Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಜೂ.13ರ ಶನಿವಾರ ಒಟ್ಟು 15 ಹೊಸ ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಎಲ್ಲಾ ಪ್ರಕರಣಗಳು ಮಹಾರಾಷ್ಟ್ರ ಮೂಲದ್ದಾಗಿವೆ.  ರಾಜ್ಯದ ಬುಲೆಟಿನಿನಲ್ಲಿ 14 ಪಾಸಿಟಿವ್ ಬಂದಿರುವ ಬಗ್ಗೆ ತಿಳಿಸಲಾಗಿದೆ. ಆದರೆ ಉಡುಪಿ ಜಿಲ್ಲಾಧಿಕಾರಿಗಳು ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ಒಟ್ಟು 15 ಪ್ರಕರಣಗಳು ವರದಿಯಾಗಿರುವ ಬಗ್ಗೆ ಸ್ಪಷ್ಟಪಡಿಸಿದ್ದಾರೆ. ಜಿಲ್ಲೆಯಲ್ಲಿ ಸದ್ಯ ಒಟ್ಟು 1006 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 720 ಮಂದಿ ಬಿಡುಗಡೆಯಾಗಿದ್ದು, 285 ಮಂದಿ ಕೊರೋನಾ ಸೋಂಕಿತರಿಗೆ ಉಡುಪಿ, ಕುಂದಾಪುರ, ಕಾರ್ಕಳದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈವರೆಗೆ ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ಇದನ್ನೂ ಓದಿ: ► ಕುಂದಾಪುರ: ಮೃತ ತಾಯಿಯನ್ನು ಕಂಡು ಮಗನೂ ಹೃದಯಾಘಾತದಿಂದ ನಿಧನ – https://kundapraa.com/?p=38595 .

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ:  ಮೃತರಾದ ತನ್ನ ತಾಯಿಯನ್ನು ಕಂಡು ಮಗನೂ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟ ಮನಕಲಕುವ ಘಟನೆಯೊಂದು ಕುಂದಾಪುರದಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ. ಕುಂದಾಪುರ ತಾಲೂಕು ಸರ್ಕಾರಿ ಆಸ್ಪತ್ರೆ ಸಮೀಪದ ಮಹಾರಾಜ್ ಜುವೆಲ್ಲರ‍್ಸ್ ಮಾಲಿಕ ದಿ. ರಮೇಶ್ ಶೇಟ್ ಪತ್ನಿ ಶಕುಂತಲಾ ಶೇಟ್ (80) ಸ್ವಗೃಹದಲ್ಲಿ ಮೃತಪಟ್ಟಿದ್ದರು. ತಾಯಿ ಮೃತಪಟ್ಟ ನೋವಿನಲ್ಲಿದ್ದ ಮಗ ಪ್ರಶಾಂತ್ ಶೇಟ್ (46) ಕೂಡ ಒಂದು ಗಂಟೆಯ ಬಳಿಕ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಕುಂದಾಪ್ರ ಡಾಟ್ ಕಾಂ ಸುದ್ದಿ. ಮೃತ ಶಕುಂತಲಾ ಅವರಿಗೆ 4 ಗಂಡು ಹಾಗೂ 2 ಪುತ್ರಿಯರಿದ್ದು, ಅವರು ಗಂಡು ಮಕ್ಕಳೊಂದಿಗೆ ಕುಂದಾಪುರದಲ್ಲಿನ ಮನೆಯಲ್ಲಿ ವಾಸವಾಗಿದ್ದರು. ಪ್ರಶಾಂತ್ 3ನೇ ಪುತ್ರರಾಗಿದ್ದು, ಅವಿವಾಹಿತರಾಗಿದ್ದರು. ಕುಂದಾಪುರದ ಜುವೆಲ್ಲರ್ಸ್ ಅಸೋಸಿಯೇಶನ್ ಸೇರಿದಂತೆ ವಿವಿಧ ಸಂಘಟನೆಗಳಲ್ಲಿ ಸಕ್ರೀಯರಾಗಿದ್ದ ಅವರು ಅಪಾರ ಮಿತ್ರ ವರ್ಗವನ್ನು ಹೊಂದಿದ್ದರು. ಶನಿವಾರ ನಗರದ ಚಿಕ್ಕನ್‌ಸಾಲ್ ರಸ್ತೆಯಲ್ಲಿ ಇರುವ ಹಿಂದೂ ಸ್ಮಶಾನದಲ್ಲಿ ತಾಯಿ ಹಾಗೂ ಮಗನ ಅಂತ್ಯ ಸಂಸ್ಕಾರ ಒಟ್ಟಿಗೆ ನಡೆಸಲಾಯಿತು. ಕುಂದಾಪುರದ ಜುವೆಲ್ಲರಿ ಅಂಗಡಿಗಳು ಮೃತರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಪೊಲೀಸ್ ಇಲಾಖೆಯಲ್ಲಿ 2020-21 ನೇ ಸಾಲಿನ ನೇಮಕಾತಿಗೆ ಸಂಬOದಿಸಿದOತೆ ಖಾಲಿ ಇರುವ ಪೊಲೀಸ್ ಕಾನ್ಸ್ಟೇಬಲ್ ವೃಂದದ ವಿವಿಧ ಹುದ್ದೆಗಳ ನೇರ ನೇಮಕಾತಿ ಸಂಬOದ ಅರ್ಜಿ ಆಹ್ವಾನಿಸಲಾಗಿದ್ದು, ಪ್ರಸಕ್ತ ರಾಜ್ಯದಲ್ಲಿನ ಪರಿಸ್ಥಿತಿಯನ್ನು ಅವಲೋಕಿಸಿ, ಈ ಹಿಂದೆ ನಿಗಧಿಪಡಿಸಿದ್ದ ಅರ್ಜಿ ಆಹ್ವಾನದ ದಿನಾಂಕಗಳನ್ನು ಮಾತ್ರ ವಿಸ್ತರಿಸಲಾಗಿದೆ. ಇನ್ನುಳಿದಂತೆ ಅರ್ಹತಾ ಷರತ್ತುಗಳಲ್ಲಿ ಯಾವುದೇ ಬದಲಾವಣೆಗಳಿರುವುದಿಲ್ಲ (ವಯೋಮಿತಿ ಸೇರಿ) ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿ ಪ್ರಕಟಣೆ ತಿಳಿಸಿದೆ. ಎ.ಪಿ.ಸಿ 444 ಹುದ್ದೆ ಮತ್ತು ಸಿ.ಪಿ.ಸಿ 558 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮರು ನಿಗಧಿಗೊಳಿಸಲಾದ ಕೊನೆಯ ದಿನಾಂಕ ಜುಲೈ 9 ಆಗಿದ್ದು, ಶುಲ್ಕ ಪಾವತಿಸಲು ಜುಲೈ 13 ಕೊನೆಯ ದಿನಾಂಕವಾಗಿದೆ. ಸಿ.ಪಿ.ಸಿ 2007 ಮತ್ತು ಎ.ಪಿ.ಸಿ 1005 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮರು ನಿಗಧಿಗೊಳಿಸಲಾದ ಕೊನೆಯ ದಿನಾಂಕ ಜುಲೈ 13 ಆಗಿದ್ದು, ಶುಲ್ಕ ಪಾವತಿಸಲು ಜುಲೈ 15 ಕೊನೆಯ ದಿನಾಂಕವಾಗಿದೆ. ಸ್ಟೇ ಆರ್.ಪಿ.ಸಿ 252 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮರು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಜೂ.11ರ ಗುರುವಾರ ಒಟ್ಟು 22 ಹೊಸ ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಈ ಪೈಕಿ 20 ಮಂದಿ ಮಹಾರಾಷ್ಟ್ರದಿಂದ ಹಿಂದಿರುಗಿದವರಾಗಿದ್ದು, ಸ್ಥಳೀಯ ಪ್ರಕರಣಗಳಲ್ಲಿ ಓರ್ವ ಆರೋಗ್ಯ ಕಾರ್ಯಕರ್ತೆ ಹಾಗೂ ಡಿ ದರ್ಜೆಯ ನೌಕರರಿಗೆ ಪಾಸಿಟಿವ್ ಬಂದಿದೆ. 22 ಮಂದಿಯಲ್ಲಿ 11 ಪುರುಷರು, 9 ಮಹಿಳೆಯರು ಹಾಗೂ ಇಬ್ಬರು ಮಕ್ಕಳಿಗೆ ಪಾಸಿಟಿವ್ ದೃಢವಾಗಿದೆ.  ಎಲ್ಲರಿಗೂ ಈಗಾಗಲೇ ಚಿಕಿತ್ಸೆ ನೀಡಲಾಗುತ್ತಿದೆ. ಇಂದು ಸಂಜೆ ಒಟ್ಟು ಸಕ್ರಿಯ ಪ್ರಕರಣಗಳಲ್ಲಿ ಗುಣಮುಖರಾದ 106 ಮಂದಿಯನ್ನು ಬಿಡುಗಡೆಗೊಳಿಸಲಾಗುತ್ತದೆ. ಜಿಲ್ಲೆಯಲ್ಲಿ ಸದ್ಯ ಒಟ್ಟು 968 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 550 ಮಂದಿ ಬಿಡುಗಡೆಯಾಗಿದ್ದು, 417 ಮಂದಿ ಕೊರೋನಾ ಸೋಂಕಿತರಿಗೆ ಉಡುಪಿ, ಕುಂದಾಪುರ, ಕಾರ್ಕಳದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈವರೆಗೆ ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ಇದನ್ನೂ ಓದಿ: ► ಉಡುಪಿ ಜಿಲ್ಲೆ: ಗುರುವಾರ 22 ಕೊರೋನಾ ಪಾಸಿಟಿವ್ ದೃಢ – https://kundapraa.com/?p=38496 . ► ಜಿಲ್ಲೆಯಲ್ಲಿ ನೂತನ ಕ್ವಾರಂಟೈನ್ ನಿಯಮ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕೋವಿಡ್-19 ವಿರುದ್ದ ಜಿಲ್ಲಾಡಳಿತ ಕೈಗೊಂಡಿರುವ ಕಾರ್ಯಗಳ ಕುರಿತು ಸುಖಾ ಸುಮ್ಮನೇ , ಯಾವುದೇ ಆಧಾರವಿಲ್ಲದೇ , ಸಾಮಾಜಿಕ ಮಾದ್ಯಮದಲ್ಲಿ ಅವಹೇಳನವಾಗಿ ಅಪವಾದ ಪ್ರಕಟಿಸುವವರ ವಿರುದ್ದ ಎಪಿಡಮಿಕ್ ಆಕ್ಟ್ ಅನ್ವಯ ಪ್ರಕರಣ ದಾಖಲಿಸಿ, ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಎಚ್ಚರಿಸಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೆ ಕಂಡು ಬಂದಿರುವ 947 ಪಾಸಿಟಿವ್ ಪ್ರಕರಣ ಪೈಕಿ ಎಲ್ಲಾ ರೋಗಿಗಳಿಗೆ ಸಂಪೂರ್ಣ ಉಚಿತವಾಗಿ ಚಿಕಿತ್ಸೆ ನೀಡಿದ್ದು, ಜಿಲ್ಲಾಡಳಿತ ಹಾಗೂ ಯಾವುದೇ ಸಂಸ್ಥೆಯ ವಿರುದ್ದ ಇಲ್ಲಸಲ್ಲದ ಕಲ್ಪನೆ ಮಾಡಿಕೊಂಡು ಆಧಾರರಹಿತ ಅಪವಾದ ಮಾಡಿ, ಪ್ರಕಟಿಸುವುದು ಸಹಿಸಲು ಅಸಾಧ್ಯವಾದ ಅಪವಾದವಾಗಿದ್ದು, ಯಾರೇ ಆದರೂ ಸಾಮಾಜಿಕ ಮಾಧ್ಯಮದಲ್ಲಿ ಮನಸ್ಸಿಗೆ ಬಂದದ್ದು ಬರೆಯಬಹುದು ಎಂಬುದು ಅವರ ತಪ್ಪು ಕಲ್ಪನೆ,ಅಂತಹವರ ವಿರುದ್ದ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ► ಜಿಲ್ಲೆಯಲ್ಲಿ ನೂತನ ಕ್ವಾರಂಟೈನ್ ನಿಯಮ ಜಾರಿ: ಜಿಲ್ಲಾಧಿಕಾರಿ ಜಿ. ಜಗದೀಶ್ – https://kundapraa.com/?p=38518 . ► ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷರಾದ ಮಂಜುನಾಥ ಭಂಡಾರಿ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ಬುಧವಾರ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಕೆ.ಪಿ.ಸಿ.ಸಿ. ನೂತನ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರರವರು, ಆಯ್ಕೆಯಾದ ನಂತರ ಕಾರ್ಯಕರ್ತರಲ್ಲಿ ಹೊಸ ಹುಮ್ಮಸ್ಸು ಬಂದಿದ್ದು ಮುಂದಿನ ಸ್ಥಳಿಯಾಡಳಿತ ಚುನಾವಣೆಯನ್ನು ಪಕ್ಷ ಸಮರ್ಥವಾಗಿ ಎದುರಿಸಲಿದೆ ಎಂದರು . ಕುಂದಾಪುರ ಬ್ಲಾಕ್ ಕಾಂಗ್ರೆಸ್ ಉಸ್ತುವಾರಿ ಮಮತಾ ಗಟ್ಟಿ ನೂತನ ಅಧ್ಯಕ್ಷರ ಪದಗ್ರಹಣ ಕುರಿತು ಕುಂದಾಪುರದಲ್ಲಿ ಹಮ್ಮಿಕೊಂಡ ಕಾರ್ಯಕ್ರಮಗಳ ಕುರಿತು ತಿಳಿಸಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಾನ್ಮಕ್ಕಿ ಹರಿಪ್ರಸಾದ ಶೆಟ್ಟಿ ಅಧ್ಯಕ್ಷತೆ ವಹಿಸಿಸಿದ್ದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ ಕುಮಾರ ಕೊಡವೂರು , ಪ್ರಧಾನ ಕಾರ್ಯದರ್ಶಿಗಳಾದ ಕಿಶನ್ ಹೆಗ್ಡೆ, ಪ್ರಸನ್ನ ಕುಮಾರ ಶೆಟ್ಟಿ ಬಿ. ಹಿರಿಯಣ್ಣ , ಮಲ್ಯಾಡಿ ಶಿವರಾಮ ಶೆಟ್ಟಿ ದೇವಕಿ , ಮುರಳಿ ಶೆಟ್ಟಿ , ನವೀನ್ ಡಿ ಸೊಜಾ ದಿನೇಶ ಪುತ್ರನ್ ಅಣ್ಣಯ್ಯ ಶೇರಿಗಾರ್, ವಿಶ್ವಾಸ ಅಮೀನ್ ಯುವ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕ್ವಾರಂಟೈನ್ ವ್ಯವಸ್ಥೆಯಲ್ಲಿ, ಹೋಮ್ ಕ್ವಾರೆಂಟೈನ್‌ನಿಂದ ಸಾಂಸ್ಥಿಕ ಕ್ವಾರಂಟೈನ್, ಸಾಂಸ್ಥಿಕ ಕ್ವಾರಂಟೈನ್‌ನಿಂದ ಹೋಮ್ ಕ್ವಾರೆಂಟೈನ್‌ಗೆ ಬದಲಾವಣೆ ಮಾಡುವ ಅಧಿಕಾರವನ್ನು ಜಿಲ್ಲಾಧಿಕಾರಿಗಳಿಗೆ ಸರ್ಕಾರ ನೀಡಿದೆ. ಅದರಂತೆ ಉಡುಪಿ ಜಿಲ್ಲೆಯಲ್ಲಿ ನೂತನ ಕ್ವಾರಂಟೈನ್ ನಿಯಮಗಳನ್ನು ಜಾರಿಗೊಳಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಜಗದೀಶ್ ಹೇಳಿದರು ಅವರು ಬುಧವಾರ ಜಿಲ್ಲಾಪಂಚಾಯತ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಕ್ವಾರಂಟೈನ್ ನಿಯಮಗಳನ್ನು ಪಾಲಿಸಲು ಸಿದ್ದತೆ ನಡೆಸಿದ್ದು, ಉಡುಪಿ ಜಿಲ್ಲೆಗೆ ಬೇರೆ ರಾಜ್ಯದಿಂದ ಆಗಮಿಸುವ ಪ್ರಯಾಣಿಕರಿಗೆ 14 ದಿನಗಳ ಕ್ವಾರಂಟೈನ್ ಮಾಡಲಾಗುತ್ತಿದ್ದು, ಹೋಮ್ ಕ್ವಾರಂಟೈನ್ ನಲ್ಲಿರುವವರ ಮನೆಬಾಗಿಲಿಗೆ ಭಿತ್ತಿಪತ್ರವನ್ನು ಅಂಟಿಸಲಾಗುವುದು, ನೆರೆಹೊರೆಯ ಮನೆಗೆ ಮಾಹಿತಿಯನ್ನು ನೀಡಲಾಗುತ್ತದೆ, ಗ್ರಾಮೀಣ ಪ್ರದೇಶದಲ್ಲಿ ಕ್ವಾರಂಟೈನ್‌ಗೆ ಬರುವವರ ಬಗ್ಗೆ ಗ್ರಾಮ ಪಂಚಾಯತಿ ನಿಗಾ ಇರಿಸಲು ಸೂಚಿಸಿದ್ದು, ಗ್ರಾಮ ಪಂಚಾಯತ್ ನಲ್ಲಿ ಆಯ್ಕೆ ಮಾಡಿರುವ ಸಿಬ್ಬಂದಿಗಳು ಕ್ವಾರಂಟೈನ್‌ನಲ್ಲಿರುವ ಮನೆಗಳಿಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿ ಕ್ವಾರಂಟೈನ್ ವಾಚ್ ಆಪ್ ನಲ್ಲಿ ಬೇಟಿನೀಡಿದ ಮಾಹಿತಿಯನ್ನು ನೀಡಬೇಕು. ಪ್ರತೀ ಗ್ರಾಮದಲ್ಲಿ ಮೇಲ್ವಿಚಾರಣೆಗಾಗಿ 3 ಜನರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಮಂಗಳವಾರ ರಾತ್ರಿ ವೇಳೆಗೆ ಖಾಸಗಿ ವಾಹನದಲ್ಲಿ ಬಂದ ಗೋಕಳ್ಳರು ರಸ್ತೆ ಬದಿಯಲ್ಲಿದ್ದ ದನಗಳನ್ನು ಕದಿಯುವ ಯತ್ನ ನಡೆಸಿದ್ದು, ಎರಡು ಪ್ರತ್ಯೇಕ ಘಟನೆಯಲ್ಲಿ ಒಂದು ಗೋವನ್ನು ಕಳವುಗೈಯ್ಯಲಾಗಿದೆ. ಖಾಸಗಿ ಪ್ಯಾಸೆಂಜರ್ ವಾಹನದಲ್ಲಿ ಬಂದಿರುವ ಆಗಂತುಕರು ಗಂಗೊಳ್ಳಿ ಬಂದರು ರಸ್ತೆ ಬಾರ್ ಎದುರು ರಾತ್ರಿ ಹೊತ್ತಿನಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ಗೋವನ್ನು ವಾಹನದಲ್ಲಿ ತುಂಬಿಸಿಕೊಂಡು ಹೋಗಿದ್ದಾರೆ. ಈ ಘಟನೆಗೂ ಮೊದಲು ಮ್ಯಾಂಗನೀಸ್ ರಸ್ತೆಯಲ್ಲಿ ಗೋಕಳ್ಳತನ ಮಾಡಲು ಯತ್ನಿಸಿದ್ದು, ಸ್ಥಳೀಯರು ಕೂಗಿಕೊಂಡಿದ್ದರಿಂದ ದನವನ್ನು ಅಲ್ಲಿಯೇ ಬಿಟ್ಟು ಓಡಿಹೋಗಿದ್ದಾರೆ. ಸಿಸಿ ಟಿವಿ ಪೂಟೇಜ್ ಆಧಾರ ಮೇಲೆ ಗಂಗೊಳ್ಳಿ ಪಿಎಸೈ ಭೀಮಾಶಂಕರ್ ಹಾಗೂ ಸಿಬ್ಬಂದಿಗಳು ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಗಂಗೊಳ್ಳಿಯ ಹಿಂದೂ ಜಾಗರಣಾ ವೇದಿಕೆ ಒಂದು ಪ್ರತ್ಯೇಕ ದೂರು ದಾಖಲಿಸಿದೆ/ಕುಂದಾಪ್ರ ಡಾಟ್ ಕಾಂ ಸುದ್ದಿ/ ► ಗಂಗೊಳ್ಳಿಯಲ್ಲಿ ಗೋಕಳ್ಳತನ ಮಾಡಿದ್ದ ಆರೋಪಿ ಬಂಧನ – https://kundapraa.com/?p=38849 . ಇದನ್ನೂ ಓದಿ: ► ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಮನೆಗೆ ತೆರಳಿ ಪಾಠ ಮಾಡಿದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಉಡುಪಿ ಜಿಲ್ಲೆಯಲ್ಲಿ ಪ್ರಸ್ತುತ ಕೋವಿಡ್-19 ಪಾಸಿಟಿವ್ ಪ್ರಕರಣಗಳು ದಿನೇ ದಿನೇ ಹೆಚ್ಚಿನ ದಾಖಲಾಗುತ್ತಿದ್ದು, ಸಾರ್ವಜನಿಕರು ವಿವಿಧ ಅನಾನುಕೂಲಗಳ ನಡುವೆಯೇ, ಜಿಲ್ಲಾಧಿಕಾರಿ ಕಚೇರಿಯಲ್ಲಿನ ವಿವಿಧ ಕಾರ್ಯಗಳಿಗಾಗಿ ದೂರದ ಊರುಗಳಿಂದ ಸ್ವಂತ ವಾಹನ ಹಾಗೂ ಬಸ್ಸುಗಳ ಮೂಲಕ ಜಿಲ್ಲಾಧಿಕಾರಿಯವರ ಕಛೇರಿಗೆ ಆಗಮಿಸುತ್ತಿದ್ದು, ಇವರೆಲ್ಲರ ಅನುಕೂಲಕ್ಕಾಗಿ ಜಿಲ್ಲಾಡಳಿತ ಅತ್ಯಂತ ಸರಳ ಮತ್ತು ತ್ವರಿತ ಸೇವೆ ನೀಡುವ ನೂತನ ಯೋಜನೆಯನ್ನು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಅವರ ನೇತೃತ್ವದಲ್ಲಿ ಜಾರಿಗೊಳಿಸಲಾಗಿದೆ. ಉಡುಪಿ ಜಿಲ್ಲೆಯ ಸಾರ್ವಜನಿಕರು ತಮ್ಮ ಮನೆಯಲ್ಲಿಯೇ ಕುಳಿತು ಜಿಲ್ಲಾಧಿಕಾರಿ ಕಚೇರಿಯಲ್ಲಿನ ತಮ್ಮ ಕೆಲಸಗಳನ್ನು ದೂರವಾಣಿ ಅಥವಾ ವ್ಯಾಟ್ಸಪ್, ಇಮೇಲ್ ಮೂಲಕ ಪಡೆಯುವ ವಿನೂತನ ಯೋಜನೆ ಇದಾಗಿದ್ದು, ಸಾರ್ವಜನಿಕರಿಗೆ ಈ ಸೇವೆ ಒದಗಿಸಲು ಇದಕ್ಕಾಗಿ ಪ್ರತ್ಯೇಕ ಸಿಬ್ಬಂದಿಯನ್ನು ಸಹ ನಿಯೋಜಿಸಲಾಗಿದೆ. ಸಾರ್ವಜನಿಕರು ತಮಗೆ ಆಗಬೇಕಾದ ಕೆಲಸ-ಕಾರ್ಯಗಳ ಬಗ್ಗೆ ಹಾಗೂ ಈಗಾಗಲೇ ಚಾಲನೆಯಲ್ಲಿರುವ ಅವರಿಗೆ ಸಂಬಂಧಿತ ಕಡತ ಯಾ ಅವರ ಮನವಿ, ಅರ್ಜಿಗಳ ಬಗ್ಗೆ ಪ್ರಸ್ತುತ ಯಾವ ಹಂತದಲ್ಲಿದೆ, ಮುಂತಾದವುಗಳನ್ನು ವಿಚಾರಿಸಲು ದೂರವಾಣಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಮಳೆಗಾಲದಲ್ಲಿ ಕಳ್ಳತನ ಪ್ರಕರಣಗಳು ಹೆಚ್ಚಾಗುವ ಸಾಧ್ಯತೆಗಳಿರುವುದರಿಂದ ದೇವಸ್ಥಾನ, ಚಿನ್ನದ ಅಂಗಡಿ ಸಹಿತ ಎಲ್ಲಾ ಕಡೆಗಳಲ್ಲಿ ಹೆಚ್ಚಿನ ಮುಂಜಾಗ್ರತೆ ವಹಿಸಬೇಕು. ಸಿಸಿ ಕ್ಯಾಮರಾ ಅಳವಡಿಕೆ, ಭದ್ರತಾ ಸಿಬ್ಬಂದಿ ನೇಮಕ ಮೊದಲಾದ ಕ್ರಮಗಳನ್ನು ಅನುಸರಿಸಬೇಕು ಎಂದು ಗಂಗೊಳ್ಳಿ ಪೊಲೀಸ್ ಠಾಣಾ ಉಪನಿರೀಕ್ಷಕ ಭೀಮಾಶಂಕರ ಎಸ್. ಹೇಳಿದರು. ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಸಂಜೆ ಜರುಗಿದ ಗಂಗೊಳ್ಳಿ ಠಾಣಾ ವ್ಯಾಪ್ತಿಯ ಎಲ್ಲಾ ದೇವಸ್ಥಾನದ ಆಡಳಿತ ಮಂಡಳಿ ಮುಖ್ಯಸ್ಥರು, ಸಹಕಾರಿ ಸಂಘಗಳ ಪ್ರಮುಖರ ಹಾಗೂ ಚಿನ್ನದ ಅಂಗಡಿ ಮಾಲೀಕರ ಸಭೆಯಲ್ಲಿ ಮಾಹಿತಿ ನೀಡಿ ಅವರು ಮಾತನಾಡಿ ಸಿಸಿ ಕ್ಯಾಮರಾ ಚಾಲನೆಯಲ್ಲಿರುವುದನ್ನು ಖಚಿತಪಡಿಸಿಕೊಳ್ಳಲು ಆಗಾಗ್ಗ್ಯೆ ಪರಿಶೀಲನೆ ಮಾಡಬೇಕು. ರಾತ್ರಿ ವೇಳೆಯಲ್ಲಿ ಸಂಶಯಾಸ್ಪದ ವ್ಯಕ್ತಿಗಳು ಕಂಡು ಬಂದಲ್ಲಿ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಬೇಕು ಎಂದರು. ರಾತ್ರಿ 9 ಗಂಟೆ ಬಳಿಕ ಕರ್ಫ್ಯೂ ಜಾರಿಯಲ್ಲಿರುವುದರಿಂದ ರಸ್ತೆಯಲ್ಲಿ ಯಾರೂ ತಿರುಗಾಡುವಂತಿಲ್ಲ. ರಾತ್ರಿ ವೇಳೆ ತಿರುಗಾಡುವುದು ಕಂಡು ಬಂದರೆ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸಲಾಗುವುದು. ಕರೋನಾ ಹರಡುವುದನ್ನು ತಡೆಗಟ್ಟಲು…

Read More