Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಕುಡಿಯುವ ನೀರು ಹಾಗೂ ಮರಳು ಸಮಸ್ಯೆಗೆ ತುರ್ತಾಗಿ ಬಗೆಹರಿಸುವ ಅಗತ್ಯವಿದ್ದು, ಅಧಿಕಾರಿಗಳು ವಿಳಂಬ ಮಾಡದೇ ಜನರ ಸಂಕಷ್ಟಕ್ಕೆ ಸ್ಪಂದಿಸುವ ಕೆಲಸ ಮಾಡಬೇಕಿದೆ. ಎಲ್ಲಾ ಗ್ರಾಮಗಳಿಗೂ ತಕ್ಷಣ ಟ್ಯಾಂಕರ್ ನೀರು ಪೂರೈಕೆ ಹಾಗೂ ನಾನ್ ಸಿಆರ್‌ಝಡ್ ಪ್ರದೇಶದಲ್ಲಿ ಮರಳು ದಿಬ್ಬ ತೆರಳುಗೊಳಿಸಲು ಅವಕಾಶ ಮಾಡಕೊಡಲು ಕ್ರಮವಹಿಸುವಂತೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ. ವೈ. ರಾಘವೇಂದ್ರ ಅಧಿಕಾರಿಗಳಿಗೆ ಸೂಚಿಸಿದರು. ಅವರು ಬುಧವಾರ ಕೊಲ್ಲೂರು ಮೂಕಾಂಬಿಕಾ ಸಭಾಭವನದಲ್ಲಿ ಆಯೋಜಿಸಲಾಗಿದ್ದ ಕೋವಿಡ್-೧೯ ಸ್ಥಿತಿಗತಿ ಹಾಗೂ ಅಭಿವೃದ್ಧಿ ಕಾರ್ಯಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ರಾಜ್ಯದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪನವರು ಹಲವಾರು ಅಭಿವೃದ್ಧಿ ಕಾಮಗಾರಿಗಳಿಗೆ ಈಗಾಗಲೇ ಶಂಕುಸ್ಥಾಪನೆ ಮಾಡಿದ್ದರು. ಆ ಎಲ್ಲಾ ಕಾಮಗಾರಿಗಳು ವೇಗ ಕಂಡುಕೊಳ್ಳಬೇಕಿದೆ. ಕೋರೋನಾ ಕಾರಣದಿಂದ ಕೆಲವೊಂದು ಕಾಮಗಾರಿಗಳು ವಿಳಂಬ ಕಂಡಿದೆ. ಆದರೆ ಈಗ ಜಿಲ್ಲೆ ಹಸಿರು ವಲಯದಲ್ಲಿರುವುದರಿಂದ ಕಾಮಗಾರಿಗಳು ಶೀಘ್ರ ಆರಂಭಿಸಿ ಎಂದರು.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ದೇಶದಲ್ಲಿ ಕೊರೋನಾ ಮಹಾಮಾರಿಯನ್ನು ತಡೆಗಟ್ಟುವಲ್ಲಿ ಆರೋಗ್ಯ ಕಾರ್ಯಕರ್ತರು ನಿರಂತರವಾಗಿ ಶ್ರಮಿಸಿದ್ದಾರೆ. ಕಠಿಣ ಸಂದರ್ಭವನ್ನೂ ಎದುರಿಸಿ ಎಲ್ಲರ ಸುರಕ್ಷತೆಗಾಗಿ ಶ್ರಮಿಸುತ್ತಿರುವ ಅವರಿಗೆ ಇಡಿ ಸಮುದಾಯ ಕೃತಜ್ಞವಾಗಿದೆ ಎಂದು ಮರವಂತೆ ಬಡಾಕೆರೆ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಸ್. ರಾಜು ಪೂಜಾರಿ ಹೇಳಿದರು. ಅವರು ಮಂಗಳವಾರ ಸಹಕಾರಿ ವ್ಯಾಪ್ತಿಯ ಸಂಘ ಸಂಸ್ಥೆಗಳಿಗೆ ಆಶಾ ಕಾರ್ಯಕರ್ತರು ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿಗಳಿಗೆ ಸಂಘದ ವತಿಯಿಂದ ಆಹಾರ ಸಾಮಾಗ್ರಿಗಳ ಕಿಟ್ ವಿತರಿಸಿ ಮಾತನಾಡಿದರು. ಈ ಸಂದರ್ಭ ಸಂಘದ ಉಪಾಧ್ಯಕ್ಷ ಚಂದ್ರಶೀಲ ಶೆಟ್ಟಿ, ಸಂಘದ ನಿರ್ದೇಶಕರುಗಳಾದ ಜಗದೀಶ ಪಿ. ಪೂಜಾರಿ, ನರಸಿಂಹ ದೇವಾಡಿಗ, ಎಂ. ಅಣ್ಣಪ್ಪ ಬಿಲ್ಲವ, ವಾಸು ಪೂಜಾರಿ, ರಾಮಕೃಷ್ಣ ಖಾರ್ವಿ, ನಾರಾಯಣ ಶೆಟ್ಟಿ, ಎಂ. ನಾಗಮ್ಮ, ಸರೋಜಾ ಗಾಣಿಗ, ಪ್ರಕಾಶ ದೇವಾಡಿಗ, ರಾಮ, ಭೋಜ ನಾಯ್ಕ್, ನಿಕಟಪೂರ್ವ ನಿರ್ದೇಶಕ ಎಂ. ವಿನಾಯಕ ರಾವ್, ಕಾರ್ಯನಿರ್ವಹಣಾಧಿಕಾರಿ ಸಂಜೀವ ಮಡಿವಾಳ ಇದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು : ಖಂಬದಕೋಣೆಯಲ್ಲಿ ಹಲವು ವರ್ಷಗಳಿಂದ ವೈದ್ಯ ವೃತ್ತಿ ನಿರತರಾಗಿದ್ದ ಗುಜ್ಜಾಡಿ ಮೂಲದ ಡಾ. ಪ್ರಕಾಶ ಕೊಡಂಚ (75) ಕೆಲಕಾಲದ ಅನಾರೋಗ್ಯದಿಂದ ಸೋಮವಾರ ರಾತ್ರಿ ನಿಧನರಾದರು. ವೈದ್ಯ ವೃತ್ತಿಯ ಜತೆಗೆ ಸಾಮಾಜಿಕ ಕ್ಷೇತ್ರದಲ್ಲಿಯೂ ಸಕ್ರಿಯರಾಗಿದ್ದರು. ಅವರ ಪುತ್ರರಾದ ಪ್ರತಾಪ ಕೊಡಂಚ ಅಮೇರಿಕೆಯಲ್ಲಿ ಇಂಜಿನಿಯರ್ ಆಗಿ, ಡಾ. ಪ್ರಭಾತ ಕೊಡಂಚ ಆಸ್ಟ್ರೇಲಿಯಾದಲ್ಲಿ ವೈದ್ಯರಾಗಿ ದುಡಿಯುತ್ತಿದ್ದಾರೆ. ಲಾಕ್‌ಡೌನ್ ಕಾರಣದಿಂದ ಅವರಿಗೆ ಬರಲಾಗದ್ದರಿಂದ ಬಂದು-ಮಿತ್ರರು ಮಂಗಳವಾರ ಅವರ ಅಂತಿಮ ಸಂಸ್ಕಾರ ನೆರವೇರಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರದ ಮಾಜಿ ಶಾಸಕಿ ವಿನ್ನಿಫ್ರೆಡ್ ಫರ್ನಾಂಡಿಸ್ (92) ಮಂಗಳವಾರ ಮಧ್ಯಾಹ್ನ ಚರ್ಚ್‌ ರಸ್ತೆಯ ಸ್ವಗೃಹದಲ್ಲಿ ನಿಧನರಾದರು. ವಿನ್ನಿಫ್ರೆಡ್ ಫರ್ನಾಂಡೀಸ್ ಅವರು ಪ್ರಜಾ ಸೋಶಿಯಲಿಸ್ಟ್ ಪಕ್ಷದ ಮೂಲಕ ರಾಜಕೀಯ ರಂಗ ಪ್ರವೇಶಿಸಿ ಪುರಸಭೆ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಬಳಿಕ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡು ಎರಡು ಬಾರಿ ಕುಂದಾಪುರ ಕ್ಷೇತ್ರದ ಶಾಸಕರಾಗಿ ಸೇವೆ ಸಲ್ಲಿಸಿದ್ದರು. ನಂತರ ವಿಧಾನಪರಿಷತ್ ಸದಸ್ಯೆಯಾಗಿಯೂ ಆಗಿದ್ದರು. ಮೃತರು ಮೂವರು ಪುತ್ತಿಯರು ಮತ್ತು ಮೂವರು ಪುತ್ರರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಆಶಾ ಕಾರ್ಯಕರ್ತೆಗೆ ಬೆದರಿಕೆ ಹಾಕಿದ ಆರೋಪದಡಿ ಕುಂದಾಪುರ ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಗಿದೆ. ಕುಂದಾಪುರ ಮದ್ದುಗುಡ್ಡೆ ನಿವಾಸಿ ಸಂದೀಪ್ ಮೇಸ್ತ (37) ಹಾಗೂ ಖಾರ್ವಿಕೇರಿ ನಿವಾಸಿ ಮಹೇಶ್ ಖಾರ್ವಿ (38) ಬಂಧಿತರು. ಸಂದೀಪ್ ಮೇಸ್ತ ಬೆಂಗಳೂರಿನಿಂದ ಬಂದಿದ್ದರಿಂದ 28 ದಿನಗಳ ಕಾಲ ಎಲ್ಲಿಗೂ ತೆರಳದೇ ಮನೆಯಲ್ಲಿಯೇ ಇರುವಂತೆ ಮದ್ದುಗುಡ್ಡೆ ನಿವಾಸಿ ಆಶಾ ಕಾರ್ಯಕರ್ತೆ ಲಕ್ಷ್ಮೀ ಎಂಬುವವರು ಸೂಚಿಸಿದ್ದರು. ಆದರೆ ಆರೋಪಿ ಕ್ವಾರಂಟೈನ್ ಅವಧಿಯಲ್ಲಿಯೂ ತಿರುಗಾಡುವುದು ಗಮನಕ್ಕೆ ಬಂದಿತ್ತು. ಇದನ್ನು ಒಂದೆರಡು ಭಾರಿ ಆಶಾ ಕಾರ್ಯಕರ್ತೆಯೇ ಪ್ರಶ್ನಿಸಿದ್ದರು. ಆ ಸಿಟ್ಟಿಗೆ ಸಂದೀಪ್ ಮೇಸ್ತನ ಜೊತೆಗೆ ಬೈಕಿನಲ್ಲಿ ಬಂದ ಆತನ ಸ್ನೇಹಿತ ಮಹೇಶ್ ಖಾರ್ವಿ ಆಶಾ ಕಾರ್ಯಕರ್ತೆಗೆ ಹೀಗೆ ಪ್ರಶ್ನಿಸುತ್ತಿದ್ದರೆ ಬದುಕಲು ಬಿಡುವುದಿಲ್ಲ ಎಂದು ಬೆದರಿಕೆ ಹಾಕಿದ್ದ. ಈ ಬಗ್ಗೆ ಆಶಾ ಕಾರ್ಯಕರ್ತೆ ನೀಡಿದ ದೂರಿನ ಅನ್ವಯ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರನ್ನೂ ಬಂಧಿಸಲಾಗಿದೆ. /ಕುಂದಾಪ್ರ ಡಾಟ್ ಕಾಂ ಸುದ್ದಿ./ ಇದನ್ನೂ ಓದಿ: ► ತೆಕ್ಕಟ್ಟೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮುಂಬಯಿನಿಂದ ಮಂಡ್ಯಕ್ಕೆ ಸರಕು ಸಾಗಾಟ ವಾಹನದಲ್ಲಿ ತೆರಳಿದ್ದ ಕೋವಿಡ್ 19 ಸೋಂಕಿತ ವ್ಯಕ್ತಿ ಕುಂದಾಪುರ ತಾಲೂಕಿನ ತೆಕ್ಕಟ್ಟೆ ಪೆಟ್ರೋಲ್ ಬಂಕಿಗೆ ತೆರಳಿರುವುದು ದೃಢಪಟ್ಟಿದ್ದು, ಬಂಕ್ ಸೀಲ್ ಡೌನ್ ಮಾಡಿ ಹಲವರನ್ನು ಕ್ವಾರಂಟೈನ್ಗೆ ಒಳಪಡಿಸಲಾಗಿದೆ. ಸೋಂಕಿತ ವ್ಯಕ್ತಿ ಪೆಟ್ರೋಲ್ ಬಂಕಿನಲ್ಲಿ ಸ್ನಾನ ಮಾಡಿ ಅಲ್ಲಿಯೇ ಕೆಲಗಂಟೆಗಳ ಕಾಲ ಉಳಿದುಕೊಂಡು ಬಳಿಕ ತೆರಳಿರುವುದು ತೆಕ್ಕಟ್ಟೆ ಬಂಕಿನ ಸಿಸಿ ಟಿವಿ ಪರಿಶೀಲನೆ ವೇಳೆ ಪತ್ತೆಯಾಗಿದೆ. ತಡರಾತ್ರಿಯ ತನಕ ನಡೆದ ತಪಾಸಣೆ ನಡೆದಿತ್ತು. ತೆಕ್ಕಟ್ಟೆ ಪೆಟ್ರೋಲ್ ಬಂಕ್ ಸೀಲ್ ಡೌನ್: ತೆಕ್ಕಟ್ಟೆ ಪೆಟ್ರೋಲ್ ಬಂಕಿನಲ್ಲಿಯೇ ಕೊರೋನಾ ಸೋಂಕಿತ ವ್ಯಕ್ತಿ ಕೆಲ ಗಂಟೆ ತಂಗಿರುವುದು ದೃಢಪಡುತ್ತಿದ್ದಂತೆಯೇ ಅಧಿಕಾರಿಗಳು ಬಂಕ್ ಸೀಲ್ ಡೌನ್ ಮಾಡಿದ್ದಾರೆ. ಬಂಕಿನ ಮಾಲಕ ಸೇರಿಂದತೆ ಏಳು ಮಂದಿಯನ್ನು ಉಡುಪಿ ಆಸ್ಪತ್ರೆಯಲ್ಲಿ ಕ್ವಾರಂಟೈನ್ ಮಾಡಲಾಗಿದೆ. ಇವರ ಜೊತೆಗೆ ಸಾಸ್ತಾನ ಟೋಲ್ ದಾಟಿ ಹೋಗಿರುವುದರಿಂದ ಟೋಲ್ ಪಡೆಯಲು ಅಂದು ಕರ್ತವ್ಯದಲ್ಲಿದ್ದ ಸಿಬ್ಬಂಧಿಗಳು ಸೇರಿ ಏಳು ಮಂದಿಯನ್ನು ಕ್ವಾರಂಟೈನ್ ಮಾಡಲಾಗಿದೆ. ಕುಂದಾಪುರ ತಾಲೂಕು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮುಂಬಯಿನಿಂದ ಮಂಡ್ಯಕ್ಕೆ ಸರಕು ಸಾಗಾಟ ವಾಹನದಲ್ಲಿ ತೆರಳಿದ್ದ ವ್ಯಕ್ತಿಗೆ ಕೋವಿಡ್ 19 ಸೋಂಕು ತಗಲಿರುವುದು ಪತ್ತೆಯಾಗಿದೆ. ಆತ ತ್ರಾಸಿಯ ಪೆಟ್ರೋಲ್ ಬಂಕ್ನಲ್ಲಿ ಸ್ನಾನ ಮಾಡಿದ್ದೆ ಎನ್ನುವ ಮಾಹಿತಿ ಹಂಚಿಕೊಂಡ ಹಿನ್ನೆಲೆಯಲ್ಲಿ ಸೋಮವಾರ ಸಂಜೆ ತ್ರಾಸಿಯ ಪೆಟ್ರೋಲ್ ಬಂಕ್ನಲ್ಲಿ ಸಿಸಿಟಿವಿ ಪರಿಶೀಲನೆ ನಡೆಸಲಾಗಿದ್ದು, ಈವರೆಗಿನ ತನಿಕೆಯಲ್ಲಿ ಅದು ದೃಢಪಟ್ಟಿಲ್ಲ. ಬಂಕಿನಲ್ಲಿದ್ದ ಸಿಸಿ ಟಿವಿ ಪರಿಶೀಲನೆ: ಮುಂಬೈಯಲ್ಲಿ ಹೊಟೇಲ್ ಕೆಲಸ ಮಾಡಿಕೊಂಡಿದ್ದ ವ್ಯಕ್ತಿ ಸರಕು ಸಾಗಾಟ ವಾಹನದಲ್ಲಿ ಎ.20ರಂದು ಮಂಬೈನಿಂದ ಹೊರಟು ಎ. 21 ರಂದು ತ್ರಾಸಿಯಲ್ಲಿರುವ ಪೆಟ್ರೋಲ್ ಬಂಕ್ನಲ್ಲಿ ವಾಹನ ನಿಲ್ಲಿಸಿದ್ದಾಗ ಅಲ್ಲಿ ಸ್ನಾನ ಮಾಡಿ, ಅಲ್ಲಿಯೇ ಸಮೀಪ ಊಟ ಮಾಡಿ ಹೋಗಿರುವುದಾಗಿ ಹೇಳಿಕೊಂಡಿದ್ದ ಎನ್ನಲಾಗಿದೆ. ಲಾರಿ ಎ. 21ರ  ಸಂಜೆ 4:55ಕ್ಕೆ ಶಿರೂರು ಟೋಲ್‌ಗೇಟ್, 5:19ಕ್ಕೆ ತ್ರಾಸಿ ಪೆಟ್ರೋಲ್ ಬಂಕ್ ಎದುರು ಪಾಸಾಗಿದ್ದು, ಬೆಳಿಗ್ಗೆ 3 ಗಂಟೆ ಸುಮಾರಿಗೆ ಸಾಸ್ತಾನ ಟೋಲ್ ಪಾಸ್‌ ಆಗಿರುವ ಬಗ್ಗೆ ಮಾಹಿತಿ ತಿಳಿದುಬಂದಿದೆ.  ಈ ಹಿನ್ನೆಲೆಯಲ್ಲಿ ಸೋಮವಾರ ಸಂಜೆ ಗಂಗೊಳ್ಳಿ ಪಿಎಸ್ಐ ಭೀಮಾಶಂಕರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕರೋನಾ ತಡೆಗಟ್ಟುವ ನಿಟ್ಟಿನಲ್ಲಿ ಆಶಾ ಕಾರ್ಯಕರ್ತೆಯರ ಶ್ರಮ ಬಹಳ ಮುಖ್ಯವಾದುದು. ಅವರು ಸೈನಿಕರಂತೆ ಕೆಲಸ ಮಾಡಿದ್ದಾರೆ. ಅವರ ಕಾರ್ಯ ಎಲ್ಲರೂ ಮೆಚ್ಚುವಂತದ್ದು. ಅವರೆನ್ನೆಲ್ಲ ನಾವು ಗೌರವಿಸಬೇಕು. ಹಾಗೇ ಆರೋಗ್ಯ ಇಲಾಖೆಯ ವೈದ್ಯಾಧಿಕಾರಿಗಳು ಸಿಬ್ಬಂದಿಗಳು ಭಯ ತೊರೆದು ಕೆಲಸ ಮಾಡಿದ್ದಾರೆ. ಅವರೆಲ್ಲ ಅಭಿನಂದನಾರ್ಹರು ಎಂದು ಕಾವ್ರಾಡಿ ವ್ಯವಸಾಯ ಸಹಕಾರಿ ಸಂಘದ ಅಧ್ಯಕ್ಷ ಸದಾನಂದ ಬಳ್ಕೂರು ಹೇಳಿದರು. ಅವರು ಕಂಡ್ಲೂರು ಪಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳಿಗೆ, ಆಶಾ ಕಾರ್ಯಕರ್ತರುಗಳಿಗೆ ಗೌರವ ಸಲ್ಲಿಸಿ, ಗೌರವಧನ ವಿತರಿಸಿ, ವೈದ್ಯಾಧಿಕಾರಿ ಡಾ| ಲತಾರವರನ್ನು ಸನ್ಮಾನಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಸಂಘದ ನಿರ್ದೇಶಕರಾದ ರಾಜು ಪೂಜಾರಿ, ಚಂದ್ರ ಹೆಗ್ಡೆ, ಜಿ. ಸೀತಾರಾಮ ಶೆಟ್ಟಿ, ದೇವಾನಂದ ಶೆಟ್ಟಿ, ಜ್ಯೋತಿ ಪುತ್ರನ್, ಎಂ. ಸುಧಾಕರ ಹೆಗ್ಡೆ, ಭಾಸ್ಕರ ಶೆಟ್ಟಿ, ಕೆ. ಚಂದ್ರ, ರಾಜೇಂದ್ರ ಕುಲಾಲ್, ಸುರೇಶ ಕುಮಾರ್ ಉಪಸ್ಥಿತರಿದ್ದರು. ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಲತಾ ನಾಯಕ್ ಸಾಮಾಜಿಕ ಅಂತರ ಕಾಪಾಡಿಕೊಂಡು ಕೊರೋನಾ ತಡೆಗಟ್ಟಬೇಕೆಂದು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿನ ಪ್ರತಿ ಮನೆಗೆ ಭೇಟಿ ನೀಡಿ, ಶೀತ ಜ್ವರ ಇರುವವರ ವಿವರಗಳನ್ನು , ಬಿ.ಎಲ್.ಓ ಗಳ ಮೂಲಕ ಸಂಗ್ರಹಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮಹೇಶ್ವರ ರಾವ್ ಸೂಚಿಸಿದ್ದಾರೆ. ಅವರು ಶನಿವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ, ಜಿಲ್ಲೆಯಲ್ಲಿ ಕೊರೋನಾ ನಿಯಂತ್ರಣ ಕುರಿತು ಕೈಗೊಂಡಿರುವ ಕ್ರಮಗಳ ಕುರಿತ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಪ್ರಸ್ತುತ ಕೊರೋನಾ ಪ್ರಕರಣ ಇಲ್ಲವಾಗಿದ್ದು, ಆದರೆ ಮುಂಜಾಗ್ರತೆಯಾಗಿ ಜಿಲ್ಲೆಯಾದ್ಯಂತ ಶೀತ ಜ್ವರ ಇರುವವರ ಕುರಿತು ಮನೆ ಮನೆಗಳ ವ್ಯಾಪಕ ತಪಾಸಣೆ ನಡೆಸುವಂತೆ ಸೂಚಿಸಿದ ಮಹೇಶ್ವರ ರಾವ್, ಈ ಕುರಿತಂತೆ ಜಿಲ್ಲೆಯ ಎಲ್ಲಾ ಬಿಎಲ್ ಓ ಗಳನ್ನು ಬಳಸಿಕೊಳ್ಳುವಂತೆ ಹಾಗೂ ತಪಾಸಣೆ ನಡೆಸುವ ಕುರಿತಂತೆ ಅವರಿಗೆ ಅಗತ್ಯ ತರಬೇತಿ ನೀಡುವಂತೆ ಹಾಗೂ ಮಾಹಿತಿ ದಾಖಲಿಸಲು ಅಗತ್ಯ ನಮೂನೆಯನ್ನು ಸಿದ್ದಪಡಿಸಿ ನೀಡಿ, ಮುಂದಿನ ೩ ದಿನದಲ್ಲಿ ಎಲ್ಲಾ ಬಿ.ಎಲ್.ಓ ಗಳಿಗೆ ತರಬೇತಿ ನೀಡುವ ಕಾರ್ಯಕ್ರಮ ಮುಗಿಸುವವಂತೆ ಸೂಚಿಸಿದರು. ಜಿಲ್ಲೆಯ ಜನತೆ ತಮಗೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಶ್ರೀ ಜಟ್ಟಿಗೇಶ್ವರ ಮತ್ತು ಸಹಪರಿವಾರ ದೈವಗಳ ಸೇವಾಸಮಿತಿ (ರಿ) ಮತ್ತು ಶ್ರೀ ಜಟ್ಟಿಗೇಶ್ವರ ಯುವಕ ಮಂಡಳಿ  ಬಪ್ಪನಬೈಲು ಇವರ ಜಂಟಿ ಸಹಯೋಗದಲ್ಲಿ ಬಪ್ಪನಬೈಲಿನ ಜಟ್ಟಿಗೇಶ್ವರ ದೇವರನ್ನು ನಂಬಿಕೊಂಡು ಬಂದಿರುವ ಸುಮಾರು ೯೩ ಕುಟುಂಬಗಳಿಗೆ ಆಹಾರ ಸಾಮಾಗ್ರಿಗಳ ಕಿಟ್‌ನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ದೇವಸ್ತಾನದ ಆಡಳಿತ ಮಂಡಳಿಯ ಗೌರವಾದ್ಯಕ್ಷರು, ಅಧ್ಯಕ್ಷರು, ಕಾರ್ಯದರ್ಶಿ, ಯುವಕ ಮಂಡಲದ ಅಧ್ಯಕ್ಷರು, ಕಾರ್ಯದರ್ಶಿ ಹಾಗೂ ಏರಡೂ ಮಂಡಳಿಯ ಸರ್ವಸದಸ್ಯರು ಮತ್ತು ಊರಿನ ನಾಗರಿಕರು ಹಾಜರಿದ್ದರು. ಆಹಾರ ಸಾಮಾಗ್ರಿ ವಿತರಿಸಲು ಧನ ಸಹಾಯ ಮಾಡಿದ ಊರಿನ ಮಹನೀಯರನ್ನು ಅಭಿನಂದಿಸಲಾಯಿತು.

Read More