Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಪ್ರಸ್ತುತ ಕೊವೀಡ್ 19 ಪರೀಕ್ಷೆಗಾಗಿ ಸ್ಯಾಂಪಲ್‌ಗಳು ಬೇರೆ ಜಿಲ್ಲೆಗೆ ಹೋಗುತ್ತಿದ್ದು, ಎಸ್.ಡಿ.ಆರ್.ಎಫ್ ಫಂಡ್‌ನಲ್ಲಿ ಟೆಸ್ಟ್ ಲ್ಯಾಬ್ ನಿರ್ಮಾಣಕ್ಕೆ ತೀರ್ಮಾನ ಕೈಗೊಳ್ಳಲಾಗಿದೆ. ಎಪ್ರಿಲ್ ತಿಂಗಳ ಅಂತ್ಯದಲ್ಲಿ ಜಿಲ್ಲಾ ಆಸ್ಪತ್ರೆಯಲ್ಲಿ ಲ್ಯಾಬ್ ಪ್ರಾರಂಭಿಸಲು ಯೋಜಿಸಲಾಗಿದೆ ಎಂದು ರಾಜ್ಯ ಗೃಹ ಸಚಿವ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದರು. ಅವರು ಉಡುಪಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಾಧ್ಯಮ ಪ್ರತಿನಿಧಿಗಳನು ಉದ್ದೇಶಿಸಿ ಮಾತನಾಡಿ ರಾಜ್ಯದಲ್ಲಿ ಈಗಾಗಲೆ 17 ಟೆಸ್ಟ್ ಲ್ಯಾಬ್ ಆರಂಭಿಸಿದ್ದೇವೆ. ಕೋವಿಡ್ ಆರಂಭದಲ್ಲಿ ಕೇವಲ 2 ಟೆಸ್ಟ್ ಲ್ಯಾಬ್ ಇತ್ತು. ಎಪ್ರಿಲ್ ಅಂತ್ಯದಲ್ಲಿ ಮತ್ತೆ 10ಲ್ಯಾಬ್‌ಗಳು ಆರಂಭವಾಗಲಿದ್ದು ಈ ಸಂದರ್ಭ ಉಡುಪಿ ಜಿಲ್ಲೆಯಲ್ಲೂ ಲ್ಯಾಬ್ ಆರಂಭಿಸಲಾಗುವುದು ಎಂದರು. ಜಿಲ್ಲೆಯಲ್ಲಿ ಕೊರೋನಾ ಪಾಸಿಟಿವ್ ಬಂದಿದ್ದ ಮೂರು ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಇನ್ನೂ 110ಮಂದಿಯ ಟೆಸ್ಟ್ ರಿಪೋರ್ಟ್ ಬರಲು ಬಾಕಿ ಇದೆ. ಒಟ್ಟು 3300 ಜನ ಕ್ವಾರಂಟೈನ್‌ನಲ್ಲಿದ್ದು 993 ಜನ ಟೆಸ್ಟ್ ಮಾಡಿಕೊಂಡಿದ್ದಾರೆ. ಅದರಲ್ಲಿ 990 ನೆಗಟಿವ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ತಾಲೂಕಿನ ಹಳಗೇರಿ ತೆಂಕಬೆಟ್ಟು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಲ್ಲಿನ ಶ್ರೀ ಕಾಲಬೈರವ ಸೇವಾ ಸಂಘ, ಶ್ರೀ ಕಾಲಬೈರವ ಸೇವಾ ಸಮಿತಿ, ಶ್ರೀ ಬಸವೇಶ್ವರ ಭಜನಾ ಮಂದಿರ, ಅಲ್ ವಫಾ ವೆಲ್ಫೇರ್ ಸೊಸೈಟಿ ನೇತೃತ್ವದಲ್ಲಿ ಬ್ಲಡ್ ಹೆಲ್ತ್‌ಕೇರ್ ಕರ್ನಾಟಕ, ಇಂಡಿಯನ್ ರೆಡ್ ಕ್ರಾಸ್ ಸೊಸೈಟಿಯ ಬೈಂದೂರು ತಾಲ್ಲೂಕು ಘಟಕ ಮತ್ತು ಇಡಿಯನ್ ರೆಡ್‌ಕ್ರಾಸ್ ಸೊಸೈಟಿಯ ಕುಂದಾಪುರ ರಕ್ತನಿಧಿ ಕೇಂದ್ರದ ಸಹಯೋಗದಲ್ಲಿ ಗುರುವಾರ ಸ್ವಯಂಪ್ರೇರಿತ ರಕ್ತದಾನ ಶಿಬಿರ ಜರುಗಿತು. ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಅವರು ಮೊದಲಿಗರಾಗಿ ರಕ್ತದಾನ ಮಾಡುವ ಮೂಲಕ ಶಿಬಿರಕ್ಕೆ ಚಾಲನೆ ನೀಡಿ ಬಳಿಕ ಮಾತನಾಡಿ ರಕ್ತನಿಧಿಗಳಲ್ಲಿ ರಕ್ತದ ಕೊರತೆ ಎದುರಾಗಿರುವ ಇಂದಿನ ಸನ್ನಿವೇಶದಲ್ಲಿ ರಕ್ತದಾನಕ್ಕೆ ಅತ್ಯಂತ ಹೆಚ್ಚು ಮಹತ್ವ ಇದೆ. ಗ್ರಾಮೀಣ ಪ್ರದೇಶವಾಗಿರುವ ಹಳಗೇರಿಯ ಸುತ್ತಲಿನ ಯುವಜನರು ಆಯೋಜಿಸಿರುವ ರಕ್ತದಾನ ಶಿಬಿರ ಇಲ್ಲಿ ಹೊಸ ಎಚ್ಚರ ಮೂಡಿಸುತ್ತದೆ. ರಕ್ತದಾನದಿಂದ ಜೀವನ್ಮರಣ ಸ್ಥಿತಿಯಲ್ಲಿರುವವರ ಜೀವ ಉಳಿಸಿದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಹಾಗೂ ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆಶಾ ಕಾರ್ಯಕರ್ತರಿಗೆ ಆಹಾರದ ಕಿಟ್ ನೀಡಲಾಗುತ್ತಿದ್ದು, ಗುರುವಾರ ಇಲ್ಲಿನ ರೋಟರಿ ಭವನದಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಿಟ್ ವಿತರಣೆಗೆ ಶಾಸಕರಾದ ಬಿ. ಎಂ. ಸುಕುಮಾರ ಶೆಟ್ಟಿ ಅವರು ಚಾಲನೆ ನೀಡಿದರು. ಈ ಸಂದರ್ಭ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಎಸ್. ರಾಜು ಪೂಜಾರಿ, ಜಿಲ್ಲಾ ಪಂಚಾಯತ್ ಸದಸ್ಯರುಗಳಾದ ಸುರೇಶ್ ಬಟವಾಡಿ, ಗೌರಿ ದೇವಾಡಿಗ, ಬೈಂದೂರು ತಹಶೀಲ್ದಾರ್ ಬಸಪ್ಪ ಪಿ. ಪೂಜಾರ್, ದಕ್ಷಿಣ ಕನ್ನಡ ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟದ ಉಪಾಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ, ರೈತಸಂಘದ ದೀಪಕ್‌ಕುಮಾರ್ ಶೆಟ್ಟಿ, ತಾಲೂಕು ಪಂಚಾಯತ್ ಸದಸ್ಯ ಜಗದೀಶ ದೇವಾಡಿಗ, ಯಡ್ತರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಮೂಕಾಂಬು ದೇವಾಡಿಗ, ಬೈಂದೂರು ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಪ್ರೇಮಾನಂದ, ಶಿರೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕರ್ನಾಟಕ ರಾಜ್ಯದಲ್ಲಿ ಲಾಕ್ ಡೌನ್ ಸಡಿಲಿಕೆ ಕುರಿತು ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದ್ದು, ಎ.22ರ ಮಧ್ಯರಾತ್ರಿಯಿಂದಲೇ ಭಾಗಶಃ ಜಾರಿಯಾಗಲಿದೆ. ಲಾಕ್ ಡೌನ್ ಸಡಿಲಿಕೆ ಸುರಕ್ಷಿತ ವಲಯಗಳಿಗೆ ಮಾತ್ರ (ಹಾಟ್‌ಸ್ಟಾಟ್, ಕಂಟೈನ್‌ಮೆಂಟ್ ಕ್ಷೇತ್ರಕ್ಕೆ ಅನ್ವಯಿಸುವುದಿಲ್ಲ) ಅನ್ವಯವಾಗಲಿದ್ದು, ಕ್ವಾರಂಟೈನ್ ವಲಯಗಳಿಗೆ ಅನ್ವಯವಾಗುವುದಿಲ್ಲ. ಈ ಕೆಳಕಂಡ ಕ್ಷೇತ್ರಗಳನ್ನು ಹೊರತುಪಡಿಸಿ ಉಳಿದೆಲ್ಲಾ ಸೇವೆಗಳಿಗೆ ನಿರ್ಬಂಧ ಮುಂದುವರಿದಿದ್ದು, ಈ ಸೇವೆಗಳು ಲಭ್ಯವಿರುವುದಿಲ್ಲ. ಯಾವೆಲ್ಲಾ ಕ್ಷೇತ್ರಗಳಿಗೆ ಅವಕಾಶ ನೀಡಲಾಗಿದೆ ಎಂಬುವುದರ ಪಟ್ಟಿ ಈ ಕೆಳಗಿದೆ ನೋಡಿ

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಲಾಕ್ ಡೌನ್ ನಿಂದ ಐದು ವರ್ಷದೊಳಗಿನ ಮಕ್ಕಳಿಗೆ ವಿವಿಧ ಹಂತದಲ್ಲಿ ಮತ್ತು ಗರ್ಭಿಣಿಯರಿಗೆ ನೀಡಬೇಕಾದ ಚುಚ್ಚುಮದ್ದುಗಳನ್ನು ನಿಲ್ಲಿಸಲಾಗಿದ್ದು, ಗುರುವಾರದಿಂದ ಎಂದಿನಂತೆ ಈ ಚುಚ್ಚುಮದ್ದುಗಳನ್ನು ನೀಡಲಾಗುವುದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಧಿಕಾರಿ ಡಾ.ಸುಧೀರ್ ಚಂದ್ರ ಸೂಡಾ ತಿಳಿಸಿದ್ದಾರೆ. ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ಮತ್ತು ತಾಲೂಕು ಆಸ್ಪತ್ರೆಗಳಲ್ಲಿ ಸೋಮವಾರ ದಿಂದ ಶನಿವಾರದ ವರೆಗೆ ಮತ್ತು ಪ್ರಾಥಮಿಕ ಮತ್ತು ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಪ್ರತೀ ಗುರುವಾರ, 1.5, 2.5, 3.5 ಮತ್ತು 9 ತಿಂಗಳು ಮಕ್ಕಳಿಗೆ ನೀಡುವ ವಿವಿಧ ಲಸಿಕೆಗಳು ಹಾಗೂ ಗರ್ಭಿಣಿಯರಿಗೆ ನೀಡಲಾಗುವ ಟಿಡಿ ಲಸಿಕೆಯನ್ನು ನೀಡಲಾಗುವುದು ಎಂದು ಡಾ. ಸೂಡಾ ತಿಳಿಸಿದ್ದಾರೆ. ಲಸಿಕೆ ತೆಗೆದುಕೊಳ್ಳಲು ವಾಹನಗಳಲ್ಲಿ ಬರುವಾಗ ತಾಯಿ ಕಾರ್ಡ್ ಅಥವಾ ಲಸಿಕೆ ಕಾರ್ಡ್ ಗಳನ್ನು ಪೊಲೀಸರಿಗೆ ತೋರಿಸುವ ಮೂಲಕ , ಆರೋಗ್ಯ ಕೇಂದ್ರಕ್ಕೆ ಬರಲು ಲಾಕ್‌ಡೌನ್ ನ ನಿರ್ಬಂಧವಿರುವುದಿಲ್ಲ ಎಂದು ಜಿಲ್ಲಾ ಆರ್.ಸಿ.ಹೆಚ್. ಅಧಿಕಾರಿ ಡಾ.ಎಂ.ಜಿ.ರಾಮ ಸ್ಪಷ್ಟಪಡಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಲಾಕ್‌ಡೌನ್‌ನಿಂದಾಗಿ ಎಲ್ಲವೂ ಸ್ತಬ್ದವಾಗಿದೆ. ನಗರಗಳು, ಪೇಟೆ, ಪಟ್ಟಣಗಳು ಬಿಕೋ ಎನ್ನುತ್ತಿವೆ. ಸ್ವಚ್ಛತೆಯ ಕೊರತೆಯೂ ಕಾಡುತ್ತಿದೆ. ಆದರೆ ವಂಡ್ಸೆ ಗ್ರಾಮ ಲಾಕ್‌ಡೌನ್ ನಲ್ಲಿಯೂ ಸ್ವಚ್ಛತೆಯನ್ನು ಕಾಪಾಡಿಕೊಳ್ಳುತ್ತಿದೆ. ಇದಕ್ಕೆ ಕಾರಣ ಎಸ್.ಎಲ್.ಆರ್.ಎಂ ಘಟಕ. ಲಾಕ್‌ಡೌನ್‌ನಿಂದ ಜನ ಹೊರಗೆ ಬರಲು ಹೆದರುತ್ತಿದ್ದಾರೆ. ಈ ನಡುವೆ ನಗರ ನೈರ್ಮಲ್ಯ ಹಾಳಾಗಬಾರದು, ಕಸದ ವಿಲೇವಾರಿಗೆ ತೊಡಕಾಗಬಾರದು ಎಂಬ ಹಿನ್ನೆಲೆಯಲ್ಲಿ ವಂಡ್ಸೆ ಎಸ್.ಎಲ್.ಆರ್.ಎಂನ ಕಾರ್ಯಕರ್ತರು ನಿತ್ಯವೂ ಸಾಮಾಜಿಕ ಅಂತರವಿಟ್ಟುಕೊಂಡು ಸ್ವಚ್ಛತಾ ಕಾರ್ಯದಲ್ಲಿ ನಿರತರಾಗಿದ್ದಾರೆ. ಎಸ್.ಎಲ್.ಆರ್.ಎಂನ ಎಲ್ಲಾ ಕಾರ್ಯಕರ್ತರು ನಿತ್ಯವೂ ಕಸ ಸಂಗ್ರಹಣೆ, ವಿಲೇವಾರಿ, ವಿಂಗಡಣೆಯಲ್ಲಿ ಶ್ರಮಿಸುತ್ತಿದ್ದಾರೆ. ಕೊರೋನಾ ಸುರಕ್ಷತಾ ವಿಧಾನಗಳನ್ನು ಅನುಸರಿಸಿಕೊಂಡು ಸಾಮಾಜಿಕ ಅಂತರದ ಜೊತೆಯಲ್ಲಿ ಸ್ಯಾನಿಟೈಸರ್ ಬಳಕೆ, ಮುಖಕ್ಕೆ ಮಾಸ್ಕ್, ಕೈಗವಚಗಳನ್ನು ಧರಿಸಿ ಕಸ ವಿಲೇವಾರಿಯಲ್ಲಿ ಶ್ರಮಿಸುತ್ತಿದ್ದಾರೆ. ನಾಗರಕರೆಲ್ಲರ ಕರೋನಾ ಭೀತಿಯಲ್ಲಿ ಮನೆಯೊಳಗೆ ಇದ್ದರೆ ಪುರ ಸ್ವಚ್ಛತೆಯ ಮಹಾತ್ಕಾರ್ಯವನ್ನು ನಿಲ್ಲಿಸದ ಎಸ್.ಎಲ್.ಆರ್.ಎಂ ಕಾರ್ಯಕರ್ತರ ಸೇವೆ ಪ್ರಶಂಸೆಗೆ ಪಾತ್ರವಾಗುತ್ತಿದೆ. ಕೊರೋನಾದಂತಹ ವೈರಸ್ ವಕ್ಕರಿಸುತ್ತಿರುವ ಸಂದರ್ಭದಲ್ಲಿ ಸ್ವಚ್ಛತೆಯ ಅಗತ್ಯವಿದೆ. ಕಸ ಕಡ್ಡಿ ತ್ಯಾಜ್ಯಗಳು ಎಲ್ಲೆಂದರಲ್ಲಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಪ್ರಸ್ತುತ ಕೋವಿಡ್-19 ರೋಗಾಣುವಿನಿಂದ ಇಡೀ ರಾಜ್ಯ ಲಾಕ್ ಡೌನ್ ಆಗಿದ್ದು, ಆರ್ಥಿಕವಾಗಿ ಸಂಕಷ್ಟದಲ್ಲಿರುವ ಕಲಾವಿದರು/ಸಾಹಿತಿಗಳಿಗೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆರ್ಥಿಕ ಸಹಾಯ ಮಾಡಲು ನಿರ್ಧರಿಸಲಾಗಿದೆ. ಆರ್ಥಿಕವಾಗಿ ಸಂಕಷ್ಟದಲ್ಲಿರುವ ಎಲ್ಲಾ ಕಲಾ ಪ್ರಕಾರದ ಕಲಾವಿದರು/ಸಾಹಿತಿಗಳು ಅರ್ಜಿ ಸಲ್ಲಿಸಬಹುದಾಗಿದೆ. ವೃತ್ತಿ ನಿರತರಾಗಿದ್ದು ಕನಿಷ್ಠ 10 ವರ್ಷ ಕಲಾಸೇವೆ ಮಾಡಿರಬೇಕು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಮಾಸಾಶನ ಪಡೆಯುತ್ತಿರಬಾರದು ಮತ್ತು ಯಾವುದೇ ಸರಕಾರಿ ನೌಕರರರಾಗಿರಬಾರದು (ರಾಜ್ಯ/ಕೇಂದ್ರ/ನಿಗಮ/ಮಂಡಳಿ/ಸರ್ಕಾರಿ ಅನುದಾನಿತ ಸಂಸ್ಥೆಗಳು ಮತ್ತು ಅರೆ ಸರ್ಕಾರಿ ಸಂಸ್ಥೆಗಳು.) ಕಲಾವಿದರು /ಸಾಹಿತಿಗಳು ತಮ್ಮ ಹೆಸರು, ವಿಳಾಸ, ಕಲಾ ಪ್ರಕಾರ, ಆಧಾರ್ ಸಂಖ್ಯೆ, ದೂರವಾಣಿ ಸಂಖ್ಯೆ ಮತ್ತು ಬ್ಯಾಂಕ್ ಖಾತೆ ವಿವರಗಳನ್ನೊಳಗೊಂಡ ಅರ್ಜಿಯನ್ನು ಬಿಳಿ ಹಾಳೆಯ ಮೇಲೆ ಸ್ವ ವಿವರಗಳೊಂದಿಗೆ, ಸಹಾಯಕ ನಿರ್ದೇಶಕರ ಕಚೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪ್ರಗತಿ ನಗರ,  ಅಲೆವೂರು ಗ್ರಾಮ, ಉಡುಪಿ, ಈ ಮೇಲ್ dkc.udupi@gmail.com ಅಥವಾ ಮೊ.ಸಂ. 9945731062 ಗೆ ವಾಟ್ಸಾಪ್ ಮೂಲಕ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಜಿಲ್ಲೆಯ ರಕ್ತನಿಧಿ ಕೇಂದ್ರದಲ್ಲಿ ರಕ್ತದ ಅಭಾವವನ್ನು ನೀಗಿಸುವ ಸಲುವಾಗಿ ಬ್ಲಡ್ ಹೆಲ್ಫ್ ಕೇರ್ ಕರ್ನಾಟಕ ಮತ್ತು ಜಮಾತುಲ್ ಮುಸ್ಲಿಮೀನ್ ಗಂಗೊಳ್ಳಿ ಇವರ ಜಂಟಿ ಆಶ್ರಯಲ್ಲಿ ಭಾರತೀಯ ರೆಡ್‌ಕ್ರಾಸ್ ಸಂಸ್ಥೆ, ರಕ್ತನಿಧಿ ಕೇಂದ್ರ ಕುಂದಾಪುರ ಇದರ ಸಹಯೋಗದೊಂದಿಗೆ ಗಂಗೊಳ್ಳಿಯ ತೌಹೀದ್ ಆಂಗ್ಲ ಮಾಧ್ಯಮ ಶಾಲೆಯ ಸಭಾಂಗಣದಲ್ಲಿ ಜಿಲ್ಲಾಡಳಿತದ ಅನುಮತಿ ಪಡೆದು ಬುಧವಾರ ಆಯೋಜಿಸಲಾಗಿದ್ದ ರಕ್ತದಾನ ಶಿಬಿರದಲ್ಲಿ ೫೪ ಮಂದಿ ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ. ಕೊರೊನಾ ವೈರಸ್ ಭೀತಿ ಹಿನ್ನಲೆಯಲ್ಲಿ ಜಿಲ್ಲಾಡಳಿತದ ನಿರ್ದೇಶನದಂತೆ ರಕ್ತದಾನಿಗಳಿಗೆ ಕೋವಿಡ್-೧೯ ತಪಾಸಣೆ, ಮುಂಜಾಗ್ರತಾ ಕ್ರಮ ಅನುಸರಿಸಿ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು. ನೊಂದಾವಣೆ, ತಪಾಸಣೆ, ರಕ್ತದಾನ ಸಂದರ್ಭಗಳಲ್ಲೂ ಸಾಮಾಜಿಕ ಅಂತರ ಕಾಯ್ದುಕೊಳ್ಳಲಾಗಿತ್ತು. ಗಂಗೊಳ್ಳಿ ಜಮಾತುಲ್ ಮುಸ್ಲಿಮೀನ್ ಅಧ್ಯಕ್ಷ ಪಿ. ಎಂ. ಹಸೈನಾರ್, ಗಂಗೊಳ್ಳಿ ಪೊಲೀಸ್ ಠಾಣೆಯ ಉಪನಿರೀಕ್ಷಕ ಭೀಮಾಶಂಕರ ಎಸ್., ಕುಂದಾಪುರ ಸರಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ನಾಗೇಶ, ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಶಬನಾಜ್, ತೌಹೀದ್ …

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಉಪ್ಪುಂದ ಹಾಗೂ ಶಿರೂರು ಎಂ.ಎಂ ಹೌಸ್ ವತಿಯಿಂದ ಬೈಂದೂರು ಸಮುದಾಯ ಆರೋಗ್ಯ ಕೇಂದ್ರ ವ್ಯಾಪ್ತಿಯ ಸುಮಾರು 65 ಆಶಾ ಕಾರ್ಯಕರ್ತರು, ಬೈಂದೂರು ಸಮುದಾಯ ಆರೋಗ್ಯ ಕೇಂದ್ರದ ನರ್ಸ್‌ಗಳು ಹಾಗೂ ಇತರ ಸಿಬ್ಬಂಧಿಗಳಿಗೆ ಆಹಾರ ಸಾಮಾಗ್ರಿ ಕಿಟ್ ಹಾಗೂ ಪ್ರೋತ್ಸಾಹಧನವನ್ನು ವಿತರಿಸಲಾಯಿತು. ಈ ಸಂದರ್ಭ ಕುಂದಾಪುರ ಎಎಸ್ಪಿ ಹರಿರಾಂ ಶಂಕರ್, ವೈದ್ಯಾಧಿಕಾರಿ ಪ್ರೇಮಾನಂದ್, ಪೊಲೀಸ್ ವೃತ್ತನಿರೀಕ್ಷಕ ಸುರೇಶ್ ನಾಯ್ಕ್, ಎಸ್ಪೈ ಸಂಗೀತಾ, ಉಪ್ಪುಂದ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್‌ನ ಮ್ಯಾನೆಜಿಂಗ್ ಟ್ರಸ್ಟೀ ಗೋವಿಂದ ಬಾಬು ಪೂಜಾರಿ, ಶಿರೂರು ಎಂಎಂ ಹೌಸ್ ಮಣಿಗಾರ್ ಜಿಘ್ರಿ, ಗಿರೀಶ್ ಬೈಂದೂರು ಮೊದಲಾದವರು ಇದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಅನಗತ್ಯ ವಾಹನ ಸಂಚಾರಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಕುಂದಾಪುರ ಪೊಲೀಸರು ನಗರದ ಬೀದಿಗಳ ಸಂಪರ್ಕ ಮಾರ್ಗಗಳ ಬಂದ್ ಮಾಡಿದ್ದು, ಮೂರು ಕಡೆಗಳಲ್ಲಿ ಚೆಕ್‌ಪಾಯಿಂಟ್ ನಿರ್ಮಿಸಿ ವಿಚಾರಣೆಯ ಬಳಿಕ ಸಂಚಾರಕ್ಕೆ ಅನುವು ಮಾಡಿಕೊಡಲಾಗುತ್ತಿದೆ. ನಗರದ ಶಾಸ್ತ್ರೀ ವೃತ್ತ, ಚರ್ಚ್ ರಸ್ತೆ ಹಾಗೂ ಚಿಕನ್‌ಸಾಲ್ ರಸ್ತೆಯನ್ನು ಹೊರತುಪಡಿಸಿ ಉಳಿದೆಲ್ಲಾ ರಸ್ತೆಗಳ ಬಾಹ್ಯ ಸಂಚಾರವನ್ನು ಸೋಮವಾರ ರಾತ್ರಿಯಿಂದಲೇ ಬಂದ್ ಮಾಡಲಾಗಿತ್ತು. ಪ್ರತಿಯೊಂದು ವಾಹವನ್ನು ನಿಲ್ಲಿಸಿ ವಿಚಾರಿಸಿದ ಬಳಿಕವಷ್ಟೇ ಅವರನ್ನು ನಗರದಿಂದ ಒಳಕ್ಕೆ ಹಾಗೂ ಹೊರಕ್ಕೆ ಬಿಡಲಾಗುತ್ತಿದೆ. ಅಗತ್ಯ ಕೆಲಸಗಳಿಗಾಗಿ ಒಂದಕ್ಕಿಂತ ಹೆಚ್ಚು ಮಂದಿ ಬಂದರೆ ಅವರನ್ನು ವಾಪಾಸ್ ಕಳುಹಿಸಲಾಗುತ್ತಿದೆ. ತಪಾಸಣೆಯ ವೇಳೆ ರಸ್ತೆಯುದ್ದಕ್ಕೂ ವಾಹನದ ಸಾಲು ಕಂಡುಬಂತು. ಲಾಕ್‌ಡೌನ್ ಜಾರಿಯಲ್ಲಿರುವಾಗಲೇ ಕುಂದಾಪುರ ನಗರದಲ್ಲಿ ಬೆಳಿಗ್ಗೆ ವಾಹನ ದಟ್ಟಣೆಯಾಗುತ್ತಿದೆ ಎಂಬ ದೂರಿನ ಮೇರೆಗೆ ಎಎಸ್‌ಪಿ ಹರಿರಾಮ್ ಶಂಕರ್ ಮಾರ್ಗದರ್ಶನದಲ್ಲಿ ಕುಂದಾಪುರ ಪೊಲೀಸರು ಸಾರ್ವಜನಿಕರ ಸಂಚಾರಕ್ಕೆ ಕಡಿವಾಣ ಹಾಕಿದ್ದಾರೆ. ಈ ಬಗ್ಗೆ ಸಾರ್ವಜನಿಕರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

Read More