Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಇಲ್ಲಿನ ಬೈಂದೂರು ಪಟ್ಟಣ ಪಂಚಾಯತ್ ವ್ಯಾಪ್ತಿಯ ದೊಂಬೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳೆದ 9 ವರ್ಷಗಳಿಂದ ಮುಖ್ಯೋಪಾಧ್ಯಾಯನಿಯಾಗಿ ಸೇವೆ ಸಲ್ಲಿಸುತ್ತಿದ್ದ ಕೆ.ಎಸ್. ನಿರ್ಮಲಾ ಅವರು ವಯೋ ನಿವೃತ್ತಿ ಹೊಂದಿದ್ದು, ಕಳೆದ 28 ವರ್ಷಗಳಿಂದ ಶಿಕ್ಷಕಿಯಾಗಿ ಹಾಗೂ ಕಳೆದ 9 ವರ್ಷಗಳಿಂದ ಸದ್ವಿ ಸಂಸ್ಥೆಯಲ್ಲಿ ಮುಖ್ಯೋಪಾಧ್ಯಾಯನಿಯಾಗಿ ಸಲ್ಲಿಸಿರುವ ಅತ್ಯುತ್ತಮ ಸೇವೆಯನ್ನು ಪರಿಗಣಿಸಿ ಶಾಲೆಯ ಅಭಿವೃದ್ಧಿ ಸಮಿತಿ ಮತ್ತು ಊರವರು ಹಾಗೂ ವಿದ್ಯಾರ್ಥಿ ವೃಂದ, ಸಹ ಶಿಕ್ಷಕ ವೃಂದದವರು ನಿರ್ಮಲಾ ಅವರಿಗೆ  ಬಾಗಿನ ನೀಡಿ, ಮೈಸೂರು ಪೇಟ ತೊಡಿಸಿ, ಚಿನ್ನಉಂಗುರ ನೀಡಿ ಅಭಿನಂದಿಸಿದರು. ಅಭಿನಂದನಾ ಸಮಾರಂಭದ ಸಭಾಧ್ಯಕ್ಷತೆಯನ್ನು ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷೆ ಮಣಿಯಮ್ಮ ಪೂಜಾರಿ ವಹಿಸಿದ್ದರು. ಅತಿಥಿಗಳಾಗಿ ಸ್ಥಳೀಯ ಪಟ್ಟಣ ಪಂಚಾಯತ್ ನ ಸರಕಾರದ ನಾಮ ನಿರ್ದೇಶಿತ ಸದಸ್ಯ ಸದಾಶಿವ ಡಿ., ಸ್ಥಳೀಯ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಸುರೇಶ್ ಬಟವಾಡಿ, ನಿವೃತ್ತ ಮುಖ್ಯ ಶಿಕ್ಷಕರಾದ ಸುರೇಶ್ ಬಂಕೇಶ್ವರ ಶಾಲಾ ಎಸ್.ಡಿ.ಎಂ.ಸಿಯ ಮಾಜಿ ಅಧ್ಯಕ್ಷರುಗಳಾದ ಸಂಜೀವ ಮೊಗವೀರ,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನ (MCN) ನ ಟ್ರೈನಿಂಗ್ ಅಂಡ್ ಪ್ಲೇಸ್ಮೆಂಟ್ ವಿಭಾಗವು 2025–26ನೇ ಸಾಲಿನ ಉದ್ಯೋಗ ನಿಯೋಜನೆ ಅಭಿಯಾನವನ್ನು ಆಯೋಜಿಸಿತು. ಭಾರತದ ಪ್ರಮುಖ ಮಲ್ಟಿ-ಸ್ಪೆಷಾಲಿಟಿ ಆರೋಗ್ಯ ಸಂಸ್ಥೆಗಳಲ್ಲಿ ಒಂದಾದ ಹೈದರಾಬಾದ್‌ನ ಹೈಟೆಕ್ ಸಿಟಿಯ ಯಶೋದಾ ಆಸ್ಪತ್ರೆಗಳ ಸಹಯೋಗದೊಂದಿಗೆ ನೇಮಕಾತಿ ಅಭಿಯಾನವನ್ನು ನಡೆಸಲಾಯಿತು. ಕಾಲೇಜು ಆಡಳಿತ ಮಂಡಳಿ, ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ನೇಮಕಾತಿ ತಂಡಕ್ಕೆ ಆತ್ಮೀಯ ಸ್ವಾಗತ ಕೋರುವುದರೊಂದಿಗೆ ಕಾರ್ಯಕ್ರಮ ಪ್ರಾರಂಭವಾಯಿತು. ಗಣ್ಯ ನರ್ಸಿಂಗ್ ನಾಯಕರ ಉಪಸ್ಥಿತಿಯು ಕಾರ್ಯಕ್ರಮವನ್ನು ಹೆಚ್ಚು ಮಾಹಿತಿಯುಕ್ತ ಮತ್ತು ಸ್ಪೂರ್ತಿದಾಯಕವಾಗಿಸಿತು. ನೇಮಕಾತಿ ತಂಡವು ಈ ಕೆಳಗಿನವುಗಳನ್ನು ಒಳಗೊಂಡಿತ್ತು:ಸ್ವಾತಿ ಮೇದಾ, ಜನರಲ್ ಮ್ಯಾನೇಜರ್ – ನರ್ಸಿಂಗ್, ಯಶೋದಾ ಆಸ್ಪತ್ರೆಗಳು, ಹೈಟೆಕ್ ಸಿಟಿ, ಹೈದರಾಬಾದ್. ಪ್ರತ್ಯುಷಾ ಚೌಧರಿ, ಮುಖ್ಯಸ್ಥೆ – ನರ್ಸಿಂಗ್ ಶಿಕ್ಷಣ ಮತ್ತು ತರಬೇತಿ ಮತ್ತು ನರ್ಸಿಂಗ್ ನೇಮಕಾತಿಗಳು, ಯಶೋದಾ ಆಸ್ಪತ್ರೆಗಳು. ಈ ಅಧಿವೇಶನದಲ್ಲಿ, ನೇಮಕಾತಿದಾರರು ಯಶೋದಾ ಆಸ್ಪತ್ರೆಗಳಿಗೆ ವಿದ್ಯಾರ್ಥಿಗಳನ್ನು ಪರಿಚಯಿಸಿದರು, ಅದರ ಮುಂದುವರಿದ ಆರೋಗ್ಯ ಸೇವೆಗಳು, ನರ್ಸಿಂಗ್ ಶ್ರೇಷ್ಠತೆ, ವೃತ್ತಿ ಬೆಳವಣಿಗೆಯ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ತೆಕ್ಕಟ್ಟೆಯ ವಿಶ್ವವಿನಾಯಕ ಸಿ.ಬಿ.ಎಸ್.ಸಿ. ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ತಿನ ರಚನೆಯನ್ನು ಮಾಡಿ ಪದಗ್ರಹಣ ಕಾರ್ಯಕ್ರಮವನ್ನು ಆಯೋಜಿಸಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಮಹಾಂತೇಶ್ ಜಾಬ ಗೌಡ ಕ್ರೈಂ ಬ್ರಾಂಚ್ ಕೋಟ ಪೊಲೀಸ್ ಸ್ಟೇಷನ್ ಅವರು ಕಾರ್ಯಕ್ರಮ ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಪದಗ್ರಹಣ ಮಾಡಿದರು. ವಿದ್ಯಾರ್ಥಿ ನಾಯಕರನ್ನು ಅಭಿನಂದಿಸಿ ಉತ್ತಮ ನಾಯಕತ್ವವನ್ನು ನಡೆಸಲು ಶಿಸ್ತು ಸಹಾನುಭೂತಿ ಸೃಜನಶೀಲತೆ ಬಹುಮುಖ್ಯ ಅಂಶವೆಂದು ತಿಳಿಸಿದರು. ಇತರರನ್ನು ಮುನ್ನಡೆಸಿ ಮುನ್ನಡೆಯುವುದೇ ನಿಜವಾದ ನಾಯಕತ್ವ ಎಂದು ತಿಳಿಸಿದರು. ಮಾನವೀಯ ಮೌಲ್ಯಗಳು ದೇಶದ ಸಂವಿಧಾನ ಹಾಗೂ ಕಾನೂನಿನ ಬಗ್ಗೆ ಜಾಗೃತಿ ಮೂಡಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಶಾಲಾ ಮ್ಯಾನೇಜಿಂಗ್ ಡೈರೆಕ್ಟರ್ ಎಂ. ಪ್ರಭಾಕರ್ ಶೆಟ್ಟಿ ಅವರು ಮಾತನಾಡಿ, ನಾಯಕರಾದವರು ಇತರರಿಗೆ ಸ್ಪೂರ್ತಿದಾಯಕವಾಗಿರಬೇಕು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲರು ಕಾಲೇಜ್ ಪ್ರಾಂಶುಪಾಲರು ಆಡಳಿತ ನಿರ್ದೇಶಕರು ಶಿಕ್ಷಕರು ವಿದ್ಯಾರ್ಥಿಗಳು ಹಾಗೂ ಶಾಲಾ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಶಾಲಾ ವಿದ್ಯಾರ್ಥಿ ನಾಯಕಿಯಾಗಿ ವಾಸವಿ ಕಾಂಚನ್ ಹಾಗೂ ಉಪನಾಯಕನಾಗಿ ಮನೀಶ್ ಶೆಟ್ಟಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕುಂದಾಪ್ರ ಕನ್ನಡ ಭಾಷೆ, ಸಂಸ್ಕೃತಿ ಹಾಗೂ ನೆಲಮೂಲದ ಕಲಾ ಪರಂಪರೆಯನ್ನು ವಿದ್ಯಾರ್ಥಿಗಳಲ್ಲಿ ಬೆಳೆಸುವ ಉದ್ದೇಶದಿಂದ ಮಂಗಳೂರು ವಿಶ್ವವಿದ್ಯಾನಿಲಯದ ಕುಂದಾಪ್ರ ಕನ್ನಡ ಅಧ್ಯಯನ ಪೀಠ ಮತ್ತು ಯಡಾಡಿ–ಮತ್ಯಾಡಿಯ ಸುಜ್ಞಾನ ಪದವಿ ಪೂರ್ವ ಕಾಲೇಜಿನ ಜಂಟಿ ಆಶ್ರಯದಲ್ಲಿ ‘ವಾಲ್ಬೆಲ್ಲ’ ಸಾಂಸ್ಕೃತಿಕ ಹಾಗೂ ಚಿತ್ರಕಲಾ ಸ್ಪರ್ಧೆಯನ್ನು ಜುಲೈ 6ರಂದು ಬೆಳಿಗ್ಗೆ 9.30ಕ್ಕೆ ವಿದ್ಯಾರಣ್ಯ ಕ್ಯಾಂಪಸ್‌ನಲ್ಲಿ ಆಯೋಜಿಸಲಾಗಿದೆ ಎಂದು ಮಾಜಿ ಸಚಿವ ಹಾಗೂ ಕುಂದಾಪ್ರ ಕನ್ನಡ ಅಧ್ಯಯನ ಪೀಠದ ಸದಸ್ಯ ಕೆ. ಜಯಪ್ರಕಾಶ್ ಹೆಗ್ಡೆ ತಿಳಿಸಿದರು. ಅವರು ಯಡಾಡಿ–ಮತ್ಯಾಡಿಯ ಸುಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಕರ್ನಾಟಕ ಸರ್ಕಾರವು ಮಂಗಳೂರು ವಿಶ್ವವಿದ್ಯಾಲಯದ ಅಧೀನದಲ್ಲಿ ಪೂರ್ಣ ಪ್ರಮಾಣದ ಕುಂದಾಪ್ರ ಕನ್ನಡ ಅಧ್ಯಯನ ಪೀಠವನ್ನು ಸ್ಥಾಪಿಸಿದೆ. ಈ ಪೀಠ ಸ್ಥಾಪನೆಯಾದ ಬಳಿಕ ಭಾಷೆಯ ಅಭಿವೃದ್ಧಿಗೆ ಪೂರಕವಾಗಿ ಹಲವು ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಸಾಂಪ್ರದಾಯಿಕ ಶಿಕ್ಷಣದ ಜೊತೆಗೆ ವಿದ್ಯಾರ್ಥಿಗಳಿಗೆ ಈ ನೆಲದ ಕಲೆ, ಸಂಗೀತ, ಸಾಹಿತ್ಯ ಮತ್ತು ಸಾಂಸ್ಕೃತಿಕ ಸೊಗಡನ್ನು ಪರಿಚಯಿಸುವ ಮಹತ್ತರ ಆಶಯದೊಂದಿಗೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯಕ್ಕೆ ಈಗಾಗಲೇ ಚಾಲನೆ ನೀಡಲಾಗಿದೆ. ರೈತರಿಂದಲೇ ಬೆಳೆ ಸಮೀಕ್ಷೆ ಕೈಗೊಳ್ಳಲು ಮೊಬೈಲ್ ಆಪ್ ಅನ್ನು ಅಭಿವೃದ್ದಿ ಪಡಿಸಲಾಗಿದ್ದು, ಇಲಾಖೆಯ ಪ್ರೂಟ್ಸ್ ತಂತ್ರಾಂಶದ ಎಫ್.ಐ.ಡಿ ಸಂಖ್ಯೆಯನ್ನು ಹೊಂದಿರುವ ರೈತರು ಗೂಗಲ್ ಪ್ಲೇ ಸ್ಟೋರ್ ನಿಂದ “ಮುಂಗಾರು ರೈತರ ಬೆಳೆ ಸಮೀಕ್ಷೆ 2026-27” ಆಪ್ ಅನ್ನು ಡೌನ್‌ಲೋಡ್ ಮಾಡಿಕೊಂಡು, ನಂತರ “ಇ-ಕೆವೈಸಿ ಮೂಲಕ ಆಧಾರ್ ದೃಢೀಕರಿಸಿ” ಆಯ್ಕೆಯನ್ನು ಮಾಡಿ ಆಧಾರ್ ಸಂಖ್ಯೆಯನ್ನು ದಾಖಲಿಸಿ ಜನರೇಟ್ ಓ.ಟಿ.ಪಿ ಆಯ್ಕೆಯನ್ನು ಮಾಡಬೇಕು. ತದನಂತರ ಆಧಾರ್ ಸಂಖ್ಯೆಗೆ ಜೋಡಣೆಯಾಗಿರುವ ಮೊಬೈಲ್ ಸಂಖ್ಯೆಗೆ ಸ್ವೀಕೃತವಾಗುವ ಓ.ಟಿ.ಪಿ ಯನ್ನು ದಾಖಲಿಸಿದ್ದಲ್ಲಿ ರೈತರ ಎಫ್.ಐ.ಡಿ ಸಂಖ್ಯೆಗೆ ಜೋಡಣೆಯಾಗಿರುವ ಎಲ್ಲಾ ಜಮೀನುಗಳ ಮಾಹಿತಿಯು ಡೌನ್‌ಲೋಡ್ ಆಗುತ್ತದೆ. ಮುಂದಿನ ಹಂತದಲ್ಲಿ ಸರ್ವೆ ನಂಬರ್, ಹಿಸ್ಸಾ, ಮಾಲೀಕನ ಹೆಸರು ಆಯ್ಕೆ ಮಾಡಿ ಕ್ಷೇತ್ರವನ್ನು ನಮೂದಿಸಬೇಕು. ಸರ್ವೆ ನಂಬರ್‌ಗಳ ಗಡಿ ರೇಖೆಯೊಳಗೆ ನಿಂತು ಬೆಳೆ ವಿವರವನ್ನು ದಾಖಲಿಸಿ ಫೋಟೋ ತೆಗೆದು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇನ್ಸ್ಟಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆಂಟ್ ಆಫ್ ಇಂಡಿಯಾ ಸಂಸ್ಥೆಯವರು ನಡೆಸಿದ ಸಿ ಎ ಫೌಂಡೇಶನ್ ಫಲಿತಾಂಶವು  ಪ್ರಕಟಗೊಂಡಿದ್ದು, ಕಾರ್ಕಳ ಕ್ರಿಯೇಟಿವ್ ಪಿಯು ಕಾಲೇಜಿನ ವಿದ್ಯಾರ್ಥಿಗಳು ಗಮನಾರ್ಹ ಸಾಧನೆಗೈದಿದ್ದಾರೆ. ವಿದ್ಯಾರ್ಥಿಗಳಾದ ವರುಣ್ ಸಿ. ಕಚತ್ತಿ 306, ದರ್ಶನ್ ಎಂ. ಯರಗಲ್ 298, ಅನಿರುದ್ಧ ಕೆ.ಕೆ.280, ಅಂಕಗಳನ್ನು ಪಡೆಯುವ ಮೂಲಕ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಉಳಿದಂತೆ ವಿದ್ಯಾರ್ಥಿಗಳಾದ ಭುವನ್ ಆರ್ ಸಿದ್ದರಾಮ್ 267,ಆದ್ಯ ಎಸ್ ಪಡ್ರೆ 260, ಕೆ ಪಿ ಸಾಯಿ ಕೃಷ್ಣ249, ಅಕ್ಷರ ಎಸ್ ನಾಯಕ್248, ಪವನ್ ಕುಮಾರ್ ಎಲ್.ಎನ್.238, ಭುವನ್ ಎಸ್.227, ಚಿರಾಯು ಎಸ್. ಶೆಟ್ಟಿ 216, ಕಿಶನ್ ಎನ್ 213 ಪೂನಮ್ ಜಿ 209, ಪ್ರೇರಣ ಆರ್. ಹೆಗಡೆ 208, ಹಿತ ರವಿ ಶೆಟ್ಟಿ 206.ಅಂಕಗಳನ್ನು ಗಳಿಸುವುದರ ಮೂಲಕ ಅರ್ಹತೆಯನ್ನು ಗಳಿಸಿಕೊಂಡಿರುತ್ತಾರೆ. ಪರೀಕ್ಷೆ ಬರೆದಿರುವ 26 ವಿದ್ಯಾರ್ಥಿಗಳಲ್ಲಿ 14ವಿದ್ಯಾರ್ಥಿಗಳು ಮೊದಲ ಪ್ರಯತ್ನದಲ್ಲೇ ಅರ್ಹತೆಯನ್ನು ಗಳಿಸಿರುತ್ತಾರೆ. ರಾಷ್ಟ್ರ ಮಟ್ಟದಲ್ಲಿ ಒಟ್ಟು ಫಲಿತಾಂಶದಲ್ಲಿ 14% ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹೆಮ್ಮಾಡಿಯ ಜನತಾ ಪಿಯು ಕಾಲೇಜಿನ ವಿದ್ಯಾರ್ಥಿ ಪ್ರಥಮ್ ಜಿ. ಕಾಂಚನ್ 2026ರ ಮೇ ತಿಂಗಳಿನಲ್ಲಿ ಇನ್ಸ್ಟಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆಂಟ್ ಆಫ್ ಇಂಡಿಯಾ ಸಂಸ್ಥೆಯವರು ನಡೆಸುವ ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಉತ್ತೀರ್ಣರಾಗುವ ಮೂಲಕ ಸಂಸ್ಥೆಗೆ ಕೀರ್ತಿ ತಂದಿದ್ದಾರೆ. ಪ್ರಥಮ್ ಜಿ. ಕಾಂಚನ್ 230 ಅಂಕ ಹಾಗೂ ಅಭಿನವ್ ಜೆ. ಶೆಟ್ಟಿ 208 ಅಂಕಗಳನ್ನು ಪಡೆಯುವ ಮೂಲಕ ಮುಂದಿನ ಹಂತದ ಪರೀಕ್ಷೆಗೆ ಅರ್ಹತೆ ಪಡೆದಿರುತ್ತಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಮತ್ತು ಬೋಧಕ, ಬೋಧಕೇತರ ವೃಂದದವರು ಹರ್ಷ ವ್ಯಕ್ತಪಡಿಸಿ, ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ರಾಜ್ಯದಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್.ಐ.ಆರ್) ಪ್ರಕ್ರಿಯೆ ಜೂ.30ರಿಂದ ಜು.29 ತನಕ ನಡೆಯಲಿದ್ದು ಮತಗಟ್ಟೆ ಮಟ್ಟದ ಅಧಿಕಾರಿ (ಬಿ.ಎಲ್.ಓ) ಮನೆ ಮನೆಗೆ ಭೇಟಿ ನೀಡಿ ಎನ್ಯುಮರೇಶನ್ ಫಾರ್ಮ್ ನ್ನು ನೀಡುತ್ತಿದ್ದಾರೆ. ಎಲ್ಲಾ ಮತದಾರರರು ಜು.29ರೊಳಗೆ ಆ ಫಾರ್ಮ್ ತುಂಬಿಸಿ ವಾಪಾಸು ನೀಡಬೇಕಾಗಿದೆ. ಆ ಫಾರ್ಮ್ ನಲ್ಲಿ 2002ರ ಮತದಾರರ ಪಟ್ಟಿಯಲ್ಲಿನ ಅವರ ವಿವರಗಳನ್ನು, 2002ರಲ್ಲಿ ಅವರ ಹೆಸರು ಇಲ್ಲದಿದ್ದರೆ ಅವರ ತಂದೆ, ತಾಯಿ, ಅಜ್ಜ, ಅಜ್ಜಿ ಯಾರೊಬ್ಬರ ವಿವರವನ್ನಾದರೂ ತುಂಬಿಸಬೇಕಾಗಿದೆ. ಇದು ತುಂಬಿಸಲು ಎಲ್ಲಾ ಮತದಾರರಿಗೆ ಕಷ್ಟವಾಗುತ್ತಿದ್ದು ವಂಡ್ಸೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮತದಾರರಿಗೆ ಕಷ್ಟವಾಗಬಾರದೆಂದು ಜು.3 ರಿಂದ ವಂಡ್ಸೆ ಗ್ರಾಮ ಪಂಚಾಯತ್‌ನಲ್ಲಿ ಮತದಾರರ ಸಹಾಯ ಕೇಂದ್ರ (ಎಸ್.ಐ.ಆರ್ ಹೆಲ್ಫ್ ಡೆಸ್ಕ್) ತೆರೆಯಲಾಗಿದೆ. ಇದು ರಜಾ ದಿನಗಳೂ ಸೇರಿದಂತೆ ವಾರದ ಏಳೂ ದಿನವೂ ಬೆಳಿಗ್ಗೆ 9.30 ರಿಂದ ಸಂಜೆ 6.30ರ ತನಕ ಕಾರ್ಯನಿರ್ವಹಿಸಲಿದ್ದು ಅರ್ಜಿ ತುಂಬಿಸಲು ಕಷ್ಟವಾಗುವ ಎಲ್ಲಾ ಮತದಾರರು ಎಸ್.ಐ.ಆರ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಬೆಂಗಳೂರಿನಲ್ಲಿ ಇತ್ತೀಚೆಗೆ ನೆಡೆದ ’ಕೆಂಚನೂರು ಯಕ್ಷೋತ್ಸವʼದಲ್ಲಿ ಸಂಗ್ರಹವಾದ ಉಳಿಕೆ ಮೊತ್ತದಿಂದ ಕೆಂಚನೂರು ಗ್ರಾಮದಲ್ಲಿ ಆರ್ಥಿಕವಾಗಿ ಅರ್ಹ ಫಲಾನುಭವಿಗಳಿಗೆ ಧನಸಹಾಯ ವಿತರಿಸಲಾಯಿತು. ಫಲಾನುಭವಿಗಳಾದ ಸೂರಜ್ ಆಚಾರ್ಯ, ದೀಪಿಕಾ, ಗೋಪಾಲ್ ಮೊಗವೀರ ಕೆಂಚನೂರು, ರಾಜು ಗಾಣಿಗ ಹೆಮ್ಮಾಡಿ ಅವರಿಗೆ ಹಟ್ಟಿಯಂಗಡಿ ಗ್ರಾಮ ಪಂಚಾಯತ್ ಮಾಜಿ ಸದಸ್ಯ, ಕೆಂಚನೂರು ಯಕ್ಷೋತ್ಸವದ ರೂವಾರಿ ರವಿ ಗಾಣಿಗ ಮಲ್ಲಾರಿ, ಕೆಂಚನೂರು ಆರ್ಥಿಕ ನೆರವು ವಿತರಿಸಿದರು. ಈ ಸಂದರ್ಭದಲ್ಲಿ ಶ್ರೀ ರಾಮೇಶ್ವರ ಸೇವಾ ಟ್ರಸ್ಟ್ ಅಧ್ಯಕ್ಷ ಎಚ್. ಸುಧೀರ್ ಶೆಟ್ಟಿ ಕೆಂಚನೂರು, ಸುಬ್ಬಣ್ಣ ಶೆಟ್ಟಿ ಕೆಂಚನೂರು, ಹಟ್ಟಿಯಂಗಡಿ ಗ್ರಾಮ ಪಂಚಾಯತ್ ಮಾಜಿ ಸದಸ್ಯ ರಾಜೀವ್ ಶೆಟ್ಟಿ ಕೆಂಚನೂರು, ಜೈನುದ್ದೀನ್ ಶೆಟ್ರಕಟ್ಟೆ, ಗುಂಡು ಶೆಟ್ಟಿ ಕೆಂಚನೂರು ಉಪಸ್ಥಿತರಿದ್ದರು. ಸಮಾಜಮುಖಿ ಕಾರ್ಯಕ್ಕೆ ಸಹಕರಿಸಿದ ದಾನಿಗಳಾದ ರವಿ ಗಾಣಿಗ ಮಲ್ಲಾರಿ – ಕೆಂಚನೂರು ಅವರನ್ನು ಇದೇ ವೇಳೆ ಅಭಿನಂದಿಸಲಾಯಿತು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ  ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಫ್ರೆಶರ್ಸ್ ಡೇ ಕಾರ್ಯಕ್ರಮ ನಡೆಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಸರಕಾರಿ ಪದವಿ ಪೂರ್ವ ಕಾಲೇಜು ನಾವುಂದದ  ಉಪಪ್ರಾಂಶುಪಾಲರಾದ ಕೃಷ್ಣಮೂರ್ತಿ ಪಿ.ಕೆ.  ಮಾತನಾಡಿ, “ಪುರಾಣ ಪುರುಷರು ನಡೆದಾಡಿದ ಈ ನೆಲದಲ್ಲಿ ಉಸಿರಾಡಿದ ಈ ಪರಿಸರದಲ್ಲಿ ವಿದ್ಯಾರ್ಥಿಗಳು ಘನ ವ್ಯಕ್ತಿತ್ವವನ್ನು ರೂಪಿಸಿಕೊಂಡು ಸಾಧಕರಾಗಿ ಬೆಳೆಯಬೇಕು” ಎಂದು ನುಡಿದರು. ಕಾಲೇಜಿನ ಹಿರಿಯ ವಿಶ್ವಸ್ಥರಾದ ದೇವದಾಸ ಕಾಮತ್ ಸಭೆಯನ್ನುದ್ದೇಶಿಸಿ ಕಣ್ಣಿಗೆ ಕಾಣುವ ದೇವರು ತಾಯಿ ತಂದೆ, ಸತತ ಪರಿಶ್ರಮ, ಪ್ರಯತ್ನದಿಂದ ವಿದ್ಯಾರ್ಥಿ ಗಳು ಸಾಧಕರಾಗಿ ಬೆಳೆಯಿರಿ ಎಂದು ಹಿತನುಡಿಗಳನ್ನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರಾಚಾರಿ ವಹಿಸಿದ್ದರು. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ. ಸರೋಜಾ ಎಂ. ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕಾಲೇಜಿನ ಹಳೆ ವಿದ್ಯಾರ್ಥಿ ಸಿಎ ಪರೀಕ್ಷೆಯ ಮೊದಲ ಅವಧಿಯಲ್ಲಿ ಪಾಸಾದ ಹೆಮ್ಮೆಯ ಹಳೆ ವಿದ್ಯಾರ್ಥಿ ಕೆ. ಕಿರಣ್ ಕಾಮತ್ ಅವರಿಗೆ ಕಾಲೇಜಿನ ಆಡಳಿತ ಮಂಡಳಿಯ…

Read More