ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರದ ಮುಖ್ಯರಸ್ತೆಯ ರಥಬೀದಿಯಲ್ಲಿ ಸೋಮವಾರ ನಸುಕಿನ ಜಾವ ಭೀಕರ ಅಗ್ನಿ ಅವಘಡ ನಡೆದಿದ್ದು, ಕೋಟ್ಯಂತರ ರೂ.ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ. ಅಗ್ನಿ ದುರಂತದಲ್ಲಿ ಪಟಾಕಿ, ಪುಸ್ತಕದಂಗಡಿ, ಪೂಜಾ ಸಾಮಾಗ್ರಿಗಳ ಅಂಗಡಿ, ಆಯುರ್ವೇದ ವಸ್ತುಗಳ ಅಂಗಡಿ, ಎಲೆಕ್ಟ್ರಾನಿಕ್ಸ್ ಅಂಗಡಿ ಮೂರು ಅಂಗಡಿಗಳು ಸಂಪೂರ್ಣ ಧ್ವಂಸವಾದರೆ, ಮತ್ತೊಂದು ಪೂಜಾ ಸಾಮಗ್ರಿ ಅಂಗಡಿ ಅರ್ಧ ಧ್ವಂಸಗೊಂಡಿದೆ. ಕುಂದಾಪುರದ ಪೇಟೆ ಶ್ರೀ ವೇಂಕಟರಮಣ ದೇವಸ್ಥಾನದ ಮುಂಭಾಗದಲ್ಲಿರುವ ರಥಬೀದಿಯಲ್ಲಿ ಪ್ರಸಿದ್ದ ಪುಸ್ತಕದಂಗಡಿ, ಆಯುರ್ವೇದ ವಸ್ತುಗಳ ಅಂಗಡಿ, ಪಟಾಕಿ ಅಂಗಡಿ, ಪೂಜಾ ಸಾಮಾಗ್ರಿಗಳ ಅಂಗಡಿ ಬೆಂಕಿಗಾಹುತಿಯಾಗಿದೆ. ಒಂದು ಅಂಗಡಿಯ ಮೇಲ್ಬಾಗದಲ್ಲಿ ಸೋಮವಾರ ನಸುಕಿನ ಜಾವ ಸುಮಾರ 3.30 ಗಂಟೆಗೆ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹತ್ತಿಕೊಂಡಿದೆ ಎಂದು ಅಂದಾಜಿಸಲಾಗಿದೆ. ಇದನ್ನು ಗಮನಿಸಿದ ರಾತ್ರಿ ಕಾವಲುಗಾರ ಸ್ಥಳೀಯರೊಬ್ಬರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಅಗ್ನಿಶಾಮಕ ದಳ ಹಾಗೂ ಅಂಗಡಿ ಮಾಲಿಕರಿಗೆ ಮಾಹಿತಿ ನೀಡಲಾಗಿತ್ತು. ಅಗ್ನಿಶಾಮಕ ದಳ ಸ್ಥಳಕ್ಕೆ ಬರುವ ಅರ್ಧ ಘಂಟೆ ಸಮಯದಲ್ಲಿ ಅಂಗಡಿಗಳು ಬಹುತೇಕ ಹೊತ್ತಿ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತೆಂಗಿನಕಾಯಿ ಕೊಯ್ಯುವ ಕೆಲಸಕ್ಕೆ ಹೋದಾಗ ಯುವಕ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ತಾಲೂಕಿನ ಕೊರ್ಗಿಯಲ್ಲಿ ನಡೆದಿದೆ. ಕೂಲಿ ಕಾರ್ಮಿಕ ಸಂದೀಪ (30) ಮೃತಪಟ್ಟವರು. ಅವರು ಡಿ. 27ರ ಸಂಜೆ ತೋಟವೊಂದಕ್ಕೆ ತೆಂಗಿನ ಕಾಯಿ ಕೊಯ್ಯುವ ಕೆಲಸಕ್ಕೆ ಹೋದವರು ನಿಂತಲ್ಲೇ ಕುಸಿದುಬಿದ್ದು ಸಾವನ್ನಪ್ಪಿದ್ದಾರೆ. ಬಿದ್ದಿರುವ ಅವರು ಉಸಿರಾಡಲು ಕಷ್ಟಪಡುತ್ತಿರುವುದನ್ನು ಗಮನಿಸಿದ ಜತೆಗಿದ್ದವರು ಕೂಡಲೇ ಕುಂದಾಪುರದ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋದರು. ಪರೀಕ್ಷಿಸಿದ ವೈದ್ಯರು ಅದಾಗಲೇ ಸಾವನ್ನಪ್ಪಿರುವುದಾಗಿ ತಿಳಿಸಿದರು. ಈ ಬಗ್ಗೆ ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸರಕಾರಿ ಪದವಿ ಪೂರ್ವ ಕಾಲೇಜು ಹೆಬ್ರಿಯಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯ ಕನ್ನಡ ಕಂಠಪಾಠ ಸ್ಪರ್ಧೆಯಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ 7ನೇ ತರಗತಿಯ ವಿದ್ಯಾರ್ಥಿನಿ ಷಷ್ಟಿ ಎ. ಭಟ್ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಅವರಿಗೆ, ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಪಂಚವರ್ಣ ಯುವಕ ಮಂಡಲ ಕೋಟ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ಇದರ ನೇತೃತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ಮಣೂರು ಫ್ರೆಂಡ್ಸ್, ಸಮುದ್ಯತಾ ಗ್ರೂಪ್ಸ್ ಕೋಟ ಇವರ ಸಹಯೋಗದೊಂದಿಗೆ ಕೋಟತಟ್ಟು ಗ್ರಾಮ ಪಂಚಾಯತ್ ಸಂಯೋಜನೆಯೊಂದಿಗೆ 285ನೇ ಭಾನುವಾರದ ಪರಿಸರಸ್ನೇಹಿ ಬೀಚ್ ಕ್ಲಿನಿಂಗ್ ಕಾರ್ಯಕ್ರಮ ಕೋಟತಟ್ಟು ಪಡುಕರೆ ಶಿರಸಿಮಾರಿಯಮ್ಮ ಕಡುವಿನ ಬಾಗಿಲು ಇಲ್ಲಿ ಜರಗಿತು. ಕಾರ್ಯಕ್ರಮವನ್ನು ಕೋಟತಟ್ಟು ಗ್ರಾಮಪಂಚಾಯತ್ ಮಾಜಿ ಸದಸ್ಯೆ ಸುಜಾತ ಉದಯ್ ತಿಂಗಳಾಯ ಚಾಲನೆ ನೀಡಿದರು. ಪಂಚವರ್ಣ ಯುವಕ ಮಂಡಲದ ನಿಕಟಪೂರ್ವ ಅಧ್ಯಕ್ಷ ಅಜಿತ್ ಆಚಾರ್, ಗಿರೀಶ್ ಆಚಾರ್, ಉಪಾಧ್ಯಕ್ಷ ದಿನೇಶ್ ಆಚಾರ್, ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ, ಸಾಂಸ್ಕೃತಿಕ ಕಾರ್ಯದರ್ಶಿ ಶ್ಯಾಮಲ ಸಿ. ಪುತ್ರನ್ ಮತ್ತಿತರರು ಇದ್ದರು. ಕಾರ್ಯಕ್ರಮವನ್ನು ಸಲಹಾ ಸಮಿತಿಯ ರವೀಂದ್ರ ಕೋಟ ಸಂಯೋಜಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಬಿಜೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯ ಅಭಿನಯ ಗೀತೆ ಸ್ಪರ್ಧೆಯಲ್ಲಿ ಭಾಗವಹಿಸಿದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕುಡೂರು ಎಲ್ಲೂರು ಶಾಲೆಯ 5ನೇ ತರಗತಿಯ ವಿದ್ಯಾರ್ಥಿನಿ ರಚಿತಾ ಶೆಟ್ಟಿ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಈಕೆ ಹೊಲಾರ್ ಗೊಳಿಹೊಳೆಯ ಭಾರತಿ ಮತ್ತು ಚಂದ್ರ ಶೆಟ್ಟಿ ಅವರ ದಂಪತಿಯ ಪುತ್ರಿ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ತಾಲೂಕು ಕೇಂದ್ರದ ಅಭಿವೃದ್ಧಿಯ ದೂರದೃಷ್ಟಿಯಲ್ಲಿ ಸುಸಜ್ಜಿತ ಬಸ್ ನಿಲ್ದಾಣ ಉದ್ಘಾಟನೆಯಾಗಿದ್ದು ಜನರ ಬೇಡಿಕೆಯಂತೆ ಶೀಘ್ರ ಸುಸಜ್ಜಿತ ಬಸ್ ಡಿಪೋ ನಿರ್ಮಾಣ ಮಾಡುವುದಾಗಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು. ಅವರು ಬೈಂದೂರು ಕೆ.ಎಸ್.ಆರ್.ಟಿ.ಸಿ ನೂತನ ಬಸ್ ನಿಲ್ದಾಣ ಉದ್ಘಾಟಿಸಿ ಮಾತನಾಡಿದರು. ನೂತನ ಬಸ್ ನಿಲ್ದಾಣಕ್ಕೆ ಕೊಲ್ಲೂರು ಮೂಕಾಂಬಿಕಾ ಎಂದು ನಾಮಕರಣ ಮಾಡಲು ಪ್ರಯತ್ನಿಸಲಾಗುವುದು ಎಂದರು. ಶಾಸಕ ಗುರುರಾಜ ಗಂಟಿಹೊಳೆ ಅಧ್ಯಕ್ಷತೆ ವಹಿಸಿದ್ದರು. ವಿ. ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಅಶೋಕ್ ಕುಮಾರ್ ಕೊಡವೂರು, ಮೋಹನ್ ಪೂಜಾರಿ, ಬಾಬು ಶೆಟ್ಟಿ ಗಿರೀಶ್ ಬೈಂದೂರು, ರಾಜುಪೂಜಾರಿ ಮುಂತಾದವರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ : ಕೆಲವೊಂದು ಸಂಘ ಸಂಸ್ಥೆಗಳು ಬೇರೆ ಬೇರೆ ಉದ್ದೇಶಗಳನ್ನು ಇಟ್ಟುಕೊಂಡು ಕಾರ್ಯಕ್ರಮ ಆಯೋಜಿಸಿ ಹಣ ಸಂಗ್ರಹಿಸುವ ಕೆಲಸ ಮಾಡುತ್ತಿದ್ದರೆ, ಗಂಗೊಳ್ಳಿಯ ಶ್ರೀ ರಾಘವೇಂದ್ರ ಸ್ಪೋರ್ಟ್ಸ್ ಕ್ಲಬ್ನ ಸದಸ್ಯರು ತಾವೇ ಹಣವನ್ನು ಹಾಕಿ ಉತ್ತಮ ಕಾರ್ಯಕ್ರಮಗಳನ್ನು ಸಮಾಜಕ್ಕೆ ನೀಡುವ ಮೂಲಕ, ತಾವೂ ಬೆಳೆದು ಸಮಾಜಕ್ಕೂ ಕೊಡುಗೆ ನೀಡುತ್ತಿರುವುದು ಶ್ಲಾಘನೀಯ ಎಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಆಡಳಿತ ಧರ್ಮದರ್ಶಿ ಕೆ. ಬಾಬು ಹೆಗ್ಡೆ ಹೇಳಿದರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯ ವಠಾರದಲ್ಲಿ ಗುರುವಾರ ಜರಗಿದ ಶ್ರೀ ರಾಘವೇಂದ್ರ ಸ್ಪೋರ್ಟ್ಸ್ ಕ್ಲಬ್ ಗಂಗೊಳ್ಳಿ ಇದರ ಸುವರ್ಣ ಮಹೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಮುಖ್ಯ ಅತಿಥಿಯಾಗಿದ್ದ ಕುಂದಾಪುರ ಚಿನ್ಮಯಿ ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ. ಉಮೇಶ ಪುತ್ರನ್ ಮಾತನಾಡಿ, ಕ್ರೀಡೆಯಲ್ಲಿ ಅಭಿವೃದ್ಧಿ ಹೊಂದಬೇಕಿದ್ದರೆ ದೇಶ ಅಭಿವೃದ್ಧಿ ಹೊಂದಬೇಕು. ಇತ್ತೀಚಿನ ದಿನಗಳಲ್ಲಿ ನಮ್ಮ ದೇಶದಲ್ಲಿ ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹ ದೊರೆಯುತ್ತಿದೆ. ಆದರೆ ದೇಶದಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬ್ರಹ್ಮಾವರ: ಗ್ರಾಮಾಭಿವೃದ್ಧಿ ಮತ್ತು ಸ್ವ ಉದ್ಯೋಗ ತರಬೇತಿ (ರುಡ್ ಸೆಟ್) ಸಂಸ್ಥೆ ಬ್ರಹ್ಮಾವರ ಇವರ ಆಶ್ರಯದಲ್ಲಿ ಕಂಪ್ಯೂಟರೈಸ್ಡ್ ಅಕೌಂಟಿಂಗ್ ತರಬೇತಿಯ ಉದ್ಘಾಟನಾ ಸಮಾರಂಭವು ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಮಾತನಾಡಿದ ಬ್ರಹ್ಮಾವರ ಎಸ್ ಎಂ ಎಸ್ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಭರತ್ ರಾಜ್ ಅವರು, ರುಡ್ ಸೆಟ್ ಸಂಸ್ಥೆಯ ಅಭೂತ ಪೂರ್ವ ಕಾರ್ಯ ಚಟುವಟಿಕೆಯನ್ನು ಶ್ಲಾಘಿಸಿಕೊಂಡು, ಸಂಸ್ಥೆಯ ಮುಖಾಂತರ ಅವರು ಪಡೆದ ಅನುಭವವನ್ನು ಕೂಡ ಶಿಬಿರಾರ್ಥಿಗಳೊಂದಿಗೆ ಹಂಚಿಕೊಂಡರು. ಹಾಗೆಯೇ ಸ್ವಂತ ದುಡಿಮೆಯ ಮಹತ್ವವನ್ನು, ಸ್ವಾವಲಂಬಿ ಬದುಕಿನ ಮೌಲ್ಯವನ್ನು, ಅದರ ಅಗತ್ಯತೆಯನ್ನು ತನ್ನ ಸ್ವಂತ ಜೀವನದ ಅನುಭವವನ್ನು ಹಂಚಿಕೊಳ್ಳುವ ಮುಖಾಂತರ ಶಿಬಿರಾರ್ಥಿಗಳನ್ನು ಹುರಿದುಂಬಿಸಿದರು. ಕಂಪ್ಯೂಟರ್ ಕೌಶಲ್ಯವನ್ನು ಕರಗತ ಮಾಡಿಕೊಳ್ಳುವುದು ಈಗಿನ ಹಾಗೂ ಮುಂದಿನ ವಿದ್ಯಮಾನದಲ್ಲಿ ಬಹು ಅಗತ್ಯವಾಗಿ ಅರಿತುಕೊಳ್ಳಬೇಕಾಗಿರುವಂತಹ ವಿಷಯ. ಹಾಗಾಗಿ ಛಲದಿಂದ ಹಿಡಿದ ಕೆಲಸವನ್ನು ಬಿಡದೆ, ಮುಂದುವರಿಯಿರಿ. ಸಮಾಜದಲ್ಲಿ ಯಶಸ್ವಿ ವ್ಯಕ್ತಿಗಳಾಗಿ ಎಂದು ಹೇಳಿ ಶಿಬಿರಾರ್ಥಿಗಳಿಗೆ ಶುಭ ಹಾರೈಸಿದರು. ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ರುಡ್ ಸೆಟ್ ಸಂಸ್ಥೆಯ ನಿರ್ದೇಶಕರಾದ ಡಾ. ಬೊಮ್ಮಯ್ಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಆಧುನಿಕ ತಂತ್ರಜ್ಞಾನ ಯುಗದಲ್ಲಿ ದಿನಕ್ಕೆ ಹೊಸ ಹೊಸ ಆವಿಷ್ಕಾರಗಳಾಗುತ್ತಿದೆ. ಕೆಲವು ಹೊಸ ತಾಂತ್ರಿಕ ಜ್ಞಾನವು ಮನುಷ್ಯನ ಬದುಕಿಗೆ ಮಾರಕವಾಗುತ್ತಿವೆ ಎಂದು ಉಡುಪಿ ಮಹಾತ್ಮ ಗಾಂಧಿ ಮೆಮೋರಿಯಲ್ ಸಂಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ದೇವಿದಾಸ ನಾಯಕ್ ಹೇಳಿದರು. ಅವರು ಶನಿವಾರ ಇಲ್ಲಿನ ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. ಇಂದಿನ ದಿನಗಳಲ್ಲಿ ನಾವು ಉಪಯೋಗಿಸುವ ಹೊಸ ತಂತ್ರಜ್ಞಾನವನ್ನು ಒಳ್ಳೆಯ ಉದ್ದೇಶಕ್ಕೆ ಬಳಸಬೇಕು. ಆದರೆ ಅದನ್ನು ವಿರುದ್ಧ ನೆಲೆಯಲ್ಲಿ ಉಪಯೋಗಿಸಿದರೆ ವೈಯಕ್ತಿಕ ಮತ್ತು ಸಾಮಾಜಿಕ ದೃಷ್ಟಿಯಲ್ಲಿಯೂ ಮಾರಕವಾದ ಪರಿಣಾಮ ಬೀರುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು. ಪ್ರಸ್ತುತದ ಯುಗದಲ್ಲಿ ನಮ್ಮ ಯುವಜನತೆಗೆ ಜೀವನ ಮೌಲ್ಯಗಳು ಅಗತ್ಯವಾಗಿ ಬೇಕಾಗಿದೆ. ಅದಕ್ಕೆ ಪೂರಕವಾಗಿ ಸತತ ಪ್ರಯತ್ನ, ಶಿಸ್ತು ಬದ್ಧತೆ ಮತ್ತು ಸಮಗ್ರತೆ ಈ ಮೂರು ಅಂಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಅತ್ಯುತ್ತಮ ಸಾಧನೆ ಮಾಡಲು ಸಾಧ್ಯವಾಗುತ್ತದೆ. ಯಶಸ್ವೀ ಸಾಧನೆಯ ಮೂಲಕ ಸಮಾಜಕ್ಕೆ ನಿಮ್ಮ ಅತ್ಯುತ್ತಮ ಕೊಡುಗೆಯನ್ನು ನೀಡಬೇಕು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಪ್ರತಿಷ್ಠಿತ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ದ್ವಿತೀಯ ಮತ್ತು ತೃತೀಯ ವರ್ಷದ ಬಿ.ಕಾಂ. ಸಿ.ಎ., ಸಿ.ಎಸ್. ಹಾಗೂ ಸಿ.ಎಮ್.ಎ ವೃತ್ತಿಪರ ಕೋರ್ಸ್ನ ವಿಭಾಗದ ವಿದ್ಯಾರ್ಥಿಗಳಿಗೆ ಬ್ರಹ್ಮಾವರದ ಹ್ಯಾಂಗ್ಯೋ ಐಸ್ಕ್ರೀಮ್ ಪ್ರೈವೇಟ್ ಲಿಮಿಟೆಡ್ ಮತ್ತು ಉದಯವಾಣಿ ದಿನಪತ್ರಿಕೆ ಮಣಿಪಾಲಕ್ಕೆ ಕೈಗಾರಿಕಾ ಭೇಟಿ ಮತ್ತು ಕಲಿಕಾ ಪ್ರವಾಸ ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಹ್ಯಾಂಗ್ಯೋ ಐಸ್ಕ್ರೀಮ್ ಬ್ರಹ್ಮಾವರದ ಮ್ಯಾನೇಜರ್ರಾದ ಸುರೇಶ್ ಪೈ ವಿದ್ಯಾರ್ಥಿಗಳಿಗೆ ಐಸ್ಕ್ರೀಮ್ ತಯಾರಿಕೆ ಮತ್ತು ಅದರ ಸಾಗಾಣಿಕೆ ಕುರಿತು ವಿಸ್ತಾರವಾದ ಮಾಹಿತಿ ನೀಡಿದರು. ಹಾಗೆಯೇ ಮಣಿಪಾಲದ ಉದಯವಾಣಿ ದಿನಪತ್ರಿಕೆ ತಯಾರಿಯ ಪ್ರೆಸ್ಗೆ ಭೇಟಿ ನೀಡಿದ್ದು, ರೆಸಿಡೆಂಟ್ ಎಡಿಟರ್ ಕೃಷ್ಣ ಭಟ್ ಮತ್ತು ಸೀನಿಯರ್ ಪ್ರೊಡಕ್ಷನ್ ಮ್ಯಾನೇಜರ್ ನಾಗರಾಜ್ ಭಂಡಾರಿ ಅವರು ದಿನಪತ್ರಿಕೆಗಳ ಮುದ್ರಣ, ದತ್ತಾಂಶಗಳ ವ್ಯವಸ್ಥಿತ ಸಂಗ್ರಹಣೆ ಮತ್ತು ಅವುಗಳ ಸಾಗಾಣಿಕೆಯ ಬಗ್ಗೆ ವಿಸ್ತಾರವಾದ ಮಾಹಿತಿ ನೀಡಿದರು. ಕಾಲೇಜಿನ ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಸತೀಶ್ ಕಾಂಚನ್, ಶ್ವೇತಾ ಭಂಡಾರಿ…
