Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕೊರೊನಾ ಹರಡುವಿಕೆಯ ಅಪಾಯದ ಬಗೆಗೆ ಮತ್ತು ಆ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಗ್ರಾಮೀಣ ಜನರು ಎಚ್ಚೆತ್ತಿದ್ದಾರೆ ಎನ್ನುವುದಕ್ಕೆ ಮರವಂತೆಯಲ್ಲಿ ಬುಧವಾರ ನಡೆದ ಘಟನೆಯೊಂದು ಸಾಕ್ಷಿಯಾಗಿದೆ. ಶಿರೂರು ಚೆಕ್‌ಪೋಸ್ಟ್ ಬಳಿಯ ತಪಾಸಣಾ ಕೇಂದ್ರದ ಅಧಿಕಾರಿಗಳ ಕಣ್ತಪ್ಪಿಸಿಕೊಂಡು ಹೊರ ರಾಜ್ಯದಿಂದ ಬಂದು ಮನೆ ಸೇರಲು ಯತ್ನಿಸಿದ ಮರವಂತೆ ನಡುಬೆಟ್ಟು ಪ್ರದೇಶದ ವ್ಯಕ್ತಿಯನ್ನು ಮನೆಯವರು ಮತ್ತು ನೆರೆಹೊರೆಯವರು ಸೇರಿ ಕ್ವಾರಂಟೈನ್‌ಗೆ ಕಳುಹಿಸುವ ಮೂಲಕ ಎಚ್ಚರ ಪ್ರದರ್ಶಿಸಿದ್ದಾರೆ. ಕುಂದಾಪ್ರ ಡಾಟ್ ಕಾಂ ಸುದ್ದಿ. ಮಹಾರಾಷ್ಟ್ರದ ನಾಸಿಕದಲ್ಲಿ ವೃತ್ತಿ ನಡೆಸುತ್ತಿದ್ದ ಆತ ವಾಹನಗಳನ್ನು ಬದಲಿಸುತ್ತ ಜಿಲ್ಲೆಯ ಉತ್ತರ ಗಡಿಯ ಶಿರೂರು ಚೆಕ್‌ಪೋಸ್ಟ್‌ಗಿಂತ ಹಿಂದೆಯೇ ಇಳಿದುಕೊಂಡಿದ್ದಾನೆ. ಸ್ನೇಹಿತನಿಗೆ ಕರೆಮಾಡಿ ಬೈಕ್ ತರಿಸಿಕೊಂಡು ಚೆಕ್‌ಪೋಸ್ಟ್‌ನ ತಪಾಸಣೆಗೆ ಒಳಗಾಗದೆ ಅವನ ಜತೆ ಮನೆಗೆ ಬಂದಿದ್ದಾನೆ. ಹೊರರಾಜ್ಯದಿಂದ ನೇರವಾಗಿ ಊರಿಗೆ ಹಿಂತಿರುಗಲು ಅವಕಾಶ ಇಲ್ಲ ಎನ್ನುವುದನ್ನು ಅರಿತಿರುವ ಮನೆಯವರು ಮತ್ತು ಅಕ್ಕಪಕ್ಕದವರು ಅವನನ್ನು ಮತ್ತು ಅವನ ಗಂಟುಮೂಟೆಗಳನ್ನು ಮನೆಗೆ ಸೇರಿಸಿಕೊಳ್ಳಲಿಲ್ಲ. ಅವನು ಹಾಗೆ ಬಂದಿರುವ ವಿಷಯವನ್ನು ಅವರು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಕೊಲ್ಲೂರು ಗ್ರಾಮ ಪಂಚಾಯತ್ ನೂತನ ಕಟ್ಟಡವನ್ನು ಬೈಂದೂರು ಕ್ಷೇತ್ರದ ಶಾಸಕರಾದ ಬಿ. ಎಂ ಸುಕುಮಾರ್ ಶೆಟ್ಟಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರಕಾಶ್ ಪೂಜಾರಿ, ತಾಲೂಕು ಪಂಚಾಯತ್ ಸದಸ್ಯೆ ಗ್ರೀಷ್ಮಾ ಗಿರಿಧರ ಭಿಡೆ, ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಪ್ರೇಮ, ಸದಸ್ಯರಾದ ಜಯಪ್ರಕಾಶ್ ಶೆಟ್ಟಿ, ವಿಶ್ವನಾಥ್ ಅಡಿಗ, ಎಸ್. ಕುಮಾರ್, ನೇತ್ರಾವತಿ ಆಚಾರ್ಯ, ದುರ್ಗಿ, ಗಿರಿಜಾ, ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ವ್ಯವಸ್ಥಾಪನ ಸಮಿತಿಯ ಮಾಜಿ ಸದಸ್ಯರಾದ ರಮೇಶ್ ಗಾಣಿಗ, ಕೊಲ್ಲೂರು ಉದ್ಯಮಿ ಸಂತೋಷ್ ಭಟ್, ಕೊಲ್ಲೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಉಪಾಧ್ಯಕ್ಷರಾದ ಸಂದೀಪ್ ಆರ್, ಸದಸ್ಯರಾದ ಚಂದ್ರಶೇಖರ್ ಅಡಿಗ, ಅರುಣ್ ಕುಮಾರ್ ಶೆಟ್ಟಿ, ನಾಗೇಶ್ ದಳಿ, ಅರುಣ್ ಕುಮಾರ್ ಶೆಟ್ಟಿ ಮಾವಿನಕಾರು, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಜೇಶ್ ಮತ್ತು ಗ್ರಾಮ ಪಂಚಾಯತ್ ಸಿಬ್ಬಂದಿ ವರ್ಗ ಹಾಗೂ ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷರು ಮತ್ತು ಸದಸ್ಯರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಉಡುಪಿ: ಜಿಲ್ಲೆಯಲ್ಲಿ ಬುಧವಾರ 6 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಜಿಲ್ಲೆಯಲ್ಲಿ ಸದ್ಯ ಒಟ್ಟು 21 ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ ಮೂವರು ಬಿಡುಗಡೆಯಗಿದ್ದು, 17 ಮಂದಿ ಕೊರೋನಾ ಸೋಂಕಿತರಿಗೆ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ಇದನ್ನೂ ಓದಿ: ► ಉಡುಪಿ ಜಿಲ್ಲೆಯಲ್ಲಿಂದು 6 ಕೊರೋನಾ ಪಾಸಿಟಿವ್. ಒಟ್ಟು 17ಕ್ಕೆ ಏರಿಕೆ – https://kundapraa.com/?p=37716 . ► ಸರಕಾರಿ ಕ್ವಾರಂಟೈನ್ ಕೇಂದ್ರಕ್ಕೆ ನೋಡೆಲ್ ಅಧಿಕಾರಿ: ಸಚಿವ ಕೋಟ ಶ್ರೀನಿವಾಸ ಪೂಜಾರಿ – https://kundapraa.com/?p=37710 . ► ಕರ್ನಾಟಕದ ಕರಾವಳಿಯಲ್ಲಿ ಜೂನ್ 1ರಿಂದ ಮೀನುಗಾರಿಕೆ ನಿಷೇಧ – https://kundapraa.com/?p=37707 . ► ಉಡುಪಿ: ಕ್ಯಾನ್ಸರ್ ಚಿಕಿತ್ಸೆಗೆ ಬಂದಿದ್ದ ಯುವತಿಗೆ ಕೊರೋನಾ ಪಾಸಿಟಿವ್ – https://kundapraa.com/?p=37700 .

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸರಕಾರಿ ಕ್ವಾರಂಟೈನ್ ಕೇಂದ್ರಗಳಲ್ಲಿನ ವ್ಯವಸ್ಥೆಗಳು ಸರಿಯಾಗಿ ನಡೆಯಲು ಪ್ರತಿ ಕೇಂದ್ರಗಳಿಗೂ ಒಬ್ಬರಂತೆ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಬೇಕು. ಕಂದಾಯ ಇಲಾಖೆಯಲ್ಲಿ ಅಧಿಕಾರಿಗಳ ಕೊರತೆಯಾದಲ್ಲಿ, ಗ್ರಾಮೀಣಾಭಿವೃದ್ಧಿ ಸೇರಿದಂತೆ ಇತರ ಇಲಾಖೆಗಳಿಂದ ಸಿಬ್ಬಂದಿಗಳ ನಿಯೋಜನೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ರಾಜ್ಯ ರಾಜ್ಯ ಮುಜರಾಯಿ ಹಾಗೂ ಮೀನುಗಾರಿಕಾ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಕುಂದಾಪುರ ತಾಲೂಕು ಪಂಚಾಯಿತಿಯ ಡಾ.ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ಮಂಗಳವಾರ ಕೋವಿಡ್-೧೯ ಗೆ ಸಂಬಂಧಿಸಿದಂತೆ ಪ್ರಾರಂಭಿಸಲಾದ ಕ್ವಾರಂಟೈನ್ ಕೇಂದ್ರಗಳ ನಿರ್ವಹಣೆಯ ಕುರಿತು ಅಧಿಕಾರಿಗಳ ಸಭೆ ನಡೆಸಿ ಮಾತನಾಡಿ, ಕ್ವಾರಂಟೈನ್ ವಾಸಿಗಳಿಗೆ ಆಹಾರ ನೀಡುವಲ್ಲಿ ಲೋಪ ಆಗಿಲ್ಲ, ಆದರೆ ಸರಬರಾಜು ಮಾಡುವಲ್ಲಿ ಲೋಪ ಆಗಿದೆ. ಕ್ವಾರಂಟೈನ್ ಕೇಂದ್ರಗಳಿಗೆ ಬಂದವರ ಗಂಟಲು ದ್ರವಗಳನ್ನು ಕೂಡಲೇ ತೆಗೆದು ಪರೀಕ್ಷೆ ಕಳುಹಿಸುತ್ತಿಲ್ಲ ಎನ್ನುವ ಕುರಿತು ದೂರುಗಳಿವೆ. ಸರ್ಕಾರಿ ಕ್ವಾರಂಟೈನ್ ಕೇಂದ್ರಗಳ ವ್ಯಾಪ್ತಿಯಲ್ಲಿ ಬರುವ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಸದಸ್ಯರು ಕೇಂದ್ರಗಳಿಗೆ ಭೇಟಿ ನೀಡಿ ಸಲಹೆ ಸೂಚನೆ ನೀಡುವುದರಿಂದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಉಡುಪಿ: ಕರ್ನಾಟಕ ಕರಾವಳಿ ಮೀನುಗಾರಿಕೆ ನಿಯಂತ್ರಣ ಕಾಯ್ದೆಯನ್ವಯ ಉಡುಪಿ ಜಿಲ್ಲೆಯನ್ನು ಸೇರಿದಂತೆ ಕರ್ನಾಟಕದ ಕರಾವಳಿಯಲ್ಲಿ ಯಾವುದೇ ಬಲೆಗಳನ್ನು / ಸಾಧನಗಳನ್ನು ಉಪಯೋಗಿಸಿ ಎಲ್ಲಾ ಯಾಂತ್ರೀಕೃತ ದೋಣಿಗಳ ಮುಖಾಂತರ ಹಾಗೂ 10 ಅಶ್ವಶಕ್ತಿ (ಹೆಚ್.ಪಿ) ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಇನ್‌ಬೋರ್ಡ್ ಅಥವಾ ಔಟ್‌ಬೋರ್ಡ್ ಯಂತ್ರಗಳನ್ನು ಅಳವಡಿಸಿರುವ ಸಾಂಪ್ರದಾಯಿಕ ದೋಣಿಗಳ ಮುಖಾಂತರ ಕೈಗೊಳ್ಳುವ ಮೀನುಗಾರಿಕೆ ಚಟುವಟಿಕೆಯನ್ನು ಜೂನ್ 1 ರಿಂದ ಜುಲೈ 31 ರವರೆಗೆ (ಉಭಯ ದಿನಗಳು ಸೇರಿ) ಒಟ್ಟು 61 ದಿನಗಳ ನಿಷೇಧವನ್ನು ಹೇರಿ ಆದೇಶ ಹೊರಡಿಸಿದೆ. ದೋಣಿಯನ್ನು ಸಾಗಿಸುವ ಉದ್ದೇಶಕ್ಕಾಗಿ 10 ಅಶ್ವಶಕ್ತಿಯ ವರೆಗಿನ ಸಾಮರ್ಥ್ಯದ ಮೋಟರೀಕೃತ ದೋಣಿ ಹಾಗೂ ಸಾಂಪ್ರದಾಯಕ / ನಾಡದೋಣಿಗಳು ಕರಾವಳಿ ಮೀನುಗಾರಿಕೆಯನ್ನು ಕೈಗೊಳ್ಳಲು ಅನುಮತಿಸಿದೆ. ಅಲ್ಲದೆ ಕೇಂದ್ರ ಕೃಷಿ, ಪಶುಸಂಗೋಪನೆ ಮತ್ತು ಮೀನುಗಾರಿಕೆ ಸಚಿವಾಲಯವು ಆದೇಶದಂತೆ ಕರ್ನಾಟಕ ಸೇರಿದಂತೆ ಪಶ್ಚಿಮ ಕರಾವಳಿಯ ಎಲ್ಲಾ ರಾಜ್ಯಗಳ ವಿಶೇಷ ಆರ್ಥಿಕ ವಲಯದ (12 ರಿಂದ 200 ನಾಟಿಕಲ್ ಮೈಲಿ) ಜಲಪ್ರದೇಶದಲ್ಲಿ ಜೂನ್ 1 ರಿಂದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮಣಿಪಾಲ ಕೆಎಂಸಿ ಆಸ್ಪತ್ರೆಗೆ ಕ್ಯಾನ್ಸ್‌ರ್ ಚಿಕಿತ್ಸೆಗಾಗಿ ಬಂದಿದ್ದ ಯುವತಿಗೆ ಕೊರೋನಾ ಪಾಟಿಸಿವ್ ಇರುವುದು ದೃಢಪಟ್ಟಿದ್ದು, ಐಸೋಲೇಶನ್ ವಾರ್ಡ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಚಿತ್ರದುರ್ಗದಿಂದ 17 ವರ್ಷದ ಯುವತಿ ಕ್ಯಾನ್ಸರ್ ಚಿಕಿತ್ಸೆಗಾಗಿ ಕೆಎಂಸಿ ಆಸ್ಪತ್ರೆಗೆ ಬಂದ್ದಿದ್ದು, ಈ ಸಂದರ್ಭ ಕೋವಿಡ್ ಪರೀಕ್ಷೆ ಮಾಡಲಾಗಿತ್ತು. ವೈದ್ಯರುಗಳು ಸುರಕ್ಷತಾ ಕ್ರಮಗಳನ್ನು ಅನುಸರಿಸಿ ಚಿಕಿತ್ಸೆ ನೀಡಲು ಆರಂಭಿಸಿದ್ದರು. ಅಂತಿಮವಾಗಿ ವರದಿಯಲ್ಲಿ ಕೊರೋನಾ ಪಾಸಿಟಿವ್ ಇರುವುದು ತಿಳಿದುಬಂದಿತ್ತು. ಯುವತಿಯು ಕ್ಯಾನ್ಸ್‌ರ್ ರೋಗಿಯಾಗಿರುವುದರಿಂದ ಉಡುಪಿ ಜಿಲ್ಲಾಧಿಕಾರಿಗಳು ಜಿಲ್ಲೆಯ ಪರಿಣತರ ಸಮಿತಿ ನೇತೃತ್ವದಲ್ಲಿ ಸಭೆ ನಡೆಸಿದ್ದು, ಆಕೆಗೆ ಹೇಗೆ ಚಿಕಿತ್ಸೆ ನೀಡಬೇಕು ಎಂಬುದರ ಬಗ್ಗೆ ಚರ್ಚಿಸಲಾಗಿದೆ. ಯುವತಿ ಚಿತ್ರದುರ್ಗದಿಂದ ಬಂದಿರುವುದರಿಂದ ಅಲ್ಲಿನ ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಆಕೆಯ ಸಂಪರ್ಕಕ್ಕೆ ಬಂದಿರುವವರನ್ನು ಹುಡುಕಿ ಕ್ವಾರಂಟೈನ್‌ಗೆ ಒಳಪಡಿಸಲಿದ್ದಾರೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ ನೀಡಿದ್ದಾರೆ. ಕೊರೋನಾ ಪಾಸಿಟಿವ್ ಇರುವ ಗರ್ಭಿಣಿ ಮಹಿಳೆಗೆ ಚಿಕಿತ್ಸೆ: ಮೇ.12ಕ್ಕೆ ಪತಿಯೊಂದಿಗೆ ಮಂಬೈನಿಂದ ಆಗಮಿಸಿ ಕೊಲ್ಲೂರಿನ ಕ್ವಾರಂಟೈನ್ ಕೇಂದ್ರವೊಂದರಲ್ಲಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಉಡುಪಿ: ಜಿಲ್ಲೆಯಲ್ಲಿ ಮಂಗಳವಾರ 4 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಮಂಬೈನಿಂದ ಬಂದಿದ್ದ 8 ವರ್ಷದ ಬಾಲಕ, 24  ವರ್ಷದ ಯುವತಿ, 24 ವರ್ಷದ ಯುವಕ ಹಾಗೂ 38 ವರ್ಷದ ಪುರಷನಿಗೆ ಕೊರೋನಾ ಪಾಸಿಟಿವ್ ಇರುವುದು ದೃಢವಾಗಿದೆ. ಚಿತ್ರದುರ್ಗ ಜಿಲ್ಲೆಯಿಂದ ಚಿಕಿತ್ಸೆಗೆ ಬಂದಿದ್ದ ಕ್ಯಾನ್ಸರ್ ರೋಗಿಯಾಗಿರುವ 17 ವರ್ಷದ ಬಾಲಕಿಗೂ ಕೊರೋನಾ ಇರುವುದು ದೃಢವಾಗಿದೆ. ಜಿಲ್ಲೆಯಲ್ಲಿ ಸದ್ಯ ಒಟ್ಟು 15 ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ ಮೂವರು ಬಿಡುಗಡೆಯಗಿದ್ದು, ಹನ್ನೆರಡು ಮಂದಿ ಕೊರೋನಾ ಸೋಂಕಿತರಿಗೆ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕೇಂದ್ರ ಸರ್ಕಾರದ ಜಲ ಜೀವನ್ ಮಿಷನ್ ಯೋಜನೆಯಡಿ , ಜಿಲ್ಲೆಯ ಗ್ರಾಮೀಣ ಪ್ರದೇಶದ ಪ್ರತಿ ಮನೆಗೆ ಶುದ್ದ ಕುಡಿಯುವ ನೀರು ಒಗದಿಸಲು ರೂ.415 ಕೋಟಿ ರೂ ಗಳ ಕ್ರಿಯ ಯೋಜನೆಯ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಲು ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಅನುಮೋದನೆ ನೀಡಲಾಯಿತು. ಜಲ ಜೀವನ್ ಮಿಷನ್ ಯೋಜನೆಯಡಿ 2024 ರೊಳಗೆ ಜಿಲ್ಲೆಯ ಗ್ರಾಮೀಣ ಪ್ರದೇಶದ ಪ್ರತಿ ವ್ಯಕ್ತಿಗೆ ವರ್ಷದ 365 ದಿನವೂ , ದಿನಕ್ಕೆ 55 ಲೀ ಶುದ್ದ ಕುಡಿಯುವ ನೀರು ಒಗದಿಸುವ ಯೋಜನೆ ಇದಾಗಿದ್ದು, ಜಿಲ್ಲೆಯಲ್ಲಿ ಈ ಯೋಜನೆಗಾಗಿ 415 ಕೋಟಿ ರೂ ಗಳ ಅಂದಾಜು ಪ್ರಸ್ತಾವನೆಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಲಾಗಿದ್ದು, ಈ ಪ್ರಸ್ತಾವನೆ ರಾಜ್ಯದಿಂದ ಕೇಂದ್ರ ಸರ್ಕಾರದ ಸಲ್ಲಿಕೆಯಾಗಿ, ಅನುಮೋದನೆ ದೊರೆಯಲಿದೆ ಎಂದು ತಿಳಿಸಿದ ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು, ಜಿಲ್ಲೆಯ ಪರಿಶಿಷ್ಟ ಜಾತಿ, ಪಂಗಡ ಸೇರಿದಂತೆ ಗ್ರಾಮೀಣ ಪ್ರದೇಶದ ಯಾವುದೇ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಸೋಮವಾರ 1 ಕೊರೋನಾ ಪಾಸಿಟಿವ್ ಪ್ರಕರಣ ದಾಖಲಾಗಿದೆ. 7 ತಿಂಗಳ ಗರ್ಭೀಣಿಗೆ ಕೊರೋನಾ ಪಾಸಿಟಿವ್ ಇರುವುದು ದೃಢವಾಗಿದೆ. ಮುಂಬೈನಿಂದ ಮಹಿಳೆಯೊಂದಿಗೆ ಪ್ರಯಾಣಿಸಿದ ಆಕೆಯ ಗಂಡನನ್ನು ಐಸೋಲೇಶನ್ ವಾರ್ಡಿಗೆ ಶಿಫ್ಟ್ ಮಾಡಲಾಗಿದ್ದು, ಅವರು ಬಂದಿರುವ ವಾಹನದಲ್ಲಿದ್ದ ಇತರರ ಗಂಟಲು ದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ಜಿಲ್ಲೆಯಲ್ಲಿ ಸದ್ಯ ಒಟ್ಟು 11 ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ ಮೂವರು ಬಿಡುಗಡೆಯಗಿದ್ದು, ಏಳು ಮಂದಿ ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ಇದನ್ನೂ ಓದಿ: ► ಜಲ್ ಜೀವನ್ ಮಿಷನ್: ಜಿಲ್ಲೆಯಿಂದ 415 ಕೋಟಿ ರೂ. ಪ್ರಸ್ತಾವನೆ – https://kundapraa.com/?p=37681

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಅಭಿಮಾನಿ ಬಳಗದಿಂದ ಶಿರೂರು ಲಾಕ್‌ಡೌನ್ ಚೆಕ್‌ಪೋಸ್ಟ್ ಮೂಲಕ ಹೊರರಾಜ್ಯಗಳಿಂದ ಜಿಲ್ಲೆಗೆ ಹಿಂತಿರುಗುತ್ತಿರುವವರಿಗೆ ಮಧ್ಯಾಹ್ನದ ಊಟ ವಿತರಿಸುವ ಕಾರ್ಯಕ್ರಮಕ್ಕೆ ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಶನಿವಾರ ಚಾಲನೆ ನೀಡಿದರು. ಮುಂಬೈಯಂತ ದೂರದ ಸ್ಥಳದಿಂದ ದಣಿದು ಬರುವ ನಮ್ಮ ಜಿಲ್ಲೆಯ ಪ್ರಯಾಣಿಕರು ಚೆಕ್‌ಪೋಸ್ಟ್‌ನಲ್ಲಿ ತಪಾಸಣೆಯಂತಹ ಪ್ರಕ್ರಿಯೆ ನಡೆಯುವ ವರೆಗೆ ಕಾಯಬೇಕಾಗುತ್ತದೆ. ಇಲ್ಲಿ ಯಾವುದೇ ಊಟ, ಉಪಹಾರ ಸಿಗುವುದಿಲ್ಲ. ಈ ಹಿನ್ನೆಲೆಯಲ್ಲಿ ಬರುವ ಎಲ್ಲರಿಗೆ ಮಧ್ಯಾಹ್ನದ ಊಟ ಬಡಿಸಲಾಗುವುದು. ಇದು ಚೆಕ್‌ಪೋಸ್ಟ್ ಕಾರ್ಯಾಚರಿಸುವ ವರೆಗೂ ಮುಂದುವರಿಯುವುದು ಎಂದರು. ಕೆಪಿಸಿಸಿ ಸದಸ್ಯರಾದ ಎಸ್. ಪ್ರಕಾಶ್ಚಂದ್ರ ಶೆಟ್ಟಿ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎಸ್.ರಾಜು ಪೂಜಾರಿ, ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಸ್.ಮದನ್ ಕುಮಾರ್, ಪ್ರಧಾನ ಕಾರ್ಯದರ್ಶಿ ಕೆ.ಮೋಹನ್ ಪೂಜಾರಿ, ವಾಸುದೇವ ಪೂಜಾರಿ, ಯುವ ಕಾಂಗ್ರೆಸ್ ಅಧ್ಯಕ್ಷ ಶೇಖರ ಪೂಜಾರಿ ಉಪ್ಪುಂದ, ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ತಬ್ರೇಜ್ ನಾಗೂರು, ಹಸನ್ ಮಾವಡ್,…

Read More