Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಅಂಧ ವಿದ್ಯಾರ್ಥಿಗಳು ತಮ್ಮ ದೈನಂದಿನ ಚಟುವಟಿಕೆಗಳಲ್ಲಿ ಸ್ವಾವಲಂಬಿಗಳಾಗಲು ಟಾಕಿಂಗ್ ಮೊಬೈಲ್, ಬ್ರೈಲ್ ವಾಚ್, ವಾಕಿಂಗ್ ಸ್ಟಿಕ್ ಮತ್ತು ಇನ್ನಿತರ ಸಾಧನಗಳನ್ನು ಒಳಗೊಂಡ ತಲಾ 25,000 ರೂ.ಗಳ ಬ್ರೈಲ್ ಕಿಟ್‌ಗಳನ್ನು ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ. ಅಂಧ ವಿದ್ಯಾರ್ಥಿಗಳ ವಿಕಲತೆಯ ಪ್ರಮಾಣ ಶೇ.40 ಅಥವಾ ಅದಕ್ಕಿಂತ ಹೆಚ್ಚಾಗಿರುವ, ಎಸ್.ಎಸ್.ಎಲ್.ಸಿ ಹಾಗೂ ನಂತರದ ಉನ್ನತ ಶಿಕ್ಷಣ ವ್ಯಾಸಂಗ ಮಾಡುತ್ತಿರುವ, ರಾಜ್ಯದಲ್ಲಿ ಕನಿಷ್ಠ 10 ವರ್ಷಗಳ ನಿವಾಸಿಯಾಗಿರುವವರು, ಸಂಬಂಧಪಟ್ಟ ಶಾಲಾ ಕಾಲೇಜುಗಳ ಮುಖ್ಯಸ್ಥರಿಂದ ಶಿಕ್ಷಣ ಪಡೆಯುತ್ತಿರುವ ಬಗ್ಗೆ ದೃಢೀಕರಣ ಒದಗಿಸಬೇಕು. ಅರ್ಜಿ ಸಲ್ಲಿಸಲು ಫೆಬ್ರವರಿ 6 ಕೊನೆಯ ದಿನ, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ದೂರವಾಣಿ ಸಂಖ್ಯೆ: 0820-2574810/811 ಅಥವಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಸಿ ಬ್ಲಾಕ್, ತಳಮಹಡಿ, ಸಿಂಡಿಕೇಟ್ ಬ್ಯಾಂಕ್ ಹತ್ತಿರ, ಜಿಲ್ಲಾ ಪಂಚಾಯತ್ ವಿಭಾಗ, ರಜತಾದ್ರಿ,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಬೈಂದೂರು ವಲಯ ಇವರ ಆಶ್ರಯದಲ್ಲಿ ವಲಯದ ಶಿಕ್ಷಕರ ಗುರುಸ್ಪಂದನ ಕಾರ್ಯಕ್ರಮವು ಇಲ್ಲಿನ ಸ.ಮಾ.ಹಿ.ಪ್ರಾ.ಶಾಲೆಯಲ್ಲಿ ಚಾಲನೆ ನೀಡಲಾಯಿತು. ಕಾರ್ಯಕ್ರಮವನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಜಿ.ಎಂ.ಮುಂದಿನಮನಿ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿಕ್ಷಕರ ಸಂಘದ ಅಧ್ಯಕ್ಷರಾದ ಶೇಖರ್ ಪೂಜಾರಿ ವಹಿಸಿ ಮಾತನಾಡಿ,, ಇಲಾಖೆಯ ಸಮನ್ವಯದೊಂದಿಗೆ ಶಿಕ್ಷಕ ಸ್ನೇಹಿ ವಾತಾವರಣ ನಿರ್ಮಾಣ ಮಾಡಲು ಶಿಕ್ಷಕ ಬಂಧುಗಳ ಸಹಕಾರ ಅಗತ್ಯ ಎಂದು ಹೇಳಿದರು. ಸಂಸ್ಥೆಯ ಮುಖ್ಯೋಪಾಧ್ಯಾಯರಾದ ಜನಾರ್ದನ ದೇವಾಡಿಗ ಪ್ರಾಸ್ತಾವಿಕವಾಗಿ ಮಾತನಾಡಿ ಶಿಕ್ಷಕರು ತಮ್ಮ ಸೇವಾ ಪುಸ್ತಕ ದಲ್ಲಿ ಗಮನಿಸಬೇಕಾದ ಅಂಶಗಳ ಬಗ್ಗೆ ಸ್ಪಷ್ಟ ಪಡಿಸಿದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಶಾಲೆಯ ಎಸ್.ಡಿ.ಎಮ್.ಸಿ. ಅಧ್ಯಕ್ಷರಾದ ರವೀಂದ್ರ ಶ್ಯಾನುಭಾಗ್ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಮೇನೇಜರ್ ಎಡ್ವಿನ್ ಫೆರ್ನಾಂಡಿಸ್ ಶುಭ ಕೋರಿದರು. ಕಾರ್ಯಕ್ರಮದಲ್ಲಿ ಧ.ಮಂ.ಹಿ.ಪ್ರಾ.ಶಾಲೆಯ ಮುಖ್ಯ ಶಿಕ್ಷಕರಾದ ರಾಜು ಮಯ್ಯಾಡಿ, ಬೈಂದೂರು ಶಿಕ್ಷಣ ಸಂಯೋಜಕ ಚಂದ್ರ ದೇವಾಡಿಗ, ಸಿ.ಆರ್.ಪಿ.ಗಳಾದ ರಾಘವೇಂದ್ರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಮಹಿಳಾ ಉದ್ಧೇಶಿತ ಆಯವ್ಯಯದಡಿ ಪತ್ರಿಕೋದ್ಯಮ ಪದವಿ/ಸ್ನಾತಕೋತ್ತರ ಪದವೀಧರ ಮಹಿಳೆಯರು ವೃತ್ತಿಯಲ್ಲಿ ತೊಡಗಿಕೊಳ್ಳಲು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಹತ್ತು ತಿಂಗಳ ಅಪ್ರೆಂಟಿಸ್ ತರಬೇತಿಯನ್ನು ಹಮ್ಮಿಕೊಂಡಿದೆ. ಪ್ರಸಕ್ತ ಸಾಲಿನಲ್ಲಿ ಉಡುಪಿ ಜಿಲ್ಲಾ ಕಚೇರಿಯಲ್ಲಿ ಇಬ್ಬರು ಮಹಿಳಾ ಅಭ್ಯರ್ಥಿಗಳನ್ನು ಮೆರಿಟ್ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು. ಆಯ್ಕೆಯಾದ ಪ್ರತಿ ಅಪ್ರೆಂಟಿಸ್‌ಗೆ ಮಾಹೆಯಾನ ರೂ. 15 ಸಾವಿರ ರೂಪಾಯಿ ಸ್ಟೈಫಂಡ್ ನೀಡಲಾಗುವುದು. ಇಲಾಖೆಯ ಕ್ಷೇತ್ರ ಪ್ರಚಾರ ಕಾರ್ಯಗಳಲ್ಲಿ, ಸುದ್ದಿ ಸಂಗ್ರಹ, ರಚನೆ ಹಾಗೂ ವಿಶೇಷ ಲೇಖನ ರಚನೆಗಳಲ್ಲಿ ತರಬೇತಿ ನೀಡಲಾಗುವುದು. ಅಭ್ಯರ್ಥಿಗಳು ಪತ್ರಿಕೋದ್ಯಮದಲ್ಲಿ ಪದವಿ/ಸ್ನಾತಕೋತ್ತರ ಪದವಿ ಪಡೆದಿರಬೇಕು. ಕಂಪ್ಯೂಟರ್ ಜ್ಞಾನ ಹೊಂದಿದ್ದು, ಕನ್ನಡ ಭಾಷೆಯ ಬಳಕೆಯಲ್ಲಿ ಪ್ರಬುದ್ಧತೆ ಇರಬೇಕು. ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದಂದು ಅಭ್ಯರ್ಥಿಗಳ ವಯಸ್ಸು 40 ವರ್ಷದೊಳಗಿರಬೇಕು. ಅರ್ಜಿಯೊಂದಿಗೆ ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಪದವಿ ಪ್ರಮಾಣ ಪತ್ರ, ಸ್ನಾತಕೋತ್ತರ ಪದವಿ ಪ್ರಮಾಣಪತ್ರ, ಪಾಸ್ ಪೋರ್ಟ್ ಅಳತೆಯ ಎರಡು ಭಾವಚಿತ್ರ ಹಾಗೂ ಇನ್ನಿತರ ಪೂರಕ ದಾಖಲೆಗಳನ್ನು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕನಾ೯ಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯಿಂದ 2020-21 ನೇ ಸಾಲಿನಲ್ಲಿ ನಡೆಸಲಾದ ಭರತನಾಟ್ಯ ಶಾಸ್ತ್ರೀಯ ನೃತ್ಯದ ಜೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಬೈಂದೂರು ಸುರಭಿ ಸಂಸ್ಥೆಯ ಭರತನಾಟ್ಯ ವಿಭಾಗದ ಎಲ್ಲಾ ವಿದ್ಯಾಥಿ೯ಗಳೂ ಅತ್ಯುತ್ತಮ ಅಂಕದೊಂದಿಗೆ ತೇಗ೯ಡೆ ಹೊಂದಿ 100% ಫಲಿತಾಂಶ ದೊಂದಿಗೆ 6 ವಿದ್ಯಾಥಿ೯ನಿಯರು ಅತಿ ಹೆಚ್ಚು ಅಂಕದೊಂದಿಗೆ ವಿಶಿಷ್ಟ ದಜೆ೯(ಡಿಸ್ಟಿಂಗ್ಷನ್)ಯಲ್ಲಿಪಾಸಾಗಿದ್ದು ಸಂಸ್ಥೆಯ ಎಲ್ಲಾ ವಿದ್ಯಾಥಿ೯ನಿಯರಿಗೆ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಅಭಿನಂದನೆ ಸಲ್ಲಿಸಿದ್ದಾರೆ. ಇವರೆಲ್ಲರೂ ನೃತ್ಯ ಗುರುಗಳಾದ ವಿದ್ವಾನ್ ಚಂದ್ರಶೇಖರ ನಾವಡ ಸುರತ್ಕಲ್ ಇವರ ಶಿಷ್ಯೆಯರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಸರಕಾರಿ ಪ.ಪೂ.ಕಾಲೇಜಿನ ರೋಟರಿ ಲಕ್ಷ್ಮೀ ನರಸಿಂಹ ಕಲಾಮಂದಿರದಲ್ಲಿ ನಡೆದ ಸಮಾರಂಭದಲ್ಲಿ ಪ್ರತಿಭಾವಂತ ಹಿರಿಯ ಲೇಖಕಿ ಕೆ. ಶಾರದಾ ಭಟ್ ಅವರಿಗೆ ಕೋ.ಮ.ಕಾರಂತ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಸಮಾರಂಭ ಉದ್ಘಾಟಿಸಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಸರಕಾರ, ಖಾಸಗಿ ಸಂಸ್ಥೆಗಳು ನೀಡುವ ಪ್ರಶಸ್ತಿ ಪಡೆಯಲು ನಡೆಯುವ ಹೋರಾಟಗಳನ್ನು ನಾವು ಗಮನಿಸುತ್ತಿದ್ದೇವೆ. ಇಂತಹ ಕಾಲದಲ್ಲಿ ಸಮರ್ಥರು ಗೌರವಕ್ಕೆ ಪಾತ್ರರಾದರೆ ಸಂತೋಷವಾಗುತ್ತದೆ. ಕುಂದಪ್ರಭ ಸಂಸ್ಥೆ ಕೋ.ಮ.ಕಾರಂತ ಪ್ರಶಸ್ತಿ ಸಮರ್ಥರಿಗೆ ನೀಡುತ್ತಾ ಬಂದು ಪ್ರಶಸ್ತಿಯ ಗೌರವ ಹೆಚ್ಚಿಸಿದೆ. ಮಾಧ್ಯಮದ ಮಂದಿ ಸುದ್ಧಿ ಜಾಹಿರಾತು ಸಂಗ್ರಹದೊಂದಿಗೆ ನಿಜವಾಗಿ ಸಾಧನೆ ಮಾಡಿದವರನ್ನು ಬೆಳಕಿಗೆ ತರಬೇಕು, ಪ್ರೋತ್ಸಾಹಿಸಬೇಕು. ಗುಣಮಟ್ಟ ಇದ್ದಲ್ಲಿ ಗೌರವ ಇರುತ್ತದೆ. ನಮ್ಮ ಕ್ಯಾಂಪ್ಕೊ ಸಹ, ವಿಸ್ತರಣೆಯೊಂದಿಗೆ ಗುಣಮಟ್ಟ ಉಳಿಸಿಕೊಳ್ಳುವಲ್ಲಿ ಜಾಗೃತಿ ವಹಿಸುತ್ತದೆ. ಕುಂದಾಪುರ ಪರಿಸರದಲ್ಲಿಯೂ ಇನ್ನೊಂದು ಕೇಂದ್ರ ಸ್ಥಾಪನೆಗೆ ಚಿಂತಿಸಲಾಗಿದೆ ಎಂದು ಹೇಳಿದರು. ಕುಂದಾಪುರ ತಾಲ್ಲೂಕು ಆರೋಗ್ಯಾಧಿಕಾರಿ ಡಾ. ನಾಗಭೂಷಣ ಉಡುಪ, ಡಾ. ಎನ್.ಆರ್.ಆಚಾರ್ಯ ಸ್ಮಾರಕ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ರಾಜ್ಯದಲ್ಲಿ ಜಾನುವಾರು ಹತ್ಯೆ ಪ್ರತಿಬಂದಕ ಮತ್ತು ಜಾನುವಾರು ಸಂರಕ್ಷಣಾ ಕಾಯ್ದೆ 2020 ಜಾರಿಗೆ ಬಂದಿದ್ದು, ಈ ಕಾಯ್ದೆಯ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವುದರ ಜೊತೆಗೆ ಕಾಯ್ದೆಯ ಉಲ್ಲಂಘನೆ ನಡೆಯದಂತೆ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳುವಂತೆ ಪಶು ಸಂಗೋಪನೆ, ಹಜ್ ಮತ್ತು ವಕ್ಫ್ ಸಚಿವ ಪ್ರಭು ಬಿ. ಚಾವ್ಹಾಣ್ ಹೇಳಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪಶು ಸಂಗೋಪನೆ, ಹಜ್ ಮತ್ತು ವಕ್ಫ್ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ನೂತನ ಕಾಯ್ದೆಯ ವ್ಯಾಪ್ತಿಯಲ್ಲಿ ಹಸು , ಕರು, ಎತ್ತು , ಹೋರಿಗಳನ್ನು ಸೇರಿಸಲಾಗಿದ್ದು, 13 ವರ್ಷದೊಳಗಿನ ಎಮ್ಮೆ ಮತ್ತು ಕೋಣಗಳು ಒಳಗೊಂಡಿದ್ದು, ಕಾಯ್ದೆಯನ್ನು ಮೊದಲ ಬಾರಿ ಉಲ್ಲಂಘಿಸಿದವರಿಗೆ 3 ರಿಂದ 6 ವರ್ಷ ಮತ್ತು 500000 ದಿಂದ 5 ಲಕ್ಷದವರಗೆ ದಂಡ ಮತ್ತು ಎರಡನೇ ಬಾರಿ ಉಲ್ಲಂಘಿಸುವವರಿಗೆ 10 ಲಕ್ಷದವರೆಗೆ ದಂಡ ಹೆಚ್ಚಿಸಲಾಗಿದ್ದು, ಜಾನುವಾರುಗಳು ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಮತ್ಸ್ಯ ಸಂಪತ್ತನ್ನು ಬಳಸಿಕೊಳ್ಳುವ ಮೂಲಕ ಮೀನುಗಾರಿಕೆಗೆ ಸಹಕಾರಿಯಾಗುವ ಉದ್ಯಮ ಈ ಭಾಗಕ್ಕೆ ಅಗತ್ಯವಾಗಿದೆ. ಬಲಿತ ಮೀನುಗಳನ್ನು ಬಳಸಿಕೊಂಡು, ಮೀನುಗಾರಿಕೆಗೆ ಆಶ್ರಯವಾಗುವ ಈ ಉದ್ಯಮ ಯಶಸ್ವಿಯಾಗಿ ಬೆಳೆಯಲಿ. ಗೋವಿಂದ ಬಾಬು ಪೂಜಾರಿಯವರಲ್ಲಿನ ಪರಿಶ್ರಮ, ಶೃದ್ದೆಯು ಅವರನ್ನು ಯಶಸ್ಸಿನೆಡೆಗೆ ಕೊಂಡೊಯ್ಯಲಿದೆ ಎಂದು ಮುಜರಾಯಿ, ಮೀನುಗಾರಿಕೆ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಬೈಂದೂರು ತಾಲೂಕು ಗೋಳಿಹೊಳೆ ಗ್ರಾಮದ ಎಲ್ಲೂರಿನಲ್ಲಿ ಮತ್ಸ್ಯ ಬಂಧನ ಪ್ರೈವೆಟ್ ಲಿಮಿಟೆಡ್ ವತಿಯಿಂದ ನಿರ್ಮಾಣವಾಗುವ ಮೀನಿನ ಮೌಲ್ಯವರ್ಧಿತ ಖಾದ್ಯಗಳ ಉತ್ಪಾದನಾ ಘಟಕಕ್ಕೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿ ಮತ್ಸ್ಯಬಂಧನ ಮೀನಿನ ಮೌಲ್ಯವರ್ಧಿತ ಖಾದ್ಯಗಳನ್ನು ರಾಜ್ಯದ ಮುಖ್ಯಮಂತ್ರಿಗಳು ಜೂನ್‌ನಲ್ಲಿಯೇ ಬಿಡುಗಡೆಗೊಳಿಸಿದ್ದಾರೆ. ಮೀನಿನ ಖಾದ್ಯಗಳ ಮಾರುಕಟ್ಟೆ ವ್ಯವಸ್ಥೆಗೆ ರೈಲ್ವೆ ನಿಲ್ದಾಣಗಳಲ್ಲಿ ಅಳವಡಿಸಿಕೊಂಡರೆ ಲಕ್ಷಾಂತರ ಜನರಿಗೆ ಉದ್ಯೋಗ ಸೃಷ್ಟಿಯಾಗುತ್ತದೆ. ಈ ಬಗ್ಗೆ ಪ್ರಯತ್ನ ನಡೆಯುತ್ತಿದೆ ಎಂದರು. ಇವತ್ತು ರಾಜ್ಯದ ಮೂರು ಜಿಲ್ಲೆಗಳಲ್ಲಿ ಕಡಲ ಮೀನುಗಾರಿಕೆ ನಡೆಯುತ್ತದೆ. 27 ಜಿಲ್ಲೆಗಳಲ್ಲಿ ಒಳನಾಡು ಮೀನುಗಾರಿಕೆ ನಡೆಯುತ್ತದೆ.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘವು ತನ್ನ ರೈತಮಿತ್ರ ಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ ಅದರ 3686 ಸದಸ್ಯರಿಗೆ ರೂ 34.24 ಕೋಟಿ ಸಾಲ ನೀಡಿದೆ. ಅವರಲ್ಲಿ 410 ಸದಸ್ಯರಿಂದ ಬಾಕಿಯಾಗಿರುವ ರೂ. 4.85 ಕೋಟಿ ಸಾಲಕ್ಕೆ ಶೇ.2 ಬಡ್ಡಿ ರಿಯಾಯಿತಿ ನೀಡಲು ಹಾಗೂ ದಂಡನೆ ಬಡ್ಡಿ ಮನ್ನಾ ಮಾಡಲು ನಿರ್ಧರಿಸಿದೆ ಎಂದು ಸಂಘದ ಅಧ್ಯಕ್ಷ ಎಸ್. ರಾಜು ಪೂಜಾರಿ ಹೇಳಿದರು. ಸಂಘದ ನಾವುಂದ ಪ್ರಧಾನ ಕಚೇರಿಯಲ್ಲಿ ಮಂಗಳವಾರ ನಡೆಸಿದ ಸುದ್ದಿಗೋಷ್ಠಿಯಲ್ಲಿ ಇದನ್ನು ಪ್ರಕಟಿಸಿದರು. ಮಾರ್ಚ್ 31ಕ್ಕೆ ಮುನ್ನ ಸಾಲ ಮರುಪಾವತಿ ಮಾಡುವವರಿಗೆ ಇದು ಅನ್ವಯವಾಗಲಿದೆ. ಇದರ ಮೊತ್ತ ರೂ. 65 ಲಕ್ಷ ಆಗಲಿದೆ. ಸಂಘವು ಸದಸ್ಯರಿಗೆ ರೂ. 2 ಲಕ್ಷ ವರೆಗಿನ ಬಡ್ಡಿ ರಹಿತ ಬೆಳೆಸಾಲ ನೀಡುತ್ತಿದೆ. ವ್ಯಾಪ್ತಿಯಲ್ಲಿ ಕೃಷಿಭೂಮಿ ಪಹಣಿ ಹೊಂದಿರುವ ಎಲ್ಲ ಸದಸ್ಯರು ಹಾಗೂ ವ್ಯವಸಾಯಗಾರರು ಇದರ ಲಾಭ ಪಡೆಯಬೇಕು ಎಂಬ ದೃಷ್ಟಿಯಿಂದ ಅಭಿಯಾನದ ಮೂಲಕ ಮಾಹಿತಿ ನೀಡಲಾಗುತ್ತಿದೆ ಎಂದು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಲೋಕಸಭೆಯಲ್ಲಿ ಎರಡೇ ಎರಡು ಸಂಸದರು ಮತ್ತು ವಿಧಾನ ಸಭೆಯಲ್ಲಿ ಇಬ್ಬರು ಶಾಸಕ ಹೊಂದಿದ್ದ ಬಿಜೆಪಿ ಇಂದು ಲೋಕಸಭೆ ಹಾಗೂ ರಾಜ್ಯದಲ್ಲಿ ಅಧಿಕಾರ ಹಿಡಿದಿದೆ. ಪ್ರಸಕ್ತ ಗ್ರಾಮ ಪಂಚಾಯಿತಿ ಚುನಾವಣೆಯಲ್ಲೂ ಅತೀ ಹೆಚ್ಚು ಗ್ರಾಮಗಳು ಬಿಜೆಪಿ ಬೆಂಬಲಿತರು ಆರಿಸಿ ಬರುವ ಮೂಲಕ ಗ್ರಾಮಗಳಲ್ಲೂ ಬಿಜೆಪಿ ಆಳ್ವಿಕೆ ಶಖೆ ಆರಂಭವಾಗಿದ್ದು ಬಿಜೆಪಿ ಹೆಮ್ಮರವಾಗಿ ಬೆಳೆಯುತ್ತಿದೆ ಎಂದು ಶಿವಮೊಗ್ಗ ಲೋಕಸಭಾ ಸದಸ್ಯ ಬಿ. ವೈ. ರಾಘವೇಂದ್ರ ಹೇಳಿದರು. ಅವರು ಮಂಗಳವಾರ ಹೆಮ್ಮಾಡಿ ಜಯಶ್ರೀ ಸಭಾಂಗಣದಲ್ಲಿ ನಡೆದ ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯಿತಿ ಸದಸ್ಯರ ಅಭಿನಂದನಾ ಸಮಾವೇಶ ಉದ್ಘಾಟಸಿ ಮಾತನಾಡಿ ಗ್ರಾಮ ಪಂಚಾಯಿತಿಗೆ ಆಯ್ಕೆಯಾದ ಸದಸ್ಯರ ಜವಾಬ್ದಾರಿ ಹೆಚ್ಚಿದ್ದು, ಗ್ರಾಮದ ಸಮಸ್ಯೆ ಅರಿತು ಗ್ರಾಮಕ್ಕೆ ಬರುವ ಅನುದಾನ ಸಮರ್ಥವಾಗಿ ಬಳಸಿಕೊಂಡು ಕೆಲಸ ಮಾಡಿ ಬಿಜೆಪಿ ಮತ್ತಷ್ಟು ಬಲ ಪಡಿಸುವಂತೆ ಕರೆಕೊಟ್ಟರು. ರಾಜ್ಯದಲ್ಲಿ 76,183 ಸಾವಿರ ಗ್ರಾಮ ಪಂಚಾಯಿತಿ ಸದಸ್ಯರ ಪೈಕಿ 42,163 ಸಾವಿರ ಬಿಜೆಪಿ ಬೆಂಬಲಿತರು ಆಯ್ಕೆ ಆಗಿದ್ದಾರೆ. ಉಡುಪಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸಿಎಂ ಸ್ನೇಹಿತ ಬೀಜಾಡಿ ರಾಘವೇಂದ್ರ ರಾವ್ ಹಾಸನ ಅವರು ಲೋಕಕಲ್ಯಾಣಾರ್ಥ ಕೈಗೊಂಡ 1008 ಕಾಯಿ ಗಣಹೋಮದಲ್ಲಿ ಪಾಲ್ಗೊಳ್ಳಲು ಸಿಎಂ ಬಿ.ಎಸ್. ಯಡಿಯೂರಪ್ಪ ಕುಟುಂಬಿಕರ ಜೊತೆ ದೇವಸ್ಥಾನಕ್ಕೆ ಆಗಮಿಸಿದರು. ಮುಖ್ಯಮಂತ್ರಿಯಾಗಿ ಆನೆಗುಡ್ಡೆಗೆ ಮೊದಲ ಭೇಟಿಯಾಗಿದ್ದು, ಇದೂವರೆಗೆ ಮೂರನೇ ಬಾರಿ ಅವರು ಕ್ಷೇತ್ರಕ್ಕೆ ಬರುತ್ತಿದ್ದಾರೆ. ವೇ.ಮೂ.ಸೀತಾರಾಮ ಐತಾಳ್, ವೇ.ಮೂ.ಸುಬ್ರಹ್ಮಣ್ಯ ಉಪಾಧ್ಯಾಯ, ಪ್ರಾಣೇಶ್ ತಂತ್ರಿ, ಅಸೋಡು ಶ್ರೀಧರ ಉಪಾಧ್ಯಾಯ, ರಾಘವೇಂದ್ರ ಉಪಾಧ್ಯಾಯ, ಶ್ರೀನಿವಾಸ ಉಪಾಧ್ಯಾಯ ನೇತೃತ್ವದಲ್ಲಿ 28 ಜನ ವೈದರು 1008 ಕಾಯಿ ಗಣಹೋಮ ನೆರೆವೇರಿಸಿದರು. ದೇವಸ್ಥಾನಕ್ಕೆ ಆಗಮಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ದೇವಸ್ಥಾನದ ಹಿಂದಿನ ಮೊಕ್ತೇಸರ ಸೂರ್ಯನಾರಾಯಣ ಉಪಾಧ್ಯಾಯ ಮತ್ತು ಈಗಿನ ಮೊಕ್ತೇಸರ ಶ್ರೀರಮಣ ಉಪಾಧ್ಯಾಯ ಬರಮಾಡಿಕೊಂಡು ಮುಖ್ಯಮಂತ್ರಿ ಯಡಿಯೂರಪ್ಪ ಅವರ ದೇವಸ್ಥಾನ ವತಿಯಿಂದ ಗೌರವಿಸಿದರು. ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಮುಖ್ಯಮಂತ್ರಿ ಗಣಹೋಮದಲ್ಲಿ ಪಾಲ್ಗೊಂಡು, ಪ್ರಸಾದ ಭೋಜನ ಸ್ವೀಕರಿಸಿ, ಕೋಟೇಶ್ವರ ಯುವ ಮೆರಿಡಿಯನ್ ಹೆಲಿಪ್ಯಾಡ್ ಮೂಲಕ ಬೆಂಗಳೂರಿಗೆ ನಿರ್ಗಮಿಸಿದರು. ಮುಖ್ಯಮಂತ್ರಿ ಭೇಟಿ ಹಿನ್ನೆಲೆಯಲ್ಲಿ…

Read More