ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕುಂದಾಪ್ರ ಭಾಷೆ ಹಾಗೂ ಬದುಕಿನ ಸೊಗಡನ್ನು ಮುಂದಿನ ತಲೆಮಾರಿಗೆ ನೀಡಲು ಪ್ರತಿಯೊಬ್ಬರು ಶ್ರಮಿಸಬೇಕಿದೆ ಎಂದು ಸಾಹಿತಿ, ಶಿಕ್ಷಕ ಕುಂದಗನ್ನಡ ಭಾಷಾ ಜ್ಞಾನಿ ನರೇಂದ್ರ ಕುಮಾರ್ ಕೋಟ ಕರೆ ನೀಡಿದರು. ಅವರು ಕೋಟದ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಮಾತೃ ಸಂಸ್ಥೆ ಪಂಚವರ್ಣ ಯುವಕ ಮಂಡಲದ ಮಾರ್ಗದರ್ಶನದಲ್ಲಿ ಇದೇ ಬರುವ ಅ. ೧೦ರಂದು ಹಂದಟ್ಟು ಗೆಳೆಯರ ಬಳಗ ದಾನಗುಂದು ಸಭಾಂಗಣದಲ್ಲಿ ನಾಲ್ಕನೇ ವರ್ಷದ ಆಸಾಡಿ ಒಡ್ರ್ ಕಾರ್ಯಕ್ರಮದ ಪೋಸ್ಟರ್ ಅನ್ನು ಬಿಡುಗಡೆಗೊಳಿಸಿ ಮಾತನಾಡಿದರು. ಭಾಷೆ ಹಾಗೂ ಜೀವನ ಪದ್ದತಿ ಮತ್ತು ಜನಾಂಗ ಇವುಗಳು ಅಳಿಯಬಾರದು ಇದಕ್ಕಾಗಿ ಪ್ರತಿ ಮನೆಯಲ್ಲಿ ನಮ್ಮ ಗ್ರಾಮ್ಯ ಭಾಷೆ ಬದುಕಿನ ರೀತಿ ನೀತಿಯನ್ನು ತಲೆಮಾರಿಗೆ ತಿಳಿಹೇಳುವ ತನ್ಮೂಲಕ ಅದರ ಉಳಿಯುವ ಕಾರ್ಯ ಮಾಡಬೇಕಿದೆ,ಇಂತಹ ಕಾರ್ಯಕ್ರಮ ನಿತ್ಯನಿರಂತರವಾಗಿ ಪ್ರತಿ ಊರಲ್ಲಿ ಪ್ರಜ್ವಲಿಸಲಿ ಎಂದು ಪಂಚವರ್ಣ ಮಹಿಳಾ ಮಂಡಲದ ಈ ಕಾರ್ಯಕ್ರಮವನ್ನು ಶ್ಲಾಘಿಸಿದರು. ಮುಖ್ಯ ಅಭ್ಯಾಗತರಾಗಿ ರೋಟರಿ ಕ್ಲಬ್ ಹಂಗಾರಕಟ್ಟೆ ಸಾಸ್ತಾನ ಅಧ್ಯಕ್ಷೆ ಜ್ಯೋತಿ ಉದಯ್…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಜು.18 : ಅಡಿಕೆ ಬೆಳೆಗಾರರನ್ನು ಬೆಂಬಲಿಸುವ ಹಾಗೂ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಅಡಿಕೆಕೊಯ್ಲು ಉಪಕರಣಗಳ ಮೇಲಿನ ಸಹಾಯಧನವನ್ನು ಹೆಚ್ಚಿಸಿ, ಆತ್ಯಾಧುನಿಕ ಕೃಷಿ ಉಪಕರಣಗಳನ್ನು ಕೈಗೆಟುಕುವಂತೆ ಮಾಡುವಲ್ಲಿ ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆ ಇರಿಸಿರುವುದು ತೋಟಗಾರಿಕೆ ಬೆಳೆಗಾರರಲ್ಲಿ ಸಂತಸ ಮೂಡಿಸಿದೆ ಎಂದು ಸಂಸದ ಬಿ.ವೈ ರಾಘವೇಂದ್ರ ಅವರು ತಿಳಿಸಿದ್ದಾರೆ. ಕಳೆದ ತಿಂಗಳಲ್ಲಿ ಸಾಗರ ಪ್ರಾಂತ್ಯ ಅಡಿಕೆ ಬೆಳೆಗಾರರ ಸಂಘವು ಆಯೋಜಿಸಿದ್ದ ಬೃಹತ್ ಸಮಾವೇಶದಲ್ಲಿ ಭಾಗವಹಿಸಿದ್ದ ಕೇಂದ್ರ ಸರ್ಕಾರದ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚೌವ್ಹಾಣ್ ಅವರಿಗೆ ಅಡಿಕೆ ಬೆಳೆಗಾರರ ಸಮಾವೇಶದಲ್ಲಿ ರೈತರನ್ನು ಬೆಂಬಲಿಸಲು ಅಡಿಕೆ ಕೊಯ್ಲು ಉಪಕರಣಗಳ ಮೇಲಿನ ಸಹಾಯಧನವನ್ನು ಹೆಚ್ಚಿಸುವಂತೆ ಮನವಿಯನ್ನು ಮಾಡಲಾಗಿತ್ತು. ಅಲ್ಲದೇ ಪತ್ರ ಬರೆದು ಒತ್ತಾಯಿಸಲಾಗಿತ್ತು ಎಂದ ಅವರು ನಮ್ಮ ಕೋರಿಕೆಯ ಮೇರೆಗೆ ಕೇಂದ್ರ ಸರ್ಕಾರವು ಕೇಂದ್ರ ಪುರಸ್ಕೃತ ಕೃಷಿ ಯಾಂತ್ರೀಕರಣ ಉಪ ಅಭಿಯಾನ (SMAM) ಅಡಿ ಟೆಲಿಸ್ಕೊಪಿಕ್ ಟ್ರಿ-ಪ್ರೂನರ್ (Carbon Doti)ಗೆ ಸಹಾಯಧನದ ಮೊತ್ತವನ್ನು ಪರಿಷ್ಕರಿಸಿ ಆದೇಶ ಹೊರಡಿಸಿದೆ ಎಂದವರು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರಾಷ್ಟ್ರೀಯ ಹೆದ್ದಾರಿ 66 ರ ಕೋಟೇಶ್ವರ ಬೈಪಾಸ್ನಿಂದ ಹೆಜಮಾಡಿವರೆಗೆ 26 ಕಿಮೀ ಸರ್ವೀಸ್ ರಸ್ತೆ ಮತ್ತು 3 ಕಡೆ ಪೂಟ್ ಓವರ್ ಬ್ರಿಡ್ಜ್ ನಿರ್ಮಾಣಕ್ಕೆ ಅನುಮೋದನೆ ದೊರೆತಿದೆ ಎಂದು ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಕೋಟೇಶ್ವರದಿಂದ ಬೀಜಾಡಿ ಕ್ರಾಸ್ ವರೆಗೆ 830 ಮೀ., ಅನ್ನಪೂರ್ಣ ಹೊಟೇಲ್ನಿಂದ ಸಾನ್ವಿ ಏಜೆನ್ಸಿ ತೆಕ್ಕಟ್ಟೆವರೆಗೆ 3,500 ಮೀ ಎರಡು ಕಡೆ, ತೆಕ್ಕಟ್ಟೆ ಸೇವಾ ಸಂಗಮ ಶಿಶು ಮಂದಿರದಿಂದ 1020 ಮೀ ಎರಡು ಕಡೆ, ಬ್ರಹ್ಮಾವರದ ಮಹೇಶ್ ಆಸ್ಪತ್ರೆಯಿಂದ ಎಸ್.ಎಮ್.ಎಸ್ ಕಾಲೇಜು ಬ್ರಹ್ಮಾವರದ ವರೆಗೆ 400 ಮೀ ಎರಡು ಕಡೆ, ಸಂತೆಕಟ್ಟೆ ಇಂದ್ರ ಸರ್ವೀಸ್ ಸ್ಟೇಷನ್ನಿಂದ ಮಂದಾರ ವುಡ್ ಇಂಡಸ್ಟ್ರೀಜ್ವರೆಗೆ 1,000 ಮೀ ಎರಡು ಕಡೆ, ಉದ್ಯಾವರ ಜಂಕ್ಷನ್ನಿಂದ ದೇಶ್ನ ಬ್ಯಾಂಕಿನವರೆಗೆ ಬಲಬದಿ ಮಾತ್ರ 325 ಮೀ., ಉದ್ಯಾವರ ಕಿಯಾ ಶೋರೂಂ ವರೆಗೆ 164 ಮೀ ಎರಡು ಕಡೆ, ಎರ್ಮಾಳ್ ಮಸೀದಿ ಹತ್ತಿರ 2 ಕಿ.ಮೀ, ಎರಡುಕಡೆ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಗ್ರಾಮೀಣ ಕುಲ ಕಸುಬುದಾರರಿಗೆ ಆರ್ಥಿಕ ನೆರವು ನೀಡಲು ಹಾಗೂ ಸಾಮಾಜಿಕವಾಗಿ ಹಿಂದುಳಿದ ಬಡವರ್ಗದ ಜನರಿಗೆ ಗ್ರಾಮಗಳಲ್ಲಿಯೇ ಜೀವನಾಧಾರ ಕಲ್ಪಿಸಲು ಫಲಾನುಭವಿಗಳಿಗೆ ಉಚಿತವಾಗಿ ವಿತರಿಸಲಾಗುತ್ತಿದೆ ಎಂದು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿ ಹೇಳಿದರು. ಅವರು ಶುಕ್ರವಾರದಂದು ತಾಲೂಕು ಪಂಚಾಯಿತ್ ಸಭಾಂಗಣದಲ್ಲಿ ನಡೆದ ಗ್ರಾಮೀಣ ಕುಶಲಕರ್ಮಿಗಳಿಗೆ ಸುಧಾರಿತ ಉಪಕರಣ ಹಾಗೂ ಹೊಲಿಗೆ ಯಂತ್ರ ವಿತರಣಾ ಕಾರ್ಯಕ್ರಮದಲ್ಲಿ ಕಿಟ್ ವಿತರಿಸಿ ಮಾತನಾಡಿ, ತಾವು ಇದನ್ನು ಸಮರ್ಪಕವಾಗಿ ಕಿಟ್ ಅನ್ನು ಉಪಯೋಗಿಸಿಕೊಂಡು ಸ್ವಯಂ ಉದ್ಯೋಗವನ್ನು ಮಾಡುವ ಸಲುವಾಗಿ ಈ ಉದ್ದೇಶದಿಂದ ಗ್ರಾಮೀಣ ಕುಶಲಕರ್ಮಿಗಳಿಗೆ ಸುಧಾರಿತ ಉಪಕರಣ ಹೊಲಿಗೆ ಯಂತ್ರ ವಿಸ್ತರಿಸಲಾಗುತ್ತಿದೆ. ಜಿಲ್ಲಾ ಪಂಚಾಯತ್ ಉಡುಪಿ ಗ್ರಾಮೀಣ ಕೈಗಾರಿಕಾ ವಿಸ್ತರಣಾ ಅಧಿಕಾರಿ ಮಂಜುನಾಥ್ ಹೆಗಡೆ ಉಪಸ್ಥಿತರಿದ್ದರು. 133 ಫಲಾನುಭವಿಗಳಿಗೆ 9 ವಿವಿಧ ಗ್ರಾಮೀಣ ಕುಶಲಕರ್ಮಿಗಳಿಗೆ ಸುಧಾರಿತ ಉಪಕರಣ ಹಾಗೂ ಹೊಲಿಗೆ ಯಂತ್ರವನ್ನು ವಿತರಿಸಲಾಯಿತು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಕಾಲೇಜಿನ ಮಹಾಪೋಷಕರಾದ ದಿವಂಗತ ಡಾ| ಬಿ.ಬಿ. ಹೆಗ್ಡೆ ಅವರ ಧರ್ಮಪತ್ನಿ ದಿವಂಗತ ವಿಶಾಲಾಕ್ಷಿ ಬಿ. ಹೆಗ್ಡೆ ಅವರ ಸಂಸ್ಮರಣಾ ಕಾರ್ಯಕ್ರಮವನ್ನು ಕಾಲೇಜಿನ ಇಂಗ್ಲೀಷ್ ವಿಭಾಗದ ಆಶ್ರಯದಲ್ಲಿ ಆಯೋಜಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಕೆ. ಉಮೇಶ್ ಶೆಟ್ಟಿ ಅವರು ದೀಪ ಪ್ರಜ್ವಲಿಸಿ, ಪುಷ್ಪಾರ್ಚನೆಗೈದು, ಸಂಸ್ಥೆಯ ಏಳಿಗೆಗೆ ಕಾರಣರಾದ ಮೃತರ ಆತ್ಮಕ್ಕೆ ಚಿರಶಾಂತಿ ಕೋರಿದರು. ಈ ಸಂದರ್ಭದಲ್ಲಿ ಕಾಲೇಜಿನ ಬೋಧಕ-ಬೋಧಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಉಪಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ ಪ್ರಸ್ತಾವಿಸಿದರು. ಇಂಗ್ಲೀಷ್ ವಿಭಾಗದ ಮುಖ್ಯಸ್ಥೆ ದೀಪಿಕಾ ಜಿ. ಸ್ವಾಗತಿಸಿ, ಇಂಗ್ಲೀಷ್ ವಿಭಾಗದ ಸಹ ಪ್ರಾಧ್ಯಾಪಕರಾದ ಸ್ವಾತಿ ಜಿ. ರಾವ್ ವಂದಿಸಿ, ನಿರೂಪಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಇಂಜಿನಿಯರಿಂಗ್ ಕಾಲೇಜು ಹಾಗೂ ಮಲೇಶಿಯಾದ ಮಿಲಾ ವಿಶ್ವವಿದ್ಯಾಲಯದ ನಡುವೆ ಅಂತಾರಾಷ್ಟ್ರೀಯ ಸಹಕಾರಕ್ಕಾಗಿ ಶೈಕ್ಷಣಿಕ ಒಡಂಬಡಿಕೆಗೆ ಸಹಿ ಹಾಕಲಾಯಿತು. ಮಿಲಾ ವಿಶ್ವವಿದ್ಯಾಲಯವನ್ನು ಪ್ರತಿನಿಧಿಸಿದ ಡಾ. ದೀಪಕ್ ತಿರುಮಿಶಿ ಜಡಾ ಮತ್ತು ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ. ಪೀಟರ್ ಫನಾಂಡೀಸ್ ಪರಸ್ಪರ ಒಪ್ಪಂದಕ್ಕೆ ಸಹಿ ಹಾಕಿದರು. ಇತ್ತೀಚೆಗೆ ಎಂಎಸ್ ಟೀಮ್ಸ್ ಮೂಲಕ ಏರ್ಪಡಿಸಿದ್ದ ವರ್ಚುವಲ್ ಸಭೆಯಲ್ಲಿ ಎರಡು ಸಂಸ್ಥೆಗಳ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು. ಮಿಲಾ ವಿಶ್ವವಿದ್ಯಾಲಯದ ಕುಲಪತಿ ಡಾ. ಜೇಸನ್ ಫಿಟ್ಸಿಮನ್ಸ್, ಸಂಶೋಧನೆ ಮತ್ತು ಉದ್ಯಮಶೀಲತೆ ವಿಭಾಗದ ಉಪಕುಲಪತಿ ಗ್ರಾಹಮ್ ಕೆಂಡಲ್, ಅಕಾಡೆಮಿಕ್ ವ್ಯವಹಾರಗಳ ಉಪಕುಲಪತಿ ಲೀ ಚ್ಯೂ ಗಿಂಗ್ ಹಾಗೂ ಸಂಶೋಧನೆ ವಿಭಾಗದ ಸಹಾಯಕ ಉಪಕುಲಪತಿ ವಾಂಗ್ ಸಿಯೋ ಫಾಂಗ್ ಭಾಗವಹಿಸಿದ್ದರು. ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಕೃಷಿ ವಿಜ್ಞಾನ ವಿಭಾಗದ ಮುಖ್ಯಸ್ಥ ಡಾ. ಕೆ.ವಿ. ಸುರೇಶ್, ಪರೀಕ್ಷಾ ಕುಲಸಚಿವ ಡಾ. ಶಶಿಕಾಂತ ಕರಿಂಕಾ ಹಾಗೂ ವಿವಿಧ ವಿಭಾಗಗಳ ಮುಖ್ಯಸ್ಥರು ಇದ್ದರು. ಡಾ. ಜೇಸನ್ ಫಿಟ್ಸಿಮನ್ಸ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪೋಕ್ಸೋ ಕಾಯಿದೆಯಡಿ ಸಂತ್ರಸ್ತ ಮಕ್ಕಳಿಗೆ ಬೆಂಬಲ ವ್ಯಕ್ತಿಗಳಿಗಾಗಿ ಸೇವೆ ಸಲ್ಲಿಸಲು ಮಕ್ಕಳೊಂದಿಗೆ ಕೆಲಸ ಮಾಡುವ ಮೂಲಕ ಮಕ್ಕಳ ಶಿಕ್ಷಣ, ಅಭಿವೃದ್ಧಿ ಅಥವಾ ರಕ್ಷಣಾ ವಿಷಯದಲ್ಲಿ ಕನಿಷ್ಟ 3 ವರ್ಷಗಳ ಅನುಭವದೊಂದಿಗೆ ಪದವಿ ಅಥವಾ ಸಮಾಜ ಕಾರ್ಯ/ಸೋಷಿಯೋಲಾಜಿ/ಸೈಕೋಲಾಜಿ/ಚೈಲ್ಡ್ ಡೆವಲಪ್ಮೆಂಟ್ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಹೊಂದಿರುವ ಅಥವಾ ಮಕ್ಕಳ ಆರೈಕೆ ಕೇಂದ್ರದಲ್ಲಿ ಮಕ್ಕಳೊಂದಿಗೆ ಕೆಲಸ ಮಾಡುವ ಅಧಿಕಾರಿಗಳು ಮತ್ತು ಮಕ್ಕಳ ಹಕ್ಕುಗಳ ಕ್ಷೇತ್ರದಲ್ಲಿ ಕೆಲಸ ಮಾಡುವ ಯಾವುದೇ ಸಂಸ್ಥೆ ಕೂಡ ಅರ್ಜಿ ಸಲ್ಲಿಸಬಹುದಾಗಿದೆ ಪ್ರತಿ ಪ್ರಕರಣಕ್ಕೆ 3000 ರೂ. ಸಂಭಾವನೆ ನೀಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ಕ್ಷೇತ್ರ ಕಾರ್ಯವನ್ನು ಮಾಡಲು ಮತ್ತು ಅಪರಾಧ ನ್ಯಾಯ ವ್ಯವಸ್ಥೆಯ ಮೂಲಕ ಮಕ್ಕಳು ಮತ್ತು ಅವರ ಕುಟುಂಬಗಳಿಗೆ ಸಹಾಯ ಮಾಡಲು ತರಬೇತಿ ನೀಡಲಾಗುವುದು. ಅರ್ಜಿ ಸಲ್ಲಿಸಲು ಜುಲೈ 29 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಛೇರಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಬಿ ಬ್ಲಾಕ್, ಒಂದನೇ…
ಆಧಾರ್ ಕಾರ್ಡ್ಗೆ ಮೊಬೈಲ್ ಸಂಖ್ಯೆ ಜೋಡಿಸುವುದು ಕಡ್ಡಾಯ. ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಆಧಾರ್ ಕಾರ್ಡ್ ಹೊಂದಿರುವ ಪ್ರತಿಯೊಬ್ಬರೂ ತಮ್ಮ ಮೊಬೈಲ್ ಸಂಖ್ಯೆಯನ್ನು ಆಧಾರ್ಗೆ ನೋಂದಾಯಿಸಿಕೊಳ್ಳುವುದು ಕಡ್ಡಾಯವಾಗಿದೆ. ತಪ್ಪದೇ ಆಧಾರ್ ಲಿಂಕ್ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಎಂದರು. ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ವಿಡಿಯೋ ಕಾರ್ನ್ಪರೆನ್ಸ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಆಧಾರ್ ಮಾನಿಟರಿಂಗ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಈವರೆಗೆ 14,11,209 ಜನರು ಆಧಾರ್ ಕಾರ್ಡ್ ಅನ್ನು ಹೊಂದಿದ್ದು, ಅವರಲ್ಲಿ 13,42,275 ಜನರು ತಮ್ಮ ಮೊಬೈಲ್ ಸಂಖ್ಯೆಯನ್ನು ನೋಂದಾಯಿಸಿಕೊಂಡು ಶೇ. 68.93 ರಷ್ಟು ಆಗಿದೆ. ಬಾಕಿ ಉಳಿದ ಪ್ರತಿಯೊಬ್ಬರೂ ತಮ್ಮ ಆಧಾರ್ ಕಾರ್ಡ್ಗೆ ಮೊಬೈಲ್ ಸಂಖ್ಯೆಯನ್ನು ಶೀಘ್ರದಲ್ಲಿಯೇ ಅಪ್ಡೇಟ್ ಮಾಡಿಸಿಕೊಳ್ಳಬೇಕು ಎಂದರು. ಜಿಲ್ಲೆಯಲ್ಲಿರುವ 15 ವರ್ಷ ಮೇಲ್ಪಟ್ಟ ಆಧಾರ್ ಕಾರ್ಡ್ ಹೊಂದಿರುವ ವಿದ್ಯಾರ್ಥಿಗಳು ಆಧಾರ್ ಸೆಂಟರ್ಗಳಿಗೆ ತೆರಳಿ ತಮ್ಮ ಬೆರಳಚ್ಚು ನೀಡಿ, ಆಧಾರ್ ಕಾರ್ಡ್ಗಳನ್ನು ಸಕ್ರೀಯಗೊಳಿಸಿಕೊಳ್ಳಬೇಕು. ಇಲ್ಲವಾದಲ್ಲಿ ಆಧಾರ್ ನಿಷ್ಕಿೃಯಗೊಳ್ಳಲಿದ್ದು,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿದ್ದ ರಾಮಚಂದ್ರ ಶೇರುಗಾರ್ ಅವರು ಗುರುವಾರ ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ರಾಮಚಂದ್ರ ಅವರು ಕಳೆದ ಒಂದು ವಾರದ ಹಿಂದೆ ಅನಾರೋಗ್ಯದ ಸಮಸ್ಯೆ ಇದ್ದ ಕಾರಣ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು. ರಾಮಚಂದ್ರ ಶೇರುಗಾರ್ ಕಳೆದ 28 ವರ್ಷಗಳಿಂದ ಪೊಲೀಸ್ ಸಿಬ್ಬಂದಿಯಾಗಿ ಸೇವೆ ಸಲ್ಲಿಸುತ್ತಿದ್ದು, ಇನ್ನು ಒಂದು ವಾರದಲ್ಲಿ ಪ್ರಮೋಷನ್ ಆಗಿ ಎಎಸ್ ಐ ಆಗುವ ಅರ್ಹತೆ ಹೊಂದಿದ್ದರು. ರಾಮಚಂದ್ರ ಶೇರುಗಾರ್ ಅಕಾಲಿಕ ಸಾವಿನಿಂದ ಗಂಗೊಳ್ಳಿ ಪೊಲೀಸ್ ಠಾಣೆಯ ಠಾಣಾಧಿಕಾರಿ ಪವನ ನಾಯಕ್, ಬಸವರಾಜ್ ಕನ್ ಶೆಟ್ಟಿ ಹಾಗೂ ಪೊಲೀಸ್ ಸಿಬ್ಬಂದಿಗಳು ಸಂತಾಪ ಸೂಚಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರ ರೋಟರಿ ಕ್ಲಬ್ ಸನ್ರೈಸ್ ಇದರ 2025-26ನೇ ಸಾಲಿನ ಅಧ್ಯಕ್ಷರಾಗಿ ಕೆ. ಗುರುರಾಜ್ ಕೊತ್ವಾಲ್ ಹಾಗೂ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಬಿ. ನೇಮಕಗೊಂಡಿರುತ್ತಾರೆ. ಜುಲೈ 20ರಂದು ಪದ ಪ್ರದಾನ ಸಮಾರಂಭವು ಕುಂದಾಪುರ ಭಂಡಾರ್ಕರ್ಸ್ ಕಾಲೇಜಿನ ಕುಂಭಾಸಿ ರಾಧಾಬಾಯಿ ವೆಂಕಟ್ರಮಣ ಪ್ರಭು ರಂಗಮಂದಿರದಲ್ಲಿ ನಡೆಯಲಿದೆ.
