Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಅಂಗ ಸಂಸ್ಥೆಯಾದ ಡಾ. ಬಿ. ಬಿ. ಹೆಗ್ಡೆ ಕಾಲೇಜಿನಲ್ಲಿ ದಶಮ ಸಂಭ್ರಮದ ನೆನಪಿಗಾಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಪ್ರತಿ ತರಗತಿಗೆ ’ಲೆಕ್ಚರ್ ಪೋಡಿಯಂ’ನ್ನು ಕೊಡುಗೆಯಾಗಿ ನೀಡಿದರು. ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಆಯೋಜಿಸಿದ ಕಾರ್ಯಕ್ರಮದಲ್ಲಿ ತರಗತಿವಾರು ವಿದ್ಯಾರ್ಥಿ ಪ್ರತಿನಿಧಿಗಳು ಸಾಂಕೇತಿಕವಾಗಿ ಕಾಲೇಜಿನ ಪ್ರಾಂಶುಪಾಲ ಪ್ರೊ. ಉಮೇಶ್ ಶೆಟ್ಟಿ ಕೊತ್ತಾಡಿ, ಉಪ ಪ್ರಾಂಶುಪಾಲ ಚೇತನ್ ಶೆಟ್ಟಿ ಕೋವಾಡಿ ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಪ್ರವೀಣ್ ಮೊಗವೀರ ಗಂಗೊಳ್ಳಿ ಇವರಿಗೆ ಹಸ್ತಾಂತರಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇತ್ತೀಚೆಗೆ ಇಲ್ಲಿನ ಭಂಡಾರ್ಕಾರ‍್ಸ್ ಕಾಲೇಜಿನಲ್ಲಿ ಮಹಿಳಾ ವೇದಿಕೆ ಮತ್ತು ಯುತ್‌ರೆಡ್ ಕ್ರಾಸ್ ಘಟಕದ ಸಹಯೋಗದಲ್ಲಿ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮಕ್ಕೆ ಮುಖ್ಯಅತಿಥಿಯಾಗಿ ಭಾಗವಹಿಸಿಸದ್ದ ಕುಂದಾಪುರದ ಮನಿಷ್ ಆಸ್ಪತ್ರೆಯ ವೈದ್ಯರಾದ ಡಾ. ಪ್ರಮೀಳಾ ನಾಯಕ್ ಮಾತನಾಡಿ ಜಾಗತಿಕ ವ್ಯವಸ್ಥೆಯಲ್ಲಿ ಪರಿಸರ ಮಾಲಿನ್ಯ, ಪ್ಲಾಸ್ಟಿಕ್ ನಿರ್ಮೂಲನೆ ಮತ್ತು ಮಾದಕ ದ್ರವ್ಯಗಳ ದುಷ್ಪರಿಣಾಮ ಮತ್ತು ಮಹಿಳಾ ಆರೋಗ್ಯದ ಕುರಿತು ವಿಶೇಷ ಮಾಹಿತಿ ನೀಡಿದರು. ನಮ್ಮ ನಮ್ಮಲ್ಲಿ ಜಾಗೃತಿ ಮೂಡಬೇಕು. ಪ್ರಸ್ತುತದ ಜಗತ್ತಿನಲ್ಲಿ ಪರಿಸರ ಮಾಲಿನ್ಯದಿಂದಾಗಿ ಶುದ್ಧ ಆಹಾರ ವಾಯು ಮತ್ತು ನೀರು ಸಿಗುವುದು ದುಸ್ತರವಾಗಿದೆ. ಇಂತಹ ವಿಷಮ ಸ್ಥಿತಿಯಲ್ಲಿ ನಾವಿರುವಾಗ ನಾವು ಪರಿಸರ ಉಳಿಸಿಕೊಳ್ಳುವತ್ತ ಗಮನಹರಿಸಬೇಕಾಗಿದೆ. ಅದಕ್ಕಾಗಿ ಹಲವು ಮಾರ್ಗೋಪಾಯಗಳನ್ನು ಕಂಡುಕೊಳ್ಳುವ ಅನಿವಾರ್ಯತೆ ಇದೆ ಎಂದು ತಿಳಿಸಿದರಲ್ಲದೇ ಮಹಿಳೆಯರು ತಮ್ಮ ಆರೋಗ್ಯವನ್ನು ಕಾಯ್ದುಕೊಳ್ಳುವುದು ಮತ್ತು ಕೆಲವು ಸರಳ ಮಾರ್ಗಗಳನ್ನು ಅವರು ತಿಳಿಸಿದರು. ಈ ಸಂದರ್ಭದಲ್ಲಿ ಮಹಿಳಾ ವೇದಿಕೆಯ ಸಂಚಾಲಕರಾದ ಡಾ. ಯಶವಂತಿ ಕೆ. ಮತ್ತು ಸದಸ್ಯರು ಮತ್ತುಯುತ್ ರೆಡ್‌ಕ್ರಾಸ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರ ನಂಟು ಹೊಂದಿದ್ದು, ಜೀವನದಲ್ಲಿ ವಿವಿಧ ಕ್ಷೇತ್ರಗಳಲ್ಲಿ ವಿಶೇಷ ಸಾಧನೆ ಮಾಡಿದವರಿಗೆ ಕುಂದಪ್ರಭ ಪ್ರತಿಷ್ಠಾನ ಪ್ರತಿವರ್ಷ ನೀಡುತ್ತಿರುವ ಕೋ.ಮ.ಕಾರಂತ ಪ್ರಶಸ್ತಿಗೆ “ಫಾದರ್ ಆಫ್ ಕಾಂಕ್ರಿಟ್” ಎಂದೇ ಬಿರುದಾಂಕಿತರಾದ ಪ್ರೊ.ಎಂ.ಎಸ್.ಶೆಟ್ಟಿ ಕೋಟೇಶ್ವರ ಆಯ್ಕೆಯಾಗಿದ್ದಾರೆ. ಹಿರಿಯ ಪತ್ರಕರ್ತ ದಿ.ಕೆ.ಎಂ. ಕಾರಂತರ ಸ್ಮರಣಾರ್ಥ ಈ ಪ್ರಶಸ್ತಿ ನೀಡಲಾಗುತ್ತದೆ. ವಕ್ವಾಡಿ, ಕೋಟೇಶ್ವರದಲ್ಲಿ ಪ್ರಾಥಮಿಕ ಶಿಕ್ಷಣ, ಕುಂದಾಪುರ ಬೋರ್ಡ್ ಹೈಸ್ಕೂಲ್‌ನಲ್ಲಿ ಪ್ರೌಢಶಿಕ್ಷಣ ಪಡೆದು ನಂತರ ಉನ್ನತ ಶಿಕ್ಷಣಕ್ಕೆ ತೆರಳಿದ ಎಂ.ಸುಬ್ಬಣ್ಣ ಶೆಟ್ಟಿಯವರು ಇಂಜಿಯರ್ ಆಗಿ ಕಾಲೇಜ್ ಆಫ್ ಮಿಲಿಟರಿ ಇಂಜಿನಿಯರಿಂಗ್ ಸೇರಿದ ಮೇಲೆ ಸಾಧಿಸಿರುವುದು ಅಪಾರ. ಎರಡು ಲಕ್ಷಕ್ಕೂ ಹೆಚ್ಚು ಆರ್ಮಿ ಇಂಜಿನಿಯರ್‌ರನ್ನು ತರಬೇತುಗೊಳಿಸಿದ ಖ್ಯಾತಿ ಪಡೆದಿರುವ ಇವರು ಉನ್ನತ ಶಿಕ್ಷಣ ಪಡೆಯುವ ಇಂಜಿನಿಯರ್‌ಗೂ ಮಾರ್ಗದರ್ಶನ ನೀಡಿದವರು. ಇವರು ಬರೆದ “ಕಾಂಕ್ರಿಟ್ ಟೆಕ್ನಾಲಜಿ” ಪುಸ್ತಕ 50 ಬಾರಿ ಮರುಮುದ್ರಣಗೊಂಡು ವಿಶ್ವಾದ್ಯಂತ ಮಾರ್ಗದರ್ಶಕ ಪಠ್ಯವಾಗಿ ಪರಿಗಣಿಸಲ್ಪಟ್ಟಿದೆ. ದೇಶದಲ್ಲಿ ಹತ್ತು ಹಲವು ನಿರ್ಮಾಣ ಕಾರ್ಯಗಳಿಗೆ ಮಾರ್ಗದರ್ಶಕ, ಸಲಹೆಗಾರರಾಗಿ ಸೇವೆ ಸಲ್ಲಿಸಿದ ಇವರಿಗೆ “ಲೈಫ್ ಟೈಮ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಕರ್ನಾಟಕದ ಪಂಚಾಯತ್‌ರಾಜ್ ವ್ಯವಸ್ಥೆ ಸದೃಢವಾಗಿ ಬೆಳೆದು ಇಡೀ ದೇಶಕ್ಕೆ ಮಾದರಿಯಾಗಿದೆ. ಇದನ್ನು ಇನ್ನಷ್ಟು ಬಲಪಡಿಸಲು ನಿಟ್ಟಿನಲ್ಲಿ ರಾಜ್ಯ ಸರಕಾರ ಎಲ್ಲ ರೀತಿಯ ಬೆಂಬಲ ನೀಡಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಅವರು ಶನಿವಾರ ಕೋಟತಟ್ಟ ಗ್ರಾಮ ಪಂಚಾಯತ್ ಹಾಗೂ ಡಾ. ಶಿವರಾಮ ಕಾರಂತರ ಪ್ರತಿಷ್ಠಾನದ ವತಿಯಿಂದ ಶನಿವಾರ ಕೋಟ ವಿವೇಕ ಕಾಲೇಜಿನ ಕ್ರೀಡಾಂಗಣದಲ್ಲಿ ಅವಿಭಜಿತ ದ.ಕ. ಜಿಲ್ಲೆಗಳ ಪಂಚಾಯತ್‌ರಾಜ್ ಮತ್ತು ನಗರ ಸ್ಥಳೀಯಾಡಳಿತ ಜನಪ್ರತಿನಿಧಿಗಳ ಕ್ರೀಡೋತ್ಸವ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಹೊಳಪು-2019’ ಉದ್ಘಾಟಿಸಿ ಮಾತನಾಡುತಿದ್ದರು. ಅಧಿಕಾರ ವಿಕೇಂದ್ರೀಕರಣದ ಆಶಯ ಬಹಳ ದೊಡ್ಡದು. ಗ್ರಾಮಸಭೆಗಳ ಮಟ್ಟದಿಂದಲೇ ಆಯಾ ಪ್ರದೇಶಗಳಿಗೆ ಅಗತ್ಯವಾದ ಯೋಜನೆಗಳು ರೂಪುಗೊಳ್ಳಬೇಕು. ಸ್ಥಳೀಯ ಸಂಸ್ಥೆಗಳಿಗೆ ಆರ್ಥಿಕ ಮತ್ತು ಕಾರ್ಯನಿರ್ವಹಣಾ ಸ್ವಾತಂತ್ರ್ಯ ಇರಬೇಕು. ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರು, ತ್ಯಾಜ್ಯ ವಿಲೇವಾರಿ, ರಸ್ತೆಗಳು ಸೇರಿದಂತೆ ಮೂಲ ಸೌಕರ್ಯಗಳನ್ನು ಒದಗಿಸಲು ರಾಜ್ಯ ಸರಕಾರ ಬದ್ಧವಾಗಿದೆ ಎಂದು ಅವರು ತಿಳಿಸಿದರು. ಪಂಚಾಯತ್‌ರಾಜ್ ವ್ಯವಸ್ಥೆ ಅಧಿಕಾರ ವಿಕೇಂದ್ರೀಕರಣ ಆಗಿದೆಯೇ ಅಥವಾ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮೀನುಗಾರರ ಸಾಲ ಮನ್ನಾದ ಬಗ್ಗೆ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದ್ದು, ಕೆಲವೇ ದಿನಗಳಲ್ಲಿ ಉಡುಪಿ ಜಿಲ್ಲೆಯ 20,197 ಮೀನುಗಾರರ 55 ಕೋಟಿ ರೂ ಸಾಲ ಸಂಪೂರ್ಣ ಮನ್ನಾ ಆಗಲಿದ್ದು, ಈ ಬಗ್ಗೆ ಯಾವುದೇ ಗೊಂದಲ ಬೇಡ ಎಂದು ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದಾರೆ. ಅವರು ಶನಿವಾರ ವಂಡ್ಸೆ ಪ್ರೌಢಶಾಲಾ ವಠಾರದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ 387 ಕೋಟಿ ಮೊತ್ತದ ವಿವಿಧ ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿ ವೀನುಗಾರರ ಸಾಲಮನ್ನ ವಿಳಂಬವಾಗಿರುವ ಬಗ್ಗೆ ಪ್ರತಿಕ್ರಿಯಿಸಿದರು. ರಾಜ್ಯದಲ್ಲಿ ಮಹಿಳಾ ಸಬಲೀಕರಣದ ಉದ್ಧೇಶದಿಂದ, ಸ್ತ್ರೀಶಕ್ತಿ ಸಂಘಗಳನ್ನು ಬಲಗೊಳಿಸಲು ಈ ಬಾರಿಯ ಬಜೆಟ್ ನಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಘೋಷಣೆ ಮಾಡಲಾಗುವುದು ಎಂದು ಬೈಂದೂರು ವಿಧಾನಸಭಾ ಕ್ಷೇತ್ರವನ್ನು ಮಾದರಿ ಕ್ಷೆತ್ರವನ್ನಾಗಿ ಅಭಿವೃದ್ದಿಪಡಿಸುವ ಉದ್ದೇಶದಿಂದ ನಡೆಯುತ್ತಿರುವ 387 ಕೋಟ ರೂ ಮೊತ್ತದ ಕಾಮಗಾರಿಗಳನ್ನು ಉತ್ತಮ ಗುಣಮಟ್ಟದಿಂದ ಕೂಡಿರುವಂತೆ ಅನುಷ್ಠಾನಗೊಳಿಸುವಂತೆ ಸೂಚಿಸಿದ ಮುಖ್ಯಮಂತ್ರಿಗಳು, ತಮ್ಮ ಸರ್ಕಾರದ ಅವಧಿಯಲ್ಲಿ ಕಳಪೆ ಕಾಮಗಾರಿಗಳನ್ನು ನಿರ್ಮಿಸಲು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸರ್ವರ ಸಹಕಾರವಿದ್ದಾಗ ಮಾತ್ರ ಸರಕಾರಿ ಶಾಲೆ ಪ್ರಗತಿ ಸಾಧಿಸಲು ಸಾಧ್ಯ. ಮೂಲಭೂತ ಸೌಕರ್ಯ, ನುರಿತ ಅಧ್ಯಾಪಕ ವರ್ಗ, ಎಸ್‌ಡಿಎಂಸಿ, ಹಳೆ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ಪರಸ್ಪರ ಹೊಂದಾಣಿಕೆಯಿಂದ ಮುಂದುವರಿದರೆ ಶಾಲೆಯನ್ನು ಮಾದರಿಯನ್ನಾಗಿ ರೂಪಿಸುವುದು ಕಷ್ಟಸಾಧ್ಯವಲ್ಲ ಎಂದು ಬೈಂದೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಟಿ. ನಾರಾಯಣ ಹೆಗ್ಡೆ ಹೇಳಿದರು. ಅವರು ಶುಕ್ರವಾರ ಜರುಗಿದ ತಗ್ಗರ್ಸೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿ ಮಕ್ಕಳಲ್ಲಿ ಅಡಗಿರುವ ಪ್ರತಿಭೆ ಅನಾವರಣಕ್ಕೆ ವಾರ್ಷಿಕೋತ್ಸವ ಉತ್ತಮ ವೇದಿಕೆ. ಶಾಲಾ ವಾರ್ಷಿಕೋತ್ಸವ ಎಂದರೆ ಊರಿನವರಿಗೊಂದು ಹಬ್ಬದ ವಾತಾವರಣ ಎಂದರು. ಉಡುಪಿ ಜಿಲ್ಲಾ ಪಂಚಾಯತ್ ಸದಸ್ಯ ಬಾಬು ಶೆಟ್ಟಿ ತಗ್ಗರ್ಸೆ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಪಂಚಾಯತ್ ಸದಸ್ಯೆ ಮಾಲಿನಿ ಕೆ., ಬೈಂದೂರು ಗ್ರಾಮ ಪಂಚಾಯತ್ ಸದಸ್ಯೆ ಭಾಗೀರಥಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಬೈಂದೂರು ವಲಯ ಅಧ್ಯಕ್ಷ ವಿಶ್ವನಾಥ ಪೂಜಾರಿ, ಬೈಂದೂರು ರೈತ ಸಂಘದ ಅಧ್ಯಕ್ಷ ದೀಪಕ್‌ಕುಮಾರ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ವಿದ್ಯುನ್ಮಾನ ಜಗತ್ತು ಕೊಡಮಾಡುತ್ತಿರುವ ತಾಂತ್ರಿಕ ಸೌಲಭ್ಯಗಳನ್ನು ಬದುಕಿನೊಳಗಿನ ಆಯ್ಕೆಯನ್ನಾಗಿಸಿಕೊಳ್ಳದೆ, ಬದುಕಿನ ಅನಿವಾರ್ಯತೆಯನ್ನಾಗಿಸಿಕೊಂಡಿರುವ ಮನುಕುಲ ತನ್ನೊಳಗಿನ ತಂತ್ರಜ್ಞಾನಕ್ಕೂ ಮೀರಿದ ಅಧಿಕ ಜ್ಞಾನದ ಕುರಿತು ಅರಿವನ್ನು ಹೊಂದಿಲ್ಲದಿರುವುದು ದುರಂತ. ತಂತ್ರಜ್ಞಾನದ ದಾಸರಾಗದೆ, ಅಂತರ್ಗತ ಜ್ಞಾನದಿಂದ ತಂತ್ರಜ್ಞಾನವನ್ನು ಅಭಿವೃದ್ಧಿ ಪಡಿಸುವಂತಾಗಬೇಕು ಎಂದು ಬೈಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ| ರಘು ನಾಯ್ಕ್ ಹೇಳಿದರು. ಅವರು  ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರದ ಶೈಕ್ಷಣಿಕ ಕಾರ್ಯಕ್ರಮದಲ್ಲಿ ’ಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ’ ಎಂಬ ವಿಷಯದ ಕುರಿತು ಉಪನ್ಯಾಸ ನೀಡಿ ಮಾತನಾಡಿದರು. ಎಡೇರಿ ವಿಜಯ ಬ್ಯಾಂಕ್‌ನ ನಿವೃತ್ತ ಅಧಿಕಾರಿ ಮಂಜಯ್ಯ ಶೆಟ್ಟಿ ಬೆಳ್ಳಾಡಿ ಅಧ್ಯಕ್ಷತೆ ವಹಿಸಿದ್ದರು. ಕಾಲ್ತೋಡು ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಧ್ಯಕ್ಷ ನಾಗಯ್ಯ ಶೆಟ್ಟಿ, ವಲಯ ಅಂಚೆ ಅಧಿಕಾರಿ ಜನಾರ್ಧನ್ ನಾಯಕ್, ಕೆಳಮನೆ ರಾಘವೇಂದ್ರ ಪೂಜಾರಿ, ಕಾಲ್ತೋಡು ಪ್ರವೀಣ್ ಪೂಜಾರಿ, ವಾಣಿಜ್ಯ ಉಪನ್ಯಾಸಕಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ರತ್ತೂಬಾಯಿ ಜನತಾ ಪ್ರೌಢಶಾಲೆ 1970ರಲ್ಲಿ ಜನತಾ ಗರ್ಲ್ಸ್ ಹೈಸ್ಕೂಲ್ ಎಂಬ ಹೆಸರಿನೊಂದಿಗೆ ಆರಂಭಗೊಂಡು ಇಂದು ಜನತಾ ಪ್ರೌಢಶಾಲೆಯಾಗಿ ಮುನ್ನಡೆಯುತ್ತಿದ್ದು, ಜನವರಿ 3 ಹಾಗೂ 4ರಂದು ಸುವರ್ಣ ಸಂಭ್ರಮವನ್ನು ಆಚರಿಸಲಾಗುತ್ತಿದೆ ಎಂದು ಶ್ರೀ ವಿ.ವಿ.ವಿ ಮಂಡಳಿ ರಿ. ಹೆಮ್ಮಾಡಿ ಇದರ ಅಧ್ಯಕ್ಷ, ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದರು. ಅವರು ಬೈಂದೂರಿನ ರತ್ತೂಬಾಯಿ ಜನತಾ ಪ್ರೌಢಶಾಲೆಯ ಸುವರ್ಣ ಸಂಭ್ರಮ – 2020 ಪೂರ್ವಭಾವಿಯಾಗಿ ಹಮ್ಮಕೊಂಡ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ ಜನವರಿ 3ರಂದು ಗೌರಿಗದ್ದೆ ದತ್ತಾಶ್ರಮದ ಶ್ರೀ ವಿನಯ ಗುರೂಜಿ ಅವರು ಸುವರ್ಣ ಸಂಭ್ರಮವನ್ನು ಉದ್ಘಾಟಿಸಿ ಆಶೀರ್ವಚನ ನೀಡಲಿದ್ದು, ಸಮಾರೋಪ ಕಾರ್ಯಕ್ರಮದಲ್ಲಿ ಪದ್ಮವಿಭೂಷಣ ಡಾ. ಬಿ. ಎಂ. ಹೆಗ್ಡೆ ಅವರು ಭಾಗವಹಿಸಲಿದ್ದಾರೆ. ಎರಡೂ ದಿನವೂ ವಿವಿಧ ಅತಿಥಿ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಹಳೆ ವಿದ್ಯಾರ್ಥಿಗಳೊಂದಿಗೆ ಸ್ನೇಹ ಸಮ್ಮಿಲನ, ಶಿಕ್ಷಕರೊಂದಿಗೆ ಸಂವಾದ, ಶೈಕ್ಷಣಿಕ ವಿಚಾರಗೋಷ್ಠಿ, ಶೈಕ್ಷಣಿಕ ವಸ್ತು ಪ್ರದರ್ಶನ, ಸಾಂಸ್ಕೃತಿಕ ಕಾರ್ಯಕ್ರಮಗಳು ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ, ಕುಂದಾಪುರ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಸೌಡದಲ್ಲಿ ಶಾಲಾ ವಾರ್ಷಿಕೋತ್ಸವ ಬಿದಿಗೆ ಸಂಭ್ರಮದ ಉದ್ಘಾಟನೆಯನ್ನು ಜಿಲ್ಲಾ ಪಂಚಾಯತ್ ಸದಸ್ಯರಾದ ಸುಪ್ರೀತಾ ಉದಯ್ ಕುಲಾಲ್ ಇವರು ನೆರವೇರಸಿದರು. ಕಾರ್ಯಕ್ರಮದ ಅದ್ಯಕ್ಷತೆಯನ್ನು ತಾಲೂಕು ಪಂಚಾಯತ್‌ ಸದಸ್ಯರಾದ ಸವಿತಾ ಮೊಗವೀರ ಇವರು ವಹಿಸಿ ಶಾಲೆಯ ಬೇಡಿಕೆಗಳಿಗೆ ಕೂಡಲೆ ಸ್ಪಂದಿಸುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಹಾರ್ದಳ್ಳಿ ಮಂಡಳ್ಳಿ ಗ್ರಾಮ ಪಂಚಾಯತ್‌ ಉಪಾಧ್ಯಕ್ಷರಾದ ಶ್ರೀಮತಿ ಪವಿತ್ರ ಆರ್‌ ಅಡಿಗ ಇವರು ಮಖ್ಯ ಅತಿಥಿಯಾಗಿ ಶಾಲೆಯನ್ನು ಉತ್ತಮವಾಗಿ ಪ್ರಗತಿ ಪಥದತ್ತ ಸಾಗಲು ಅಧ್ಯಾಪಕರ ಜೊತೆ ವಿಧ್ಯಾಭಿಮಾನಿಗಳ ಸಹಕಾರ ಅತ್ಯಗತ್ಯ ಎಂಬುದಕ್ಕೆ ಈ ಕಾರ್ಯಕ್ರಮ ಸಾಕ್ಷಿಯಾಗಿದೆ ಎಂದು ಹೇಳಿದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಕುಂದಾಪುರ ವಲಯ ಮುಖ್ಯೋಪಾದ್ಯಾಯರ ಸಂಘದ ಅಧ್ಯಕ್ಷರು ಹಾಗು ಪ್ರಭಾರ ಶಿಕ್ಷಣ ಸಂಯೋಜಕರಾಗಿರುವ ಸೂರಪ್ಪ ಹೆಗ್ಡೆ, ಕುಂದಾಪುರ ವಲಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಸದಾರಾಮ್‌ ಶೆಟ್ಟಿ, ಕೆನೆರಾ ಬ್ಯಾಂಕ್‌ ನಿವೃತ್ತ ಚೀಫ್‌ ಮ್ಯಾನೇಜರ್‌ ಚಂದ್ರಶೇಖರ ಅಡಿಗ ಹೆಗ್ದೆಜೆಡ್ಡು, ಶಾಲಾ ಎಸ್‌…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ, ಡಿ.26: ತಾಲೂಕಿನ ಕನ್ಯಾನ ಕಲ್ಕಂಬ ಎಂಬಲ್ಲಿ ಡಿ.17ರಂದು ಹಗಲು ಹೊತ್ತಿನಲ್ಲಿಯೇ ನಡೆದ ಜೋರ್ಮಕ್ಕಿ ಬಾಬು ಶೆಟ್ಟಿಯವರ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿ ಆರೋಪಿಗಳನ್ನು ಕುಂದಾಪುರ ಉಪವಿಭಾಗದ ಎಎಸ್‌ಪಿ ಹರಿರಾಂ ಶಂಕರ್ ನೇತ್ರತ್ವದ ಪೊಲೀಸರ ತಂಡ ಬಂಧಿಸಿ, ನ್ಯಾಯಾಲಯಕ್ಕೆ ಹಾಜರು ಪಡಿಸಲಾಯಿತು. ಬಾಬು ಶೆಟ್ಟಿ ಕೊಲೆ ಪ್ರಕರಣಕ್ಕೆ ವೈಯುಕ್ತಿಕ ದ್ವೇಷವೇ ಕಾರಣ. ಈ ಹಿಂದೆ ಹರೀಶ್ ಶೆಟ್ಟಿ ಹಾಗೂ ಸಂತೋಷ್ ಶೆಟ್ಟಿಗೆ ಚೂರಿ ಇರಿತದ ಪ್ರಕರಣಕ್ಕೆ ಸಂಬಂಧಿಸಿದಂತೆ ನೇರಳಕಟ್ಟೆ ನಿವಾಸಿ ತೇಜಪ್ಪ ಶೆಟ್ಟಿ ಹಾಗೂ ಬಾಬು ಶೆಟ್ಟಿ ನಡುವೆ ಗಲಾಟೆ ನಡೆದಿತ್ತು ಎನ್ನಲಾಗಿದೆ. ಇದೇ ಕಾರಣಕ್ಕೆ ಬಾಬು ಶೆಟ್ಟಿಯನ್ನು ಕೊಲ್ಲಬೇಕು ಎಂದು ತೀರ್ಮಾನಿಸಿದ ತೇಜಪ್ಪ ಶೆಟ್ಟಿ ಸಂಚು ರೂಪಿಸಿದ್ದರು. ಕೊಲೆ ನಡೆದ ದಿನ ಮಧ್ಯಾಹ್ನ ಬಾಬು ಶೆಟ್ಟಿಗೆ ಕರೆ ಮಾಡಿದ ಆರೋಪಿಗಳು ಗೊಬ್ಬರ ಸಾಗಾಟ ಮಾಡಬೇಕಿದ್ದು ಅದನ್ನು ತೋರಿಸುತ್ತೇವೆ ಕರೆಸಿ, ಬೈಕಿನಲ್ಲಿ ಬಂದ ಬಾಬು ಶೆಟ್ಟಿಯನ್ನು ಮಾರಣಾಂತಿಕವಾಗಿ ಹಲ್ಲೆ ಮಾಡಿ ಕೊಲೆಗೈದಿದ್ದರು. ಆರೋಪಿಗಳನ್ನು…

Read More