Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಶ್ರೀರಾಮ ವಿವಿಧೋದ್ದೇಶ ಟ್ರಸ್ಟ್ ಆಶ್ರಯದಲ್ಲಿ ಪುಸ್ತಕ ವಿತರಣೆ ಹಾಗೂ ಅಭಿನಂದನಾ ಸಮಾರಂಭ ಇಲ್ಲಿನ ಶ್ರೀ ಸೀತಾರಾಮಚಂದ್ರ ಕಲ್ಯಾಣ ಮಂಟಪದಲ್ಲಿ ಜರುಗಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ವಿಶ್ವ ರಾಮಕ್ಷತ್ರಿಯ ಮಹಾಸಂಘದ ಅಧ್ಯಕ್ಷ ಶಶಿಧರ್ ನಾಯ್ಕ್ ಮಾತನಾಡಿ ರಾಮಕ್ಷತ್ರಿಯ ಸಮಾಜ ಸಾಮಾಜಿಕವಾಗಿ ಹಾಗೂ ಆರ್ಥಿಕವಾಗಿ ಅಭಿವೃದ್ಧಿ ಸಾಧಿಸುವುದು ಬಹುಮುಖ್ಯವಾಗಿದ್ದು ಆ ನೆಲೆಯಲ್ಲಿ ಉಳ್ಳವರು ಇಲ್ಲದವರಿಗೆ ಒಂದಿಲ್ಲೊಂದು ರೂಪದಲ್ಲಿ ನೆರವಾಗಬೇಕಿದೆ. ವಿಶ್ವ ರಾಮಕ್ಷತ್ರಿಯ ಮಹಾಸಂಘದ ಮೂಲಕ ರಾಮಕ್ಷತ್ರಿಯರ ಒಟ್ಟು ಜನಸಂಖ್ಯೆಯ ಮಾಹಿತಿ ಕಲೆಹಾಕುವ ಕಾರ್ಯ ಆರಂಭಿಸಲಾಗಿದೆ. ಎಲ್ಲಾ ರಾಮಕ್ಷತ್ರಿಯ ಸಂಘಗಳನ್ನು ಒಂದುಗೂಡಿಸಿ ಸಮಾಜದ ಅಭ್ಯುದಯಕ್ಕಾಗಿ ಶ್ರಮಿಸಲಾಗುವುದು ಎಂದರು. ಅಧ್ಯಕ್ಷತೆ ವಹಿಸಿದ್ದ ಶ್ರೀ ರಾಮ ವಿವಿಧೋದ್ದೇಶ ಟ್ರಸ್ಟ್ ಅಧ್ಯಕ್ಷರಾದ ಬಿ. ರಾಮಕೃಷ್ಣ ಶೇರುಗಾರ್ ಮಾತನಾಡಿ, ರಾಮಕ್ಷತ್ರಿಯ ಸಮಾಜದವರಿಗಾಗಿ ವಿವಿಧ ಸಹಾಯ, ನೆರವು ನೀಡುವ ಉದ್ದೇಶದಿಂದ ಆರಂಭಿಸಲಾದ ಟ್ರಸ್ಟ್ ಮೂಲಕ ಹತ್ತಾರು ಸೇವಾ ಕಾರ್ಯಗಳನ್ನು ಮಾಡಲಾಗುತ್ತಿದೆ. ವಿದ್ಯಾರ್ಥಿ ದತ್ತು ಸ್ವೀಕಾರ, ವಿದ್ಯಾರ್ಥಿ ವೇತನ, ಪುಸ್ತಕ ವಿತರಣೆ, ಗೃಹ ನಿರ್ಮಾಣ, ವಿಧವಾ ವೇತನ ಮುಂತಾದ…

Read More

ಜಿಲ್ಲೆಯ ರೈತರು ಇನ್ನು ಮುಂದೆ ತಮ್ಮ ಕೃಷಿ ಭೂಮಿಯಲ್ಲಿನ ಸಮಸ್ಯೆಗಳ ಕುರಿತು ಅಧಿಕಾರಿಗಳ ಮೊಬೈಲ್ ಸಂಖ್ಯೆ ಹುಡುಕಿ ಕರೆ ಮಾಡುವುದು, ಅಧಿಕಾರಿಗಳನ್ನು ಹುಡುಕಿಕೊಂಡು ಕೃಷಿ ಇಲಾಖೆಯ ಕಚೇರಿಗೆ ತೆರಳಿ, ಅಧಿಕಾರಿಗಳನ್ನು ಕಾಯುವುದು, ಅವರು ವಿವಿಧ ಕೆಲಸದ ಒತ್ತಡದಲ್ಲಿ ತಕ್ಷಣ ನಿಮಗೆ ಸಿಗದೇ ಇರುವುದು ಈ ಎಲ್ಲಾ ಸಮಸ್ಯೆಗಳು ಇನ್ನಿಲ್ಲ.. ಏಕೆಂದರೆ ಕೃಷಿ ಸಂಜೀವಿನಿ ರೈತ ಸಹಾಯವಾಣಿ ಟೋಲ್ ಫ್ರೀ ಸಂಖ್ಯೆ 155513 ಗೆ ರೈತರು ಒಂದು ಫೋನ್ ಕರೆ ಮಾಡಿದ್ದಲ್ಲಿ ಅಧಿಕಾರಿಗಳು/ಸಿಬ್ಬಂದಿಗಳೇ ರೈತರ ಮನೆ ಬಾಗಿಲಿಗೆ, ಜಮೀನುಗಳಿಗೆ ಬಂದು, ಕೃಷಿ ಸಂಬಂಧಿತ ಅಗತ್ಯ ಸಲಹೆ, ಸೂಚನೆ, ಸಮಸ್ಯೆಗೆ ಪರಿಹಾರ ನೀಡಲಿದ್ದಾರೆ.ರೈತರ ಜಮೀನಿನಲ್ಲಿನ ಕೀಟ ನಿಯಂತ್ರಣ, ರೋಗ ಮತ್ತು ಕಳೆಗಳ ಬಾಧೆ ಹಾಗೂ ಮಣ್ಣಿನ ಪೋಷಕಾಂಶ ಕೊರತೆ, ಮಣ್ಣು ಪರೀಕ್ಷೆ ಹಾಗೂ ಸಮರ್ಪಕ ನಿರ್ವಹಣೆ ಕುರಿತಂತೆ ರೈತರ ಜಮೀನುಗಳಲ್ಲಿಯೇ ಹತೋಟಿ ಕ್ರಮಗಳ ಕುರಿತು ಮಾರ್ಗೊಪಾಯಗಳನ್ನು ಒದಗಿಸಲು ಸಂಚಾರಿ ಸಸ್ಯ ಆರೋಗ್ಯ ಚಿಕಿತ್ಸಾಲಯ ಕೃಷಿ ಸಂಜೀವಿನಿ ಯೋಜನೆಯನ್ನು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸರ್ಕಾರ ಅನುಷ್ಠಾನಗೊಳಿಸಲಾಗಿದೆ.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಮನಸ್ಸಿನಲ್ಲಿ ಅನುಭವ ಮತ್ತು ಸಂವೇದನೆಗಳ ಒತ್ತಡ ಸೃಷ್ಟಿಯಾದಾಗ ಕವಿತೆ ಹುಟ್ಟುತ್ತದೆ. ಸಾಮಾನ್ಯವಾಗಿ ಒಬ್ಬನ ಆರಂಭದ ಕವಿತೆಗಳು ಶ್ರೇಷ್ಠವಾಗಿರುವುದಿಲ್ಲ. ಅನುಭವ ಮತ್ತು ಸಂವೇದನೆಗಳು ಮಾಗುತ್ತ ಹೋದಂತೆ ಹಾಗೂ ಅವುಗಳನ್ನು ವ್ಯಕ್ತ ಪಡಿಸಲು ಸೂಕ್ತವೆನಿಸುವ ಭಾಷೆ ಕರಗತವಾದಾಗ ಶ್ರೇಷ್ಠ ಕವಿತೆಗಳು ಹುಟ್ಟುತ್ತವೆ ಎಂದು ಸಾಹಿತಿ ಎ.ಎಸ್.ಎನ್. ಹೆಬ್ಬಾರ್ ಹೇಳಿದರು. ಅವರು ನಾಯ್ಕನಕಟ್ಟೆ ಶ್ರೀ ಲಕ್ಷ್ಮೀ ಶ್ರೀ ನಾಗಪ್ಪಯ್ಯ ನಾಯಕ್ ಸದ್ಭಾವನಾ ವೇದಿಕೆ, ಬೀದರ್‌ನ ದೇಶಪಾಂಡೆ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನ ಮತ್ತು ಬೆಂಗಳೂರಿನ ಗೋಪಾಲಕೃಷ್ಣ ಅಡಿಗ ಶತಮಾನ ಪ್ರತಿಷ್ಠಾನ ಸಂಯುಕ್ತ ಆಶ್ರಯದಲ್ಲಿ ಉಪ್ಪುಂದದ ರೈತಸಿರಿ ಸಭಾಭವನದಲ್ಲಿ ಭಾನುವಾರ ನಡೆದ ಕೆ. ಪುಂಡಲೀಕ ನಾಯಕ್ ಅವರ ‘ಬದುಕು ಬಣ್ಣದ ಬುಗುರಿ’ ಮತ್ತು ‘ಕಾವ್ಯ ಸಂಜೀವಿನಿ’ ಕವನ ಸಂಕಲನ ಬಿಡುಗಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು. ಹಿರಿಯ ಸಾಹಿತಿಗಳಾದ ಡಾ. ಎಂ. ಜಿ.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕೇವಲ ಬಿಲ್ಲವರು ಮಾತ್ರವಲ್ಲ ವಿಶ್ವ ಮಾನವ ಸಮುದಾಯವನ್ನೆ ಒಟ್ಟುಗೂಡಿಸಬೇಕು ಎನ್ನುವ ಚಿಂತನೆಯನ್ನು ಕಂಡವರು ಬ್ರಹ್ಮಶ್ರೀ ನಾರಾಯಣಗುರುಗಳು. ಗೋಕರ್ಣನಾಥ ಕ್ಷೇತ್ರವಲ್ಲದೆ, 80 ಕ್ಕೂ ಹೆಚ್ಚು ದೇವಸ್ಥಾನಗಳಲ್ಲಿ ಅವರು ಪ್ರತಿಷ್ಠೆ ಕಾರ್ಯವನ್ನು ನೆರವೇರಿಸಿದ್ದಾರೆ. ಅವರು ಅಂದು ಸ್ಥಾಪಿಸಿದ್ದ ಶಿಕ್ಷಣ ಸಂಸ್ಥೆಗಳು ಇಂದು ವಿಶ್ವ ವಿದ್ಯಾಲಯಗಳಾಗಿದೆ ಎಂದು ಮಾಜಿ ಸಚಿವ ವಿನಯಕುಮಾರ ಸೊರಕೆ ಹೇಳಿದರು. ಅವರು ಇಲ್ಲಿನ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಭಾನುವಾರ ಬಿಲ್ಲವ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ನಡೆದ ಅಭಿನಂದನಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ವಿದ್ಯೆಯನ್ನು ಯಾರಿಂದಲೂ ಕಿತ್ತುಕೊಳ್ಳಲು ಸಾಧ್ಯವಿಲ್ಲ. ವಿದ್ಯೆಗೆ ಮಾತ್ರ ಬಡತವನ್ನು ಹೋಗಲಾಡಿಸುವ ಶಕ್ತಿ ಇದೆ. ಮಕ್ಕಳಲ್ಲಿ ಜ್ಞಾನಾವರಣಕ್ಕೆ ಅವಕಾಶ ಕಲ್ಪಿಸಬೇಕು. ಪ್ರತಿಯೊಂದು ಸಮಾಜ ಸಂಘಟನೆಗಳು ಅವರವರ ದ್ಯೇಯೋದ್ದೇಶಗಳ ಹಿನ್ನೆಲೆಯಲ್ಲಿ ಕೆಲಸ ಮಾಡಬೇಕು. ಸಾಮಾಜಿಕ, ಶೈಕ್ಷಣಿಕ, ಆರ್ಥಿಕ, ಧಾರ್ಮಿಕ ಹಾಗೂ ರಾಜಕೀಯ ಕ್ಷೇತ್ರಗಳಲ್ಲಿ ಬೆಳವಣಿಗೆ ಸಾಧಿಸಿದಲ್ಲಿ ಸಮಾಜಗಳು ಅಭಿವೃದ್ಧಿಯಾಗುತ್ತದೆ. ಸಂಘಟನೆಗಳು ನಿಂತ ನೀರಾಗದೆ ಹರಿಯುವ ನೀರಾಗಬೇಕು. ಭವಿಷ್ಯದ ಪೀಳಿಗೆಯ ಯುವ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಕುಂದಾಪುರ ಹಾಗೂ ಕಾರ್ಕಳ ಸಾರ್ವಜನಿಕ ಕೋವಿಡ್ ಆಸ್ಪತ್ರೆಯಲ್ಲಿ ಪ್ರಸ್ತುತ ಸಾಲಿನ ಸೆಪ್ಟಂಬರ್ರಗೆ ಕೋವಿಡ್ 19 ರ ಕರ್ತವ್ಯ ನಿರ್ವಹಿಸಲು ಶುಶ್ರೂಷಕಿಯರ – 16 ಹುದ್ದೆ ಹಾಗೂ ಗ್ರೂಪ್ ಡಿ-21 ಹುದ್ದೆಯ ನೇಮಕಾತಿಗೆ ನೇರ ಸಂದರ್ಶನವು ಏಪ್ರಿಲ್ 21ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯವರ ಕಚೇರಿಯಲ್ಲಿ ನಡೆಯಲಿದೆ. ಶುಶ್ರೂಷಕಿ ಹುದ್ದೆಗೆ ಅರ್ಜಿ ಸಲ್ಲಿಸುವವರು ಕರ್ನಾಟಕ ನರ್ಸಿಂಗ್ ಕೌನ್ಸಿಲ್ನಲ್ಲಿ ಕಡ್ಡಾಯವಾಗಿ ನೊಂದಾವಣೆ ಆಗಿರಬೇಕು. ಗ್ರೂಪ್ ಡಿ ಹುದ್ದೆಗೆ ಅರ್ಜಿ ಸಲ್ಲಿಸುವವರು ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿರಬೇಕು. ನೇಮಕಾತಿ ಸಂದರ್ಶನಕ್ಕೆ ವಿದ್ಯಾರ್ಹತೆಯ ಮೂಲ ಹಾಗೂ ದೃಢೀಕೃತ ದಾಖಲೆಗಳೊಂದಿಗೆ ಹಾಜರಾಗುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಶಿವರಾಜ್ ಪೂಜಾರಿ ಇವರ ಚಿಕಿತ್ಸಾ ವೆಚ್ಚದ ಸಹಾಯಾರ್ಥವಾಗಿ ಕಡಿಕೆ ಆಚರಬೇಟ್ಟು ವಕ್ಕೇರಿ ಫ್ರೆಂಡ್ಸ್ ಇವರ ವತಿಯಿಂದ ದ್ವೀತಿಯ ವರ್ಷದ ಸೂಪರ್ ಸಿಕ್ಸ್ ಮಾದರಿಯ ಯುನೈಟೆಡ್ ಟ್ರೋಫಿ 2021 ಕ್ರಿಕೆಟ್ ಪಂದ್ಯಾಟ ಕಡಿಕೆ ಕಂಬಳಗದ್ದೆ ನಾಡದಲ್ಲಿ ನಡೆಯಿತು. ಫೈನಲ್ ಪಂದ್ಯಾಟದಲ್ಲಿ ಎಕದಂಥ ಹರೇಗೋಡ್ ನ್ನು ಸೋಲಿಸಿ ಹಕ್ಲಾಡಿ ಅಟ್ಯಾಕರ್ಸ್ ಪ್ರಶಸ್ತಿಯನ್ನು ಜಯಸಿತು

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದಲ್ಲಿ ಖಾಲಿ ಇರುವ ಯೋಜನಾ ನಿರ್ದೇಶಕರ ಹುದ್ದೆಯನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ನೇಮಕಾತಿಯು 1 ವರ್ಷದ ಕರಾರಿನ ಆಧಾರದ ಮೇಲಿದ್ದು, ಆಯ್ಕೆಯಾದ ಸಿಬ್ಬಂದಿಗಳಿಗೆ ಮಾಸಿಕ ರೂ.19,965 ಗೌರವಧನ ನೀಡಲಾಗುವುದು. ವಿದ್ಯಾರ್ಹತೆ: ಸಮಾಜ ಶಾಸ್ತçದಲ್ಲಿ ಸ್ನಾತಕೋತ್ತರ ಪದವಿ/ ಎಮ್.ಎಸ್.ಡಬ್ಲೂ/ ಅಭಿವೃದ್ಧಿ ಅಧ್ಯಯನ/ ಲಾಭರಹಿತ ಸಂಸ್ಥೆಗಳ (ಎನ್.ಜಿ.ಓ) ನಿರ್ವಹಣಾ ಶಾಸ್ತ ಸ್ನಾತಕೋತ್ತರ ಪದವಿಯನ್ನು ಹೊಂದಿರುವ 40 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿಯನ್ನು ಬಿಳಿ ಹಾಳೆಯಲ್ಲಿ, ಸ್ವವಿವರಗಳನ್ನು ನಮೂದಿಸಿದ ಬಯೋಡಾಟ, ಅಂಕಪಟ್ಟಿ, ಅನುಭವ ಪ್ರಮಾಣ ಪತ್ರದೊಂದಿಗೆ ಜಿಲ್ಲಾಧಿಕಾರಿಗಳು ಮತ್ತು ಅಧ್ಯಕ್ಷರು ಜಿಲ್ಲಾ ಬಾಲಕಾರ್ಮಿಕರ ಯೋಜನಾ ಸಂಘ ಉಡುಪಿ, ಇವರ ಹೆಸರಿಗೆ ಅರ್ಜಿ ಬರೆದು, ಸದರಿ ಅರ್ಜಿಯನ್ನು ಕಾರ್ಮಿಕ ಅಧಿಕಾರಿ/ಸದಸ್ಯ ಕಾರ್ಯದರ್ಶಿಗಳು, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ, ಕಾರ್ಮಿಕ ಅಧಿಕಾರಿಗಳ ಕಛೇರಿ, ಜಿಲ್ಲಾಧಿಕಾರಿಗಳ ಕಛೇರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ಇವರಿಗೆ ಏಪ್ರಿಲ್ 30ರ ಒಳಗೆ ಸಲ್ಲಿಸುವಂತೆ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ನವ ಭಾರತದ ನಿರ್ಮಾಣದಲ್ಲಿ ಅಂಬೇಡ್ಕರ್ ಅವರ ಕೊಡುಗೆ ದೊಡ್ಡದಿದೆ. ಅವರು ಕೇವಲ ಶೋಷಿತ ಸಮುದಾಯದ ನಾಯಕರಾಗಿರದೇ ವಿಶ್ವವೇ ಮೆಚ್ಚಿದ ನಾಯಕರಾಗಿದ್ದಾರೆ. ಅವರು ಸಂವಿಧಾನ ರಚಿಸುವಾಗ ಯಾವುದೇ ಸಮುದಾಯವನ್ನು ತಾರತಮ್ಯದಿಂದ ನೋಡದೇ ಎಲ್ಲರಿಗೂ ಸಮಾನ ಹಕ್ಕುಗಳನ್ನು ನೀಡಿದ್ದರು. ದಮನಿತರು, ಶೋಷಣೆಗೆ ಒಳಗಾದವರು, ಧ್ವನಿ ಇಲ್ಲದವರಿಗೆ ನ್ಯಾಯ ಒದಗಿಸುವ ಕೆಲಸ ಮಾಡಿದ್ದರು ಎಂದು ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಪ್ರಧಾನ ಸಂಘಟನಾ ಸಂಚಾಲಕ ಟಿ. ಮಂಜುನಾಥ ಗಿಳಿಯಾರು ಹೇಳಿದರು. ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಬೈಂದೂರು ತಾಲೂಕು ಶಾಖೆ ನೇತೃತ್ವದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಮಹಿಳಾ ಸಂಘ ಬೈಂದೂರು ಹಾಗೂ ದಸಂಸ ಮಹಿಳಾ ಘಟಕದ ಆಶ್ರಯದಲ್ಲಿ ಶನಿವಾರ ಆಯೋಜಿಸಲಾಗಿದ್ದ ಡಾ. ಬಿ.ಆರ್. ಅಂಬೇಡ್ಕರ್ ಅವರ 130ನೇ ಜನ್ಮ ಜಯಂತಿ ಸಮಾರಂಭದಲ್ಲಿ ಅವರು ಮಾತನಾಡಿ, ದೇಶದ ಕೋಟಿ ಕೋಟಿ ಜನರಿಗೆ ಗೌರವಯುತವಾದ ಬದುಕನ್ನು ಕಲ್ಪಿಸಿಕೊಟ್ಟ ಅಂಬೇಡ್ಕರ್ ಅವರನ್ನು ಇಂದಿಗೂ ಕೆಲವು ಸ್ಥಾಪಿತ ಮನಸ್ಸುಗಳಿಗೆ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಅಂಬೇಡ್ಕರ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: 2010ರಲ್ಲಿ ಹೆದ್ದಾರಿ ವಿಸ್ತರಣೆ ಆರಂಭವಾಗಿದ್ದು, 910 ದಿನದಲ್ಲಿ ಮುಗಿಯಬೇಕಿದ್ದ ಕಾಮಗಾರಿ ಒಂದು ದಶಕ ಕಳೆದರೂ ಪೂರ್ಣವಾಗಿಲ್ಲ. ಸದ್ಯ ತರಾತುರಿಯಲ್ಲಿ ಪ್ಲೈಓವರ್, ಅಂಡರ್‌ಪಾಸ್ ಕಾಮಗಾರಿ ಮುಗಿಸಿ ಗುತ್ತಿಗೆದಾರರು ಕಾಲು ಕೀಳಲಿದ್ದು, ಕುಂದಾಪುರದ ನಾಗರಿಕರು ಎಚ್ಚೆತ್ತುಕೊಳ್ಳದಿದ್ದರೆ ರಾಷ್ಟ್ರೀಯ ಹೆದ್ದಾರಿ ಖಾಯಂ ಸಮಸ್ಯೆಯ ಆಗರವಾಗಲಿದೆ ಕಲಾಕ್ಷೇತ್ರದ ಅಧ್ಯಕ್ಷ ಬಿ. ಕಿಶೋರ್ ಕುಮಾರ್ ಎಚ್ಚರಿಸಿದ್ದಾರೆ. ಇಲ್ಲಿನ ಆರ್.ಎನ್. ಶೆಟ್ಟಿ ಸಭಾಂಗಣದಲ್ಲಿ ಶನಿವಾರ ಕುಂದಾಪುರ ಹೆದ್ದಾರಿ ಹೋರಾಟ ಸಮಿತಿ ಆಯೋಜಿಸಿದ ಹೆದ್ದಾರಿ ಸಮಸ್ಯೆಗಳ ಪರಿಹಾರಕ್ಕಾಗಿ ಹತ್ಕೊತ್ತಾಯ ಸಭೆಯಲ್ಲಿ ಮಾತನಾಡಿ, ಕುಂದಾಪುರದ ನಗರ ಭಾಗದಲ್ಲಿ ಹೆದ್ದಾರಿ ಸಂಚಾರ ಗೊಂದಲದ ಗೂಡಾಗಿದೆ. ಪ್ಲೈಓವರ್‌ನ ಹೊಸ ರಸ್ತೆ ಸಂಚಾರ ಅಪಾಯದ ಮುನ್ಸೂಚನೆ ನೀಡುತ್ತಿದೆ. ಮಳೆಗಾಲದಲ್ಲಿ ಮಳೆನೀರು ಹರಿಯಲು ಸುಗಮ ಮಾರ್ಗವಿಲ್ಲ. ಪಾದಾಚಾರಿ ಮಾರ್ಗವೂ ಅವ್ಯವಸ್ಥಿತ. ಇವೆಲ್ಲದಕ್ಕೂ ಗುತ್ತಿಗೆ ಕಂಪೆನಿ ಕಾಮಗಾರಿ ಮುಗಿಸಿ ಹೊರಡುವ ಮೊದಲು ಪರಿಹಾರ ಕಂಡುಕೊಳ್ಳಬೇಕಿದೆ ಎಂದರು. ಹೆದ್ದಾರಿ ಹೋರಾಟ ಸಮಿತಿ ಅಧ್ಯಕ್ಷ ಸೋಮಶೇಖರ ಶೆಟ್ಟಿ ಮಾತನಾಡಿ, ಹೆದ್ದಾರಿ ವಿಸ್ತರಣೆ ಗುತ್ತಿಗೆದಾರರು ರಸ್ತೆ ಅಭಿವೃದ್ಧಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬಿ.ಎ.ಎಂ.ಎಸ್ ಪದವಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆಗೆ ಶರಣಾದ ಘಟನೆ ತಾಲೂಕಿನ ಉಪ್ಪುಂದ ಗ್ರಾಮದಲ್ಲಿ ನಡೆದಿದೆ. ಉಪ್ಪಂದದ ರಕ್ಷಿತಾ (22) ಮೃತ ದುರ್ದೈವಿ. ರಕ್ಷಿತಾ ಉದ್ಯಾವರದ ಆಯುರ್ವೇದಿಕ್ ಕಾಲೇಜಿನಲ್ಲಿ ಅಂತಿಮ ವರ್ಷದ ಬಿ.ಎ.ಎಮ್.ಎಸ್ ವ್ಯಾಸಂಗ ಮುಗಿಸಿ ಒಂದು ವಾರದ ಹಿಂದೆ ಮನೆಗೆ ಬಂದಿದ್ದು ಶುಕ್ರವಾರ ರಾತ್ರಿ ಬಿ.ಇ.ಎಮ್.ಎಸ್ ಅಂತಿಮ ವರ್ಷದ ಫಲಿತಾಂಶವನ್ನು ಆನ್’ಲೈನ್ ಮೂಲಕ ಮನೆಯವರೊಂದಿಗೆ ಸೇರಿ ನೋಡಿದ್ದಳು. ಈ ವೇಳೆ ಒಂದು ವಿಷಯದಲ್ಲಿ ಅನುತ್ತೀರ್ಣಳಾಗಿದ್ದುದು ತಿಳಿದುಬಂದಿದ್ದು ಮನನೊಂದು ಬೇಸರದಲ್ಲಿ ರಾತ್ರಿ ಸುಮಾರು 2 ಗಂಟೆಗೆ ಹೊತ್ತಿಗೆ ಮಲಗಿಕೊಂಡಿದ್ದಳು. ಬೆಳಿಗ್ಗೆ 06:30ರ ಸುಮಾರಿಗೆ ಮನೆಯವರು ಎದ್ದು ನೋಡಿದಾಗ ರಕ್ಷಿತಾ ಇಲ್ಲದೇ ಇದ್ದುದ್ದರಿಂದ ಹುಡುಕಾಟ ನಡೆಸಿದ್ದರು. ಬಳಿಕ ಮನೆಯ ಎದುರಿನ ಬಾವಿಯಲ್ಲಿ ರಕ್ಷಿತಾ ಮೃತದೇಹ ಪತ್ತೆಯಾಗಿದೆ. ಅಗ್ನಿಶಾಮಕ ದಳದವರನ್ನು ಕರೆಯಿಸಿ ಮೃತ ಶರೀರವನ್ನು ಮೇಲಕ್ಕೆತ್ತಲಾಯಿತು. ರಕ್ಷಿತಾ ಬಿ.ಇ ಎಮ್.ಎಸ್ ಫಲಿತಾಂಶದಲ್ಲಿ ಒಂದು ವಿಷಯದಲ್ಲಿ ಅನುತ್ತೀರ್ಣಳಾದ ಬಗ್ಗೆ ಮನನೊಂದು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಬೈಂದೂರು ಪೊಲೀಸ್…

Read More