ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಮೀನುಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ರಾಜ್ಯವಲಯ ಯೋಜನೆಯಡಿ ನೋಂದಣಿಯಾದ ಮೋಟರೀಕೃತ ದೋಣಿಗಳಲ್ಲಿ 15 ವರ್ಷ ಕಾಲಾವಧಿ ಮೀರಿದ ಹಳೆಯ ಇಂಜಿನ್‌ಗಳನ್ನು ನಿಷ್ಕ್ರೀಯಗೊಳಿಸಿ, ಹೊಸ ಇಂಜಿನ್ ಖರೀದಿಸಲು ಮತ್ತು ಹೊಸದಾಗಿ ಮೋಟರೀಕೃತ ನಾಡದೋಣಿ ನಿರ್ಮಿಸುವವರಿಗೆ ಇಂಜಿನ್ ಖರೀದಿಗೆ ಸಹಾಯಧನ ಸೌಲಭ್ಯ ನೀಡಲಾಗುತ್ತಿದ್ದು, ಯೋಜನೆಯ ಪ್ರಯೋಜನ ಪಡೆಯಲು ಜಿಲ್ಲೆಯ ಅರ್ಹ ಮೀನುಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟಂಬರ್ 30 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರ ಕಚೇರಿ ದೂ.ಸಂಖ್ಯೆ: 0820-2530444, 2954444, ಸಹಾಯವಾಣಿ ಸಂಖ್ಯೆ: 8277200300 ಅಥವಾ ಉಡುಪಿ, ಕುಂದಾಪುರ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ದ್ವಿತೀಯ ಬಿಬಿಎ ವಿದ್ಯಾರ್ಥಿ ಅಬ್ದುಲ್ ಮಲ್ಲಿಕ್, ಆ.30 ಮತ್ತು 31, ರಂದು ದಕ್ಷಿಣ ಭಾರತ ಕರಾಟೆ ಫೆಡರೇಶನ್ ಅವರು ಬೆಂಗಳೂರಿನಲ್ಲಿ ಆಯೋಜಿಸಿದ್ದ ನಾಲ್ಕನೇ ದಕ್ಷಿಣ ಭಾರತ ವಲಯ ಕರಾಟೆ ಚಾಂಪಿಯನ್‌ಶಿಪ್ 2025ರ ಕುಮಿಟೆ 67 ಕೆಜಿ, 21 ವರ್ಷದೊಳಗಿನ ವಿಭಾಗದಲ್ಲಿ ಕಂಚಿನ ಪದಕವನ್ನು ಗೆದ್ದಿದ್ದಾರೆ. ಅವರಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪ ಪ್ರಾಂಶುಪಾಲರು, ದೈಹಿಕ ಶಿಕ್ಷಣ ನಿರ್ದೇಶಕರು, ಉಪನ್ಯಾಸಕ ವೃಂದದವರು ಮತ್ತು ವಿದ್ಯಾರ್ಥಿಗಳು ಶುಭ ಶುಭ ಹಾರೈಸಿದ್ದಾರೆ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೊಪ್ಪ ತಾಲ್ಲೂಕು ಒಕ್ಕಲಿಗರ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಸಮುದಾಯದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಜರುಗಿತು. ಈ ಸಂದರ್ಭದಲ್ಲಿ ಕೊಪ್ಪ ತಾಲೂಕಿನ ಸಕ್ರೆಬೈಲ್ ಗ್ರಾಮೀಣ ಭಾಗದ ಮೂಲದವರಾದ, ಕರಾವಳಿಯಲ್ಲಿ ಸ್ಥಾಪಿತ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹ ಸಂಸ್ಥಾಪಕರಾದ ಅಶ್ವತ್ ಎಸ್.ಎಲ್. ಅವರನ್ನು ಗೌರವಿಸಲಾಯಿತು.“ಮಲ್ನಾಡ್ ಐಕಾನ್” ಎಂದೇ ಗುರುತಿಸಿಕೊಂಡಿರುವ ಅಶ್ವತ್ ಎಸ್.ಎಲ್. ಅವರು ಸ್ಥಾಪಿಸಿದ ಶಿಕ್ಷಣ ಸಂಸ್ಥೆ ಇಂದು ಕೇವಲ ಕರ್ನಾಟಕದಲ್ಲೇ ಅಲ್ಲ, ದೇಶದ ಅನೇಕ ಭಾಗಗಳಿಂದ ವಿದ್ಯಾರ್ಥಿಗಳನ್ನು ಆಕರ್ಷಿಸಿ ಉತ್ತಮ ಶಿಕ್ಷಣ ನೀಡುತ್ತಿರುವುದರಿಂದ ಹೆಸರುವಾಸಿಯಾಗಿದೆ. ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ, ನೈತಿಕ ಮೌಲ್ಯಗಳು ಮತ್ತು ಸ್ಪರ್ಧಾತ್ಮಕ ಮನೋಭಾವ ಬೆಳೆಸುವಲ್ಲಿ ಅವರ ಪಾತ್ರ ಅಪಾರ. ಗ್ರಾಮೀಣ ಪ್ರದೇಶದಲ್ಲಿದ್ದರೂ ಅಂತರಾಷ್ಟ್ರೀಯ ಮಟ್ಟದ ಅವಕಾಶಗಳನ್ನು ಒದಗಿಸುವ ದೃಷ್ಟಿಕೋನ ಅವರನ್ನು ಇತರರಿಂದ ವಿಭಿನ್ನರನ್ನಾಗಿಸಿದೆ. ಈ ಶ್ರೇಷ್ಠ ಸೇವೆಯನ್ನೇ ಶ್ಲಾಘಿಸಿ ಒಕ್ಕಲಿಗ ವಾರ್ಷಿಕ ಮಹಾಸಭೆಯಲ್ಲಿ ಸನ್ಮಾನಿಸಲಾಯಿತುಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, “ನನ್ನ ಸಾಧನೆಗೆ ಮಲೆನಾಡಿನ ಪರಿಸರ ಮತ್ತು ಜನರ ಪ್ರೇರಣೆಯೇ ಕಾರಣ. ಮುಂದಿನ ದಿನಗಳಲ್ಲಿ ಈ ಭಾಗದಲ್ಲೇ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ರಾಜ್ಯಾದ್ಯಂತ ಕುಟುಂಬಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕೈಗೊಳ್ಳಲಿದ್ದು, ಇದಕ್ಕಾಗಿ ಅಗತ್ಯ ಸಿದ್ಧತೆಗಳನ್ನು ವ್ಯವಸ್ಥಿತ ರೀತಿಯಲ್ಲಿ ಮಾಡಿಕೊಳ್ಳುವುದರೊಂದಿಗೆ ಸಮಿಕ್ಷಾ ಕಾರ್ಯವನ್ನು ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಸಂಕೀರ್ಣದ ವೀಡಿಯೋ ಕಾನ್ಫರೆನ್ಸ್ ಸಭಾಂಗಣದಲ್ಲಿ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ರಾಜ್ಯದ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಅಗತ್ಯವಿರುವ ಪೂರ್ವ ಸಿದ್ಧತೆಗಳ ಕುರಿತು ಚರ್ಚಿಸುವ ಸಲುವಾಗಿ ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಎಲ್ಲ ಕುಟುಂಬಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಕೈಗೊಳ್ಳುವ ಪ್ರಕ್ರಿಯೆಯನ್ನು ಆರಂಭಿಸಿದೆ. ಜಿಲ್ಲೆಯಲ್ಲಿ ನಗರ ವ್ಯಾಪ್ತಿಯಲ್ಲಿ 1.05 ಲಕ್ಷ ಹಾಗೂ ಗ್ರಾಮೀಣ ಭಾಗದಲ್ಲಿ 2.14 ಲಕ್ಷ ಸೇರಿದಂತೆ ಒಟ್ಟು ಸುಮಾರು 3.19 ಲಕ್ಷ ಕುಟುಂಬಗಳಿದ್ದು, ಎಲ್ಲ ಕುಟುಂಬಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಆಗಬೇಕು.…
ಕುಂದಾಪ್ರ ಡಾಟ್ ಕಾಂ ಸುದ್ದಿಕೋಟ: ಸ್ವಾತಂತ್ರ್ಯ ಪೂರ್ವದಲ್ಲಿ ಹುಟ್ಟಿಕೊಂಡ ಗಣೇಶೋತ್ಸವ ಈ ದೇಶದ ಐಕ್ಯತೆ ಸಂಕೇತವಾಗಿ ಧಾರ್ಮಿಕ ಪರಂಪರೆಯೊಂದಿಗೆ ವಿಶ್ವಪ್ರಸಿದ್ಧಿಯಾಗಿದೆ ಎಂದು ಸಾಹಿತಿ ಎ.ಎಸ್.ಎನ್ ಹೆಬ್ಬಾರ್ ಹೇಳಿದರು. ಅವರು ಕೋಟದ ಅಮೃತೇಶ್ವರೀ ದೇಗುಲದಲ್ಲಿ ಕೋಟದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಸುವರ್ಣ ಸಂಭ್ರಮದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಹಿರಿಯರು ಕಟ್ಟಿಕೊಟ್ಟು ಈ ಹಬ್ಬ ಹರಿದಿನಗಳು ನಮ್ಮನ್ನು ಶ್ರೀಮಂತಗೊಳಿಸಿದೆ, ನಮ್ಮಲ್ಲಿರುವ ಸಾಂಸ್ಕೃತಿಕ ಪರಂಪರೆ, ಭಗವದ್ಗೀತೆಯಂತಹ ಕೃತಿಗಳು ವಿಶ್ವಸಂದೇಶಕ್ಕೆ ಸಾಕ್ಷಿಯಾಗಿದೆ. ಭಾರತವನ್ನು ಬಗ್ಗು ಬಡಿಯುವ ತಂತ್ರ ಹುನ್ನಾರ ಎಸೆಗಿದ ಅಮೇರಿಕಾದಂತ ದೈತ್ಯ ದೇಶಗಳಿಗೆ ಗುದ್ದು ನೀಡುವ ಮಟ್ಟಕ್ಕೆ ಈ ಭಾರತ ಎದ್ದು ನಿಂತಿದೆ ಎಂದರು. ಸಭೆಯಲ್ಲಿ ಸುವರ್ಣ ಮಹೋತ್ಸವದ ಅಂಗವಾಗಿ ಐವತ್ತು ಜನ ಸ್ಥಳೀಯ ಸಾಧಕರಿಗೆ ಸುವರ್ಣ ಸಂಭ್ರಮದ ಸನ್ಮಾನ ನೀಡಿ ಗೌರವಿಸಲಾಯಿತು. ಕೋಟ ದೊಡ್ಡ ಗಣೇಶನಿಗೆ ಬೆಳ್ಳಿ, ಚಿನ್ನದ ಆಭರಣಗಳ ಪರಿಕರ ನೀಡಿದ ದಾನಿಗಳನ್ನು ಗೌರವಿಸಲಾಯಿತು. ಸುವರ್ಣ ಸಂಭ್ರಮದ ಸಾರ್ಥಕ ಶ್ರಮಜೀವಿಗಳಿಗೆ ಅಭಿನಂದಿಸಲಾಯಿತು. ಕೋಟ ಪಡುಕರೆ ಲಕ್ಷ್ಮೀ ಸೋಮ ಬಂಗೇರ ಸರಕಾರಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪದವಿಪೂರ್ವ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ ಆಯೋಜಿಸಿದ ಜಿಲ್ಲಾಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾವಳಿಯಲ್ಲಿ ಜನತಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿ.ಯು.ಸಿ.ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಮರಿಯಾ ವೈಯೊಲ ಬರೆಟ್ಟೋ ಜಿಲ್ಲಾ ಮಟ್ಟದಲ್ಲಿ ವಿಜೇತಳಾಗಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ. ವಿದ್ಯಾರ್ಥಿನಿಯ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ,ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: 2025-26ನೇ ಸಾಲಿನ ಉಡುಪಿ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಬೈಂದೂರು ವಲಯದ ಕಂಚಿಕಾನು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ತಿಮ್ಮಪ್ಪ ಗಾಣಿಗ ತಗ್ಗರ್ಸೆ ಅವರು ಆಯ್ಕೆಯಾಗಿರುತ್ತಾರೆ. ಅವರು ಕಾರ್ಕಳ ತಾಲೂಕಿನ ಜೋಗುಳ ಬೆಟ್ಟು, ಬೈಂದೂರು ವಲಯದ ಕೋಯಾನಗರ, ನಾಯ್ಕನಕಟ್ಟೆ, ಬೈಂದೂರು ಶಾಲೆಗಳಲ್ಲಿ 25 ವರ್ಷ ಸಹಶಿಕ್ಷಕರಾಗಿ, ತಗ್ಗರ್ಸೆ ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ 6 ವರ್ಷಗಳ ಕಾಲ ಸೇವೆ ಸಲ್ಲಿಸಿರುತ್ತಾರೆ. ಪ್ರಸ್ತುತ ಕಳೆದ 4 ವರ್ಷಗಳಿಂದ ಕಂಚಿಕಾನು ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಒಟ್ಟು 35 ವರ್ಷಗಳ ಸೇವೆಯಲ್ಲಿ ಉತ್ತಮ ತರಗತಿ ಶಿಕ್ಷಕರಾಗಿ , ಮುಖ್ಯ ಶಿಕ್ಷಕರಾಗಿ ಶಾಲೆಯ ಅಭಿವೃದ್ಧಿಗಾಗಿ ಶ್ರಮಿಸಿರುತ್ತಾರೆ . ಅವರು ಸಂಪನ್ಮೂಲ ವ್ಯಕ್ತಿಯಾಗಿ, ಉತ್ತಮ ಕಾರ್ಯಕ್ರಮ ನಿರೂಪಕರಾಗಿ, ಸೇವೆ ಸಲ್ಲಿಸಿದ ಶಾಲೆಗಳಲ್ಲಿ ಮತ್ತು ಬೇರೆ ಬೇರೆ ಶಾಲೆಗಳ ಮಕ್ಕಳಿಗಾಗಿ ಅನೇಕ ನಾಟಕಗಳನ್ನು ರಚಿಸಿ, ನಿರ್ದೇಶಿಸಿ ರಂಗದಲ್ಲಿ ಪ್ರದರ್ಶಿಸಿ ಮಕ್ಕಳಿಗೆ ರಂಗ ಕಲೆಯಲ್ಲಿ ಆಸಕ್ತಿ ಮೂಡಿಸಿರುತ್ತಾರೆ. ಯಕ್ಷಗಾನ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಪತ್ರಿಕೋದ್ಯಮ ಮತ್ತು ಇಂಗ್ಲಿಷ್ ವಿಭಾಗಗಳು, ರಾಷ್ಟ್ರೀಯ ಸೇವಾ ಯೋಜನೆ ಮತ್ತು ಎಸ್.ಎಸ್.ಎಲ್ ಇಂಡಿಯಾ ಇವರು ಸಹಯೋಗದಲ್ಲಿ ಭಾರತ ಮತ್ತು ಜರ್ಮನಿಯ ಸಾಂಸ್ಕೃತಿಕ ವಿನಿಮಯ ಕಾರ್ಯಕ್ರಮವು ಬುಧವಾರ ನಡೆಯಿತು. ಈ ಸಂದರ್ಭದಲ್ಲಿ ಪರಸ್ಪರ ಜರ್ಮನ್ ಮತ್ತು ಭಂಡಾರ್ಕಾರ್ಸ್ ಕಾಲೇಜಿನ ವಿದ್ಯಾರ್ಥಿಗಳು ತಮ್ಮ ಸಾಂಪ್ರದಾಯಿಕ, ಸಾಂಸ್ಕೃತಿಕ ವಿಚಾರ ವಿನಿಮಯ ಮಾಡಿಕೊಂಡರು. ಪರಸ್ಪರ ಸಂಸ್ಕೃತಿಗಳ ಶೈಕ್ಷಣಿಕ, ಆರೋಗ್ಯ, ಆಹಾರ, ಕಲೆ ಮತ್ತು ಸಂಸ್ಕೃತಿಗಳ ಕುರಿತು ವೈಶಿಷ್ಟ್ಯವಾಗಿ ಪರಿಚಯಿಸಿ ವಿನಿಮಯ ಮಾಡಿಕೊಂಡರು. ಈ ಸಂದರ್ಭದಲ್ಲಿ ಎಫ್. ಎಲ್ ಇಂಡಿಯಾ ಇದರ ಉಪನಿರ್ದೇಶಕ ರಾಗ್ಲ್ಯಾಂಡ್ ಅವರು ಕಾರ್ಯಕ್ರಮದ ರೂಪುರೇಷೆಗಳನ್ನು ತಿಳಿಸಿದರು. ಎಫ್.ಎಸ್.ಎಲ್ ಇಂಡಿಯಾ ಇದರ ಮುಖ್ಯ ಸಂಯೋಜಕಿ ನಾಗರತ್ನ, ಎಲ್.ಟಿ.ವಿ ವಿಭಾಗದ ದಿನೇಶ್ ಮತ್ತು ಶರಣ್ ಪೌಲ್ ವಿವಿಧ ಚಟುವಟಿಕೆಗಳನ್ನು ಮಾಡಿಸಿದರು. ರೇಡಿಯೋ ಕುಂದಾಪ್ರ ಇದರ ಕಾರ್ಯಕ್ರಮ ನಿರೂಪಕಿ ಉಪಸ್ಥಿತರಿದ್ದರು. ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥೆ ಸುಮಲತಾ ನಾಯ್ಕ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಆದಿವಾಸಿ ನಾಯಕ ಬಿರ್ಸಾ ಮುಂಡಾ ಅವರ ಜನ್ಮ ದಿನದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಜಾರ್ಖಂಡ್‌ನಲ್ಲಿ ಪಿಎಂ ಜನಮನ್ ಯೋಜನೆಗೆ ಚಾಲನೆ ನೀಡಿದ್ದರು. ಈ ಯೋಜನೆಯ ಮೂಲಕ ಆದಿವಾಸಿ ಸಮುದಾಯದ ಅಭಿವೃದ್ಧಿ, ಮೂಲಸೌಕರ್ಯಗಳಿಗೆ ಒತ್ತು ನೀಡುವ ಕೆಲಸ ಆಗುತ್ತಿದೆ. ರೂ.198.48ಲಕ್ಷ ವೆಚ್ಚದಲ್ಲಿ ಇಲ್ಲಿ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾಗಿದೆ. ಈ ಭಾಗದಲ್ಲಿ ರಸ್ತೆ ಅಭಿವೃದ್ಧಿಗೆ ದೊಡ್ಡ ಮೊತ್ತ ಇಲ್ಲಿಗೆ ಲಭಿಸಿದೆ ಎಂದು ಸಂಸದ ಬಿ. ವೈ.ರಾಘವೇಂದ್ರ ಹೇಳಿದರು. ಅವರು ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯ, ಬೈಂದೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಪ್ರಧಾನಮಂತ್ರಿ ಜನ್‌ಜಾತಿ ಆದಿವಾಸಿ ನ್ಯಾಯಾ ಮಹಾ ಅಭಿಯಾನ್ ಯೋಜನೆಯಡಿಯಲ್ಲಿ ಮಂಜೂರಾಗಿರುವ ಕಾಮಗಾರಿ ಎಲ್ 023 ಆತ್ರಾಡಿ ಪಿ.ವಿ.ಟಿ.ಜಿ ಹ್ಯಾಮ್ಲೆಟ್ ರಸ್ತೆ ಅಭಿವೃದ್ದಿ ಕಾಮಗಾರಿಗಳಿಗೆ ರೂ. 198.48ಲಕ್ಷ ಮಂಜೂರಾಗಿದ್ದು ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು. ಬೈಂದೂರು ಕ್ಷೇತ್ರದಲ್ಲಿ ಪಿಎಂ ಜನಮನ್ ಯೋಜನೆಯಲ್ಲಿ ರೂ.4.89 ಕೋಟಿ ವೆಚ್ಚದಲ್ಲಿ ರಸ್ತೆ ನಿರ್ಮಾಣವಾಗುತ್ತಿದೆ. ರೂ.1.80 ಕೋಟಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಿ.ಬಿ.ಎಸ್.ಇ ಬೋರ್ಡ್ ಹಾಗೂ ಪಿ.ಎಸ್.ಎಸ್.ಇ.ಎಂ.ಆರ್ ಶಾಲೆ ದಾವಣಗೆರೆ ಆಯೋಜಿಸಿರುವ ರಾಜ್ಯಮಟ್ಟದ ಸಿಬಿಎಸ್ಇ ಶಾಲಾ ಅಥ್ಲೆಟಿಕ್ಸ್ ಸ್ಪರ್ಧೆಯಲ್ಲಿ ಕುಂದಾಪುರ ಟ್ರ್ಯಾಕ್ ಅಂಡ್ ಫೀಲ್ಡ್ ಕ್ರೀಡಾಪಟು ಧನ್ವೀನ್ ರಾಮಕೃಷ್ಣ ಪೂಜಾರಿ ಅವರು ಹದಿನಾಲ್ಕು ವರ್ಷದ ಒಳಗಿನ ಬಾಲಕರ ವಿಭಾಗದ ಉದ್ದ ಜಿಗಿತ ಸ್ಪರ್ಧೆಯಲ್ಲಿ ಕಂಚಿನ ಪದಕವನ್ನು ಗೆದ್ದುಕೊಂಡಿದ್ದಾರೆ. ವಿಜೇತ ಕ್ರೀಡಾಪಟುವಿಗೆ ಕುಂದಾಪುರ ಟ್ರ್ಯಾಕ್ ಅಂಡ್ ಫೀಲ್ಡ್ ಅಥ್ಲೆಟಿಕ್ಸ್ ಅಕಾಡೆಮಿಯ ಮುಖ್ಯಸ್ಥ ಪ್ರಶಾಂತ್ ಶೆಟ್ಟಿಯವರು ಅಭಿನಂದನೆ ತಿಳಿಸಿದ್ದಾರೆ
