ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಮಂಗಳವಾರ ರಾತ್ರಿ ವೇಳೆಗೆ ಖಾಸಗಿ ವಾಹನದಲ್ಲಿ ಬಂದ ಗೋಕಳ್ಳರು ರಸ್ತೆ ಬದಿಯಲ್ಲಿದ್ದ ದನಗಳನ್ನು ಕದಿಯುವ ಯತ್ನ ನಡೆಸಿದ್ದು, ಎರಡು ಪ್ರತ್ಯೇಕ ಘಟನೆಯಲ್ಲಿ ಒಂದು ಗೋವನ್ನು ಕಳವುಗೈಯ್ಯಲಾಗಿದೆ. ಖಾಸಗಿ ಪ್ಯಾಸೆಂಜರ್ ವಾಹನದಲ್ಲಿ ಬಂದಿರುವ ಆಗಂತುಕರು ಗಂಗೊಳ್ಳಿ ಬಂದರು ರಸ್ತೆ ಬಾರ್ ಎದುರು ರಾತ್ರಿ ಹೊತ್ತಿನಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ಗೋವನ್ನು ವಾಹನದಲ್ಲಿ ತುಂಬಿಸಿಕೊಂಡು ಹೋಗಿದ್ದಾರೆ. ಈ ಘಟನೆಗೂ ಮೊದಲು ಮ್ಯಾಂಗನೀಸ್ ರಸ್ತೆಯಲ್ಲಿ ಗೋಕಳ್ಳತನ ಮಾಡಲು ಯತ್ನಿಸಿದ್ದು, ಸ್ಥಳೀಯರು ಕೂಗಿಕೊಂಡಿದ್ದರಿಂದ ದನವನ್ನು ಅಲ್ಲಿಯೇ ಬಿಟ್ಟು ಓಡಿಹೋಗಿದ್ದಾರೆ. ಸಿಸಿ ಟಿವಿ ಪೂಟೇಜ್ ಆಧಾರ ಮೇಲೆ ಗಂಗೊಳ್ಳಿ ಪಿಎಸೈ ಭೀಮಾಶಂಕರ್ ಹಾಗೂ ಸಿಬ್ಬಂದಿಗಳು ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಗಂಗೊಳ್ಳಿಯ ಹಿಂದೂ ಜಾಗರಣಾ ವೇದಿಕೆ ಒಂದು ಪ್ರತ್ಯೇಕ ದೂರು ದಾಖಲಿಸಿದೆ/ಕುಂದಾಪ್ರ ಡಾಟ್ ಕಾಂ ಸುದ್ದಿ/ ► ಗಂಗೊಳ್ಳಿಯಲ್ಲಿ ಗೋಕಳ್ಳತನ ಮಾಡಿದ್ದ ಆರೋಪಿ ಬಂಧನ – https://kundapraa.com/?p=38849 . ಇದನ್ನೂ ಓದಿ: ► ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಮನೆಗೆ ತೆರಳಿ ಪಾಠ ಮಾಡಿದ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಉಡುಪಿ ಜಿಲ್ಲೆಯಲ್ಲಿ ಪ್ರಸ್ತುತ ಕೋವಿಡ್-19 ಪಾಸಿಟಿವ್ ಪ್ರಕರಣಗಳು ದಿನೇ ದಿನೇ ಹೆಚ್ಚಿನ ದಾಖಲಾಗುತ್ತಿದ್ದು, ಸಾರ್ವಜನಿಕರು ವಿವಿಧ ಅನಾನುಕೂಲಗಳ ನಡುವೆಯೇ, ಜಿಲ್ಲಾಧಿಕಾರಿ ಕಚೇರಿಯಲ್ಲಿನ ವಿವಿಧ ಕಾರ್ಯಗಳಿಗಾಗಿ ದೂರದ ಊರುಗಳಿಂದ ಸ್ವಂತ ವಾಹನ ಹಾಗೂ ಬಸ್ಸುಗಳ ಮೂಲಕ ಜಿಲ್ಲಾಧಿಕಾರಿಯವರ ಕಛೇರಿಗೆ ಆಗಮಿಸುತ್ತಿದ್ದು, ಇವರೆಲ್ಲರ ಅನುಕೂಲಕ್ಕಾಗಿ ಜಿಲ್ಲಾಡಳಿತ ಅತ್ಯಂತ ಸರಳ ಮತ್ತು ತ್ವರಿತ ಸೇವೆ ನೀಡುವ ನೂತನ ಯೋಜನೆಯನ್ನು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಅವರ ನೇತೃತ್ವದಲ್ಲಿ ಜಾರಿಗೊಳಿಸಲಾಗಿದೆ. ಉಡುಪಿ ಜಿಲ್ಲೆಯ ಸಾರ್ವಜನಿಕರು ತಮ್ಮ ಮನೆಯಲ್ಲಿಯೇ ಕುಳಿತು ಜಿಲ್ಲಾಧಿಕಾರಿ ಕಚೇರಿಯಲ್ಲಿನ ತಮ್ಮ ಕೆಲಸಗಳನ್ನು ದೂರವಾಣಿ ಅಥವಾ ವ್ಯಾಟ್ಸಪ್, ಇಮೇಲ್ ಮೂಲಕ ಪಡೆಯುವ ವಿನೂತನ ಯೋಜನೆ ಇದಾಗಿದ್ದು, ಸಾರ್ವಜನಿಕರಿಗೆ ಈ ಸೇವೆ ಒದಗಿಸಲು ಇದಕ್ಕಾಗಿ ಪ್ರತ್ಯೇಕ ಸಿಬ್ಬಂದಿಯನ್ನು ಸಹ ನಿಯೋಜಿಸಲಾಗಿದೆ. ಸಾರ್ವಜನಿಕರು ತಮಗೆ ಆಗಬೇಕಾದ ಕೆಲಸ-ಕಾರ್ಯಗಳ ಬಗ್ಗೆ ಹಾಗೂ ಈಗಾಗಲೇ ಚಾಲನೆಯಲ್ಲಿರುವ ಅವರಿಗೆ ಸಂಬಂಧಿತ ಕಡತ ಯಾ ಅವರ ಮನವಿ, ಅರ್ಜಿಗಳ ಬಗ್ಗೆ ಪ್ರಸ್ತುತ ಯಾವ ಹಂತದಲ್ಲಿದೆ, ಮುಂತಾದವುಗಳನ್ನು ವಿಚಾರಿಸಲು ದೂರವಾಣಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಮಳೆಗಾಲದಲ್ಲಿ ಕಳ್ಳತನ ಪ್ರಕರಣಗಳು ಹೆಚ್ಚಾಗುವ ಸಾಧ್ಯತೆಗಳಿರುವುದರಿಂದ ದೇವಸ್ಥಾನ, ಚಿನ್ನದ ಅಂಗಡಿ ಸಹಿತ ಎಲ್ಲಾ ಕಡೆಗಳಲ್ಲಿ ಹೆಚ್ಚಿನ ಮುಂಜಾಗ್ರತೆ ವಹಿಸಬೇಕು. ಸಿಸಿ ಕ್ಯಾಮರಾ ಅಳವಡಿಕೆ, ಭದ್ರತಾ ಸಿಬ್ಬಂದಿ ನೇಮಕ ಮೊದಲಾದ ಕ್ರಮಗಳನ್ನು ಅನುಸರಿಸಬೇಕು ಎಂದು ಗಂಗೊಳ್ಳಿ ಪೊಲೀಸ್ ಠಾಣಾ ಉಪನಿರೀಕ್ಷಕ ಭೀಮಾಶಂಕರ ಎಸ್. ಹೇಳಿದರು. ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಸಂಜೆ ಜರುಗಿದ ಗಂಗೊಳ್ಳಿ ಠಾಣಾ ವ್ಯಾಪ್ತಿಯ ಎಲ್ಲಾ ದೇವಸ್ಥಾನದ ಆಡಳಿತ ಮಂಡಳಿ ಮುಖ್ಯಸ್ಥರು, ಸಹಕಾರಿ ಸಂಘಗಳ ಪ್ರಮುಖರ ಹಾಗೂ ಚಿನ್ನದ ಅಂಗಡಿ ಮಾಲೀಕರ ಸಭೆಯಲ್ಲಿ ಮಾಹಿತಿ ನೀಡಿ ಅವರು ಮಾತನಾಡಿ ಸಿಸಿ ಕ್ಯಾಮರಾ ಚಾಲನೆಯಲ್ಲಿರುವುದನ್ನು ಖಚಿತಪಡಿಸಿಕೊಳ್ಳಲು ಆಗಾಗ್ಗ್ಯೆ ಪರಿಶೀಲನೆ ಮಾಡಬೇಕು. ರಾತ್ರಿ ವೇಳೆಯಲ್ಲಿ ಸಂಶಯಾಸ್ಪದ ವ್ಯಕ್ತಿಗಳು ಕಂಡು ಬಂದಲ್ಲಿ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಬೇಕು ಎಂದರು. ರಾತ್ರಿ 9 ಗಂಟೆ ಬಳಿಕ ಕರ್ಫ್ಯೂ ಜಾರಿಯಲ್ಲಿರುವುದರಿಂದ ರಸ್ತೆಯಲ್ಲಿ ಯಾರೂ ತಿರುಗಾಡುವಂತಿಲ್ಲ. ರಾತ್ರಿ ವೇಳೆ ತಿರುಗಾಡುವುದು ಕಂಡು ಬಂದರೆ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸಲಾಗುವುದು. ಕರೋನಾ ಹರಡುವುದನ್ನು ತಡೆಗಟ್ಟಲು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕಾನೂನು ಮಾಡುವವರೆ ಅದನ್ನು ಮೀರುವುದು ಸರಿಯಲ್ಲ. ಯಾವುದೇ ಪಕ್ಷದ ಜನನಾಯಕರಿರಲಿ ಮೊದಲು ತಾವು ಸಾಮಾಜಿಕ ಅಂತರ ಪಾಲಿಸಿ, ಬಳಿಕ ಜನರಿಗೆ ಪಾಲಿಸುವುಂತೆ ಹೇಳಲಿ ಎಂದು ಸಾಮಾಜಿಕ ಅಂತರ ಪಾಲಿಸದ ನಾಯಕರಿಗೆ ಮಾಜಿ ಸಂಸದ, ಬಿಜೆಪಿ ಪಕ್ಷದ ಮುಖಂಡ ಕೆ. ಜಯಪ್ರಕಾಶ್ ಹೆಗ್ಡೆ ಅವರು ಚಾಟಿ ಬೀಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಹೇಳಿಕೊಂಡಿರುವ ಅವರು, ಸರಕಾರ ಜನರಿಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಹೇಳುತ್ತಿದೆ. ಜನ ತಪ್ಪು ಮಾಡಿದರೆ ಪೊಲೀಸರು ಲಾಠಿ ಪ್ರಯೋಗ ಮಾಡುತ್ತಾರೆ. ಆದರೆ ನಮ್ಮ ಜನನಾಯಕರು ಸಾವಿರಾರು ಜನರನ್ನು ಸೇರಿಸಿ ಅವರ ಮಧ್ಯದಲ್ಲಿ ನಿಲ್ಲುವುದು, ಮಾಸ್ಕ್ ಹಾಕದಿರುವುದು ಮಾಡುತ್ತಿದ್ದಾರೆ. ಅವರಿಗೆ ಶಿಕ್ಷೆ ಕೊಡುವವರು ಯಾರು ಎಂಬುದು ತಿಳಿದಿಲ್ಲ. ಕುಂದಾಪ್ರ ಡಾಟ್ ಕಾಂ ಸುದ್ದಿ. ಕಿಟ್ ಕೊಡುವ ನೆಪದಲ್ಲಿ ಸಾವಿರಾರು ಜನರನ್ನು ಒಂದೆಡೆ ಸೇರಿಸುವುದಕ್ಕಿಂತ, ಅವರವರ ಮನೆಗಳಿಗೆ ಕಿಟ್ ತಲುಪಿಸಿದರೆ ಕೊರೋನಾ ನಿಯಂತ್ರಿಸಲು ಅದಕ್ಕಿಂತ ದೊಡ್ಡ ಸಹಾಯ ಇನ್ನೊಂದಿಲ್ಲ. ಜನನಾಯಕರು ಮೊದಲು ಕಾನೂನು ಪಾಲಿಸಲಿ ಎಂದವರು ಹೇಳಿಕೊಂಡಿದ್ದಾರೆ. ರಾಜ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಜೂ.9ರ ಮಂಗಳವಾರದ ಯಾವುದೇ ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿಲ್ಲ.ನೆಗೆಟಿವ್ ಬಂದಿರುವ 103 ಮಂದಿ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಸದ್ಯ ಒಟ್ಟು 946 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 233 ಮಂದಿ ಬಿಡುಗಡೆಯಾಗಿದ್ದು, 668 ಮಂದಿ ಕೊರೋನಾ ಸೋಂಕಿತರಿಗೆ ಉಡುಪಿ, ಕುಂದಾಪುರ, ಕಾರ್ಕಳದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈವರೆಗೆ ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ಉಡುಪಿ ಜಿಲ್ಲೆಯ ಕೋವಿಡ್ ಪ್ರಕರಣಗಳು ಮತ್ತಷ್ಟು ಮಾಹಿತಿಗಾಗಿ ಸ್ವಲ್ಪ ಹೊತ್ತಿನ ಬಳಿಕ ಇದೇ ಲಿಂಕ್ ನೋಡಿ. ಇದನ್ನೂ ಓದಿ: ► ಶೈಕ್ಷಣಿಕ ವರ್ಷದಲ್ಲಿ ಸಿಲಬಸ್ ಕಡಿತಗೊಳಿಸಲು ಚಿಂತನೆ: ಸಚಿವ ಸುರೇಶ್ ಕುಮಾರ್ – https://kundapraa.com/?p=38460 . ► ಉಡುಪಿ ಜಿಲ್ಲೆ: ಎಸ್.ಎಸ್.ಎಲ್.ಸಿ ಪರೀಕ್ಷೆ ಮಾಹಿತಿಗಾಗಿ ಸಹಾಯವಾಣಿ – https://kundapraa.com/?p=38453 . ► ಉಡುಪಿ ಜಿಲ್ಲೆ: ಸೋಮವಾರ 45 ಕೊರೋನಾ ಪಾಸಿಟಿವ್ ದೃಢ – https://kundapraa.com/?p=38421 .
ಕುಂದಾಪ್ರ ಡಾಟ್ ಕಾಂ ಸುದ್ದಿ ಉಡುಪಿ: ಕೋವಿಡ್-19 ಕಾರಣದಿಂದ ಈ ವರ್ಷದ ಶಾಲಾ ಶೈಕ್ಷಣಿಕ ಚಟುವಟಿಕೆಗಳು ಆರಂಭವಾಗುವುದು ವಿಳಂಬವಾಗಲಿದ್ದು, ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಪ್ರಸಕ್ತ ವರ್ಷದ ಶಾಲಾ ಪಠ್ಯವನ್ನು ಕಡಿಮೆ ಮಾಡಲು ಚಿಂತನೆ ಇದೆ ಎಂದು ರಾಜ್ಯದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವ ಸುರೇಶ್ ಕುಮಾರ್ ತಿಳಿಸಿದರು. ಅವರು ಮಂಗಳವಾರ ಉಡುಪಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ , ಉಡುಪಿ, ಉತ್ತರ ಕನ್ನಡ ಮತ್ತು ದ.ಕನ್ನಡ ಜಿಲ್ಲೆಗಳ ಜಿಲ್ಲಾ ಪಂಚಾಯತ್ ಸಿಇಓ ಗಳು, ಡಿಡಿಪಿಐ ಗಳು ಮತ್ತು ಬಿಇಓ ಗಳೊಂದಿಗೆ ಎಸ್.ಎಸ್.ಎಲ್.ಸಿ. ಪರೀಕ್ಷೆ ಪೂರ್ವ ಸಿದ್ದತೆ ಕುರಿತ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರಸಕ್ತ ಸಾಲಿನಲ್ಲಿ ಶಾಲಾ ಶೈಕ್ಷಣಿಕ ಅವಧಿ ಕಡಿಮೆಯಾಗಲಿದ್ದು, ಇದಕ್ಕಾಗಿ ಶಾಲಾ ಪಠ್ಯವನ್ನು ಕಡಿಮೆಗೊಳಿಸುವ ಕುರಿತಂತೆ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳು ಮತ್ತು ಶಿಕ್ಷಣ ತಜ್ಞರೊಂದಿಗೆ ಚರ್ಚಿಸಿ, ವಿದ್ಯಾರ್ಥಿಗಳ ಮುಂದಿನ ತರಗತಿಗೆ ಅಗತ್ಯವಿರುವ ಪಠ್ಯದ ಕೊರತೆಯಾಗದಂತೆ , ಸೀಮಿತ ಅವಧಿಯೊಳಗೆ ಅತ್ಯಗತ್ಯ ಇರುವ ಪಠ್ಯ ಮಾತ್ರ…
ಕುಂದಾಪ್ರ ಡಾಟ್ ಕಾಂ ಸುದ್ದಿ ಉಡುಪಿ: ಎಸ್.ಎಸ್.ಎಲ್.ಸಿ ಪರೀಕ್ಷೆಯು ಜೂನ್ ೨೫ ರಿಂದ ನಡೆಯಲಿದ್ದು, ಮಕ್ಕಳು ಮತ್ತು ಪೋಷಕರು ಪರೀಕ್ಷೆಯ ಬಗ್ಗೆ ಮಾಹಿತಿ ಪಡೆಯಲು, ಉಡುಪಿ ಜಿಲ್ಲೆಯಲ್ಲಿ ಜಿಲ್ಲಾ ಕೇಂದ್ರ ಹಾಗೂ ತಾಲೂಕು ಕೇಂದ್ರಗಳಲ್ಲಿ ಸಹಾಯವಾಣಿ ಆರಂಭಿಸಲಾಗಿದೆ. ಸರಕಾರಿ ರಜಾದಿನ ಹೊರತುಪಡಿಸಿ ಪ್ರತೀ ದಿನ ಕಚೇರಿ ಸಮಯದಲ್ಲಿ ಪರೀಕ್ಷೆಗೆ ಸಂಬಂದಿಸಿದಂತೆ ಯಾವುದೇ ಸಂದೇಹಗಳಿದ್ದಲ್ಲಿ ಈ ಸಹಾಯವಾಣಿಯ ಮೂಲಕ ನೋಡೆಲ್ ಅಧಿಕಾರಿ/ಕಚೇರಿಯನ್ನು ಸಂಪರ್ಕಿಸಿ ಪರಿಹರಿಸಿಕೊಳ್ಳುವಂತೆ ಡಿಡಿಪಿಯ ಉಡುಪಿ ಅವರ ಪ್ರಕಟಣೆ ತಿಳಿಸಿದೆ. ಸಹಾಯವಾಣಿ ಸಂಖ್ಯೆ ವಿವರ ಈ ಕೆಳಗಿನಂತಿದೆ ಇದನ್ನೂ ಓದಿ: ► ಉಡುಪಿ ಜಿಲ್ಲೆ: ಸೋಮವಾರ 45 ಕೊರೋನಾ ಪಾಸಿಟಿವ್ ದೃಢ – https://kundapraa.com/?p=38421 . ► ತಾಲೂಕಿನ ದೇವಸ್ಥಾನಗಳಲ್ಲಿ ಭಕ್ತರಿಗೆ ತೆರೆದ ಬಾಗಿಲು: ಕೊಲ್ಲೂರಿನಲ್ಲಿ ಕರೋನಾ ನಿವಾರಣೆಗಾಗಿ ಚಂಡಿಕಾ ಹೋಮ – https://kundapraa.com/?p=38410 .
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಉಡುಪಿಯಲ್ಲಿ ಕೋವಿಡ್-19 ಸೋಂಕಿತರ ಡಿಸ್ಚಾರ್ಜ್ ಪ್ರಮಾಣ ಹೆಚ್ಚಿದ್ದು, ಮುಂದಿನ 10 ದಿನದಲ್ಲಿ ಜಿಲ್ಲೆಯಲ್ಲಿರುವ ಎಲ್ಲಾ ಪಾಸಿಟಿವ್ ಪ್ರಕರಣಗಳು ಡಿಸ್ಚಾರ್ಜ್ ಆಗುವ ಸಾದ್ಯತೆಗಳಿದ್ದು, ಜಿಲ್ಲೆಯಲ್ಲಿ ಕೋವಿಡ್ ನಿಂದ ಯಾವುದೇ ಸಂದರ್ಭದಲ್ಲೂ ಸಾವು ಸಂಭವಿಸದಂತೆ ಎಚ್ಚರವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದ್ದು, ಜಿಲ್ಲೆಯನ್ನು ನಾನ್ ಕೋವಿಡ್ ಜಿಲ್ಲೆಯನ್ನಾಗಿ ರೂಪಿಸುವಲ್ಲಿ ಎಲ್ಲಾ ಅಧಿಕಾರಿಗಳು ಮತ್ತು ಜನಪ್ರನಿಧಿಗಳು ಸಹಕಾರದಿಂದ ಪ್ರಯತ್ನಿಸಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ, ಅವರು ಸೋಮವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯ ನಂತರ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದರು. ಜಿಲ್ಲೆಯಲ್ಲಿ ಇದುವರೆಗೆ 12540 ಮಂದಿಯನ್ನು ಕೋವಿಡ್-19 ಪರೀಕ್ಷೆ ಮಾಡಿದ್ದು, ಅದರಲ್ಲಿ 11566 ವರದಿ ನೆಗೆಟಿವ್ ಬಂದಿದ್ದು, 946 ಪಾಸಿಟಿವ್ ಪ್ರಕರಣಗಳು ಕಂಡುಬಂದಿದೆ. ಇದರಲ್ಲಿ ಶೇ. 98 ಮಹಾರಾಷ್ಟçದಿಂದ ಬಂದವರಲ್ಲಿ ಕಂಡುಬಂದಿದು, ಇಂದಿನವರೆಗೆ 318ಮಂದಿಯನ್ನು ಡಿಸ್ಚಾರ್ಜ್ ಮಾಡಲಾಗಿದೆ, ರಾಜ್ಯದಲ್ಲೇ ಅತೀ ಹೆಚ್ಚು ಕ್ವಾರಂಟೈನ್ ಕೇಂದ್ರದಲ್ಲಿನ ಟೆಸ್ಟ್ ಉಡುಪಿ ಜಿಲ್ಲೆಯಲ್ಲಿ ನಡೆದಿದೆ. ಸೋಂಕು ಕಂಡುಬಂದ 929 ಮಂದಿಯಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ಚಿತ್ತೂರು ನೈಕಂಬ್ಳಿಯ ಪ್ರೇರಣಾ ಯುವ ವೇದಿಕೆ ವತಿಯಿಂದ ನೈಕಂಬ್ಳಿ ಮಹಾಲಿಂಗೇಶ್ವರ ದೇವಸ್ಥಾನ ವಠಾರದಲ್ಲಿ ಪ್ರೇರಣಾ ಹಸಿರುಸಿರು ವನ ಮಹೋತ್ಸವ ಆಚರಣೆ ಮಾಡಲಾಯಿತು. ಈ ಸಂಧರ್ಭದಲ್ಲಿ ವೇದಿಕೆಯ ಅಧ್ಯಕ್ಷರಾದ ರಾಘು ಶೆಟ್ಟಿ ನೈಕಂಬ್ಳಿ, ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ಕರುಣಾಕರ ಶೆಟ್ಟಿ ಹಾಗೂ ಪ್ರೇರಣಾ ಸದಸ್ಯರು ಪಾಲ್ಗೊಂಡಿದ್ದರು. ಪ್ರತಿ ವರ್ಷದಂತೆ ನೂರು ಗಿಡಗಳನ್ನು ನೆಡಲಾಯಿತು. ಇದನ್ನೂ ಓದಿ: ► ಉಡುಪಿ ಜಿಲ್ಲೆ: ಎಸ್.ಎಸ್.ಎಲ್.ಸಿ ಪರೀಕ್ಷೆ ಮಾಹಿತಿಗಾಗಿ ಸಹಾಯವಾಣಿ – https://kundapraa.com/?p=38453 . ► ಉಡುಪಿ ಜಿಲ್ಲೆ: ಸೋಮವಾರ 45 ಕೊರೋನಾ ಪಾಸಿಟಿವ್ ದೃಢ – https://kundapraa.com/?p=38421 . ► ತಾಲೂಕಿನ ದೇವಸ್ಥಾನಗಳಲ್ಲಿ ಭಕ್ತರಿಗೆ ತೆರೆದ ಬಾಗಿಲು: ಕೊಲ್ಲೂರಿನಲ್ಲಿ ಕರೋನಾ ನಿವಾರಣೆಗಾಗಿ ಚಂಡಿಕಾ ಹೋಮ – https://kundapraa.com/?p=38410 .
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸಿದ್ದಾಪುರ ಗ್ರಾ.ಪಂ. ನಿವಾಸಿಗಳಿಗೆ ವಾರಾಹಿ ಕಾಲುವೆಯ ಕಲುಷಿತ ನೀರನ್ನು ಟ್ಯಾಂಕರ್ ಮೂಲಕ ಸರಬರಾಜು ಮಾಡಿರುವ ಬಗ್ಗೆ ವಂಡ್ಸೆ ಬ್ಲಾಕ್ ಯುವ ಕಾಂಗ್ರೆಸ್ ನೇತೃತ್ವದಲ್ಲಿ ಸಾರ್ವಜನಿಕರು ಪಂಚಾಯತ್ಗೆ ಮುತ್ತಿಗೆ ಹಾಕಿದ ಘಟನೆಯು ಸೋಮವಾರ ನಡೆದಿದೆ. ಈ ಸಂದರ್ಭ ಕಲುಷಿತ ನೀರನ್ನು ಗ್ರಾಮಸ್ಥರಿಗೆ ಕೊಡುತ್ತಿರುವ ಗುತ್ತಿಗೆದಾರ ಹಾಗೂ ಅದರ ನಿರ್ವಹಣೆ ಮಾಡುತ್ತಿರುವ ಗ್ರಾ.ಪಂ. ಸದಸ್ಯ ಶೇಖರ ಕುಲಾಲ ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕು. ಟೆಂಡರ್ನ್ನು ರದ್ದು ಮಾಡುವುದರ ಜತೆಯಲ್ಲಿ ಬಿಲ್ನ್ನು ತಡೆಹಿಡಿಯಬೇಕು. ಗುತ್ತಿಗೆದಾರರ ವಿರುದ್ಧ ಕ್ರಮ ತೆಗೆದುಕೊಳ್ಳದ ಪಂಚಾಯತ್ ಅಭಿವೃದ್ಧಿ ಅಧಿಕಾರಿಯ ವಿರುದ್ಧವೂ ಕ್ರಮ ತೆಗೆದುಕೊಳ್ಳಬೇಕು. ಗುತ್ತಿಗೆದಾರರಿಂದ ಟ್ಯಾಂಕರ್ ಚಾಲಕನಿಗೆ ಜೀವ ಬೆದರಿಕೆ ಬರುತ್ತಿರುವುದರಿಂದ ಚಾಲಕನಿಗೆ ರಕ್ಷಣೆ ಕೊಡಬೇಕು ಎಂದು ಜಿಲ್ಲಾಡಳಿತವನ್ನು ಆಗ್ರಹಿಸಿದರು. ಸಂಬಂಧಪಟ್ಟವರು ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳದಿದ್ದಲ್ಲಿ ಮುಂದಿನ ದಿನಗಳಲ್ಲಿ ಪಂಚಾಯತ್ ಎದುರು ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು. ಸಿದ್ದಾಪುರ ಗ್ರಾ.ಪಂ. ವ್ಯಾಪ್ತಿಯ ಕುಡಿಯುವ ನೀರಿನ ಸಮಸ್ಯೆ ಇರುವ ಗ್ರಾಮಸ್ಥರಿಗೆ ಶುದ್ಧ…
