Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಜೂನ್ 22ರಂದು ಬಾರ್ಕೂರು ಚೌಳಿಕೆರೆಗೆ ಬಿದ್ದು ಕಾರು ಮುಳುಗಿದ ಪ್ರಕರಣದಕ್ಕೆ ಸಂಬಂಧಿಸಿದಂತೆ ಓರ್ವ ವ್ಯಕ್ತಿ ಸ್ಥಳದಲ್ಲಿಯೇ ಮೃತಪಟ್ಟಿದ್ದರು. ಗಂಭೀರಗೊಂಡಿದ್ದ ಯುವತಿಗೆ ಆಸ್ಪತ್ರೆಗೆ ಕೊಂಡೊಯ್ಯುವ ಮೊದಲು ಬಾರ್ಕೂರಿನ 10ನೇ ತರಗತಿ ವಿದ್ಯಾರ್ಥಿನಿಯ ಪ್ರಥಮ ಚಿಕಿತ್ಸೆಯಿಂದಾಗಿ ಆಕೆ ಪ್ರಾಣಾಪಾಯದಿಂದ ಪಾರಾಗಿದ್ದು, ವಿದ್ಯಾರ್ಥಿನಿ ಹಾಗೂ ಕೆರೆಗಿಳಿದು ಅಪಘಾತವಾದವರ ರಕ್ಷಣೆಗೆ ನಿಂತ ಪ್ರದೀಪ್ ದೇವಾಡಿಗ, ಪ್ರವೀಣ ಪೂಜಾರಿ ಎಂಬ ಯುವಕರ ಕಾರ್ಯಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಮೆಚ್ಚುಗೆ ವ್ಯಕ್ತವಾಗಿದೆ. ಬಾರಕೂರು ಕಡೆಯಿಂದ ಸಾಬರಕಟ್ಟೆ ಹೋಗುತ್ತಿದ್ದ ವೇಳೆ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿ ತಡೆಗೋಡೆ ಇಲ್ಲದ ಚೌಳಿಕೆರೆಗೆ ಉರುಳಿ ಬಿದ್ದಿದೆ ಎನ್ನಲಾಗಿದೆ. ಕಾರು ಮುಳುಗಿದ ತಕ್ಷಣ ಪ್ರದೀಪ್ ದೇವಾಡಿಗ, ಹಾಗೂ ಪ್ರವೀಣ್ ಪೂಜಾರಿ ಎಂಬ ಯುವಕರಿಬ್ಬರು ಜೀವದ ಹಂಗು ತೊರೆದು ಕೆರೆಗೆ ಇಳಿದು ಕಾರಿನ ಗ್ಲಾಸ್ ಒಡೆದು ಕಷ್ಟಪಟ್ಟು ಕಾರಿನೊಳಗಿದ್ದ ಶ್ವೇತ ಶೆಟ್ಟಿ ಹಾಗೂ ಸಂತೋಷ ಶೆಟ್ಟಿಯನ್ನು ಹೊರತೆಗೆಯಲು ಹರಸಾಹಸಪಟ್ಟರು. ಸಂತೋಷ ಶೆಟ್ಟಿ ಅವರು ಅಷ್ಟರಲ್ಲೇ ಮೃತಪಟ್ಟಿದ್ದರು. ಶ್ವೇತಾ ಶೆಟ್ಟಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಜೂನ್ 10ರಂದು ಗಂಗೊಳ್ಳಿಯ ಪೆರಾಜೆ ಬಾರಿನ ಸಮೀಪ ರಸ್ತೆಯ ಬದಿಯಲ್ಲಿದ್ದ ಬೀದಿ ದನವನ್ನು ಕಳವು ಮಾಡಿ ಕಾರಿನಲ್ಲಿ ತುಂಬಿಕೊಂಡು ತೆರಳಿದ್ದ ಆರೋಪದ ಮೇಲೆ, ಇಂದು ಕಾಪುವಿನಲ್ಲಿ ಆಪಾದಿತ ಮೊಹಮ್ಮದ್ ಹನೀಫ್ ಎಂಬುವವನನ್ನು ಗಂಗೊಳ್ಳಿ ಪೊಲೀಸರು ಬಂಧಿಸಿದ್ದಾರೆ. ಜೂನ್ 10ರಂದು ಖಾಸಗಿ ಪ್ಯಾಸೆಂಜರ್ ವಾಹನದಲ್ಲಿ ತೆರಳಿದ್ದ ಮೂವರು ಆಗಂತುಕರು ಗಂಗೊಳ್ಳಿ ಬಂದರು ರಸ್ತೆ ಬಾರ್ ಎದುರು ರಾತ್ರಿ ಹೊತ್ತಿನಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ಗೋವನ್ನು ವಾಹನದಲ್ಲಿ ತುಂಬಿಸಿಕೊಂಡು ಹೋಗಿದ್ದರು. ಈ ಘಟನೆಗೂ ಮೊದಲು ಮ್ಯಾಂಗನೀಸ್ ರಸ್ತೆಯಲ್ಲಿ ಗೋಕಳ್ಳತನ ಮಾಡಲು ಯತ್ನಿಸಿದ್ದು, ಸ್ಥಳೀಯರು ಕೂಗಿಕೊಂಡಿದ್ದರಿಂದ ದನವನ್ನು ಅಲ್ಲಿಯೇ ಬಿಟ್ಟು ಓಡಿಹೋಗಿದ್ದರು. ಹಿರಿಯ ಅಧಿಕಾರಿಗಳ ಮಾರ್ಗದರ್ಶನದಂತೆ ಗಂಗೊಳ್ಳಿ ಪೊಲಿಸ್ ಠಾಣಾ ಪಿ.ಎಸ್.ಐ ಭೀಮಾಶಂಕರ ಸಿನ್ನೂರ ಸಂಗಣ್ಣ ಹಾಗೂ ಸಿಬ್ಬಂದಿಗಳಾದ ಶ್ರೀಧರ, ಚಂದ್ರಶೇಖರ, ಪ್ರಿನ್ಸ್ , ಸಂತೋಷ್. ಆರ್ ಡಿ ಸೆಲ್ ವಿಭಾಗದ ಶಿವಾನಂದ ಎಂಬುವವರು ಆರೋಪಿ ಪತ್ತೆಯ ಬಗ್ಗೆ ಮಾಹಿತಿ ಕಲೆ ಹಾಕಿ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ದಸ್ತಗಿರಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದು ಓರ್ವ ಸಾವನ್ನಪ್ಪಿ, ಮತ್ತೋರ್ವ ಮಹಿಳೆ ಗಂಭೀರ ಗಾಯಗೊಂಡಿರುವ ಘಟನೆ ಭಾನುವಾರ ಬಾರಕೂರು ಚೌಳಿಕೆರೆ ಬಳಿ ನಡೆದಿದೆ. ಮೃತಪಟ್ಟವರನ್ನು ವಕ್ವಾಡಿ ನಿವಾಸಿ ಸಂತೋಷ ಶೆಟ್ಟಿ(40) ಎಂದು ಗುರುತಿಸಲಾಗಿದೆ. ಗಾಯಗೊಂಡ ಮಹಿಳೆ ವಕ್ವಾಡಿಯ ಶ್ವೇತಾ(23) ಎಂಬುವವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬೀಜಾಡಿ ಫ್ಲೈವುಡ್ ಅಂಗಡಿ ಮಾಲಕರಾಗಿದ್ದ ವಕ್ವಾಡಿ ಸಂತೋಷ ಶೆಟ್ಟಿ ಅವರು ಬಾರಕೂರು ಕಡೆಯಿಂದ ಸಾಬರಕಟ್ಟೆ ಹೋಗುತ್ತಿದ್ದ ವೇಳೆ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿ ತಡೆಗೋಡೆ ಇಲ್ಲದ ಚೌಳಿಕೆರೆಗೆ ಉರುಳಿ ಬಿದ್ದಿದೆ ಎನ್ನಲಾಗಿದೆ. ತಕ್ಷಣವೇ ಸ್ಥಳೀಯರು ಕಾರಿನಲ್ಲಿದ್ದ ಸಂತೋಷ ಶೆಟ್ಟಿ ಅವರನ್ನು ರಕ್ಷಿಸುವ ಪ್ರಯತ್ನ ಮಾಡಿದರು. ಆದರೆ,  ಸಂತೋಷ ಶೆಟ್ಟಿ ಅವರು ಮೃತಪಟ್ಟರೆನ್ನಲಾಗಿದೆ. ಸಂತೋಷ್ ಶೆಟ್ಟಿ ಅವರ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದ ಶ್ವೇತಾ ಎಂಬುವವರಿಗೂ ಅಪಘಾತದಲ್ಲಿ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ► ಬೈಂದೂರು ಠಾಣೆಯ ಪೊಲೀಸ್ ಸಿಬ್ಬಂದಿಗೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಜೂ.21 ರ ಭಾನುವಾರ 1 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ದೃಢವಾಗಿದ್ದು, ನಾಳಿನ ಕೋವಿಡ ವರದಿಯಲ್ಲಿ ಅಪ್ಡೇಡ್ ಆಗಲಿದೆ. ಕೊವೀಡ್ ಪಾಸಿಟಿವ್ ವ್ಯಕ್ತಿ ಬೈಂದೂರು ಠಾಣೆಯ ಪೊಲೀಸ್ ಸಿಬ್ಬಂದಿಯಾಗಿದ್ದು, ಅವರನ್ನು ಕುಂದಾಪುರದ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಕರ್ತವ್ಯ ನಿರ್ವಹಿಸುತ್ತಿದ್ದ ಠಾಣೆ ಹಾಗೂ ಪಕ್ಕದ ವೃತ್ತ ನಿರೀಕ್ಷಕರ ಕಛೇರಿಯನ್ನು ಸ್ಯಾನಿಟೈಸ್ ಮಾಡಿ 2-3 ದಿನದ ಮಟ್ಟಿಗೆ ಬಂದ್ ಮಾಡಲಾಗುತ್ತಿದ್ದು, ಎಲ್ಲಾ ಸಿಬ್ಬಂದಿಗಳನ್ನು 14 ದಿನಗಳ ಕಾಲ ಕ್ವಾರಂಟೈನ್ ಮಾಡಲಾಗುತ್ತಿದೆ. ಬೈಂದೂರಿನ ಹಳೆ ವೃತ್ತ ನಿರೀಕ್ಷಕರ ಕಛೇರಿಯಲ್ಲಿ ತಾತ್ಕಾಲಿಕವಾಗಿ ಕುಂದಾಪುರ ಉಪವಿಭಾಗದ ಸಿಬ್ಬಂದಿಗಳು ಕಾರ್ಯನಿರ್ವಹಿಸಲಿದ್ದಾರೆ. ಇಂದು 27 ನೆಗೆಟಿವ್: ಈ ತನಕ ಒಟ್ಟು 13,745ಮಾದರಿ ಸಂಗ್ರಹಿಸಿದ್ದು, ಅವುಗಳಲ್ಲಿ 12,082 ನೆಗೆಟಿವ್, 1064 ಪಾಸಿಟಿವ್ ಬಂದಿದ್ದು, 266 ಮಂದಿಯ ವರದಿ ಬರುವುದು ಬಾಕಿ ಇದೆ. ಇಂದು ಬಂದಿರುವ ವರದಿಯಲ್ಲಿ 27 ನೆಗೆಟಿವ್, 1 ಪಾಸಿಟಿವ್ ಬಂದಿದೆ. 97 ಸಕ್ರಿಯ ಪ್ರಕರಣ: ಜಿಲ್ಲೆಯಲ್ಲಿ ಸದ್ಯ ಒಟ್ಟು 1064ಕೊರೋನಾ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ತಾಲೂಕಿನ ಬೈಂದೂರು ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಓರ್ವರಿಗೆ ಕೋರೋನಾ ಪಾಸಿಟಿವ್ ಬಂದಿರುವುದು ದೃಢವಾಗಿದ್ದು, ಸದ್ಯ ಅವರನ್ನು ಕುಂದಾಪುರದ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸ್ ಸಿಬ್ಬಂದಿಯಲ್ಲಿ ಶೀತ, ಗಂಟಲು ನೋವಿನ ಲಕ್ಷಣಗಳು ಕಾಣಿಸಿಕೊಂಡಿದ್ದರಿಂದ ಅವರನ್ನು ಕೊವೀಡ್ ಪರೀಕ್ಷೆಗೆ ಒಳಪಡಿಸಲಾಗಿತ್ತು ಎನ್ನಲಾಗಿದೆ. ಅದರ ವರದಿ ಇಂದು ದೊರೆತಿದ್ದು, ಪಾಸಿಟಿವ್ ದೃಢವಾಗಿತ್ತು. ಸದ್ಯ ಬೈಂದೂರು ಪೊಲೀಸ್ ಠಾಣೆ ಹಾಗೂ ವೃತ್ತ ನಿರೀಕ್ಷಕರ ಕಛೇರಿಯ ಎಲ್ಲಾ ಸಿಬ್ಬಂದಿಗಳನ್ನು 14 ದಿನಗಳ ಕಾಲ ಹೋಂ ಕ್ವಾರಂಟೈನ್ ಮಾಡಲಾಗುತ್ತಿದೆ. ಪಾಸಿಟಿವ್ ಬಂದಿರುವ ಸಿಬ್ಬಂದಿಯ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಕ್ಕೆ ಬಂದವರನ್ನು ಗುರುತಿಸಿ ಅವರನ್ನು ಹೋಂ ಕ್ವಾರಂಟೈನ್ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. 7 ದಿನಗಳ ಬಳಿಕ ಪ್ರಾಥಮಿಕ ಸಂಪರ್ಕಕ್ಕೆ ಬಂದವರ ಸ್ವ್ಯಾಬ್ ತೆಗೆದು ಪರೀಕ್ಷೆಗೆ ಕಳುಹಿಸಲಾಗುತ್ತಿದೆ ಮತ್ತು ಅವರ ಸಂಪರ್ಕಕ್ಕೆ ಬಂದವರನ್ನು ಗುರುತಿಸಿ ಕ್ವಾರಂಟೈನ್ ಮಾಡಲಾಗುತ್ತದೆ. ಕುಂದಾಪ್ರ ಡಾಟ್ ಕಾಂ ಸುದ್ದಿ. ಠಾಣೆ ಸೀಲ್ ಡೌನ್? ಪೊಲೀಸ್ ಸಿಬ್ಬಂದಿಗೆ ಪಾಸಿಟಿವ್ ಬಂದಿರುವುದು ದೃಢವಾದಲ್ಲಿ ಠಾಣೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಜೂ.20 ರ ಶನಿವಾರ ಒಟ್ಟು 13 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಈ ಪೈಕಿ 10 ಮಂದಿ ಮಹಾರಾಷ್ಟ್ರದಿಂದ ಹಿಂದಿರುಗಿದವರಾಗಿದ್ದು, ಒಂದು ಸ್ಥಳೀಯ ಪ್ರಕರಣ, ಒಂದು ಅಂತರ್ಜಿಲ್ಲಾ ಪ್ರಯಾಣದ ಹಿನ್ನೆಲೆ ಹೊಂದಿದ್ದಾರೆ. ಒಂದು ಪ್ರಕರಣದ ಸಂಪರ್ಕ ಪತ್ತೆ ಹಚ್ಚಲಾಗುತ್ತಿದೆ. ಇವರಲ್ಲಿ 8 ಪುರುಷರು, ಇಬ್ಬರು ಮಹಿಳೆಯರು ಹಾಗೂ ಮೂವರು ಮಕ್ಕಳು ಇದ್ದಾರೆ. ನಿನ್ನೆ ಮೃತಪಟ್ಟಿದ್ದ ತೆಕ್ಕಟ್ಟೆ ಭಾಗದ ವ್ಯಕ್ತಿಯ ಜೊತೆಗೆ ಬಂದಿದ್ದ ಅವರ ಪತ್ನಿ ಹಾಗೂ ಮಗಳಿಗೂ ಪಾಸಿಟಿವ್ ಬಂದಿದ್ದು, ಅವರನ್ನು ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. 13,300 ಮಾದರಿ ಸಂಗ್ರಹ: ಈ ತನಕ ಒಟ್ಟು 13,300ಮಾದರಿ ಸಂಗ್ರಹಿಸಿದ್ದು, ಅವುಗಳಲ್ಲಿ 12,055 ನೆಗೆಟಿವ್, 1063 ಪಾಸಿಟಿವ್ ಬಂದಿದ್ದು, 182 ಮಂದಿಯ ವರದಿ ಬರುವುದು ಬಾಕಿ ಇದೆ. ಇಂದು ಬಂದಿರುವ ವರದಿಯಲ್ಲಿ 109 ನೆಗೆಟಿವ್, 13 ಪಾಸಿಟಿವ್ ಬಂದಿದೆ. 102 ಸಕ್ರಿಯ ಪ್ರಕರಣ: ಜಿಲ್ಲೆಯಲ್ಲಿ ಸದ್ಯ ಒಟ್ಟು 1063 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಶ್ರೀ ಜಟ್ಟಿಗೇಶ್ವರ ಯೂತ್ ಕ್ಲಬ್ ಲೈಟ್ ಹೌಸ್ ಗಂಗೊಳ್ಳಿ ಇದರ ೨೯ನೇ ವಾರ್ಷಿಕೋತ್ಸವದ ಪ್ರಯುಕ್ತ ಬಡವರಿಗೆ ಉಚಿತ ಆಹಾರ ಸಾಮಾಗ್ರಿ ಕಿಟ್ ವಿತರಣಾ ಕಾರ್ಯಕ್ರಮ ಲೈಟ್ ಹೌಸ್ ಬಳಿಯ ಶ್ರೀ ಜಟ್ಟಿಗೇಶ್ವರ ದೇವಸ್ಥಾನದ ವಠಾರದಲ್ಲಿ ಬುಧವಾರ ಜರಗಿತು. ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘದ ಅಧ್ಯಕ್ಷ ಸದಾಶಿವ ಖಾರ್ವಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀನಿವಾಸ ಖಾರ್ವಿ ಬಡವರಿಗೆ ಉಚಿತ ಆಹಾರದ ಕಿಟ್ ವಿತರಿಸಿದರು. ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘದ ಉಪಾಧ್ಯಕ್ಷ ಸೂರಜ್ ಖಾರ್ವಿ, ನಿರ್ದೇಶಕ ಚಂದ್ರ ಖಾರ್ವಿ, ಗಂಗೊಳ್ಳಿ ಗ್ರಾಪಂ ಸದಸ್ಯೆ ಶಾಂತಿ ಖಾರ್ವಿ ಮತ್ತಿತರರು ಉಪಸ್ಥಿತರಿದ್ದರು. ಸಂಘದ ಅಧ್ಯಕ್ಷ ನಾಗರಾಜ ಖಾರ್ವಿ ಆರ್.ಎನ್. ಸ್ವಾಗತಿಸಿದರು. ವಿಶ್ವನಾಥ ಎಂ.ಆರ್. ಕಾರ್ಯಕ್ರಮ ನಿರ್ವಹಿಸಿದರು. ಮಡಿ ವಿಶ್ವನಾಥ ಖಾರ್ವಿ ವಂದಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೆಂಗಳೂರು: ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮದ ವತಿಯಿಂದ ಹೊರತಂದಿರುವ ಮೌಲ್ಯವರ್ಧಿತ ಮೀನಿನ ಉತ್ಪನ್ನಗಳನ್ನು ಮುಖ್ಯಂತ್ರಿಗಳಾದ ಬಿ. ಎಸ್. ಯಡಿಯೂರಪ್ಪ ಅವರು ತಮ್ಮ ಕಛೇರಿಯಲ್ಲಿ ಬಿಡುಗಡೆಗೊಳಿಸಿದರು. ಈ ಸಂದರ್ಭ ಬಂದರು ಮತ್ತು ಮೀನುಗಾರಿಕೆ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್, ಮೀನುಗಾರಿಕಾ ಅಭಿವೃದ್ಧಿ ನಿಗಮದ ನಿರ್ದೇಶಕ ಎಂ. ಎಲ್. ದೊಡ್ಡಮನಿ, ಮತ್ಸ್ಯ ಬಂಧನ ಸಂಸ್ಥೆಯ ಮ್ಯಾನೆಜಿಂಗ್ ಡೈರೆಕ್ಟರ್ ಗೋವಿಂದ ಬಾಬು ಪೂಜಾರಿ, ಅರುಣ್ ಧನ್‌ಪಾಲ್, ಮೀನುಗಾರಿಕಾ ಇಲಾಖೆ ನಿರ್ದೇಶಕರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು. ಮತ್ಸ್ಯ ಬಂಧನ ಸಂಸ್ಥೆಯಿಂದ ಉತ್ಪಾದನೆ: ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮದ ಈ ಹೊಸ ಉತ್ಪನ್ನ ಫಿಶ್ ವೇಫರ‍್ಸ್ ಮೊದಲಾದವುಗಳ್ನು ಮತ್ಸ್ಯ ಬಂಧನ ಸಂಸ್ಥೆಯು ತಯಾರಿಕೆ ಹಾಗೂ ಪ್ಯಾಕಿಂಗ್ ಜವಾಬ್ದಾರಿ ಹೊತ್ತಿದೆ. ಸದ್ಯ ಬೆಂಗಳೂರಿನಲ್ಲಿ ಸಂಸ್ಥೆಯ ಉತ್ಪಾದಕ ಘಟಕ ಕಾರ್ಯನಿರ್ವಹಿಸಲಿದ್ದು, ಕೆಲ ತಿಂಗಳುಗಳಲ್ಲಿ ಬೈಂದೂರು ತಾಲೂಕಿನಲ್ಲಿಯೇ ಉತ್ಪಾದನಾ ಘಟಕ ಆರಂಭವಾಗಲಿದೆ. ಶೆಫ್‌ಟಾಕ್ ಸಂಸ್ಥೆಯ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಜೂ.19ರ ಶುಕ್ರವಾರ ಒಟ್ಟು 11 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದ್ದು ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಎರಡನೇ ಸಾವು: ಮುಂಬೈನಿಂದ ತೆಕ್ಕಟ್ಟೆ ಭಾಗದ 54 ವರ್ಷ ಪ್ರಾಯದ ವ್ಯಕ್ತಿ ಮೃಪಪಟ್ಟಿದ್ದು, ವರದಿಯಲ್ಲಿ ಅವರಿಗೆ ಕೊರೋನಾ ಪಾಸಿಟಿವ್ ಬಂದಿದೆ. ಮುಂಬೈನಿಂದ ನಾಲ್ವರು ಜೂನ್ 18ರ ಮಧ್ಯಾಹ್ನ ಉಡುಪಿ ಜಿಲ್ಲೆಗೆ ಆಗಮಿಸಿದ್ದು, ಅವರೆಲ್ಲರಿಗೂ ಡಿಸ್ಟಿಕ್ ರಿಸಿವ್ ಸೆಂಟರಿನಲ್ಲಿ ಥರ್ಮಲ್ ಸ್ಕ್ಯಾನಿಂಗ್ ಮಾಡಲಾಗಿತ್ತು. ಟೆಂಪ್ರೆಚರ್ ಹೆಚ್ಚಿಲ್ಲದೇ ಇದ್ದುದರಿಂದ ಅವರನ್ನು ಹೋಮ್ ಕ್ವಾರಂಟೈನಿಗೆ ಕಳುಹಿಸಲಾಗಿತ್ತು. ಆದರೆ ಸಂಜೆಯ ವೇಳೆಗೆ ಅವರಲ್ಲಿ ಓರ್ವರು ಮೃತಪಟ್ಟಿದ್ದರು. ಅವರ ಸ್ವ್ಯಾಬ್ ಪರೀಕ್ಷಿಸಿದಾಗ ಮೃತ ವ್ಯಕ್ತಿಗೆ ಕೊರೋನಾ ಪಾಸಿಟಿವ್ ಇರುವುದು ದೃಢವಾಗಿತ್ತು. ಅವರೊಂದಿಗಿದ್ದ, ಉಳಿದ ಮೂವರ ಸ್ವ್ಯಾಬ್ ತೆಗೆದು ಪರೀಕ್ಷೆಗೆ ಕಳುಹಿಸಿ ಮನೆಯನ್ನು ಸೀಲ್ ಡೌನ್ ಮಾಡಲಾಗಿದೆ. ಸದ್ಯ ಲಭ್ಯವಿರುವ ಮಾಹಿತಿಯಂತೆ ಮೃತ ವ್ಯಕ್ತಿ ಕಳೆದ ಕೆಲವು ದಿನಗಳಿಂದ ಅರಶಿನ ಕಾಮಾಲೆ (ಜಾಂಡೀಸ್) ರೋಗದಿಂದ ಬಳಲುತ್ತಿದ್ದರು. ತನ್ನ ಆರೋಗ್ಯ ಪರಿಸ್ಥಿತಿ ಗಂಭೀರವಾಗಿದ್ದ ಹಿನ್ನೆಲೆಯಲ್ಲಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಉಡುಪಿ ಜಿಲ್ಲೆಯಲ್ಲಿ ಕೊವೀಡ್-19ಗೆ ಮತ್ತೊರ್ವ ವ್ಯಕ್ತಿ ಬಲಿಯಾಗಿದ್ದಾರೆ. ಮಹಾರಾಷ್ಟದಿಂದ ಬಂದಿದ್ದ ತೆಕ್ಕಟ್ಟೆ ಭಾಗದ 54 ವರ್ಷ ಪ್ರಾಯದ ವ್ಯಕ್ತಿ ಮೃಪಪಟ್ಟಿದ್ದು, ವರದಿಯಲ್ಲಿ ಅವರಿಗೆ ಕೊರೋನಾ ಪಾಸಿಟಿವ್ ಕಂಡುಬಂದಿದೆ. ಮಹಾರಾಷ್ಟದಿಂದ ನಾಲ್ವರು ಜೂನ್ 18ರ ಮಧ್ಯಾಹ್ನ ಉಡುಪಿ ಜಿಲ್ಲೆಗೆ ಆಗಮಿಸಿದ್ದು, ಅವರೆಲ್ಲರಿಗೂ ಡಿಸ್ಟಿಕ್ ರಿಸಿವ್ ಸೆಂಟರಿನಲ್ಲಿ ಥರ್ಮಲ್ ಸ್ಕ್ಯಾನಿಂಗ್ ಮಾಡಲಾಗಿತ್ತು. ಟೆಂಪ್ರೆಚರ್ ಹೆಚ್ಚು ಇಲ್ಲದೇ ಇದ್ದುದರಿಂದ ಹೋಮ್ ಕ್ವಾರಂಟೈನಿಗೆ ಕಳುಹಿಸಲಾಗಿತ್ತು. ಆದರೆ ಸಂಜೆಯ ವೇಳೆಗೆ ಓರ್ವರು ಮೃತಪಟ್ಟಿದ್ದರು. ಅವರ ಸ್ವ್ಯಾಬ್ ಪರೀಕ್ಷಿಸಿದಾಗ ಮೃತ ವ್ಯಕ್ತಿಗೆ ಕೊರೋನಾ ಪಾಸಿಟಿವ್ ಇರುವುದು ದೃಢವಾಗಿತ್ತು. ಮರಣೋತ್ತರ ಪರೀಕ್ಷೆಯ ಬಳಿಕ ಮರಣಕ್ಕೆ ನಿಖರ ಕಾರಣ ತಿಳಿದುಬರಲಿದೆ. ಕುಂದಾಪ್ರ ಡಾಟ್ ಕಾಂ ಸುದ್ದಿ. ಈ ಬಗ್ಗೆ ಮಾಹಿತಿ ನೀಡಿರುವ ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಅವರು, ಕೋವಿಡ್ ಬಂದ ನಂತರ ಜೀವ ಉಳಿಸುವುದು ನಮ್ಮ ಮೊದಲ ಆದ್ಯತೆಯಾಗಿದ್ದು, ವೈದ್ಯರ ತಂಡ ನಿರಂತವಾಗಿ ಕೆಲಸ ಮಾಡುತ್ತಿದೆ. ಮುಂಬೈನಿಂದ ಬರುವಾಗಲೇ ತಡವಾಗಿ ಬಂದು ಸರಿಯಾದ ಮಾಹಿತಿ ಒದಗಿಸದಿದ್ದರೇ, ಜೀವಕ್ಕೆ…

Read More