Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಡಾ| ಶಿವರಾಮ ಕಾರಂತ ಥೀಮ್ ಪಾರ್ಕ್‌ಗೆ ವಿಶೇಷ ಕರ್ತವ್ಯಾಧಿಕಾರಿಯಾಗಿ ಪೂರ್ಣಿಮಾ ಅವರನ್ನು ನೇಮಿಸಲಾಗಿದೆ. ಪ್ರಸ್ತುತ ಅವರು ಕರ್ನಾಟಕ ಬ್ಯಾರಿ ಅಕಾಡೆಮಿಯ ಪ್ರಭಾರ ರಿಜಿಸ್ಟ್ರಾರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಉಡುಪಿ ಜಿಲ್ಲಾ ಸಂಸ್ಥೆಯ ವತಿಯಿಂದ ಉಡುಪಿ ಜಿಲ್ಲೆಯಲ್ಲಿ ನಡೆಯುವ ಹತ್ತನೇ ತರಗತಿಯ ಪರೀಕ್ಷೆ ಬರೆಯುವ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಮಾಸ್ಕ್ ವಿತರಿಸುವ ಕಾರ್ಯಕ್ರಮ ಇತ್ತೀಚೆಗೆ ರಜತಾದ್ರಿಯಲ್ಲಿ ನಡೆಯಿತು. ಉಡುಪಿ ಜಿಲ್ಲಾ ಸ್ಕೌಟ್ ಆಯುಕ್ತ ಡಾ. ವಿಜಯೇಂದ್ರ ವಸಂತ್ , ಹದಿನೈದು ಸಾವಿರ ಮಾಸ್ಕ್ ಗಳನ್ನು ಉಡುಪಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ದಿನಕರ ಬಾಬು ಮತ್ತು ಉಡುಪಿಯ ಡಿಡಿಪಿಐ ಶೇಷಶಯನ ಕಾರಂಜ ಅವರಿಗೆ ಹಸ್ತಾಂತರಿಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಡಾ. ವಿಜಯೇಂದ್ರ ವಸಂತ್, ರಾಜ್ಯದಲ್ಲಿ ಒಂದು ಕೋಟಿ ಮಾಸ್ಕ್ ಸಿದ್ಧವಾಗಿದ್ದು , ಉಡುಪಿ ಜಿಲ್ಲೆಯಲ್ಲಿ ಉಡುಪಿ ಜಿಲ್ಲಾ ಸಂಸ್ಥೆ ಹಾಗೂ ಬೈಂದೂರು,ಕುಂದಾಪುರ, ಬ್ರಹ್ಮಾವರ, ಕಲ್ಯಾಣಪುರ, ಉಡುಪಿ, ಕಾರ್ಕಳ ಹಾಗೂ ಕಾಪು ಸ್ಥಳೀಯ ಸಂಸ್ಥೆಯ ಪದಾಧಿಕಾರಿಗಳು, ಸ್ಕೌಟ್ಸ್ ಗೈಡ್ಸ್  ವಿದ್ಯಾರ್ಥಿಗಳು, ಶಿಕ್ಷಕರು, ಮತ್ತು ಹೆತ್ತವರ ಸಹಕಾರದಿಂದ ಒಂದೂವರೆ ಲಕ್ಷ ಮಾಸ್ಕ್ ತಯಾರಿಸಿ ವಿತರಿಸುವಂತಹ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಅದರ ಅಂಗವಾಗಿ ಹದಿನೈದು ಸಾವಿರ ಮಾಸ್ಕ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲಾಸ್ಪತ್ರೆಯಲ್ಲಿ ಅತ್ಯಂತ ಶೀಘ್ರದಲ್ಲಿ ಸರ್ಕಾರಿ ಕೋವಿಡ್ -19 ಪರೀಕ್ಷಾ ಲ್ಯಾಬ್ ಆರಂಭಗೊಳ್ಳಲಿದ್ದು, ನೂತನ ಲ್ಯಾಬ್ ನಿರ್ಮಾಣ ಕಾಮಗಾರಿಗಳು ಅಂತಮ ಹಂತದಲ್ಲಿವೆ ಎಂದು ರಾಜ್ಯದ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ತಿಳಿಸಿದರು. ಅವರು ಬುಧವಾರ, ಉಡುಪಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ , ಕೋವಿಡ್-19 ಹಿನ್ನಲೆಯಲ್ಲಿ ಜಿಲ್ಲೆಯ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಉಡುಪಿ ಜಿಲ್ಲೆಯಲ್ಲಿ ಮಹಾರಾಷ್ಟ್ರ ಸೇರಿದಂತೆ ವಿವಿಧ ರಾಜ್ಯಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿರುವ ನಾಗರೀಕರ ಕೋವಿಡ್ ಪರೀಕ್ಷೆಯನ್ನು ಶೀಘ್ರದಲ್ಲಿ ನಡೆಸುವ ಅಗತ್ಯವಿದ್ದು, ಈಗಾಗಲೇ ಮಣಿಪಾಲದ ಕೆಎಂಸಿ ಯಲ್ಲಿ ಇರುವ ಲ್ಯಾಬ್ ನ ಜೊತೆಯಲ್ಲಿ ಜಿಲ್ಲಾಸ್ಪತ್ರೆಯಲ್ಲಿ ನೂತನ ಲ್ಯಾಬ್ ಆರಂಭದ ಕುರಿತಂತೆ , ಲ್ಯಾಬ್ ನ ಸಿವಿಲ್ ಕಾಮಗಾರಿಗಳು ಮುಕ್ತಾಯದ ಹಂತದಲ್ಲಿದ್ದು, ಶೀಘ್ರದಲ್ಲಿ ಅಗತ್ಯ ಯಂತ್ರೋಪಕರಣಗಳನ್ನು ಒದಗಿಸುವುದಾಗಿ ತಿಳಿಸಿದ ಸಚಿವರು , ಮುಂದಿನ 10 ದಿನದಲ್ಲಿ ಈ ಲ್ಯಾಬ್ ಕಾರ್ಯಾರಂಭ ಮಾಡಲಿದೆ ಎಂದರು. ಜಿಲ್ಲೆಗೆ ಮಹಾರಾಷ್ಟ್ರ ಸೇರಿದಂತೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕಳೆದೆರಡು ದಿನದಿಂದ ಸುರಿಯುತ್ತಿರುವ ಮಳೆಗೆ ಕುಂದಾಪುರ ನಗರ ಪ್ರದೇಶದಲ್ಲಿ ಅವಾಂತರಗಳನ್ನು ಸೃಷ್ಟಿಯಾಗಿದೆ. ರಾತ್ರಿ ನಿರಂತವಾಗಿ ಸುರಿದ ಮಳೆಯಿಂದಾಗಿ ರಾಷ್ಟ್ರೀಯ ಹೆದ್ದಾರಿ – 66ರ ಬಸ್ರೂರು ಮೂರುಕೈ ಸಮೀಪ ನೀರು ತುಂಬಿಕೊಂಡಿದ್ದು, ವಾಹನ ಸವಾರರು ಪರದಾಡುವಂತಾಯಿತು. ಹೆದ್ದಾರಿ ಬದಿಯ ತೋಡುಗಳು ಬ್ಲಾಕ್ ಆಗಿದ್ದರಿಂದ ಕುಂದಾಪುರ ಕೆಎಸ್‌ಆರ್‌ಟಿಸಿ ಬಸ್ ಡಿಪೋದಿಂದ ವಿನಾಯಕ ಟಾಕೀಸ್ ತನಕ ರಸ್ತೆ ಮೇಲೆಯೇ ನೀರು ತುಂಬಿ ಹರಿಯುತ್ತಿದ್ದು, ಬಹಳ ಹೊತ್ತು ವಾಹನ ಸಂಚಾರ ಅಸ್ಥವ್ಯಸ್ಥವಾಗಿತ್ತು.  ರಾಷ್ಟ್ರೀಯ ಹೆದ್ದಾರಿಯ ಪ್ಲೈಓವರ್, ಡಿವೈಡರ್ ಕಾಮಗಾರಿಗಳು ಅರ್ದಕ್ಕೆ ನಿಂತಿದೆ.  ಅದು ಪೂರ್ಣಗೊಳ್ಳುವ ತನಕ ಅವಾಂತರ ತಪ್ಪಿದ್ದಲ್ಲ. ಪ್ರತಿಭಾರಿಯಂತೆಯೇ ಮಳೆಗಾಲ ಬರುವ ತನಕವೂ ನಿದ್ರಾವಸ್ಥೆಯಲ್ಲಿರುವ ಅಧಿಕಾರಿಗಳು, ಈ ಭಾರಿಯೂ ಅದನ್ನೂ ಸಾಕ್ಷೀಕರಿಸಿದ್ದಾರೆ. ಗ್ರಾಮೀಣ ಭಾಗಗಳಲ್ಲಿ ಕೊರೋನಾ ನಡುವೆ ಬಹಳಷ್ಟು ಗ್ರಾಮಗಳನ್ನು ಈವರೆಗೆ ಮಳೆಗಾಲದ ತಯಾರಿಯೇ ನಡೆದಿಲ್ಲ. ಇದು ಇನ್ನಷ್ಟು ಅವಾಂತರ ಸೃಷ್ಟಿಸುವ ಮೊದಲು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಎಚ್ಚೆತ್ತುಕೊಳ್ಳುತ್ತಾರಾ ಕಾದು ನೋಡುಬೇಕಿದೆ. ಕುಂದಾಪುರ ರಾಷ್ಟ್ರೀಯ ಹೆದ್ದಾರಿ ಬದಿಯ ತೋಡುಗಳಲ್ಲಿ ಬ್ಲಾಕ್ ತೆರವುಗೊಳಿಸಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ, ಜೂನ್.2: ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹಿಳಾ ಪೊಲೀಸ್ ಕಾನ್ಸ್ಟೇಬಲ್ ಓರ್ವರಿಗೆ ಮೊದಲ ವರದಿಯಲ್ಲಿ ಕೊರೋನಾ ಪಾಸಿಟಿವ್ ಬಂದಿದ್ದು, ಈಗ ಎರಡನೇ ವರದಿಯಲ್ಲಿ ನೆಗೆಟಿವ್ ಬಂದಿರುವುದು ದೃಢಪಟ್ಟಿದೆ. ಪೊಲೀಸರಿಗೆ ಮಾಡಲಾಗಿದ್ದ ತಪಾಸಣೆ ವೇಳೆ ಮಹಿಳಾ ಪೊಲೀಸ್ ಕಾನ್ಸ್ಟೇಬಲ್ ಅವರ ಮಾದರಿಯನ್ನು ಸಂಗ್ರಹಿಸಲಾಗಿತ್ತು. ಮೊದಲ ವರದಿಯಲ್ಲಿ ಕೊರೊನಾ ಪಾಸಿಟಿವ್ ಕಂಡುಬಂದಿತ್ತು. ಆದರೆ ಅವರಿಗೆ ಯಾವುದೇ ಟ್ರವೆಲ್ ಹಿಸ್ಟರಿ ಇಲ್ಲದೇ ಇರುವುದರಿಂದ ಮತ್ತೊಮ್ಮೆ ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದ್ದು, ಅದೀಗ ನೆಗೆಟಿವ್ ಬಂದಿದೆ. ಈ ಬಗ್ಗೆ ಎಎಸ್ಪಿ ಹರಿರಾಂ ಶಂಕರ್ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಮುಂಜಾಗೃತಾ ಕ್ರಮವಾಗಿ ಶಂಕರನಾರಾಯಣ ಪೊಲೀಸ್ ಠಾಣೆಯನ್ನು ಸ್ಯಾನಿಟೈನ್ ಮಾಡಲಾಗಿತ್ತು. ಮಹಿಳಾ ಪೊಲೀಸ್ ಕಾನ್ಸ್ಟೇಬಲ್ ಅವರ ಕೋಟತಟ್ಟು ಮನೆಯನ್ನು ಸೀಲ್ ಡೌನ್ ಮಾಡಲಾಗಿತ್ತು. ಇದೀಗ ಎರಡನೇ ವರದಿಯಲ್ಲಿ ನೆಗೆಟಿವ್ ಬಂದಿರುವುದರಿಂದ ಎಲ್ಲರೂ ನಿಟ್ಟುಸಿರು ಬಿಟ್ಟಿದ್ದಾರೆ. ಇದನ್ನೂ ಓದಿ: ► ಉಡುಪಿ ಜಿಲ್ಲೆಗಿಂದು ಅಮಂಗಳ: ಒಂದೇ ದಿನ 150 ಕೊರೋನಾ ಪಾಸಿಟಿವ್ ದೃಢ – https://kundapraa.com/?p=38168 . ►…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಮಂಗಳವಾರ ಗರಿಷ್ಠ ಪ್ರಕರಣ ದಾಖಲಾಗಿದೆ. ಜೂ.2ರ  ಉಡುಪಿ ಡಿಎಚ್‌ಓ ನೀಡುವರು ಮಾಹಿತಿಯ ಪ್ರಕಾರ ಒಟ್ಟು 150 ಹೊಸ ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿ ಸದ್ಯ ಒಟ್ಟು 410 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 64 ಮಂದಿ ಬಿಡುಗಡೆಯಾಗಿದ್ದು, 345 ಮಂದಿ ಕೊರೋನಾ ಸೋಂಕಿತರಿಗೆ ಉಡುಪಿ, ಕುಂದಾಪುರ, ಕಾರ್ಕಳದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈವರೆಗೆ ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ಕುಂದಾಪುರ ಸರಕಾರಿ ಆಸ್ಪತ್ರೆ ಕೋಟಕ್ಕೆ ಸ್ಥಳಾಂತರ: ಕುಂದಾಪುರ ಹಾಗೂ ಬೈಂದೂರು ಭಾಗದಲ್ಲಿ ಕೋವಿಡ್ ಪಾಸಿಟಿವ್ ಹೆಚ್ಚುತ್ತಿರುವುದರಿಂದ ಕುಂದಾಪುರ ಸರಕಾರಿ ಆಸ್ಪತ್ರೆಯನ್ನು ಸಂಪೂರ್ಣ ಕೋವಿಡ್ ಆಸ್ಪತ್ರೆಯನ್ನಾಗಿ ಮಾಡಲಾಗುತ್ತಿದೆ. ಈಗಿರುವ ಕುಂದಾಪುರ ತಾಲೂಕು ಆಸ್ಪತ್ರೆಯನ್ನು ತಾತ್ಕಾಲಿಕವಾಗಿ ಕೋಟ ಸಾರ್ವಜನಿಕ ಆಸ್ಪತ್ರೆಗೆ ಸ್ಥಳಾಂತರಿಸಲಾಗುತ್ತದೆ. ಹಳೆಯ ವಿನಯ ಆಸ್ಪತ್ರೆಯಲ್ಲಿ ಒಪಿಡಿಯನ್ನು ಆರಂಬಿಸಲಾಗುತ್ತದೆ. ಗರ್ಭಿಣಿಯರು ಹಾಗೂ ಬಾಣಂತಿರಯನ್ನು ಕೋಟ ಆಸ್ಪತ್ರೆಗೆ ಸ್ಥಳಾಂತರಿಸಲಾಗುತ್ತದೆ. ಕುಂದಾಪುರ ಹಾಗೂ ಬೈಂದೂರು ತಾಲೂಕಿನಲ್ಲಿ ಒಟ್ಟು 400 ಬೆಡ್ ಆಸ್ಪತ್ರೆಯನ್ನು ಮಾಡಲು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರ ಹಾಗೂ ಬೈಂದೂರು ಭಾಗದಲ್ಲಿ ಕೋವಿಡ್ ಪಾಸಿಟಿವ್ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕುಂದಾಪುರ ತಾಲೂಕು ಆಸ್ಪತ್ರೆಯನ್ನು ಸಂಪೂರ್ಣ ಕೋವಿಡ್ ಆಸ್ಪತ್ರೆಯನ್ನಾಗಿ ಮಾಡಲಾಗುತ್ತಿದೆ. ಆಸ್ಪತ್ರೆಯ ಸೇವೆಗಳನ್ನು ತ್ಕಾಲಿಕವಾಗಿ ಕೋಟ ಸಾರ್ವಜನಿಕ ಆಸ್ಪತ್ರೆಗೆ ಸ್ಥಳಾಂತರಿಸಲಾಗುತ್ತದೆ. ಹಳೆಯ ವಿನಯ ಆಸ್ಪತ್ರೆಯಲ್ಲಿ ಒಪಿಡಿಯನ್ನು ಆರಂಭಿಸುತ್ತಿದ್ದು, ಗರ್ಭಿಣಿಯರು ಹಾಗೂ ಬಾಣಂತಿರಯನ್ನು ಕೋಟ ಆಸ್ಪತ್ರೆಗೆ ಸ್ಥಳಾಂತರಿಸಲಾಗುವುದು ಎಂದು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ.   ಅವರು ಮಂಗಳವಾರ ಕುಂದಾಪುರ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭ ಮಾತನಾಡಿ, ಕಳೆದ ಎರಡು ದಿನಗಳಲ್ಲಿ ಬಾಕಿ ಇದ್ದ 3000 ವರದಿಗಳು ಬಂದಿದ್ದು, ಹಾಗಾಗಿ ಕೊರೋನಾ ಪಾಸಿಟಿವ್ ಪ್ರಕರಣ ಹೆಚ್ಚಿದೆ. ಕುಂದಾಪುರ ಹಾಗೂ ಬೈಂದೂರು ತಾಲೂಕಿನಲ್ಲಿ ಒಟ್ಟು 400 ಬೆಡ್ ಆಸ್ಪತ್ರೆಯನ್ನು ಮಾಡಲು ಯೋಜಿಸಲಾಗಿದೆ. ಕುಂದಾಪುರದಲ್ಲಿ ಈಗಾಗಲೇ 120 ಬೆಡ್ ಕೋವಿಡ್ ಆಸ್ಪತ್ರೆಯಿದ್ದು, ಅದನ್ನು ಪೂರ್ಣಪ್ರಮಾಣದಲ್ಲಿ ಕೋವಿಡ್ ಆಸ್ಪತ್ರೆ ಮಾಡಲಾಗುವುದು. ಆದರ್ಶ ಆಸ್ಪತ್ರೆಯಲ್ಲಿ 65 ಬೆಡ್ ಇದೆ. ಬೈಂದೂರು ತಾಲೂಕಿನಲ್ಲಿಯೂ ಹೆಚ್ಚಿನ ಪ್ರಕರಣ ವರದಿಯಾಗುತ್ತಿರುವುದರಿಂದ ಕೊಲ್ಲೂರು ಲಲಿತಾಂಬಿಕಾ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ನಿವೃತ್ತಿ ದಿನದ ಬೀಳ್ಕೋಡುಗೆ ಸಮಾರಂಭದಂದು ಠಾಣೆಯಲ್ಲಿ ಊಟ ಮಾಡುತ್ತಿದ್ದಾಗಲೇ ಬ್ರೈನ್ ಹ್ಯಾಮರೇಜ್‌ಗೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಕೋಟ ಪೊಲೀಸ್ ಠಾಣೆ ಎಎಸ್‌ಐ ಆನಂದ ವೆಂಕಟ್ ದೇವಾಡಿಗ (60) ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಎಎಸ್‌ಐ ಆನಂದ ವೆಂಕಟ್ ಅವರು ಮೇ ೩೧ರಂದು ನಿವೃತ್ತಿಯಾಗಬೇಕಿತ್ತು. ಅದೇ ಸಂಭ್ರಮದಲ್ಲಿ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಬೀಳ್ಕೊಡುಗೆ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಭಾನುವಾರ ಮಧ್ಯಾಹ್ನ ಠಾಣೆಯೊಳಗೆ ಊಟ ಮಾಡುತ್ತಿದ್ದಾಗಲೇ ಆನಂದ ವೆಂಕಟ್ ಕುಸಿದು ಬಿದ್ದಿದ್ದಾರೆ. ತಕ್ಷಣ ವಾಹನದಲ್ಲಿ ಸಮೀಪದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯದ್ದು ಹೆಚ್ಚಿನ ಚಿಕಿತ್ಸೆಗೆ ತಕ್ಷಣ ಮಣಿಪಾಲ ಆಸತ್ರೆಗೆ ಕರೆದೊಯ್ಯಲಾಯಿತು. ಮೃತರು ಪತ್ನಿ ಒಬ್ಬ ಮಗ ಹಾಗೂ ಒಬ್ಬಳು ಮಗಳನ್ನು ಅಗಲಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಮಂಗಳವಾರ ಒಂದೇ ದಿನ ಉಡುಪಿ ಜಿಲ್ಲೆಯಲ್ಲಿ ಬರೋಬ್ಬರಿ 210 ಜನರಿಗೆ ಸೋಂಕು ದೃಢವಾಗಿರುವ ಬಗ್ಗೆ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಸಚಿವ ಆರ್ ಅಶೋಕ್, ಉಡುಪಿಯಲ್ಲಿ ಇಂದು 210 ಮಂದಿಗೆ ಕೋವಿಡ್-19 ಸೋಂಕು ತಗುಲಿರುವುದು ಧೃಡವಾಗಿದೆ. ಮಹಾರಾಷ್ಟ್ರದಿಂದ ಬಂದ ಪ್ರಯಾಣಿಕರಲ್ಲೇ ಹೆಚ್ಚಿನ ಸೋಂಕು ಕಾಣಿಸಿಕೊಳ್ಳುrತ್ತಿರುವ ಕಾರಣ, ಮಹಾರಾಷ್ಟ್ರ ದಿಂದ ಬಂದವರ ಮೇಲೆ ತೀವ್ರ ನಿಗಾ ವಹಿಸಲು ನಿರ್ಧರಿಸಲಾಗಿದೆ ಎಂದು ಸಚಿವ ಆರ್. ಅಶೋಕ್ ಹೇಳಿದರು. ಜಿಲ್ಲೆಯಲ್ಲಿ ಈವರೆಗೆ 260 ಕೋವಿಡ್19 ಸೋಂಕು ಪ್ರಕರಣಗಳು ದೃಢವಾಗಿತ್ತು. ಇಂದಿನ 210 ಹೊಸ ಪ್ರಕರಣಗಳು ಕಾರಣದಿಂದ ಜಿಲ್ಲೆಯ ಸೋಂಕಿತರ ಸಂಖ್ಯೆ 470ಕ್ಕೆ ಏರಿಕೆ ಕಾಣಲಿದೆ./ಕುಂದಾಪ್ರ ಡಾಟ್ ಕಾಂ ಸುದ್ದಿ/ ► ಹೆಚ್ಚುತ್ತಿರುವ ಕೊರೋನಾ ಸೋಂಕು, ಆತಂಕ. ಜಿಲ್ಲಾಡಳಿತದ ಕೈಮೀರುತ್ತಿದೆಯೇ ಕೊರೋನಾ ನಿಯಂತ್ರಣ? – https://kundapraa.com/?p=38142 .

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಸೆಲೂನ್‌ಗಳಿಗೆ ಭಾನುವಾರ ಹೆಚ್ಚಿನ ಜನರು ತೆರಳುವ ರೂಢಿಯಿದ್ದು, ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಕಷ್ಟವಾಗುವುದರಿಂದ ಮಂಗಳವಾರದ ಬದಲಿಗೆ ಭಾನುವಾರವೇ ಸೆಲೂನ್‌ಗಳಿಗೆ ರಜೆ ಘೋಷಿಸುವ ನಿರ್ಣಯಕ್ಕೆ ಬರಲಾಗಿದೆ. ಉಡುಪಿಯ ಅಂಬಲಪಾಡಿ ಜಿಲ್ಲಾ ಸವಿತಾ ಸಮಾಜ ಕಟ್ಟಡದಲ್ಲಿ ಜಿಲ್ಲಾಧ್ಯಕ್ಷರಾದ ಭಾಸ್ಕರ ಭಂಡಾರಿ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ಜಿಲ್ಲೆಯ ಪದಾಧಿಕಾರಿಗಳು, ಏಳು ತಾಲೂಕುಗಳ ವಲಯ, ಘಟಕಗಳ ಅಧ್ಯಕ್ಷರು, ಸದಸ್ಯರ ತೀರ್ಮಾನದಂತೆ, ಸರ್ವಾನುಮತದ ನಿರ್ಣಯ ಕೈಗೊಳ್ಳಲಾಗಿದೆ. ಜಿಲ್ಲೆಯಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ತೆಗೆದುಕೊಂಡಿರುವ ಈ ನಿರ್ಣಯಕ್ಕೆ ಸವಿತಾ ಸಮಾಜದ ಬಂಧುಗಳು ಹಾಗೂ ಸಾರ್ವಜನಿಕರು ಸಹಕರಿಸುವಂತೆ ಸವಿತಾ ಸಮಾಜದ ಜಿಲ್ಲಾಧ್ಯಕ್ಷರು ತಿಳಿಸಿದ್ದಾರೆ/ಕುಂದಾಪ್ರ ಡಾಟ್ ಕಾಂ ಸುದ್ದಿ/ ಇದನ್ನೂ ಓದಿ: ► ಉಡುಪಿ ಜಿಲ್ಲೆ: ಬುಧವಾರ 62 ಕೊರೋನಾ ಪಾಸಿಟಿವ್ – https://kundapraa.com/?p=38228 . ► ಕ್ವಾರಂಟೈನ್ ಸಮಯದಲ್ಲಿ ತಪ್ಪು ವಿಳಾಸ ನೀಡಿದಲ್ಲಿ ಕ್ರಮ: ಜಿಲ್ಲಾಧಿಕಾರಿ ಜಿ. ಜಗದೀಶ್ – https://kundapraa.com/?p=38242 .…

Read More