Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಕಶ್ವಿ ಚೆಸ್ ಸ್ಕೂಲ್ ಲಾಕ್‌ಡೌನ್ ಸಮಯದಲ್ಲಿ ವಿನೂತನ ಪ್ರಯೋಗವಾಗಿ ಚೆಸ್ ವಿಧ್ಯಾರ್ಥಿಗಳಿಗೆ ಆನ್‌ಲೈನ್ ಮೂಲಕ ಚೆಸ್ ಪಂದ್ಯಾಟವನ್ನು ಮೇ 15ರಿಂದ ಆಯೋಜಿಸಿದೆ. ಈಗಾಗಲೇ ಕಶ್ವಿ ಚೆಸ್ ಸ್ಕೂಲ್‌ನ ವಿಧ್ಯಾರ್ಥಿಗಳು ಈ ಪಂದ್ಯಾಟವನ್ನು ಪ್ರತಿನಿತ್ಯ ಆಟವಾಡುತ್ತಿದ್ದು ಅತ್ಯಂತ ಯಶಸ್ವಿಯಾಗಿದೆ. ಮನೆಯಲ್ಲಿಯೇ ಕುಳಿತು ಆಟವಾಡುವುದರಿಂದ ತಮ್ಮ ಸಮಯವನ್ನು ವ್ಯಕ್ತಿತ್ವ ವಿಕಸನಕ್ಕೆ ಪೂರಕವಾಗಲಿದೆ ಹಾಗೂ ಮುಂದೆ ನಡೆಯುವ ಚೆಸ್ ಪಂದ್ಯಾವಳಿಗೆ ಅನುಕೂಲವಾಗಲಿದೆ. ಇದರ ಮುಂದಿನ ಹಂತವಾಗಿ ಕುಂದಾಪುರ ತಾಲೂಕು ಪರಿಸರದ ಇತರ ಚೆಸ್ ವಿಧ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಈ ಪಂದ್ಯಾವಳಿಯ ಮಾಹಿತಿ ಇಲ್ಲಿದೆ. http://kashvichessschool.in/ ವೆಬ್‌ಸೈಟ್‌ನಲ್ಲಿರುವ https://lichess.org/tournament/ ಲಿಂಕ್‌ನ ಮೂಲಕ ಈ ಪಂದ್ಯಾಟವನ್ನು ಆಡಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ 7899969063 ದೂರವಾಣಿಯಲ್ಲಿ ಸಂಖ್ಯೆಯನ್ನು ಸಂಪರ್ಕಿಸಬಹುದು. ಪ್ರತಿನಿತ್ಯ ಸಂಜೆ 5 ರಿಂದ 6 ಗಂಟೆಯವರೆಗೆ ಈ ಪಂದ್ಯಾವಳಿ ನಡೆಯಲಿದ್ದು ಎಂದು ಕಶ್ವಿ ಚೆಸ್ ಸ್ಕೂಲ್‌ನ ಸ್ಥಾಪಕ ನರೇಶ್ ಬಿ. ಮಾಹಿತಿ ನೀಡಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕೊರೋನಾ ಹರಡುವಿಕೆ ನಿಯಂತ್ರಿಸುವಲ್ಲಿ ಜಿಲ್ಲಾಡಳಿತ, ಆರೋಗ್ಯ & ಪೊಲೀಸ್ ಇಲಾಖೆಯ ಕಾರ್ಯ ಶ್ಲಾಘನಾರ್ಹ. ಅವರ ಪರಿಶ್ರಮದಿಂದಾಗಿ ಉಡುಪಿ ಜಿಲ್ಲೆ ಕೊರೋನಾ ನಿಯಂತ್ರಣದಲ್ಲಿದ್ದು, ಇದು ಹಾಗೇಯೇ ಮುಂದುವರಿಯಲು ನಾಗರಿಕರು ಸಹಕರಿಸಬೇಕಿದೆ ಎಂದು ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದರು. ಅವರು ಕಟ್‌ಬೆಲ್ತೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಜಿಲ್ಲೆಯಲ್ಲಿ ಅಧಿಕಾರಿಗಳು ಕೈಗೊಂಡ ಕಟ್ಟುನಿಟ್ಟಿನ ಕ್ರಮದಿಂದಾಗಿ ಉಡುಪಿ ಗ್ರೀನ್‌ಝೋನ್‌ನಲ್ಲಿದೆ. ಉದ್ಯೋಗ ನಿಮಿತ್ತ ಬೇರೆ ಬೇರೆ ರಾಜ್ಯ ಹಾಗೂ ದೇಶಗಳಲ್ಲಿ ನೆಲೆಸಿರುವ ಯುವಕರು ಊರಿಗೆ ಬರಲು ಅವಕಾಶ ಮಾಡಿಕೊಡುವುದು ಸರಕಾರದ ಜವಾಬ್ದಾರಿಯಾಗಿದ್ದು, ಅವರಿಗೆ ಕ್ವಾರಂಟೈನ್ ಮಾಡುವ ಪ್ರದೇಶದಲ್ಲಿಯೂ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಹೊರ ರಾಜ್ಯ ಹಾಗೂ ದೇಶಗಳಿಂದ ಬರುವವರು ಕೂಡ ಮನೆಯ ಹಿರಿಯರು, ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಕ್ವಾರಂಟೈನ್‌ಗೆ ಒಳಪಟ್ಟು ಆ ಬಳಿಕವಷ್ಟೇ ಮನೆಗಳಿಗೆ ತೆರಳುವುದು ಸೂಕ್ತ ಎಂದಿದ್ದಾರೆ. ಕುಂದಾಪ್ರ ಡಾಟ್ ಕಾಂ ಸುದ್ದಿ. ದೇಶದಲ್ಲಿ ಉದ್ಯಮಗಳು ತೀವ್ರ ಸಂಕಷ್ಟದಲ್ಲಿದೆ. ರಾಜ್ಯದ ಹೋಟೆಲ್ ಉದ್ಯಮ ಸ್ಥಿತಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಹೊರ ದೇಶ ಹಾಗೂ ರಾಜ್ಯಗಳಿಂದ ಬರುತ್ತಿರುವ ಜನರಿಗೆ ಕ್ವಾರಂಟೈನ್ ಒಳಪಡಿಸಲು ಮತ್ತು ಅವರಿಗೆ ಅಗತ್ಯವಾದ ಎಲ್ಲಾ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ನೆರವು ನೀಡುವುದಾಗಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ತಿಳಿಸಿದ್ದಾರೆ. ಅವರು ಶುಕ್ರವಾರ ಕುಂದಾಪುರ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಹೊರ ರಾಜ್ಯ, ಜಿಲ್ಲೆಗಳಿಂದ ಬರುವವರ ಕ್ವಾರಂಟೈನ್ ನಿರ್ವಹಣೆಯ ಬಗ್ಗೆ ಅಧಿಕಾರಿಗಳ ಜೊತೆಗಿನ ಸಭೆಯಲ್ಲಿ ಮಾತನಾಡಿ ಕ್ವಾರಂಟೈನ್ ಮಾಡುವ ಪ್ರದೇಶದಲ್ಲಿ ಮೂಲಭೂತ ಸೌಕರ್ಯ, ಉಟೋಪಚಾರ ವ್ಯವಸ್ಥೆಯ ಹಾಗೂ ಸುರಕ್ಷತೆಯ ಬಗ್ಗೆ ಹೆಚ್ಚಿನ ನಿಗಾ ವಹಿಸಿ ಎಂದಿದ್ದಾರೆ. ಬೈಂದೂರು ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ಮಾತನಾಡಿ ಹೊರಗಿನಿಂದ ಬರುವವರಿಗೆ ಕ್ವಾರಂಟೈನ್ ಮಾಡಲು ಕೊಲ್ಲೂರಿನಲ್ಲಿ ಸಾಕಷ್ಟು ಸ್ಥಳಾವಕಾಶವಿದೆ. ಅವರೆಲ್ಲರಿಗೂ ಸರಿಯಾದ ಸೌಕರ್ಯ ದೊರೆಯುವಂತೆ ಮಾಡುವುದು ಅಗತ್ಯವಾಗಿದ್ದು, ಈ ನಿಟ್ಟಿನಲ್ಲಿ ಸೂಕ್ತ ಕ್ರಮವಹಿಸಿ ಎಂದಿದ್ದಾರೆ. ಕುಂದಾಪ್ರ ಡಾಟ್ ಕಾಂ ಸುದ್ದಿ. ಕ್ವಾರಂಟೈನ್ ಬಗ್ಗೆ ಕುಂದಾಪುರ ಉಪವಿಭಾಗಾಧಿಕಾರಿ ರಾಜು ಕೆ ವಿವರಿಸಿ, 1500ಕ್ಕೂ ಹೆಚ್ಚು ಜನ ಹೊರರಾಜ್ಯಗಳಿಂದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಗಡಿ ಭಾಗವಾದ ಶಿರೂರು ಚೆಕ್‌ಪೋಸ್ಟ್ ವ್ಯಾಪ್ತಿಯಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, ಪ್ಯಾಸೆಂಜರ್ ಹಾಗೂ ಗೂಡ್ಸ್ ವಾಹನಗಳ ಚಾಲಕ ಹಾಗೂ ಸಹಪ್ರಯಾಣಿಕರಿಗೆ ಥರ್ಮ್‌ಲ್ ಸ್ಕ್ರೀನಿಂಗ್ ಮಾಡಿ, ಜಿಲ್ಲೆಯ ಗಡಿಯೊಳಕ್ಕೆ ಬಿಡಲಾಗುತ್ತಿದೆ. ಹೊರ ರಾಜ್ಯಗಳಿಂದ ಬಂದವರನ್ನು ಕ್ವಾರಂಟೈನ್‌ಗೆ ಒಳಪಡಿಸಲಾಗುತ್ತಿದೆ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಿಂದ ಒಳಹಾದಿಯ ಮೂಲಕ ಜನರು ಬರುತ್ತಿದ್ದ ಬಗ್ಗೆ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಎಲ್ಲಾ ಒಳದಾರಿಗಳನ್ನು ಬಂದ್ ಮಾಡಿಸಲಾಗಿದೆ. ಹೊರರಾಜ್ಯದಿಂದ ಜಿಲ್ಲೆಗೆ ಆಗಮಿಸುವ ಜನರಿಗೆ ಕಡ್ಡಾಯವಾಗಿ ಸರಕಾರಿ ಕ್ವಾರಂಟೈನ್‌ಗೆ ಒಳಪಡಿಸಲಾಗುತ್ತಿದೆ. ಹೊರಜಿಲ್ಲೆಯಿಂದ ಬರುವವರಿಗೆ ಸೀಲ್ ಹಾಕಬಾರದೆಂದು ಸರಕಾರ ಆದೇಶಿಸಿರುವುದರಿಂದ ಪಾಸ್ ಪಡೆದು ಬರುವವರನ್ನು ಸ್ಕ್ರೀನಿಂಗ್ ಮಾಡಿ ಬಿಡಲಾಗುತ್ತಿದೆ. ಸದ್ಯ ಆವರನ್ನು ಕ್ವಾರಂಟೈನ್‌ಗೆ ಒಳಪಡಿಸಲಾಗುತ್ತಿಲ್ಲ. ಉಡುಪಿ ಜಿಲ್ಲೆ ಈಗಾಗಲೇ ಗ್ರೀನ್ ಝೋನ್‌ನಲ್ಲಿದ್ದು, ಮುಂದೆಯೂ ಇದನ್ನು ಕಾಪಾಡಿಕೊಂಡು ಹೋಗಲು ಜನರೇ ಎಚ್ಚರಿಕೆ ವಹಿಸಿ, ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಮತ್ತು ಸುರಕ್ಷತಾ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಗೆ ವಿದೇಶಗಳಿಂದ ಮತ್ತು ಹೊರಾಜ್ಯದಿಂದ ಬರುವವರ ಕ್ವಾರಂಟೈನ್ ಗೆ ಎಲ್ಲಾ ಅಗತ್ಯ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗುತ್ತಿದ್ದು, ಕ್ವಾರಂಟೈನ್ ಗಾಗಿ ಜಿಲ್ಲೆಯ ಖಾಸಗಿ ಶಾಲಾ ಮತ್ತು ಕಾಲೇಜುಗಳ ತಮ್ಮ ವ್ಯಾಪ್ತಿಯ ಕಟ್ಟಡಗಳು ಮತ್ತು ಹಾಸ್ಟೆಲ್ ಗಳನ್ನು ಜಿಲ್ಲಾಡಳಿತ ಕೋರಿದ ಕೂಡಲೇ ಬಿಟ್ಟುಕೊಡುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ. ಅವರು ಶುಕ್ರವಾರ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆದ, ಜಿಲ್ಲೆಯ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಶಾಲಾ ಮುಖ್ಯೋಪಧ್ಯಾಯರುಗಳ, ವಸತಿ ಶಾಲೆಗಳ ಮುಖ್ಯಸ್ಥರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಇದುವರೆಗೂ ಕೋವಿಡ್-19 ವಿರುದ್ದ ಹೋರಾಟದಲ್ಲಿ ಜಿಲ್ಲಾಡಳಿತ ಉತ್ತಮವಾಗಿ ಕಾರ್ಯ ನಿರ್ವಹಿಸಿದ್ದು, ಮುಂದೆ ವಿದೇಶದಿಂದ ಮತ್ತು ಹೊರರಾಜ್ಯದಿಂದ ಆಗಮಿಸುವ ಜಿಲ್ಲೆಯ ಜನರಿಂದ , ಪ್ರಸ್ತುತ ಜಿಲ್ಲೆಯಲ್ಲಿನ ನಾಗರೀಕರನ್ನು ಕೋವಿಡ್ ನಿಂದ ರಕ್ಷಿಸುವುದು ಅತ್ಯಂತ ಸವಾಲಿನ ಕೆಲಸ, ಇದಕ್ಕಾಗಿ ವಿದೇಶದಿಂದ ಮತ್ತು ಹೊರರಾಜ್ಯದಿಂದ ಬರುವವರನ್ನು ಕ್ವಾರಂಟೈನ್ ಗೊಳಿಸಬೇಕಾಗಿದ್ದು, ಇದಕ್ಕಾಗಿ ಜಿಲ್ಲೆಯ ಸರಕಾರಿ ಹಾಸ್ಟೆಲ್ ಗಳು, ಖಾಸಗಿ ಹಾಸ್ಟಲ್ ಗಳು ಮತ್ತು ಶಾಲಾ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಮುಂಬಯಿಯಲ್ಲಿ ನೆಲೆಸಿರುವ ಕರಾವಳಿಗರು ತಮ್ಮ ಊರಿಗೆ ಮರಳಲು ಉಡುಪಿ ಜಿಲ್ಲಾಡಳಿತ ಷರತ್ತುಬದ್ಧ ಅನುಮತಿ ನೀಡಿದ್ದು, ಸೇವಾಸಿಂಧುವಿನ ಮೂಲಕ ಅರ್ಜಿ ಸಲ್ಲಿಸಿ, ಪಾಸ್ ಪಡೆದು ಊರಿನಲ್ಲಿ ಕ್ವಾರಂಟೈನ್‌ಗೆ ಒಳಪಡುವವರಿಗೆ ಮಾತ್ರ ಜಿಲ್ಲೆಗೆ ಪ್ರವೇಶಿಸಲು ಅವಕಾಶ ನೀಡಲಾಗಿದೆ. ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ಸಂಸದೆ ಶೋಭಾ ಕರಂದ್ಲಾಜೆ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಕುರಿತು ವಿಶೇಷ ಚರ್ಚೆ ನಡೆದು ಮುಂಬಯಿಯಿಂದ ಆಗಮಿಸುವವರಿಗೆ ಷರತ್ತುಬದ್ಧ ಅನುಮತಿ ನೀಡಲು ಸಭೆ ನಿರ್ಧರಿಸಿತು. ಇವರು ಮೊದಲು 14 ದಿನ ಶಾಲೆ, ಕಾಲೇಜು, ಹಾಸ್ಟೆಲ್‌ಗಳಲ್ಲಿ (ಇಸ್ಟಿಟ್ಯೂಷನಲ್ ಕ್ವಾರಂಟೈನ್) ಕ್ವಾರಂಟೈನ್‌ನಲ್ಲಿರಬೇಕು, ಬಳಿಕ 14 ದಿನ ಹೋಮ್ ಕ್ವಾರಂಟೈನ್‌ನಲ್ಲಿರಬೇಕು. ಶಾಲೆ ಕಾಲೇಜುಗಳಲ್ಲಿ ಉಳಿದುಕೊಳ್ಳಲು ಕಷ್ಟ ಎನ್ನುವವರು ಹಣ ಪಾವತಿಸಿ ಹೊಟೇಲ್ ಲಾಡ್ಜ್ ಗಳಲ್ಲಿ ಉಳಿದುಕೊಳ್ಳಲು ಅವಕಾಶ ನೀಡಲಾಗಿದೆ. ಹೊರ ರಾಜ್ಯಗಳಲ್ಲಿರುವ ಉಡುಪಿ ಜಿಲ್ಲೆಯವರು ಸೇವಾಸಿಂಧು ವೆಬ್ ಸೈಟ್‌ನಲ್ಲಿ ಅರ್ಜಿ ಸಲ್ಲಿಸಿ ಪಾಸ್ ಪಡೆದು ಖಾಸಗಿ ವಾಹನಗಳ ಮೂಲಕ ಜಿಲ್ಲೆ ಪ್ರವೇಶಿಸಬೇಕು. ಗಡಿ ಪ್ರವೇಶಿಸಿದ ನಂತರ…

Read More

ಕುಂದಾಪ್ರ ಡಾಟ್ ಕಾಂ ವರದಿ. ಬೈಂದೂರು, ಮೇ.7: ವಾರದ ಹಿಂದೆ ಬೈಂದೂರು ಭಾಗದ ನಾಗರಿಕರಲ್ಲಿ ಭಾರಿ ಆತಂಕ ಸೃಷ್ಟಿಸಿದ್ದ ‘ಕೋರೋನಾ ಪಾಸಿಟಿವ್’ ಎಂಬ ಸುಳ್ಳುಸುದ್ದಿ ಪ್ರಕರಣಕ್ಕೆ ತಾರ್ಕಿಕ ಅಂತ್ಯ ದೊರೆತಿದೆ. ಮೇ.1ರ ರಾತ್ರಿ ಬೈಂದೂರು ತಾಲೂಕಿನ ಕಳವಾಡಿಗೆ ಬಂದಿದ್ದ ವ್ಯಕ್ತಿಯೋರ್ವನಿಗೆ ಬೆಳಗಾವಿಯಲ್ಲಿ ಮಾಡಲಾಗಿದ್ದ ಕೋರೋನಾ ಟೆಸ್ಟ್ ವರದಿ ನೆಗೆಟಿವ್ ಬಂದಿರುವುದು ಮೇ.2ರಂದು ಖಚಿತವಾಗಿತ್ತು. ಅಷ್ಟರಲ್ಲಾಗಲೇ ಆ ವ್ಯಕ್ತಿಗೆ ಕೊರೋನಾ ಪಾಸಿಟಿವ್ ಇರುವ ವದಂತಿ ಹರಿದಾಡಿದ್ದರಿಂದ ಉಡುಪಿಯಿಂದಲೂ ಪರೀಕ್ಷೆಗೆ ಕಳುಹಿಸಲಾಗಿದ್ದ ಕೋರೋನಾ ಟೆಸ್ಟ್ ವರದಿ ನಿನ್ನೆ ದೊರಕಿದ್ದು, ಅದರಲ್ಲಿಯೂ ಆತನಿಗೆಕೊರೋನಾ ನೆಗೆಟಿವ್ ಇರುವುದು ಖಾತ್ರಿಯಾಗಿದೆ. ಬೆಳಗಾವಿಯ ಕಾನಾಪುರದಿಂದ ಬೈಂದೂರು ಕಳವಾಡಿಯ ಬಂದಿದ್ದ ವ್ಯಕ್ತಿಯೋರ್ವರಿಗೆ, ಬೆಳಗಾವಿಯ ಆಸ್ಪತ್ರೆಯಲ್ಲಿ ಕೋರೋನಾ ಟೆಸ್ಟಿಂಗ್ ವರದಿ ಅಪ್‌ಡೇಟ್ ಮಾಡುವ ಸಂದರ್ಭ ಆಗಿದ್ದ ಯಡವಟ್ಟಿನಿಂದಾಗಿ ಆರೋಗ್ಯ ಸೇತು ಆ್ಯಪ್ ಕೊರೋನಾ ಪಾಸಿಟಿವ್ ಇದೆ ಎಂದು ತೋರಿಸಿತ್ತು ಎನ್ನಲಾಗಿದೆ. ಅದರ ಆಧಾರದ ಮೇಲೆ ಆಸ್ಪತ್ರೆಗೆ ಬಂದಿದ್ದ ವ್ಯಕ್ತಿಯನ್ನು ಕೂಡಲೇ ಆಂಬುಲೆನ್ಸ್ ಮೂಲಕ ಕುಂದಾಪುರದ ಐಸೋಲೇಶನ್ ವಾರ್ಡ್ ಕರೆದೊಯ್ದು ಆತನ ಗಂಟಲು ದ್ರವವನ್ನು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಉಡುಪಿ ಜಿಲ್ಲೆಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರದಲ್ಲಿ, ಸಾರ್ವಜನಿಕ ಆಸ್ಪತ್ರೆಯಲ್ಲಿ ತೆರವು ಇರುವ ೫ ವೈದ್ಯಾಧಿಕಾರಿ ಹುದ್ದೆಗೆ ಎಂ.ಬಿ.ಬಿ.ಎಸ್ ವಿದ್ಯಾರ್ಹತೆಯ ಸಾಮಾನ್ಯ ಕರ್ತವ್ಯದ ವೈದ್ಯಾಧಿಕಾರಿಯವರನ್ನು, ಗುತ್ತಿಗೆ ಆಧಾರದ ಮೇಲೆ ಒಂದು ವರ್ಷದ ಅವಧಿಗೆ ಅಥವಾ ನೇರ ನೇಮಕಾತಿ ಆಗುವವರೆಗೆ/ಖಾಯಂ ವೈದ್ಯರು ವರ್ಗಾವಣೆಯಿಂದ ಹುದ್ದೆ ಭರ್ತಿಯಾದಲ್ಲಿ (ಯಾವುದು ಮೊದಲೂ ಅಲ್ಲಿಯವರೆಗೆ) ನೇಮಕಾತಿ ಮಾಡಲು ಎಂ.ಬಿ.ಬಿ.ಎಸ್ ವಿದ್ಯಾರ್ಹತೆ ಹೊಂದಿರುವ ವೈದ್ಯರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿ ನಮೂನೆಯನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯವರ ಕಚೇರಿ, ಅಜ್ಜರಕಾಡು, ಜಿಲ್ಲಾಸ್ಪತ್ರೆ ಆವರಣ, ಉಡುಪಿ ಇಲ್ಲಿಂದ ಪಡೆಯಬಹುದಾಗಿದೆ. ಅಜಿ ಸಲ್ಲಿಸಲು ಮೇ 21ರ ಸಂಜೆ 5 ಗಂಟೆಯ ಕೊನೆಯ ದಿನಾಂಕವಾಗಿದ್ದು, ಸಂದರ್ಶನ ದಿನಾಂಕದಂದು ಖಾಲಿ ಇರುವ ಹುದ್ದೆಗಳಿಗೆ ಮಾತ್ರ ನೇಮಕಾತಿ ಮಾಡಲಾಗುವುದು. ನೇಮಕಾತಿಗೆ ಸಂಬಂದಿಸಿದ ಮಾಹಿತಿಯನ್ನು , ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ, ಉಡುಪಿ ಜಿಲ್ಲೆ ದೂ.ಸಂ.0820-2536650ನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಶ್ರೀ ರಾಮ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್‌ನಿಂದ ಬೈಂದೂರು ಭಾಗದ ಗೂಡ್ಸ್ ರಿಕ್ಷಾ ಚಾಲಕರಿಗೆ ಆಹಾರ ಸಾಮಾಗ್ರಿಗಳ ಕಿಟ್ ವಿತರಿಸಲಾಯಿತು. ಬೈಂದೂರು ತಹಶಿಲ್ದಾರ್ ಬಸಪ್ಪ ಪೂಜಾರ್ ಕಿಟ್ ವಿತರಿಸಿದರು. ಶ್ರೀ ರಾಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಅಧ್ಯಕ್ಷ ಎಸ್. ರಾಜು ಪೂಜಾರಿ, ಉಪಾಧ್ಯಕ್ಷ ಎಂ. ವಿನಾಯಕ ರಾವ್, ಕಾರ್ಯನಿರ್ವಹಣಾಧಿಕಾರಿ ಸೀತರಾಮ ಮಡಿವಾಳ, ಶಾಖಾ ಪ್ರಬಂಧಕ ನಾಗರಾಜ ಪಿ. ಯಡ್ತರೆ, ಎಸ್‌ಡಿಸಿಸಿ ಬ್ಯಾಂಕ್ ಮೇಲ್ವಿಚಾರಕ ಶಿವರಾಮ ಪೂಜಾರಿ ಯಡ್ತರೆ, ಪತ್ರಕರ್ತ ಸುಬ್ರಹ್ಮಣ್ಯ ಪಡುಕೋಣೆ ಇದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಮನೆಗೆ ತೆರಳುತ್ತಿದ್ದ ಯುವಕನ ಮೇಲೆ ಕ್ಷುಲ್ಲಕ ಕಾರಣಕ್ಕೆ ಯುವಕರ ತಂಡವೊಂದು ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಯಡ್ತರೆ ಜಂಕ್ಷನ್ ಬಳಿ ಬುಧವಾರ ಸಂಜೆಯ ಹೊತ್ತಿಗೆ ನಡೆದಿದೆ. ಯಡ್ತರೆ ಬಾಳೆಹಿತ್ಲು ನಿವಾಸಿ ಬಾಬು ದೇವಾಡಿಗರ ಪುತ್ರ ದಿಲೀಪ್ ಕುಮಾರ್ (24) ಹಲ್ಲೆಗೊಳಗಾದ ವ್ಯಕ್ತಿಯಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಬಾಬು ದೇವಾಡಿಗ ಹಾಗೂ ಅವರ ಪುತ್ರ ದಿಲೀಪ್ ಕುಮಾರ್ ತಮ್ಮ ಹೋಟೆಲ್‌ನಿಂದ ಮನೆಗೆ ತೆರಳುತ್ತಿದ್ದ ವೇಳೆ ಕಾರಿನಲ್ಲಿ ಬಂದ ಆಪಾದಿತ ಸುಕೇಶ್ ಪೂಜಾರಿ, ಆಕಾಶ್ ಪೂಜಾರಿ, ರೋಶನ್, ಶಿವರಾಜ್ ಹಾಗೂ ಕಿರಣ್ ಎನ್ನುವರು ತಲವಾರು ದಾಳಿ ನಡೆಸಿದ್ದಲ್ಲದೇ ರಾಡು ಹಾಗೂ ದೊಣ್ಣೆಯಿಂದ ಥಳಿಸಿ ಕೊಲೆಗೆ ಯತ್ನಿಸಿದ್ದಾರೆ. ಹಲ್ಲೆ ನಡೆಸಿ, ಕೊಲೆ ಬೆದರಿಕೆ ಹಾಕಿದ್ದಾರೆಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ದಿಲೀಪ್ ತಿಳಿಸಿದ್ದಾನೆ. ತಲೆ, ಮುಖ, ದೇಹದ ಮೇಲೆ ಗಂಭೀರ ಗಾಯವಾಗಿದ್ದ ದೀಪಕ್‌ನನ್ನು ಸರಕಾರಿ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗೆ ಕುಂದಾಪುರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬೈಂದೂರು ಪೊಲೀಸರು ತನಿಕೆ…

Read More