Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬೆಂಗಳೂರು ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಸಂಜೆಪ್ರಭ ಪತ್ರಿಕೆಯು ಹತ್ತನೇ ವರ್ಷದ ಸಂಭ್ರಮ ಕಾರ್ಯಕ್ರಮದಲ್ಲಿ ಪತ್ರಕರ್ತ, ಕುಂದಾಪುರ ಮಿತ್ರ ಪತ್ರಿಕೆಯ ಸಂಪಾದಕ ಟಿ.ಪಿ. ಮಂಜುನಾಥ್ ಅವರಿಗೆ ‘ಸಂಜೆ ಪ್ರಭ ಮಾಧ್ಯಮ ಸೇವಾ ರತ್ನ’ ಪ್ರಶಸ್ತಿ ಪ್ರದಾನಿಸಿ ಗೌರವಿಸಲಾಯಿತು. ವಿದ್ಯಾವಾಚಸ್ಪತಿ ಶ್ರೀ ವಿಶ್ವ ಸಂತೋಷ ಭಾರತೀ ಸ್ವಾಮೀಜಿಯವರು ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಅತಿಥಿಗಣ್ಯರು ಈ ಸಂದರ್ಭ ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಮೇ.06: ಕೆಟ್ಟು ನಿಂತಿದ್ದ ಟಿಪ್ಪರ್ ವಾಹನಕ್ಕೆ ಆಕ್ಟಿವ್ ಹೊಂಡಾ ಡಿಕ್ಕಿಯಾಗಿ ದ್ವಿಚಕ್ರ ವಾಹನ ಸವಾರ ಮೃತಪಟ್ಟ ಘಟನೆ ತಲ್ಲೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ನಡೆದಿದೆ. ಹಳಗೇರಿ ತೆಂಕಬೆಟ್ಟಿನ ನಿವಾಸಿ ಸತೀಶ್ ಜೋಗಿ (42) ಮೃತ ದುರ್ದೈವಿ. ಹಿಂಬದಿಯ ಸವಾರ ಕಂಬದಕೋಣೆ ಆಕಾಶ್ ಜೋಗಿ (17) ಗಂಭೀರ ಗಾಯಗೊಂಡಿದ್ದಾನೆ. ತೆಂಕಬೆಟ್ಟು ನಿವಾಸಿ ಸತೀಶ್ ಜೋಗಿಯವರು ಸಂಬಂಧಿ ಆಕಾಶ್ ಎಂಬುವವನನ್ನು ಜೊತೆ ತೆರಳುತ್ತಿದ್ದ ವೇಳೆ ಆರೋಪಿ ಟಿಪ್ಪರ್ ಚಾಲಕ ನಜ್ರುಲ್ ಬಷೀರ್ ಎಂಬಾತ ನಿರ್ಲಕ್ಷತನದಿಂದ ಯಾವುದೇ ಮುನ್ನೆಚರಿಕೆ ಕ್ರಮವಹಿಸದೇ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಲ್ಲಿಸಿಕೊಂಡಿದ್ದು ಟಿಪ್ಪರ್ ಲಾರಿಯ ಹಿಂಬಂದಿಗೆ ಆಕ್ಟಿವ್ ಹೊಂಡಾ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಆಕಾಶ ಜೋಗಿಯ ಮುಖ ಹಾಗೂ ತಲೆಗೆ ರಕ್ತಗಾಯ ಹಾಗೂ ಸತೀಶ ಜೋಗಿಯವರ ತಲೆಗೆ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ. ಆಕಾಶ ಜೋಗಿ ಕುಂದಾಪುರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಕುಂದಾಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಗಂಗೊಳ್ಳಿಯ ಅಂಜುಮನ್ ಆಂಗ್ಲ ಮಾಧ್ಯಮ ಶಾಲೆಯ ಆಡಳಿತ ಮಂಡಳಿ ವತಿಯಿಂದ 2021-2022 ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಗರಿಷ್ಟ ಅಂಕಗಳನ್ನು ಪಡೆದ ಇಬ್ಬರು ವಿದ್ಯಾರ್ಥಿಗಳು ಹಾಗೂ ಶಾಲೆಯ ಎಲ್ಲಾ ಶಿಕ್ಷಕ ವೃಂದದವರನ್ನು ಸನ್ಮಾನಿಸಲಾಯಿತು. ಉಡುಪಿಯ ಮಣಿಪಾಲ್ ಇನ್ ಹೋಟೆಲಿನಲ್ಲಿ ಶಾಲೆಯ ಗೌರವಿಸಿ ಸನ್ಮಾನಿಸಲಾಯಿತು. ಅಂಜುಮನ್ ನೂರುಲ್ ಇಸ್ಲಾಂನ ಅಧ್ಯಕ್ಷರಾದ ಜನಾಬ್ ಮೌಲಾನಾ ಇಬ್ರಾಹಿಂ ಸಾಹೇಬ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕು ಕಾನೂನು ಸೇವೆಗಳ ಸಮಿತಿ ಕುಂದಾಪುರ, ವಕೀಲರ ಸಂಘ ರಿ. ಕುಂದಾಪುರ, ಕ್ಲೀನ್ ಕುಂದಾಪುರ ಪ್ರೋಜೆಕ್ಟ್, ಲಯನ್ಸ್ ಕ್ಲಬ್ ಕುಂದಾಪುರ ಅಮೃತಧಾರಾ, ಎಫ್.ಎಸ್.ಎಲ್ ಇಂಡಿಯಾ, ಎನ್.ಸಿ.ಸಿ-21, ಕರ್ನಾಟಕ ಬೆಟಾಲಿಯನ್ ಉಡುಪಿ ಹಾಗೂ ಕರ್ನಾಟಕ ಅರಣ್ಯ ಇಲಾಖೆ ಕುಂದಾಪುರ ವಲಯ, ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಕೋಡಿ ಲೈಟ್ ಹೌಸ್ ಬಳಿ ಹಮ್ಮಿಕೊಂಡ ಸ್ವಚ್ಛತಾ ಕಾರ್ಯಕ್ರಮಕ್ಕೆ ಕುಂದಾಪುರದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಅಬ್ದುಲ್ ರಹೀಮ್ ಹುಸೇನ್ ಶೇಖ್ ಅವರು ಚಾಲನೆ ನೀಡಿದರು. ಕುಂದಾಪುರದ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷರಾದ ರಾಜು ಎನ್, ಪ್ರಧಾನ ಸಿವಿಲ್ & ಜೆ.ಎಮ್.ಎಫ್.ಸಿ ನ್ಯಾಯಾಧೀಶರು ಹಾಗೂ ಕುಂದಾಪುರ ತಾಲೂಕು ಕಾನೂನು ಸೇವಾ ಸಮಿತಿ ಕಾರ್ಯದರ್ಶಿ ಧನೇಶ್ ಮುಗುಳಿ, ಹೆಚ್ಚುವರಿ ಸಿವಿಲ್ & ಜೆ.ಎಮ್.ಎಫ್.ಸಿ ನ್ಯಾಯಾಧೀಶರಾದ ರೋಹಿಣಿ ಡಿ, 2ನೇ ಹೆಚ್ಚುವರಿ ಸಿವಿಲ್ & ಜೆ.ಎಮ್.ಎಫ್.ಸಿ. ನ್ಯಾಯಾಧೀಶರಾದ ವಿದ್ಯಾ ಎ.…

Read More

ಕುಂದಾಪ್ರ ಡಾಟ್ ಕಾಂ ವರದಿ.ಬೈಂದೂರು: ತಾಲೂಕಿನ ರತ್ತುಬಾಯಿ ಜನತಾ ಪ್ರೌಢ ಶಾಲೆಯಲ್ಲಿ ಪ್ರಪ್ರಥಮ ಬಾರಿಗೆ ಮತಯಂತ್ರದ (ಇವಿಎಂ ಮೊಬೈಲ್ ಆ್ಯಪ್) ಮೂಲಕ ಶಾಲಾ ವಿದ್ಯಾರ್ಥಿ ಪರಿಷತ್ ಚುನಾವಣೆಯನ್ನು ನಡೆಸಲಾಗಿದ್ದು, ವಿದ್ಯಾರ್ಥಿ ಮತದಾರರು ಕುತೂಹಲ ಹಾಗೂ ಆಸಕ್ತಿಯಿಂದ ಇಡಿ ಪ್ರಕ್ರಿಯೆಯಲ್ಲಿ ಭಾಗವಹಿಸಿ ತಮ್ಮ ಶಾಲಾ ನಾಯಕ ಹಾಗೂ ಉಪನಾಯಕನನ್ನು ಆಯ್ಕೆ ಮಾಡಿದ್ದಾರೆ. ಚುನಾವಣೆ ಪ್ರಕ್ರಿಯೆ ಹಾಗೂ ಮತದಾನ ಬಗ್ಗೆ ಜಾಗೃತಿ ಮೂಡಿಸಲು ಶನಿವಾರ ರತ್ತುಬಾಯಿ ಜನತಾ ಪ್ರೌಢ ಶಾಲೆಯಲ್ಲಿ ಶಾಲಾ ನಾಯಕ/ನಾಯಕಿ ಹಾಗೂ ಉಪನಾಯಕನ ಆಯ್ಕೆಗಾಗಿ ಮಾದರಿ ಚುನಾಣೆಯ ನಡೆಸಲಾಯಿತು. ಮುಖ್ಯ ಚುನಾವಣಾ ಅಧಿಕಾರಿಯಾಗಿ ಮುಖ್ಯೋಪಾಧ್ಯಾಯರಾದ ಆನಂದ ಮದ್ದೊಡಿ, ಅಧ್ಯಕ್ಷಾಧಿಕಾರಿಯಾಗಿ ಶಿಕ್ಷಕರಾದ ಚಂದ್ರ ದೇವಾಡಿಗ ಸಂಸತ್ತಿನ ವಕ್ತಾರರಾಗಿ ಚೈತ್ರ ಹಾಗೂ ಚುನಾವಣಾ ಕರ್ತವ್ಯವನ್ನು ಶಿಕ್ಷಕರಾದ ಪ್ರಕಾಶ್ ಮಾಕೋಡಿ, ನಿರ್ಮಲಾ, ಹೇಮಾವತಿ ಇವರು ಕರ್ತವ್ಯ ನಿರ್ವಹಿಸಿದರು. ಪ್ರಥಮ ಭಾರಿಗೆ ವಿದ್ಯಾರ್ಥಿ ನಾಯಕನ ಆಯ್ಕೆಗೆ ಇವಿಎಂ (ಮೊಬೈಲ್ ಆ್ಯಪ್) ಬಳಸಿ ಮತದಾನ ಮಾಡಿ ತಮ್ಮ ಹಕ್ಕನ್ನು ಚಲಾಯಿಸಿದರು. ಒಟ್ಟು 5 ಮಂದಿ ಸ್ವರ್ಧಾ ಕಣದಲ್ಲಿದ್ದರು. ಒಟ್ಟು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಜೂ.05: ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ನವದೆಹಲಿಯ ವಿಶ್ವವಿದ್ಯಾನಿಲಯದ ಧನಸಹಾಯ ಆಯೋಗದವರು ನಡೆಸಲಿರುವ ಕಿರಿಯ ಶಿಷ್ಯವೇತನ ಸಂಶೋಧಕರ ಸಹಾಯಕರು (ಜೆಆರ್ಎಫ್) ಹಾಗೂ ಪದವಿ ಕಾಲೇಜು ಸಹಾಯಕ ಪ್ರಾಧ್ಯಾಪಕರ ರಾಷ್ಟç ಮಟ್ಟದ ಅರ್ಹತಾ ಪರೀಕ್ಷೆ (ಯುಜಿಸಿ-ನೆಟ್)ಗೆ ಮತ್ತು ಕರ್ನಾಟಕ ಸರ್ಕಾರವು ನಡೆಸಲಿರುವ ರಾಜ್ಯ ಮಟ್ಟದ ಪದವಿ ಕಾಲೇಜು ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ-ಸೆಟ್) ಗೆ 45 ದಿನಗಳ ತರಬೇತಿ ಶಿಬಿರವನ್ನು ಏರ್ಪಡಿಸಲಾಗಿದೆ. ಆಸಕ್ತರು ಜೂನ್ 10 ರ ಒಳಗೆ ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಕಛೇರಿಯಲ್ಲಿ ಬೆಳಗ್ಗೆ 10 ರಿಂದ ಸಂಜೆ 5.00 ಗಂಟೆಯೊಳಗೆ ಹೆಸರನ್ನು ನೊಂದಾಯಿಸಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂಖ್ಯೆ: 0821-2515944 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕರಾಮುವಿ ಕುಲಸಚಿವ ಪ್ರೊ. ಆರ್. ರಾಜಣ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಜೂ.05: ಸಂಜೀವಿನಿ – ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನಾ ಸಂಸ್ಥೆ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಇವರ ವತಿಯಿಂದ, ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆ ಯೋಜನೆ (ಪಿ.ಎಮ್.ಎಫ್.ಎಮ್.ಇ) ಯಡಿ ಸಂಜೀವಿನಿ ಸ್ವ- ಸಹಾಯ ಗುಂಪುಗಳಿಗೆ ಮೂಲ ಬಂಡವಾಳ ನಿಧಿ ವಿತರಿಸಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯಡಿ ಕಿರು ಆಹಾರ ಉತ್ಪಾದನೆ ಮಾಡುವ ಸಂಜೀವಿನಿ ಮಹಿಳಾ ಸ್ವ-ಸಹಾಯ ಗುಂಪಿನ ಪ್ರತೀ ಫಲಾನುಭವಿಗಳು ರೂ. 40,000 ಗಳ ವರೆಗೆ ಶೇ.6 ರಷ್ಟು ಬಡ್ಡಿಯಂತೆ ಸಾಲ ಪಡೆಯಲು ಅರ್ಹರಿರುತ್ತಾರೆ. ಗ್ರಾಮ ಪಂಚಾಯತ್ ಮಟ್ಟದ ಸಂಜೀವಿನಿ ಒಕ್ಕೂಟಗಳಲ್ಲಿ ಸದಸ್ಯತ್ವ ಪಡೆದಿರುವ ಮಹಿಳಾ ಸ್ವ-ಸಹಾಯ ಗುಂಪಿನಲ್ಲಿ ಕಿರು ಆಹಾರ ಸಂಸ್ಕರಣಾ ಚಟುವಟಿಕೆಗಳಾದ ಕಿರುಧಾನ್ಯಗಳಿಂದ ತಯಾರಿಸಿದ ಆಹಾರ ಉತ್ಪನ್ನ, ಹಪ್ಪಳ, ಉಪ್ಪಿನ ಕಾಯಿ, ಸಂಡಿಗೆ, ಜೋಳದ ರೊಟ್ಟಿ, ಶಾವಿಗೆ, ಸಾಂಬಾರು ಪದಾರ್ಥ, ಚಟ್ನಿಪುಡಿ, ಬಿಸ್ಕತ್, ವಿವಿಧ ಬಗೆಯ ಚಿಪ್ಸ್, ಚಕ್ಕುಲಿ, ನಿಪ್ಪಟ್ಟು, ಚಾಕಲೇಟ್, ಹೋಳಿಗೆ, ವಿವಿಧ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರದ ಗಿಳಿಯಾರು ಕುಶಲ ಹೆಗ್ಡೆ ಮೆಮೋರಿಯಲ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜೂನ್ 19 ರಂದು ಎಸ್. ಎಸ್. ಎಲ್. ಸಿ. ಯಲ್ಲಿ ಉತ್ತಮ ಅಂಕ ಪಡೆದ ಅರ್ಹ ವಿದ್ಯಾರ್ಥಿಗಳಿಗೆ ಧನಸಹಾಯ ವಿತರಣೆ ಮಾಡಲಾಗುತ್ತದೆ. ಎಸ್. ಎಸ್. ಎಲ್. ಸಿ. ಯಲ್ಲಿ ಉತ್ತಮ ಅಂಕ ಪಡೆದ ಮುಂದಿನ ಶಿಕ್ಷಣಕ್ಕೆ ದಾಖಲಾದ 600ಕ್ಕೂ ಹೆಚ್ಚು ಅಂಕ ಗಳಿಸಿದ ಕುಂದಾಪುರ ಹಾಗೂ ಬೈಂದೂರು ತಾಲ್ಲೂಕಿನ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಫಾರಂಗಳನ್ನು “ಕುಂದಪ್ರಭ”, ನಾರಾಯಣ ಗುರು ಕಾಂಪ್ಲೆಕ್ಸ್, ವೆಸ್ಟ್ ಬ್ಲಾಕ್ ರೋಡ್, ಕುಂದಾಪುರ ಇಲ್ಲಿ ಪಡೆದು ಅಂಕ ಪಟ್ಟಿ, ಪದವಿ ಪೂರ್ವ ಶಾಲೆಯ ಸೇರ್ಪಡೆ ದಾಖಲೆ ಪತ್ರದೊಂದಿಗೆ ಅರ್ಜಿ ಸಲ್ಲಿಸಬೇಕು. ಅರ್ಜಿ ಸ್ವೀಕರಿಸುವ ಕೊನೆಯ ದಿನಾಂಕ 10 ಜೂನ್, 2022. ಹೆಚ್ಚಿನ ವಿವರಗಳಿಗೆ ಯು. ಎಸ್. ಶೆಣೈ (9448120765), ಕಾರ್ಯದರ್ಶಿ, ಗಿಳಿಯಾರು ಕುಶಲ ಹೆಗ್ಡೆ ಮೆಮೋರಿಯಲ್ ಟ್ರಸ್ಟ್ ಇವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಇತ್ತೀಚಿಗೆ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ೬೨೩ ಅಂಕ ಗಳಿಸಿ ರಾಜ್ಯಕ್ಕೆ ತೃತೀಯ ರ‍್ಯಾಂಕ್ ಪಡೆದ ಗಂಗೊಳ್ಳಿ ಸ.ವಿ.ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ನೇಹಾ ಅವರನ್ನು ಶ್ರೀ ಇಂದುಧರ ದೇವಸ್ಥಾನ ಗಂಗೊಳ್ಳಿ ಮತ್ತು ಇಂದುಶ್ರೀ ಮಹಿಳಾ ಸಂಘ ಗಂಗೊಳ್ಳಿ ಇವರ ವತಿಯಿಂದ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ಬುಧವಾರ ಸನ್ಮಾನಿಸಿ ಗೌರವಿಸಲಾಯಿತು. ಗಂಗೊಳ್ಳಿ ಗ್ರಾಮ ಪಂಚಾಯತ್ ಸದಸ್ಯ ಬಿ.ರಾಘವೇಂದ್ರ ಪೈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿದ್ದ ಶಾಲೆಯ ಮುಖ್ಯೋಪಾಧ್ಯಾಯ ಜಿ.ವಿಶ್ವನಾಥ ಭಟ್ ಅವರು ನೇಹಾ ಅವರನ್ನು ಶ್ರೀ ಇಂದುಧರ ದೇವಸ್ಥಾನ ಗಂಗೊಳ್ಳಿ ಮತ್ತು ಇಂದುಶ್ರೀ ಮಹಿಳಾ ಸಂಘದ ಪರವಾಗಿ ಸನ್ಮಾನಿಸಿ ಗೌರವಿಸಿದರು. ದೇವಸ್ಥಾನದ ಅಧ್ಯಕ್ಷ ಶಶಿಧರ ಜಿ.ಟಿ., ಮಹಿಳಾ ಸಂಘದ ಅಧ್ಯಕ್ಷೆ ನೇತ್ರಾವತಿ, ದೇವಸ್ಥಾನದ ಮೊಕ್ತೇಸರ ಸಂಜೀವ ಜಿ.ಟಿ., ಮರವಂತೆ ಶಾಲೆಯ ಮುಖ್ಯೋಪಾಧ್ಯಾಯ ಸತ್ಯನಾ ಕೊಡೇರಿ, ಗುಜ್ಜಾಡಿ ಶಾಲೆಯ ಶಿಕ್ಷಕಿ ಆಶಾ, ಮಹಿಳಾ ಸಂಘದ ಜಯಂತಿ ಜಿ.ಟಿ., ಸುಮಿತ್ರಾ ಜಿ.ಟಿ., ಶಾಲೆಯ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಜೂ.4: ಉಡುಪಿ ಜಿಲ್ಲೆಯ ಎಲ್ಲಾ ಕಡಲತೀರಗಳನ್ನು ಪ್ರತಿನಿತ್ಯ ಸ್ವಚ್ಛ ಮತ್ತು ಸುಂದರವಾಗಿ ಇರುವಂತೆ ಮಾಡಲು ಅಗತ್ಯವಿರುವ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳು ಶಾಶ್ವತ ವ್ಯವಸ್ಥೆಯನ್ನು ರೂಪಿಸುವಂತೆ ಕಡಲತೀರ ಮತ್ತು ನದಿ ತೀರ ವ್ಯಾಪ್ತಿಯ ಪಂಚಾಯತ್ ಅಭಿವೃಧ್ದಿ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಸೂಚಿಸಿದರು. ಅವರು ಇಂದು ಜಿ.ಪಂ. ಸಭಾಂಗಣದಲ್ಲಿ, ಜಿಲ್ಲೆಯ ಕಡಲತೀರಗಳಲ್ಲಿ ತ್ಯಜ್ಯ ನಿರ್ವಹಣೆಯನ್ನು ಸಮರ್ಪಕವಾಗಿ ನಿರ್ವಹಣೆ ಮಾಡುವ ಕುರಿತಂತೆ ಪಂಚಾಯತ್ ಅಭಿವೃಧ್ದಿ ಅಧಿಕಾರಿಗಳಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಡಿದರು. ಉಡುಪಿ ಜಿಲ್ಲೆಯಲ್ಲಿ ಒಟ್ಟು 80 ಕಿಮೀ ಕಡಲತೀರ ಪ್ರದೇಶವಿದ್ದು, ಈ ಕಡಲತೀರಗಳ ವ್ಯಾಪ್ತಿಯ ಗ್ರಾಮ ಪಂಚಾಯತ್ ಗಳ ಮೂಲಕ ಬೀಚ್ ನಲ್ಲಿ ಪ್ರತಿನಿತ್ಯ ಶಾಶ್ವತ ಸ್ವಚ್ಛತಾ ಕಾರ್ಯಗಳನ್ನು ಕೈಗೊಳ್ಳಬೇಕು, ಈ ಬಗ್ಗೆ ಶಾಶ್ವತ ವ್ಯವಸ್ಥೆಗಳನ್ನು ರೂಪಿಸಲು , ಜಿಲ್ಲಾ ಪಂಚಾಯತ್ ನಿಂದ ಎಲ್ಲಾ ರೀತಿಯ ಅಗತ್ಯ ಸಹಕಾರ ನೀಡಲಾಗುವುದು ಎಂದರು. ಗ್ರಾಮ ಪಂಚಾಯತ್ ವ್ಯಾಪ್ತಿಯ ಕಡಲತೀರಗಳ ಸ್ವಚ್ಚತೆಯನ್ನು ಸ್ಥಳೀಯ ಸಂಜೀವನಿ ಸ್ವಸಹಾಯ…

Read More