ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕಾಲ್ತೋಡು ಸರಕಾರಿ ಆಯುರ್ವೇದ ಚಿಕಿತ್ಸಾಲಯದಿಂದ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಆಯಷ್ ಕಿಟ್ ವಿತರಣಾ ಕಾರ್ಯಕ್ರಮ ಕಂಬದಕೋಣೆ ಗ್ರಾಮ ಪಂಚಾಯತಿಯಲ್ಲಿ ಸೋಮವಾರ ಜರುಗಿತು. ಆಯುರ್ವೇದ ಚಿಕಿತ್ಸಾಲಯದ ವೈದ್ಯಾಧಿಕಾರಿ ಡಾ. ವೀಣಾ ಕಾರಂತ್ ಆಯುಷ್ ಕಿಟ್ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭ ಕಂಬದಕೋಣೆ ಪಂಚಾಯತ್ ಅಧ್ಯಕ್ಷ ಆನಂದ ಪೂಜಾರಿ, ಪಿಡಿಓ ಪೂರ್ಣಿಮಾ, ಹಾಗೂ ಇತರೆ ಸದಸ್ಯರು ಮೊದಲಾದವರು ಇದ್ದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ವರದಿ. ಬ್ರಹ್ಮಾವರ: ಒಂದು ಹೊತ್ತಿನ ಊಟಕ್ಕೂ ಪರದಾಡುವ ಬಡವರು, ಬೀದಿ ಬದಿಯಲ್ಲಿ ಮಾನಸಿಕ ಸ್ಥಿಮಿತ ಕಳೆದುಕೊಂಡು ತಿರುಗುವವರು, ಮನೆಯಲ್ಲಿ ಎಲ್ಲ ಇದ್ದು ಇಲ್ಲದಂತೆ ಶೋಚನೀಯ ಬದುಕನ್ನು ಸಾಗಿಸುವರು. ಇವರೆಲ್ಲರಿಗೂ ಒಂದು ಬದುಕಿದೆ ಅಂತ ಅನಿಸಿದರೂ ಸಾಕಷ್ಟು ಭಾರಿ ನಿರ್ಲಕ್ಷ್ಯಕ್ಕೆ ಒಳಗಾಗುತ್ತಾರೆ. ಆದರೆ ಪ್ರಶಾಂತ್ ಪೂಜಾರಿ ಕೂರಾಡಿ ಎಂಬ ಈ ಕರುಣಾಮಯಿ ಯುವಕನೋರ್ವ ದುಬೈನಲ್ಲಿ ಹತ್ತು ವರ್ಷ ದುಡಿದು ಬಳಿಕ ಆ ಕೆಲಸವನ್ನು ತೊರೆದು ಊರಿಗೆ ಮರಳಿದ್ದಲ್ಲದೇ ಅಸಹಾಯಕರ ನೋವಿಗೂ ಸ್ಪಂದಿಸುತ್ತಿದ್ದಾರೆ. ಅವರಿಗಾಗಿಯೇ ಅಪ್ಪ-ಅಮ್ಮ ಅನಾಥಾಶ್ರಮ ಎಂಬ ಸೂರು ನಿರ್ಮಿಸಿ ತನ್ನ ಹಗಲು-ಇರುಳಿನ ದುಡಿಮೆಯ ಜೊತೆ ಅವರಿವರು ಸಹಕಾರದಿಂದ 20 ಜನರ ಬಾಳಿಗೆ ಬೆಳಕಾಗುತ್ತಿದ್ದಾರೆ. ಬ್ರಹ್ಮಾವರದ ಆಕಾಶವಾಣಿ ಸಮೀಪದಲ್ಲಿರುವ ಗಿರಿಜಾ ಕೃಷ್ಣ ಪೂಜಾರಿ ಚಾರಿಟೇಬಲ್ ಟ್ರಸ್ಟ್ (ರಿ.) ಕೂರಾಡಿ ಅವರ ಅಪ್ಪ-ಅಮ್ಮ ಅನಾಥಾಲಯ ನೊಂದವರ ಬದುಕಿಗೆ ಆಧಾರ ಸ್ಥಂಭವಾಗಿ ಹಲವಾರು ಹಿರಿಯ ಜೀವಗಳ ಕಣ್ಣೀರ ಒರೆಸುವ ಕೆಲಸ ಮಾಡುತ್ತಿದೆ. ಅನಾಥಾಲಯ ಸ್ಥಾಪಿಸಿ 18 ತಿಂಗಳು ಕಳೆದಿದ್ದು ನಿರ್ಗತಿಕರು, ಮಾನಸಿಕ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಡಾ. ಶಿವರಾಮ ಕಾರಂತ ಥೀಮ್ ಪಾರ್ಕ್‌ಗೆ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾಗೂಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಅವರು ಭೇಟಿ ನೀಡಿದರು. ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ಕಾರಂತ ಥೀಮ್ ಪಾರ್ಕ್ ನಲ್ಲಿ ನಡೆಯಬೇಕಾಗಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚೆ ನಡೆಸಲಾಯಿತು. ಅಪರ ಜಿಲ್ಲಾಧಿಕಾರಿಗಳು ಥೀಮ್ ಪಾರ್ಕ್‌ಗೆ ಬರುವ ರಸ್ತೆಯ ಸಮಸ್ಯೆ ಹಾಗೂ ನಿರ್ಮಾಣವಾಗಲಿರುವ ಸ್ವಾಗತ ಗೋಪುರದ ಸ್ಥಳ ಪರಿಶೀಲನೆ ನಡೆಸಿದರು. ಅಲ್ಲದೇ ಮುಂದೆ ಥೀಮ್ ಪಾರ್ಕ್‌ನಲ್ಲಿ ಆಗಬೇಕಾಗಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚೆ ನಡೆಸಿದರು. ಕಾರಂತರ ಸಮಾಧಿ ಸ್ಥಳಕ್ಕೆ ಭೇಟಿ ಇದೇ ಸಂದರ್ಭದಲ್ಲಿ ಕಾರಂತರ ಸಮಾಧಿ ಸ್ಥಳಕ್ಕೆ ಭೇಟಿ ನೀಡಿ ವೀಕ್ಷಿಸಿದರು, ಕಾರಂತರ ಸಮಾಧೀಗೆ ತೆರಳಲು ರಸ್ತೆ ನಿರ್ಮಾಣ ಹಾಗೂ ಕುಟುಂಬದವರ ಜೊತೆ ಸಂಪರ್ಕಿಸಿ ಕಾರಂತರ ಸಮಾಧಿ ನಿರ್ಮಾಣ ಮಾಡುವ ಬಗ್ಗೆ ಸಚಿವರ ಮಾರ್ಗದರ್ಶನದಲ್ಲಿ ಯೋಜನೆ ರೂಪಿಸಲಾಗುವುದೆಂದು ತಿಳಿಸಿದರು. ಈ ಸಂದರ್ಭದಲ್ಲಿ ಬ್ರಹ್ಮಾವರ ತಹಶೀಲ್ದಾರ್ ಕಿರಣ್ ಗೋರಯ್ಯ,…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಜೂ.28ರ ಭಾನುವಾರ 40 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದ್ದು, ಈ ಪೈಕಿ 18 ಪುರುಷರು, 15 ಮಹಿಳೆಯರು ಹಾಗೂ 7 ಮಕ್ಕಳಿಗೆ ಪಾಸಿಟಿವ್ ದೃಢವಾಗಿದೆ. ಒಟ್ಟು ಪ್ರಕರಣಗಳಲ್ಲಿ 6 ಮಂದಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ಸಿಬ್ಬಂದಿ, 15 ಮಂದಿ ಮುಂಬೈನಿಂದ, ಇಬ್ಬರು ಬೆಂಗಳೂರು, ಓರ್ವ ಬಾಗಲಕೋಟೆಯಿಂದ ಹಿಂದಿರುಗಿದವರಾಗಿದ್ದಾರೆ. ಓರ್ವ ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿ ಸೇರಿದಂತೆ 16 ಪ್ರಕರಣ ಪಾಥಮಿಕ ಸಂಪರ್ಕದಿಂದ ಬಂದಿದೆ. ಇಂದು 132ನೆಗೆಟಿವ್: ಈ ತನಕ ಒಟ್ಟು 14,233ಮಾದರಿ ಸಂಗ್ರಹಿಸಿದ್ದು, ಅವುಗಳಲ್ಲಿ 12,788ನೆಗೆಟಿವ್, 1,179ಪಾಸಿಟಿವ್ ಬಂದಿದ್ದು, 266 ಮಂದಿಯ ವರದಿ ಬರುವುದು ಬಾಕಿ ಇದೆ. ಇಂದು ಬಂದಿರುವ ವರದಿಯಲ್ಲಿ 132ನೆಗೆಟಿವ್, 40ಪಾಸಿಟಿವ್ ಬಂದಿದೆ. 126 ಸಕ್ರಿಯ ಪ್ರಕರಣ: ಜಿಲ್ಲೆಯಲ್ಲಿ ಒಟ್ಟು 1,179 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 1051 ಮಂದಿ ಬಿಡುಗಡೆಯಾಗಿದ್ದು, 126 ಮಂದಿ ಕೊರೋನಾ ಸೋಂಕಿತರಿಗೆ ಉಡುಪಿ, ಕುಂದಾಪುರ, ಕಾರ್ಕಳದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿಯ ಪ್ರಧಾನ ಕಛೇರಿಯಲ್ಲಿ ಶನಿವಾರ ಜರುಗಿದ ಕಾರ್ಯಕ್ರಮದಲ್ಲಿ ಆಶಾಕಾರ್ಯಕರ್ತೆಯರಿಗೆ ಗೌರವಧನ ವಿತರಿಸಲಾಯಿತು. ಸಹಕಾರಿಯ ಅಧ್ಯಕ್ಷರಾದ ಎಸ್. ರಾಜು ಪೂಜಾರಿ ಅವರು ಗೌರವಧನ ವಿತರಿಸಿ ಮಾತನಾಡಿ ಕರೋನಾ ಆತಂಕದ ಸಮಯದಲ್ಲಿ ಜೀವ ಪಣವಾಗಿಟ್ಟು ಕೆಲಸ ಮಾಡುತ್ತಿರುವ ಆಶಾಕಾರ್ಯಕರ್ತೆಯ ಸೇವೆ ಶ್ಲಾಘನೀಯ ಎಂದರು. ಜೂನ್ 30ರಂದು ವಯೋನಿವ್ರತ್ತಿ ಹೊಂದುತ್ತಿರುವ ಕುಂದಾಪುರ ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಚಂದ್ರಪ್ರತಿಮಾ ಅವರನ್ನು ಗೌರವಿಸಲಾಯಿತು. ಈ ಸಂದರ್ಭ ಸಹಕಾರ ಅಭಿವೃದ್ಧಿ ಅಧಿಕಾರಿ ಅರುಣಕುಮಾರ್, ಸಂಸ್ಥೆಯ ಉಪಾಧ್ಯಕ್ಷ ಚಂದ್ರಶೀಲ ಶೆಟ್ಟಿ, ನಿರ್ದೇಶಕರುಗಳಾದ ಜಗದೀಶ ಪಿ. ಹಕ್ಕಾಡಿ, ನರಸಿಂಹ ದೇವಾಡಿಗ, ನಾರಾಯಣ ಶೆಟ್ಟಿ, ಸರೋಜಾ ಗಾಣಿಗ, ನಾಗಮ್ಮ, ರಾಮ, ಕಾರ್ಯನಿರ್ವಹಣಾಧಿ ಸಂಜೀವ ಮಡಿವಾಳ ಮೊದಲಾವರು ಉಪಸ್ಥಿತರಿದ್ದರು. ಪತ್ರಕರ್ತ ಸುಬ್ರಮಣ್ಯ ಪಡುಕೋಣೆ ಕಾರ್ಯಕ್ರಮ ನಿರೂಪಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಜೂ.27ರಶನಿವಾರ 14 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ದೃಢವಾಗಿದೆ. ಈ ಪೈಕಿ 7 ಪುರುಷರು, 6 ಮಹಿಳೆಯರು ಹಾಗೂ ಓರ್ವ 6 ವರ್ಷದ ಹುಡುಗಿಗೆ ಪಾಸಿಟಿವ್ ದೃಢವಾಗಿದೆ. ಇಂದು 173 ನೆಗೆಟಿವ್: ಈ ತನಕ ಒಟ್ಟು 14,127ಮಾದರಿ ಸಂಗ್ರಹಿಸಿದ್ದು, ಅವುಗಳಲ್ಲಿ 12,656ನೆಗೆಟಿವ್, 1,139 ಪಾಸಿಟಿವ್ ಬಂದಿದ್ದು, 332 ಮಂದಿಯ ವರದಿ ಬರುವುದು ಬಾಕಿ ಇದೆ. ಇಂದು ಬಂದಿರುವ ವರದಿಯಲ್ಲಿ 173ನೆಗೆಟಿವ್, 14ಪಾಸಿಟಿವ್ ಬಂದಿದೆ. 90 ಸಕ್ರಿಯ ಪ್ರಕರಣ: ಜಿಲ್ಲೆಯಲ್ಲಿ ಒಟ್ಟು 1,139 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 1047 ಮಂದಿ ಬಿಡುಗಡೆಯಾಗಿದ್ದು, 90 ಮಂದಿ ಕೊರೋನಾ ಸೋಂಕಿತರಿಗೆ ಉಡುಪಿ, ಕುಂದಾಪುರ, ಕಾರ್ಕಳದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈವರೆಗೆ ಇಬ್ಬರು ವ್ಯಕ್ತಿಗಳು ಮೃತಪಟ್ಟಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕೆಪಿಸಿಸಿ ನೂತನ ಅಧ್ಯಕ್ಷರಾದ ಡಿ. ಕೆ. ಶಿವಕುಮಾರ್ ಅವರ ಪದಗ್ರಹಣ ಹಾಗೂ ಪ್ರತಿಜ್ಞಾ ದಿನ ಕಾರ್ಯಕ್ರಮದ ಪೂರ್ವಭಾವಿಯಾಗಿ ಶನಿವಾರ ತಲ್ಲೂರಿನಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ವತಿಯಿಂದ ಯುವ ಕಾಂಗ್ರೆಸ್ ಡಿಜಿಟಲ್ ಯೂತ್ ಕಾರ್ಯಗಾರ ನೆಡೆಯಿತು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ ಕೊಡವೂರು ಕಾರ್ಯಗಾರ ಉದ್ಘಾಟಿಸಿ ಮಾತನಾಡಿದರು. ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ, ಕೆಪಿಸಿಸಿ ವೀಕ್ಷಕ ನವೀನ್ ಡಿಸೋಜ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಎಸ್. ರಾಜು ಪೂಜಾರಿ, ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷಮದನ್ ಕುಮಾರ್, ವಂಡ್ಸೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪ್ರದೀಪ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ವಿಶ್ವಾಸ್ ಅಮೀನ್ ಹಾಗೂ ಜಿಲ್ಲಾ ಯುವ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಸಂಚಾಲಕರಾದ ಯೋಗೆಶ್ ಇನ್ನಾ ರವರು ಜ಼ೂಮ್ ಮೀಟಿಂಗ್ ಬಗ್ಗೆ ಮಾಹಿತಿ ನೀಡಿದರು. ಬೈಂದೂರು ಯುವ ಕಾಂಗ್ರೆಸ್ ಅಧ್ಯಕ್ಷ ಶೇಖರ ಪೂಜಾರಿ ಸ್ವಾಗತಿಸಿದರು ವಂಡ್ಸೆ ಬ್ಲಾಕ್ ಅಧ್ಯಕ್ಷ ಪ್ರದೀಪ್…
ಕುಂದಾಪ್ರ ಡಾಟ್ ಕಾಂ ಮಾಹಿತಿ. ಉಡುಪಿ: ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಉಡುಪಿ ಜಿಲ್ಲೆಯಲ್ಲಿ ಲಭ್ಯವಿರುವ ಸಹಾಯಧನದ ವಿವರ ಈ ಕೆಳಗಿನಂತಿದೆ. ಸಣ್ಣ ಸಸ್ಯಾಗಾರಕ್ಕೆ ಸಹಾಯಧನ: 1.00 ಹೆ. ವಿಸ್ತೀರ್ಣದಲ್ಲಿ ಬ್ಯಾಂಕ್’ನಿಂದ ಅವಧಿ ಸಾಲ ಪಡೆದು ಹೊಸದಾಗಿ ನಿರ್ಮಾಣ ಮಾಡುವ ಸಸ್ಯಾಗಾರ/ನರ್ಸರಿಗೆ ಒಟ್ಟು ವೆಚ್ಚದ ಶೇ. 50 ರಂತೆ ಗರಿಷ್ಟ ರೂ. 7.50 ಲಕ್ಷ ಸಹಾಯಧನ ವಿತರಿಸಲಾಗುವುದು. ತೋಟಗಾರಿಕೆ ಬೆಳೆಗಳ ಪ್ರದೇಶ ವಿಸ್ತರಣೆಗೆ ಸಹಾಯಧನ: ಯೋಜನೆಯ ಮಾರ್ಗಸೂಚಿಯಂತೆ ನಿಗದಿತ ಬೆಳೆಗಳನ್ನು ನೂತನ ತಾಂತ್ರಿಕತೆಯೊಂದಿಗೆ ಹೊಸದಾಗಿ ಬೆಳೆಯುವ ರೈತರಿಗೆ ಸಹಾಯಧನವನ್ನು ವಿತರಿಸಲಾಗುವುದು. ಪ್ರತಿ ಫಲಾನುಭವಿ ಕನಿಷ್ಟ 0.20 ಹೆ. ಹಾಗೂ ಗರಿಷ್ಟ 4.00 ಹೆ. ವರೆಗೆ ಸಹಾಯಧನ ಪಡೆಯಲು ಅವಕಾಶವಿರುತ್ತದೆ. ಸಹಾಯಧನವು ಒಟ್ಟು ವೆಚ್ಚದ ಶೇ. 40 ರಂತೆ ಇದ್ದು, 2020-21 ನೇ ಸಾಲಗೆ ಸಹಾಯಧನ ಪಡೆಯಬಹುದಾಗ ಬೆಳೆಗಳು ಹಾಗೂ ಸಹಾಯಧನದ ವಿವರ ಈ ಕೆಳಗಿನಂತಿದೆ. ಬಾಳೆ (ಕಂದುಗಳು)ವೆಚ್ಚ 65,000.00 ಸಹಾಯಧನ 26,000.00 ಬಾಳೆ (ಅಂಗಾಂಶ ಕೃಷಿ) ವೆಚ್ಚ 1,02,000. 00 ಸಹಾಯಧನ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಜೂ.26ರ ಶುಕ್ರವಾರ 9 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ದೃಢವಾಗಿದೆ. ಈ ಪೈಕಿ ಶಿರೂರು ಆರೋಗ್ಯ ಕೇಂದ್ರದ ಎ.ಎನ್.ಎಂ ಅವರಿಗೂ ಕೋವಿಡ್-19 ಪಾಸಿಟಿವ್ ಬಂದಿದ್ದು, ಕುಂದಾಪುರದ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಜೂನ್.22 ಶಿರೂರಿನ ಓರ್ವ ಆರೋಗ್ಯ ಸಿಬ್ಬಂದಿಗೆ ಪಾಸಿಟಿವ್ ಬಂದಿದ್ದು, ಅವರ ಪ್ರಾಥಮಿಕ ಸಂಪರ್ಕದಿಂದ ಇನ್ನೋರ್ವರಿಗೂ ಇಂದು ಬಂದಿ ವರದಿಯಲ್ಲಿ ಪಾಸಿಟಿವ್ ಬಂದಿತ್ತು. ಇಂದು 147 ನೆಗೆಟಿವ್: ಈ ತನಕ ಒಟ್ಟು 13,960ಮಾದರಿ ಸಂಗ್ರಹಿಸಿದ್ದು, ಅವುಗಳಲ್ಲಿ 12,483ನೆಗೆಟಿವ್, 1,125 ಪಾಸಿಟಿವ್ ಬಂದಿದ್ದು, 352 ಮಂದಿಯ ವರದಿ ಬರುವುದು ಬಾಕಿ ಇದೆ. ಇಂದು ಬಂದಿರುವ ವರದಿಯಲ್ಲಿ 147 ನೆಗೆಟಿವ್, 9 ಪಾಸಿಟಿವ್ ಬಂದಿದೆ. 86 ಸಕ್ರಿಯ ಪ್ರಕರಣ: ಜಿಲ್ಲೆಯಲ್ಲಿ ಒಟ್ಟು 1,125ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 1037 ಮಂದಿ ಬಿಡುಗಡೆಯಾಗಿದ್ದು, 86 ಮಂದಿ ಕೊರೋನಾ ಸೋಂಕಿತರಿಗೆ ಉಡುಪಿ, ಕುಂದಾಪುರ, ಕಾರ್ಕಳದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈವರೆಗೆ ಇಬ್ಬರು ವ್ಯಕ್ತಿಗಳು ಮೃತಪಟ್ಟಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ನಾವುಂದ ಗ್ರಾಮದ ಅರೆಹೊಳೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಕಟ್ಟಡದ ಶಂಕು ಸ್ಥಾಪನೆಯನ್ನು ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ಮಂಗಳವಾರ ನೆರವೇರಿಸಿದರು. ಬಳಿಕ ಮಾತನಾಡಿದ ಅವರು ಕ್ಷೇತ್ರದ ಸರ್ಕಾರಿ ಶಾಲೆಗಳಲ್ಲಿ ಪ್ರತಿಭಾನ್ವಿತ ಶಿಕ್ಷಕರ ಪಡೆ ಇದೆ. ಅವರಿಂದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗುತ್ತಿದೆ. ಈಚಿನ ದಿನಗಳಲ್ಲಿ ಶಾಲೆಗಳ ಮೂಲ ಸೌಕರ್ಯಗಳನ್ನು ಉತ್ತಮಪಡಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ಇದರಿಂದ ಮಕ್ಕಳ ಸಂಖ್ಯೆ ಹೆಚ್ಚುವ ಭರವಸೆ ಇದೆ ಎಂದರು. ಗ್ರಾಮ ಪಂಚಾಯಿತಿ ಅಧ್ಯಕ್ಷ ನರಸಿಂಹ ದೇವಾಡಿಗ ಅಧ್ಯಕ್ಷತೆ ವಹಿಸಿದ್ದರು. ಮುಖ್ಯೋಪಾಧ್ಯಾಯ ನಾರಾಯಣ ದೇವಾಡಿಗ ಸ್ವಾಗತಿಸಿದರು. ಸಹಶಿಕ್ಷಕಿ ಶೈಲಾ ನಿರೂಪಿಸಿದರು. ಯೋಗ ಶಿಕ್ಷಕ ಸುಬ್ಬ ದೇವಾಡಿಗ ವಂದಿಸಿದರು. ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಶ್ಯಾಮಲಾ ಕುಂದರ್, ಜಿಲ್ಲಾ ಪಂಚಾಯಿತಿ ಸದಸ್ಯೆ ಗೌರಿ ದೇವಾಡಿಗ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಜಯಂತಿ, ಹೇರೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಅಶೋಕಕುಮಾರ ಶೆಟ್ಟಿ, ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಕರುಣಾಕರ ಶೆಟ್ಟಿ, ಸ್ಥಳ…
