ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಭಾನುವಾರ ಸಂಪೂರ್ಣ ಲಾಕ್‌ಡೌನ್ ಇರಲಿದ್ದು, ಶನಿವಾರ ಸಂಜೆ 7 ಗಂಟೆಯಿಂದ ಸೋಮವಾರ ಬೆಳಿಗ್ಗೆ 7 ಗಂಟೆಯ ತನಕ ರಾಜ್ಯ ಸರಕಾರ ಆದೇಶದಂತೆ ಸಂಪೂರ್ಣ ಲಾಕ್‌ಡೌನ್ ಜಾರಿಯಾಗಲಿದೆ. ಈ ವೇಳೆ ಅನಾವಶ್ಯಕವಾಗಿ ರಸ್ತೆಯಲ್ಲಿ ತಿರುಗಾಡಿದರೆ ನಾವು ಮಾತನಾಡಲ್ಲ ಬದಲಾಗಿ ಲಾಠಿ ಮಾತನಾಡಲಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ ಜಗದೀಶ್ ಎಚ್ಚರಿಕೆ ನೀಡಿದ್ದಾರೆ. ಉಡುಪಿಯಲ್ಲಿ ಜಿಪಂ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ ಈ ಅವಧಿಯಲ್ಲಿ ಅಗತ್ಯ ವಸ್ತುಗಳಾದ ಪತ್ರಿಕೆ, ಹಾಲು, ಔಷಧ ಪೂರೈಕೆ/ಖರೀದಿಗೆ ಯಾವುದೇ ನಿರ್ಬಂಧವಿರುವುದಿಲ್ಲ. ಆದರೆ ಇತರ ಎಲ್ಲಾ ಅಂಗಡಿ ಮುಂಗಟ್ಟುಗಳು, ಹೊಟೇಲ್ಗಳು ಮುಚ್ಚಲ್ಪಡಲಿದೆ. ಅಲ್ಲದೆ ಎಲ್ಲಾ ಖಾಸಗಿ ಹಾಗೂ ಸಾರ್ವಜನಿಕ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ ಎಂದರು. *** ಲಾಕ್‌ಡೌನ್ ಸಡಿಲ ಮಾಡಲಾಗುತ್ತಿದ್ದರೂ ಕೊರೊನಾ ಸೋಂಕು ತಡೆಗಟ್ಟುವ ಹಿನ್ನೆಲೆಯಲ್ಲಿ ಭಾನುವಾರ ನಿರ್ಬಂಧ ಮುಂದುವರಿಯಲಿದೆ ಎಂದು ರಾಜ್ಯ ಸರ್ಕಾರ ಹೇಳಿತ್ತು. ಪೂರ್ವ ನಿಗದಿತ ಮದುವೆ ಸಮಾರಂಭಗಳನ್ನು ವಿಶೇಷ ಪ್ರಕರಣ ಎಂದು ಪರಿಗಣಿಸಲಾಗಿದೆ. ಅಂತರ ಕಾಯ್ದುಕೊಂಡು ಗರಿಷ್ಠ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸುತ್ತಲಿನ ಕೊರೊನಾ ಕ್ವಾರಂಟೈನ್ ಕೇಂದ್ರಗಳಿಂದ ಅಲ್ಲಿನ ಕೊರತೆ, ಅವ್ಯವಸ್ಥೆಗಳ ಬಗ್ಗೆ ನಿವಾಸಿಗಳಿಂದ ದೂರು, ಅಸಹನೆಯ ನುಡಿ ಕೇಳಿಬರುತ್ತಿದ್ದರೆ ಖಂಬದಕೋಣೆ ಸರ್ಕಾರಿ ಪದವಿಪೂರ್ವ ಕಾಲೇಜಿನ ಕೇಂದ್ರದ ನಿವಾಸಿಗಳು ಅಲ್ಲಿ ಸ್ವಗೃಹವಾಸದ ಹಿತ ಅನುಭವಿಸುತ್ತಿದ್ದೇವೆ ಎನ್ನುತ್ತಿದ್ದಾರೆ. ಹಿಂದಿನ ಬುಧವಾರ ತೆರೆದ ಈ ಕೇಂದ್ರದಲ್ಲಿ ಮುಂಬೈ ಮತ್ತು ಇತರೆಡೆಗಳಿಂದ ಹಿಂತಿರುಗಿದ 48 ಪುರುಷರು, 18 ಮಹಿಳೆಯರು, 17 ಮಕ್ಕಳು ಸೇರಿ 83 ಜನರಿದ್ದಾರೆ. ವಿಶಾಲ ಸ್ಥಳಾವಕಾಶ ಇರುವ ಇಲ್ಲಿನ ಕೊಠಡಿಗಳಲ್ಲಿ ಕುಟುಂಬಗಳು ಒಟ್ಟಾಗಿ, ಉಳಿದವರು ತಂಡಗಳಾಗಿ ಉಳಿದುಕೊಂಡಿದ್ದಾರೆ. ಇಲ್ಲಿ ದಿನವಿಡೀ ನೀರು ಲಭ್ಯ. ಬೆಳಿಗ್ಗೆ ಏಳುತ್ತಿದ್ದಂತೆ ಮಕ್ಕಳಿಗೆ, ಬೇಕು ಎನ್ನುವ ಹಿರಿಯರಿಗೆ ಬಿಸಿ ನೀರು ಸಿದ್ಧ. 8 ಗಂಟೆಯ ಉಪಾಹಾರಕ್ಕೆ ಇಡ್ಲಿ ಚಟ್ನಿ, ಕೇಸರಿ ಬಾತ್, ಮಕ್ಕಳಿಗೆ ಹಾಲು, ಬಿಸ್ಕಿಟ್; ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಿಂದ ತಡವಾಗಿ ಇನ್ನೊಂದು ಉಪಾಹಾರ, ಮಧ್ಯಾಹ್ನ ಮತ್ತು ರಾತ್ರಿ ಊಟ ಬರುತ್ತದೆ. ಮಧ್ಯಾಹ್ನದ ಊಟದ ಜತೆ ಪಾಯಸ, ಸಿಹಿ. ಸಂಜೆ ಟೀ, ಬೋಂಡಾ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಉಡುಪಿ ಜಿಲ್ಲೆಯಲ್ಲಿ ಮೇ.23ರಂದು 3 ಹೊಸ ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಈ ಪೈಕಿ ಮುಂಬೈನಿಂದ ಬಂದಿದ್ದ ಹಾಗೂ ವಿದೇಶದಿಂದ ಬಂದಿದ್ದ ಓರ್ವರಿಗೆ ಸೋಂಕು ಇರುವುದು ದೃಢಪಟ್ಟಿದೆ. ಜಿಲ್ಲೆಯಲ್ಲಿ ಸದ್ಯ ಒಟ್ಟು 53 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ ಮೂವರು ಬಿಡುಗಡೆಯಗಿದ್ದು, 49 ಮಂದಿ ಕೊರೋನಾ ಸೋಂಕಿತರಿಗೆ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ಇದನ್ನೂ ಓದಿ: ► ಕರೆ ಮಾಡಿ ಬೆದರಿಕೆ ಹಾಕುವ ಕಿಡಿಗೇಡಿಗಳಿಗೆ ಕಾನೂನು ಕ್ರಮ – https://kundapraa.com/?p=37789 . ► ಕುಂದಾಪುರ ವಿಧಾನಸಭೆ ಕ್ಷೇತ್ರದ ಕ್ವಾರಂಟೈನ್ ಮಾಹಿತಿ-ದೂರಿಗಾಗಿ ಕಂಟ್ರೋಲ್ ರೂಂ – https://kundapraa.com/?p=37760 . ► ಕುಂದಾಪುರದಲ್ಲಿ120 ಬೆಡ್‌ಗಳ ಕೋವಿಡ್-19 ಆಸ್ಪತ್ರೆ ಸಜ್ಜು – https://kundapraa.com/?p=37752 . ► ವಂಡ್ಸೆ ಸ್ವಾವಲಂಬನಾ ಕೇಂದ್ರದಲ್ಲಿ ಸಿದ್ಧಗೊಳ್ಳುತ್ತಿದೆ ಬಟ್ಟೆಯ ಮಾಸ್ಕ್‌ಗಳು – https://kundapraa.com/?p=37779 .
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಅನಗತ್ಯವಾಗಿ ಸೋಶಿಯಲ್ ಮೀಡಿಯಾಗಳಲ್ಲಿ ಅಧಿಕಾರಿಗಳೊಂದಿಗೆ ಮಾತನಾಡಿ ಆಡಿಯೋವನ್ನು ಹರಿಬಿಡುವುದು, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳಿಗೆ ಬೆದರಿಕೆ ಹಾಕುವುದು, ಬೈಯುವುದು ಮುಂತಾದವುಗಳನ್ನು ಮಾಡಿದರೆ ಅಂತವರ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಎಚ್ಚರಿಸಿದ್ದಾರೆ. ಅವರು ಶುಕ್ರವಾರ ಕುಂದಾಪುರ ತಾಲೂಕು ಪಂಚಾಯತ್ ಸಂಭಾಂಗಣದಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಾತನಾಡಿ ಜಿಲ್ಲಾಡಳಿತ ಕಳೆದ ಮೂರು ತಿಂಗಳಿಂದ ಬಿಡುವಿರುದೇ ಕೆಲಸ ಮಾಡುತ್ತಿದೆ. ಆದರೆ ಒಂದಿಷ್ಟು ಕಿಡಿಗೇಡಿಗಳು ಅಗತ್ಯವಾಗಿ ಸೋಶಿಯಲ್ ಮೀಡಿಯಾಗಳಲ್ಲಿ ತಪ್ಪು ಸಂದೇಶ ಹರಡುವುದು, ಮುಂಬೈಯಲ್ಲಿ ಕುಳಿತ ಕರೆ ಮಾಡಿ ಡಾನ್ ರೀತಿ ಮಾತನಾಡುವುದು, ಸ್ಥಳೀಯರು ಅನಗತ್ಯವಾಗಿ ಕರೆ ಮಾಡುವುದು ಮಾಡುತ್ತಿದ್ದಾರೆ. ಇದು ನಿಲ್ಲಬೇಕು ಎಂದರು. ಜಿಲ್ಲೆಯ ಜನರ ರಕ್ಷಣೆ ಬಹಳ ಮುಖ್ಯ. ಆ ನಿಟ್ಟಿನಲ್ಲಿ ಹೆಚ್ಚಿನ ಕಾಳಜಿ ತೆಗೆದುಕೊಂಡಿದ್ದೇವೆ. ಊಟ, ತಿಂಡಿ ಬಟ್ಟೆ ತೆಗೆದುಕೊಂಡು ಕ್ವಾರಂಟೈನ್ ಸೆಂಟರ್‌ಗಳಿಗೆ ತೆರಳುವುದರಿಂದ ಕೊರೋನಾ ಹರಡುವ ಸಾಧ್ಯತೆ ಹೆಚ್ಚಿದೆ. ಕ್ವಾರಂಟೈನ್ ಸೆಂಟರ್‌ಗಳಿಗೆ…
ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ: ಎಲ್ಲಡೆ ಲಾಕ್‌ಡೌನ್ ಜಾರಿಯಾಗಿ ಕೊರೋನಾ ವಿರುದ್ಧ ಹೋರಾಟಕ್ಕಿಳಿದ ಸಂದರ್ಭ ವಂಡ್ಸೆ ಗ್ರಾಮ ಪಂಚಾಯತಿಯ ಸ್ವಾವಲಂಬನಾ ಕೇಂದ್ರದ ಮಹಿಳೆಯರೂ ಇದಕ್ಕೆ ಸಾಥ್ ನೀಡಿದ್ದಲ್ಲದೇ ಸಾವಿರಾರು ಬಟ್ಟೆಯ ಮಾಸ್ಕ್‌ಗಳನ್ನು ತಯಾರಿಸಿ ಆದಾಯಕ್ಕೊಂದು ದಾರಿ ಕಂಡುಕೊಂಡಿದ್ದರು. ಲಾಕ್‌ಡೌನ್ ಘೊಷಣೆಯ ಬಳಿಕ ದೇವಸ್ಥಾನಗಳಿಗೆ ಸಾರ್ವಜನಿಕ ದರ್ಶನ ರದ್ದಾಗಿದ್ದರಿಂದ ವಂಡ್ಸೆ ಸ್ವಾವಲಂಭನಾ ಕೇಂದ್ರದಲ್ಲಿ ತಯಾರಾಗುತ್ತಿದ್ದ ಬಟ್ಟೆ ಚೀಲದ ಬೇಡಿಕೆ ಕುಸಿದಿತ್ತು. ಮಹಿಳೆಯರು ಕೆಲಸವಿಲ್ಲದೆ ಖಾಲಿ ಕೂತಿದ್ದರು. ಮಾಸ್ಕ್ ಸಿದ್ಧಪಡಿಸಿವುದು ಸೂಕ್ತ ಆಯ್ಕೆ ಎಂಬುದನ್ನು ಅರಿತ ಮಹಿಳೆಯರು ವಂಡ್ಸೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ ಗಮನ ಸೆಳೆದಿದ್ದರು. ಅವರು ಜಿಲ್ಲಾಡಳಿತದ ಜೊತೆ ಮಾತನಾಡಿ ಮಾಸ್ಕ್ ಸಿದ್ದಪಡಿಸುವ ಜವಾಬ್ದಾರಿ ಪಡೆದಿದ್ದು, ಇದೂವರೆಗೆ 15,000ಕ್ಕೂ ಹೆಚ್ಚು ಕಾಟನ್ ಮಾಸ್ಕ್‌ಗಳನ್ನು ಸಿದ್ದಪಡಿಸಿ ಅಗತ್ಯವಿರುವೆಡೆಗೆ ನೀಡಿದ್ದಾರೆ. ಮಹಿಳೆಯರು ಸಾಮಾಜಿಕ ಅಂತರ ಪಾಲಿಸಿಕೊಂಡು ಸ್ವಾವಲಂಬನಾ ಕೇಂದ್ರದಲ್ಲಿ ಹಾಗೂ ತಮ್ಮ ಮನೆಯಲ್ಲಿಯೇ ಮಾಸ್ಕ್‌ನ ತಯಾರಿಸಿದ್ದರು. ಮಾಸ್ಕ್ ಸಿದ್ದ ಪಡಿಸುವ ಮೂಲಕ ಕರೋನಾ ವಾರಿಯರ‍್ಸ್ ಕೆಲಸ ನಿಭಾಯಿಸುವ ಜೊತೆ ತಮ್ಮ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರ ವಿಧಾನಸಭಾ ಕ್ಷೇತ್ರದ ಕ್ವಾರಂಟೈನ್ ಮಾಹಿತಿಗೆಇಲ್ಲಿನ ಪುರಸಭೆ ಕಟ್ಟಡದ ಮೊದಲ ಮಹಡಿಯಲ್ಲಿ ಬುಧವಾರದಿಂದ ಕಂಟ್ರೋಲ್ ರೂಂ ಆರಂಭಿಸಲಾಗಿದೆ. ಕಂಟ್ರೋಲ್ ರೂಂಗೆ ಕರೆ ಮಾಡಿ ಕ್ವಾರಂಟೈನ್ ಕೇಂದ್ರಗಳಿಗೆ ಸಂಬಂಧಿಸಿದ ಮಾಹಿತಿ, ದೂರು, ಸಮಸ್ಯೆಗಳಿದ್ದರೆ ಹೇಳಿಕೊಳ್ಳಬಹುದು. ಇಲ್ಲಿನ ಸಿಬ್ಬಂದಿಗಳು ಲಭ್ಯವಿರುವ ಮಾಹಿತಿ ಒದಗಿಸುವುದಲ್ಲದೇ ಆಯಾ ಕ್ವಾರಂಟೈನ್ ಕೇಂದ್ರಗಳ ಅಧಿಕಾರಿಗಳನ್ನು ಸಂಪರ್ಕಿಸಿ ಸಮಸ್ಯೆ ಬಗೆಹರಿಸಲಿದ್ದಾರೆ. ಹೊರರಾಜ್ಯಗಳಿಂದ ಬರುವವರಿಗೆ ಕ್ವಾರಂಟೈನ್ ಕೇಂದ್ರದಲ್ಲಿ ಅನೇಕ ಸಮಸ್ಯೆಗಳಾಗುತ್ತಿದ್ದವು. ಆಹಾರ ತಡವಾಗಿ ತಲುಪುತ್ತಿತ್ತು. ನೀರಿನ ವ್ಯವಸ್ಥೆ, ವಿದ್ಯುತ್, ಊಟ ಶುಚಿತ್ವದ ವ್ಯವಸ್ಥೆ ಕುರಿತು ದೂರುಗಳಿದ್ದವು. ಹಾಗಾಗಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ಈ ಕೇಂದ್ರ ತೆರೆಯಲು ಸೂಚಿಸಿದ್ದು ಅದರಂತೆ ಪುರಸಭೆ ಕೊಠಡಿಯೊಂದನ್ನು ಸಜ್ಜುಗೊಳಿಸಿ ನೀಡಿದೆ. ಇಲ್ಲಿ ಶಾಸಕರೇ ಸಿಬಂದಿಗಳನ್ನು ನೇಮಿಸಿ ಇರಿಸಿದ್ದಾರೆ. ಶಾಸಕರು ಬುಧವಾರ ಇಲ್ಲಿಗೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಹೊರರಾಜ್ಯಗಳಿಂದ ಬರುವವರು ಮಾಹಿತಿಗೆ, ಕ್ವಾರಂಟೈನ್ ಕೇಂದ್ರಗಳಲ್ಲಿ ಇರುವವರು ದೂರುಗಳಿಗೆ ಈ ಕೇಂದ್ರವನ್ನು ಸಂಪರ್ಕಿಸಬಹುದು. ಪ್ರಸ್ತುತ ಸೇವಾಸಿಂಧು ಆ್ಯಪ್ ಮೂಲಕ ಹೊರರಾಜ್ಯಗಳಿಂದ ಬರುವ…
ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ: ಇಲ್ಲಿನ ತಾಲೂಕು ಸರಕಾರಿ ಸಾರ್ವಜನಿಕ ಆಸ್ಪತ್ರೆಯ ಲಕ್ಷ್ಮೀಸೋಮ ಬಂಗೇರ ಸ್ಮಾರಕ ಹೆರಿಗೆ ವಾರ್ಡ್‌ನ್ನು ಕೋವಿಡ್ ಆಸ್ಪತ್ರೆಯಾಗಿ ಮಾರ್ಪಡಿಸಲಾಗಿದ್ದು, 120 ರೋಗಿಗಳಿಗೆ ಚಿಕಿತ್ಸೆ ನೀಡಲು ಸಜ್ಜುಗೊಳಿಸಲಾಗಿದೆ. ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸೂಕ್ತ ಚಿಕಿತ್ಸೆ ನೀಡುವ ಉದ್ದೇಶದಿಂದ ಸಿಂಟಮೆಟಿಕ್ ಟ್ರಿಟ್‌ಮೆಂಟ್ ಅಗತ್ಯವಿಲ್ಲದ ಪ್ರಕರಣಗಳಿಗೆ ತಾಲೂಕಿನ ಕೋವಿಡ್ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ನೀಡಲು ಉದ್ದೇಶಿಸಲಾಗಿದೆ. ಈ ಸಂಬಂಧ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಸಜ್ಜುಗೊಳಿಸಲಾಗುತ್ತಿದ್ದು, ಆಸ್ಪತ್ರೆಗೆ ಅಗತ್ಯವಿರುವ ಹೆಚ್ಚುವರಿ ವೈದ್ಯಾಧಿಕಾರಿಗಳು ಹಾಗೂ ಆರೋಗ್ಯ ಸಿಬ್ಬಂದಿಗಳನ್ನು ನೇಮಿಸುವ ಬಗ್ಗೆಯೂ ಜಿಲ್ಲಾಡಳಿತ ಭರವಸೆ ನೀಡಿದೆ. ಬೈಂದೂರು ಹಾಗೂ ಕುಂದಾಪುರ ಭಾಗದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾದಲ್ಲಿ ಇಲ್ಲಿಯೇ ಚಿಕಿತ್ಸೆ ನೀಡಲಾಗುತ್ತದೆ. ರೋಗಿಗೆ ಹೆಚ್ಚಿನ ಚಿಕಿತ್ಸೆಯ ಅಗತ್ಯ ಕಂಡುಬಂದರೆ ಉಡುಪಿಯ ಟಿಎಂಎ ಪೈ ಕೋವಿಡ್ ಆಸ್ಪತ್ರೆಗೆ ಕೊಂಡಯ್ಯಲಾಗುತ್ತದೆ. ಪ್ರಸ್ತುತ ಹೆರಿಗೆ ವಾರ್ಡಿನಲ್ಲಿದ್ದವರನ್ನು ಆಸ್ಪತ್ರೆಗೆ ಹಳೆಯ ಹೆರಿಗೆ ವಾರ್ಡ್‌ಗಳಿಗೆ ಸ್ಥಳಾಂತರಿಸಲಾಗಿದೆ. ಗುರುವಾರ ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: 20ನೇ ಶತಮಾನದ ಆಧುನಿಕ ಭಾರತದ ಕುರಿತು ಮಹಾನ್ ಕನಸು ಹೊತ್ತಿದ್ದ ಮತ್ತು ಕಂಪ್ಯೂಟರ್ ಕ್ರಾಂತಿಯ ಮೂಲಕ ಅದಕ್ಕೆ ಅಡಿಪಾಯ ಹಾಕಿದ್ದ ಹಾಗೂ ಶ್ರೀಲಂಕಾದಲ್ಲಿರುವ ತಮಿಳಿಗರ ಸಮಸ್ಯೆಗಳಿಗೆ ಒಂದು ಪರಿಹಾರ ಹುಡುಕಲು ಹೋಗಿದ್ದ ನಾಯಕನೊಬ್ಬ ಇಂದಿಗೆ 29ವರ್ಷಗಳ ಹಿಂದೆ ಭೀಕರವಾಗಿ ಹತ್ಯೆಯಾಗಿಹೋಗಿದ್ದರು ಅದು ಆಧುನಿಕ ಭಾರತಕ್ಕಾದ ಮಹಾನ್ ನಷ್ಟ ಎಂದು ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಾನ್ಮಕ್ಕಿ ಹರಿಪ್ರಸಾದ್ ಶೆಟ್ಟಿ ಹೇಳಿದ್ದಾರೆ. ಇಂದು ಕುಂದಾಪುರ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ರಾಜೀವ್ ಗಾಂಧಿಯವರ 29ನೇ ಪುಣ್ಯತಿಥಿ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಈ ಸಂಧರ್ಭದಲ್ಲಿ ನಗರ ಪ್ರಾಧಿಕಾರದ ಮಾಜಿ ಅಧ್ಯಕ್ಷ , ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿಕಾಸ್ ಹೆಗ್ಡೆ , ಕೆಪಿಸಿಸಿ ಐ.ಟಿ ಸೆಲ್ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ಶೆಟ್ಟಿ, ಪುರಸಭಾ ಸದಸ್ಯರಾದ ಚಂದ್ರಶೇಖರ ಖಾರ್ವಿ, ಯುವ ಮುಖಂಡರಾದ ದಿನೇಶ್ ಖಾರ್ವಿ, ನಾಗರಾಜ ಕೋಟೇಶ್ವರ, ರಾಜಾ ಖಾರ್ವಿ ಮುಂತಾದವರು ಉಪಸ್ಥಿತರಿದ್ದರು. ಬ್ಲಾಕ್ ಕಾಂಗ್ರೆಸ್ ಪ್ರಧಾನ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಹೊರರಾಜ್ಯಗಳಿಂದ ಬಂದಿರುವವರನ್ನು ದೇವಳದ ವಿವಿಧ ಅತಿಥಿಗೃಹಗಳನ್ನು ಕ್ವಾರಂಟೈನ್ ಮಾಡಲಾಗಿದ್ದು, ಇಲ್ಲಿ ಅಗತ್ಯಕ್ಕಿಂತ ಹೆಚ್ಚಿನ ಜನರಿರುವುದರಿಂದ ಸಾಮಾಜಿಕ ಅಂತರ ಹಾಗೂ ಸುರಕ್ಷತೆಯನ್ನು ಕಾಯ್ದುಕೊಳ್ಳಲು ಸಾಧ್ಯವಾಗುತ್ತಿಲ್ಲ. ಅದರ ಬದಲಿಗೆ ವಿಶಾಲ ಪ್ರದೇಶದಲ್ಲಿರುವ ಕೊಲ್ಲೂರು ದೇವಳದ ಪ್ರೌಢಶಾಲೆಗಳಲ್ಲಿ ಕ್ವಾರಂಟೈನ್ ಮಾಡುವುದು ಉತ್ತಮ ಎಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳ ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯ ನರಸಿಂಹ ಹಳಗೇರಿ ಹೇಳಿದ್ದಾರೆ. ಈ ಬಗ್ಗೆ ಮುಜರಾಯಿ ಸಚಿವರು, ಸಂಸದರು ಹಾಗೂ ಶಾಸಕರಿಗೆ ಪತ್ರ ಬರೆದಿರುವ ಅವರು, ಕೋರೋನಾ ತಡೆಗಟ್ಟಲು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಮುಖ್ಯವಾಗಿದೆ. ಆದರೆ ದೇವಳದ ಅತಿಥಿಗೃಹಗಳಲ್ಲಿ ಹೆಚ್ಚಿನ ಜನರಿರುವುದರಿಂದ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸಮಸ್ಯೆಯಾಗುತ್ತಿದೆ. ಅಲ್ಲದೇ ದೇವಳದ ಅತಿಥಿ ಗೃಹವನ್ನು ಧೀರ್ಘಕಾಲದ ತನಕ ಕ್ವಾರಂಟೈನ್ ಕೇಂದ್ರವನ್ನಾಗಿಸುವುದರಿಂದ ಮುಂದೆ ಬರುವ ಯಾತ್ರಾರ್ಥಿಗಳಿಗೆ ಖಾಸಗಿ ಲಾಡ್ಜುಗಳ ಮಾಲಿಕರು ದಿಕ್ಕುತಪ್ಪಿಸಿ ಅಲ್ಲಿಗೆ ತೆರಳದಂತೆ ಮಾಡುವ ಸಾಧ್ಯತೆ ಇದೆ ಎಂದಿದ್ದಾರೆ. ದೇವಳದ ಸಿಬ್ಬಂದಿಗಳನ್ನು ಆಹಾರ ವಿತರಣೆ ಸೇರಿದಂತೆ ವಿವಿಧ ಕೆಲಸಗಳಿಗೆ ಬಳಸಿಕೊಳ್ಳಲಾಗುತ್ತಿದೆ. ಆದರೆ ಅವರಿಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಒಂದೇ ದಿನ 27 ಕೋರೊನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಎಲ್ಲರೂ ವಿವಿಧ ರಾಜ್ಯಗಳಿಂದ ಆಗಮಿಸಿದ ಹಿನ್ನೆಲೆಯುಳ್ಳವರಾಗಿದ್ದಾರೆ. ಮುಂಬೈನಿಂದ ಆಗಮಿಸಿದ 23, ತೆಲಂಗಾಣದ 3, ಕೇರಳದಿಂದ ಚಿಕಿತ್ಸೆಗೆ ಬಂದ ಓರ್ವರಿಗೆ ಪಾಸಿಟಿವ್ ಬಂದಿದೆ. ಈ ಪೈಕಿ 6 ಪುರುಷರು, 5 ಮಹಿಳೆಯರು ಹಾಗೂ 16 ಮಕ್ಕಳು ಸೇರಿದ್ದಾರೆ. ಕೇರಳದಿಂದ ಚಿಕಿತ್ಸೆಗೆ ಬಂದ ಓರ್ವ ವ್ಯಕ್ತಿ ಹೊರತುಪಡಿಸಿ ಉಳಿದವರೆಲ್ಲರೂ ಕ್ವಾರಂಟೈನ್‌ನಲ್ಲಿದ್ದು ಈಗ ಕೋವಿಡ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಜಿಲ್ಲೆಯಲ್ಲಿ ಸದ್ಯ ಒಟ್ಟು 48 ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ ಮೂವರು ಬಿಡುಗಡೆಯಗಿದ್ದು, 44 ಮಂದಿ ಕೊರೋನಾ ಸೋಂಕಿತರಿಗೆ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ಇದನ್ನೂ ಓದಿ: ► ಕುಂದಾಪುರದಲ್ಲಿ120 ಬೆಡ್‌ಗಳ ಕೋವಿಡ್-19 ಆಸ್ಪತ್ರೆ ಸಜ್ಜು – https://kundapraa.com/?p=37752 .
