Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ನಗರದ ಚಿಕನ್‌ಸಾಲ್ ರಸ್ತೆಯ ಬಾಡಿಗೆ ಮನೆಯೊಂದರಲ್ಲಿ ಒಂಟಿಯಾಗಿದ್ದ ಬಾಲಕಿಗೆ ವ್ಯಕ್ತಿಯೊಬ್ಬ ಅತ್ಯಾಚಾರಕ್ಕೆ ಯತ್ನಿಸಿ ಪೊಲೀಸರಿಗೆ ಅತಿಥಿಯಾದ ಘಟನೆ ನಡೆದಿದೆ. ಅತ್ಯಾಚಾರಕ್ಕೆ ಯತ್ನಿಸಿ ಸಿಕ್ಕಿಬಿದ್ದ ವ್ಯಕ್ತಿಯನ್ನು ಬಿಸ್ವಾಸ್(35) ಎಂದು ಗುರುತಿಸಲಾಗಿದೆ. ಅಪ್ರಾಪ್ತ ಬಾಲಕಿಯ ಕುಟುಂಬ ಬಾಡಿಗೆ ಮನೆಯಲ್ಲಿ ವಾಸವಿದ್ದು, ಸೋಮವಾರ ಬೆಳಿಗ್ಗೆ ಬಾಲಕಿಯ ತಂದೆ ತಾಯಿ ಮನೆಯಲ್ಲಿ ಇಲ್ಲದ ಸಂದರ್ಭ ಆರೋಪಿ ಬಿಸ್ವಾಸ್ ಮನೆ ಸಮೀಪದ ಮರವೊಂದನ್ನು ಏರಿ, ಮಾಡಿನ ಹೆಂಚು ತೆಗೆದು ಒಳನುಗ್ಗಿ ಬಾಲಕಿಯ ಅತ್ಯಾಚಾರಕ್ಕೆ ಯತ್ನಿಸಿದ್ದ. ಈ ವೇಳೆ ಬಾಲಕಿ ಜೋರಾಗಿ ಕೂಗಿಕೊಂಡಿದ್ದರಿಂದ ಸ್ಥಳೀಯರು ಬಂದು ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಬಾಲಕಿಯ ತಂದೆ ಹಾಗೂ ಬಂಗಾಳಿ ಮೂಲದ ಆಪಾದಿತ ಬಿಸ್ವಾಸ್ ಹನ್ನೊಂದು ವರ್ಷಗಳಿಂದ ಸ್ನೇಹಿತರಾಗಿದ್ದರು ಎನ್ನಲಾಗಿದೆ. ಬಿಸ್ವಾಸ್ ವಿರುದ್ದ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ► ಮಹಾಘಾತ: ಉಡುಪಿ ಜಿಲ್ಲೆಯಲ್ಲಿ ಸೋಮವಾರ 73 ಕೊರೋನಾ ಪಾಸಿಟಿವ್ – https://kundapraa.com/?p=38126 .

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ,ಜೂನ್.1: ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹಿಳಾ ಪೊಲೀಸ್ ಕಾನ್ಸ್ಟೇಬಲ್ ಓರ್ವರಿಗೆ ಕೊರೋನಾ ಪಾಸಿಟಿವ್ ಇರುವ ಶಂಕೆ ಇದ್ದು, ಮೊದಲ ವರದಿಯಲ್ಲಿ ಪಾಸಿಟಿವ್ ಬಂದಿರುವುದರಿಂದ ಮುಂಜಾಗೃತಾ ಕ್ರಮವಾಗಿ ಅವರ ಕೊಟತಟ್ಟುವಿನ ಮನೆಯನ್ನು ಸೀಲ್‌ಡೌನ್ ಮಾಡಲಾಗಿದೆ. ಅವರು ಕರ್ತವ್ಯ ನಿರ್ವಹಿಸುತ್ತಿದ್ದ ಠಾಣೆಯನ್ನು ಸ್ಯಾನಿಟೈನ್ ಮಾಡಲಾಗಿದೆ. ಅವರ ಎರಡನೇ ಕೋವಿಡ್ ವರದಿಯನ್ನು ನಿರೀಕ್ಷಿಸಲಾಗಿದೆ. ಪೊಲೀಸರಿಗೆ ಮಾಡಲಾಗಿದ್ದ ತಪಾಸಣೆ ವೇಳೆ ಮಹಿಳಾ ಪೊಲೀಸ್ ಕಾನ್ಸ್ಟೇಬಲ್ ಅವರಲ್ಲಿ ಕೊರೊನಾ ಪಾಸಿಟಿವ್ ಕಂಡುಬಂದಿದ್ದು, ಸದ್ಯ ಚಿಕಿತ್ಸೆಗಾಗಿ ಉಡುಪಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಿಗೆ ಯಾವುದೇ ಟ್ರವೆಲ್ ಹಿಸ್ಟರಿ ಇಲ್ಲದೇ ಇರುವುದರಿಂದ ಮತ್ತೊಮ್ಮೆ ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದ್ದು, ವರದಿ ನಾಳೆ ಕೈಸೇರುವ ನಿರೀಕ್ಷೆ ಇದೆ. ಶಂಕರನಾರಾಯಣ ಪೊಲೀಸ್ ಠಾಣೆಯನ್ನು ಸ್ಯಾನಿಟೈನ್ ಮಾಡಿರುವುದರಿಂದ ಸದ್ಯ ಸಮೀಪದ ಶಾಲೆಯಲ್ಲಿ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುತ್ತಿದ್ದು, ಬುಧವಾರ ಮತ್ತೆ ಠಾಣೆಯಲ್ಲಿಯೇ ಕರ್ತವ್ಯ ನಿರ್ವಹಿಸಲಾಗುತ್ತದೆ. ಆದರೆ ಪಾಸಿಟಿವ್ ದೃಢವಾಗುವ ತನಕ ಸೀಲ್ ಡೌನ್ ಪ್ರಕ್ರಿಯೆ ಇರುವುದಿಲ್ಲ ಎಂಬ ಮಾಹಿತಿ ಪೊಲೀಸ್ ಮೂಲಗಳಿಂದ ದೊರೆತಿದೆ. ಕುಂದಾಪ್ರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಉಡುಪಿ ಜಿಲ್ಲೆಯಲ್ಲಿ ಜೂ.1 ರ ಹೆಲ್ತ್ ಬುಲೆಟಿನ್ ಪ್ರಕಾರ ಒಟ್ಟು 73 ಹೊಸ ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. 73 ಪ್ರಕರಣಗಳಲ್ಲಿ 61 ಮಂದಿ ಮಹಾರಾಷ್ಟದಿಂದ ಬಂದವರಾಗಿದ್ದಾರೆ. 3 ಮಂದಿ ದುಬೈನಿಂದ ಬಂದವರು,  4 ಮಂದಿ ಪೊಲೀಸ್ ಸಿಬ್ಬಂದಿಗಳಿಗೆ ಪಾಸಿಟಿವ್ ಬಂದಿದೆ. 5 ಜನರ ಸಂಪರ್ಕ ಪತ್ತೆ ಹಚ್ಚಲಾಗುತ್ತಿದೆ. ಜಿಲ್ಲೆಯಲ್ಲಿ ಸದ್ಯ ಒಟ್ಟು 260 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 63 ಮಂದಿ ಬಿಡುಗಡೆಯಾಗಿದ್ದು, 196 ಮಂದಿ ಕೊರೋನಾ ಸೋಂಕಿತರಿಗೆ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ಸೋಕಿತರು ಜಿಲ್ಲೆಯ ಉಡುಪಿ, ಕಾರ್ಕಳ ಹಾಗೂ ಕುಂದಾಪುರದ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.  ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ ಜಿಲ್ಲೆಯಲ್ಲಿ ಸರಕಾರಿ ಕ್ವಾರಂಟೈನ್ ಮುಗಿಸಿ ಹೋಂ ಕ್ವಾರಂಟೈನಿನಲ್ಲಿ ಇರುವವರಿಗೆ ಪಾಸಿಟಿವ್ ಬರುವ ಪ್ರಕರಣ ಹೆಚ್ಚುತ್ತಿದ್ದು, ಜನರು ಆತಂಕಗೊಂಡಿದ್ದಾರೆ. ಕೋವಿಡ್ ಪಾಸಿಟಿವ್ ವ್ಯಕ್ತಿ ವಾಸವಿರುವ ಮನೆಯ ಸುತ್ತಲಿನ 100 ಮೀಟರ್ ಪ್ರದೇಶವನ್ನು ಸೀಲ್ ಡೌನ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ವಿದ್ಯುತ್ ಶಕ್ತಿ ತಿದ್ದುಪಡಿ ಕಾಯ್ದೆ-2020 ಮಸೂದೆ ವಿರೋಧಿಸಿ ದೇಶವ್ಯಾಪಿ ವಿದ್ಯುತ್ ನೌಕರರು, ಅಧಿಕಾರಿಗಳು ನಡೆಸುತ್ತಿರುವ ಪ್ರತಿಭಟನೆಯ ಭಾಗವಾಗಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ, ಅಸೋಸಿಯೇಷನ್‌ಗಳ ಒಕ್ಕೂಟ ಮತ್ತು ಕ.ವಿ.ಪ್ರ.ನಿ ನೌಕರರ ಸಂಘ ರಿ. ಪ್ರಾಥಮಿಕ ಸಮಿತಿ ಬೈಂದೂರು ಇದರ ನೇತೃತದಲ್ಲಿ ಸೋಮವಾರ ಬೈಂದೂರು ಮೆಸ್ಕಾಂ ಉಪವಿಭಾಗ ಕಛೇರಿಯ ಆವರಣದಲ್ಲಿ ನೌಕರರು ಕೈಗೆ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದರು. ಈ ಸಂದರ್ಭ ಕ.ವಿ.ಪ್ರ.ನಿ ನೌಕರರ ಸಂಘ ರಿ. ಪ್ರಾಥಮಿಕ ಸಮಿತಿ ಬೈಂದೂರು ಇದರ ಅಧ್ಯಕ್ಷ ರಾಧಾಕೃಷ್ಣ ಬಿಜೂರು ಮಾತನಾಡಿ ವಿದ್ಯುತ್ ಶಕ್ತಿ ತಿದ್ದುಪಡಿ ಕಾಯ್ದೆ-2020 ವಿದ್ಯುತ್ ಕ್ಷೇತ್ರವನ್ನು ಖಾಸಗೀಕರಣಗೊಳಿಸುವ ಉದ್ದೇಶ ಹೊಂದಿದೆ. ರಾಜ್ಯದಲ್ಲಿ ಇದು ಜಾರಿಗೆ ಬಂದರೆ ಕೃಷಿ ಪಂಪ್‌ಸೆಟ್‌ಗಳು, ಕುಟೀರ ಜ್ಯೋತಿ ಹಾಗೂ ಭಾಗ್ಯಜೋತಿ ಯೋಜನೆ ಹೊಂದಿರುವ ಬಡ ಕುಟುಂಬಗಳು ಹಾಗೂ ಸಣ್ಣ ಕೈಗಾರಿಕೆಗಳಿಗೆ ತೊಂದರೆಯಾಗಲಿದೆ. ಇಲಾಖೆಯ ನೌಕರರಿಗೂ ವೃತ್ತಿ ಅಭದ್ರತೆ ಎದುರಾಗಲಿದೆ. ಹಾಗಾಗಿ ಈ ಕಾಯಿದೆಯನ್ನು ರಾಜ್ಯದಲ್ಲಿ ಅನುಷ್ಠಾನ ಮಾಡಬಾರದು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಶಂಕರನಾರಾಯಣ,ಮೇ31: ಕುಂದಾಪುರ ತಾಲೂಕಿನ ಶಂಕರನಾರಾಯಣ ಪೊಲೀಸ್ ಠಾಣೆಯ ಕಾನ್ಸ್‌ಟೇಬಲ್ ಓರ್ವರಿಗೆ ಕೋರೋನಾ ಪಾಸಿಟಿವ್ ಇರುವ ಬಗ್ಗೆ ಶಂಕೆ ವ್ಯಕ್ತವಾಗಿದ್ದು, ಸದ್ಯ ಅವರನ್ನು ವೈದ್ಯಕೀಯ ನಿಗಾದಲ್ಲಿರಿಸಲಾಗಿದೆ. ಜಿಲ್ಲೆಯ ಪೊಲೀಸ್ ಸಿಬ್ಬಂದಿಗಳಿಗೆ ಕೋವಿಡ್ ಪರೀಕ್ಷೆ ಮಾಡಲಾಗುತ್ತಿದ್ದು, ಅದರಂತೆ ಶಂಕರನಾರಾಯಣ ಠಾಣೆಯ ಮಹಿಳಾ ಸಿಬ್ಬಂದಿಯ ವರದಿಯೂ ಪಾಸಿಟಿವ್ ಬಂದಿತ್ತು. ಆದರೆ ಅವರು ಲಾಕ್‌ಡೌನ್ ಸಮಯದಲ್ಲಿ ಯಾವುದೇ ಚೆಕ್‌ಪೋಸ್ಟ್‌ನಲ್ಲಿ ಕೆಲಸ ನಿರ್ವಹಿಸಿಲ್ಲ ಅಲ್ಲದೇ ಯಾವುದೇ ಟ್ರಾವೆಲ್ ಹಿಸ್ಟರಿ ಇಲ್ಲ. ಠಾಣೆಯಲ್ಲಿ ಮಾತ್ರ ಕಾರ್ಯನಿರ್ವಹಿಸಿದ್ದರು ಎಂದು ತಿಳಿದುಬಂದಿದೆ. ಆದಾಗ್ಯೂ ಅವರಿಗೆ ಕೋರೋನಾ ಲಕ್ಷಣಗಳು ಕಂಡುಬಂದಿರುವ ಬಗ್ಗೆ ಸಂಶಯ ವ್ಯಕ್ತವಾಗಿದೆ. ಸೋಮವಾರ ಪುನಃ ಅವರ ಗಂಟಲು ದ್ರವ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗುತ್ತಿದ್ದು, ಸಂಜೆ ವರದಿ ಕೈ ಸೇರುವ ಸಾಧ್ಯತೆ ಇದೆ. ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋವಿಡ್ ಫಾಲ್ಸ್ ಪಾಸಿಟಿವ್ ಬಂದಿರುವ ಸಾಧ್ಯತೆ ಇರುವುದರಿಂದ ಸೋಮವಾರ ಪುನಃ ಸಿಬ್ಬಂದಿಯ ಸ್ವ್ಯಾಬ್ ಪರೀಕ್ಷೆಗೆ ಕಳುಹಿಸಲಾಗುತ್ತದೆ. ಕೋವಿಡ್ ವರದಿ ದೊರೆಯುವ ತನಕವೂ, ಠಾಣೆಯನ್ನು ಸೀಲ್‌ಡೌನ್ ಮಾಡಲಾಗುವುದಿಲ್ಲ. ಆದರೆ ಸುರಕ್ಷತಾ ಕ್ರಮವಾಗಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ, ಮೇ.31: ಇಂದು ಸಂಜೆ ಸಿಡಿಲು ಬಡಿದ ಪರಿಣಾಮ ತಾಲೂಕಿನ ಹೆಂಗವಳ್ಳಿ ಗ್ರಾಮದ  ಕಮ್ಗೋಳಿಯ ಸಂತೋಷ್ ಶೆಟ್ಟಿ ಎಂಬುವರ ಕೊಟ್ಟಿಗೆಯಲ್ಲಿದ್ದ ಎರಡು ದನ ಹಾಗೂ ಒಂದು ಕರು ಸಾವನ್ನಪ್ಪಿದೆ. ಈ ಘಟನೆಯಿಂದಾಗಿ ಕುಟುಂಬಕ್ಕೆ ಸುಮಾರು 1 ಲಕ್ಷ ರೂ. ನಷ್ಟ ಸಂಭವಿಸಿದೆ. ಇದನ್ನೂ ಓದಿ: ► ಉಡುಪಿ ಜಿಲ್ಲೆಯಲ್ಲಿ ಭಾನುವಾರ 10 ಕೊರೋನಾ ಪಾಸಿಟಿವ್ – https://kundapraa.com/?p=38083 . ► ಕುಂದಾಪುರ: ಕೋವಿಡ್-19 ಆಸ್ಪತ್ರೆಯಿಂದ ಗುಣಮುಖರಾದ 14 ಮಂದಿ ಬಿಡುಗಡೆ – https://kundapraa.com/?p=38077 . ► ಜಿಲ್ಲೆಯಲ್ಲಿ ಮೂರು ದಿನ ಭಾರಿ ಮಳೆ: ಸಾರ್ವಜನಿಕರಿಗೆ ಸೂಚನೆ – https://kundapraa.com/?p=38020 . ► ಜೂನ್ 15ರಿಂದ ಮೀನುಗಾರಿಕೆ ನಿಷೇಧ: ಪರಿಷ್ಕೃತ ಆದೇಶ – https://kundapraa.com/?p=38016 . ► ದ.ಕನ್ನಡ ಹಾಲು ಒಕ್ಕೂಟದಿಂದ ಜಾನುವಾರುಗಳಿಗೆ ವಿಮಾ ಸೌಲಭ್ಯ – https://kundapraa.com/?p=37935 . ► ಪ್ರಧಾನಮಂತ್ರಿಗಳ ಉದ್ಯೋಗ ಸೃಜನ ಯೋಜನೆಗೆ ಅರ್ಜಿ ಆಹ್ವಾನ – https://kundapraa.com/?p=37963 .

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಉಡುಪಿ ಜಿಲ್ಲೆಯಲ್ಲಿ ಮೇ.31ರ ಹೆಲ್ತ್ ಬುಲೆಟಿನ್ ಪ್ರಕಾರ ಒಟ್ಟು 10 ಹೊಸ ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಎಲ್ಲಾ ಸೋಂಕಿತರು ಮಹಾರಾಷ್ಟ್ರದಿಂದ ಹಿಂದಿರುಗಿದವರಾಗಿದ್ದಾರೆ. ಜಿಲ್ಲೆಯಲ್ಲಿ ಸದ್ಯ ಒಟ್ಟು 187 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 63 ಮಂದಿ ಬಿಡುಗಡೆಯಾಗಿದ್ದು, 123 ಮಂದಿ ಕೊರೋನಾ ಸೋಂಕಿತರಿಗೆ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ಇದನ್ನೂ ಓದಿ: ► ಕುಂದಾಪುರ: ಕೋವಿಡ್-19 ಆಸ್ಪತ್ರೆಯಿಂದ ಗುಣಮುಖರಾದ 14 ಮಂದಿ ಬಿಡುಗಡೆ – https://kundapraa.com/?p=38077 . ► ಜಿಲ್ಲೆಯಲ್ಲಿ ಮೂರು ದಿನ ಭಾರಿ ಮಳೆ: ಸಾರ್ವಜನಿಕರಿಗೆ ಸೂಚನೆ – https://kundapraa.com/?p=38020 . ► ಜೂನ್ 15ರಿಂದ ಮೀನುಗಾರಿಕೆ ನಿಷೇಧ: ಪರಿಷ್ಕೃತ ಆದೇಶ – https://kundapraa.com/?p=38016 . ► ಉಡುಪಿ: 7 ದಿನ ಸರ್ಕಾರಿ ಕ್ವಾರಂಟೈನ್ ಪೂರೈಸಿದವರಿಗೆ ಹೋಂ ಕ್ವಾರಂಟೈನ್‌ಗೆ ಅನುಮತಿ – https://kundapraa.com/?p=37978 . ► ದ.ಕನ್ನಡ ಹಾಲು ಒಕ್ಕೂಟದಿಂದ ಜಾನುವಾರುಗಳಿಗೆ ವಿಮಾ ಸೌಲಭ್ಯ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಕೋವಿಡ್-19 ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾದ ಬೈಂದೂರು ಹಾಗೂ ಕುಂದಾಪುರ ಭಾಗದ 14 ಮಂದಿಯನ್ನು ಭಾನುವಾರ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು, ಗುಲಾಬಿ ಗೀಡ ಹಾಗೂ ಮಕ್ಕಳಿಗೆ ಚಾಕಲೇಟ್ ನೀಡಿ ಬೀಳ್ಕೊಡಲಾಯಿತು. ಈ ಸಂದರ್ಭ ಕುಂದಾಪುರ ಸಹಾಯಕ ಆಯುಕ್ತ ಕೆ. ರಾಜು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್ ಚಂದ್ರ ಸೂಡ, ಕೋವಿಡ್-19 ನೋಡಲ್ ಅಧಿಕಾರಿ ಡಾ| ಪ್ರಶಾಂತ್ ಭಟ್, ತಾಲೂಕು ಆರೋಗ್ಯಾಧಿಕಾರಿ ಡಾ. ನಾಗಭೂಷಣ ಉಡುಪ, ಕುಂದಾಪುರ ಸರಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಡಾ. ರಾರ್ಬಟ್ ರೆಬೆಲ್ಲೊ, ವೈದ್ಯ ಡಾ. ನಾಗೇಶ್, ಬೈಂದೂರು ಸರಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಡಾ. ಪ್ರೇಮಾನಂದ, ಕುಂದಾಪುರ ಪಿಎಸ್‌ಐ ಹರೀಶ್ ಆರ್., ಕುಂದಾಪುರ ಸಿಟಿ ಜೆಸಿಐ ಸ್ಥಾಪಕಾಧ್ಯಕ್ಷ ಹುಸೇನ್ ಹೈಕಾಡಿ, ಆಸ್ಪತ್ರೆ ಸಿಬ್ಬಂದಿಗಳು ಇದ್ದರು. ಇದನ್ನೂ ಓದಿ: ► ಉಡುಪಿ: ಭಾನುವಾರ 10 ಕೊರೋನಾ ಪಾಸಿಟಿವ್ – https://kundapraa.com/?p=38083 . ► ಜಿಲ್ಲೆಯಲ್ಲಿ ಮೂರು ದಿನ ಭಾರಿ ಮಳೆ: ಸಾರ್ವಜನಿಕರಿಗೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರ ತಾಲೂಕಿನ ನೂತನ ತಹಶೀಲ್ದಾರ್ ಆಗಿ ಕೆ. ಬಿ. ಆನಂದಪ್ಪ ಅವರು ಅಧಿಕಾರ ಸ್ವೀಕರಿಸಿದ್ದಾರೆ. ಕುಂದಾಪುರ ತಹಶೀಲ್ದಾರ್ ಆಗಿದ್ದು ತಿಪ್ಪೇಸ್ವಾಮಿ ಅವರು ಸೇವಾ ನಿವೃತ್ತಿ ಹೊಂದಿದಿದ್ದು, ಈ ಹಿಂದೆ ಉಡುಪಿ ಡಿಸಿ ಕಚೇರಿಯ ಚುನಾವಣಾ ತಹಶೀಲ್ದಾರ್ ಆಗಿದ್ದ ಕೆ ಬಿ ಆನಂದಪ್ಪ ನಾಯ್ಕ್ ಇವರಿಗೆ ಅಧಿಕಾರ ಹಸ್ತಾಂತರ ಮಾಡಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಹೊರರಾಜ್ಯಗಳಿಂದ ಬಂದು ಕ್ವಾರಂಟೈನ್ ಮುಗಿಸಿ ಮನೆಗೆ ತೆರಳಿದ್ದ ವ್ಯಕ್ತಿಗಳ ಕೋವಿಡ್ -19 ಟೆಸ್ಟ್ ವರದಿ ಹಂತ ಹಂತವಾಗಿ ಕೈಸೇರುತ್ತಿದ್ದು, ಕುಂದಾಪುರ ಹಾಗೂ ಬೈಂದೂರು ತಾಲೂಕಿನ 11ಕ್ಕೂ ಹೆಚ್ಚು ಮಂದಿಗೆ ಪಾಸಿಟಿವ್ ಬಂದಿದ್ದು, ಇಂದು ಅವರನ್ನು ಕೋವಿಡ್ ಆಸ್ಪತ್ರೆಗೆ ದಾಖಲಿಸಿ, ಅವರ ಮನೆಯ ಸುತ್ತಲಿನ ಪ್ರದೇಶವನ್ನು ಸೀಲ್‌ಡೌನ್ ಮಾಡಲಾಗುತ್ತಿದೆ. ಕುಂದಾಪುರ ತಾಲೂಕಿನ ಕೋಡಿ, ಬಸ್ರೂರು, ಕೋಣಿ, ನೇರಳಕಟ್ಟೆ, ಹಳ್ನಾಡು, ನೆಂಪು ಗ್ರಾಮಗಳು ಹಾಗೂ ಬೈಂದೂರು ತಾಲೂಕಿನ ಕಬ್ಸೆ, ನಾವುಂದ, ಗುಜ್ಜಾಡಿ ಬೆಣೆಗೇರಿ ಗ್ರಾಮಗಳಲ್ಲಿನ ಕ್ವಾರಂಟೈನ್ ಮುಗಿಸಿದ ವ್ಯಕ್ತಿಗಳಿಗೆ ಪಾಸಿಟವ್ ಬಂದಿದೆ. ಅವರ ಮನೆಯ ಸುಮಾರು 200 ಮೀಟರ್ ವ್ಯಾಪ್ತಿಯಲ್ಲಿ ಸೀಲ್‌ಡೌನ್ ಮಾಡಲಾಗುತ್ತಿದೆ ಎನ್ನಲಾಗಿದೆ. ಇವರೆಲ್ಲರೂ ಸರಕಾರದ ನಿಯಮಾವಳಿಯಂತೆ ಕ್ವಾರಂಟೈನ್ ಅವಧಿ ಮುಗಿಸಿ ಮನೆಗೆ ಬಂದವರಾಗಿದ್ದು, ಕೋವಿಡ್ ಟೆಸ್ಟ್ ವರದಿ ಬರುವುದು ಬಾಕಿ ಇತ್ತು. ವರದಿ ದೊರೆಯುತ್ತಿದ್ದಂತೆ ಎಲ್ಲರನ್ನೂ ಕೋವಿಡ್ ಆಸ್ಪತ್ರೆಗೆ ದಾಖಲಿಸಿ, ಅವರ ಪ್ರಾಥಮಿಕ ಸಂಪರ್ಕವನ್ನು ಗುರುತಿಸಿ ಕ್ವಾರಂಟೈನ್ ಮಾಡಲಾಗುತ್ತಿದೆ. ಸೀಲ್‌ಡೌನ್ ಮಾಡಲಾಗಿರುವ ಪ್ರದೇಶಗಳ ಪೂರ್ಣ ವಿವರ ಇನ್ನಷ್ಟೇ…

Read More