಳ ಆಹಾರ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ ಶುಶ್ರೂಷಕಿ ಪ್ರಜ್ವಲಾ ಅವರು, ಆರೋಗ್ಯ ಇಲಾಖೆ ವಿವಿಧ ಕಾರ್ಯಕ್ರಮಗಳು ಹಾಗೂ ಯೋಜನೆಗಳ ಬಗ್ಗೆ ಮತ್ತು ಪಲ್ಸ್ ಪೊಲೀಯೊ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು. ಕುಟುಂಬ ಸಾಂತ್ವನ ಕೇಂದ್ರ ತಲ್ಲೂರು ಇದರ ಆಪ್ತ ಸಮಾಲೋಚಕಿ ಪೂರ್ಣಿಮಾ ಅವರು ಆಪ್ತ ಸಮಾಲೋಚನೆ ನಡೆಸಿ ಕಾನೂನು ನೆರವಿನ ಬಗ್ಗೆ ಮಾಹಿತಿ ನೀಡಿದರು. ಗ್ರಾಪಂ ಉಪಾಧ್ಯಕ್ಷ ತಬ್ರೇಜ್, ಪಿಡಿಒ ರವಿ, ಕಾರ್ಯದರ್ಶಿ ಅನೂಪ್ ಶೇಟ್, ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕತಾರ್: ಭಾರತೀಯ ರಾಯಭಾರ ಕಚೇರಿಯ ಆಶ್ರಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಭಾರತೀಯ ಸಾಂಸ್ಕೃತಿಕ ಕೇಂದ್ರದ (ಐಸಿಸಿ) ಅಂಗ ಸಂಸ್ಥೆಯಾದ ಕತಾರ್‌ನ ಪ್ರತಿಷ್ಠಿತ ಭಾರತೀಯ ಪ್ರವಾಸಿ ಸಂಘಟನೆ ‘ಕರ್ನಾಟಕ ಸಂಘ ಕತಾರ್’ (ಕೆಎಸ್‍ಕ್ಯೂ), ಇತ್ತೀಚೆಗೆ ಅಲ್ ವಕ್ರಾ ನಗರದ ಡಿಪಿಎಸ್ ಎಂಐಎಸ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ‘ಸಂಭ್ರಮ 2026’ ಭವ್ಯ ಸಂಗೀತ ರಸಸಂಜೆ ಕಾರ್ಯಕ್ರಮವು ಕತಾರ್‌ನಾದ್ಯಂತದ ಸಂಗೀತ ಪ್ರೇಮಿಗಳನ್ನು ಹಾಗೂ ಅನಿವಾಸಿ ಕನ್ನಡಿಗರನ್ನು ಮಂತ್ರಮುಗ್ಧಗೊಳಿಸಿತು. “ಕನ್ನಡದ ಧ್ವನಿ… ಹೃದಯಗಳ ಸಂಭ್ರಮ” ಎಂಬ ಆಶಯದೊಂದಿಗೆ ಆಯೋಜಿಸಲಾಗಿದ್ದ ಈ ಸಾಂಸ್ಕೃತಿಕ ಮಹೋತ್ಸವವು ಕರ್ನಾಟಕದ ಶ್ರೀಮಂತ ಗಾಯನ ಪರಂಪರೆಯನ್ನು ಅತ್ಯಂತ ಯಶಸ್ವಿಯಾಗಿ ಕತಾರ್ ನೆಲದಲ್ಲಿ ಅನಾವರಣಗೊಳಿಸಿತು. ಸಂಘದ ಸಾಂಸ್ಕೃತಿಕ ಕಾರ್ಯದರ್ಶಿ ಭಾವನಾ ನವೀನ್ ಅವರ ಸಾಂಪ್ರದಾಯಿಕ ಸ್ವಾಗತ ನುಡಿಗಳೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ದೊರೆಯಿತು. ತದನಂತರ ಜಂಟಿ ಸಾಂಸ್ಕೃತಿಕ ಹಾಗೂ ಕನ್ನಡ ಚಟುವಟಿಕೆಗಳ ಕಾರ್ಯದರ್ಶಿ ಶಶಿಧರ ಎಚ್.ಬಿ. ಅವರು ಸಭಾಂಗಣದ ಸುರಕ್ಷತಾ ನಿಯಮಾವಳಿಗಳು ಮತ್ತು ತುರ್ತು ನಿರ್ಗಮನದ ಕುರಿತು ವಿವರವಾದ ಮಾಹಿತಿ ನೀಡಿದರು. ಬಳಿಕ ಕತಾರ್‌ನ ಭಾರತೀಯ ರಾಯಭಾರ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಐಎಂಜೆ ಕಾಲೇಜ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ ಹಾಗೂ ಮೂಡ್ಲಕಟ್ಟೆ ಕಾಲೇಜ್ ಆಫ್ ಫಿಸಿಯೋಥೆರಪಿ, ಮೂಡ್ಲಕಟ್ಟೆ, ಕುಂದಾಪುರ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ 12ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ–2026 ಹಾಗೂ 10 ದಿನಗಳ ಯೋಗ ಶಿಬಿರಕ್ಕೆ ಬುಧವಾರ ಅತ್ಯಂತ ಉತ್ಸಾಹಭರಿತವಾಗಿ ಚಾಲನೆ ನೀಡಲಾಯಿತು. ಕಾರ್ಯಕ್ರಮವನ್ನು ಗಣ್ಯರು ಸಾಂಪ್ರದಾಯಿಕವಾಗಿ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಮುನಿಯಲ್ ಕಾಲೇಜ್ ಆಫ್ ಯೋಗ ಅಂಡ್ ನ್ಯಾಚುರೋಪತಿಯ ಉಪ ಪ್ರಾಂಶುಪಾಲರಾದ ಡಾ. ಸಾತಪ್ಪ ಹೂವಿನಹಳ್ಳಿ ಅವರು ಮಾತನಾಡಿ, ಯೋಗವು ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ವೃದ್ಧಿಸುವ ಅತ್ಯುತ್ತಮ ಸಾಧನವಾಗಿದ್ದು, ಪ್ರತಿಯೊಬ್ಬರೂ ತಮ್ಮ ದೈನಂದಿನ ಜೀವನದಲ್ಲಿ ಯೋಗವನ್ನು ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಮೂಡ್ಲಕಟ್ಟೆ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಪ್ರಾಂಶುಪಾಲರಾದ ಡಾ. ರಾಮಕೃಷ್ಣ ಹೆಗ್ಡೆ ಅವರು ಮಾತನಾಡಿ, ಯೋಗವು ಕೇವಲ ವ್ಯಾಯಾಮವಲ್ಲ, ಅದು ಸಮಗ್ರ ಜೀವನಶೈಲಿಯಾಗಿದ್ದು ವಿದ್ಯಾರ್ಥಿಗಳಲ್ಲಿ ಏಕಾಗ್ರತೆ, ಆತ್ಮವಿಶ್ವಾಸ ಮತ್ತು ಆರೋಗ್ಯಕರ ಮನೋಭಾವವನ್ನು ಬೆಳೆಸುತ್ತದೆ ಎಂದು ತಿಳಿಸಿದರು.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಹಿರಿಯ ಪತ್ರಿಕೋದ್ಯಮಿ, ಸಾಹಿತಿ, ಸಂಘಟಕ, “ಕುಂದಪ್ರಭ” ವಾರ ಪತ್ರಿಕೆಯ ಸಂಪಾದಕ ಕುಂಭಾಸಿ ನಿವಾಸಿ ಯು. ಸುರೇಂದ್ರ ಶೆಣೈ (ಯು. ಎಸ್. ಶೆಣೈ, ಗಂಗೊಳ್ಳಿ) ಅವರನ್ನು ಕುಂದಾಪುರ ತಾಲೂಕು 20ನೇ ಕನ್ನಡ ಸಾಹಿತ್ಯ ಸಮ್ಮೇಳನ “ನುಡಿ ಬೆಳಕು 2026” ರ ಸರ್ವಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ಉಡುಪಿ ಜಿಲ್ಲಾ ಕಸಾಪ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗರ ಉಪಸ್ಥಿತಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಕುಂದಾಪುರದ ಅಧ್ಯಕ್ಷ ಡಾ| ಉಮೇಶ ಪುತ್ರನ್ ಈ ಆಯ್ಕೆಯನ್ನು ಘೋಷಿಸಿದ್ದಾರೆ. ಸಾಹಿತ್ಯ ಪ್ರೇರಕರಾಗಿದ್ದು, ಹಲವಾರು ಸಾಹಿತ್ಯ ಕಾರ್ಯಕ್ರಮಗಳನ್ನು ಸಂಘಟಿಸಿ, ನೂರಾರು ಯುವ ಪ್ರತಿಭೆಗಳಿಗೆ ಸಾಹಿತ್ಯ ಕ್ಷೇತ್ರದಲ್ಲಿ ಮುನ್ನಡೆಯಲು ಮಾರ್ಗದರ್ಶನ, ಸ್ಫೂರ್ತಿ ನೀಡಿರುವ ಯು. ಎಸ್. ಶೆಣೈಯವರು ಕುಂದಾಪುರ ತಾಲೂಕಿನ ಭಾಷೆ, ಸಾಹಿತ್ಯ, ಸಂಸ್ಕೃತಿಯ ಉಳಿವಿಗಾಗಿ ಸಾಕಷ್ಟು ಶ್ರಮಿಸಿದವರು. ಬರಹಗಾರರ ಸಮ್ಮಿಲನಗಳ ಮೂಲಕ ಕುಂದಾಪುರ ತಾಲೂಕಿನ ಬರಹಗಾರರನ್ನು ಒಗ್ಗೂಡಿಸುತ್ತಾ ಬಂದಿದ್ದಾರೆ. “ಸಾಹಿತ್ಯ ಸಪ್ತಾಹ”, “ಕನ್ನಡ ಡಿಂಡಿಮ”, “ಪುಸ್ತಕ ಉತ್ಸವ”, “ನುಡಿ ಬೆಳಕು” ಮುಂತಾದ ನಿರಂತರ ಕಾರ್ಯಕ್ರಮಗಳ ಮೂಲಕ…

Read More