ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಜೂ.7ರ ಭಾನುವಾರದ ಹೆಲ್ತ್ ಬುಲೆಟಿನ್ ಪ್ರಕಾರ ಒಟ್ಟು 13ಹೊಸ ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿ ಸದ್ಯ ಒಟ್ಟು 901 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 274 ಮಂದಿ ಬಿಡುಗಡೆಯಾಗಿದ್ದು, 626 ಮಂದಿ ಕೊರೋನಾ ಸೋಂಕಿತರಿಗೆ ಉಡುಪಿ, ಕುಂದಾಪುರ, ಕಾರ್ಕಳದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈವರೆಗೆ ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ಇದನ್ನೂ ಓದಿ: ► ಕೋವಿಡ್-19 ಚಿಕಿತ್ಸೆಗೆ ಜಿಲ್ಲಾಡಳಿತ ಹಣ ಪಡೆಯುತ್ತಿದೆ ಎಂದು ಆರೋಪಿಸಿದ್ದವನ ಬಂಧನ – https://kundapraa.com/?p=38373 . ► ಜೂ.8 ರಿಂದ ಜಿಲ್ಲೆಯಲ್ಲಿ ದೇವಾಲಯಗಳ ಆರಂಭ. ಇವಿಷ್ಟು ನಿಯಮ ಪಾಲನೆ ಕಡ್ಡಾಯ – https://kundapraa.com/?p=38342 . ► ಉಡುಪಿ ಜಿಲ್ಲೆ: ಶನಿವಾರ 121 ಕೊರೋನಾ ಪಾಸಿಟಿವ್ ದೃಢ – https://kundapraa.com/?p=38332 . ► ಪಾಸಿಟಿವ್ ಬರುವವರಲ್ಲಿ ರೋಗದ ಲಕ್ಷಣಗಳಿಲ್ಲ: ಡಾ. ಪ್ರಶಾಂತ್ ಭಟ್ – https://kundapraa.com/?p=38333 .
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸೋಮವಾರದಿಂದ ರಾಜ್ಯಾದ್ಯಂತ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಿದ್ದು, ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿಯೂ ಸೋಮವಾರದಿಂದ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲು ಭರದ ಸಿದ್ಧತೆಗಳು ನಡೆಯುತ್ತಿದೆ. ನಾಳೆಯಿಂದ ದೇವರ ದರ್ಶನಕ್ಕೆ ಸಮಯ ನಿಗದಿಪಡಿಸಲಾಗಿದ್ದು, ಬೆಳಿಗ್ಗೆ 5 ಗಂಟೆಗೆ ಬಾಗಿಲು ತೆರೆಯಲಿದೆ. ಬೆಳಿಗ್ಗೆ 5:30ರಿಂದ 7:30ರ ತನಕ ಭಕ್ತಾದಿಗಳಿಗೆ ಮೊದಲ ಹಂತದಲ್ಲಿ ದರ್ಶನಕ್ಕೆ ವ್ಯವಸ್ಥೆ, ಮತ್ತೆ ಬೆಳಿಗ್ಗೆ 10:30ರಿಂದ 1:30 ಹಾಗೂ ಮಧ್ಯಾಹ್ನ 3 ಗಂಟೆಯಿಂದ ಸಂಜೆ 6 ಗಂಟೆಯ ತನಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸರ್ಕಾರ ಹಾಗೂ ಜಿಲ್ಲಾಡಳಿತ ಸೂಚಿಸಿರುವ ನಿಯಮಾವಳಿಗಳನ್ನು ಕಡ್ಡಾಯವಾಗಿ ಪಾಲಿಸಲು ನೌಕರರು ಹಾಗೂ ಹೊರ ಗುತ್ತಿಗೆ ಯವರಿಗೆ ತರಬೇತಿ ನೀಡಲಾಗಿದೆ. ದೇವಸ್ಥಾನ ಪ್ರವೇಶ ಮಾಡುವ ಮೊದಲು ಕೈ ಕಾಲು ತೊಳೆದು ಬಳಿಕ ಭಕ್ತರು ಸ್ಯಾನಿಟೈಸ್ ಮಾಡುವುದನ್ನು ಕಡ್ಡಾಯ ಮಾಡಲಾಗಿದೆ. ದೇವಳದ ಎದುರಿನ ಮುಖ್ಯದ್ವಾರದಿಂದ ಒಳ ಪ್ರವೇಶಿಸಿ, ಆನೆ ಬಾಗಿಲಿನ ಮೂಲಕ ಹೊರಕ್ಕೆ ತೆರಳಲು ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ದೇವಳದ ಬಲಿಪೀಠದ ಎದುರು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕೋವಿಡ್-19 ಪಾಸಿಟಿವ್ ಪ್ರಕರಣಗಳ ಚಿಕಿತ್ಸೆಗೆ ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ 3.50 ಲಕ್ಷ ರೂ. ಹಣ ಪಡೆಯುತ್ತದೆ ಎಂದು ಆರೋಪಿಸಿ ಸಾಮಾಜಿಕ ಜಾಲತಾಣದಲ್ಲಿ ಬರೆದು ಎಲ್ಲೆಡೆ ಹರಿಬಿಟ್ಟಿದ್ದ ಕಮಲಶಿಲೆ ನಿವಾಸಿ ಸುರೇಶ್ ಕುಲಾಲ್ (22) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ವಂಡ್ಸೆ ಕಂದಾಯ ನಿರೀಕ್ಷಕ ರಾಘವೇಂದ್ರ ಅವರು ನೀಡಿದ ದೂರಿನಲ್ಲಿ ಜಿಲ್ಲಾಡಳಿತದ ವಿರುದ್ಧ ಸುಳ್ಳುಸುದ್ದಿಯನ್ನು ಹರಿಬಿಟ್ಟು ಜನತೆಯನ್ನು ಮತ್ತಷ್ಟು ಆತಂಕಕ್ಕೆ ದೂಡುವ ಪ್ರಯತ್ನ ಮಾಡಲಾಗುತ್ತಿದೆ. ಸುಳ್ಳುಸುದ್ದಿ ಹರಿಬಿಟ್ಟ ಆತನನ್ನು ಬಂಧಿಸಿ ಕ್ರಮಕೈಗೊಳ್ಳುವಂತೆ ತಿಳಿಸಿದ್ದರು. ದೂರಿನನ್ವಯ ಶಂಕರನಾರಾಯಣ ಠಾಣೆಯಲ್ಲಿ ಆಪಾದಿತನ ವಿರುದ್ದ ಐಟಿ ಕಾಯಿದೆ, ಡಿಎಂ ಕಾಯಿದೆ ಹಾಗೂ ಐಪಿಸಿ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಿ ಬಂಧಿಸಿ, ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿತ್ತು. ಆರೋಪಿಗೆ ಸದ್ಯ ಬೇಲ್ ದೊರೆತಿದೆ/ಕುಂದಾಪ್ರ ಡಾಟ್ ಕಾಂ ಸುದ್ದಿ/ ಇದನ್ನೂ ಓದಿ: ► ಕೋವಿಡ್ ಪಾಸಿಟಿವ್ ಇದೆ ಎಂದು 4 ದಿನವಾದರೂ ಆಸ್ಪತ್ರೆಗೆ ಕರೆದೊಯ್ದಿಲ್ಲ. ಮರವಂತೆಯಲ್ಲಿ ಆಕ್ರೋಶ – https://kundapraa.com/?p=38361 . ► ಜೂ.8…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ‘ನಿಮಗೆ ಕೊರೋನಾ ಪಾಸಿಟಿವ್ ಬಂದಿದೆ ಆಸ್ಪತ್ರೆ ತೆರಳಲು ಸಿದ್ಧರಾಗಿರಿ’ ಎಂದು ಕರೆ ಮಾಡಿ ನಾಲ್ಕು ದಿನ ಕಳೆದರೂ ಅವರನ್ನು ಮನೆಯಿಂದ ಕರೆದೊಯ್ಯದೇ, ದಿನವೂ ಭಯದಿಂದ ಬದುಕುವಂತೆ ಮಾಡಿರುವ ಬಗ್ಗೆ ಮರವಂತೆ ಗ್ರಾಮದ ಪಾಸಿಟಿವ್ ಬಂದಿರುವವರ ಕುಟುಂಬದವರು ಆಕ್ರೋಶ ವ್ಯಕ್ತಪಡಿಸಿದ ಘಟನೆ ಮರವಂತೆ ಆಸ್ಪತ್ರೆ ಆವರಣದಲ್ಲಿ ಶನಿವಾರ ನಡೆದಿದೆ. ಪಾಸಿಟಿವ್ ಇರುವ ಬಗ್ಗೆ ಕಾಲ್ ಸೆಂಟರ್‌ನಿಂದ ಕರೆ ಬಂದಿದ್ದು, ಅದರಂತೆ ಮರವಂತೆ ಗ್ರಾಮದ ಮಹಿಳೆ ಸೇರಿದಂತೆ ಇನ್ನಿತರರು ಆಸ್ಪತ್ರೆಗೆ ತೆರಳಲು ಸಿದ್ಧರಾಗಿ ನಿಂತಿದ್ದರು. ಆದರೆ ನಾಲ್ಕು ದಿನ ಕಳೆದರೂ ಆಂಬುಲೆನ್ಸ್ ಬಾರದೇ ಇದ್ದುದರಿಂದ, ಭಯಗೊಂಡು ಮರಳಿ ಆರೋಗ್ಯ ಕಾರ್ಯಕರ್ತರನ್ನು, ವೈದ್ಯರನ್ನು ಸಂಪರ್ಕಿಸಲು ಪ್ರಯತ್ನಿಸಿದ್ದು ಯಾರಿಂದಲೂ ಸಮರ್ಪಕ ಪ್ರತಿಕ್ರಿಯೆ ದೊರೆಯದಿದ್ದುದರಿಂದ ಪಾಸಿಟಿವ್ ಬಂದ ೮ ಮಂದಿ ಸೀದಾ ಮರವಂತೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬಂದಿದಾರೆ. ಆಸ್ಪತ್ರೆಯ ಮುಂದೆ ಬಂದಿರುವ ವಿಷಯ ತಿಳಿದ ತಕ್ಷಣ ಆರೋಗ್ಯ ಕಾರ್ಯಕರ್ತರು ಅಲ್ಲಿಗೆ ಬಂದಿದ್ದು ಕೂಡಲೇ ಆಂಬುಲೆನ್ಸ್ ಕರೆಸಿಕೊಂಡಿದ್ದಾರೆ. ಆದರೆ ಪಾಟಿಸಿವ್ ಬಂದಿರುವವರು…
ಕುಂದಾಪ್ರ ಡಾಟ್ ಕಾಂ ಸುದ್ದಿ ಉಡುಪಿ: ಜಿಲ್ಲೆಯಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 66 ಮತ್ತು 169ಎ ನಲ್ಲಿ , ಮಳೆಗಾಲದ ಸಂದರ್ಭದಲ್ಲಿ ಅಪಘಾತಗಳು ಸಂಭವಿಸದOತೆ ಎಲ್ಲಾ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ. ಜಗದೀಶ್ ಸೂಚಿಸಿದರು. ಅವರು ಶನಿವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಳೆಗಾಲದಲ್ಲಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನೀರು ನಿಂತು ಅಪಘಾತಗಳು ಸಂಭವಿಸುವ ಸಾದ್ಯತೆಗಳಿದ್ದು, ಅಂತಹ ಸ್ಥಳಗಳನ್ನು ಕೂಡಲೇ ಗುರುತಿಸಿ ಹೆದ್ದಾರಿಯಲ್ಲಿ ನೀರು ನಿಲ್ಲದಂತೆ ಕ್ರಮ ಕೈಗೊಳ್ಳಬೇಕು, ಹೆದ್ದಾರಿಯ ಬದಿಯಲ್ಲಿ ನಿರ್ಮಿಸಿರುವ ಚರಂಡಿಯಲ್ಲಿ ನೀರು ಸರಾಗವಾಗಿ ಹರಿದು ಹೋಗುವಂತೆ ಅಗತ್ಯ ಕ್ರಮ ಕೈಗೊಳ್ಳಿ, ಅಗತ್ಯವಿರುವಡೆಗಳಲ್ಲಿ ಸೂಕ್ತ ಸೂಚನಾ ಫಲಕಗಳನ್ನು ಅಳವಡಿಸಿಸುವಂತೆ ಹಾಗೂ ಹೆದ್ದಾರಿಯಲ್ಲಿ ಪಾಟ್ ಹೋಲ್ ಗಳನ್ನು ಸೂಕ್ತ ರೀತಿಯಲ್ಲಿ ಮುಚ್ಚುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದರು. ರಾಷ್ಟ್ರೀಯ ಹೆದ್ದಾರಿ 166ಎ ರಲ್ಲಿ ಸಹ ಪಾಟ್ ಹೋಲ್ ಗಳನ್ನು ಸೂಕ್ತ ರೀತಿಯಲ್ಲಿ ಮುಚ್ಚುವಂತೆ ,…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕೇಂದ್ರ ಸರ್ಕಾರದ ಆದೇಶದಂತೆ ಉಡುಪಿ ಜಿಲ್ಲೆಯ ಎಲ್ಲಾ ದೇವಸ್ಥಾನಗಳನ್ನು ಜೂನ್ 8 ರಿಂದ ತೆರೆಯಲಾಗುವುದು, ಕೋವಿಡ್-19 ಹರಡುವುದನ್ನು ತಡೆಗಟ್ಟುವ ಸಲುವಾಗಿ ಭಕ್ತಾಧಿಗಳು ಮತ್ತು ಸಾರ್ವಜನಿಕರು ಈ ಮುಂದಿನ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸುವಂತೆ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ತಿಳಿಸಿದ್ದಾರೆ. ದೇವಾಲಯಕ್ಕೆ ಬರುವವರು ಕಡ್ಡಾಯವಾಗಿ ಮಾಸ್ಕ್ ಧರಿಸುವುದು. ಮಾಸ್ಕ್ ಇಲ್ಲದೇ ಇರುವವರು ದೇವಸ್ಥಾನದ ಪ್ರವೇಶಕ್ಕೆ ಅವಕಾಶವಿರುವುದಿಲ್ಲ. ಥರ್ಮಲ್ ಸ್ಕ್ಯಾನಿಂಗ್ ಪರೀಕ್ಷೆಗೆ ಒಳಪಡಿಸಲಾಗುವುದು ಮತ್ತು ನೀಡಲಾದ ಸ್ಯಾನಿಟೈಸರ್ ಬಳಸುವುದು. ದೇವಸ್ಥಾನದ ಎದುರುಗಡೆ ಆಳವಡಿಸಿರುವ ನಲ್ಲಿ (ಸೋಪ್/ಹ್ಯಾಂಡ್ ವಾಷ್) ಯಲ್ಲಿ ಕೈ ತೊಳೆದುಕೊಂಡು ದೇವಾಲಯಕ್ಕೆ ಪ್ರವೇಶಿಸುವುದು. ದೇವಾಲಯದ ಒಳಗೆ ಮತ್ತು ಜೊತೆಗೆ (6 ಅಡಿ) ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದು, ಉಸಿರಾಟದ ತೊಂದರೆ ಜ್ವರ, ಕೆಮ್ಮು, ನೆಗಡಿ ಅಂತಹ ರೋಗ ಲಕ್ಷಣಗಳನ್ನು ಹೊಂದಿರುವವರು ದೇವಾಲಯದ ಪ್ರದೇಶಕ್ಕೆ ಬರುವುದನ್ನು ಕಡ್ಡಾಯವಾಗಿ ನಿಷೇಧಿಸಿದೆ. ಕುಂದಾಪ್ರ ಡಾಟ್ ಕಾಂ ಸುದ್ದಿ. ಸ್ಮಾರ್ಟ್ ಫೋನ್ ಹೊಂದಿರುವವರು ಕಡ್ಡಾಯವಾಗಿ ಆರೋಗ್ಯ ಸೇತು ಆಪ್ ಅಳವಡಿಸಿಕೊಳ್ಳುವುದು. ದೇವರ ದರ್ಶನಕ್ಕೆ ಮಾತ್ರ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಜೂ.6ರ ಶನಿವಾರದ ಹೆಲ್ತ್ ಬುಲೆಟಿನ್ ಪ್ರಕಾರ ಒಟ್ಟು 121 ಹೊಸ ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಈವರೆಗೆ ಕೋವಿಡ್-19ನ ಪಾಸಿಟಿವ್ ಬಂದಿರುವ ಪ್ರಕರಣಗಳಲ್ಲಿ ಶೇ.98 ಮಂದಿಗೆ ರೋಗ ಲಕ್ಷಣಗಳು ಇಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಜಿಲ್ಲೆಯಲ್ಲಿ ಸದ್ಯ ಒಟ್ಟು 889 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 108 ಮಂದಿ ಬಿಡುಗಡೆಯಾಗಿದ್ದು, 781 ಮಂದಿ ಕೊರೋನಾ ಸೋಂಕಿತರಿಗೆ ಉಡುಪಿ, ಕುಂದಾಪುರ, ಕಾರ್ಕಳದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈವರೆಗೆ ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ನಾಳೆ(ಜೂನ್ 7) ಸಂಪೂರ್ಣ ಲಾಕ್ ಡೌನ್ ಇರಲ್ಲ: ಬಹುತೇಕ ಎಲ್ಲಾ ಲಾಕ್ ಡೌನ್ ನಿರ್ಬಂಧಗಳು ಸಡಿಲವಾಗಿರುವ ಕಾರಣ ಇನ್ನೂ ಈ ಭಾನುವಾರದ ಲಾಕ್ ಡೌನ್ ಮುಂದುವರಿಯುವುದು ಅನುಮಾನ ಎನ್ನಲಾಗಿದೆ. ಆದರೆ ರಾತ್ರಿಯ ವೇಳೆಯ ಕರ್ಫ್ಯೂ ಯಥಾಸ್ಥಿತಿಯಂತೆ ಮುಂದುವರಿಯಲಿದೆ. ಭಾನುವಾರ ಲಾಕ್ ಡೌನ್ ರದ್ದಾಗಿರುವ ಬಗ್ಗೆ ಅಧಿಕೃತ ಆದೇಶ ಇಂದು ಸಂಜೆಯ ವೇಳೆಗೆ ಮುಖ್ಯಮಂತ್ರಿ ಸಚಿವಾಲಯದಿಂದ ಬರುವ ನಿರೀಕ್ಷೆಯಿದೆ. ಈ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕೋವಿಡ್-19ನ ಪಾಸಿಟಿವ್ ಬಂದಿರುವ ಪ್ರಕರಣಗಳಲ್ಲಿ ಶೇ.98 ಮಂದಿಗೆ ರೋಗ ಲಕ್ಷಣಗಳು ಇಲ್ಲ. ರೋಗಿಗೆ ಆಕ್ಸಿಜಿನ್, ವೆಂಟಿಲೇಟರ್, ಐ.ಸಿ.ಯು ಸೇವೆ ನೀಡುವಂತಹ ಗಂಭೀರ ಪ್ರಕರಣ ಕಂಡುಬಂದಿಲ್ಲ ಎಂದು ಉಡುಪಿ ಕೋವಿಡ್ -19 ಜಿಲ್ಲಾ ನೋಡೆಲ್ ಅಧಿಕಾರಿ ಡಾ. ಪ್ರಶಾಂತ್ ಭಟ್ ಶನಿವಾರ ನಡೆದ ದಿಶಾ ಸಭೆಯಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಮಾಹಿತಿ ನೀಡಿದ್ದಾರೆ. ಪಾಸಿಟಿವ್ ಬಂದಿರುವ ಎಲ್ಲರೂ ಚಿಕಿತ್ಸೆಗೆ ಶೀಘ್ರದಲ್ಲಿ ಸ್ಪಂದಿಸುತ್ತಿದ್ದು, ಆರೋಗ್ಯವಾಗಿದ್ದಾರೆ. ಸಕ್ರಿಯ ಪ್ರಕರಣಗಳಲ್ಲಿ ಇಂದಿನಿಂದ ಸರಾಸರಿ 100 ಮಂದಿ ಪ್ರತಿದಿನ ಗುಣಮುಖರಾಗಿ ಡಿಸ್ಚಾಜ್ ಆಗಲಿದ್ದಾರೆ. ಕೊರೋನಾ ಸೋಂಕಿತ ಚಿಕಿತ್ಸೆಗಾಗಿ ಉಡುಪಿ ಟಿಎಂಎ ಪೈ ಆಸ್ಪತ್ರೆ, ಕುಂದಾಪು ಸರಕಾರಿ ಆಸ್ಪತ್ರೆ, ಕಾರ್ಕಳ ಆಸ್ಪತ್ರೆ, ಎಸ್.ಡಿ.ಎಂ ಕಾಲೇಜು ಮತ್ತು ಕೊಲ್ಲೂರಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದರು. ಕುಂದಾಪ್ರ ಡಾಟ್ ಕಾಂ ಸುದ್ದಿ. ಜಿಲ್ಲೆಯಲ್ಲಿ ಕ್ವಾರಂಟೈನ್ ಕೇಂದ್ರಗಳಿಂದ ತೆರಳಿದವರಿಂದ ಅವರ ಮನೆಯವರಿಗೆ ಹಾಗೂ ಸಮುದಾಯಕ್ಕೆ ರೋಗ ಹರಡಿಲ್ಲ, ಹೋಂ ಕ್ವಾರಂಟೈನ್ ನಲ್ಲಿರುವವರ ಮನೆಗೆ ಪ್ರತಿದಿನ ಆಶಾ ಕಾರ್ಯಕರ್ತೆಯರು ಭೇಟಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು,ಜೂ.6: ಬೈಂದೂರು ತಾಲೂಕಿನಲ್ಲಿ ಕೊರೋನಾ ಸೋಂಕಿನ ಸಂಖ್ಯೆ ಹೆಚ್ಚು ವರದಿಯಾದ ಹಿನ್ನೆಲೆಯಲ್ಲಿ ತಾಲೂಕಿನ ಬಿಜೂರು, ಉಪ್ಪುಂದ, ನಂದನವನ ಹಾಗೂ ಕೆರ್ಗಾಲು ಭಾಗದ ವ್ಯಾಪಾರಸ್ಥರು ನಾಳೆಯಿಂದ ಒಂದು ವಾರಗಳ ಕಾಲ ಸ್ವಯಂಪ್ರೇರಿತವಾಗಿ ವ್ಯಾಪಾರ-ವಹಿವಾಟು ಸ್ಥಗಿತಗೊಳಿಸುವ ನಿರ್ಧಾರಕ್ಕೆ ಬಂದಿದ್ದಾರೆ. ಇದಕ್ಕೆ ಪರ-ವಿರೋಧ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಉಡುಪಿ ಜಿಲ್ಲೆಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ಹೆಚ್ಚಿನ ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗುತ್ತಿವೆ. ಆ ಪೈಕಿ ಬೈಂದೂರು ತಾಲೂಕಿನಲ್ಲಿಯೇ ಗರಿಷ್ಠ ಪ್ರಕರಣಗಳು ದಾಖಲಾಗಿದೆ. ಇದರಿಂದ ಮುಂಜಾಗೃತಾ ಕ್ರಮವಾಗಿ ಜೂನ್7ರಿಂದ ಜೂನ್15ರ ತನಕ ಅಂಗಡಿ ಮುಂಗಟ್ಟುಗಳನ್ನು ಮುಚ್ಚುವ ನಿರ್ಧಾರಕ್ಕೆ ಬರಲಾಗಿದೆ. ಆಸ್ಪತ್ರೆ ಹಾಗೂ ಮೆಡಿಕಲ್ ಹೊರತುಪಡಿಸಿ, ಈ ಭಾಗದ ವ್ಯಾಪಾರಸ್ಥರು ಎಂಟು ದಿನಗಳ ಕಾಲ ವ್ಯವಹಾರ ಸ್ಥಗಿತಗೊಳಿಸುವ ನಿರ್ಧಾರಕ್ಕೆ ಬಂದಿದ್ದಾರೆನ್ನಲಾಗಿದೆ. ಈ ಬಗ್ಗೆ ಸಾರ್ವಜನಿಕರಿಗೆ ತಿಳಿಸಲು ಅಲ್ಲಲ್ಲಿ ಬ್ಯಾನರ್ ಅಳವಡಿಸಿದ್ದು, ರಿಕ್ಷಾದಲ್ಲಿ ಪ್ರಚಾರವನ್ನು ಮಾಡಲಾಗುತ್ತಿದೆ. ಕುಂದಾಪ್ರ ಡಾಟ್ ಕಾಂ ಸುದ್ದಿ. ಸ್ವಯಂ ಪ್ರೇರಿತ ನಿರ್ಧಾರಕ್ಕೆ ಮಿಶ್ರ ಪ್ರತಿಕ್ರಿಯೆ. ಬ್ಯಾಂಕ್, ಸೊಸೈಟಿ, ಆಸ್ಪತ್ರೆ ಎಂದಿನಂತೆ ತೆರೆದಿರಲಿದೆ: ಈ ಭಾಗದ ಆಸ್ಪತ್ರೆ,ಮೆಡಿಕಲ್,…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಬಾರ್ ಅಸೋಸಿಯೇಶನ್ಗೆ ನಡೆದ ಚುನಾವಣೆಯಲ್ಲಿ ನಿರಂಜನ್ ಹೆಗ್ಡೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಪ್ರಧಾನ ಕಾರ್ಯದರ್ಶಿಯಾಗಿ ಪ್ರಮೋದ್ ಹಂದೆ ಆಯ್ಕೆಗೊಂಡಿದ್ದಾರೆ. ಕುಂದಾಪುರ ಬಾರ್ ಅಸೋಸಿಯೇಶನ್ಗೆ ಜೂ.5ರಂದು ಚುನಾವಣೆ ನಡೆದಿದ್ದು, ಅಧ್ಯಕ್ಷ ಸ್ಥಾನಕ್ಕೆ ನಿರಂಜನ್ ಹೆಗ್ಡೆ ಹಾಗೂ ಕೆ.ಸಿ ಶೆಟ್ಟಿ ಸ್ಪರ್ಧಿಸಿದ್ದರು. ಒಟ್ಟು 232 ಮತಗಳಲ್ಲಿ 223 ಮತಗಳು ಚಲಾಯಿಸಲ್ಪಟ್ಟಿದ್ದವು. 9 ಮತಗಳಿಂದ ನಿರಂಜನ್ ಹೆಗ್ಡೆ ಗೆಲುವು ಸಾಧಿಸಿದ್ದಾರೆ. ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಪ್ರಮೋದ್ ಹಂದೆ ಸ್ಪರ್ಧೆ ಮಾಡಿದ್ದು, ಅವರು 32 ಮತಗಳಿಂದ ಗೆಲುವು ಸಾಧಿಸಿದ್ದಾರೆ.
