ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ದೇಶದ ಮೀನುಗಾರರ ಕಲ್ಯಾಣಕ್ಕಾಗಿ ಕೇಂದ್ರ ಸರಕಾರ 20 ಸಾವಿರ ಕೋಟಿ ರೂ. ಅನುದಾನ ನೀಡಿರುವುದು ಐತಿಹಾಸಿಕ ನಿರ್ಧಾರವಾಗಿದೆ. ರಾಜ್ಯದ ಮೀನುಗಾರಿಕಾ ಸಚಿವನಾಗಿ ಅದನ್ನು ಯೋಜನಾಬದ್ಧವಾಗಿ ವಿನಿಯೋಗಿಸಿ ಮೀನುಗಾರಿಕೆಯನ್ನು ಶ್ರೇಷ್ಠ ಉದ್ಯಮವಾಗಿ ಪರಿವರ್ತಿಸಲು ಚಿಂತನೆ ನಡೆಸಲಾಗುವುದು ಎಂದು ಮೀನುಗಾರಿಕಾ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಸುದ್ದಿಗಾರರೊಂದಿಗೆ ಅವರು ಮಾತನಾಡಿ ಮೀನುಗಾರಿಕೆಗೆ ಮುಂದಿನ ಐದು-ಹತ್ತು ವರ್ಷಗಳಲ್ಲಿ ಮಾಡಬಹುದಾದ ಕಾರ್ಯದ ಬಗ್ಗೆ ತಜ್ಞರು, ಹಿರಿಯ ಮೀನುಗಾರರ ಸಭೆ ಕರೆದು ಯೋಜನೆ ರೂಪಿಸಲಾಗುವುದು ಎಂದರು. ದೇಶದ ಇತಿಹಾಸದಲ್ಲಿಯೇ ಯಾವುದೇ ಸರ್ಕಾರ ತನ್ನ ಜಿಡಿಪಿಯ ಶೇ. 10ರಷ್ಟನ್ನು ಅಭಿವೃದ್ಧಿಗಾಗಿ ಹಾಗೂ ಜನರ ಸಮಸ್ಯೆಗಳನ್ನು ಬಗೆಹರಿಸಲು ಅನುದಾನ ಒದಗಿಸಿರುವುದು ಇದೇ ಮೊದಲು. 20 ಲಕ್ಷ ಕೋಟಿ ಅನುದಾನದಲ್ಲಿ ದೇಶದ ಕೈಗಾರಿಕೆ, ಕೃಷಿ, ಬೆಳವಣೆಗೆಗೆ ಪೂರಕವಾಗಲಿದೆ ಎಚಿದರು. ದೇವಳಗಳಲ್ಲಿ ನಿತ್ಯ ಪೂಜೆ ನಡೆಯುತ್ತಿದೆ: ರಾಜ್ಯದಲ್ಲಿರುವ 34 ಸಾವಿರ ದೇವಾಲಯಗಳಲ್ಲಿಯೂ ಕೂಡಾ ನಿತ್ಯ ಪೂಜೆ ನಡೆಯುತ್ತಿದ್ದು, ಸಾಮಾಜಿಕ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮುಂಬೈನಿಂದ ಬಂದು ಕ್ವಾರಂಟೈನ್ನಲ್ಲಿದ್ದ ಕುಂದಾಪುರ ಮೂಲದ ವ್ಯಕ್ತಿಯೋರ್ವರು (54 ವರ್ಷ) ವ್ಯಕ್ತಿಯೋರ್ವರು ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು, ಅವರಿಗೆ ಕೊರೋನಾ ಪಾಸಿಟಿವ್ ಇದ್ದಿರುವುದು ವರದಿಯಲ್ಲಿ ದೃಢಪಟ್ಟಿದೆ. ಮೇ 13 ರಂದು ಕುಂದಾಪುರದಲ್ಲಿ ಕ್ವಾರಂಟೈನ್ ಇದ್ದ ವ್ಯಕ್ತಿಯನ್ನು ಎದೆನೋವು ಕಾಣಿಸಿಕೊಳ್ಳುತ್ತಿದ್ದಂತೆಯೇ ಕುಂದಾಪುರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಎದೆನೋವು ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಅವರನ್ನು ಮಣಿಪಾಲದದ ಖಾಸಗಿ ಆಸ್ಪತ್ರೆಗೆ ದಾಖಲಾಯಿತು. ವ್ಯಕ್ತಿಗೆ ಉಸಿರಾಟದ ತೊಂದರೆ ಇದ್ದ ಕಾರಣ ಐಸೋಲೇಷನ್ ವಾರ್ಡ್ನಲ್ಲಿ ಕೊರೋನಾ ಮಾರ್ಗಸೂಚಿಯಂತೆಯೇ ಚಿಕಿತ್ಸೆ ನೀಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ವ್ಯಕ್ತಿ ಮೇ 14ರಂದು ಸಾವನ್ನಪ್ಪಿದ್ದಾರೆ. ಕೊರೊನಾ ಶಂಕೆ ಇರುವ ಹಿನ್ನೆಲೆಯಲ್ಲಿ ವ್ಯಕ್ತಿಯ ಗಂಟಲಿನ ದ್ರವನ್ನು ಪರೀಕ್ಷೆಗಾಗಿ ಕಳುಹಿಸಲಾಗಿತ್ತು. ಇಂದು ವರದಿ ಕೈಸೇರಿದ್ದು, ಅವರಿಗೆ ಕೊರೋನಾ ಸೊಂಕು ಇರುವುದು ಪರೀಕ್ಷಾ ವರದಿಯಲ್ಲಿ ದೃಢಪಟ್ಟಿದೆ. ಅವರಿಗೆ ಚಿಕಿತ್ಸೆ ನೀಡಿದ ಸಿಬ್ಬಂದಿಗಳನ್ನು ಕ್ವಾರಂಟೈನ್ ಮಾಡಲಾಗಿದೆ. ಅವರ ಟ್ರಾವೆಲ್ ಹಿಸ್ಟರಿ ಪಡೆಯಲಾಗುತ್ತಿದ್ದು, ಸಂಪರ್ಕಕ್ಕೆ ಬಂದವರ ಮಾಹಿತಿ ಕಲೆಹಾಕಲಾಗುತ್ತಿದೆ. ಸರಕಾರದ ಮಾರ್ಗಸೂಚಿಯಂತೆ ಆಸ್ಪತ್ರೆಯ ತುರ್ತು ಚಿಕಿತ್ಸಾ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮುಂಬೈನಿಂದ ಬಂದು ಕ್ವಾರಂಟೈನ್ನಲ್ಲಿದ್ದ ಕುಂದಾಪುರ ಮೂಲದ ವ್ಯಕ್ತಿಯೋರ್ವರು (54 ವರ್ಷ) ವ್ಯಕ್ತಿಯೋರ್ವರು ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಮೇ 13 ರಂದು ಎದೆನೋವು ಕಾಣಿಸಿಕೊಳ್ಳುತ್ತಿದ್ದಂತೆಯೇ ವ್ಯಕ್ತಿಯನ್ನು ಕುಂದಾಪುರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಎದೆನೋವು ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಅವರನ್ನು ಮಣಿಪಾಲದದ ಖಾಸಗಿ ಆಸ್ಪತ್ರೆಗೆ ದಾಖಲಾಯಿತು. ಚಿಕಿತ್ಸ ಫಲಕಾರಿಯಾಗದೆ ವ್ಯಕ್ತಿ ಮೇ 14ರಂದು ಸಾವನ್ನಪ್ಪಿದ್ದಾರೆ. ಕೊರೊನಾ ಶಂಕೆ ಇರುವ ಹಿನ್ನೆಲೆಯಲ್ಲಿ ವ್ಯಕ್ತಿಯ ಗಂಟಲಿನ ದ್ರವನ್ನು ಪರೀಕ್ಷೆಗಾಗಿ ಕಳುಹಿಸಲಾಗಿದ್ದು, ವರದಿ ಇನ್ನಷ್ಟೇ ಬರಬೇಕಾಗಿದೆ. ಅವರಿಗೆ ಚಿಕಿತ್ಸೆ ನೀಡಿದ ಸಿಬ್ಬಂದಿಗಳನ್ನು ಕ್ವಾರಂಟೈನ್ ಮಾಡಲಾಗಿದೆ./ಕುಂದಾಪ್ರ ಡಾಟ್ ಕಾಂ ಸುದ್ದಿ/ ಇದನ್ನೂ ಓದಿ: ► ಉಡುಪಿ ಜಿಲ್ಲೆ: ಒಂದು ವರ್ಷದ ಮಗುವಿಗೆ ಕೊರೋನಾ ಪಾಸಿಟಿವ್ – https://kundapraa.com/?p=37614 .
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಜಿಲ್ಲೆಯಲ್ಲಿ ಸುಮಾರು 4,500ಕ್ಕೂ ಅಧಿಕ ಜನರು ಹೊರರಾಜ್ಯದಿಂದ ಆಗಮಿಸಿದ್ದು, ಅವರ ಕ್ವಾರೈಂಟನ್ಗಾಗಿ 100 ರಿಂದ 120 ಕೇಂದ್ರಗಳನ್ನು ತೆರೆಯಲಾಗಿದೆ. ಕೆಲವೊಂದು ಕೇಂದ್ರಗಳಲ್ಲಿ ಸಣ್ಣಪುಟ್ಟ ಮೂಲಸೌಕರ್ಯದ ಕೊರತೆ ಕಂಡು ಬಂದಿದ್ದು, ಅದನ್ನು ಸಮರ್ಪಕವಾಗಿ ನಿಭಾಯಿಸುವಂತೆ ಜಿಲ್ಲಾಡಳಿತಕ್ಕೆ ಹಾಗೂ ಸಂಬಂದಿಸಿದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮೀನುಗಾರಿಕಾ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಶನಿವಾರ ಬೈಂದೂರು ತಾಲೂಕು ವ್ಯಾಪ್ತಿಯಲ್ಲಿರುವ ಸರ್ಕಾರಿ ಕ್ವಾರೈಂಟಿನ್ ಕೇಂದ್ರಗಳಿಗೆ ಹಾಗೂ ಶಿರೂರು ಗಡಿಯಲ್ಲಿನ ತಪಾಸಣಾ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿ ಕ್ವಾರೈಂಟನ್ನಲ್ಲಿರುವವರಿಗೆ ಉಟೋಪಚಾರದ ಸಮಸ್ಯೆಯಾಗದಂತೆ ದೇವಾಲಯಗಳಿಂದ ಭರಿಸಲು ಆದೇಶಿಸಲಾಗಿದೆ ಎಂದರು. ಹೊರರಾಜ್ಯದಿಂದ ರಾಜ್ಯಕ್ಕೆ ಆಗಮಿಸಿದ ಎಲ್ಲರಿಗೂ 14 ದಿನಗಳ ಸರ್ಕಾರಿ ಕ್ವಾರೈಂಟನ್ ಕಡ್ಡಾಯವಾಗಿದೆ. ಆದರೆ ಚಿಕ್ಕಮಕ್ಕಳು, ಗರ್ಭೀಣಿ ಸ್ತ್ರೀಯರು ಹಾಗೂ ವಯೋವೃದ್ಧರ ಗಂಟಲು ದ್ರವ ಪರೀಕ್ಷೆಯ ಫಲಿತಾಂಶ ನೆಗೆಟಿವ್ ಎಂದು ಕಂಡುಬಂದರೆ ಅವರಿಗೆ ಮಾತ್ರ 14 ದಿನಗಳ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಭಾರತದಲ್ಲಿ ಪ್ರತೀ ವರ್ಷ 20 ಲಕ್ಷ ಯೂನಿಟ್ ರಕ್ತದ ಕೊರತೆ ಕಂಡುಬರುತ್ತಿದೆ, ಆದ್ದರಿಂದ ರಕ್ತದಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡಬೇಕು ಎಂದು ಕುಂದಾಪುರ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಆಶೀಶ್ ರೆಡ್ಡಿ ತಿಳಿಸಿದ್ದಾರೆ. ಅವರು ಶನಿವಾರ, ಕರ್ನಾಟಕ ರಾಜ್ಯ ಅರಣ್ಯ ರಕ್ಷಕ ಮತ್ತು ವೀಕ್ಷಕರ ಸಂಘ, ಕುಂದಾಪುರ ಪ್ರಾದೇಶಿಕ ಹಾಗೂ ಕುದುರೆಮುಖ ವನ್ಯಜೀವಿ ವಿಭಾಗ, ರಕ್ತನಿಧಿ ಕೇಂದ್ರ, ಜಿಲ್ಲಾ ಸರಕಾರಿ ಆಸ್ಪತ್ರೆ ಉಡುಪಿ ಸಹಯೋಗದಲ್ಲಿ, ಉಡುಪಿಯ ಪುರಭವನದ ಬಳಿ ಗ್ರಂಥಾಲಯ ಕಟ್ಟಡದಲ್ಲಿ ನಡೆದ ರಕ್ತದಾನ ಶಿಬಿರ ಉದ್ಘಾಟಿಸಿ, ಶಿಬಿರದಲ್ಲಿ ಸ್ವಯಂ ರಕ್ತದಾನ ಮಾಡಿ ಮಾತನಾಡಿದರು. ದೇಶದಾದ್ಯಂತ ಲಾಕ್ಡೌನ್ ಅವಧಿಯಲ್ಲಿ ರಕ್ತದ ಕೊರತೆ ಅಧಿಕವಾಗಿದ್ದು, ಇಂತಹ ಸಮಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನಿಗಳು ರಕ್ತದಾನ ಮಾಡುವಂತೆ ತಿಳಿಸಿದ ಡಿಎಫ್ಓ ಆಶೀಶ್ ರೆಡ್ಡಿ ಅವರು, ರಕ್ತದಾನದಿಂದ ಮತ್ತೊಬ್ಬರ ಜೀವ ಉಳಿಸುವ ಜೊತೆಗೆ, ನಮ್ಮ ದೇಹದಲ್ಲಿ ರೋಗ ನಿರೋಧಕ ಶಕ್ತಿ ಅಧಿಕವಾಗುತ್ತದೆ, ಸಮಾಜಕ್ಕೆ ಸೇವೆ ಸಲ್ಲಿಸಿದ ಆತ್ಮ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಶನಿವಾರ ಒಂದು ಕೊರೋನಾ ಪಾಸಿಟಿವ್ ಪ್ರಕರಣ ದಾಖಲಾಗಿದೆ. ದುಬೈನಿಂದ ವಾಪಾಸಾಗಿರುವ ಹಿನ್ನೆಲೆಯಿರುವ ಒಂದು ವರ್ಷದ ಮಗುವಿಗೆ ಕೊರೋನಾ ವರದಿ ಪಾಸಿಟಿವ್ ಬಂದಿದೆ. ಮೇ 12ರಂದು ಮಂಗಳೂರಿಗೆ ಆಗಮಿಸಿದ ವಿಮಾನದಲ್ಲಿ ತನ್ನ ಪೋಷಕರೊಂದಿಗೆ ಮಗು ಆಗಮಿಸಿತ್ತು. ಈಗಾಗಲೇ ಮಧ್ಯಾಹ್ನ ಮಗುವಿನ ತಂದೆ ಹಾಗೂ ತಾಯಿಯಲ್ಲಿ ಪಾಸಿಟಿವ್ ಕಂಡುಬಂದಿತ್ತು. ಒಂದು ವರ್ಷದ ಮಗು ತಾಯಿಯೊಂದಿಗೆ ಆಸ್ಪತ್ರೆಯಲ್ಲಿತ್ತು ಎನ್ನಲಾಗಿದೆ. ಇದೀಗ ಮಗುವನ್ನು ಪ್ರತ್ಯೇಕವಾಗಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಉಡುಪಿ ಜಿಲ್ಲೆಯಲ್ಲಿ ಸದ್ಯ ಇರುವ ಸೋಂಕಿತರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ. ಉಡುಪಿ ಜಿಲ್ಲೆಯಲ್ಲಿ ಒಟ್ಟು 9 ಪ್ರಕರಣಗಳು ದಾಖಲಾಗಿದ್ದು, 3 ಬಿಡುಗಡೆಯಗಿದ್ದು, 6 ಮಂದಿ ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಶಿರೂರು ಟೋಲ್ಗೇಟ್ ಬಳಿಯ ಕೋವಿಡ್-19 ತಪಾಸಣಾ ಕೇಂದ್ರದಲ್ಲಿ ಹೊರರಾಜ್ಯಗಳಿಂದ ಬರುತ್ತಿರುವ ಜನರಿಗಾಗಿ ಸಂಸದ ಬಿ. ವೈ. ರಾಘವೇಂದ್ರ ಅವರ ನಿರ್ದೇಶನದಂತೆ ಬಿವೈಆರ್ ಅಭಿಮಾನಿಗಳು ಬಳಗದ ಮೂಲಕ ಉಚಿತವಾಗಿ ಜ್ಯೂಸ್ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲಾಗಿದೆ. ನಿರಂತರವಾಗಿ ಇಲ್ಲಿ ಜ್ಯೂಸ್ , ಕುಡಿಯುವ ನೀರು ವಿತರಣೆ ನಡೆಯಲಿದ್ದು, ಶುಕ್ರವಾರದಿಂದ ಚಾಲನೆ ದೊರೆತಿದೆ. ಸ್ಥಳೀಯ ಸ್ವಯಂಸೇವಕರುಗಳ ತಂಡ ಈ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ನೂರಾರು ಮಂದಿ ಇದರ ಪ್ರಯೋಜನ ಪಡೆದುಕೊಳ್ಳುತ್ತಿದ್ದಾರೆ.
ಕುಂದಾಪ್ರ ಡಾಟ್ ಕಾಂ. ಕುಂದಾಪುರ: ಕಳೆದ ಒಂದೂವರೆ ತಿಂಗಳುಗಳಿಂದ ಕೆಲಸವಿಲ್ಲದೇ, ವ್ಯವಹಾರವಿಲ್ಲದೇ ಹೋಟೆಲ್ ಕಾರ್ಮಿಕರು ಹಾಗೂ ಮಾಲಿಕರು ಸಂಕಷ್ಟ ಅನುಭವಿಸುತ್ತಿದ್ದಾರೆ. ಹೋಟೆಲ್ ಕಾರ್ಮಿಕರು, ಮಾಲಿಕರಿಗೆ ಸರಕಾರ ಯಾವುದೇ ಪ್ಯಾಕೇಜ್ ಘೋಷಿಸಿಲ್ಲ. ಇಂತಹ ಸಂದರ್ಭದಲ್ಲಿ ಸರಕಾರ ಸ್ಪಂದಿಸಬೇಕಿದೆ ಎಂದು ಹೋಟೆಲ್ ಉದ್ಯಮಿ ಚಂದ್ರಶೇಖರ ಶೆಟ್ಟಿ ತಮ್ಮ ಹೋಟೇಲ್ ಉದ್ಯಮದ ನೋವನ್ನು ಹೇಳಿಕೊಂಡಿದ್ದಾರೆ. ಹೋಟೆಲ್ ಮಾಲಿಕರು, ಕಾರ್ಮಿಕರಿಗೆ ಯಾವುದೇ ಆರ್ಥಿಕ, ಸಾಮಾಜಿಕ ಭದ್ರತೆ ಇಲ್ಲ. ಹೋಟೆಲ್ ಮಾಡಿ ಕೋಟೆಗಟ್ಟಲೆ ಕಳೆದುಕೊಂಡರೂ ಕೇಳುವವರಿಲ್ಲ. ಕಾರ್ಮಿಕರು ಕೆಲಸ ಕಳೆದುಕೊಂಡರೆ, ಮಾಲಿಕರು ಸಂಬಳ ಕೊಡದಿದ್ದರೇ, ಕೆಲಸ ಮಾಡುವಾಗ ಅಪಘಾತ ಸಂಭವಿಸಿದರೆ, ಕಾರ್ಮಿಕ ಮೃತಪಟ್ಟರೆ ಕೇಳುವವರೆ ಇಲ್ಲದಾಗಿದೆ. ಹೋಟೆಲ್ ಕಾರ್ಮಿಕರಿಗೆ ಯಾವುದೇ ಗುರುತಿನ ಚೀಟಿ ಕೊಡಲಾಗಿಲ್ಲ. ಸರಕಾರದ ಯಾವುದಾದರೂ ಯೋಜನೆ ಬಂದರೂ ಅಲ್ಲಿ ಕೆಲಸ ಮಾಡುವರಿಗೆ ನಾನೊಬ್ಬ ಕಾರ್ಮಿಕ ಎಂದು ಹೇಳಲು ಯಾವುದೇ ದಾಖಲೆಗಳಿಲ್ಲ. ಹಾಗಾಗಿ ಐಡಿ ಕಾರ್ಡ್ ಒದಗಿಸುವಲ್ಲಿ ಹೋಟೆಲ್ ಅಸೋಸಿಯೇಷನ್ ಹಾಗೂ ಸರಕಾರದಲ್ಲಿ ಕ್ರಮ ಕೈಗೊಳ್ಳಬೇಕು ಮತ್ತು ಹೋಟೆಲ್ ಕಾರ್ಮಿಕರು ಮತ್ತು ಮಾಲಿಕರ ನೆರವಿದೆ ಸರಕಾರ ಧಾವಿಸಬೇಕು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕರಾವಳಿ ಕಾವಲು ಪೊಲೀಸ್ ಠಾಣೆ ಗಂಗೊಳ್ಳಿ, ಅರಣ್ಯ ಇಲಾಖೆ ಬೈಂದೂರು ನೇತೃತ್ವದಲ್ಲಿ ಪಡುವರಿ ಗ್ರಾಮ ಪಂಚಾಯತ್ ಸಹಕಾರದೊಂದಿಗೆ ಶುಕ್ರವಾರ ಸೋಮೇಶ್ವರ ಬೀಚ್ ಸ್ವಚ್ಛತಾ ಕಾರ್ಯ ನಡೆಯಿತು. ಗಂಗೊಳ್ಳಿ ಕರಾವಳಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸಂದೀಪ್ ಜಿ. ಎಸ್. ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಬ್ ಇನ್ಸ್ಪೆಕ್ಟರ್ ಭಾಸ್ಕರ್ ಬೈಂದೂರು, ಪೊಲೀಸ್ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳು ಉಪಸ್ಥಿತರಿದ್ದರು. ಇದನ್ನೂ ಓದಿ: ► ಸ್ವಚ್ಛತೆಗೆ ಪ್ರಾಶಸ್ತ್ಯ ನೀಡುವುದರಿಂದ ಸಮಾಜದಲ್ಲಿ ಗುಣಾತ್ಮಕ ಬದಲಾವಣೆ: ಸಂದೀಪ ಜಿ. ಎಸ್ – https://kundapraa.com/?p=35688 .
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ:ಕ್ವಾರಂಟೈನ್ ಕೇಂದ್ರಗಳಲ್ಲಿ ಇರುವವರು ನಮ್ಮಂತೆಯೇ ಮನುಷ್ಯರು. ಅವರನ್ನು ಖೈದಿಗಳು, ರೋಗಿಗಳಂತೆ ನೋಡದೇ ಸರಿಯಾದ ಸಮಯಕ್ಕೆ ಊಟ-ತಿಂಡಿ ವ್ಯವಸ್ಥೆ ಮಾಡಿ, ಅಗತ್ಯ ಸೌಕರ್ಯಗಳನ್ನು ಒದಗಿಸಿ ಎಂದು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅಧಿಕಾರಿಗಳಿಗೆ ತಿಳಿಸಿದರು. ಅವರು ಶುಕ್ರವಾರ ಇಲ್ಲಿನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಅಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ವಿವಿಧ ಪಕ್ಷಗಳ ಮುಖಂಡರೊಂದಿಗೆ ನಡೆಸಿದ ಸಭೆಯಲ್ಲಿ ಮಾತನಾಡಿದರು. ಕ್ವಾರಂಟೈನ್ ಕೇಂದ್ರಗಳ ಬಗೆಗೆ ದೂರುಗಳು ಕೇಳಿಬರುತ್ತಿವೆ. ಕ್ವಾರಂಟೈನ್ ಕೇಂದ್ರಗಳಲ್ಲಿ ಆಗುವ ತೊಂದರೆ ಬಗ್ಗೆ ಮೊದಲೇ ಅಧಿಕಾರಿಗಳಿಗೆತಿಳಿಸಿದ್ದೆ. ಆದರೆ ಎಲ್ಲವನ್ನೂ ನಾವು ಮಾಡುತ್ತೇವೆ ಎಂದು ಹೇಳಿ ಈಗ ಅವ್ಯವಸ್ಥೆಯಾಗಿದೆ ಎಂದರು. ಕುಂದಾಪುರ ಕ್ಷೇತ್ರ ವ್ಯಾಪ್ತಿಯ ಒಂಭತ್ತು ಕ್ವಾರಂಟೈನ್ ಸೆಂಟರ್ಗಳಿಗೆ ದೇವಸ್ಥಾನದ ಊಟ ಪೂರೈಕೆಯಾಗುತ್ತಿದೆ. ಎರಡೇ ವಾಹನದಿಂದ ಊಟ ಸಾಗಾಟವಾಗುತ್ತಿರುವುದರಿಂದ ಕೆಲ ಕೇಂದ್ರಗಳಿಗೆ ಸರಿಯಾದ ಸಮಯದಲ್ಲಿ ಊಟ ಪೂರೈಸಲು ಸಾಧ್ಯವಾಗುತ್ತಿಲ್ಲ ಎಂಬ ಅಭಿಪ್ರಾಯ ವ್ಯಕ್ತವಾದ ಹಿನ್ನೆಲೆಯಲ್ಲಿ ಊಟ ಪೂರೈಕೆಯಲ್ಲಿ ಸಮಸ್ಯೆಯಾಗಬಾರದೆಂಬ ನಿಟ್ಟಿನಲ್ಲಿ ಗ್ರಾ.ಪಂ ಮಟ್ಟದಲ್ಲಿ ಸಮಿತಿ ರಚಿಸುವ ತನಕವೂ…
