Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಸಂಗಮ್‌ನ ಬಳಿ ಅಪರಿಚಿತ ವ್ಯಕ್ತಿಯೋರ್ವ ವಿಪರೀತ ಮದ್ಯ ಸೇವಿಸಿ ಮೃತಪಟ್ಟಿರುವುದು ವರದಿಯಾಗಿದೆ. ಸಂಗಮ್ ರಸ್ತೆಯ ಪಶ್ಚಿಮ ಬದಿಯ ಮಣ್ಣು ರಸ್ತೆಯಲ್ಲಿ ಸುಮಾರು ೩೫ ರಿಂದ ೪೦ ವರ್ಷದ ಗಂಡಸಿನ ಮೃತದೇಹ ಕಂಡುಬಂದಿದ್ದು, ವ್ಯಕ್ತಿಯು ವಿಪರೀತ ಮದ್ಯ ಸೇವನೆ ಮಾಡಿ ಹೃದಯಾಘಾತದಿಂದ ಅಥವಾ ಇನ್ನಾವುದೋ ಕಾರಣದಿಂದ ಮೃತಪಟ್ಟಿರಬಹುದೆಂದು ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತೋಟದಲ್ಲಿದ್ದ ಬಾವಿಗೆ ಬಿದ್ದ ಜಿಂಕೆಯನ್ನು ಅರಣ್ಯಾಧಿಕಾರಿಗಳು ರಕ್ಷಿಸಿದ ಘಟನೆ ತಾಲೂಕಿನ ಕೋಟೇಶ್ವರ ಸಮೀಪದ ಅಸೋಡು ನಾಯ್ಕರಗುಡ್ಡೆ ಎಂಬಲ್ಲಿ ನಡೆದಿದೆ. ಖಾಸಗಿ ವ್ಯಕ್ತಿಯೋರ್ವರ ತೋಟದ ಬಾವಿಗೆ ಜಿಂಕೆಯೊಂದು ಬಿದ್ದಿರುವುದು ಗಮನಕ್ಕೆ ಬರುತ್ತಿದ್ದಂತೆಯೇ ಕುಂದಾಪುರ ಅರಣ್ಯ ಇಲಾಖೆಗೆ ಮಾಹಿತಿ ನೀಡಲಾಗಿದ್ದು, ಕೂಡಲೇ ಕಾರ್ಯಪ್ರವೃತ್ತರಾದ ಇಲಾಖಾ ಸಿಬ್ಬಂದಿಗಳು ೪೦ ಅಡಿಗೂ ಅಧಿಕ ಆಳವಿರುವ ಬಾವಿಯಲ್ಲಿದ್ದ ಜಿಂಕೆಯನ್ನು ಮೇಲಕ್ಕೆತ್ತಿ, ಪ್ರಥಮ ಚಿಕಿತ್ಸೆ ನೀಡಿದ್ದಾರೆ. ಚೇತರಿಸಿಕೊಂಡ ಜಿಂಕೆ ಮತ್ತೆ ಕಾಡಿನತ್ತ ಓಡಿಹೋಗಿದೆ. ಕುಂದಾಪುರ ಆರ್.ಎಫ್.ಒ ಪ್ರಭಾಕರ ಕುಲಾಲ್ ಮಾರ್ಗದರ್ಶನದಲ್ಲಿ ಉಪವಲಯ ಅರಣ್ಯಾಧಿಕಾರಿ ಉದಯ್, ಅರಣ್ಯ ರಕ್ಷಕಾರದ ಮಾಲತಿ, ವೀಕ್ಷಕ ಸೋಮಶೇಖರ್ ಹಾಗೂ ಸ್ಥಳಿಯರು ಜಿಂಕೆ ರಕ್ಷಣೆ ಕಾರ್ಯಾಚರಣೆಯಲ್ಲಿ ಪಾಲ್ಗೊಂಡರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: 2019-20 ನೇ ಸಾಲಿನ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಕುಂದಾಪುರ ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಕುಮಾರಿ ಸುಹಾಸಿನಿ ಆರ್. ಗೋಟ 600ಕ್ಕೆ 595 ಅಂಕ ಗಳಿಸಿ ಉಡುಪಿ ಜಿಲ್ಲೆಗೆ ದ್ವಿತೀಯ ಸ್ಥಾನ ಗಳಿಸಿದ್ದಾರೆ. ಇವರಿಗೆ ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಉಪನ್ಯಾಸಕ ವೃಂದ ಅಭಿನಂದನೆ ಸಲ್ಲಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ನನಗೆ ಪೊಲೀಸರ ಭದ್ರತೆ ಬೇಡ, ಕಾರ್ಯಕರ್ತರೇ ಶ್ರೀರಕ್ಷೆ. ರಾಜ್ಯದ ಜನಸಂಖ್ಯೆ ಹೋಲಿಸಿದರೆ ಪೊಲೀಸರ ಸಂಖ್ಯೆ ಕಡಿಮೆ ಇದೆ. ಹಾಗಾಗಿ ಇಬ್ಬರು ಗನ್‌ಮ್ಯಾನ್‌ಗಳಿಗೂ ವಾಪಾಸ್ ಕಳುಹಿಸಿದ್ದೇನೆ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು. ಅವರು ಕುಂದಾಪುರದಲ್ಲಿ ವಿದೇಶಗಳಿಂದ ಬೆದರಿಕೆ ಕರೆಗಳು ಬರುತ್ತಿರುವ ಬಗ್ಗೆ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಪ್ರತಿಕ್ರಿಯಿಸಿ ನಿತ್ಯವೂ ವಿದೇಶದಿಂದ ಹಲವು ಇಂಟರ್‌ನೆಟ್ ಬೆದರಿಕೆ ಕರೆ ಬರುತ್ತಿದೆ. ಈ ಬಗ್ಗೆ ರಾಜ್ಯದ ಡಿಜಿಪಿ ಪ್ರವೀಣ್ ಸೂದ್ ಬಳಿ ಮಾತನಾಡಿದ್ದೇನೆ. ತನಿಖೆ ನಡೆಸುವಂತೆ ಮನವಿ ಮಾಡಿದ್ದೇನೆ. ಕಳೆದ ೨ ವರ್ಷದಿಂದ ಇಂತಹ ಕರೆ ಬರುತ್ತಿದ್ದ ಬಗ್ಗೆ ಈ ಹಿಂದೆಯೂ ದೂರು ನೀಡಲಾಗಿತ್ತು. ಪಿಎಫ್‌ಐ ಹಾಗೂ ಎಸ್‌ಡಿಪಿಐ ವಿರುದ್ಧ ಮಾತನಾಡಿದಾಗ ಇಂತಹ ಕರೆಗಳು ಬಂದಿದ್ದವು ಇತ್ತೀಚೆಗೆ ತಬ್ಲಿಘಿ ಜಮಾತ್ ಬಗ್ಗೆ ಮಾತನಾಡಿದ್ದಕ್ಕೆ ಹೀಗೆ ಕರೆಗಳು ಬರುತ್ತಿದೆ. ಹೀಗೆ ಬೆದರಿಕೆ ಹಾಕುತ್ತಿರುವ ಕರೆಯ ಮಾಹಿತಿಯನ್ನು ಪೊಲೀಸರಿಗೆ ನೀಡಿದ್ದು, ತನಿಕೆ ನಡೆಸಲಿ ಎಂದರು. ಪಡಿಯಾರ್ ಮನೆಗೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗಾಗಿ ಆನ್ ಲೈನ್ ತರಗತಿಗಳಿಗೆ ಶ್ರೀ ವೆಂಕಟರಮಣ ದೇವ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್‌ನ ಕಾರ್ಯದರ್ಶಿ ಕೆ. ರಾಧಾಕೃಷ್ಣ ಶೆಣೈ ಆನ್‌ಲೈನ್ ತರಗತಿಗಳಿಗೆ ಚಾಲನೆ ನೀಡಿದರು. ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಪ್ರತಿದಿನ ಬೆಳಿಗ್ಗೆ 7:30 ರಿಂದ 10:30 ರವರೆಗೆ ಆನ್‌ಲೈನ್ನಲ್ಲಿ ತರಗತಿಗಳು ನೇರಪ್ರಸಾರಗೊಳ್ಳಲಿದೆ. ಮುಂಬರುವ ದಿನಗಳಲ್ಲಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಆನ್‌ಲೈನ್ ತರಗತಿಗಳನ್ನು ನಡೆಸುವ ಬಗ್ಗೆ ತಯಾರಿ ನಡೆಸಿದ್ದು ಬ್ಯಾಂಕಿಂಗ್ ಫೌಂಡೇಷನ್, ಸಿ.ಎ./ಸಿಎಸ್ ಫೌಂಡೇಷನ್ ಕೋರ್ಸಗಳನು ಕೂಡ ಆನ್ಲೈನ್‌ನಲ್ಲಿ ಪರಿಚಯಿಸುವುದಾಗಿ ಕಾಲೇಜಿನ ಆಡಳಿತ ಮಂಡಳಿ ಹಾಗೂ ಪ್ರಾಂಶುಪಾಲರು ಮಾಹಿತಿ ನೀಡಿದ್ದಾರೆ. ________________ Need a Website / Mobile App / Bulk SMS / Online Class Help for your Institutions or Business? Call  9743877358 / Mails us for quotation: samashtimv@gmail.com …

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಕುಡಿಯುವ ನೀರಿನ ಪೈಪ್ ಲೈನ್ ಅಳವಡಿಕೆಗೆ ಇಡೀ ರಸ್ತೆಯನ್ನು ಅಗೆದಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಸ್ಥಳೀಯರು ಕಾಮಗಾರಿಗೆ ತಡೆಯೊಡ್ಡಿದ ಘಟನೆ ಸೋಮವಾರ ಗುಜ್ಜಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದಿದೆ. ಗುಜ್ಜಾಡಿ ಗ್ರಾಮದ ನಾಯಕವಾಡಿ ಪರಿಸರದ ಮೇಲಂಡಿ ಎಂಬಲ್ಲಿ ಗ್ರಾಮ ಪಂಚಾಯತ್‌ನ ೧೪ನೇ ಹಣಕಾಸು ಯೋಜನೆಯಡಿ ಕುಡಿಯುವ ನೀರಿನ ಪೈಪ್ ಲೈನ್ ಅಳವಡಿಕೆಗೆ ೭೧ ಸಾವಿರ ರೂ. ಮೀಸಲಿಡಲಾಗಿತ್ತು. ಮೇ ೩೧ರೊಳಗೆ ಕಾಮಗಾರಿಯನ್ನು ಮುಗಿಸಬೇಕೆಂದು ಸಂಬಂಧಪಟ್ಟ ಗುತ್ತಿಗೆದಾರರಿಗೆ ಸೂಚಿಸಲಾಗಿತ್ತು. ಭಾನುವಾರ ಗುತ್ತಿಗೆದಾರರು ಯಾರ ಗಮನಕ್ಕೂ ತಾರದೇ ಮೇಲಂಡಿ ಪರಿಸರದ ಏಕೈಕ ರಸ್ತೆಯನ್ನು ಅಗೆದು ಹಾಕಿ ಅಸಮಪರ್ಕವಾಗಿ ಪೈಪ್ ಅಳವಡಿಸಿದ್ದಾರೆ. ಪೈಪ್ ಲೈನ್ ಅಳವಡಿಸುವ ಕಾಮಗಾರಿ ಪ್ರಾರಂಭಿಸುವ ಮೊದಲು ಗ್ರಾಮ ಪಂಚಾಯತ್ ಗಮನಕ್ಕೆ ತರುವಂತೆ ಗುತ್ತಿಗೆದಾರರಿಗೆ ಸೂಚಿಸಲಾಗಿತ್ತಾದರೂ, ಗುತ್ತಿಗೆದಾರರು ಸ್ಥಳೀಯಾಡಳಿತದ ಗಮನಕ್ಕೆ ತಾರದೆ ಇಡೀ ರಸ್ತೆಯನ್ನು ಅಗೆದು ಹಾಕಿರುವುದು ಸ್ಥಳೀಯರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಗುತ್ತಿಗೆದಾರರ ಅಸಮರ್ಪಕ ಕಾಮಗಾರಿಯನ್ನು ವಿರೋಧಿಸಿ ಭಾನುವಾರ ಸಂಜೆ ಸ್ಥಳೀಯರು ಕಾಮಗಾರಿಗೆ ತಡೆಯೊಡ್ಡಿದ್ದಾರೆ. ಸುದ್ಧಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ರೈತರಿಗೆ ವಿತರಿಸಲಾಗುವ ಭಿತ್ತನೆ ಬೀಜ, ಕೀಟನಾಶಕಗಳು ಉತ್ತಮ ಗುಣಮಟ್ಟದಿಂದ ಕೂಡಿರಬೇಕು. ಈ ಕುರಿತಂತೆ, ಭಿತ್ತನೆ ಬೀಜ ಮತ್ತು ಕೀಟನಾಶಕಗಳ ಮಾದರಿಯನ್ನು ಕೃಷಿ ಇಲಾಖೆಯ ಅಧಿಕಾರಿಗಳು ಪ್ರಯೋಗಾಲಯಗಳ ಮೂಲಕ ಪರೀಕ್ಷಿಸಿ, ರೈತರಿಗೆ ಉತ್ತಮ ಗುಣಮಟ್ಟದ ಭಿತ್ತನೆ ಬೀಜಗಳು ದೊರೆಯುವಂತೆ ಮಾಡಬೇಕು ಎಂದು ರಾಜ್ಯದ ಕೃಷಿ ಸಚಿವ ಬಿ. ಸಿ. ಪಾಟೀಲ್ ಸೂಚಿಸಿದರು. ಸೋಮವಾರ ಅವರು ಉಡುಪಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಉಡುಪಿ ಜಿಲ್ಲೆಯಲ್ಲಿ ಬೀಜ ರಸಗೊಬ್ಬರಗಳ ಲಭ್ಯತೆ ಮತ್ತು ಕೃಷಿ ಉತ್ಪನ್ನಗಳ ಸರಕು ಸಾಗಾಗಣಿಕೆ ಬಗ್ಗೆ, ಜಿಲ್ಲಾಧಿಕಾರಿಗಳು, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ ಮತ್ತು ಸಂಬಂದಪಟ್ಟ ಇಲಾಖೆಗಳ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರೈತರಿಗೆ ವಿವಿಧ ಮಳಿಗೆಗಳಲ್ಲಿ ವಿತರಿಸಲಾಗುವ ಭಿತ್ತನೆ ಬೀಜ, ಕೀಟನಾಶಕನ್ನು ಪರೀಕ್ಷಿಸಿ, ಕಳಪೆ ಗುಣಮಟ್ಟದ ಭಿತ್ತನೆ ಬೀಜ, ಅವಧಿ ಮೀರಿದ ಕೀಟನಾಶಕಗಳನ್ನು ಸರಬರಾಜು ಮಾಡುವವರ ವಿರುದ್ದ ನಿರ್ದಾಕ್ಷಿಣ್ಯವಾಗಿ ದೂರು ದಾಖಲಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಕೃಷಿ ಮತ್ತು ತೋಟಗಾರಿಕೆ ಇಲಾಖೆಯ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಲಾಕ್‌ಡೌನ್ ಸಡಿಲಿಕೆಯ ಬಳಿಕ ಅಗತ್ಯ ವಸ್ತುಗಳ ಖರೀದಿಗಿದ್ದ ಸಮಯವನ್ನು ವಿಸ್ತರಿಸಲಾಗಿದ್ದು, ಬೆಳಿಗ್ಗೆ 7 ಗಂಟೆಯಿಂದ ಸಂಜೆ 7 ಗಂಟೆಯ ತನಕ ಸರಕಾರ ಸೂಚಿಸಿರುವ ಎಲ್ಲಾ ಅಂಗಡಿಗಳು ತೆರೆದಿರಲಿವೆ. ಈ ಬಗ್ಗೆ ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಆದೇಶ ಹೊರಡಿಸಿದ್ದಾರೆ. ಲಾಕ್‌ಡೌನ್ ಆರಂಭದಿಂದ ಬೆಳಿಗ್ಗೆ 7ರಿಂದ 11ರ ತನವಿದ್ದ ಅಗತ್ಯ ವಸ್ತುಗಳ ಖದೀದಿ ಸಮಯವನ್ನು ನಿನ್ನೆಯ ಆದೇಶದಲ್ಲಿ ಮಧ್ಯಾಹ್ನ 1ರ ತನಕ ವಿಸ್ತರಿಸಲಾಗಿತ್ತು. ಆದರೆ ನಗರ ಪ್ರದೇಶಗಳಲ್ಲಿ ಜನದಟ್ಟಣೆಯಿಂದ ಸಾಮಾಜಿಕ ಅಂತರ ಕಾಯ್ದುಕೊಳ್ಳುವಲ್ಲಿ ಕಷ್ಟವಾಗುತ್ತಿದ್ದುದರಿಂದ ಅಗತ್ಯ ವಸ್ತುಗಳ ಖರೀದಿ ಸಮಯವನ್ನು ವಿಸ್ತರಿಸಲಾಗಿದೆ. ಕುಂದಾಪ್ರ ಡಾಟ್ ಕಾಂ ಸುದ್ದಿ/ ಬೆಳಿಗ್ಗೆ 9ರಿಂದ ಸಂಜೆ 7ರ ತನಕ ಮಧ್ಯದಂಗಡಿ ಓಪನ್: ಇನ್ನು ಮದ್ಯದ ಅಂಗಡಿಗಳು ಬೆಳಿಗ್ಗೆ 9 ರಿಂದ ಸಂಜೆ 7 ಗಂಟೆಯ ತನಕ ತೆರೆದಿರಲಿವೆ. ರಾತ್ರಿ 7 ಗಂಟೆಯಿಂದ ಬೆಳಿಗ್ಗೆ 7 ಗಂಟೆಯ ತನಕ ಸಾರ್ವಜನಿಕರ ಸಂಚಾರವನ್ನು ನಿಷೇಧಿಸಲಾಗಿದೆ. ಸಾಮಾಜಿಕ ಅಂತರ ಕಾಪಾಡಲು ಎಲ್ಲಾ ಅಗತ್ಯ ವಸ್ತುಗಳು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕೋವಿಡ್-19 ಕುರಿತಂತೆ ತಾತ್ಕಾಲಿಕ ನಿಯಮಾವಳಿಗಳನ್ನು ಹೊರಡಿಸಿ ಸರ್ಕಾರದ ಆದೇಶದಂತೆ ಕೆಲವೊಂದು ವಿನಾಯಿತಿ ನೀಡಲಾಗಿರುತ್ತದೆ. ಈಗಾಗಲೇ ಸಿನಿಮಾ ಹಾಲ್‌ಗಳು, ಮಲ್ಟಿಪ್ಲೇಕ್ಸ್ ಶಾಪಿಂಗ್ ಮಾಲ್, ಎಸಿ, ಸೆಂಟ್ರಲ್ ಎಸಿ, ಸಿಂಗಲ್ ಬ್ರ್ಯಾಂಡ್, ಮಲ್ಟಿ ಬ್ರ್ಯಾಂಡ್, ಸ್ಪೋರ್ಟ್ಸ್ ಕಾಂಪೆಕ್ಸ್ ಮುಂತಾದವುಗಳನ್ನು ಹೊರತ್ತುಪಡಿಸಿ ಉಳಿದ ಅಂಗಡಿಗಳನ್ನು ತೆರೆಯಲು ಅನುಮತಿಸಲಾಗಿದೆ. ಮುಂದುವರಿದು ಎಸಿ, ಸೆಂಟ್ರಲ್ ಎಸಿ, ಸಿಂಗಲ್ ಬ್ರ್ಯಾಂಡ್, ಮಲ್ಟಿ ಬ್ರ್ಯಾಂಡ್ ಅಂಗಡಿಗಳಿಗೆ ಸಂಬಂದಿಸಿದಂತೆ ನಿಬಂಧನೆಗಳನ್ನು ವಿಧಿಸಿ ಪ್ರಾರಂಭಿಸಲು ಅನುಮತಿ ನೀಡುವುದು ಸೂಕ್ತವೆಂದು ನಿರ್ಧರಿಸಿ ಈ ಕೆಳಗಿನ ಷರತ್ತಿಗೊಳಪಟ್ಟು ಈ ಅಂಗಡಿಗಳನ್ನು ಪ್ರಾರಂಭಿಸಲು ಜಿಲ್ಲಾಧಿಕಾರಿ ಜಿ.ಜಗದೀಶ್ ಅನುಮತಿ ನೀಡಿದ್ದಾರೆ. ಷರತ್ತುಗಳು: 1) ಚಿನ್ನಾಭರಣ ಮಳಿಗೆಗಳು, ಬಟ್ಟೆ ಅಂಗಡಿಗಳು, ಸಿಂಗಲ್ ಬ್ರ್ಯಾಂಡ್, ಮಲ್ಟಿ ಬ್ರ್ಯಾಂಡ್ ಸೇರಿದಂತೆ ಇತಂಹ ಮಳಿಗೆಗಳಲ್ಲಿ ಎಲ್ಲಾ ಮಹಡಿಗಳಲ್ಲಿ ಸೇರಿ ಒಟ್ಟು ೨೫ ಜನ ಸಿಬ್ಬಂದಿಗಳು ಹಾಗೂ ೨೫ ಜನ ಗ್ರಾಹಕರು ಹಾಗೂ ಮಲ್ಟಿ ಬ್ರಾಂಡ್ ಎಲೆಕ್ರ್ಟಾನಿಕ್ಸ್ ಮಳಿಗೆಗಳಲ್ಲಿ (ಪೈ ಸೇಲ್ಸ್, ಹರ್ಷಮುಂತಾದ) ಒಟ್ಟು 100 ಜನ ಸಿಬ್ಬಂದಿಗಳು ಹಾಗೂ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ರಾಜ್ಯಾದ್ಯಂತ ಇಂದಿನಿಂದ ಮದ್ಯದಂಗಡಿಗಳ ಬಾಗಿಲು ತೆರೆದಿದ್ದು, ಮಧ್ಯಪ್ರಿಯರು ಸರತಿ ಸಾಲಿನಲ್ಲಿ ನಿಂತು ಖರೀದಿಯಲ್ಲಿ ತೊಡಗಿರುವ ದೃಶ್ಯ ಎಲ್ಲೆಡೆಯೂ ಕಂಡುಬರುತ್ತಿದೆ. ಕುಂದಾಪುರ ಹಾಗೂ ಬೈಂದೂರು ತಾಲೂಕಿನ ಎಲ್ಲಾ ಬಾರ್‌ಗಳ ಮುಂದೆಯೂ ಜನಸಂದಣಿ ಸಾಮಾನ್ಯವಾಗಿದ್ದು, ಮದ್ಯಪ್ರಿಯರ ನೂಕುನುಗ್ಗಲಿನಿಂದಾಗಿ ಬೈಂದೂರು ಪೇಟೆಯಲ್ಲಿ ಕೆಲಕಾಲ ಟ್ರಾಫಿಕ್ ಜಾಮ್ ಆದ ಘಟನೆಯೂ ನಡೆದಿದೆ. ಇಂತಹ ಸಂದರ್ಭದಲ್ಲಿ ಬಾರ್‌ಗಳನ್ನು ಮತ್ತೆ ತೆರೆದಿರುವುದಕ್ಕೆ ಹಲವರು ವಿರೋಧ ವ್ಯಕ್ತಪಡಿಸಿದ್ದಾರೆ. ಮಧ್ಯಾಹ್ನ 1ರ ತನಕ ಮಾರಾಟ: ಲಾಕ್‌ಡೌನ್ ಜಾರಿಯಾದಾಗಲಿಂದ ಮುಚ್ಚಿದ್ದ ಮದ್ಯದಂಗಡಿಗಳು, ಇಂದಿನಿಂದ ತೆರೆದಿರುವುದರಿಂದ ಮದ್ಯಪ್ರಿಯರ ಚಡಪಡಿಕೆ ಹೆಚ್ಚಿದ್ದವು. ಎಲ್ಲಾ ಬಾರ್‌ಗಳ ಮುಂದೆ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಮಾರ್ಕ್ ಮಾಡಲಾಗಿತ್ತು. ಕೆಲವು ಬಾರ್‌ಗಳ ಮುಂದೆ ಹತ್ತಾರು ಮೀಟರ್‌ಗಳಷ್ಟು ದೂರಕ್ಕೆ ಮದ್ಯಪ್ರಿಯರ ಸರತಿ ಸಾಲು ಸಾಗಿತ್ತು. ಕೆಲವೆಡೆ ಗುಂಪುಗುಂಪಾಗಿ ನಿಂತು ಸಾಮಾಜಿಕ ಅಂತರವನ್ನು ಗಾಳಿಗೆ ತೂರಿರುವುದು ಕಂಡುಬಂತು. ಉಡುಪಿ ಜಿಲ್ಲೆಯಲ್ಲಿ ಮಧ್ಯಾಹ್ನ 1 ಗಂಟೆಗೆ ಎಲ್ಲಾ ಅಂಗಡಿ ಬಾಗಿಲು ಹಾಕಬೇಕಿರುವುದರಿಂದ ಬಾರ್‌ಗಳು 1 ಗಂಟೆಯ ಬಳಿಕ ಕ್ಲೋಸ್ ಆಗಲಿದ್ದು,…

Read More